Author: main-admin

ಉಡುಪಿ: ಪರ್ಯಾಯ ಪುತ್ತಿಗೆ ಮಠದಲ್ಲಿ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಉಡುಪಿಗೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಿದ್ದು, ಕೃಷ್ಣನೂರಿನಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ, ಆದಿ ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಸಚಿವ ದಿನೇಶ್ ಗುಂಡೂರಾವ್ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಆದಿ ಉಡುಪಿಯಿಂದ ಪ್ರಧಾನಿ ಮೋದಿ ರೋಡ್ ಶೋ ಆರಂಭವಾಗಿದ್ದು, ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ರೋಡ್ ಶೋ ನಡೆದಿದೆ. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿರುವ ಜನರು ಮೋದಿ ಮೋದಿ ಎಂದು ಜಯಘೋಷಗಳನ್ನು ಕೂಗಿ ಪ್ರಧಾನಿ ಮೇಲೆ ಹೂಮಳೆಗರೆದು ಸ್ವಾಗತಿಸಿದ್ದಾರೆ. ತೆರೆದ ವಾಹನದಲ್ಲಿ ಜನರತ್ತ ಕೈಬೀಸಿ ಪ್ರಧಾನಿ ಮೋದಿ ಸಾಗಿದ್ದಾರೆ. ರೋಡ್ ಶೋ ಮೂಲಕವಾಗಿ ಶ್ರೀಕೃಷ್ಣ ಮಠದ ರಥಬೀದಿಗೆ ಪ್ರಧಾನಿ ಮೋದಿ ಆಗಿಸಿದ್ದಾರೆ.

Read More

ಉಡುಪಿ: ಗ್ಯಾಸ್ ಸಿಲಿಂಡರ್ ಗೆ ಆಕಸ್ಮಿಕ ಬೆಂಕಿ ತಗುಲಿ ಸ್ಪೋಟಗೊಂಡು ಖಾಸಗಿ ಹೊಟೇಲ್ ಸಂಪೂರ್ಣ ಭಸ್ಮವಾದ ಘಟನೆ ಮಣಿಪಾಲ ಆರ್‌ಎಸ್‌ಬಿ ಸಭಾಭವನದ ಸಮೀಪ ನಡೆದಿದೆ. ಡೆಲ್ಲಿ ಡಾಬಾ ಎಂಬ ಹೊಟೇಲಿನಲ್ಲಿ ಗ್ಯಾಸ್ ಸಿಲಿಂಡರ್ ಅಕಸ್ಮಿಕವಾಗಿ ಸ್ಪೋಟಗೊಂಡು ಬೆಂಕಿ ಆವರಿಸಿದೆ. ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಜೀವ ಹಾನಿ ಆಗಿಲ್ಲ ಸಂಭವಿಸಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.

Read More

ಪುತ್ತೂರು: ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು ಮಂಜೂರುಗೊಂಡಿದೆ. ಪಡುವನ್ನೂರು ಗ್ರಾಮದ ಮೈಂದನಡ್ಕ ನಿವಾಸಿ ಅಬ್ದುಲ್ ಹಾಶೀಮ್ (34) ಎಂಬಾತನು ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್ ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್ ಟಿಸಿಯೆಂದು ನಂಬಿಸಿ, ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ 84/2025 ಕಲಂ 417, 419, 467, 468, 471 ಐ. ಪಿ. ಸಿ ಪ್ರಕರಣ ದಾಖಲಾಗಿತ್ತು. ಸದ್ರಿ ಪ್ರಕರಣದ ತನಿಖೆ ನಡೆಸಲಾಗಿದ್ದು ಪ್ರಕರಣದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಿರ್ಯಾದುದಾರರೆಂದು ಹೇಳಿಕೊಂಡು, ನಕಲಿ ಸಹಿ ಮಾಡಿ ನ್ಯಾಯಾಲಯಕ್ಕೆ ವಂಚಿಸುವ ಉದ್ದೇಶದಿಂದ, ಬೆಲೆಬಾಳುವ ಭದ್ರತಾ ಪತ್ರವನ್ನು ನೀಡಿದ ಆರೋಪಿ ಅಬ್ದುಲ್ ಹಾಶೀಮ್ (34)ನನ್ನು ನ.6ರಂದು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ…

Read More

ಬಂಟ್ವಾಳ: ಸಜೀಪನಡು ಗ್ರಾಮದ ದೇರಾಜೆಯ ದೀಕ್ಷಿತ್ ಅವರ ಮನೆಗೆ ವಿದ್ಯುತ್ ದುರಸ್ತಿಯವನ ಸೋಗಿನಲ್ಲಿ ನುಗ್ಗಿದ ಕಳ್ಳನೋರ್ವ 42 ಸಾವಿರ ರೂ. ಮೌಲ್ಯದ 7 ಗ್ರಾಂ ಚಿನ್ನಾಭರಣ ಹಾಗೂ 6 ಸಾವಿರ ರೂ. ನಗದನ್ನು ಕಳವು ಮಾಡಿದ ಘಟನೆ ನಡೆದಿದೆ. ಮನೆಯಲ್ಲಿ ಸರೋಜಿನಿ ಎನ್ನುವ ಮಹಿಳೆಯನ್ನು ನಿಲ್ಲಿಸಿ ಮನೆಮಂದಿ ಪಾಣೆಮಂಗಳೂರಿನಲ್ಲಿ ನಡೆಯುತ್ತಿದ್ದ ಮದುವೆಗೆ ತೆರಳಿದ್ದರು. ಮಧ್ಯಾಹ್ನ 2-3 ರ ಮಧ್ಯೆ ಅಪರಿಚಿತ ವ್ಯಕ್ತಿಯೋರ್ವ ಆಗಮಿಸಿ ದೀಚು (ದೀಕ್ಷಿತ್) ಅವರು ಮನೆಯ ವಿದ್ಯುತ್ ವಯರ್ ಹಾಗೂ ಲೈಟ್ ದುರಸ್ತಿ ಮಾಡಲು ತಿಳಿಸಿದ್ದಾರೆಂದು ಹೇಳಿದನು. ಸತ್ಯವೆಂದು ನಂಬಿದ ಸರೋಜಿನಿ ಆತನನ್ನು ಒಳಗೆ ಬಿಟ್ಟಿದ್ದರು. ಆತ ದುರಸ್ತಿಯ ನಾಟಕ ಮಾಡಿ ಮಲಗುವ ಕೋಣೆಯ ಮಂಚದ ಕೆಳಭಾಗದಲ್ಲಿ ಬ್ಯಾಗ್‌ನಲ್ಲಿದ್ದ ಚಿನ್ನ ಹಾಗೂ ನಗದನ್ನು ಕಳವು ಮಾಡಿದ್ದಾನೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ ಭದ್ರತೆಗಾಗಿ ಸುಮಾರು 3000ಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 10 ಮಂದಿ ಎಸ್ಪಿ ಹಾಗೂ ಹೆಚ್ಚುವರಿ ಎಸ್ಪಿಗಳನ್ನು ನೇಮಕ ಮಾಡಲಾಗಿದೆ. ಒಟ್ಟಾರೆ ಈ ಭದ್ರತೆ ನೇತೃತ್ವವನ್ನು ಎಸ್ ಪಿ ಜಿ ವಹಿಸಿಕೊಂಡಿದ್ದು, ಈಗಾಗಲೇ ಎಸ್‍ಪಿಜಿ ತಂಡ ಉಡುಪಿಗೆ ಆಗಮಿಸಿ ನಮ್ಮ ಪೊಲೀಸರೊಂದಿಗೆ ಕರ್ತವ್ಯ ನಿರ್ವಹಿಸುತ್ತಿದೆ. ಈ ಬಂದೋಬಸ್ತಿಗೆ ರಾಜ್ಯದ ಎಂಟಕ್ಕೂ ಅಧಿಕ ಜಿಲ್ಲೆಯ ಪೊಲೀಸ್ ತಂಡಗಳು ಉಡುಪಿಗೆ ಆಗಮಿಸಿದೆ. ರಾಜ್ಯದ ಎಡಿಜಿಪಿ ಕಾನೂನು ಮತ್ತು ಸುವ್ಯವಸ್ಥೆ ಹಿತೇಂದ್ರ ಅವರ ನೇತೃತ್ವದಲ್ಲಿ ಐಜಿಗಳಾದ ಸಂದೀಪ್ ಪಾಟೀಲ್ ಹಾಗೂ ಚಂದ್ರಗುಪ್ತ ಮಾರ್ಗದರ್ಶನದಲ್ಲಿ ಈ ಭದ್ರತೆಯನ್ನು ಒದಗಿಸಲಾಗುತ್ತಿದೆ ಎಂದು ಎಸ್ ಪಿ ಮಾಹಿತಿ ನೀಡಿದರು

Read More

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿರುವ ಲತಾ ಎಂಬುವರ ಬ್ಯಾಗ್ ನಲ್ಲಿ ಇರಿಸಿದ್ದ 6,79,000 ರೂಪಾಯಿ ಮೌಲ್ಯದ 97ಗ್ರಾಂ ಚಿನ್ನಾಭರಣವನ್ನು ಕಳವು ಮಾಡಿರುವ ಬಗ್ಗೆ ಮೇ. 3ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ. ಕ್ರ 17/2025 ರಂತೆ ಪ್ರಕರಣ ದಾಖಲಾಗಿ ಧರ್ಮಸ್ಥಳ ಪೊಲೀಸರು ಆರೋಪಿಗಳ ಪತ್ತೆಕಾರ್ಯದಲ್ಲಿದ್ದರು. ನವೆಂಬರ್ 23ರಂದು ಮತ್ತೆ ಧರ್ಮಸ್ಥಳದತ್ತ ಕಳ್ಳತನ ಮಾಡಲು ಆರೋಪಿಗಳು ಬರುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳದ ದ್ವಾರದ ಬಳಿ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಾದ ಹುಬ್ಬಳ್ಳಿ ನಗರದ ಸಟಲ್ಮೆಂಟ್ ನಿವಾಸಿ ಬಿ.ಬಿ.ಜಾನ್(59) ಮತ್ತು ಆಕೆಯ ಮಗಳು ಆರತಿ ಯಾನೆ ಮಸಾಬಿ ಯಾನೆ ಅಸ್ಮಾ (34) ಎಂಬವರನ್ನು ಬಂಧಿಸಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಮುಂದಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದು, ವಿಚಾರಣೆ ನಡೆಸಿ, ಕಳ್ಳತನ ಮಾಡಿದ ಸುಮಾರು 5,32,000 ಸಾವಿರ ಮೌಲ್ಯದ 76 ಗ್ರಾಂ ಚಿನ್ನಾಭರಣಗಳನ್ನು ಧರ್ಮಸ್ಥಳ ಪೊಲೀಸರು ಹುಬ್ಬಳಿಯಲ್ಲಿರುವ ಆರೋಪಿಗಳ ಮನೆಯಿಂದ ವಶ ಪಡಿಸಿಕೊಂಡಿರುತ್ತಾರೆ.…

Read More

ಉಡುಪಿ : ವೈದ್ಯಕೀಯ ವಿದ್ಯಾರ್ಥಿನಿಯ ಮೊಬೈಲ್ ನ್ನು ಹ್ಯಾಕ್ ಮಾಡಿ ಅವರ ಅಕೌಂಟ್ ನಿಂದ 3,70,944 ಹಣವನ್ನು ಸೈಬರ್ ವಂಚಕರು ವರ್ಗಾವಣೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಗೆ ನವೆಂಬರ್ 18ರಂದು ಮದ್ಯಾಹ್ನ 7074136042 ನಂಬರಿನಿಂದ ICICI ಬ್ಯಾಂಕಿನ ಏಜೆಂಟ್ ಎಂದು ಕರೆ ಮಾಡಿ ಕ್ರೆಡಿಟ್ ಕಾರ್ಡ್ ಪ್ರೊಟೆಕ್ಷನ್ ಸರ್ವಿಸ್ನಿಂದ ನಿಮ್ಮ ಕಾರ್ಡ್ ಪ್ರೋಟೆಕ್ಷಷನ್ ಸರ್ವಿಸ್ Expire ಆಗಿದೆ ಎಂದು ತಿಳಿಸಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ನನಗೆ ಆ ಸರ್ವಿಸ್ ಬೇಡ ಎಂದು ಹೇಳಿದ್ದಾರೆ. ಬಳಿಕ ಪುನಃ ಕರೆ ಮಾಡಿ Google ಲಿ I Mobile Lite App ಎಂದು ಸರ್ಚ್ ಮಾಡುವಂತೆ ತಿಳಿಸಿದ್ದಾರೆ. ವಿದ್ಯಾರ್ಥಿನಿ ಗೂಗಲ್ ನಲ್ಲಿ ಸರ್ಚ್ ಮಾಡಿದ ಬಳಿಕ ಅವರು ಮೊಬೈಲ್ ಹ್ಯಾಕ್ ಆಗಿದ್ದು, ನಂತರ 8100146420 ನೇ ನಂಬರಿಗೆ ವಿಧ್ಯಾರ್ಥಿನಿಯ ನಂಬರ್ Forword ಆಗಿ ವಿದ್ಯಾರ್ಥಿನಿಯ Savings Account ನಿಂದ ಹಾಗೂ ಕ್ರೆಡಿಟ್ ಕಾರ್ಡ್ ನಿಂದ 3,70,944/- ರೂ ಹಣವನ್ನು ಸೈಬರ್ ವಂಚಕರು…

Read More

ಕಡಬ: ಪತ್ನಿ ತನ್ನ ಗೆಳೆಯನ ಜೊತೆ ಮೊಬೈಲ್ ಸಂಪರ್ಕದಲ್ಲಿ ಇದ್ದಾಳೆಂದು ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದ ಗ್ಯಾರೇಜ್ ಮಾಲೀಕ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಕುಟ್ರುಪ್ಪಾಡಿ ನಿವಾಸಿ ರಾಕೇಶ್(36) ಎಂಬವರೇ ಮೃತ ದುರ್ದೈವಿ. ರಾಕೇಶ್ ಅವರು ಕಳಾರದಲ್ಲಿ ದ್ವಿಚಕ್ರ ವಾಹನಗಳ ಗ್ಯಾರೇಜ್ ಹೊಂದಿದ್ದರು. ರಾಕೇಶ್ ಅವರ ಪತ್ನಿಯ ಜೊತೆಗೆ ಅವರ ಸ್ನೇಹಿತ ಮೊಬೈಲ್ ಮೂಲಕ ನಿರಂತರ ಸಂಪರ್ಕದಲ್ಲಿದ್ದ ವಿಷಯ ಅವರ ಗಮನಕ್ಕೆ ಬಂದಿತ್ತು. ಈ ವಿಚಾರವಾಗಿ ತೀವ್ರವಾಗಿ ನೊಂದಿದ್ದ ಅವರು ಅಮಲು ಪದಾರ್ಥದ ಜೊತೆಗೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ಸ್ಥಳೀಯರು ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಒಂದು ವಾರದಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರ ತಂದೆ ಸೊಲೊಮನ್ ಎಂಬವರು ನೀಡಿದ ದೂರಿನನ್ವಯ ಕಡಬ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Read More

ಕಾಸರಗೋಡು ಸಬ್ ಜೈಲಿನಲ್ಲಿ ವಿಚಾರಣಾಧೀನ ಕೈದಿಯೊಬ್ಬ ನಿಗೂಢವಾಗಿ ಮೃತಪಟ್ಟ ಘಟನೆ ಇಂದು(ನ.26) ಬೆಳಗ್ಗೆ ನಡೆದಿದೆ.ದೇಳಿ ನಿವಾಸಿ ಮುಬಶ್ಶಿರ್(30) ಮೃತಪಟ್ಟ ವಿಚಾರಣಾಧೀನ ಕೈದಿ. ಬುಧವಾರ ಮುಂಜಾನೆ ಅರೆಪ್ರಜ್ಞಾವಸ್ಥೆಯಲ್ಲಿ ಕಂಡುಬಂದ ಮುಬಶ್ಶಿರ್ ನನ್ನು ಜೈಲು ಸಿಬ್ಬಂದಿ ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಸಾವಿಗೆ ನಿಖರ ಕಾರಣ ಬಂದಿಲ್ಲ. ಈ ಮಧ್ಯೆ ಇದೊಂದು ಕೊಲೆ ಕೃತ್ಯ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಮುಬಶ್ಶಿರ್ ವಿರುದ್ಧ 2016ರಲ್ಲಿ ಪೊಕ್ಸೊ ಪ್ರಕರಣವೊಂದು ದಾಖಲಾಗಿತ್ತು. ಈ ಮಧ್ಯೆ ವಿದೇಶಕ್ಕೆ ತೆರಳಿದ್ದ ಮುಬಶ್ಶಿರ್ ಎರಡು ತಿಂಗಳ ಹಿಂದೆ ಊರಿಗೆ ಮರಳಿದ್ದನು. ಇದನ್ನು ಅರಿತ ಪೊಲೀಸರು ನವಂಬರ್ ಐದರಂದು ಪೊಕ್ಸೊ ಪ್ರಕರಣಕ್ಕೆ ಸಂಬಂಧಿಸಿ ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಮುಬಶ್ಶಿರ್ ಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಸೋಮವಾರ ಹಾಗೂ ಮಂಗಳವಾರ ಕುಟುಂಬಸ್ಥರು ಸಬ್ ಜೈಲಿಗೆ ಬಂದು ಮುಬಶ್ಶಿರ್ ನನ್ನು ಸಂದರ್ಶಿಸಿದ್ದರು. ಈ ವೇಳೆ ಆತನಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.…

Read More

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸುಮಾರು 65 ವರ್ಷದ ಮಹಿಳೆಯ ಮೃತದೇಹ ಇದಾಗಿದೆ. ಇಂದು ಬೆಳಗ್ಗೆ ನದಿಗೆ ಹಾರಿರಬಹುದು ಎಂದು ಅಂದಾಜಿಸಲಾಗಿದೆ. ಮೃತದೇಹವನ್ನು ಸ್ಥಳೀಯರು ಮೇಲಕ್ಕೆತ್ತಿದ್ದು, ಅದನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿರುವುದಾಗಿ ಬಂಟ್ವಾಳ ಠಾಣಾ ಪೊಲೀಸರು ಮಾಹಿತಿ ನೀಡಿದ್ದಾರೆ. ಸಂಬಂಧಪಟ್ಟವರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

Read More