ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ ನಡೆಯಲಿದ್ದು ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ರಾಜಕೀಯ ಮುಖಂಡರು, ಕಾರ್ಯಕರ್ತರು, ಸ್ಟಾರ್ ಕ್ಯಾಂಪೇನರ್‌ಗಳು, ಮೆರವಣಿಗೆ ಅಯೋಜಕರು ಎ. 24ರ ಸಂಜೆ 6 ಗಂಟೆಗೆ ಕ್ಷೇತ್ರ ಬಿಡಬೇಕೆಂದು ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ. ಚುನಾವಣೆ ಸಿದ್ಧತೆ ಹಾಗೂ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಅನುಸರಿಸಬೇಕಾದ ಕ್ರಮಗಳ ಕುರಿತು ತಮ್ಮ ಕಚೇರಿಯಲ್ಲಿ ಸಭೆಯಲ್ಲಿ ಮಾತನಾಡಿ, ಮತದಾನ ದಿನದ 48 ಗಂಟೆ ಮುಂಚಿತವಾಗಿ ಯಾವುದೇ ರೀತಿಯ ಬಹಿರಂಗ ಪ್ರಚಾರ, ಧ್ವನಿವರ್ಧಕಗಳ ಬಳಕೆಗೆ ಅವಕಾಶ ಇರುವುದಿಲ್ಲ. ಹಾಗೆಯೇ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸಬೇಕಾದರೆ ಸಂಬಂಧಪಟ್ಟ ಅಭ್ಯರ್ಥಿಗಳು ಅಥವಾ ಪಕ್ಷವು ಮಾಧ್ಯಮ ಪ್ರಾಮಾಣೀಕರಣ ಸಮಿತಿಯಿಂದ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಪಡೆಯಬೇಕು. ಯಾವುದೇ ಚುನಾವಣೋತ್ತರ ಸಮೀಕ್ಷೆ ಹಾಗೂ ಸಮೀಕ್ಷಾ ಫಲಿತಾಂಶ ಪ್ರಚಾರಪಡಿಸುವಂತಿಲ್ಲ. ಎ. 24ರ ಸಂಜೆ 5ರಿಂದ ಎ. 26ರ ಮಧ್ಯರಾತ್ರಿ 12ರ ವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಹಾಗೂ ಸರಬರಾಜನ್ನು ನಿಷೇಧಿಸಲಾಗಿದೆ ಎಂದರು. ವಾರ್ತಾಧಿಕಾರಿ ಮಂಜುನಾಥ್ ಬಿ., ತಹಶೀಲ್ದಾರ್ ಗುರುರಾಜ್,…
Author: main-admin
ಪುಂಜಾಲಕಟ್ಟೆ: ಚುನಾವಣೆಯ ಸಂದರ್ಭದಲ್ಲಿರೈ ತರು ತಮ್ಮ ಪರವಾನಗಿ ಹೊಂದಿದ ಕೋವಿಗಳನ್ನು ಹತ್ತಿರದ ಪೊಲೀಸ್ ಠಾಣೆಯಲ್ಲಿರಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದ ವಿರುದ್ಧ ಬಂಟ್ವಾಳ ತಾಲೂಕಿನ ರೈತರೋರ್ವರು ಚುನಾವಣಾ ಮತ ಬಹಿಷ್ಕಾರಕ್ಕೆ ಕರೆ ನೀಡಿ ಪ್ಲೆಕ್ಸ್ ಅಳವಡಿಸಿದ್ದಾರೆ. ಕೃಷಿಕರ ಕೋವಿಯನ್ನು ಪ್ರತಿ ಸಲ ಚುನಾವಣಾ ಸಮಯದಲ್ಲಿ ಪೊಲೀಸ್ ಠಾಣೆಯಲ್ಲಿಡುವುದರಿಂದ ಪ್ರಾಣಿಗಳ ಹಾವಳಿಗೆ ತುತ್ತಾಗಿ ಕೃಷಿ ನಷ್ಟಕ್ಕೆ ಒಳಗಾಗುತ್ತಿದೆ. ಹೀಗಾಗಿ ಬಂಟ್ವಾಳ ತಾಲೂಕಿನ ಬಡಗಕಜೆಕಾರು ಮತ್ತು ತೆಂಕಕಜೆಕಾರು ಗ್ರಾಮದ ಎಲ್ಲಾ ಅಪರಾಧ ಇಲ್ಲದ ಕೋವಿ ಬಳಕೆದಾರರು ಚುನಾವಣಾ ಮತ ಬಹಿಷ್ಕರಿಸುವಂತೆ ವಿನಂತಿಸಿ ಬಂಟ್ವಾಳ ತಾ.ಪಂ.ಮಾಜಿ ಅಧ್ಯಕ್ಷರಾದ ಕೆ.ಎ.ಸತೀಶ್ಚಂದ್ರ ಹೊಸಮನೆ ಅವರು ಕೋವಿ ಬಳಕೆದಾರರ ಪರವಾಗಿ ಪ್ಲೆಕ್ಸ್ ಅಳವಡಿಸಿ ಎಚ್ಚರಿಕೆ ನೀಡಿದ್ದಾರೆ.ಬಂಟ್ವಾಳ ತಾಲೂಕಿನಲ್ಲು ಹಲವಾರು ಮಂದಿ ಕೃಷಿಕರು ಪರವಾನಿಗೆಯುಳ್ಳ ಕೋವಿಯನ್ನು ಹೊಂದಿದ್ದು, ಜಿಲ್ಲಾಧಿಕಾರಿಯವರ ಆದೇಶದಂತೆ ಬಂಟ್ವಾಳ ನಗರ ಮತ್ತು ಗ್ರಾಮಾಂತರ, ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರವಾನಿಗೆ ಹೊಂದಿರುವ ರೈತರು ಚುನಾವಣೆಯ ಹಿನ್ನಲೆಯಲ್ಲಿ ಈಗಾಗಲೇ ತಮ್ಮ ಕೋವಿಯನ್ನು ಡೆಪಾಸಿಟ್ ಇರಿಸಿರುವುದು ಇಲ್ಲಿ ಗಮನಾರ್ಹ ಅಂಶವಾಗಿದೆ. ಕೋವಿ ಠೇವಣಾತಿ…
ಕಾಸರಗೋಡು: ಅತೀ ವೇಗದಿಂದಾಗಿ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿ ಹೊಡೆದ ಘಟನೆ ಕಾಸರಗೋಡು ನಗರ ಹೊರವಲಯದ ವಿದ್ಯಾನಗರದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಕಣ್ಣೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಖಾಸಗಿ ಬಸ್ ಮುಂದಿನಿಂದ ಸಾಗುತ್ತಿದ್ದ ಇನ್ನೊಂದು ಬಸ್ಸನ್ನು ಓವರ್ ಟೆಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಮಗುಚಿ ಬಿದ್ದಿದೆ. ಬಸ್ಸಿನಲ್ಲಿ ಬೆರಳಣಿಕೆಯಷ್ಟೇ ಪ್ರಯಾಣಿಕರಿದ್ದ ಕಾರಣ ಭಾರೀ ಅನಾಹುತ ತಪ್ಪಿದೆ. ಇನ್ನು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ನೀಲೇಶ್ವರದ ರೇಶ್ಮಾ, ಪವಿತ್ರ , ಕಲ್ಯೊಟ್ ನ ಕಮಲಾಕ್ಷ, ಪ್ರಭಾಕರ ಮ್ ಪೆರಿಯದ ಗೋಕುಲ್ ರಾಜ್, ಸರಿನಾ, ಮೇಘ, ಕೃಷ್ಣ ಗಾಯಗೊಂಡಿದ್ದು, ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ರಸ್ತೆಯಲ್ಲಿ ಸಂಚಾರ ಕೆಲ ಸಮಯ ಅಸ್ತವ್ಯಸ್ಥ ಗೊಂಡಿತ್ತು. ಬಸ್ಸಿನಲ್ಲಿ ಸಿಲುಕಿದ್ದವರನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು, ನಾಗರಿಕರು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಖಾಸಗಿ ಬಸ್ಸುಗಳ ಅತೀವೇಗಕ್ಕೆ ಕಡಿವಾಣ ಹಾಕೇಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಬಸ್ ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷದ ಚಾಲನೆ ಅಪಘಾತಕ್ಕೆ ಕಾರಣ…
ಮಣಿಪಾಲ: ಸ್ಕೂಟರ್ ಹಾಗೂ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾದ ಘಟನೆ ನಡೆದಿದೆ. ಮಣಿಪಾಲದ ಅಲ್ಕಾ ಹಾಗೂ ಸಹಸವಾರೆ ನಯನಾ ಅವರು ಸ್ಕೂಟರ್‌ನಲ್ಲಿ ಬಿಗ್ ಬಾಸ್ ಹೊಟೇಲ್ ಸಮೀಪ ಇರುವ ಯು ಟರ್ನ್ ತಲುಪುತ್ತಿದ್ದಂತೆ ಮಣಿಪಾಲ ಕಡೆಯಿಂದ ಪರ್ಕಳ ಕಡೆಗೆ ಅತೀ ವೇಗದಿಂದ ಆಗಮಿಸಿದ ಕಾರು ಡಿಕ್ಕಿ ಹೊಡೆದಿದೆ. ಕಾರು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ. ಈ ವೇಳೆ ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸವಾರ ತ್ವನೀರ್ ಕೌರ್‌ಗೂ ಡಿಕ್ಕಿ ಹೊಡೆದಿದ್ದಾನೆ. ಮೂರು ಮಂದಿ ಗಾಯಾಳುಗಳನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಪೆ: ಮಲ್ಪೆ ಬೀಚ್‌ಗೆ ಪ್ರವಾಸಕ್ಕೆಂದು ಬಂದಿದ್ದ ಮಂಡ್ಯ ಮೂಲದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ ಪ್ರಸಾದ್ ಜಿ. ಆರ್. (21) ಎಂದು ಗುರುತಿಸಲಾಗಿದೆ. ಒಟ್ಟು ಐವರು ಸ್ನೇಹಿತರು ರವಿವಾರ ಮಲ್ಪೆ ಬೀಚ್‌ಗೆ ಬಂದಿದ್ದು, ಇವರು ನೀರಿನಲ್ಲಿ ಆಡುತ್ತಿದ್ದಾಗ ನಾಗೇಂದ್ರ ಅವರು ಅಲೆಗಳ ಅಬ್ಬರಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಕೊಂಡು ಹೋದರು. ತತ್‌ಕ್ಷಣ ಧಾವಿಸಿ ಬಂದ ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಕಾರ್ಯಾಚರಣೆ ನಡೆಸಿ ನಾಗೇಂದ್ರನನ್ನು ಮೇಲಕ್ಕೆತ್ತಿ ಮಣಿಪಾಲ ಆಸ್ಪತ್ರೆಗೆ ಸಾಗಿಸಿದರು. ಆದರೆ ತೀವ್ರ ಅಸ್ವಸ್ಥಗೊಂಡಿದ್ದ ಅವರು ದಾರಿ ಮಧ್ಯೆಯೇ ಕೊನೆಯುಸಿರೆಳೆದರು. ಅವರು ಬೆಂಗಳೂರಿನ ವಿಧಾನಸೌಧದಲ್ಲಿ ಲಿಫ್ಟ್ ಅಪರೇಟರ್ ಅಗಿದ್ದರು ಎನ್ನಲಾಗಿದೆ. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು: ಹೆಬ್ಬಾವುವೊಂದರ ದೇಹದಲ್ಲಿ ಬರೋಬ್ಬರಿ 11 ಏರ್ ಬುಲ್ಲೆಟ್ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಅನೇಕ ಕಡೆಗಳಲ್ಲಿ ಹೆಬ್ಬಾವು ಸಂಚಾರವಿದ್ದು, ಮಂಗಳೂರಿನ ಆನೆಗುಂಡಿ ಬಳಿ ಹೆಬ್ಟಾವೊಂದು ಪರ್ಶಿಯನ್ ಬೆಕ್ಕನ್ನು ತಿಂದು ನುಂಗಲಾರದೆ ಸಂಕಷ್ಟಪಡುತ್ತಿರುವುದನ್ನು ಗಮನಿಸಿ ಸ್ಥಳೀಯರು ಉರಗತಜ್ಞರಿಗೆ ಕರೆ ಮಾಡಿದರು. ಆಗ ಹೆಬ್ಬಾವಿನ ದೇಹ ತಪಾಸಣೆಗೆ ಒಳಪಡಿಸಿದಾಗ ದೇಹದಲ್ಲಿ 11 ಬುಲ್ಲೆಟ್ ಪತ್ತೆಯಾಯಿತು. ಹೆಬ್ಬಾವು ಪರ್ಶಿಯನ್ ಕ್ಯಾಟ್ ತಿನ್ನುವಾಗ ಅದರ ಕತ್ತಿನ ಕೆಳ ಭಾಗದಲ್ಲಿ ಬಲೆ ಸಿಲುಕಿ ನುಂಗಲಾರದೆ ಕಷ್ಟಪಡುತ್ತಿತ್ತು. ಉರಗತಜ್ಞ ಭುವನ್ ದೇವಾಡಿಗ ಸ್ಥಳಕ್ಕೆ ಆಗಮಿಸಿ, ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದರು. ಬಳಿಕ ಬಲೆ ತೆರವು ಮಾಡಿ ಹೆಬ್ಬಾವು ರಕ್ಷಿಸಲಾಯಿತು. ಪಶುವೈದ್ಯ ಡಾ| ಯಶಸ್ವಿ ಅವರಲ್ಲಿ ಹೆಬ್ಬಾವಿಗೆ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆಂದು ಎಕ್ಸ್‌ರೇ ಮಾಡಿಸಿದಾಗ ದೇಹದಲ್ಲಿ 11 ಏರ್ ಬುಲ್ಲೆಟ್ ಪತ್ತೆಯಾಯಿತು. ಸುಮಾರು ವರ್ಷಗಳ ಹಿಂದೆಯೇ ಈ ಹೆಬ್ಟಾವಿಗೆ ಏರ್‌ಗನ್‌ನಿಂದ ಶೂಟ್ ಮಾಡಿರಬಹುದು. ಇದೇ ಕಾರಣಕ್ಕೆ ಕೆಲವೊಂದು ಬುಲೆಟ್‌ಗಳ ಮೇಲೆ ಚರ್ಮ ಬೆಳೆದಿತ್ತು. ಎರಡು ಬುಲ್ಲೆಟ್‌ಗಳನ್ನು…
ಕಾರ್ಕಳ : ಮಿಯ್ಯಾರು ಕಂಬಳ ಕ್ರೀಡಾಂಗಣದಲ್ಲಿ ಕೇರಳ ಮೂಲದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ವಿಜೇಶ್ ಯಾನೆ ಮೋಹನ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಏ. 19 ರಾತ್ರಿಯಿಂದ ಏ.20ರ ಬೆಳಗಿನ ಮಧ್ಯಾವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ವಿಜೇಶ್ ಮಾಳದಲ್ಲಿ ವಾಸಿಸುತ್ತಿದ್ದು ಶೇಂದಿ ವ್ಯಾಪಾರ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾರ್ಕಳ ನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ
ಪುತ್ತೂರು : ಮಾಜಿ ಐಪಿಎಸ್ ಅಧಿಕಾರಿ ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಎಪ್ರಿಲ್ 23 ರಂದು ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರವಾಗಿ ರೋಡ್ ಶೋ ನಡೆಯಲಿದೆ ಎಪ್ರಿಲ್ 23 ರಂದು ಬೆಳಿಗ್ಗೆ 8.30ಕ್ಕೆ ಅಣ್ಣಾಮಲೈ ಅವರು ಸುಳ್ಯ ನಗರದಲ್ಲಿ ರೋಡ್ ಶೋ ನಡೆಸುವರು. 10.30ಕ್ಕೆ ಪುತ್ತೂರಿಗೆ ಬರಲಿದ್ದು, ದರ್ಬೆ ವೃತ್ತದಿಂದ ಬಸ್ ನಿಲ್ದಾಣದವರೆಗೆ ರೋಡ್ ಶೋ ನಡೆಸುವರು. ಬಳಿಕ ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆಯ ಕಾರ್ಯಕ್ರಮಕ್ಕೆ ತೆರಳುವರು. ಮಧ್ಯಾಹ್ನ 3 ಗಂಟೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಉಪ್ಪಿನಂಗಡಿಯಲ್ಲಿ ರೋಡ್ ಶೋ ನಡೆಯಲಿದೆ. ಸಂಜೆ 5.30ಕ್ಕೆ ವಿಟ್ಲದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ರೋಡ್ ಶೋ ನಡೆಯಲಿದೆ ಎಂದು ಅವರು ತಿಳಿಸಿದರು.
ಕಾರ್ಕಳ : ರಾತ್ರಿ ವೇಳೆ ಕಾರ್ಕಳ ತಾಲೂಕಿನ ಕೆದಿಂಜೆಯಲ್ಲಿ ವಿದ್ಯುತ್ ಶಾಕ್‌ನಿಂದ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಹಾವೇರಿ ಮೂಲದ ಅನಂತೇಶ್ವರ (29) ಎಂಬವರು ಮೃತಪಟ್ಟ ಘಟನೆ ಸಂಭವಿಸಿದೆ. ರಾತ್ರಿ 9 ಗಂಟೆ ವೇಳೆಗೆ ರಾಡ್ ಕಟ್ಟಿಂಗ್ ಕೆಲಸ ಮಾಡುತ್ತಿರುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ಸ್ಥಳೀಯರು ಅವರನ್ನು ತತ್‌ಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಾಕ್‌ಗೆ ಕಾರಣ ತಿಳಿದು ಬಂದಿಲ್ಲ. ಆದರೆ ಈ ವೇಳೆ ಪರಿಸರದಲ್ಲಿ ಮಳೆಯ ಜತೆ ಗುಡುಗು-ಮಿಂಚು ಕೂಡ ಬರುತ್ತಿತ್ತು ಎನ್ನಲಾಗಿದೆ.
ಉಡುಪಿ : ಕೆಲಸಕ್ಕೆ ಸೇರಲು ಬಂದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಉದ್ಯಾವರ ಗ್ರಾಮದಲ್ಲಿ ನಡೆದಿದೆ. ಉದ್ಯಾವರ ಗ್ರಾಮದ ಪಿತ್ರೋಡಿಯ ಫ್ಯಾಕ್ಟರಿ ಒಂದರ ಕೆಲಸಕ್ಕೆ ಸೇರಲು ಬಂದು ಉದ್ಯಾವರದ ರೂಮಿನಲ್ಲಿ ಉಳಿದುಕೊಂಡಿದ್ದ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕು ಕಾಸರಕೋಡ ಮಲಬಾರ ಕೇರಿ ನಿವಾಸಿ ಪ್ರೇಮಾ (25) ಎಂಬ ಯುವತಿಯು ಏಪ್ರಿಲ್ 15 ರಂದು ರೂಮಿನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಕೊಂಕಣಿ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಕಾಪು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2572333, ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ: 08258-231333, ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂಖ್ಯೆ: 0820-2534777 ಹಾಗೂ ಜಿಲ್ಲಾ ನಿಸ್ತಂತು ಕೊಠಡಿ ದೂ.ಸಂಖ್ಯೆ:0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










