ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನ ನಡೆದೇ ಇದೆ. ಹಾಗೆಂದು ನಾವು ಅದಕ್ಕೆ ಸೀಮಿತವಾಗದೇ ನಮ್ಮ ಭಾಷೆ, ಮೂಲ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಸಹಯೋಗದೊಂದಿಗೆ ನಡೆಯುತ್ತಿರುವ ತುಳು ವೆಬಿನಾರ್ನ ನೂರನೇ ಸಂಚಿಕೆಯನ್ನು ಉದ್ಘಾಟಸಿ ಆಶೀರ್ವಚನ ನೀಡಿದ ಅವರು, ಎಲ್ಲಿದ್ದರೂ ಸತ್ಯ, ಧರ್ಮ, ಸಹಬಾಳ್ವೆಯ ದಾರಿಯಲ್ಲಿ ನಡೆಯಲು ಹೇಳಿಕೊಟ್ಟಿರುವ ತುಳು ಭಾಷೆ, ಸಂಸ್ಕೃತಿಯ ಬಗ್ಗೆ ಶ್ರೀ ಧರ್ಮಸ್ಥಳ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನ ಕೆಲಸ ಮಾಡುತ್ತಿದೆ. ತುಳುನಾಡಿನ ಜಾನಪದ ಔಷಧಿಗಳು, ಬೆಳೆಗಳ ಕುರಿತಂತೆ ಇನ್ನಷ್ಟೂ ಅಧ್ಯಯನ ಪೀಠದ ಮೂಲಕ ನಡೆಯಬೇಕಾಗಿದೆ, ಎಂದರು. ತುಳು ಭಾಷೆ ಬೆಳೆದು ಬಂದ ದಾರಿಯ ಕುರಿತು ವಿಶೇಷ ಉಪನ್ಯಾಸ ನೀಡಿದ ತುಳು-ಕನ್ನಡ ವಿದ್ವಾಂಸ, ವಿಶ್ರಾಂತ ಕುಲಪತಿ ಡಾ. ಬಿ ಎ ವಿವೇಕ ರೈ, ತುಳು ತಮಿಳಿನ…
Author: main-admin
ಮದರಸಾದಲ್ಲಿ 11ರ ಹರೆಯದ ಬಾಲಕನಿಗೆ ದೈಹಿಕ ಹಲ್ಲೆ ಮತ್ತು ಕಿರುಕುಳ ನೀಡಿದ ಉಸ್ತಾನ್‌ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಮದರಸದ ಶಿಕ್ಷಕ ಹಲ್ಲೆ ನಡೆಸಿರುವ ಘಟನೆ ನಡೆದಿತ್ತು. ನೊಂದ ಬಾಲಕನ ತಂದೆ ಮೊಹಮ್ಮದ್ ಎಂಬವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಾಲಕನಿಗೆ ಹಲ್ಲೆ ನಡೆದಿರುವ ಘಟನೆ ಶನಿವಾರ ಸಂಜೆ ವೇಳೆ ಸಂಭವಿಸಿದೆ. ದೂರಿನ ಹಿನ್ನೆಲೆಯಲ್ಲಿ ಶಿಕ್ಷಕ ಉಸ್ತದ್ ಯಹ್ಯಾ ಫೈಝಿಯನ್ನು ಬಂಧಿಸಲಾಗಿದೆ.ಹರೇಕಳ ದೇರಿಕಟ್ಟೆ ಮಹಮ್ಮದ್ ಎಂಬವರ ಪುತ್ರ 11 ವರ್ಷದ ಬಾಲಕ ಹಫೀಲ್ ಅಹಮ್ಮದ್ ದೇಹದ ಮೇಲೆ ಬಾಸುಂಡೆ ಬರುವಂತೆ ಶಿಕ್ಷಕ ಹೊಡೆದಿದ್ದ.ಮದರಸಕ್ಕೆ ತೆರಳಿದ್ದ ಬಾಲಕನಿಗೆ ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಶಿಕ್ಷಕ ಉಸ್ತದ್ ಯಹ್ಯಾ ಫೈಝಿ ಎಂಬಾತ ಹಲ್ಲೆ ನಡೆಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಂಗಳೂರು: ವಿಶ್ವಸಾಗರ ದಿನಾಚರಣೆಯ ಅಂಗವಾಗಿ ಇಂದು ‘ಸ್ವಚ್ಛ ಕರಾವಳಿ ಸುರಕ್ಷಿತ ಸಾಗರ’ ಎಂಬ ಅಭಿಯಾನದಡಿ ಪಣಂಬೂರು ಕಡಲ ತೀರವನ್ನು ಸ್ವಚ್ಛಗೊಳಿಸಲಾಯಿತು. ಭಾರತ ಸರಕಾರದ ಭೂವಿಜ್ಞಾನ ಮಂತ್ರಾಲಯ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹಾಗೂ ದ.ಕ.ಜಿಲ್ಲಾಡಳಿತದ ವತಿಯಿಂದ ಕಡಲ ತೀರ ಸ್ವಚ್ಛತಾ ಅಭಿಯಾನ ಮತ್ತು ಸ್ವಚ್ಛ ಅಮೃತ ಮಹೋತ್ಸವ ಕಾರ್ಯಕ್ರಮವು ನಡೆಯಿತು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಕೋಸ್ಟ್ಗಾರ್ಡ್, ಎನ್ಸಿಸಿ, ಎನ್ ಎಸ್ ಎಸ್, ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯರ ಸಹಕಾರದಿಂದ ಕಡಲ ಸ್ವಚ್ಛತೆಯನ್ನು ಮಾಡಲಾಯಿತು. ಈ ಸಂದರ್ಭ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಾಡಿ, ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ದೇಶದಲ್ಲಿ ಸ್ವಚ್ಛತಾ ಆಂದೋಲನ ಆರಂಭವಾಗಿದೆ. ಆದರೆ ಕಡಲ ತೀರದ ಸ್ವಚ್ಛತಾ ಅಭಿಯಾನ ಕಳೆದ ಹತ್ತಾರು ವರ್ಷಗಳಿಂದ ಇದ್ದರೂ, ಅದಕ್ಕೆ ಮಹತ್ವವನ್ನು ಕೊಡುವ ಕಾರ್ಯವನ್ನು ಪ್ರಧಾನಿಯವರು ಮಾಡಿದ್ದಾರೆ. ಇಂದು ಸ್ವಚ್ಛ ಸಾಗರ ಅಭಿಯಾನದಡಿಯಲ್ಲಿ ಕರಾವಳಿ ಪ್ರದೇಶದ ಸಮುದ್ರ ತೀರಗಳನ್ನು ಸ್ವಚ್ಛತೆ ಮಾಡುವ ಕಾರ್ಯವನ್ನು ಬಹಳ ಯಶಸ್ವಿಯಾಗಿ ಮಾಡಲಾಗಿದೆ ಎಂದು…
ವಿಟ್ಲ : ಮೂರು ದಿನಗಳ ಹಿಂದೆ ಕೆಎಸ್ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರಯಾಣಿಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.ಮೃತರನ್ನು ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಎಂದು ಗುರುತಿಸಲಾಗಿದೆ. ಹೀಗಾಗಿ ಇವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ನಿನ್ನೆ ಸಾವನ್ನಪ್ಪಿದ್ದಾರೆ..
ಸೌತೆಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಬಳಸಿಕೊಂಡು ಆರೋಗ್ಯಕರವಾದ, ಹಾಗೇ ರುಚಿಕರವಾದ ಇಡ್ಲಿಯನ್ನು ಮಾಡಬಹುದು. ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು: 1ಕಪ್ – ಇಡ್ಲಿ ಅಕ್ಕಿ, 1 ಕಪ್ – ಸೌತೆಕಾಯಿ ತುರಿ, ½ ಕಪ್ – ತೆಂಗಿನಕಾಯಿ ತುರಿ, ½ ಕಪ್ – ನೀರು, ಉಪ್ಪು – ರುಚಿಗೆ ತಕ್ಕಷ್ಟು. ಮಾಡುವ ವಿಧಾನ: ಅಕ್ಕಿಯನ್ನು ತೊಳೆದು 30 ನಿಮಿಷಗಳ ಕಾಲ ನೆನೆಸಿಡಿ. ನಂತರ ಇದರ ನೀರನ್ನು ಬಸಿದುಕೊಂಡು ತೆಂಗಿನಕಾಯಿ ತುರಿಯೊಂದಿಗೆ ರುಬ್ಬಿಕೊಳ್ಳಿ. ಸ್ವಲ್ಪ ನೀರು ಸೇರಿಸಿ ತರಿ ತರಿಯಾಗಿ ರುಬ್ಬಿದರೆ ಸಾಕು. ನಂತರ ಇದಕ್ಕೆ ತುರಿದ ಸೌತೆಕಾಯಿ ಹಾಗೂ ಉಪ್ಪು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ಇಡ್ಲಿ ತಟ್ಟೆಗೆ ಸ್ವಲ್ಪ ಎಣ್ಣೆ ಸವರಿ ಸ್ವಲ್ಪ ಸ್ವಲ್ಪ ಹಿಟ್ಟನ್ನು ಹಾಕಿ ಹಬೆಯಲ್ಲಿ 20 ನಿಮಿಷಗಳ ಕಾಲ ಬೇಯಿಸಿಕೊಳ್ಳಿ. ತೆಂಗಿನಕಾಯಿ ಚಟ್ನಿಯೊಂದಿಗೆ ಸವಿಯಲು ಚೆನ್ನಾಗಿರುತ್ತದೆ.
ಬಂಟ್ವಾಳ : ಮಂಗಳೂರು ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಾದ ಬಿಸಿ ರೋಡು ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿಯಿಂದ ಉಂಟಾಗಿರುವ ಹೊಂಡದಲ್ಲಿ ಮಳೆಗೆ ನಿಂತಿದ್ದ ನೀರಿನಲ್ಲಿ ಮಾನಸಿಕ ಅಸ್ವಸ್ಥನಂತೆ ಕಾಣುವ ವ್ಯಕ್ತಿಯೊಬ್ಬ ಇಳಿದು ಈಜಾಟ ನಡೆಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಲ್ಲಿ ಬೃಹತ್ ಫ್ಲೈಓವರ್ ನಿರ್ಮಾಣಕ್ಕೆ ಅಗೆಯಲಾದ ಹೊಂಡ ಮತ್ತಷ್ಟು ಅಗಲವಾಗಿದೆ.ಕಲ್ಲಡ್ಕದಲ್ಲಿ ಹೈವೇ ಕಾಮಗಾರಿ ಹೊಂಡದಲ್ಲಿ ಈಜಾಡಿದ ವ್ಯಕ್ತಿಇನ್ನು ಮುಂಜಾಗೃತಾ ಕ್ರಮವಾಗಿ ಗುಂಡಿಯ ಸುತ್ತ ಪ್ಲಾಸ್ಟಿಕ್ ಟೇಪ್ ಅನ್ನು ಕಟ್ಟಲಾಗಿದ್ದು, ಆದರೆ, ಮಾನಸಿಕ ಅಸ್ವಸ್ಥನಂತೆ ಕಾಣುವ ವ್ಯಕ್ತಿಯೊಬ್ಬ ಈ ಹೊಂಡದಲ್ಲಿ ಇಳಿದು ಈಜಾಟ ನಡೆಸಿದ್ದಾನೆ. ಜೊತೆಗೆ ಸ್ನಾನ ಮಾಡುವಂತೆ ಹೊರಳಾಡಿದ್ದಾನೆ. ಈ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲಿನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಉಳ್ಳಾಲ: ಉಳ್ಳಾಲ ತಾಲ್ಲೂಕು ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ದಂಧೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ತಲಪಾಡಿ ನಿವಾಸಿಗಳಾದ ರಿಯಾಝ್(26), ಅಬೂಬಕ್ಕರ್(53), ರಘುನಾಥ(40), ರಾಜೇಶ್(50), ಮುತ್ತಲಿಬ್(40) ಹಾಗೂ ಉತ್ತರ ಪ್ರದೇಶದ ವಲಸೆ ಕಾರ್ಮಿಕರಾದ ಅತುಲ್(22), ರಾಮಧಾರಿ(28), ಪಂಕಜ್(24) ಬಂಧಿತ ಆರೋಪಿಗಳು. ಸೋಮೇಶ್ವರ ಸಮುದ್ರ ತೀರ, ಕೋಟೆಪುರ, ತಲಪಾಡಿ ಇನ್ನಿತರ ಪ್ರದೇಶಗಳಲ್ಲಿ ಮರಳುಗಳವು ಎಗ್ಗಿಲ್ಲದೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಇಂಟರ್ನೆಟ್ ಆಧಾರಿತ ಸಿಸಿಟಿವಿ ಗಳನ್ನು ಅಳವಡಿಕೆ ಮಾಡಲಾಗಿತ್ತು. ಇದಕ್ಕೆ ಬ್ರೇಕ್ ಹಾಕಲು ಅಳವಡಿಸಿರುವ ಸಿಸಿಟಿವಿ ಮತ್ತು ತಂತಿ ತಡೆಬೇಲಿಯನ್ನು ಸೆ.10ರ ನಸುಕಿನ ವೇಳೆ ಧ್ವಂಸಗೈಯ್ಯಲಾಗಿತ್ತು. ಸೋಮೇಶ್ವರ ದೇವಸ್ಥಾನದ ರಥ ಬೀದಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಇದಾಗಿದ್ದು, ಟಿಪ್ಪರ್ ಹಿಮ್ಮುಖವಾಗಿ ಚಲಾಯಿಸಿ ಧ್ವಂಸಗೈಯ್ಯಲಾಗಿದೆ. ಅದಕ್ಕೂ ಮುನ್ನ ಮುಖಕ್ಕೆ ಬಟ್ಟೆ ಕಟ್ಟಿ ಹಾನಿಗೈಯಲು ವಿಫಲ ಯತ್ನ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಲಾಗಿತ್ತು. ಇದೀಗ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಅಕ್ರಮ ಮರುಳು ದಂಧೆ ನಡೆಸುತ್ತಿದ್ದ, ಅಕ್ರಮವಾಗಿ ಮರಳು ಸಾಗಾಟ…
ಉಡುಪಿ: ಸೋಶಿಯಲ್ ಮಿಡಿಯಾಗಳಲ್ಲಿ ಮಕ್ಕಳ ಕಳ್ಳರ ಕುರಿತಂತೆ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಈ ರೀತಿಯ ಸುದ್ದಿ ಹಬ್ಬಿಸುವವರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಉಡುಪಿ ಎಸ್ ಪಿ ಅಕ್ಷಯ್ ಮಚ್ಚಿಂದ್ರ ಎಚ್ಚರಿಕೆ ನೀಡಿದ್ದಾರೆ. ಮಕ್ಕಳ ಕಳ್ಳರು ಇದ್ದಾರೆ ಎಂದು ಬಗ್ಗೆ ಬೇರೆ ದೇಶ, ರಾಜ್ಯಗಳ ವಿಡಿಯೋಗಳನ್ನು ಹರಿಬಿಡಲಾಗುತ್ತಿದ್ದು ಇದರಿಂದ ಆತಂಕಗೊಂಡ ಸಾರ್ವಜನಿಕರು ಅಪರಿಚಿತ ಅಮಾಯಕ ವ್ಯಕ್ತಿಗಳ ಮೇಲೆ ಹಲ್ಲೆ ಮಾಡುತ್ತಿರುವ ಘಟನೆಗಳು ನಡೆಯುತ್ತಿವೆ. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ 112 ಸಹಾಯವಾಣಿಗೆ ಕರೆ ಮಾಡಬೇಕು. ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಯುಎಇಯಿಂದ ಮಂಗಳೂರಿಗೆ ಸರಕು ಸಾಗಿಸುತ್ತಿದ್ದ ಗಬಾನ್ ದೇಶದ ಹಡಗು ರತ್ನಗಿರಿ ಕರಾವಳಿಯ ಪಶ್ಚಿಮಕ್ಕೆ ಸುಮಾರು 41 ಮೈಲ್ ದೂರದಲ್ಲಿ ಅಪಾಯದಲ್ಲಿ ಸಿಲುಕಿದ್ದು ಅದರಲ್ಲಿದ್ದ 19 ಮಂದಿಯನ್ನು ಭಾರತೀಯ ಕೋಸ್ಟ್ ಗಾರ್ಡ್ ರಕ್ಷಿಸಿದೆ. ರಕ್ಷಿಸಲ್ಪಟ್ಟವರಲ್ಲಿ 18 ಮಂದಿ ಭಾರತೀಯರು ಮತ್ತು ಓರ್ವ ಇಥಿಯೋಪಿಯನ್ ಪ್ರಜೆ ಸೇರಿದ್ದಾನೆ. ಯುಎಇಯ ಖೋರ್ ಫಕನ್‌ನಿಂದ 3,911 ಮೆಟ್ರಿಕ್ ಟನ್ ಅಸಾಲ್ಟ್ ಬಿಟುಮಿನ್ ಹೊತ್ತು ಮಂಗಳೂರು ಕಡೆಗೆ ಬರುತ್ತಿದ್ದ ಹಡಗು ಬೆಳಗ್ಗೆ 9.23ರ ವೇಳೆಗೆ ಅಪಾಯಕ್ಕೆ ಸಿಲುಕಿತ್ತು. ಈ ಬಗ್ಗೆ ಕರೆ ಸ್ವೀಕರಿಸಿದ ಮುಂಬೈ ಕೋಸ್ಟ್ ಗಾರ್ಡ್ ಕೂಡಲೇ ಸುಜೀತ್ ಮತ್ತು ಅಪೂರ್ವ ಎಂಬ ಎರಡು ಹಡಗುಗಳು ಹಾಗೂ ಹೆಲಿಕಾಪ್ಟರ್ ಮೂಲಕ ಕಾರ್ಯಾಚರಣೆ ನಡೆಸಿದೆ. ಹಡಗು ಮುಳುಗುವ ಹಂತದಲ್ಲಿದೆ ಎಂದು ಕೋಸ್ಟ್ ಗ್ಗಾರ್ಡ್ ಮೂಲಗಳು ತಿಳಿಸಿವೆ.
ನವದೆಹಲಿ: ವಿಶೇಷ ಸರಕು ಸಾಗಣೆ ವಿಮಾನದಲ್ಲಿ ನಮೀಬಿಯಾದಿಂದ ಎಂಟು ಚಿರತೆಗಳು ಇಂದು ಬೆಳಗ್ಗೆ ಮಧ್ಯಪ್ರದೇಶದ ಗ್ವಾಲಿಯರ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿವೆ. ಈ ಚಿರತೆಗಳನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಹೆಲಿಕಾಪ್ಟರ್ ಮೂಲಕ ಸಾಗಿಸಲಾಗುತ್ತಿದೆ. ಚಿರತೆಗಳೊಂದಿಗೆ ವಿಮಾನವು ಇಂದು ಮುಂಜಾನೆ ಭಾರತೀಯ ವಾಯುಪಡೆ (ಐಎಎಫ್) ನಿರ್ವಹಿಸುವ ಗ್ವಾಲಿಯರ್‌ನ ಮಹಾರಾಜಪುರ ವಾಯುನೆಲೆಗೆ ಆಗಮಿಸಲಿದೆ. ಒಂದು ಗಂಟೆಯ ನಂತರ, ಅವುಗಳನ್ನು IAF ಚಿನೂಕ್ ಹೆವಿ-ಲಿಫ್ಟ್ ಹೆಲಿಕಾಪ್ಟರ್‌ನಲ್ಲಿ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಸಾಗಿಸಲಾಗುತ್ತದೆ. ಚೀತಾ ಸಂರಕ್ಷಣಾ ನಿಧಿಯ (CCF) ಪ್ರಕಾರ, ನಮೀಬಿಯಾದಲ್ಲಿ ಪ್ರಧಾನ ಕಛೇರಿಯನ್ನು ಹೊಂದಿರುವ ಅಂತರರಾಷ್ಟ್ರೀಯ ಲಾಭರಹಿತ ಸಂಸ್ಥೆ ಅತ್ಯಂತ ವೇಗದ ಭೂ ಪ್ರಾಣಿಯನ್ನು ಸಂರಕ್ಷಿಸುವ ಗುರಿಯನ್ನು ಹೊಂದಿದೆ. ಭಾರತಕ್ಕೆ ಬಂದಿರುವ ಐದು ಹೆಣ್ಣು ಚಿರತೆಗಳು ಎರಡರಿಂದ ಐದು ವರ್ಷ ವಯಸ್ಸಿನವರಾಗಿದ್ದಾರೆ. ಗಂಡು ಚಿರತೆಗಳು 4.5 ವರ್ಷ ಮತ್ತು 5.5 ವರ್ಷಗಳ ನಡುವೆಯದ್ದಾಗಿದೆ ಎಂದು ತಿಳಿದುಬಂದಿದೆ. ಭಾರತವು ಹಿಂದೆ ಏಷ್ಯಾಟಿಕ್ ಚಿರತೆಗಳಿಗೆ ನೆಲೆಯಾಗಿತ್ತು. ಆದರೆ 1952 ರ ವೇಳೆಗೆ ಈ ಪ್ರಭೇದವು ದೇಶೀಯವಾಗಿ ಅಳಿವಿನಂಚಿನಲ್ಲಿದೆ ಎಂದು ಘೋಷಿಸಲಾಯಿತು.…