ರಾಜಸ್ಥಾನ: ಮದುವೆಯ ಸಂಭ್ರಮದಲ್ಲಿದ್ದ ಕುಟುಂಬವೊಂದರಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ ದುರಂತಕ್ಕೆ ಕಾರಣವಾಗಿದೆ. . ರಾಜ್‌ಸಮಂದ್ ಜಿಲ್ಲೆಯ ಅರಾವಳಿ ಬೆಟ್ಟಗಳ ಸಾಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣವಾದ ಗೌರಿಧಾಮದಲ್ಲಿ ಫೋಟೋಶೂಟ್ ನಡೆಸುತ್ತಿದ್ದಾಗ ಯುವಕನೊಬ್ಬ ಸರೋವರದಲ್ಲಿ ಕಾಲು ಜಾರಿ ಬಿದ್ದು, ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಎಸ್‌ಡಿಆರ್‌ಎಫ್ (SDRF) ತಂಡ ನಡೆಸಿದ ಸುದೀರ್ಘ ಕಾರ್ಯಾಚರಣೆಯ ನಂತರ ಬುಧವಾರ ಯುವಕನ ಶವ ಪತ್ತೆಯಾಗಿದೆ.ಚಿತ್ತೋರ್‌ಗಢ ನಿವಾಸಿ ಅರ್ಜುನ್ ದಮಾಮಿ ಮೃತಪಟ್ಟ ದುರ್ದೈವಿ ಯುವಕ.ಪೊಲೀಸರ ಮಾಹಿತಿಯ ಪ್ರಕಾರ, ಅರ್ಜುನ್ ದಮಾಮಿ ಶೀಘ್ರದಲ್ಲೇ ಮದುವೆಯಾಗಲಿದ್ದ ತನ್ನ ಭಾವಿ ವಧು ಮತ್ತು ಆಕೆಯ ಚಿಕ್ಕಪ್ಪನೊಂದಿಗೆ ಗೌರಿಧಾಮ ದೇವಸ್ಥಾನಕ್ಕೆ ಭೇಟಿ ನೀಡಲು ಹಾಗೂ ವಿವಾಹ ಪೂರ್ವ ಫೋಟೋಶೂಟ್‌ಗಾಗಿ ಬಂದಿದ್ದ. ಚಿಕ್ಕಪ್ಪ ದೇವಾಲಯ ಸಂಕೀರ್ಣದ ಬಳಿಯೇ ಉಳಿದುಕೊಂಡಿದ್ದರು. ಆದರೆ ಅರ್ಜುನ್ ಮತ್ತು ಆತನ ಭಾವಿ ವಧು ಫೋಟೋಶೂಟ್‌ಗಾಗಿ ನದಿಯ ತಳಭಾಗಕ್ಕೆ ಇಳಿದಿದ್ದರು. ಈ ನಡುವೆ ಅರ್ಜುನ್ ಸರೋವರದ ಬಳಿ ಸ್ನಾನ ಮಾಡಲು ತೆರಳಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಆಳವಾದ ನೀರಿಗೆ ಬಿದ್ದಿದ್ದಾನೆ. ಆತ ನೀರಿನಲ್ಲಿ…
Author: main-admin
ಬೆಂಗಳೂರು : ಐದೂವರೆ ವರ್ಷದ ಕಂದಮ್ಮ ಪಿ. ವೆನ್ನೆಲಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಮಗುವಿನ ಹೆತ್ತ ತಾಯಿ, ವಕೀಲೆ ಪ್ರಿಯಾಂಕಾ (44) ಅವರನ್ನು ಕಾಡುಗೋಡಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ಬಳಿಯ ಫಾರ್ಮ್‌ಹೌಸ್ ಒಂದರಲ್ಲಿ ಅಡಗಿದ್ದ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ.ದಾವಣಗೆರೆಯಲ್ಲಿ ಖಾಸಗಿ ಶಾಲೆಯ ಮಾಲೀಕರಾಗಿರುವ ಪ್ರಿಯಾಂಕಾ ಮತ್ತು ಅವರ ಪತಿ ಪ್ರವೀಣ್ ಇತ್ತೀಚೆಗೆ ಬೇರ್ಪಟ್ಟಿದ್ದರು. ಪ್ರಿಯಾಂಕಾ ತನ್ನ ಲಿವ್-ಇನ್ ಪಾರ್ಟ್ನರ್, ರಿಯಲ್ ಎಸ್ಟೇಟ್ ಡೆವಲಪರ್ ಮೋಹನ್ ಜಿ. ಮಹಾಲಿಂಗಪ್ಪ (40) ಜೊತೆ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಳು. ಮಾರ್ಚ್ 24ರ ರಾತ್ರಿ ಪ್ರಿಯಾಂಕಾ ಇಂದಿರಾನಗರದಲ್ಲಿ ಶಾಪಿಂಗ್‌ಗೆ ಹೋಗಿದ್ದಾಗ, ಮಗು ವೆನ್ನೆಲಾ ಕಾರಿನಲ್ಲಿ ಮೋಹನ್ ಜೊತೆ ಇತ್ತು. ಈ ವೇಳೆ ಮಗು ಐಸ್‌ಕ್ರೀಂ ಕೇಳಿದ್ದು, ಮೋಹನ್ ತಂದುಕೊಟ್ಟ ಫ್ಲೇವರ್ ಬೇಡವೆಂದು ಬೇರೆ ಫ್ಲೇವರ್ ತರುವಂತೆ ಹಠ ಹಿಡಿದಿತ್ತು. ಇದರಿಂದ ಕೋಪಗೊಂಡ ಮೋಹನ್…
ಕೊಲ್ಲೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ನಾಳೆ ಜೂನ್ 12, ಶುಕ್ರವಾರ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆಯಲಿದ್ದಾರೆ. ಸಿಎಂ ಭೇಟಿಯ ಹಿನ್ನೆಲೆಯಲ್ಲಿ ಕೊಲ್ಲೂರು ದೇವಸ್ಥಾನದ ಸುತ್ತಮುತ್ತ ಹಾಗೂ ಮುಖ್ಯಮಂತ್ರಿಗಳು ಸಂಚರಿಸುವ ಮಾರ್ಗದುದ್ದಕ್ಕೂ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು ಅತ್ಯಂತ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಸಾರ್ವಜನಿಕರು ಹಾಗೂ ದೂರದೂರುಗಳಿಂದ ಬರುವ ಭಕ್ತಾದಿಗಳಿಗೆ ದರ್ಶನದ ವೇಳೆ ಅನಾನುಕೂಲವಾಗುವುದನ್ನು ತಪ್ಪಿಸಲು ಪೊಲೀಸ್ ಇಲಾಖೆಯು ಮಹತ್ವದ ಮಾರ್ಗಸೂಚಿ ಪ್ರಕಟಣೆಯನ್ನು ಹೊರಡಿಸಿದೆ.ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೇವಲ ದೇವಿಯ ದರ್ಶನ ಮತ್ತು ವಿಶೇಷ ಪೂಜೆಗಾಗಿ ಮಾತ್ರ ಕೊಲ್ಲೂರಿಗೆ ಆಗಮಿಸುತ್ತಿದ್ದು, ಪೂಜೆಯ ಬಳಿಕ ತಮಿಳುನಾಡಿಗೆ ಹಿಂದಿರುಗಲಿದ್ದಾರೆ. ಈ ಪ್ರವಾಸದ ವೇಳೆ ಅವರ ಯಾವುದೇ ಸಾರ್ವಜನಿಕ ಭೇಟಿ ಅಥವಾ ರಾಜಕೀಯ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.ಭಕ್ತಾದಿಗಳಿಗೆ ಪೊಲೀಸ್ ಇಲಾಖೆಯ ಪ್ರಮುಖ ಸೂಚನೆಗಳು:ದರ್ಶನದ ಸಮಯ ಬದಲಾವಣೆ ಸೂಕ್ತ: ವಿವಿಐಪಿ (VVIP) ಭೇಟಿ ಮತ್ತು ವಿಶೇಷ ಭದ್ರತಾ ಹಿತದೃಷ್ಟಿಯಿಂದ ಜೂನ್…
ಉಡುಪಿ: ಕೋಟ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೆಸಿಒಸಿಎ) ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ನೀಡಿದ ಸುಳಿವಿನ ಆಧಾರ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಗಳಾದ ಮನೋಜ್ ಕುಲಾಲ್ ಅಲಿಯಾಸ್ ಮನೋಜ್ ಕೋಡಿಕೆರೆ ಮತ್ತು ಚೇತನ್ ಅಲಿಯಾಸ್ ಚೇತು ಪಡೀಲ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಕಾಗಿದ್ದು, ಹಲವು ತಿಂಗಳಿಂದ ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದರು.ಆರೋಪಿಗಳ ಬಗ್ಗೆ ಮಾಹಿತಿ ಕೋರಿ ಪೊಲೀಸರು ಈ ಹಿಂದೆ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದರು ಮತ್ತು ವಿಶ್ವಾಸಾರ್ಹ ಸುಳಿವುಗಳನ್ನು ನೀಡಿದವರಿಗೆ 50,000 ರೂ. ನಗದು ಬಹುಮಾನವನ್ನು ಘೋಷಿಸಿದ್ದರು.ಪೊಲೀಸರು ಚೇತನ್ ಅಲಿಯಾಸ್ ಚೇತು ಪಡೀಲ್ ನನ್ನು 2026ರ ಎಪ್ರಿಲ್ 30ರಂದು ಬಂಧಿಸಿ, ಜೂನ್ 11ರಂದು ಮನೋಜ್ ಕುಲಾಲ್ ಅಲಿಯಾಸ್ ಮನೋಜ್ ಕೊಡಿಕೆರೆಯನ್ನು ಬಂಧಿಸಿದ್ದರು. ಆರೋಪಿಗಳ ಬಂಧನಕ್ಕೆ ಕಾರಣವಾದ ಮಾಹಿತಿದಾರರಿಗೆ ಬಹುಮಾನದ ಮೊತ್ತವನ್ನು ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.ನಾಗರಿಕರು ನೀಡಿದ ಸಹಕಾರವನ್ನು ಶ್ಲಾಘಿಸಿದ ಪೊಲೀಸರು, ಸಮಾಜದಲ್ಲಿ ಅಪರಾಧಗಳನ್ನು ತಡೆಗಟ್ಟಲು ಮತ್ತು ಪತ್ತೆಹಚ್ಚಲು ಸಹಾಯ ಮಾಡಲು…
ಧರ್ಮಸ್ಥಳ : ಹೆತ್ತ ತಾಯಿಯ ನಿರಂತರ ಪ್ರಾರ್ಥನೆ ಮತ್ತು ದೇವರ ಮೇಲಿನ ನಂಬಿಕೆ ಕೊನೆಗೂ ಸುಳ್ಳಾಗಲಿಲ್ಲ. ಬರೋಬ್ಬರಿ 26 ವರ್ಷಗಳ ಹಿಂದೆ, ಅಂದರೆ 2000ನೇ ಇಸವಿಯಲ್ಲಿ ಕೇವಲ 12 ವರ್ಷದ ಬಾಲಕನಾಗಿದ್ದಾಗ ಮನೆ ಬಿಟ್ಟು ಹೋಗಿದ್ದ ಮಗ, ಈಗ ಮುಸ್ಲಿಂ ಧರ್ಮ ಸ್ವೀಕರಿಸಿ, ವಿವಾಹವಾಗಿ ಇಬ್ಬರು ಮಕ್ಕಳ ತಂದೆಯಾದ ಬಳಿಕ ಪವಾಡ ಸದೃಶ ರೀತಿಯಲ್ಲಿ ಮರಳಿ ತಾಯಿಯ ಮಡಿಲು ಸೇರಿರುವ ಅಪರೂಪದ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿದೆ. ಧರ್ಮಸ್ಥಳದ ಅಶೋಕನಗರ ನಿವಾಸಿ ಸತೀಶ್ (ಪ್ರಸ್ತುತ ಸಲೀಂ ಅಬ್ದುಲ್ ಅನ್ಸಾರಿ) ಮರಳಿ ಬಂದ ಮಗ.2000ನೇ ಇಸವಿಯಲ್ಲಿ ಧರ್ಮಸ್ಥಳಕ್ಕೆ ಬಂದಿದ್ದ ಸರ್ಕಸ್ ತಂಡದ ಆಕರ್ಷಣೆಗೆ ಒಳಗಾಗಿದ್ದ 12 ವರ್ಷದ ಪುಟ್ಟ ಬಾಲಕ ಸತೀಶ್, ಸರ್ಕಸ್ ಕಂಪನಿ ಊರು ಬಿಡುವಾಗ ಅವರೊಂದಿಗೇ ಹೊರಟುಹೋಗಿದ್ದ. ಅಲ್ಲಿಂದ ಮಹಾರಾಷ್ಟ್ರ ಸೇರಿದ ಆತ, ಕಳೆದ 26 ವರ್ಷಗಳಿಂದ ಅಲ್ಲಿಯೇ ವಿವಿಧ ಕೆಲಸಗಳನ್ನು ಮಾಡಿಕೊಂಡಿದ್ದ. ದೀರ್ಘಕಾಲದಿಂದಾಗಿ ಆತ ತನ್ನ ಹೆತ್ತವರು, ಸ್ವಂತ ಊರು ಹಾಗೂ ಮಾತೃಭಾಷೆಯಾದ ಕನ್ನಡ ಮತ್ತು ತುಳುವನ್ನು…
ಬಂಟ್ವಾಳ: ಕರ್ತವ್ಯದಲ್ಲಿದ್ದಾಗಲೇ ಮೆಸ್ಕಾಂ ಉದ್ಯೋಗಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಶಂಭೂರು ಎಂಬಲ್ಲಿ ನಡೆದಿದೆ. ಮೂಲತಃ ಮಿತ್ತೂರು ನಿವಾಸಿ ಚಂದ್ರಶೇಖರ ನಾಯ್ಕ ( 55) ಮೃತಪಟ್ಟ ವ್ಯಕ್ತಿ.ಅವರು ಮೆಸ್ಕಾಂ ಪಾಣೆಮಂಗಳೂರು ಶಾಖೆಯಲ್ಲಿ ಸಹಾಯಕ ಮೆಕಾನಿಕ್ ಹುದ್ದೆಯನ್ನು ನಿರ್ವಹಿಸುತ್ತಿದ್ದರು. ಬುಧವಾರ ಮಧ್ಯಾಹ್ನ ವೇಳೆ ಶಂಭೂರು ಸಮೀಪದ ಕುಂದಾಯಗೋಳಿ ಎಂಬಲ್ಲಿ ವಿದ್ಯುತ್ ಕಂಬವೊಂದು ತುಂಡಾಗಿ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಹಿನ್ನೆಲೆಯಲ್ಲಿ ಕಂಬವನ್ನು ಅಳವಡಿಸಿ ವಿದ್ಯುತ್ ತಂತಿಗಳನ್ನು ಎಳೆದು ಸಂಪರ್ಕ ನೀಡಿದ್ದರು.ಅ ಬಳಿಕ ಅಲ್ಲಿಂದ ಇನ್ನೊಂದು ಕಡೆ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗೆ ಕರೆ ಬಂದ ಕಾರಣ ಇಲಾಖೆಯ ಸಿಬ್ಬಂದಿ ಜೊತೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕುಂದಾಯಗೋಳಿ ಎಂಬಲ್ಲಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಗೆ ತರಲಾಯಿತು. ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷೆ ನಡೆಸಿದಾಗ ಅವರು ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಂಗಳೂರು: ದ.ಕ. ಜಿಲ್ಲೆಯ ಎಲ್ಲಾ ರಸ್ತೆಗಳ ಡಿವೈಡರ್‌ಗಳ ಮೇಲೆ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಲು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಸೂಚನೆ ನೀಡಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಮಳೆ ಚುರುಕುಗೊಂಡಿದ್ದು, ಮಳೆಗಾಲದ ಸಂದರ್ಭದಲ್ಲಿ ಗಾಳಿ ಮತ್ತು ಮಳೆಯ ಪರಿಣಾಮದಿಂದ ರಸ್ತೆಗಳಲ್ಲಿ ವಿಶೇಷವಾಗಿ ರಸ್ತೆಗಳ ಡಿವೈಡರ್ ಗಳಿಗೆ ಅಳವಡಿಸಲಾಗಿರುವ ಪ್ಲೆಕ್ಸ್, ಬ್ಯಾನರ್ ಮತ್ತು ಬಂಟಿಂಗ್‌ಗಳು ಕಳಚಿ ವಾಹನಗಳ ಮೇಲೆ ಮತ್ತು ಪಾದಚಾರಿಗಳ ಮೇಲೆ ಬೀಳುವುದರಿಂದ ಅಪಘಾತಗಳು, ಜೀವಹಾನಿಗಳು ಸಂಭವಿಸುವ ಸಾಧ್ಯತೆ ಇರುತ್ತದೆ.ಮಂಗಳೂರು ಮಹಾನಗರ ಪಾಲಿಕೆ ಸಹಿತ ಜಿಲ್ಲೆಯ ಎಲ್ಲಾ ನಗರ ಸ್ಥಳೀಯಾಡಳಿತ ಸಂಸ್ಥೆ ಹಾಗೂ ಗ್ರಾಪಂ ವ್ಯಾಪ್ತಿಯ ರಸ್ತೆಯ ಡಿವೈಡರ್‌ಗಳ ಮೇಲೆ ಅಪಾಯಕಾರಿ ಹಾಗೂ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸಲಾಗಿದೆ. ಇದರಿಂದ ರಸ್ತೆ ದಾಟುವವರಿಗೆ ಮತ್ತು ವಾಹನಿಗರಿಗೆ ಸಮಸ್ಯೆಯಾಗಿದೆ. ಅಪಘಾತಕ್ಕೂ ಕಾರಣವಾಗಿದೆ. ಈ ಬಗ್ಗೆ ಈಗಾಗಲೆ ಜಿಲ್ಲಾಡಳಿತಕ್ಕೆ ಸಾಕಷ್ಟು ದೂರುಗಳೂ ಬಂದಿವೆ. ರಸ್ತೆ ಸುರಕ್ಷಾ ಸಮಿತಿಯ ಸಭೆಯಲ್ಲೂ ವಿಸ್ತೃತ ಚರ್ಚೆ ನಡೆದಿದೆ. ಹಾಗಾಗಿ ತಕ್ಷಣ ಎಲ್ಲಾ ಫ್ಲೆಕ್ಸ್ ಬ್ಯಾನರ್‌ಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ…
ಪುತ್ತೂರು: 2018 ರಲ್ಲಿ ಪೋಕ್ಸೋ ಪ್ರಕರಣದಲ್ಲಿ ದಾಖಲಾಗಿ ಬಹಳ ದಿನಗಳಿಂದ ತಲೆಮರೆಸಿಕೊಂಡಿದ್ದ 32 ವರ್ಷದ ವ್ಯಕ್ತಿಯನ್ನು ಪುತ್ತೂರು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಪುತ್ತೂರಿನ ನರಿಮೊಗೇರು ನಿವಾಸಿ ನಮನ್ ನಾಯಕ್ (32) ಎಂದು ಗುರುತಿಸಲಾಗಿದೆ. ನಿರ್ದಿಷ್ಟ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡ ಬೆಂಗಳೂರಿನ ಕೂಡ್ಲು ಗೇಟ್‌ನಲ್ಲಿ ಆತನನ್ನು ಪತ್ತೆಹಚ್ಚಿ ಬಂಧಿಸಲಾಗಿದೆ.ನಮನ್ ನಾಯಕ್ ವಿರುದ್ಧ ಪುತ್ತೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 53/2018 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 448 (ಮನೆಗೆ ಅತಿಕ್ರಮಣ), 506 (ಕ್ರಿಮಿನಲ್ ಬೆದರಿಕೆ), ಮತ್ತು 354 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲವಂತ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ 12 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ವಿಚಾರಣೆಗೆ ನ್ಯಾಯಾಲಯದ ಮುಂದೆ ಹಾಜರಾಗಲು ವಿಫಲವಾದ ಕಾರಣ, ಅವನ ವಿರುದ್ಧ ಸ್ಥಾಯಿ ವಾರಂಟ್ ಹೊರಡಿಸಲಾಗಿತ್ತು. ಬಂಧನದ ನಂತರ, ಪೊಲೀಸರು ಅವನನ್ನು ನ್ಯಾಯಾಲಯದ ಮುಂದೆ…
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ.ಪತ್ರಿಕಾ ಪ್ರಕಟಣೆಯ ಪ್ರಕಾರ, ಜೂನ್ 7 ರಂದು ಸಲ್ಲಿಸಿದ ದೂರಿನಲ್ಲಿ ಸಂತ್ರಸ್ತೆ ನೀಡಿರುವ ಮಾಹಿತಿಯ ಪ್ರಕಾರ, 2023 ರಲ್ಲಿ ರಾತ್ರಿ ವೇಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಸಂಬಂಧಿ ಸುರೇಶ್ ಎಂಬ ಆರೋಪಿ ತನ್ನ ಮನೆಯಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ದೂರಿನ ಆಧಾರದ ಮೇಲೆ ಧರ್ಮಸ್ಥಳ ಪೊಲೀಸರು ಅಪರಾಧ ಸಂಖ್ಯೆ 41/2026 ರ ಅಡಿಯಲ್ಲಿ ಐಪಿಸಿ ಸೆಕ್ಷನ್ 376 ಮತ್ತು 506 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ತ ನಿಖೆಯ ನಂತರ, ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ಜೂನ್ 9 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕುಂಬಳೆ: ಗಾಳಿಯ ಅಬ್ಬರಕ್ಕೆ ತೆಂಗಿನ ಮರ ಮುರಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟು, ಇನ್ನಿಬ್ಬರು ಅಪಾಯದಿಂದ ಪಾರಾದ ಘಟನೆ ಇಂದು ಬೆಳಿಗ್ಗೆ ಕುಂಬಳೆ ಸಮೀಪದ ಪೆರುವಾಡ್ ಮೈದಾನ ಬಳಿ ನಡೆದಿದೆ. ಪೆರುವಾಡಿನ ಅಬ್ದುಲ್ಲ (65) ಮೃತಪಟ್ಟವರು.ಪೆರುವಾಡು ಜುಮಾ ಮಸೀದಿ ಸಮಿತಿ ಅಧ್ಯಕ್ಷ ರಾಗಿ ಸೇವೆ ಸಲ್ಲಿಸುವುದರ ಜೊತೆಗೆ ಮೀನುಗಾರರಾಗಿದ್ದ ಇವರು ಬೆಳಿಗ್ಗೆ 8.30 ರ ಸುಮಾರಿಗೆ ಸ್ನೇಹಿತರಾದ ಇಬ್ರಾಹಿಂ ಮತ್ತು ಹಸೈನಾರ್ ಜೊತೆ ಕುಳಿತು ಮಾತನಾಡುತ್ತಿದ್ದಾಗ ಈ ದುರಂತ ನಡೆದಿದೆ. ಜೊತೆಗಿದ್ದ ಇಬ್ಬರು ಶಬ್ದ ಕೇಳಿ ಓಡಿದ್ದರಿಂದ ಅಪಾಯ ತಪ್ಪಿದೆ. ಗಂಭೀರ ಗಾಯಗೊಂಡ ಅಬ್ದುಲ್ಲ ರವರನ್ನು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ ಎಂದು ವರದಿಯಾಗಿದೆ. ಇನ್ನು ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.






