ಬೆಂಗಳೂರು : ಎಲ್ ಇಡಿ (LED) ಬಳಸುವ ವಾಹನ ಸವಾರರಿಗೆ ಸಾರಿಗೆ ಸಚಿವ ಶ್ರೀರಾಮುಲು ಬಿಗ್ ಶಾಕ್ ನೀಡಿದ್ದು, ವಾಹನಗಳಲ್ಲಿ ಎಲ್ ಇಡಿ ದೀಪ ಬಳಸುತ್ತಿರುವ ಸವಾರರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಜೆಪಿಯ ವೈ.ಎಂ. ಸತೀಶ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಾಹನಗಳಲ್ಲಿ ಎಲ್ ಇಡಿ ದೀಪ ಬಳಸುತ್ತಿರುವ ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಕಲಂ 177ರಡಿ ಪ್ರಕರಣ ದಾಖಲಿಸಿ 500 ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ. 2019 ರಲ್ಲಿ 7,414, 2020 ರಲ್ಲಿ 2,312, 2021 ರಲ್ಲಿ 1,492 ಹಾಗೂ 2022 ರಲ್ಲಿ ಆಗಸ್ಟ್ ವರೆಗೆ 703 ಪ್ರಕರಣಗಳು ದಾಖಲಾಗಿವೆ. ರಸ್ತೆ ಸುರಕ್ಷತೆಗಾಗಿ 295 ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ. ಇನ್ನು ಐಷಾರಾಮಿ ವಾಹನಗಳ ನೋಂದಣಿಯಲ್ಲಿನ ಅಕ್ರಮಗಳು ಮತ್ತು ರಾಜ್ಯದ ಬೊಕ್ಕಸಕ್ಕೆ ಕೋಟಿಗಟ್ಟಲೆ ನಷ್ಟವನ್ನುಂಟುಮಾಡುವ ತೆರಿಗೆ ವಂಚನೆಯ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.
Author: main-admin
ಉಡುಪಿ: ಶಾಲೆ ಬಿಟ್ಟು ಸೈಕಲ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ಬಸ್ ಢಿಕ್ಕಿಯಾಗಿ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಕಾಪು ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕಟಪಾಡಿ ಪೋಸಾರು ಜಂಕ್ಷನ್‌ನಲ್ಲಿ ಅಜಾಗ್ರತೆಯಿಂದ ಬಸ್ಸು ಚಲಾಯಿಸಿ ಬಂದು ವಿದ್ಯಾರ್ಥಿಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದೆ. ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೈಂದೂರು: ಇಲ್ಲಿಗೆ ಸಮೀಪದ ಶಿರೂರು ಟೋಲ್ ಗೇಟ್ ಸಮೀಪ ನಿಲ್ಲಿಸಿದ್ದ ಲಾರಿಯ ಚಕ್ರಗಳನ್ನು ಕಳವು ಮಾಡಿರುವ ಬಗ್ಗೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಲಾರಿ ಚಾಲಕ ಪುರುಷೋತ್ತಮ ತಾಂಡೇಲ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಅವರು ಸೆ.14 ರಂದು ತಮ್ಮ ಮನೆಯಿಂದ ಲಾರಿಯಲ್ಲಿ ಮಗ ಸಾಹಿಲ್ ನ ಜೊತೆಯಲ್ಲಿ ಹೊರಟಿದ್ದರು. ರಾತ್ರಿ 9 ಗಂಟೆ ವೇಳೆ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಶಿರೂರು ಟೋಲ್ ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯನ್ನು ನಿಲ್ಲಿಸಿ ಮಗನೊಂದಿಗೆ ಲಾರಿಯಲ್ಲಿ ಮಲಗಿದ್ದರು. ಮರುದಿನ ಸೆ.15 ರಂದು ಬೆಳಿಗ್ಗೆ 4 ಗಂಟೆ ವೇಳೆ, ಎದ್ದು ಹೊರಡಲು ಲಾರಿಯನ್ನು ಸ್ಟಾರ್ಟ್ ಮಾಡಲು ಮುಂದಾದಾಗ ಲಾರಿಯು ಒಂದು ಭಾಗಕ್ಕೆ ವಾಲಿಕೊಂಡಿದ್ದು ಗಮನಕ್ಕೆ ಬಂದಿದೆ. ಕೂಡಲೇ ಲಾರಿಯನ್ನು ಪರಿಶೀಲಿಸಿದಾಗ ಲಾರಿಯ ಹಿಂದಿನ 4 ಚಕ್ರಗಳು ಹಾಗೂ ಹೆಚ್ಚುವರಿಯಾಗಿ ಇಟ್ಟಿದ್ದ ಚಕ್ರವೂ ಕಳವಾಗಿರುವುದು ಕಂಡು ಬಂದಿದೆ. ಕಳವಾದ 5 ಚಕ್ರಗಳ ಮೌಲ್ಯ 1,85,000 ಆಗಿರುತ್ತದೆ ಎಂಬುದಾಗಿ ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ…
ಮುಲ್ಕಿ: ಅನ್ಯ ಕೋಮಿನ ಯುವಕನ ಜೊತೆ ಯುವತಿ ಪತ್ತೆಯಾಗಿದ್ದು, ಸ್ಥಳೀಯ ಯುವಕರು ಕಾರ್ಯಾಚರಣೆ ನಡೆಸಿ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್ ರಾವ್ ನಗರ ಪೊಲೀಸ್ ಕ್ವಾರ್ಟರ್ಸ್ ಬಳಿ ನಡೆದಿದೆ. ಉಡುಪಿಯ ಕಟಪಾಡಿಯಲ್ಲಿ ವಾಸ್ತವ್ಯವಿರುವ ಉತ್ತರ ಪ್ರದೇಶ ಮೂಲದ ಯುವಕ ಫಯಿಮ್ ಎಂಬಾತ ಕಟಪಾಡಿಯಲ್ಲಿ ಸೆಲೂನ್ ಅಂಗಡಿಯಲ್ಲಿ ಕೆಲಸಕ್ಕಿದ್ದು ತನ್ನ ಮಿತ್ರ ಗುಲ್ಫಾಮ್ ಎಂಬವರ ರೂಮ್‌ಗೆ ಬಂದಿದ್ದ. ಆ ಸಂದರ್ಭ ಕೊಲಕಾಡಿ ಮೂಲದ ಯುವತಿ ಜೊತೆ ಮಾತನಾಡುತ್ತಾ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿರುವಾಗ ಸ್ಥಳೀಯರಿಗೆ ಸಂಶಯ ಬಂದು ವಿಚಾರಿಸಿದ್ದು, ಕೂಡಲೇ ಯುವತಿ ಸ್ಥಳದಿಂದ ಪರಾರಿಯಾಗಿದ್ದಾಳೆ. ಈ ಸಂದರ್ಭ ಸ್ಥಳದಲ್ಲಿ ಮಾತಿನ ಚಕಮಕಿ ನಡೆದಿದ್ದು ಸ್ಥಳೀಯರು ಆರೋಪಿಗಳಿಗೆ ಗೂಸಾ ಇಕ್ಕಿದ್ದಾರೆ. ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿ ಇಬ್ಬರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಇನ್ನು ಆರೋಪಿ ಫಯೀಮ್ ಕಡಪಾಡಿಯಲ್ಲಿ ನೆಲೆಸಿದ್ದು ಇಬ್ಬರು ಮಕ್ಕಳ ತಂದೆಯಾಗಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ…
ಮೂಡುಬಿದಿರೆ: ತಾಲೂಕಿನ ಅಶ್ವಥಪುರದ ಬೇರಿಂಜೆ ಗುಡ್ಡ ಎಂಬಲ್ಲಿ ಒಂಟಿ ಮಹಿಳೆ ಕಮಲ ಅವರ ಮನೆಗೆ ಕಳೆದ 15 ದಿನಗಳ ಹಿಂದೆ ನುಗ್ಗಿ ಕುತ್ತಿಗೆ ಹಿಡಿದು ಚಿನ್ನಾಭರಣ ಕಳವು ಮಾಡಿದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಶ್ವತ್ಥಪುರದ ನಿವಾಸಿಗಳಾದ ದಿನೇಶ್ ಪೂಜಾರಿ, ಸುಕೇಶ್ ಪೂಜಾರಿ ಹಾಗೂ ಹರೀಶ್ ಪೂಜಾರಿ ಬಂಧಿತ ಆರೋಪಿಗಳು. ಅಂಗನವಾಡಿ ಸಹಾಯಕಿಯಾಗಿ ದುಡಿಯುತ್ತಿದ್ದ ಕಮಲ ಒಂಟಿಯಾಗಿ ವಾಸವಿದ್ದು. ಇದರ ಮಾಹಿತಿ ಇದ್ದ ಆರೋಪಿಗಳು ಕಳೆದ ತಿಂಗಳು 2 ಜನ ಮಂಕಿಕ್ಯಾಪ್ ಹಾಕಿ ಕೈಗೆ ಹ್ಯಾಂಡ್ ಗೌಸ್ ಹಾಕಿ ಕೈಯಲ್ಲಿ ತಲವಾರು ಹಿಡಿದು ಕೊಂಡು ಬಂದು ಕಮಲರವರ ಕುತ್ತಿಗೆ ಅದುಮಿ ಹಿಡಿದು ಹಲ್ಲೆ ನಡೆಸಿ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ಮತ್ತು ಚಿನ್ನದ 2 ಬಳೆಗಳನ್ನು ಬಲವಂತದಿಂದ ತೆಗೆದು ಸುಲಿಗೆ ಮಾಡಿದ್ದು, ಈ ಬಗ್ಗೆ ಮೂಡಬಿದ್ರೆ ಠಾಣೆಯಲ್ಲಿ ಪ್ರಕಣ ದಾಖಲಾಗಿತ್ತು. ಈ ಪ್ರಕರಣವು ಗಂಭೀರ ಪ್ರಕರಣವಾದ್ದರಿಂದ ಈ ಪ್ರಕರಣದ ಪತ್ತೆಗೆ ಬಗ್ಗೆ ಸಿಸಿಬಿ ಘಟಕದ ವಿಶೇಷ ತಂಡ ರಚನೆ ಮಾಡಿದ್ದು,…
ಬೆಳ್ತಂಗಡಿ:ಬೈಕ್‌ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ಅಳದಂಗಡಿ ಬಳಿ ನಡೆದಿದೆ. ಪ್ರವೀಣ್ ಮೃತ ಯುವಕ. ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಸ್ಥಳೀಯರು ತಡೆದಿದ್ದಾರೆ. ಅಪಘಾತದ ಹಿನ್ನೆಲೆ ಕೆಲಕಾಲ ಸಂಚಾರ ಸಮಸ್ಯೆ ಉಂಟಾಗಿದ್ದು,ಈ ಕುರಿತು ವೇಣೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಉಡುಪಿ : ನಿನ್ನೆ ಉಚ್ಚಿಲ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸಮರ್ಥ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಕಾಪು ಸಮೀಪದ ಆನೆಗುಂದಿ ಸರಸ್ವತಿ ಪೀಠದಲ್ಲಿ ಸಮರ್ಥ ಏಳನೇ ತರಗತಿ ಓದುತ್ತಿದ್ದು, ಇತ್ತೀಚೆಗೆ ಗಣೇಶ ಹಬ್ಬಕ್ಕೆಂದು ಊರಿಗೆ ತೆರಳಿದ್ದಾನೆ. ಮಂಗಳವಾರು ಬೆಳಗಾವಿಯಿಂದ ತಂದೆ ಜೊತೆ ಉಚ್ಚಿಲಕ್ಕೆ ಆಗಮಿಸಿದ ಸಮರ್ಥ, ಸರಕಾರಿ ಬಸ್ ನಿಂದ ಇಳಿದು ರಸ್ತೆ ಬದಿಯಲ್ಲಿ ನಿಂತಿದ್ದ, ಈ ಸಂದರ್ಭ ಅಪರಿಚಿತ ವಾಹನವೊಂದು ತಂದೆ ಮಗನಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸಮರ್ಥ ತಂದೆ ಪ್ರಭಾಕರ್ ಶಂಕರ್ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಅವರ ಮಗ ಸಮರ್ಥ್ ಇಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ. ಈ ಘಟನೆಯಿಂದಾಗಿ ಬೆಳಗಾವಿಯ ಕುಟುಂಬಕ್ಕೆ ಬರಸಿಡಿಲು ಎರಗಿದಂತಾಗಿದೆ.
ಉಡುಪಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ತಂದೆ ಮಗನಿಗೆ ಢಿಕ್ಕಿಯಾಗಿ ತಂದೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಲಾರಿಯನ್ನು ಪತ್ತೆ ಮಾಡಲಾಗಿದೆ. ಕಾಪು ಸರ್ಕಲ್ ಇನ್ಸ್‌ಪೆಕ್ಟರ್ ಪೂವಯ್ಯ ಹಾಗೂ ಪಡುಬಿದ್ರಿ ಎಸ್.ಐ ಪುರುಷೋತ್ತಮ ತಂಡದ ತ್ವರಿತ ಕಾರ್ಯಚರಣೆಯಿಂದ ಮೂಡಬಿದ್ರೆ ಬಳಿ ತಡೆದು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿಯಿಂದ ಬಸ್ಸಿನಲ್ಲಿ ಬಂದು ಬಸ್ಸಿಳಿದು ರಸ್ತೆ ಬದಿಯಲ್ಲಿ ನಿಂತಿದ್ದ ತಂದೆ ಮಗನಿಗೆ ಢಿಕ್ಕಿಯಾದ ಪರಿಣಾಮ ತಂದೆಯ ದೇಹ ಲಾರಿಯಡಿಗೆ ಬಿದ್ದು ಛಿದ್ರಗೊಂಡರೆ, ಮಗ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಲಾರಿ ಮಹಾರಾಷ್ಟ್ರದ ಸೂರತ್‌ನಿಂದಲೂ 120 ಕೀ.ಮೀ.ದೂರದಿಂದ ಪ್ಲಾಸ್ಟಿಕ್ ಸಲಕರಣೆ ಮಾಡುವ ಕಚ್ಚಾವಸ್ತುಗಳನ್ನು ಹೇರಿಕೊಂಡು ಮೂಡಬಿದಿರೆ ಸಮೀಪದ ಗಂಜಿಮಠ ಎಂಬಲ್ಲಿನ ಫ್ಯಾಕ್ಟರಿಗೆ ಕಳೆದ ಮೂರು ದಿನಗಳ ಹಿಂದೆ ಹೊರಟಿತ್ತು. ಬುಧವಾರ ಮುಂಜಾನೆ ಆರರ ಸುಮಾರಿಗೆ ಉಚ್ಚಿಲ ಬಳಿ ಬರುತ್ತಿದ್ದಂತೆ ಚಾಲಕನ ನಿದ್ದೆಯ ಮಂಪರಿನಿಂದಾಗಿ ಲಾರಿ ರಸ್ತೆ ಬಿಟ್ಟು, ರಸ್ತೆ ಪಕ್ಕದಲ್ಲಿ ನಿಂತಿದ್ದ ತಂದೆ ಮಗನಿಗೆ ಢಿಕ್ಕಿಯಾಗಿ ಪರಾರಿಯಾಗಿತ್ತು.
ಮಂಗಳೂರು: ಕ್ರೆಡಿಟ್ ಕಾರ್ಡ್ ಪಾಯಿಂಟ್ ನಗದೀಕರಣ ಮಾಡಿಕೊಡುವುದಾಗಿ ಹೇಳಿ ಒಟಿಪಿ ಪಡೆದು ವಂಚಿಸುವ ಖದೀಮರ ಬಗ್ಗೆ ಸೈಬರ್ ತಜ್ಞರು ಎಚ್ಚರಿಸಿದ್ದಾರೆ. ಮಂಗಳೂರಿನ ವೈದ್ಯರೊಬ್ಬರು ಆಸ್ಪತ್ರೆಯಲ್ಲಿದ್ದಾಗ ಕರೆ ಮಾಡಿದ ಅಪರಿಚಿತ ವ್ಯಕ್ತಿಯೋರ್ವ ನಿಮ್ಮ ಕ್ರೆಡಿಟ್ ಕಾರ್ಡ್ ಪಾಯಿಂಟ್ ಗಳನ್ನು ಬಳಸಿಕೊಳ್ಳಲು ಇಂದು ಕೊನೆಯ ದಿನಾಂಕವಾಗಿದೆ. ಕೂಡಲೇ ಅದನ್ನು ನಗದೀಕರಣ ಮಾಡಿ ಇಲ್ಲವೆ ಗಿಫ್ಟ್ ಪಡೆದುಕೊಳ್ಳಿ ಎಂದು ಹೇಳಿದ್ದಾನೆ. ಇದನ್ನು ನಂಬಿದ ವೈದ್ಯರು ಪಾಯಿಂಟ್ಸ್‌ಗಳನ್ನು ನಗದೀಕರಣ ಮಾಡಿಕೊಡುವಂತೆ ಹೇಳಿದ್ದಾರೆ. ಆಗ ಅಪರಿಚಿತ ವ್ಯಕ್ತಿ ತಾನು ಹಾಗೆಯೇ ಮಾಡುವುದಾಗಿ ಹೇಳಿದ್ದಾನೆ. ಬಳಿಕ ವೈದ್ಯರು ಅವರ ಮೊಬೈಲ್‌ಗೆ ಬಂದ ಒಟಿಪಿಯನ್ನು ಅಪರಿಚಿತ ವ್ಯಕ್ತಿಗೆ ತಿಳಿಸಿದ್ದಾರೆ. ಆ ಬಳಿಕ ವೈದ್ಯರ ಖಾತೆಗೆ ಯಾವುದೇ ಹಣ ಬಂದಿರಲಿಲ್ಲ. ಬದಲಾಗಿ ಹಂತ ಹಂತವಾಗಿ ವೈದ್ಯರ ಖಾತೆಯಿಂದಲೇ ಒಟ್ಟು 60,000 ರೂ. ಯಾವುದೋ ಖಾತೆಗೆ ವರ್ಗಾವಣೆಯಾಗಿದೆ. ವಂಚನೆಗೊಳಗಾದವರಿಗೆ ಕರೆ ಮಾಡುವ ವ್ಯಕ್ತಿಗಳು ಹಣ ವಾಪಸ್ ಕೊಡಿಸುವುದಾಗಿ ಹೇಳಿ ವಂಚಿಸುವ ಪ್ರಕರಣಗಳು ಮತ್ತೆ ವರದಿಯಾಗುತ್ತಿವೆ. ಇಂತಹ ವಂಚಕರನ್ನು ಸೈಬರ್ ವಲ್ಚರ್ಸ್ ಎಂದು ಕರೆಯಲಾಗುತ್ತದೆ. ಈ ಬಗ್ಗೆಯೂ…
ಪುತ್ತೂರು:ತಿಂಗಳಾಡಿಯಲ್ಲಿ ಹಿಂದೂ ಯುವತಿಯ ಜೊತೆ ಅಸಭ್ಯವಾಗಿ ವರ್ತನೆ ಆರೋಪದಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಸರ್ವೆ ಸೊರಕೆ ನಿವಾಸಿ ಬದ್ರುದ್ದೀನ್ ಬಂಧಿತ ಆರೋಪಿ. ಈತ ಸೆ.14 ರಂದು ಸಂಜೆ ಪುತ್ತೂರು ತಾಲೂಕು ಕೆದಂಬಾಡಿ ಗ್ರಾಮದ ತಿಂಗಳಾಡಿ ಎಂಬಲ್ಲಿರುವ ನ್ಯೂ ಸೂಪರ್ ಬಜಾರ್ ಜನರಲ್ ಸ್ಟೋರ್ ಸ್ಟೀಟ್ ಸ್ಟಾಲ್ ಎಂಬ ಅಂಗಡಿಯಲ್ಲಿ ಸ್ವೀಟ್ ಖರೀದಿಸಿ ಅಂಗಡಿಯ ಮಾಲೀಕರಿಗೆ ಹಣವನ್ನು ನೀಡುತ್ತಿರುವಾಗ ಸದ್ರಿ ಅಂಗಡಿಯೊಳಗೆ ಬಂದ ಆರೋಪಿಯು ಏಕಾಏಕಿ ಯುವತಿ ಸೊಂಟದ ಹಿಂಬದಿಗೆ ಕೈ ಹಾಕಿದ್ದು, ಆ ವೇಳೆ ಯುವತಿ ಬೊಬ್ಬೆ ಹಾಕಿ ಬದ್ರುದ್ದೀನ್ ನನ್ನು ತಳ್ಳಲು ಯತ್ನಿಸಿದಾಗ ಆತನು ಅಂಗಡಿಯಿಂದ ಹೊರಗೆ ಓಡಿ ಹೋಗಿರುತ್ತಾನೆ. ಬಳಿಕ ಯುವತಿಯು ಮಾಲಿಕರಲ್ಲಿ ವಿಚಾರಿಸಿದಾಗ ಯುವಕನು ಸೊರಕೆ ನಿವಾಸಿ ಬದ್ರುದ್ದೀನ್ ಎಂಬುದಾಗಿ ತಿಳಿದಿರುತ್ತದೆ. ಆದುದರಿಂದ ಸಾರ್ವಜನಿಕ ಸ್ಥಳದಲ್ಲಿ ಸೊಂಟದ ಹಿಂಬದಿಗೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ ಬದ್ರುದ್ದೀನ್ ಎಂಬವನ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಯುವತಿಯು ದೂರಿನಲ್ಲಿ ಉಲ್ಲೇಖಿಸಿದ್ದಳು. ಇದಲ್ಲದೆ ಹಿಂದೂ ಸಂಘಟನೆಗಳು…