Author: main-admin

ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಗುಲಾಬಿ (55), ಕೃಷ್ಣಪ್ಪ ನಾಯ್ಕ್ (60) ಇಬ್ಬರಿಗೆ ಗಂಭೀರ ಗಾಯ, ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ ಸುಳ್ಳಿಮಲೆಯ ಒಂದೇ ಕುಟುಂಬದ ನಿವಾಸಿಗಳು ಕಾರಿನಲ್ಲಿ ಬರುತ್ದಿದ್ದ ವೇಳೆ ಎದುರಿಗೆ ವೇಗವಾಗಿ ಬಂದ ಬೈಕ್ ಸೈಡ್ ಕೋಡುವ ಸಂದರ್ಭ ಕಾರು ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ದಂಪತಿಯನ್ನ ಸರ್ಕಾರಿ ಆಸ್ಪತ್ರೆಗೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಾಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

Read More

ಬ್ರಹ್ಮಾವರದ ಹೊಸೂರು ಗ್ರಾಮದಲ್ಲಿ ಮೃತರ ಕಾರ್ಯದ ಪೂಜಾ ಕಾರ್ಯದ ವೇಳೆ ಮನೆಗೆ ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಹೊಸೂರು ಗ್ರಾಮದ ರಾಘವೆಂದ್ರ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಅವರ ತಾಯಿ ರಾಧಾ ಬಾಯಿಯವರು ಮೃತಪಟ್ಟ ಬಗ್ಗೆ ಮಾ.6 ರಂದು ಮನೆಯಲ್ಲಿ ನಡೆಯುವ ತಾಯಿಯ ಕಾರ್ಯದ ಪೂಜಾ ಕಾರ್ಯವನ್ನು ನಡೆಸುತ್ತಿದ್ದರು. ಈ ವೇಳೆ ಪೂಜಾ ಕಾರ್ಯವನ್ನು ಸ್ಥಳೀಯ ಅರ್ಚಕ ರಾಮಕೃಷ್ಣ ಅವರಿಗೆ ನೀಡದೇ ಬೇರೆ ಪುರೋಹಿತರಿಂದ ಮಾಡಿಸುತ್ತಿದ್ದ ಕಾರಣ ಮಧ್ಯಾಹ್ನದ ವೇಳೆ ರಾಮಕೃಷ್ಣ ಅವರು ಏಕಾಏಕಿ ಮನೆಯ ಅಂಗಳಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಿ, ಅವಾಚ್ಯ ಶಬ್ಧಗಳಿಂದ ಜಾತಿ ನಿಂದನೆ ಮಾಡಿರುವುದಲ್ಲದೇ, ಇಡಿ ಸಂತಾನ ಸರ್ವನಾಶ ಮಾಡುತ್ತೇನೆ ಎಂದು ಬೆದರಿಕೆ ಹಾಕಿರುತ್ತಾರೆ ಎಂಬುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಳ್ತಂಗಡಿ: ಕಳೆದ ತಾಲೂಕಿನ ಒಂದಲ್ಲ ಒಂದು ಕಾಡಾನೆಗಳ ಹಾವಳಿ ಸಾಮಾನ್ಯವಾಗಿದೆ. ತಾಲ್ಲೂಕಿನ ಚಾರ್ಮಾಡಿಯ ತೋಟ ಒಂದರಲ್ಲಿ ಕಾಣಿಸಿಕೊಂಡಿದ್ದ ಆನೆ ಬಳಿಕ ಮುಂಡಾಜೆ, ಪಟ್ರಮೆ, ಧರ್ಮಸ್ಥಳ, ಕಲ್ಮಂಜ ಮೊದಲಾದ ಗ್ರಾಮಗಳಲ್ಲಿ ಓಡಾಟ ನಡೆಸಿತ್ತು. ಧರ್ಮಸ್ಥಳ ದೊಂಡೋಲೆ ಹಾಗೂ ನೀರಚಿಲುಮೆ ಸಮೀಪ ಕಾಡನೆಯನ್ನು ನೋಡಿದ ಜನರು ಅರಣ್ಯ ಇಲಾಖೆಯ ಸಹಕಾರದೊಂದಿಗೆ ಆನೆಯನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ನಡೆಸಿದ್ದರು. ಅಲ್ಲಿಂದ ಹೋದ ಒಂಟಿಸಲಗ ಆ ಬಳಿಕ ಶುಕ್ರವಾರ ಬೆಳಾಲು, ಬಂದಾರು ಮೊದಲಾದೆಡೆ ಒಂಟಿಸಲಗ ಸುತ್ತಾಡಿ ನಾಳ ಸನಿಹದ ಕಾಡಿನತ್ತ ಹೋಗಿ ಕೊಯ್ಯರು, ಕಲಾಯಿ ಮೊದಲಾದ ಸ್ಥಳಗಳಲ್ಲಿ ಓಡಾಟ ನಡೆಸಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಸರದಲ್ಲಿ ಪರಿಶೀಲನೆ ನಡೆಸಿ ಸ್ಥಳೀಯರಿಗೆ ಮುಂಜಾಗ್ರತೆ ಕೈಗೊಳ್ಳುವಂತೆ ಸೂಚಿಸಿ ಪಟಾಕಿಗಳನ್ನು ನೀಡಿದ್ದು ಆನೆ ಕಂಡು ಬಂದಲ್ಲಿ ತಕ್ಷಣ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ಕಾಡಾನೆ ಮನಬಂದಂತೆ ಜನವಸತಿ ಪ್ರದೇಶಗಳ ನಡುವೆ ಓಡಾಟ ನಡೆಸುತ್ತಿದ್ದು, ಜನರಲ್ಲಿ ಆತಂಕ ಹೆಚ್ಚಲು ಕಾರಣವಾಗಿದೆ.

Read More

ಧರ್ಮಸ್ಥಳ : ಖಾಸಗಿ ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದ ಗ್ರಾಮದ ಮುಳಿಕ್ಯಾರ್ ಸಮೀಪದ ಕಜೋಡಿ ಎಂಬಲ್ಲಿ ನಡೆದಿದೆ. ಕಜೋಡಿ ನಿವಾಸಿ ರಾಮಣ್ಣ ಹಾಗೂ ಗೀತಾ ದಂಪತಿಗಳ ಪುತ್ರ ವಿಘ್ನೇಶ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ . ಮನೆಯ ಕೊಟ್ಟಿಗೆಯಲ್ಲಿ ಈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Read More

ಬೆಳ್ತಂಗಡಿ: ಪೊಲೀಸರ ಮೇಲೆ ಹತ್ತಕ್ಕೂ ಹೆಚ್ಚು ಮಂದಿಯ ತಂಡವೊಂದು ಹಲ್ಲೆ ನಡೆಸಿದ ಘಟನೆ ತೆಂಕ ಕಾರಂದೂರು ಗ್ರಾಮದ ಪೆರಾಲ್ಡಕಟ್ಟೆ ಸಮೀಪ ಸಂಭವಿಸಿದ್ದು ಘಟನೆಯ ಬಗ್ಗೆ ಮೂವರ ವಿರುದ್ಧ ಹಾಗೂ ಇತರ ಅಪರಿಚಿತರ ವಿರುದ್ಧ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಹೇಶ್, ಸುರೇಶ್, ಅರುಣ್ ಹಾಗೂ ಇತರ ಹತ್ತಕ್ಕೂ ಹೆಚ್ಚು ಮಂದಿ ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ವೇಣೂರು ಪೊಲೀಸ್‌ ಠಾಣೆಯ ಎ.ಎಸ್.ಐ ರಾಮಯ್ಯ ಹೆಗ್ಡೆ ಅವರು ಯುವಕರ ತಂಡ ಶಿವರಾತ್ರಿಯಂದು ರಸ್ತೆಯಲ್ಲಿ ದಾಂಧಲೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ್ದು, ತಡ ರಾತ್ರಿ ವೇಳೆ ರಸ್ತೆಯಲ್ಲಿದ್ದ ಯುವಕರನ್ನು ರಸ್ತೆಯಲ್ಲಿ ಗಾಜಿನ ಬಾಟ್ಲಿಗಳನ್ನು ಒಡೆದು ಹಾಕಿರುವ ಬಗ್ಗೆ ಎ.ಎಸ್.ಐ ಅವರು ಪ್ರಶ್ನಿಸಿದ್ದು, ಇದರಿಂದ ಸಿಟ್ಟುಗೊಂಡ ತಂಡ ಅವರ ಮೇಲೆ ದಾಳಿ ನಡೆಸಿ, ಅವರಿಗೆ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ. ಈ ಬಗ್ಗೆ ರಾಮಯ್ಯ ಅವರು ನೀಡಿರುವ ದೂರಿನಂತೆ ವೇಣೂರು ಪೊಲೀಸರು ಪ್ರಕರಣ‌ ದಾಖಲಿಸಿಕೊಂಡಿದ್ದು, ಐವರನ್ನು ವಶಕ್ಕೆ ಪಡೆದು ಕೊಂಡಿರುವುದಾಗಿ ತಿಳಿದು ಬಂದಿದೆ..…

Read More

ಬೆಂಗಳೂರು : ಪತಿಯ ನಿಧನದ ನಂತರ ಸೊಸೆ, ಅತ್ತೆ-ಮಾವನ ವಿರುದ್ಧ ಜೀವನಾಂಶದ ಹಕ್ಕು ಸಾಧಿಸಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್, ಸೊಸೆಗೆ ಜೀವನ ನಿರ್ವಹಣೆಗಾಗಿ ಹಣ ನೀಡುವಂತೆ ಅತ್ತೆ-ಮಾವನಿಗೆ ಆದೇಶಿಸಿದ್ದ ಬಳ್ಳಾರಿಯ ಕೌಟುಂಬಿಕ ನ್ಯಾಯಾಲಯದ ತೀರ್ಪು ರದ್ದುಗೊಳಿಸಿದೆ. ಅಲ್ಲದೆ, ಈ ಕುರಿತಾಗಿ ಸಲ್ಲಿಕೆಯಾದ ಮರುಪರಿಶೀಲನಾ ಅರ್ಜಿಯನ್ನು ಅಂಗೀಕರಿಸಿದೆ. ಪತಿಯ ನಿಧನದ ಬಳಿಕ ಪತ್ನಿ (ಸೊಸೆ) ಹಾಗೂ ಮಕ್ಕಳ ಕುರಿತು ಅತ್ತೆ ಮಾವ ಕಾಳಜಿ ವಹಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಜೀವನ ನಿರ್ವಹಣೆಗಾಗಿ ಅತ್ತೆ-ಮಾವನ ಬಳಿ ಜೀವನಾಂಶ ಕೋರಿದ್ದಾರೆ. ಇದು ಆಕೆ ಜೀವನ ನಡೆಸಲು ಅಗತ್ಯವೂ ಹೌದು. ಕೌಟುಂಬಿಕ ನ್ಯಾಯಾಲಯದ ಆದೇಶದಂತೆ ಜೀವನಾಂಶ ನೀಡುವುದು ಸೂಕ್ತ. ಈ ನಿಟ್ಟಿನಲ್ಲಿ ಮರುಪರಿಶೀಲನಾ ಅರ್ಜಿ ವಜಾಗೊಳಿಸುವಂತೆ ಪ್ರತಿವಾದಿ ಪರ ವಕೀಲರು ಮನವಿ ಮಾಡಿದರು.ಪತಿಯ ನಿಧನದ ಬಳಿಕ ಪತ್ನಿ (ಸೊಸೆ) ಹಾಗೂ ಮಕ್ಕಳ ಕುರಿತು ಅತ್ತೆ ಮಾವ ಕಾಳಜಿ ವಹಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಜೀವನ ನಿರ್ವಹಣೆಗಾಗಿ ಅತ್ತೆ-ಮಾವನ ಬಳಿ ಜೀವನಾಂಶ ಕೋರಿದ್ದಾರೆ. ಇದು ಆಕೆ ಜೀವನ ನಡೆಸಲು ಅಗತ್ಯವೂ ಹೌದು.…

Read More

ಕಡಬ:ಉಪ್ಪಿನಂಗಡಿಯಿಂದ ಕಡಬ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ನಲ್ಲಿ ನಿಗದಿತ ಸ್ಥಳದಲ್ಲಿ ನಿಲ್ಲಿಸದೆ ಯುವತಿಯ ಜೊತೆ ಅನುಚಿತ ವರ್ತನೆ ತೋರಿದ ಅರೋಪದಲ್ಲಿ ಬಸ್ ನಿರ್ವಾಹಕನ್ನು ಕಡಬ ಪೊಲೀಸರು ವಶಕ್ಕೆ ಪಡೆದ ಘಟನೆ ಮಾ.9 ರಂದು ನಡೆದಿದೆ. ಕಡಬ ತಾಲೂಕು ರಾಮಕುಂಜ ಸಮೀಪದ ಕುಂಡಾಜೆ ಎಂಬ ಪ್ರದೇಶದಿಂದ ಯುವತಿ ಬಸ್ ಏರಿದ್ದರು. ಆಲಂಕಾರಿಗೆ ಎಂದು ಯುವತಿ ಹೇಳಿದರೂ ಕಡಬಕ್ಕೆ ಟಿಕೆಟ್ ನೀಡಿ ಯುವತಿ ಹೇಳಿದ ಸ್ಥಳದಲ್ಲಿ ನಿಲ್ಲಿಸದೆ ಕಡಬದತ್ತ ಬಸ್ ಹೊರಟಿತ್ತು ಎನ್ನಲಾಗಿದೆ.ತಾನು ಇಳಿಯುವ ಸ್ಥಳ ಬಂದಾಗ ಮೈ‌ಮುಟ್ಟಿ ಇಲ್ಲಿ ಇಳಿಯಬೇಡಿ ಎಂದು ನಿರ್ವಾಹಕ ಸೂಚಿಸಿದ್ದ ಎಂದು‌ ಆರೋಪಿಸಲಾಗಿದೆ. ಬಸ್ ನಿಲ್ಲಿಸದೆ ಅನುಚಿತ ವರ್ತನೆ ತೋರಿದ ಬಗ್ಗೆ ಯುವತಿ ಪರಿಚಿತರಿಗೆ ಮಾಹಿತಿ ನೀಡಿದ ಹಿನ್ನೆಲೆ ಕಡಬ ಸಮೀಪದ ಕಳಾರ ಮಸೀದಿ ಬಳಿ ಬಸ್ ನ್ನು ಭೀಮ್ ಆರ್ಮಿ ಸಂಘಟನೆಯ ಸದಸ್ಯರು ತಡೆದು ನಿಲ್ಲಿಸಿದ್ದರು. ಬಳಿಕ ಠಾಣೆ ಬಳಿ ನಿಲ್ಲಿಸಲು ಸೂಚಿಸಿದ್ದರು. ಆಲಂಕಾರಿನಲ್ಲಿ‌ ಇಳಿಯುವ ವೇಳೆ ತನ್ನ ಮೈ ಮುಟ್ಟಿ ಇಲ್ಲಿ ಇಳಿಯಬೇಡಿ ಎಂದು…

Read More

ಬಂಟ್ವಾಳ:  ಕಂಟೈನರ್  ಟ್ರಕ್  ಮತ್ತು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಟ್ರಕ್ ಚಾಲಕ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಸ್ಥಳೀಯರು ರಕ್ಷಿಸಿ ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ .  ಖಾಸಗಿ ಬಸ್ ನಲ್ಲಿದ್ದ ಅನೇಕ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಚಾಲಕ ಸಹಿತ ಬಸ್ ನಲ್ಲಿ ಗಾಯಗೊಂಡ ವ್ಯಕ್ತಿಗಳ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.ಬಿಸಿರೋಡಿನಿಂದ ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೇನರ್ ಹಾಗೂ ಮೂಡಬಿದಿರೆಯಿಂದ ಬಂಟ್ವಾಳಕ್ಕೆ ಬರುತ್ತಿದ್ದ ಖಾಸಗಿ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಬಸ್ ನಲ್ಲಿ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳ ಸಹಿತ ಅನೇಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಪಘಾತ ಸಂಭವಿಸಿದ ರಸ್ತೆಯ ಎದುರು ಭಾಗದಲ್ಲಿ ದೊಡ್ಡ ಪ್ರಪಾತವಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದಾರೆ.

Read More

ಮಂಗಳೂರು: ನಗರದ ಕೆಎಸ್ ರಾವ್ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಂನೊಳಗೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯನ್ನು 27 ವರ್ಷದ ಅಭಿಷೇಕ್‌ ಎಂದು ಗುರುತಿಸಲಾಗಿದೆ. ಅಭಿಷೇಕ್‌ ಮೆಡಿಕಲ್‌ ರೆಪ್ರೆಸೆಂಟೇಟಿವ್‌ ಆಗಿ ಕೆಲಸ ಮಾಡಿಕೊಂಡಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮಾ.6ರ ಸಂಜೆ 5.30ರಿಂದ ಮಾ.7 ರ ರಾತ್ರಿ 8ಗಂಟೆಯ ನಡುವೆ ಆತ್ಮಹತ್ಯೆ ಮಾಡಿಕೊಂಡಿರುವ ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ :  ಬೈಕೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕಾಂಚನ ಹುಂಡೈ ಕಾರಿನ ಶೋರೂಮ್ ಎದುರುಗಡೆ ಉಡುಪಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ. ಸ್ವಸ್ತಿಕ್ ಮೃತ ಯುವಕನಾಗಿದ್ದಾನೆ. ಇವರು ಮಾ.7ರಂದು ಮಧ್ಯರಾತ್ರಿ ವೇಳೆ ಬೈಕಿನಲ್ಲಿ ನಿಟ್ಟೂರು ಕಡೆಯಿಂದ ಉಡುಪಿ ಕರಾವಳಿ ಕಡೆಗೆ ಹೋಗುತ್ತಿದ್ದು, ಅತೀವೇಗದಿಂದ ಚಲಾಯಿಸಿದ ಪರಿಣಾಮ ಬೈಕ್, ಶೋರೂಮಿನ ಎದುರುಗಡೆ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ ಕಾರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಸವಾರ ಸ್ವಸ್ತಿಕ್ ಬೈಕ್ ಸಮೇತ ಬಿದ್ದು ಗಂಭೀರವಾಗಿ ಗಾಯಗೊಂಡರು. ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More