ಮಂಗಳೂರು : ಬಂಟ್ವಾಳ ತಾಲೂಕಿನ ಬಾಳೆಪುಣಿಯ ಕಣಂತೂರು ಗ್ರಾಮದ ದೈವಸ್ಥಾನ ಮತ್ತು ಭಂಡಾರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯದಿಂದ ಖುಲಾಸೆಗೊಂಡ ವ್ಯಕ್ತಿಗೆ ಇದೀಗ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಜಿಲ್ಲಾ ನ್ಯಾಯಾಲಯ 1000 ರೂ.ಗಳ ದಂಡ ವಿಧಿಸಿದೆ. ಆರೋಪಿಯನ್ನು ಉಳ್ಳಾಲದ ಹಳೇ ಮನೆ ಕಲ್ಲಾಪು ಕಟ್ಟೆಪುಣಿ ನಿವಾಸಿ ಅಬ್ದುಲ್ ಬಶೀರ್ ಅಲಿಯಾಸ್ ಕಲ್ಲ ಬಶೀರ್ (36) ಎಂದು ಗುರುತಿಸಲಾಗಿದೆ. ಫೆಬ್ರವರಿ 27, 2009 ರಂದು, ಬೆಳಗಿನ ಜಾವ 1.30 ರ ಸುಮಾರಿಗೆ, ಆರೋಪಿಯು ಕಣಂತೂರಿನಲ್ಲಿರುವ ಶ್ರೀ ಕ್ಷೇತ್ರ ತೋಡಕುಕ್ಕಿನಾರ್ ದೈವಸ್ಥಾನದ ಬಾಗಿಲಿನ ಬೀಗವನ್ನು ಕಬ್ಬಿಣದ ಲಿವರ್ ಬಳಸಿ ಒಡೆದು ಆವರಣಕ್ಕೆ ನುಗ್ಗಿ, ಹುಂಡಿಯಲ್ಲಿಟ್ಟಿದ್ದ ಹಣವನ್ನು ಕಳವು ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ದೈವಸ್ಥಾನದ ಪಕ್ಕದಲ್ಲಿರುವ ಭಂಡಾರ ಮನೆಯ ಬೀಗವನ್ನು ಒಡೆದು ಒಳಗೆ ಪ್ರವೇಶಿಸಿದ ಆತ, ದೇವರ ಕೋಣೆಯ ಬಾಗಿಲಿನ ಬೀಗವನ್ನು ಒಡೆದು, ರೂ. 1.20 ಲಕ್ಷ ಮೌಲ್ಯದ 100 ಗ್ರಾಂ ಚಿನ್ನ; 120 ಗ್ರಾಂ…
Author: main-admin
ಕಡಬ: ಹಳೆನೆರೆಂಕಿ ಗ್ರಾಮದ ಕುನ್ನಿಕು ಎಂಬಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ಇಸ್ಪೀಟ್ ಆಟ ಆಡುತ್ತಿರುವ ಬಗ್ಗೆ ಮಾಹಿತಿ ಪಡೆದ ಕಡಬ ಠಾಣೆಯ ಪಿಎಸ್ಐ ಜಂಬುರಾಜ್ ಮಹಾಜನ್ ಅವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದಾರೆ. ಆ.28 ರಂದು ಸಂಜೆ ಮೋಹನದಾಸ್ ರೈ ಎಂಬವರ ಜಾಗದಲ್ಲಿ ಅಕ್ರಮ ಇಸ್ಪೀಟ್ ನಡೆಯುತ್ತಿರುವುದು ಕಂಡುಬಂದಿದ್ದು, ಪೊಲೀಸರನ್ನು ಕಂಡು ಆರೋಪಿಗಳು ಪರಾರಿಯಾಗಿದ್ದಾರೆ. ಈ ವೇಳೆ ಕಡಬ ಕುದ್ಮಾರು ನಿವಾಸಿ ಗುರುವ (44) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳ ಪರಿಶೀಲನೆ ವೇಳೆ ಇಸ್ಪೀಟ್ ಆಟಕ್ಕೆ ಬಳಸುತ್ತಿದ್ದ ಕಾರ್ಡ್‌ಗಳು, ನಗದು ರೂ. 1,700, ಆರೋಪಿಗಳು ಬಿಟ್ಟು ಹೋಗಿದ್ದ 2 ದ್ವಿಚಕ್ರ ವಾಹನ ಹಾಗೂ 1 ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ: 102/2026, ಕಲಂ 78, 80 KP Act ಮತ್ತು 112 BNS-2023 ರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಳ್ತಂಗಡಿ: ದರೋಡೆ ಪ್ರಕರಣವೊಂದರಲ್ಲಿ ಆರೋಪಿಯಾಗಿ, ಕಳೆದ 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ವೇಣೂರು ಪೊಲೀಸ್ ಠಾಣೆಯ ಅಕ್ರ.ನಂ. 16/2012ರಲ್ಲಿ ಕಲಂ 395 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿ ಶ್ರೀನಿವಾಸ್ ಕೆ. @ ಶಿನಪ್ಪ @ ಶೀನ (43) ಕಳೆದ ಸುಮಾರು 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಗೈರುಹಾಜರಾಗಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ವೇಣೂರು ಠಾಣೆಯ ಎಎಸ್‌ಐ ಬೆನ್ನಿಚನ್, ಹೆಡ್ ಕಾನ್‌ಸ್ಟೆಬಲ್ ಕೃಷ್ಣ, ಸಿಪಿಸಿ ಬಸವರಾಜ್ ಎಸ್.ಪಿ. ಹಾಗೂ ಸಿಪಿಸಿ ಮೋಹನ್ ಕುಮಾರ್ ಅವರ ತಂಡವು ವಿಜಯನಗರ ಜಿಲ್ಲೆಯ ಹರಪನಳ್ಳಿ ಕೊರಚರಟ್ಟಿ ಎಂಬಲ್ಲಿ ಆರೋಪಿಯನ್ನು ಬಂಧಿಸಿದೆ.ನಂತರ ಆರೋಪಿಯನ್ನು ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಮಂಗಳೂರು: ಸಿಗರೇಟ್ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು 21 ವರ್ಷ ಪ್ರಾಯದೊಳಗಿನ ವ್ಯಕ್ತಿಗಳಿಗೆ ಮಾರಾಟ ಮಾಡುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ. ತಿಳಿಸಿದ್ದಾರೆ.ದ.ಕ.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ದ.ಕ. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಿಗರೇಟ್ ಮತ್ತಿತರ ತಂಬಾಕು ಉತ್ಪನ್ನಗಳ ಕಾಯ್ದೆ 2024ಕ್ಕೆ ತಂದಿರುವ ತಿದ್ದುಪಡಿಯ ಅನ್ವಯ 21 ವರ್ಷ ಪ್ರಾಯದೊಳಗಿನವರಿಗೆ ಸಿಗರೇಟ್ ಅಥವಾ ತಂಬಾಕು ಉತ್ಪನ್ನಗಳನ್ನು ಮಾರುವುದನ್ನು ನಿಷೇಧಿಸಲಾಗಿದೆ. ಅದಲ್ಲದೆ ಸಿಗರೇಟ್ ಚಿಲ್ಲರೆಯಾಗಿ ಮಾರುವುದನ್ನೂ ಹಾಗೂ ಶಾಲಾ-ಕಾಲೇಜುಗಳ 100 ಮೀ. ಅಂತರದಲ್ಲಿ ಅವುಗಳ ಮಾರಾಟವನ್ನು ನಿಷೇಧಿಸಲಾಗಿದೆ. ಅಂಗಡಿಗಳಲ್ಲಿ ಅವುಗಳನ್ನು ಮಾರಾಟ ಮಾಡುವವರಿಗೂ 21 ವರ್ಷವಾಗಿರಬೇಕು ಎಂದು ರಾಜು ಹೇಳಿದರು. ಈ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಎಲ್ಲಾ ನಗರ ಸ್ಥಳೀಯ ಸಂಸ್ಥೆ ಗ್ರಾಪಂಗಳು ಅಂಗಡಿ, ಹೊಟೇಲ್, ಕೆಫೆಗಳಲ್ಲಿ ನಿರಂತರ ತಪಾಸಣೆ ನಡೆಸಬೇಕು. ಅಪ್ರಾಪ್ತರಿಗೆ ಸಿಗರೇಟ್ ಮಾರಾಟ ಕಂಡು ಬಂದರೆ, ಅವುಗಳ ಲೈಸನ್ಸ್ ರದ್ದು ಮಾಡಬೇಕು. ಜಿಲ್ಲಾ ತಂಬಾಕು…
ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆ ಮೂಲದ ಟ್ರೈನಿ ಪೈಲೆಟ್ ಅಭಿಷೇಕ್ ಪೂಜಾರಿ ಮೃತಪಟ್ಟಿರುವ ಘಟನೆ ನಡೆದಿದೆ. ದಿನಾಂಕ ಆಗಸ್ಟ್ 27, 2026ರಂದು ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡಿರುವ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹರಿದಾಡುತ್ತಿದ್ದು, ಘಟನೆಯಲ್ಲಿ ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆ ಮೂಲದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ತಿಳಿದುಬಂದಿದೆ. ಅಭಿಷೇಕ್ ಪೂಜಾರಿ ಅವರು ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ಟ್ರೈನಿ ಪೈಲೆಟ್ ಆಗಿ ತರಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ. ಅವರ ತಂದೆ ಪ್ರಭಾಕರ ಪೂಜಾರಿ ಹಾಗೂ ತಾಯಿ ಶಶಿಕಲಾ ಪೂಜಾರಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ ವಾಸವಾಗಿದ್ದಾರೆ. ಅಭಿಷೇಕ್ ಅವರು ಆಗಾಗ್ಗೆ ಕುಟುಂಬದೊಂದಿಗೆ ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆಯಲ್ಲಿರುವ ತಮ್ಮ ತಾಯಿಯ ಸಹೋದರ ಜೀವನ್ ಕುಮಾರ್ ಅವರ ಮನೆಗೆ ಬಂದು ಹೋಗುತ್ತಿದ್ದರು ಎಂದು…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಂಧಿಸಿದ್ದಾರೆ. ಆಂಧ್ರಪ್ರದೇಶದ ಜಂಗಲ್ಪಲ್ಲಿ ನಿವಾಸಿ ಶ್ರೀಕಾಂತ್ (21) ಬಂಧಿತ ಆರೋಪಿ. 2025ರ ಸೆಪ್ಟೆಂಬರ್‌ನಿಂದ ನವೆಂಬರ್ ಅವಧಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿ, ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಬಾಲಕಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಆ.23ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/2026ರಂತೆ ಬಿಎನ್‌ಎಸ್ ಕಲಂ 64(2)(m), 65(1), 351(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 4(2), 6ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಶ್ರೀಕಾಂತ್ ಪರಾರಿಯಾಗಲು ಯತ್ನಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆಯ ಪಿಎಸ್‌ಐ ಸಮರ್ಥ್ ಆರ್. ಗಾಣಿಗೇರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ಆ.25ರಂದು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಆರೋಪಿಯನ್ನು ಬಂಧಿಸಿದೆ.…
ಬೆಂಗಳೂರು: ಸಿವಿಲ್ ಸ್ವರೂಪದ ಆಸ್ತಿ ವಿವಾದದಲ್ಲಿ ಉಯಿಲು (ವಿಲ್) ಪತ್ರಕ್ಕೆ ಕೇವಲ ಸಾಕ್ಷಿಯಾಗಿ ಸಹಿ ಹಾಕಿದ್ದ ವ್ಯಕ್ತಿಯನ್ನು ಅಕ್ರಮವಾಗಿ ಬಂಧಿಸಿದ ವೈಟ್‌ಫೀಲ್ಡ್ ಪೊಲೀಸರ ಕ್ರಮಕ್ಕೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಕಾನೂನುಬಾಹಿರ ಕೃತ್ಯ ಎಸಗಿದ ವೈಟ್‌ಫೀಲ್ಡ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ), ಸಂಬಂಧಪಟ್ಟ ಎಸಿಪಿ ಹಾಗೂ ಡಿಸಿಪಿಗೆ ನ್ಯಾಯಾಲಯ ಬರೋಬ್ಬರಿ ₹3 ಲಕ್ಷ ದಂಡ ವಿಧಿಸಿ ಆದೇಶಿಸಿದೆ. ವರ್ತೂರು ನಿವಾಸಿ ಕೆ. ಎನ್. ಮೋಹನ್ ರೆಡ್ಡಿ ಅವರು ತಮ್ಮ ಮೇಲಿನ ಅಕ್ರಮ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಈ ಮಹತ್ವದ ತೀರ್ಪು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಅರ್ಜಿದಾರ ಮೋಹನ್ ರೆಡ್ಡಿಗೆ ಆಗಸ್ಟ್ 27ರ ಗಡುವು ನೀಡಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಆದರೆ, ನೀಡಿದ ಗಡುವು ಮುಗಿಯುವ ಮುನ್ನವೇ, ಅಂದರೆ ಆಗಸ್ಟ್ 25ರಂದೇ ಅವರನ್ನು ತರಾತುರಿಯಲ್ಲಿ ಬಂಧಿಸಲಾಗಿತ್ತು. ಸಂಪೂರ್ಣವಾಗಿ ಸಿವಿಲ್ ಸ್ವರೂಪದ ಈ ಪ್ರಕರಣದಲ್ಲಿ ಪೊಲೀಸರ ಹಸ್ತಕ್ಷೇಪಕ್ಕೆ ಅವಕಾಶವೇ…
ಉಡುಪಿ : 8 ವರ್ಷಗಳ ಹಿಂದೆ ತೀರಿಹೋದ ವ್ಯಕ್ತಿಯೊಬ್ಬರು ವಜ್ರದ ವ್ಯಾಪಾರದಲ್ಲಿ 5 ಲಕ್ಷ ರೂಪಾಯಿ ಬಾಕಿ ಇರಿಸಿದ್ದಾರೆ ಎಂದು ಸುಳ್ಳು ಹೇಳಿ, ಅವರ ಕುಟುಂಬಕ್ಕೆ ಜೀವ ಬೆದರಿಕೆಯೊಡ್ಡುತ್ತಿದ್ದ ಇಬ್ಬರು ಖತರ್ನಾಕ್ ಆರೋಪಿಗಳನ್ನು ಉಡುಪಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಶಿವಳ್ಳಿ ಗ್ರಾಮದ ಕುಕ್ಕುಂಜೆ ನಿವಾಸಿ ಸಾಜೀದ್ ಹಾಗೂ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಸೈಯದ್ ಸೈಫ್ ಅಹಮ್ಮದ್ (40) ಬಂಧಿತ ಆರೋಪಿಗಳು. ದೂರುದಾರರಿಗೆ ಜುಲೈ 2, 2026ರಂದು ವಾಟ್ಸಾಪ್ ಕರೆಯೊಂದು ಬಂದಿದ್ದು, ಹಿಂದಿಯಲ್ಲಿ ಮಾತನಾಡಿದ ವ್ಯಕ್ತಿ, “ನಿಮ್ಮ ಮಗ ಅಜಿತ್ ಪಾಡಿಯಾರ್ ನಮ್ಮ ಬಳಿ ವಜ್ರದ ವ್ಯವಹಾರ ನಡೆಸಿ 5 ಲಕ್ಷ ರೂಪಾಯಿ ಬಾಕಿ ಇಟ್ಟಿದ್ದಾನೆ, ಆ ಹಣವನ್ನು ನೀವು ನೀಡಬೇಕು” ಎಂದು ಒತ್ತಾಯಿಸಿದ್ದ. ಮಗ ಅಜಿತ್ 8 ವರ್ಷಗಳ ಹಿಂದೆಯೇ ತೀರಿಹೋಗಿದ್ದು, ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ತಂದೆ ಹಣ ನೀಡಲು ನಿರಾಕರಿಸಿದ್ದರು. ಆದಾಗ್ಯೂ, ಅದೇ ದಿನ ದುಬಾಯಿಯಲ್ಲಿದ್ದ ದೂರುದಾರರ ಮತ್ತೊಬ್ಬ ಮಗ ಅಮೀತ್ ಅವರಿಗೂ…
ಮಂಗಳೂರು : ಚಾಲನಾ ಅನುಜ್ಞಾ ಪತ್ರ (ಲೈಸೆನ್ಸ್) ಇಲ್ಲದೆ ಬಸ್ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಪ್ರಕರಣದಲ್ಲಿ ಬಸ್ ಚಾಲಕ ಹಾಗೂ ಮಾಲಕನಿಗೆ ಮಂಗಳೂರು ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2024ರ ಜುಲೈ 10ರಂದು ನಗರದ ಬೆಂದೂರ್‌ವೆಲ್ ಜಂಕ್ಷನ್ ಬಳಿ 66 ವರ್ಷದ ಸುಂದರಿ ಎಂಬವರು ಶಕ್ತಿನಗರಕ್ಕೆ ತೆರಳುವ ಬಸ್ ಹತ್ತಲು ರಸ್ತೆ ದಾಟುತ್ತಿದ್ದ ವೇಳೆ ಕರಾವಳಿ ವೃತ್ತದ ಕಡೆಯಿಂದ ಸ್ಟೇಟ್‌ಬ್ಯಾಂಕ್ ಕಡೆಗೆ ತೆರಳುತ್ತಿದ್ದ ಬಸ್ ಢಿಕ್ಕಿ ಹೊಡೆದಿತ್ತು. ಢಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಸುಂದರಿ ಅವರ ಬಲಕಾಲಿನ ಮೇಲೆ ಬಸ್ ಹರಿದಿತ್ತು.ಈ ಕುರಿತು ಮಂಗಳೂರು ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಬಸ್ ಚಾಲಕ ನಿಶಿತ್ ಶೆಟ್ಟಿಗೆ ಚಾಲನಾ ಪರವಾನಗಿ ಇಲ್ಲದಿರುವುದನ್ನು ಪತ್ತೆಹಚ್ಚಿದ್ದರು. ಪ್ರಕರಣದ ತನಿಖಾಧಿಕಾರಿಯಾಗಿದ್ದ ಅಂದಿನ ಹೆಡ್‌ಕಾನ್‌ಸ್ಟೆಬಲ್ ಲಕ್ಷ್ಮಿಕಾಂತ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಜೆಎಂಎಫ್‌ಸಿ 8ನೇ ನ್ಯಾಯಾಲಯದ ನ್ಯಾಯಾಧೀಶೆ ಮೋನಿಷಾ ಆರ್. ಅವರು,…
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ಜೂನ್ 19ರಿಂದ 20ರ ನಡುವಿನ ಅವಧಿಯಲ್ಲಿ ನಡೆದ ಓಮ್ನಿ ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ರಾಜ್ಯ ಕಳ್ಳತನ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಅ.ಕ್ರ. 94/2026ರಂತೆ ಬಿಎನ್‌ಎಸ್ ಕಲಂ 303(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್ ಹಾಗೂ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಅವರ ಮಾರ್ಗದರ್ಶನದಲ್ಲಿ, ಪಿಎಸ್‌ಐಗಳಾದ ಗುಣಪಾಲ ಜೆ. ಹಾಗೂ ಸುಷ್ಮಾ ಜಿ. ಭಂಡಾರಿ ನೇತೃತ್ವದ ತನಿಖಾ ತಂಡವು ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.ಬಂಧಿತರನ್ನು ಕೇರಳ ಕಾಸರಗೋಡು ನಿವಾಸಿಗಳಾದ ಅಬ್ದುಲ್ ಸಾಯಿಲ್ ಜೆ. (25), ಮೊಹಮ್ಮದ್ ಆಸೀಕ್ (25), ಮೊಹಮ್ಮದ್ ಸಿರಾಜ್ (28) ಹಾಗೂ ತಮಿಳುನಾಡಿನ ಕರೂರು ನಿವಾಸಿ ಶಕ್ತಿವೇಲು ಜಿ. (24) ಎಂದು ಗುರುತಿಸಲಾಗಿದೆ.ಆರೋಪಿಗಳಿಂದ ಕಳ್ಳತನವಾಗಿದ್ದ ಸುಮಾರು ₹2.5 ಲಕ್ಷ ಮೌಲ್ಯದ…










