ಪುತ್ತೂರು: ಕಳೆದ ಒಂದು ವಾರಗಳ ಹಿಂದೆ ಮಾಣಿ ಮೈಸೂರು ರಾಷ್ಟಿçÃಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್‌ನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಬೀರ್ಮಕಜೆ ಎಂಬಲ್ಲಿನ ನಿವಾಸಿ ಪ್ರಸಾದ್(27) ಮೃತಪಟ್ಟ ಯುವಕ. ನಗರದ ಬೈಪಾಸ್‌ನಲ್ಲಿರುವ ಗ್ಯಾರೇಜ್‌ನಲ್ಲಿ ಮೆಕಾನಿಕ್ ಆಗಿರುವ ಪ್ರಸಾದ್ ಅವರು ಕಳೆದ ಫೆ. 29ರಂದು ತನ್ನ ಬೈಕ್‌ನಲ್ಲಿ ಬರುತ್ತಿದ್ದ ವೇಳೆಯಲ್ಲಿ ಬೈಕ್ ಸ್ಕಿಡ್ ಆಗಿ ಉರುಳಿ ಬಿದ್ದಿತ್ತು. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Author: main-admin
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಛಾಯಾಗ್ರಾಹಕ ಕೊಂಚಾಡಿ ಸಾಗರ್ ದೇವಾಡಿಗ ಅವರ ಮತ್ತೊಂದು ಛಾಯಾಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಮಂಗಳೂರಿನಲ್ಲಿ ಛಾಯಾಗ್ರಾಹಕರಾಗಿ ಹೆಸರು ಮಾಡಿದ್ದ ಸಾಗರ್ ದೇವಾಡಿಗ ಅವರ ಛಾಯಚಿತ್ರಗಳಿಗೆ ಈ ಹಿಂದೆಯೂ ಹಲವು ಪ್ರಶಸ್ತಿ ಲಭಿಸಿತ್ತು. ಇದೀಗ ಅಂತಾರಾಷ್ಟ್ರೀಯು ಪ್ರಶಸ್ತಿ ಲಭಿಸಿದ್ದು, ಕೊಲ್ಕೊತ್ತಾದಲ್ಲಿ ನಡೆದ ಫಸ್ಟ್ ಲೈಟ್ ಅಂತಾರಾಷ್ಟ್ರೀಯ ಸಲೋನ್ 2024 ನಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಜಿಲ್ಲೆಯಲ್ಲಿ ಪ್ರಸಿದ್ದಿ ಪಡೆದಿರುವ ಕೊಡಿಯಾಲ್ ತೇರು ಉತ್ಸವದ ಅಪೂರ್ವ ಕ್ಷಣಗಳನ್ನು ಸಾಗರ್ ದೇವಾಡಿಗ ತನ್ನ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದರು. ಇದು ಅಂತಾರಾಷ್ಟ್ರೀಯ ಛಾಯಾಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಇದೀಗ ಚಿನ್ನದ ಪದಕ ಲಭಿಸಿದೆ. ಸಣ್ಣ ಪ್ರಾಯದಲ್ಲೇ ಛಾಯಾಗ್ರಹಣದಲ್ಲಿ ಅಮೊಘ ಸಾಧನೆ ಮಾಡಿರುವ ಸಾಗರ್ ದೇವಾಡಿಗ ಅವರ ಈ ಸಾಧನೆಗೆ ಹಲವರು ಅಭಿನಂದನೆ ಸಲ್ಲಿಸಿದ್ದಾರೆ
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣವನ್ನು ಎನ್ ಐ ಎ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದೆ. ಇದುವರೆಗೆ ಪ್ರಮುಖ ಆರೋಪಿ ಪತ್ತೆಯಾಗಿಲ್ಲ. ಆದರೆ ಆತ ಓಡಾಟ ನಡೆಸಿರುವ ಸಿಸಿಟಿವಿ ದೃಶ್ಯಾವಳಿಗಳು ಸೆರೆಯಾಗಿದೆ. ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ. ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಕ್ಕೆ ಕಾರಣವಾದ ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ.ಗಳ ನಗದು ಬಹುಮಾನವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ಘೋಷಿಸಿದೆ. ‘ವಾಂಟೆಡ್’ ಪೋಸ್ಟರ್ನಲ್ಲಿ ಆರೋಪಿಗಳ ರೇಖಾಚಿತ್ರವನ್ನು ಎನ್‌ಐಎ ಬಿಡುಗಡೆ ಮಾಡಿದೆ ಮತ್ತು ಮಾಹಿತಿದಾರರ ಗುರುತನ್ನು ರಹಸ್ಯವಾಗಿಡಲಾಗುವುದು ಎಂದು ಹೇಳಿದೆ.
ಬೆಂಗಳೂರು : ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ನೇ ತರಗತಿಗಳ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ಕುರಿತು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಹೊರಡಿಸಿತ್ತು. ಈ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ನೇತೃತ್ವದ ಏಕಸದಸ್ಯ ಪೀಠ ಪ್ರಸ್ತುತ ತೀರ್ಪು ನೀಡಿದೆ. ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಹೈಕೋರ್ಟ್‌ನ ಈ ಆದೇಶದಿಂದ ಇದೇ ಮಾರ್ಚ್ 9 ರಿಂದ 11 ರವರೆಗೆ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ. ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯ್ದೆಯಡಿ 2023ರ ಅಕ್ಟೋಬರ್ 6 ಮತ್ತು 9 ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ ಬೋರ್ಡ್ ಮಟ್ಟದ ಪರೀಕ್ಷೆ…
ಮಲ್ಪೆ: ಯುವಕನೋರ್ವ ನಾಪತ್ತೆಯಾದ ಘಟನೆ ಮಲ್ಪೆಯಲ್ಲಿ ನಡೆದಿದೆ. ನಾಪತ್ತೆಯಾದ ಯುವಕ ಅಲೋಕ್ ತಂತಿ(24) ಎಂದು ಗುರುತಿಸಲಾಗಿದೆ. ಶಾಂಭವಿ ಬೋಟಿನಲ್ಲಿ ಕಲಾಸಿಯಾಗಿ ಕೆಲಸ ಮಾಡಿಕೊಂಡಿದ್ದ ಯುವಕ ಮಾ.3ರಂದು ಮುಂಜಾನೆ ತನ್ನ ಮೊಬೈಲ್‌ನನ್ನು ರೂಮಿನಲ್ಲಿಯೇ ಬಿಟ್ಟು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ: ಸರಕಾರಿ ಇಲಾಖೆಗೆ ಸೇರಿದ ವಾಹನವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪರಂಗಿಪೇಟೆ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ. ಪುತ್ತೂರು ಅರಣ್ಯ ಇಲಾಖೆಗೆ ಸೇರಿದ ವಾಹನ ಇದಾಗಿದ್ದು, ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಸಂಚಾರ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.ಪುತ್ತೂರು ಅರಣ್ಯ ಇಲಾಖೆಯ ಆರ್.ಎಫ್.ಓ ಸಂಚಾರ ಮಾಡುತ್ತಿದ್ಧ ಬೊಲೆರೋ ವಾಹನ ಪರಂಗಿಪೇಟೆಯ ರಿಕ್ಷಾ ಪಾರ್ಕ್ ನ ಎದುರು ಪಾದಚಾರಿಗೆ ಡಿಕ್ಕಿಹೊಡೆದಿದೆ. ಕೂಡಲೇ ಆತನನ್ನು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿದಾಖಲಿಸಿದ್ರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲಕ್ಷಾಂತರ ರೂ ಹಣದ ಕಟ್ಟು ಇಲಾಖಾ ವಾಹನದಲ್ಲಿ: ಅರಣ್ಯ ಇಲಾಖೆಯ ವಾಹನ ಅಪಘಾತ ಸಂಭವಿಸಿದ ಕೂಡಲೇ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದ. ರಕ್ತಸಿಕ್ತವಾಗಿ ಒದ್ದಾಡುತ್ತಿದ್ದಾತನನ್ನು ಅಲ್ಲೇ ಇದ್ದ ರಿಕ್ಷಾ ಚಾಲಕರಿಬ್ಬರು ಅದೇ ಸರಕಾರಿ ಇಲಾಖೆಯ ವಾಹನದಲ್ಲಿ ಹಾಕಿಕೊಂಡು ಮಂಗಳೂರು…
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಕುಲಪತಿಗಳಾಗಿ ಪ್ರೊ.ಪಿ.ಎಲ್. ಧರ್ಮ ಅವರನ್ನು ನೇಮಕ ಮಾಡಿ ರಾಜ್ಯಪಾಲರೂ, ಮಂಗಳೂರು ವಿಶ್ವವಿದ್ಯಾಲಯ ಕುಲಾಧಿಪತಿಗಳಾಗಿರುವ ಥಾವರ್ ಚಂದ್ ಗೆಹ್ಲೋಟ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಈ ಮೂಲಕ ಪಿ.ಎಲ್.ಧರ್ಮ ಮಂಗಳೂರು ವಿವಿಯ 10ನೇ ಕುಲಪತಿಗಳಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ, ಪ್ರಾಧ್ಯಾಪಕರಾಗಿ ಪ್ರೊ.ಪಿ.ಎಲ್. ಧರ್ಮ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕುಲಸಚಿವ (ಮೌಲ್ಯಮಾಪನ)ರಾಗಿ ಕರ್ತವ್ಯ ನಿರ್ವಹಿಸಿದ್ದರು. ಮುಂದಿನ ನಾಲ್ಕು ವರ್ಷಗಳ ಅವಧಿಯವರೆಗೆ ಅಥವಾ ಪ್ರೊ.ಪಿ.ಎಲ್. ಧರ್ಮ ಅವರಿಗೆ 67ವರ್ಷ ತುಂಬುವವರೆಗೆ, ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಅವರು ಮಂಗಳೂರು ವಿಶ್ವವಿದ್ಯಾಲಯ ಕುಲಪತಿಗಳಾಗಿ ಮುಂದುವರಿಯಲಿದ್ದಾರೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಈ ಹಿಂದಿನ ಕುಲಪತಿಗಳಾಗಿದ್ದ ಪಿ.ಎಸ್.ಯಡಪಡಿತ್ತಾಯರ ಅಧಿಕಾರ ಅವಧಿ 2023ರ ಜೂನ್ 3ರಂದು ಮುಗಿದಿತ್ತು. ಆ ಬಳಿಕ ಮಂಗಳೂರು ವಿಶ್ವವಿದ್ಯಾಲಯದ ಅತ್ಯಂತ ಹಿರಿಯ ಡೀನ್ ಆಗಿದ್ದ ರಾಜ್ಯಶಾಸ್ತ್ರ ವಿಭಾಗದ ಡೀನ್ ಪ್ರೊ.ಜಯರಾಜ್ ಅಮೀನ್ ಅವರನ್ನು ಹಂಗಾಮಿ ಕುಲಪತಿಗಳಾನ್ನಾಗಿ…
ಉಳ್ಳಾಲ ಸಮೀಪ ಒಂದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಥಾರ್ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಮುಂಬದಿ ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು, ಸವಾರ ಡಿವೈಡರ್ ಗೆ ಬಡಿದು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಕೊಲ್ಯ ಬಳಿ ಇಂದು ನಡೆದಿದೆ ಸಾವನ್ನಪ್ಪಿದವರು ಕೊಲ್ಯ ನಿವಾಸಿ ಸಂತೋಷ್ ಬೆಳ್ಚಾಡ (45) ಎಂದು ತಿಳಿದು ಬಂದಿದೆ. ಜೀಪಿನಲ್ಲಿದ್ದ ಯುವಕರು ಗಾಂಜಾ ನಶೆಯಲ್ಲಿದ್ದು, ಅವರ ಅಜಾಗರೂಕತೆಯ ವಾಹನ ಚಾಲನೆ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಸಂತೋಷ್ ಬಾಳೆಹಣ್ಣು ವ್ಯಾಪಾರಿಯಾಗಿದ್ದು, ಕೆಲಸ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ಮಂಗಳೂರು ಕಡೆಯಿಂದ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯಲ್ಲಿದ್ದ ಜೀಪ್ ಎದುರಿನಲ್ಲಿ ಧರ್ಮಸ್ಥಳದಿಂದ ಕಾಞಂಗಾಡ್ ಗೆ ಕುಟುಂಬ ಸಮೇತರಾಗಿ ತೆರಳುತ್ತಿದ್ದ ಬಲೇನೋ ಕಾರಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಆಯತಪ್ಪಿದ ಕಾರು ಎದುರಿನಲ್ಲಿ ಬೈಕಿನಲ್ಲಿ ತೆರಳುತ್ತಿದ್ದ ದ್ವಿಚಕ್ರ ವಾಹನದ ಹಿಂಬದಿಗೆ ಢಿಕ್ಕಿ…
ಬೆಳ್ಳಾರೆ: ಕಡಬ ತಾ| ನಿಂತಿಕಲ್ಲು ಸಮೀಪದ ಎಣ್ಮೂರು ಎಂಬಲ್ಲಿರುವ ಮನೆಯೊಂದರ ಮೇಲೆ ಎನ್ಐಎ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡಿನ ಮನೆಯ ಕೊಠಡಿಯೊಂದರಲ್ಲಿ ಬಾಡಿಗೆಗೆ ವಾಸವಿದ್ದ ಕೇರಳ ಮೂಲದ ವ್ಯಕ್ತಿ ಬಿಜು ಅಬ್ರಹಾಂ ಎಂಬಾತನ ಪತ್ತೆಗಾಗಿ ಎನ್ಐಎ ಅಧಿಕಾರಿಗಳು ಬಂದಿದ್ದಾರೆ ಎಂದು ಹೇಳಲಾಗಿದೆ. ಎಣ್ಮೂರಿನ ಚಿದಾನಂದ ಎಂಬವರ ಮನೆಯಲ್ಲಿ ಬಿಜು ವಾಸಿಸುತ್ತಿದ್ದು ಆತನ ಮೇಲೆ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಹಿನ್ನಲೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಸುಲ್ತಾನ್ ಪಾಳ್ಯ ಎಂಬಲ್ಲಿ ಭಯೋತ್ಪಾದನಾ ಚಟುವಟಿಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದ ಆರೋಪದಲ್ಲಿ ಬಿಜು ವಾಸವಿದ್ದ ಮನೆಯ ಶೋಧವನ್ನು ಎನ್ಐಎ ಅಧಿಕಾರಿಗಳು ನಡೆಸಿದ್ದಾರೆ. ಈ ಪ್ರಕರಣ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಈಗಾಗಲೇ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಉಡುಪಿ: ಅನಾಮಧೇಯ ಆ್ಯಪ್ ಡೌನ್ಲೋಡ್ ಮಾಡಿದ ವ್ಯಕ್ತಿಯೊಬ್ಬರ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆಯಾದ ಘಟನೆ ಮಣಿಪಾಲದಲ್ಲಿ ನಡೆದಿದೆ. ವಂಷಚನೆಗೊಳಗಾದ ಮಣಿಪಾಲ ನಿವಾಸಿ ಉಮಾಕಾಂತ್ ಸಿಂಗ್ ಎಂದು ಗುರುತಿಸಲಾಗಿದೆ. ಮಣಿಪಾಲ ನಿವಾಸಿ ಉಮಾಕಾಂತ್ ಸಿಂಗ್ ಅವರಿಗೆ ಮಾ.4ರಂದು ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ಸಂದೇಶವೊಂದು ಬಂದಿತ್ತು. ಈ ಹಿನ್ನೆಲೆ ಸಂದೇಶ ಬಂದ ಸಂಖ್ಯೆಗೆ ಉಮಾಕಾಂತ್ ಅವರು ಕರೆ ಮಾಡಿದ್ದಾರೆ. ಆ ಬಳಿಕ ಆರೋಪಿಯು ಅದಕ್ಕೆ ಸಂಬಂಧಿಸಿದ ಅರ್ಜಿಯೊಂದನ್ನು ಭರ್ತಿ ಮಾಡಬೇಕಿದೆ. ಅದಕ್ಕಾಗಿ ಆ್ಯಪ್ ಒಂದನ್ನು ಡೌನ್ಲೋಡ್ ಮಾಡುವಂತೆ ಹೇಳಿದ್ದಾನೆ. ಆರೋಪಿಯ ಮಾತಿನಂತೆ ಉಮಾಕಾಂತ್ ಅವರು ಆ್ಯಪ್ ಡೌನ್ಲೋಡ್ ಮಾಡಿದ್ದು, ಅದರಲ್ಲಿ ಅರ್ಜಿ ತುಂಬಿಸುವ ವೇಳೆಗೆ ಅವರ ಖಾತೆಯಿಂದ 1,69,950 ರೂ.ಗಳು ಅಪರಿಚಿತ ವ್ಯಕ್ತಿಯ ಖಾತೆಗೆ ವರ್ಗಾವಣೆಗೊಂಡಿದೆ. ಇನ್ನು ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










