Author: main-admin

ಉಪ್ಪಿನಂಗಡಿ: ಕೌಕ್ರಾಡಿ ಗ್ರಾಮದ ಕಟ್ಟೆ ಮಜಲಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ಮೂಲದ ಸೋನು ಸೋಂಕರ್‌ ಅವರ ಪತ್ನಿ ರೀಮಾ ಸೋಂಕರ್‌ (26) ಮತ್ತು ಮಗು ರಿಯಾ (1) ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂಟೀರಿಯರ್‌ ಡೆಕೊರೇಟರ್‌ ಆಗಿರುವ ಸೋನು ಸೋಂಕರ್‌ ಉತ್ತರ ಪ್ರದೇಶದ ಅಜಾಮ್‌ ಘರ್‌ ಜಿಲ್ಲೆಯ ಅಮಹಾಮಾಫಿ ಗ್ರಾಮದ ನಿವಾಸಿಯಾಗಿದ್ದು, ಕೌಕ್ರಾಡಿಯಲ್ಲಿ ಕೃಷ್ಣಪ್ಪ ಅವರ ಬಾಡಿಗೆ ಮನೆಯಲ್ಲಿ ಕುಟುಂಬದೊಂದಿಗೆ ವಾಸವಿದ್ದರು. ಎ. 22ರಂದು ಬೆಳಗ್ಗೆ ಕೆಲಸಕ್ಕೆಂದು ಹೋಗಿದ್ದು ಸಂಜೆ ಮರಳಿ ಬಂದಾಗ ಮನೆಯ ಬಾಗಿಲಿಗೆ ಬೀಗ ಹಾಕಿ ಪತ್ನಿ, ಮಗು ನಾಪತ್ತೆಯಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

Read More

ಮಂಗಳೂರು : ಮದುವೆ ಸಮಾರಂಭವೊಂದರಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮಧ್ಯವಯಸ್ಸಿನ ಇಬ್ಬರನ್ನು ಉಳ್ಳಾಲ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕುಂಪಲ ಕುಜುಮ ಗದ್ದೆ ನಿವಾಸಿ ರತ್ನಾಕರ್ ಮತ್ತು ಕಾಪಿಕಾಡ್ ನಿವಾಸಿ ಗಂಗಾಧರ್ ಎಂದು ಗುರುತಿಸಲಾಗಿದೆ. ಕೊಲ್ಯದ ದೇವಸ್ಥಾನ ಒಂದರ ಕಲ್ಯಾಣ ಮಂಟಪದಲ್ಲಿ ಕುಟುಂಬಸ್ಥರ ಮದುವೆಗೆಂದು ಬಂಟ್ವಾಳ ಮೂಲದ ಅಪ್ರಾಪ್ತ ವಯಸ್ಸಿನ ಬಾಲಕಿ ಬಂದಿದ್ದು, ಆಕೆ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಆರೋಪಿಗಳಿಬ್ಬರು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದರು ಎನ್ನಲಾಗಿದೆ.ಸಂತ್ರಸ್ತೆ ಉಳ್ಳಾಲ ಪೊಲೀಸರಿಗೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

Read More

ಕಾಸರಗೋಡು : ಕೇರಳದ ಕಾಸರಗೋಡಿನ ಜನ ನಿಭಿಡ ಪ್ರದೇಶದಲ್ಲಿ ಅಪರಿಚಿತ ದ್ರೋಣ್ ಪತ್ತೆಯಾಗಿದೆ. ಜಿಲ್ಲೆಯ ಚಿಗುರುಪಾದೆ ಎಂಬಲ್ಲಿ ಈ ವಿಮಾನ ಆಕಾರದ  ದ್ರೋಣ್ ಪತ್ತೆಯಾಗಿದ್ದು ಸ್ಥಳಕ್ಕೆ ಮಂಜೇಶ್ವರ ಪೋಲೀಸರ ಧಾವಿಸಿದ್ದಾರೆ.ಈ ಅಪರಿಚಿತ ದ್ರೋಣ್ ನಿಂದ ಸ್ಥಳೀಯ ಜನ ಆತಂಕಿತರಾಗಿದ್ದು  ಪುಟ್ಟ ವಿಮಾನ ಆಕಾರದ ಈ ದ್ರೋಣ್ ವೀಕ್ಷಣೆಗೆ ಸುತ್ತ ಮುತ್ತಲ ಜನ ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.ದ್ರೋಣ್ ಮಾಹಿತಿ ಪಡೆದ ಪೊಲೀಸರು ಅದರ ವಾರಿಸುದಾರ ಮಾಹಿತಿ ಕಲೆ ಹಾಕಿದ್ದು ಕೊನೆಗೂ ಅದು ಗೇಲ್ ಕಂಪೆನಿಗೆ ಸೇರಿದ್ದಾಗಿ ವಿಚಾರಣೆಯಿಂದ ಗೊತ್ತಾಗಿದ್ದು ಗ್ಯಾಸ್ ಪೈಪ್ ಲೈನ್ ಸಂಬಂಧಿಸಿದಂತೆ ಸರ್ವೆ ನಡೆಸುತ್ತಿದ್ದಾಗ ಏಕಾಏಕಿ ಜಿಪಿಎಸ್ ಸಂಪರ್ಕ ಕಡಿದುಕೊಂಡು ಜನನಿಭಿಡ ಪ್ರದೇಶದಲ್ಲಿ ಹೋಗಿ ದ್ರೋಣ್ ಬಿದ್ದಿತ್ತು  ಎನ್ನಲಾಗಿದೆ. ತೀವ್ರ ವಿಚಾರಣೆ ಬಳಿಕ ಗೇಲ್ ಕಂಪನಿ ಸಿಬ್ಬಂದಿ ದ್ರೋಣ್ ನ್ನು ವಶಕ್ಕೆ ಪಡೆದು ಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

Read More

ಬಂಟ್ವಾಳ: ನೇತ್ರಾವತಿ ನದಿಯ ನಿರ್ಮಾಣ ಹಂತದ ಡ್ಯಾಂ ಬಳಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಹಿಟಾಚಿ, ಟಿಪ್ಪರ್ ಹಾಗೂ ಇತರ ಸಾಮಾಗ್ರಿಗಳ ಸಹಿತ ಮರಳನ್ನು ವಶಕ್ಕೆ ಪಡೆದುಕೊಂಡು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಘಟನೆ ಬಿ ಕಸಬಾ ಗ್ರಾಮದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ಅಬ್ದುಲ್ ಮುತಾಲಿಬ್ @ ನಾವೂರು ಪುತ್ತಾ ಹಾಗೂ ಇತರರು ಎಂದು ಪೊಲೀಸರು ತಿಳಿಸಿದ್ದಾರೆ, ಬಂಟ್ವಾಳ ತಾಲೂಕು ಬಿ ಕಸಬಾ ಗ್ರಾಮದ ಜಕ್ರಿಬೆಟ್ಟು ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ನಿರ್ಮಾಣ ಹಂತದಲ್ಲಿರುವ ಡ್ಯಾಮ್ ನ ಬಳಿ, ನದಿಯಿಂದ ಕಳ್ಳತನದಿಂದ ಮರಳು ತೆಗೆದು ಅಕ್ರಮವಾಗಿ ಸಾಗಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಮಾಹಿತಿ ಬಂದ‌ ಮೇರೆಗೆ, ರಾಮ ಕೃಷ್ಣ ಪಿ ಎಸ್ ಐ (ಕಾ&ಸು) ಬಂಟ್ವಾಳ ನಗರ ಠಾಣೆರವರು ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿದಾಗ, ನದಿಯ ದಡದಲ್ಲಿ ಮರಳನ್ನು ರಾಶಿ ಹಾಕಿರುವುದು ಮತ್ತು 1 ಟಿಪ್ಪರ್ ಲಾರಿ, 1 ಹಿಟಾಚಿ ವಾಹನವನ್ನು…

Read More

ಕಣ್ಣೂರು: ಕಾರು – ಲಾರಿ ನಡುವಿನ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಕಣ್ಣೂರು ಜಿಲ್ಲೆಯ ಚೆರುಕುನ್ನು ಸಮೀಪದ ಪುನ್ನಚೇರಿ ಎಂಬಲ್ಲಿ ಸೋಮವಾರ ರಾತ್ರಿ (ಏ.29 ರಂದು) ನಡೆದಿದೆ. ಕಾರು ಚಲಾಯಿಸುತ್ತಿದ್ದ ಕಾಸರಗೋಡು ಕಾಳೀಚನಡುಕ್ಕಂನ ಸಾಸ್ತಂಪಾರದ ಕೆ.ಎನ್.ಪದ್ಮಕುಮಾರ್ (59), ಭೀಮಾನಡಿಯ ಚೂರಿಕಟ್ಟೆಯ ಸುಧಾಕರನ್ (52), ಸುಧಾಕರನ್ ಅವರ ಪತ್ನಿ ಅಜತಾ (35), ಅವರ ತಂದೆ ಕೊಜುಮ್ಮಲ್ ಕೃಷ್ಣನ್ (65) ಮತ್ತು ಅಜಿತಾ ಅವರ ಸಹೋದರ ಅಜಿತ್ ಅವರ ಮಗ ಆಕಾಶ್ (9) ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲಕ ಆಕಾಶ್‌ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ. ಚೆರುಕುನ್ನು ಬಳಿಯ ಪುನ್ನಚೇರಿಯ ಪೆಟ್ರೋಲ್ ಪಂಪ್ ಬಳಿ ಈ ಅಪಘಾತ ಸಂಭವಿಸಿದೆ. ಹಿಂಬದಿಯಿಂದ ಬಂದ ಲಾರಿ ಕಾರಿಗೆ ಢಿಕ್ಕಿ ಹೊಡೆದಿದ್ದರಿಂದ ಕಾರು ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಮತ್ತೊಂದು ಲಾರಿಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಮಂಗಳೂರಿನಿಂದ ಬರುತ್ತಿತ್ತು.…

Read More

ಮಂಗಳೂರು: 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ ನಡೆದ ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಕೃಷಿ ರಕ್ಷಣೆಗಾಗಿ ಆಯುಧ ಪರವಾನಿಗೆ ಹೊಂದಿರುವ (ಪೊಲೀಸ್ ಆಯುಕ್ತರ ಕಾರ್ಯವ್ಯಾಪ್ತಿಯನ್ನು ಹೊರತುಪಡಿಸಿ) ಎಲ್ಲಾ ಆಯುಧ ಪರವಾನಿಗೆದಾರರು ತಮ್ಮ ಆಯುಧಗಳನ್ನು ಈಗಾಗಲೇ ಪೊಲೀಸ್ ಠಾಣೆ / ಅಧಿಕೃತ ಕೋವಿ ಹಾಗೂ ಮದ್ದುಗುಂಡು ವ್ಯಾಪರಸ್ಥರಲ್ಲಿ ಠೇವಣೆ ಇರಿಸಿದ್ದು ಈ ಆಯುಧಗಳನ್ನು ಹಿಂಪಡೆಯಲು ಆಯುಧ ಪರವಾನಿಗೆದಾರರಿಗೆ ಏ.29ರ ಸೋಮವಾರದಿಂದ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ. ಷರತ್ತುಗಳು:ಯಾವುದೇ ಮೆರವಣಿಗೆ, ಜಾತ್ರೆ ಇತ್ಯಾದಿಗಳಲ್ಲಿ ಶಸ್ತ್ರಾಸ್ತ್ರವನ್ನು ಒಯ್ಯಲು ಅವಕಾಶವಿರುವುದಿಲ್ಲ. ಬೆಳೆಗಳ ರಕ್ಷಣೆಗಾಗಿ ಸದ್ರಿ ಆಯುಧಗಳನ್ನು ಮಾತ್ರ ಬಳಸತಕ್ಕದ್ದು. ಪರವಾನಿಗೆಯಲ್ಲಿ ಹೊಂದಿರುವ ಶಸ್ತ್ರಾಸ್ತ್ರವನ್ನು ಬಹಿರಂಗವಾಗಿ ಎಲ್ಲೂ ಪ್ರದರ್ಶಿಸುವಂತಿಲ್ಲ. ಸಾರ್ವಜನಿಕರನ್ನು ಪ್ರತ್ಯಕ್ಷವಾಗಿ…

Read More

ಮಂಗಳೂರು: ಮೇ 2ರ ತನಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಿಸಿಗಾಳಿ (heat wave) ಬೀಸಲಿದೆ ಎಂದು ಹವಾಮಾನ ಇಲಾಖೆಯ ಎಚ್ಚರಿಸಿದೆ ದಕ್ಷಿಣ ಕನ್ನಡದಲ್ಲಿ ಇನ್ನೂ ನಾಲ್ಕು ದಿನ ಬಿಸಿ ವಾತಾವರಣ ಮುಂದುವರಿಯಲಿದೆ. ರಾಜ್ಯದ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡದ ಕೆಲವು ಪ್ರದೇಶಗಳಲ್ಲಿ ಮಾತ್ರ ಎಪ್ರಿಲ್‌ನಲ್ಲಿ ಒಂದೆರಡು ಸಾರಿ ಮಳೆ ಸುರಿದಿದೆ. ಕೆಲವು ಪ್ರದೇಶಗಳಲ್ಲಿ ಕಳೆದ ನವೆಂಬರ್‌ನಲ್ಲಿ ಕಾಣೆಯಾದ ಮಳೆ ಮತ್ತೆ ಕಾಣಿಸಿಕೊಂಡಿಲ್ಲ. ಹೀಗಾಗಿ ವಾತಾವರಣ ಬಿಸಿಯಾಗಿಯೇ ಇದೆ. ಮಾರ್ಚ್ ಆರಂಭದಿಂದಲೇ ಬಿಸಿಲ ಝಲ ತೀವ್ರಗೊಂಡಿತ್ತು. ಸೆಖೆಯಿಂದಾಗಿ ಹಿರಿಯ ನಾಗರಿಕರು ತೀವ್ರ ಸಮಸ್ಯೆ ಎದುರಿ ಸುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಮತ ಚಲಾಯಿಸಲು ಆಗಮಿಸಿದ ಹಿರಿಯ ನಾಗರಿಕರು ಕಷ್ಟ ಅನುಭವಿಸಿದ್ದರು. ಮಂಗಳೂರಿನಲ್ಲಿ ಸೋಮವಾರ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇತ್ತು.…

Read More

ಉಡುಪಿ : ಹಾರ್ನ್ ಹಾಕಿ ಓವರ್ ಟೇಕ್ ಮಾಡಿದಕ್ಕೆ ಕಾರು ಚಾಲಕನೊಬ್ಬ ಬಸ್ಸನ್ನು ಅಡ್ಡಗಟ್ಟಿ ಬಸ್ ಡ್ರೈವರಿಗೆ ಚಾಕುವಿನಿಂದ ಇರಿದ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಇರಿತಕ್ಕೊಳಗಾದ ಚಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಮಾಸ್ಟರ್ ಹೆಸರಿನ ಎಕ್ಸ್ ಪ್ರೆಸ್ ಬಸ್ ಪಡುಬಿದ್ರೆ ಯ ಎರ್ಮಾಳ್ ಬಳಿ ಮುಂದಿನಿಂದ ಹೋಗುತ್ತಿದ್ದ ಕಾರು ಚಾಲಕನಿಗೆ ಹಾರ್ನ್ ಹಾಕಿ ಓವರ್ ಡೇಕ್ ಮಾಡಲು ಯತ್ನಿಸಿದ್ದಾನೆ. ಬಸ್ಸಿನ ಕರ್ಕಶ ಹಾರ್ನ್‌ಗೆ ಆಕ್ರೋಶಗೊಂಡ ಕಾರು ಚಾಲಕ ಬಸ್ಸನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ಮಾಡಿ ಇರಿದು ಬಳಿಕ ಬಸ್ಸಿನಿಂದ ಇಳಿದು ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ಗಾಯಗೊಂಡ ಬಸ್ ಚಾಲಕನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಈ ಬಗ್ಗೆ ಪಡುಬಿದ್ರೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ .

Read More

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಏಪ್ರಿಲ್‌ 30ರವರೆಗೆ ಹೀಟ್‌ ವೇವ್‌ ಪ್ರಭಾವ ಇರಲಿದೆ. ಪ್ರಮುಖವಾಗಿ ಉತ್ತರ ಒಳನಾಡಿ ಬೀದರ್, ಕಲಬುರಗಿ, ವಿಯಜಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಜತೆಗೆ ಹೀಟ್‌ ವೇವ್‌ ಹೆಚ್ಚಾಗುವ ಸಾಧ್ಯತೆ ಇದೆ. ಬಿಸಿ ಗಾಳಿ ಎಚ್ಚರಿಕೆ ಏಪ್ರಿಲ್ 27 ರಿಂದ ಮೇ 1ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 23 ಡಿ.ಸೆ ಇರುವ…

Read More

ಮಂಗಳೂರಿನ ಹಲವಾರು ಪ್ರದೇಶಗಳು ಏಪ್ರಿಲ್ 30 ರಿಂದ ಮೇ 1 ರವರೆಗೆ ನೀರು ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯವನ್ನು ಅನುಭವಿಸಲಿವೆ. ಈ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆಯು ನೀರಿನ ಸೇವೆಗಳನ್ನು ಸ್ಥಗಿತಗೊಳಿಸಲು ಯೋಜಿಸಿದೆ. ಮಂಗಳೂರು ನೀರು ಕಡಿತ: ಸಮಯ ಪರಿಶೀಲಿಸಿ ಎಪ್ರಿಲ್ 30ರಂದು ಬೆಳಗ್ಗೆ 6 ಗಂಟೆಯಿಂದ ಮೇ 1ರ ಬೆಳಗ್ಗೆ 6 ಗಂಟೆಯವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ಯೋಜಿತ ನೀರು ಸರಬರಾಜು ಅಡಚಣೆಯು ನಗರದಾದ್ಯಂತ ವಿವಿಧ ನೆರೆಹೊರೆಗಳ ಮೇಲೆ ಪರಿಣಾಮ ಬೀರುತ್ತದೆ. ಮಂಗಳೂರಿನಲ್ಲಿ ನೀರಿನ ಕಡಿತ ಏಕೆ? ರೇಚಕ ಸ್ಥಾವರವನ್ನು ಮಂಗಳೂರು ನಗರಕ್ಕೆ ಸಂಪರ್ಕಿಸುವ ಪೈಪಿಂಗ್ ಮೂಲಸೌಕರ್ಯದ ಅಗತ್ಯ ನಿರ್ವಹಣಾ ಕಾರ್ಯಗಳಿಂದಾಗಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ತಿಳಿಸಿದೆ. ನಗರ ನಿಗಮದೊಳಗೆ ನೀರು ಸರಬರಾಜು ವ್ಯವಸ್ಥೆಯನ್ನು ಉತ್ತಮಗೊಳಿಸಲು ಎಂಎಂಸಿ ನಿರ್ವಹಣೆಗೆ ಸಹಾಯ ಮಾಡುತ್ತದೆ. ಪಡೀಲ್, ಮರೋಳಿ, ಕಂಕನಾಡಿ, ಮಂಗಳಾದೇವಿ, ಜೆಪ್ಪು, ಫಳ್ನೀರು, ಮುಳಿಹಿತ್ಲು, ಬೋಳಾರ್,…

Read More