ದೆಹಲಿ: ಇರಾನ್ ಮೂಲದ ವಿದೇಶಿ ವಿಮಾನವೊಂದು ದೆಹಲಿಯ ವಾಯುಪ್ರದೇಶದತ್ತ ಚಲಿಸುವುದನ್ನು ತಡೆಯಲು ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳು ಹರಸಾಹಸ ಪಡುತ್ತಿವೆ. ಮೂಲಗಳ ಪ್ರಕಾರ, ವಿಮಾನದಲ್ಲಿ ಬಾಂಬ್ ಇರುವ ಸಾಧ್ಯತೆಯ ಬಗ್ಗೆ ದೆಹಲಿಯ ಭದ್ರತಾ ಏಜೆನ್ಸಿಗಳಿಗೆ ಮಾಹಿತಿ ಬಂದಿದೆ. ಹೀಗಾಗಿ, ಇದು ಎಚ್ಚರಿಕೆಯನ್ನು ನೀಡಿದ್ದು, ದೆಹಲಿಯಲ್ಲಿ ಇಳಿಯಲು ವಿಮಾನಕ್ಕೆ ಅನುಮತಿ ನೀಡಲಾಗಿಲ್ಲ. ವಿದೇಶಿ ವಿಮಾನವು ತನ್ನ ಅಂತಿಮ ಚೀನಾ ಕಡೆಗೆ ತೆರಳಿದೆ. ಭಾರತೀಯ ವಾಯು ಸಂಚಾರ ನಿಯಂತ್ರಣದಿಂದ ಎಚ್ಚರಿಕೆಯನ್ನು ವಿಮಾನದೊಂದಿಗೆ ಹಂಚಿಕೊಂಡಾಗ ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸಿತ್ತು. ಪಂಜಾಬ್ ಮತ್ತು ಜೋಧ್‌ಪುರ ವಾಯುನೆಲೆಗಳಿಂದ ಭಾರತೀಯ ವಾಯುಪಡೆಯ Su-30MKI ಫೈಟರ್ ಜೆಟ್‌ಗಳು ವಿಮಾನವನ್ನು ತಡೆಯಲು ಹರಸಾಹಸ ಪಡುತ್ತಿವೆ ಎಂದು ಮೂಲಗಳು ತಿಳಿಸಿವೆ. ಬಾಂಬ್ ಬೆದರಿಕೆ ಎಲ್ಲಿಂ ಬಂದಿದೆ ಮತ್ತು ವಿಮಾನದ ಹೆಸರು ಇನ್ನೂ ಸ್ಪಷ್ಟವಾಗಿಲ್ಲ. ಆದಾಗ್ಯೂ, ವಿಮಾನವು ಈಗ ಚೀನಾದ ಕಡೆಗೆ ಚಲಿಸುತ್ತಿದೆ. ಭಾರತೀಯ ವಾಯುಪ್ರದೇಶದ ಮೇಲಿತ್ತು ಮತ್ತು ಭದ್ರತಾ ಏಜೆನ್ಸಿಗಳಿಂದ ನಿಕಟವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ವಿಮಾನವು ಚೀನಾದ ಕಡೆಗೆ ತನ್ನ ಹಾರಾಟದ ಹಾದಿಯಲ್ಲಿ ಮುಂದುವರಿಯುತ್ತಿದೆ…
Author: main-admin
ಮಂಗಳೂರು; ಟ್ರಾಫಿಕ್ ವಿಭಾಗದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಹೆಡ್ ಕಾನ್ಸ್ಟೇಬಲ್ ಗೆ ಕಾರು ಡಿಕ್ಕಿಯಾಗಿ ಪರಾರಿಯಾದ ಘಟನೆ ಉಳ್ಳಾಲಬೈಲಿನಲ್ಲಿ ನಡೆದಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಲೋಕೇಶ್ ನಾಯ್ಕ್ ಗಾಯಗೊಂಡವರು. ಲೋಕೇಶ್ ನಾಯ್ಕ್ ಹಾಗೂ ಎಎಸ್ ಐ ಮಂಜುಳಾ ಅವರು ಹೈವೇ ಪೆಟ್ರೋಲ್ ವಾಹನದಲ್ಲಿ ಉಳ್ಳಾಲಬೈಲಿನಲ್ಲಿ ಇಂದು ಸಂಜೆ ಗಸ್ತಿನಲ್ಲಿದ್ದ ವೇಳೆ ಕಾರು ಡಿಕ್ಕಿ ಹೊಡೆದಿದೆ. ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಬರುತ್ತಿದ್ದ ಸ್ವಿಫ್ಟ್ ಕಾರನ್ನು ಲೋಕೇಶ್ ತಪಾಸಣೆಗಾಗಿ ಸೈಡ್ ಗೆ ನಿಲ್ಲಿಸುವಂತೆ ಹೇಳಿದ್ದಾರೆ. ಈ ವೇಳೆ ಕಾರು ಲೋಕೇಶ್ ಅವರಿಗೆ ಏಕಾಏಕಿ ಡಿಕ್ಕಿಯಾಗಿದೆ. ಪರಿಣಾಮ ಲೋಕೇಶ್ ನಾಯ್ಕ್ ಡಿವೈಡರ್ ಗೆ ಎಸೆಯಲ್ಪಟ್ಟಿದ್ದಾರೆ. ಅಪಘಾತದ ಬಳಿಕ ಕಾರು ನಿಲ್ಲಿಸಿದೇ ಚಾಲಕ ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡ ಲೋಕೇಶ್ ನಾಯ್ಕ್ ಅವರನ್ನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲ: ಕನ್ಯಾನ ಗ್ರಾಮಸ್ಥರ ಬಹು ದೊಡ್ಡ ಬೇಡಿಕೆಯಾಗಿದ್ದ ಸಾರ್ವಜನಿಕ ಹಿಂದೂ ರುದ್ರ ಭೂಮಿಯನ್ನು ಆದಿತ್ಯವಾರ(ಆ.2.) ದಂದು ಕನ್ಯಾನ ಭಾರತ್ ಸೇವಾಶ್ರಮ ಇದರ ಮುಖ್ಯಸ್ಥರಾದ ಈಶ್ವರ ಭಟ್ ಇವರು ಲೋಕಾರ್ಪಣೆ ಗೊಳಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ದೇವಪ್ಪ ಪಿ ಆರ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಹಿಮಾನ್, ಉಪಾಧ್ಯಕ್ಷರಾದ ಶ್ರೀಮತಿ ಕುಸುಮ, ಸದಸ್ಯರುಗಳಾದ ಅಬ್ದುಲ್ ಮಜೀದ್ ಕನ್ಯಾನ, ಕೃಷ್ಣ ನಾಯ್ಕ ಮರ್ತನಾಡಿ, ಮೊಯಿದಿನ್ ಬೈರಿಕಟ್ಟೆ, ನಾರಾಯಣ ಶಿರಂಕಲ್ಲು, ಶ್ರೀಮತಿ ದೇವಕಿ, ಶ್ರೀಮತಿ ರೇಖಾ, ಶ್ರೀಮತಿ ಸೆಲೆಸ್ತಿನಾ, ಶ್ರೀಮತಿ ನಳಿನಿ ,ಶ್ರೀಮತಿ ವೀಣಾ ,ಶ್ರೀಮತಿ ಗ್ರೇಸಿ ಕ್ರಾಸ್ತಾ, ಶ್ರೀಮತಿ ವನಿತಾ, ಮಾಜಿ ಸದಸ್ಯರಾದ ಶ್ರೀಮತಿ ಲಲಿತಾ ಮತ್ತು ಪ್ರಮುಖರಾದ ಗಂಗಾಧರ ಕನ್ಯಾನ ಅಬ್ದುಲ್ ಖಾದರ್ ಸೆಟ್ಟಿಬೆಟ್ಟು, ಲೊಕೇಶ್ ಗೌಡ ಹಾಗೂ ಪಂಚಾಯತ್ ಸಿಬ್ಬಂದಿಗಳು, ನಾಗರೀಕರು ಉಪಸ್ಥಿತರಿದ್ದರು.
ಗುಜರಿ ಅಂಗಡಿಗೆ ಕೆಲಸಕ್ಕೆ ತೆರಳಿದ ಮಹಿಳೆ ನಾಪತ್ತೆಯಾಗಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಪತ್ನಿ ನಾಪತ್ತೆಯಾಗಿರುವ ಬಗ್ಗೆ ಪತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಪತ್ನಿ ನಾಪತ್ತೆಯಾಗಿರುವ ಬಗ್ಗೆ ಪತಿ ಆನಂದ ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸುಜಾತಾ ಉಪ್ಪಿನಂಗಡಿಯ ಕೂಟೇಲು ಸಮೀರ್ ಎಂಬವರ ಗುಜಿರಿ ಅಂಗಡಿಯಲ್ಲಿ ಈ ಹಿಂದೆ ಕೆಲಸ ಮಾಡಿಕೊಂಡಿದ್ದರು.ಅದೇ ಗುಜರಿ ಅಂಗಡಿಗೆ ಸೆಪ್ಟಂಬರ್ 23ರಂದು ಕೆಲಸಕ್ಕೆಂದು ತೆರಳಿದ್ದಾರೆ. ಆದರೆ ಬಳಿಕ ವಾಪಾಸ್ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬೆಂಗಳೂರು : ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಅಂತ್ಯಗೊಂಡಿದ್ದರೂ ಕೂಡ ಅ.15 ರವರೆಗೂ ರಾಜ್ಯದಲ್ಲಿ ಅಬ್ಬರದ ಮಳೆ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅ.10 ರ ಬಳಿಕ ಮಳೆಯ ಪ್ರಮಾಣ ಕೊಂಚ ತಗ್ಗಲ್ಲಿದ್ದು, ಅಕ್ಟೋಬರ್ 15 ರವರೆಗೆ ರಾಜ್ಯದ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇಂದು ಮತ್ತು ನಾಳೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ನಾಳೆ ಗುಡುಗು ಸಹಿತ ಭಾರೀಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 2 ರಂದು ಬಾಗಲಕೋಟೆ, ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯಾದ್ಯಂತ ಮಳೆಯ ಆರ್ಭಟ ಮತ್ತೆ ಶುರುವಾಗಿದ್ದು,…
ಮಂಗಳೂರು; ಸದ್ಯ ದಕ್ಷಿಣಭಾರತದಾದ್ಯಂತ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಕಾಂತಾರ. ಸಿನಿಮಾ ನೋಡಿದ ಮಂದಿಯ ಬಾಯಲ್ಲಿ ಬರೀ ಅದರದ್ದೇ ಮಾತು. ಅಪ್ಪಟ ಕರಾವಳಿ ಸೊಗಡಿನ ಈ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಹೊಸ ಜಾದು ಮಾಡಿದೆ. ದೈವಾರಾಧನೆ, ಕಂಬಳ, ಕರಾವಳಿಯ ಸಂಸ್ಕೃತಿಯ ಸುತ್ತ ಸುತ್ತುವ ಈ ಸಿನಿಮಾ ಕನ್ನಡ ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆಯೋದರಲ್ಲಿ ಯಾವುದೇ ಸಂದೇಹವಿಲ್ಲ. ರಿಷಭ್ ಶೆಟ್ಟಿ ಈ ಸಿನಮಾದ ಮೂಲಕ ಪ್ರೇಕ್ಷಕರನ್ನು ಹೊಸ ಲೋಕಕ್ಕೆ ಕರೆದೊಯ್ದಿದ್ದಾರೆ. ಇನ್ನು ಕಾಂತಾರ ಸಿನಿಮಾದ ಕ್ಲೈಮಾಕ್ಸ್ ಒಬ್ಬ ಪ್ರೇಕ್ಷಕನನ್ನು ಎಷ್ಟರ ಮಟ್ಟಿಗೆ ಆವರಿಸಿಕೊಳ್ಳುತ್ತದೆ ಎನ್ನುವುದಕ್ಕೆ ಮಂಗಳೂರಿನಲ್ಲಿ ನಡೆದ ವಿಶೇಷ ಘಟನೆಯೊಂದು ಸಾಕ್ಷಿಯಾಗಿದೆ. ಮಂಗಳೂರಿನ ಪಿವಿಆರ್ ಚಿತ್ರಮಂದಿರದಲ್ಲಿ ಶುಕ್ರವಾರ ನಾಲ್ಕನೇ ಶೋನಲ್ಲಿ ‘ಕಾಂತಾರ’ ಸಿನಿಮಾ ವೀಕ್ಷಿಸುತ್ತಿದ್ದ ಪ್ರೇಕ್ಷಕನ ಮೈ ಮೇಲೆ ದೈವ ಆವಾಹನೆ ಆಗಿದೆ. ಸಿನಿಮಾ ನೋಡುತ್ತಿದ್ದ ವ್ಯಕ್ತಿ ಏಕಾಏಕಿ ದೈವ ಆವಾಹನೆ ಆದಂತೆ ವರ್ತಿಸಿದ್ದು, ಸ್ಥಳದಲ್ಲಿದ್ದವರು ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಪ್ರೇಕ್ಷನ ವರ್ತನೆ ಕಂಡು ಜನ ಗಾಬರಿಗೊಂಡಿದ್ದಾರೆ. ಈ…
ನಮ್ಮ ದೇಹದಲ್ಲಿನ ರಕ್ತ ಶುದ್ಧಿ ಆಗದಿದ್ದರೆ ಸಾಕಷ್ಟು ರೋಗಗಳು ಬರುವ ಸಾಧ್ಯತೆ ಇರುತ್ತದೆ. ಇದರಿಂದ ಮೊಡವೆ ಸಮಸ್ಯೆ ಕೂಡ ಕಾಡುತ್ತದೆ. ಆಗಾಗ ನಮ್ಮ ರಕ್ತ ಶುದ್ಧಿಕರಣಗೊಳಿಸಿಕೊಂಡರೆ ಕಾಯಿಲೆಗಳಿಂದ ದೂರವಾಗಬಹುದು. ಮನೆಯಲ್ಲಿಯೇ ಸಿಗುವ ವಸ್ತುಗಳನ್ನು ಉಪಯೋಗಿಸಿಕೊಂಡು ರಕ್ತವನ್ನು ಶುದ್ಧಿಕರಣಗೊಳಿಸಿಕೊಳ್ಳಬಹುದು. ಹಾಗಲಕಾಯಿ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗೇ ಇದು ರಕ್ತವನ್ನು ಶುದ್ಧಿಕರಣ ಮಾಡಲು ಉತ್ತಮವಾದ ಮನೆಮದ್ದಾಗಿದೆ. ಹಾಗಲಕಾಯಿ ಗೊಜ್ಜು, ಪಲ್ಯ ಮಾಡಿಕೊಂಡು ಆಗಾಗ ಸೇವಿಸುವುದರಿಂದ ದೇಹದಲ್ಲಿನ ಟಾಕ್ಸಿನ್ ಕಡಿಮೆಯಾಗುತ್ತದೆ. ಬೆಳ್ಳುಳ್ಳಿ ಕೂಡ ರಕ್ತ ಶುದ್ಧಿಕರಣ ಮಾಡುವ ಗುಣ ಹೊಂದಿದೆ. ದಿನಾ ಬೆಳಿಗ್ಗೆ ಖಾಲಿ ಹೊಟ್ಟೆಗೆ 2 ಎಸಳು ಬೆಳ್ಳುಳ್ಳಿಯನ್ನು ಸಿಪ್ಪೆ ತೆಗೆದು ತಿನ್ನಿ. ತಿಂದಾದ ನಂತರ ಉಗುರು ಬೆಚ್ಚಗಿನ ನೀರನ್ನು ಕುಡಿಯಿರಿ. ಇದರಿಂದ ರಕ್ತ ಶುದ್ಧಿಯಾಗುತ್ತದೆ. ಇನ್ನು ಒಂದು ಗ್ಲಾಸ್ ಕ್ಯಾರೆಟ್ ಜ್ಯೂಸ್ ಗೆ 1 ಟೇಬಲ್ ಸ್ಪೂನ್ ನಷ್ಟು ಬೆಳ್ಳುಳ್ಳಿ ಪೇಸ್ಟ್, 1 ಟೇಬಲ್ ಸ್ಪೂನ್ ನಷ್ಟು ಜೇನುತುಪ್ಪ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಇದರಿಂದ…
ಮಂಗಳೂರು : ಎಫ್‌ಎಸ್‌ಎಸ್‌ಎಐ (ಫುಡ್ ಸೇಫ್ಟಿ ಅಂಡ್ ಸ್ಟ್ಯಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾ) ಮತ್ತು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ ನಂತಹ ಸರ್ಕಾರಿ ಸಂಸ್ಥೆಗಳನ್ನು ಹೊಂದಿದ್ದರೂ, ದೇಶದ ವಿವಿಧ ಉತ್ಪನ್ನಗಳ ಮೇಲೆ ಹಲಾಲ್ ಪ್ರಮಾಣಪತ್ರಗಳನ್ನು ಹೇರಲಾಗುತ್ತಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ಹೇಳಿದೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ರಮೇಶ್ ಶಿಂಧೆ, ಹಲಾಲ್ ಪ್ರಮಾಣಪತ್ರವನ್ನು ಈ ಹಿಂದೆ ಮಾಂಸಕ್ಕೆ ಮಾತ್ರ ಸೀಮಿತಗೊಳಿಸಲಾಗಿತ್ತು, ಈಗ ವಸತಿ ಸಮುಚ್ಚಯಗಳು, ಫ್ಯಾಷನ್ ಉದ್ಯಮ, ಸೌಂದರ್ಯವರ್ಧಕಗಳು ಮತ್ತು ಆಹಾರ ಉತ್ಪನ್ನಗಳು ಸೇರಿದಂತೆ ಎಲ್ಲಾ ಉತ್ಪನ್ನಗಳಿಗೆ ವಿಸ್ತರಿಸಲಾಗಿದೆ.ಈ ಪ್ರಮಾಣಪತ್ರಕ್ಕಾಗಿ, ಜಮೀಯತ್ ಉಲೇಮಾ-ಎ-ಹಿಂದ್ ಗೆ ಅಗತ್ಯ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಜಮೀಯತ್ ಉಲೇಮಾ-ಎ-ಹಿಂದ್ನ ಆರ್ಥಿಕ ಅಂಶಗಳ ಬಗ್ಗೆ ಸರ್ಕಾರ ತನಿಖೆ ನಡೆಸಬೇಕು ಎಂದು ಅವರು ಹೇಳಿದರು. ಎಲ್ಲಾ 57 ಮುಸ್ಲಿಂ ದೇಶಗಳು ಹಲಾಲ್ ಪ್ರಮಾಣೀಕೃತ ಉತ್ಪನ್ನಗಳನ್ನು ಮಾತ್ರ ಆಮದು ಮಾಡಿಕೊಳ್ಳಲು ಅನುಮತಿಸಲು ನಿರ್ಧರಿಸಿದ್ದವು. ಆದ್ದರಿಂದ, ಎಲ್ಲಾ ಎಂಎನ್ಸಿಗಳು ಮತ್ತು ಇತರರು ಹಲಾಲ್ ಪ್ರಮಾಣಪತ್ರದ ಹಿಂದೆ ಇದ್ದಾರೆ.…
ಕಾರ್ಕಳ: ಕಾರ್ಕಳ ತಾಲೂಕಿನ ಸೂಡ ಗ್ರಾಮದ ಗಾಣದಬೆಟ್ಟು ಎಂಬಲ್ಲಿ ಮಹಿಳೆಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡದ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.ಸೂಡ ಗ್ರಾಮದ ಗಾಣದಬೆಟ್ಟು ನಿವಾಸಿ ಸುಗುಣ (58 ವರ್ಷ) ಮೃತಪಟ್ಟ ದುರ್ದೈವಿ. ಕೃಷಿ ಕೆಲಸ ಮಾಡಿಕೊಂಡಿದ್ದ ಸುಗುಣ ಅವರು ನಿನ್ನೆ ಮನೆಯ ಪಕ್ಕದ ಸುನಿಲ್ ಎಂಬವರ ಭತ್ತದ ಗದ್ದೆಯಲ್ಲಿ ಬತ್ತದ ಕಳೆ ತೆಗೆಯುವ ಕೆಲಸಕ್ಕೆ ಹೋಗಿದ್ದರು. ಮಧ್ಯಾಹ್ನ ಊಟಕ್ಕೆಂದು ಮನೆಗೆ ವಾಪಸ್ ಬರುತ್ತಿದ್ದ ವೇಳೆ ಮನೆಯ ಪಕ್ಕದಲ್ಲಿರುವ ನೀರು ತುಂಬಿದ್ದ ಕೃಷಿ ಹೊಂಡದಲ್ಲಿ ಕೈಕಾಲು ತೊಳೆಯಲೆಂದು ಹೋಗಿದ್ದ ಅವರು ಕೈಕಾಲು ತೊಳೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹೊಂಡದ ನೀರಿಗೆ ಬಿದ್ದು ಮೇಲೆ ಬರಲಾಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಜಂಕ್ಷನ್ ಗೆ ವೀರ ಸಾವರ್ಕರ್ ಜಂಕ್ಷನ್ ಎಂದು ಮರು ನಾಮಕರಣ ಮಾಡಬೇಕೆಂಬ ಶಾಸಕ ಭರತ್ ಶೆಟ್ಟಿ ಅಹವಾಲನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಲಾಗಿದೆ. ವೀರ ಸಾವರ್ಕರ್ ಹೆಸರಿಡಬೇಕೆಂದು ಒಂದು ವರ್ಷದ ಹಿಂದೆ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಮಹಾನಗರ ಪಾಲಿಕೆಗೆ ಪ್ರಸ್ತಾವ ಮುಂದಿಡಲಾಗಿತ್ತು. 2021ರ ಆಗಸ್ಟ್ 3ರಂದು ನಡೆದ ಅಭಿವೃದ್ಧಿ ಸ್ಥಾಯಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿತ್ತು. ಕಾಂಗ್ರೆಸ್ ಸದಸ್ಯ ವಿನಯರಾಜ್, ಎಸ್ಡಿಪಿಐ ಸದಸ್ಯರಾದ ಮುನೀಬ್ ಬೆಂಗ್ರೆ ಮತ್ತು ಶಂಶದ್ ಅಬುಬಕ್ಕರ್ ವಿರೋಧಿಸಿದ್ದರು. ಆನಂತರ, ಪ್ರಸ್ತಾಪವು ಸ್ಥಾಯಿ ಸಮಿತಿಯಿಂದ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಗೆ ಬಂದಿತ್ತು. ಇತ್ತೀಚೆಗೆ ಹೊಸತಾಗಿ ಮೇಯರ್ ಆಯ್ಕೆಯಾದ ಬಳಿಕ ಸೆ.30ರಂದು ಮೊದಲ ಬಾರಿಗೆ ಸಾಮಾನ್ಯ ಸಭೆ ನಡೆದಿದ್ದು, ಸಭೆಯಲ್ಲಿ ವಿವಿಧ ವಿಚಾರಗಳ ಬಗ್ಗೆ ಚರ್ಚೆಯಾಗಿದೆ. ಇದೇ ವೇಳೆ, ಮಹಾನಗರ ಪಾಲಿಕೆಯ ಆಡಳಿತ ಸುರತ್ಕಲ್ ಜಂಕ್ಷನ್ನಿಗೆ ಸಾವರ್ಕರ್ ಹೆಸರಿಡುವ ಪ್ರಸ್ತಾಪವನ್ನು ವಿರೋಧ ಪಕ್ಷಗಳ ಸದಸ್ಯರ ವಿರೋಧದ ನಡುವೆಯೂ ಅಂಗೀಕರಿಸಿದ್ದು,…