ಮಂಗಳೂರು ಹೊರವಲಯದ ಉಳಾಯಿಬೆಟ್ಟು ದರೋಡೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಿಡಬ್ಲ್ಯುಡಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್‌ರ ಮನೆಯಲ್ಲಿ ನಡೆದ ದರೋಡೆ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಕೇರಳದಲ್ಲಿ ಬಂಧಿಸಿದ್ದಾರೆ. ಇದರೊಂದಿಗೆ ಇದುವರೆಗೆ ಬಂಧಿತರಾದವರ ಸಂಖ್ಯೆ 13ಕ್ಕೇರಿದೆ. ಕೇರಳ ತ್ರಿಶೂರ್ ನಿವಾಸಿಗಳಾದ ಡೆವಿನ್, ಗಾಡ್ವಿನ್, ಅಮಲ್ ಕೃಷ್ಣ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಉಪ್ಪಳ ಬಾಲಕೃಷ್ಣ ಶೆಟ್ಟಿ, ಪೆರುವಾಯಿಯ ರೇಮಂಡ್ ಡಿಸೋಜ, ನೀರುಮಾರ್ಗದ ರಮೇಶ್, ವಸಂತ್ ಕುಮಾರ್, ತಿರುವನಂತಪುರದ ಜಾನ್‌ಬಾಸ್ಕೋ, ತ್ರಿಶೂರ್‌ನ ಶಿಜೋ ದೇವಸಿ, ಸತೀಶ್ ಬಾಬು, ಶಾಕೀರ್ ಹುಸೇನ್, ಸಜೀಶ್ ಎಂ., ವಿನೋಜ್ ಪಿ.ಕೆ. ಹಾಗೂ ಕಾರು ಚಾಲಕ ಬಿಪಿನ್‌ರಾಜ್ ಎಂಬವರನ್ನು ಈ ಹಿಂದೆ ಬಂಧಿಸಲಾಗಿತ್ತು. 13 ಮಂದಿ ಆರೋಪಿಗಳ ಪೈಕಿ ಮೂವರು ದ.ಕ. ಜಿಲ್ಲೆಯವರಾಗಿದ್ದರೆ ಉಳಿದ 10 ಮಂದಿ ಕೇರಳದವರು. ಬಂಧಿತ ಆರೋಪಿಗಳಿಂದ ಚಿನ್ನಾಭರಣ, ನಗದು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಇನ್ನೂ ಮೂವರ ಬಂಧನವಾಗಲು…
Author: main-admin
ಬಂಟ್ವಾಳ: ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ವಿಟ್ಲ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಮನೆಯಂಗಳಕ್ಕೆ ಕುಸಿದ ಘಟನೆ ವಿಟ್ಲದ ಪೊನ್ನೋಟ್ಟು ಎಂಬಲ್ಲಿ ನಡೆದಿದೆ. ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಗಳು ವಾಸ ಇರುವ ವಸತಿಗೃಹದ ಹಿಂಬದಿಯಲ್ಲಿದ್ದ ತಡೆಗೋಡೆ ಮತ್ತು ಗುಡ್ಡ ಒಮ್ಮೆಲೇ ಪಕ್ಕದಲ್ಲಿ ವಾಸ ಇರುವ ಆಯಿಷಾ ಪೊನ್ನೋಟ್ಟು ಅವರ ಮನೆಯ ಮೇಲೆ ಬಿದ್ದಿದೆ. ಇದರಿಂದ ಮನೆಗೆ ಹಾನಿಯಾಗಿದೆ. ಇನ್ನೂ ಮೇಲ್ಭಾಗದ ಮಣ್ಣು ಕುಸಿಯುವ ಸಾಧ್ಯತೆ ಇದೆ.ಪೊಲೀಸ್ ವಸತಿಗೃಹದ ಆವರಣದಲ್ಲಿ ಮುಟ್ಟುಗೋಲು ಹಾಕಲಾದ ವಾಹನಗಳನ್ನು ನಿಲ್ಲಿಸಲಾಗಿದ್ದು, ಅವುಗಳು ಕೂಡಾ ಮನೆ ಮೇಲೆ ಬೀಳುವ ಸಾಧ್ಯತೆಗಳಿವೆ. ಈ ಕುರಿತು ಈ ಹಿಂದೆಯೇ ಪಟ್ಟಣ ಪಂಚಾಯತ್ ಗೆ ಆಯಿಷಾ ಅವರು ಮನವಿ ಸಲ್ಲಿಸಿದ್ದರು. ಆದರೆ ಯಾರೂ ಸ್ಪಂದನೆ ನೀಡಿರುವುದಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಪುತ್ತೂರು : ನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಆಗಿ ಜಾನ್ಸನ್ ಕಿರಣ್ ಡಿಸೋಜ ನೇಮಕಗೊಂಡಿದ್ದಾರೆ. ಮೂಲತಃ ಸಾಗರ ನಿವಾಸಿಯಾಗಿರುವ ಜಾನ್ಸನ್ ಕಿರಣ್ ಡಿಸೋಜ ದ.ಕ.ಜಿಲ್ಲೆಯ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ಮಂಗಳೂರು ಗ್ರಾಮಾಂತರ ಹಾಗೂ ಮಂಗಳೂರು ಕೇಂದ್ರ ಕಚೇರಿಯಲ್ಲಿಯೂ ಕರ್ತವ್ಯ ನಿರ್ವಹಿಸಿರುತ್ತಾರೆ. ಇದೀಗ ಪುತ್ತೂರು ನಗರ ಪೊಲೀಸ್ ಠಾಣೆಗೆ ಇನ್‌ಸ್ಪೆಕ್ಟರ್ ಆಗಿ ವರ್ಗಾವಣೆಗೊಂಡಿದ್ದಾರೆ.
ಮಣಿಪಾಲ: ದನ ಕಳ್ಳತನ ಪ್ರಕರಣದಲ್ಲಿ 21 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಟಪಾಡಿಯ ಸೈಯದ್ ಮುಸ್ತಾಕ್ (45) ಬಂಧಿತ ಅರೋಪಿ. 1993ರ ಜುಲೈ 21ರಂದು ಶಿವಳ್ಳಿಯ ಇಂದ್ರಾಳಿ ದೇವಸ್ಥಾನದ ಹತ್ತಿರ ದೇವೇಂದ್ರ ನಾಯ್ಕ ಅವರ ಗದ್ದೆಯ ಬಳಿ : ಬಿಟ್ಟಿದ್ದ ಎರಡು ದನಗಳನ್ನು ಯಾರೋ ಕಳವು ಮಾಡಿಕೊಂಡು ಹೋದ ಬಗ್ಗೆ ದೇವೇಂದ್ರ ನಾಯ್ಕ ಅವರು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿ, ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.ಅನಂತರ ಆತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಬಗ್ಗೆ ಈಗಿನ ಮಣಿಪಾಲ ಪೊಲೀಸ್ ಠಾಣಾ ನಿರೀಕ್ಷಕ ದೇವರಾಜ ಟಿ.ವಿ. ಅವರ ನೇತೃತ್ವದಲ್ಲಿ ಮಣಿಪಾಲ ಪೊಲೀಸ್ ಠಾಣಾ ಸಿಬಂದಿ ಪ್ರಸನ್ನ ಕಾರ್ಯಾಚರಣೆ ನಡೆಸಿ ಕಟಪಾಡಿಯ ಮಣಿಪುರ ಗುಜ್ಜಿ ಹೌಸ್ ಬಳಿ ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬೆಂಗಳೂರು: ಹತ್ಯೆ ಪ್ರಕರಣದ ಆರೋಪಿ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿದ ಪ್ರಕರಣದ ತನಿಖೆಗೆ 3 ವಿಶೇಷ ತಂಡಗಳನ್ನ ರಚಿಸಲಾಗಿದೆ. ಕಾರಾಗೃಹದ ನಿಯಮಗಳನ್ನ ಉಲ್ಲಘಿಸಿರುವ ಆರೋಪದಡಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ 3 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2 ಪ್ರಕರಣಗಳಲ್ಲಿ ದರ್ಶನ್ ಅವರೇ ಪ್ರಮುಖ ಆರೋಪಿಯಾಗಿದ್ದಾರೆ. ಮೂರೂ ಪ್ರಕರಣಗಳ ತನಿಖೆಗಾಗಿ ಪ್ರತ್ಯೇಕ ತಂಡಗಳನ್ನ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ರಚಿಸಿದ್ದಾರೆ. ಮೊದಲನೇ ಪ್ರಕರಣದ ತನಿಖೆಯನ್ನ ಬೇಗೂರು ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್ ನಡೆಸಲಿದ್ದಾರೆ. ದರ್ಶನ್ ಅವರು ಜೈಲಿನ ಲಾನ್ನಲ್ಲಿ ರೌಡಿಶೀಟರ್ಸ್ ಜೊತೆ ಕುಳಿತು ಕಾಫಿ ಕುಡಿಯುತ್ತ ಸಿಗರೇಟ್ ಸೇದುತ್ತಿದ್ದುದರ ಕುರಿತು ತನಿಖೆ ನಡೆಯಲಿದ್ದು, ಲಾನ್ನಲ್ಲಿ ಎಲ್ಲರೂ ಒಟ್ಟಿಗೆ ಕೂರಲು ಕುರ್ಚಿಗಳ ವ್ಯವಸ್ಥೆ ಮಾಡಿದವರು ಯಾರು? ಕಾಫಿ ಮಗ್ ಕೊಟ್ಟವರು ಯಾರು? ಸಿಗರೇಟ್, ಮದ್ಯ, ಮಾದಕವಸ್ತುಗಳು ಜೈಲಿನಲ್ಲಿ ನಿಷೇಧವಿದ್ದರೂ ಸಿಕ್ಕಿದ್ದು ಹೇಗೆ ಎಂದು ತನಿಖೆ ನಡೆಯಲಿದೆ. ಎರಡನೇ ಪ್ರಕರಣದ ತನಿಖೆಯ ಜವಾಬ್ದಾರಿಯನ್ನ ಹುಳಿಮಾವು ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಕುಮಾರಸ್ವಾಮಿಯವರಿಗೆ…
ಉಡುಪಿ: ಕೆರೆಗೆ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಉಡುಪಿ ಕರಂಬಳ್ಳಿಯಲ್ಲಿ ನಡೆದಿದೆ.ಮೃತನನ್ನು ಇಂದ್ರಾಳಿ ನಿವಾಸಿ ಸಿದ್ದಾರ್ಥ್ ಶೆಟ್ಟಿ (17) ಎಂದು ಗುರುತಿಸಲಾಗಿದೆ. ಈತ ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿ. ಸಿದ್ದಾರ್ಥ್ ನಿನ್ನೆ ಇಬ್ಬರು ಸ್ನೇಹಿತರೊಂದಿಗೆ ಉಡುಪಿಯ ಕರಂಬಳಿ ಕೆರೆಗೆ ಈಜಲು ತೆರಳಿದ್ದನು. ಈ ವೇಳೆ ಈಜಲು ನೀರಿಗಿಳಿದಿದ್ದು, ಈಜಲು ಆಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಇನ್ನಿಬ್ಬರು ಸ್ನೇಹಿತರು ನೀರಿಗೆ ಇಳಿದಿರಲಿಲ್ಲ ಎಂಬ ಮಾಹಿತಿ ಲಭಿಸಿದೆ.
ತುಮಕೂರು : ಶ್ರಾವಣ ಶನಿವಾರ ಪ್ರಯುಕ್ತ ಮುತ್ತುರಾಯಸ್ವಾಮಿ ಜಾತ್ರೆಯಲ್ಲಿ ಮಾಡಿದ್ದ ಆಹಾರ ಸೇವಿಸಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬುಳ್ಳಾಸಂದ್ರ ಗ್ರಾಮದಲ್ಲಿ ನಡೆದಿದೆ. ಜಾತ್ರೆಯಲ್ಲಿ ಮಾಡಿದ್ದ ಆಹಾರ ಸೇವಿಸಿದ ನಂತರ ವಾಂತಿ, ಭೇದಿ ಕಾಣಿಸಿಕೊಂಡು ಮೂವರು ಮಹಿಳೆಯರು ಮೃತಪಟ್ಟಿದ್ದು, 18 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೇವರ ಜಾತ್ರೆಯಲ್ಲಿ ಮಾಡಿದ್ದ ಪ್ರಸಾದ ಸೇವನೆಯಿಂದ ಇವರು ಮೃತಪಟ್ಟಿರುವುದಾಗಿ ಸ್ಥಳೀಯರು ಶಂಕಿಸಿದ್ದಾರೆ. ಬುಳ್ಳಾಸಂದ್ರ ಗ್ರಾಮದ ಮುತ್ತುರಾಯಸ್ವಾಮಿ, ಕರಿಯಮ್ಮ ದೇವಿ, ಭೂತಪ್ಪ ಸ್ವಾಮಿ ದೇವರಿಗೆ ಹರಿಸೇವೆ ಏರ್ಪಡಿಸಿದ್ದು, ಆರತಿ ಬೆಳಗಿದ ಹೆಣ್ಣು ಮಕ್ಕಳು ಪ್ರಸಾದವಾಗಿ ಹೆಸರುಬೇಳೆ ಪಾಯಸ, ಅನ್ನ ಸಾಂಬಾರ್ ಸೇವಿಸಿ ಮನೆಗೆ ಮರಳಿದ್ದಾರೆ. ನಂತರ ಕೆಲವರಿಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ತಿಮ್ಮಕ್ಕ(90), ಹಿರಿಯಮ್ಮ(80), ಕಾಟಮ್ಮ(40) ಮಧುಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಮಂಜಾಗ್ರತೆ ಕ್ರಮ ಕೈಗೊಂಡಿದ್ದಾರೆ. ಗ್ರಾಮದ ಶಾಲೆಯಲ್ಲಿ ತಾತ್ಕಾಲಿಕ ಆಸ್ಪತ್ರೆ ತೆರೆದು ಚಿಕಿತ್ಸೆ ನೀಡಲಾಗಿದೆ.
ಮಂಗಳೂರು: ಬೈಕ್‌ಗೆ ಕೆಎಸ್ಆರ್‌ಟಿಸಿ ಬಸ್ಸು ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಖಾಸಗಿ ಬಸ್ಸೊಂದು ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಸರಗೋಡಿನ ಹೊಸದುರ್ಗ ಠಾಣಾ ವ್ಯಾಪ್ತಿಯ ಪಡನ್ನಕ್ಕಾಡ್‌ನಲ್ಲಿ ನಡೆದಿದೆ. ಬೇಡಡ್ಕ ತೆಕ್ಕೆಕರೆ ನಿವಾಸಿ ಸಾಫ್ಟ್‌ವೇರ್ ಇಂಜಿನಿಯರ್ ಪಿ.ಶ್ರೀನೇಶ್ (39) ಮೃತಪಟ್ಟವರು. ಕಾಞಂಗಾಡ್‌ನಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಶ್ರೀನೇಶ್ ಕಣ್ಣೂರಿನಿಂದ ಬೇಡಡ್ಕಕ್ಕೆ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಪಡನ್ನ ಕ್ಯಾಡ್ ಮೇಲು ಸೇತುವೆಯಲ್ಲಿ ಈ ಅಪಘಾತ ನಡೆದಿದೆ. ಈ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಮುಂಬಯಿಯ ಕಸ್ಟಮ್ಸ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಆನ್‌ಲೈನ್‌ನಲ್ಲಿ ಕೋಟ್ಯಂತರ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಸೆನ್ ಪೊಲೀಸರು ಗುಜರಾತ್ ರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಗುಜರಾತ್ ರಾಜ್ಯದ ಸೂರತ್ ಸಿಟಿ ದಭೋಲಿ ರಸ್ತೆಯ ನಿವಾಸಿ ನವಾದಿಯಾ ಮುಖೇಶ್ ಭಾಯಿ/ಗಣೇಶ್ ಭಾಯಿ (44), ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯ ಆಕಾಶವಾಣಿ ಚೌಕ್ ಯೂನಿವರ್ಸಿಟಿ ರಸ್ತೆಯ ನಿವಾಸಿ ಧರಮ್‌ಜೀತ್ ಕಮಲೇಶ್ ಚೌಹಾನ್ (28) ಬಂಧಿತ ಆರೋಪಿಗಳು. ಆರೋಪಿಗಳಿಂದ 5 ಮೊಬೈಲ್ ಫೋನ್‌ಗಳನ್ನು ಹಾಗೂ 13.95 ಲಕ್ಷ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ವೈದ್ಯರಾಗಿರುವ ಡಾ| ಅರುಣ್ ಕುಮಾರ್ (53) ಅವರಿಗೆ ಜು. 29ರಂದು ಅಪರಿಚಿತ ವ್ಯಕ್ತಿಗಳು ಫೋನ್ ಕರೆ ಮಾಡಿ ಕಸ್ಟಮ್ಸ್‌ನಿಂದ ಕರೆ ಮಾಡುವುದಾಗಿ ತಿಳಿಸಿ, ನಿಮ್ಮ ಆಧಾರ್ ನಂಬರ್ ಬಳಸಿ ಬುಕ್ ಆಗಿರುವ ಕೊರಿಯರ್‌ನಲ್ಲಿ 5 ಪಾಸ್‌ಪೋರ್ಟ್, 5 ಎಟಿಎಂ ಕಾರ್ಡ್, 200 ಗ್ರಾಂ. ಎಂಡಿಎಂಎ ಹಾಗೂ 5000 ಯುಎಸ್…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಿರುವ ಫೋಟೋ ವೈರಲ್ ಆಗಿತ್ತು. ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿರುವ ವಿಡಿಯೋ ತುಣುಕು ಕೂಡ ವೈರಲ್ ಆಗಿತ್ತು. ಇದೀಗ ಇದರ ಬೆನ್ನಲ್ಲೇ ಜೈಲಿನ ಏಳು ಅಧಿಕಾರಿಗಳನ್ನು ಗೃಹಸಚಿವ ಜಿ. ಪರಮೇಶ್ವರ್ ಅವರು ಸಸ್ಪೆಂಡ್ ಮಾಡಿ ಆದೇಶಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಈ ಪ್ರಕರಣದಲ್ಲಿ ಏಳು ಅಧಿಕಾರಿಗಳನ್ನು ನಾವು ಸಸ್ಪೆಂಡ್ ಮಾಡಿದ್ದೇವೆ. ನಾನು ವರದಿಯನ್ನು ಕೇಳಿದ್ದೇವೆ. ಈ ರೀತಿಯ ಘಟನೆ ನಡೆಯಬಾರದು. ಕೆಲವರನ್ನು ಸಸ್ಪೆಂಡ್ ಮಾಡಿದ್ದು, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಮೇಲಧಿಕಾರಿಗಳನ್ನು ಟ್ರಾನ್ಸ್ ಫಾರ್ ಮಾಡ್ತೇನೆ. ಪದೇ ಪದೇ ಈ ರೀತಿ ಆಗಬಾರದು. ಎಲ್ಲಾ ಬಂಧಿಕಾನೆಗಳಲ್ಲಿ ಸಿಸಿಟಿವಿ ಹಾಕುತ್ತಿದ್ದೇವೆ. ಜಾಮರ್ ಹಾಕಲಾಗುತ್ತಿದೆ. ಆದಾಗ್ಯೂ ಈ ರೀತಿಯ ಘಟನೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಮೇಲಧಿಕಾರಿಗಳು ಈ ಪ್ರಕರಣದಲ್ಲಿ ನೇರವಾಗಿ ಭಾಗಿ ಆಗಿದ್ದರೆ ಅವರನ್ನು ತೆಗೆದು ಹಾಕುತ್ತೇವೆ. ವರದಿ ಬಂದ ಬಳಿಕ ಈ…