ಬಳ್ಳಾರಿ: ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ಲಾರಿ ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ದಾರುಣ ಘಟನೆ ಆಂಧ್ರ- ಕರ್ನಾಟಕ ಗಡಿಯ ಜಾಜರಕಲ್ ಟೋಲ್‌ಗೇಟ್ ಬಳಿ ಸಂಭವಿಸಿದೆ.ಬಳ್ಳಾರಿ ಜಿಲ್ಲೆ ಗಡಿಭಾಗ ಆಂಧ್ರದ ಅನಂತಪುರ ಜಿಲ್ಲೆಯ ಡಿ. ಹಿರೇಹಾಳ ಬಳಿ ಈ ಅವಘಡ ಸಂಭವಿಸಿದೆ. ಪಂಕ್ಚರ್ ಆಗಿದ್ದ ಸಿಮೆಂಟ್ ಟ್ಯಾಂಕರ್‌ವೊಂದು ರಸ್ತೆ ಬದಿಯಲ್ಲಿ ನಿಂತಿತ್ತು. ಈ ವೇಳೆ ರಾಂಪುರಂ ಕಡೆಯಿಂದ ಬಂದ ಮತ್ತೊಂದು ಲಾರಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಅಪಘಾತದ ತೀವ್ರತೆಗೆ ಕ್ಷಣಾರ್ಧದಲ್ಲಿ ಬೆಂಕಿ ಹರಡಿ ವಾಹನಗಳೆರಡೂ ಬೆಂಕಿಗೆ ಆಹುತಿಯಾಗಿದೆ. ಈ ವೇಳೆ ಕ್ಯಾಬಿನ್‌ನಲ್ಲಿ ಸಿಲುಕಿಕೊಂಡಿದ್ದ ಚಾಲಕ ಹೊರಬರಲು ಸಾಧ್ಯವಾಗದೆ ಸಜೀವ ದಹನವಾಗಿದ್ದಾರೆ.ಮಾಹಿತಿ ದೊರೆತ ಬೆನ್ನಲ್ಲೇ ಸ್ಥಳಕ್ಕಾಗಮಿಸಿದ ಆಂಧ್ರಪ್ರದೇಶ ಹಾಗೂ ಕರ್ನಾಟಕ ರಾಜ್ಯಗಳ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
Author: main-admin
ಉಡುಪಿ : ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮಂಗಳವಾರ ರಾತ್ರಿ ವಾಹನಕ್ಕೆ ಸೈಡ್ ಕೊಡುವ ಸಣ್ಣ ವಿಚಾರಕ್ಕೆ ಆರಂಭವಾದ ತಕರಾರು, ಹೊರ ರಾಜ್ಯದ ಪ್ರವಾಸಿಗರು ಹಾಗೂ ಸ್ಥಳೀಯ ವ್ಯಕ್ತಿಯ ನಡುವೆ ಮಾರಾಮಾರಿಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಯಿಂದ ದೂರು-ಪ್ರತಿದೂರು ದಾಖಲಾಗಿವೆ.ಆಂಧ್ರಪ್ರದೇಶ ಹಾಗೂ ಹೈದರಾಬಾದ್ ಮೂಲದ ಪ್ರವಾಸಿಗರು ತಮ್ಮ ಕುಟುಂಬದ ಮಹಿಳೆಯರು ಮತ್ತು ಮಕ್ಕಳೊಂದಿಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿದ್ದರು. ಮಂಗಳವಾರ ರಾತ್ರಿ ಪಾರ್ಕಿಂಗ್ ಆವರಣದಲ್ಲಿ ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ಕೊರಂಗ್ರಪಾಡಿ ನಿವಾಸಿ ಸುಪ್ರೀತ್ ಎಂಬ ಕಾರು ಚಾಲಕ ಹಾಗೂ ಪ್ರವಾಸಿಗರ ನಡುವೆ ವಾಗ್ವಾದ ಆರಂಭವಾಗಿದೆ. ಈ ವೇಳೆ ಚಾಲಕ ಸುಪ್ರೀತ್ ಪ್ರವಾಸಿಗರ ಮೇಲೆ ಕಾರು ಹತ್ತಿಸಲು ಯತ್ನಿಸಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದನ್ನು ಪ್ರವಾಸಿಗರು ಆಕ್ಷೇಪಿಸಿದಾಗ ಜಗಳ ವಿಕೋಪಕ್ಕೆ ತಿರುಗಿದ್ದು, ಸುಪ್ರೀತ್ ತನ್ನ ಕಾರಿನಲ್ಲಿದ್ದ ಕೋಲನ್ನು ತೆಗೆದು ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹಲ್ಲೆಯ…
ಉಳ್ಳಾಲ: ಸುಮಾರು 5 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ದಸ್ತಗಿರಿ ಮಾಡಿದ್ದು, ಆತನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.ಕಾಸರಗೋಡು ಜಿಲ್ಲೆಯ ಉಪ್ಪಳದ ಮಂಜೀಲ್ ಪಚ್ಚಿಲಾಂಬರ್ ನಿವಾಸಿ ಫಜಲ್ (31) ದಸ್ತಗಿರಿ ಮಾಡಲಾದ ಆರೋಪಿ.ಉಳ್ಳಾಲ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ- 76/21 ಕಲಂ 8(ಸಿ) 21(ಬಿ) NDPS Act ಪ್ರಕರಣದ ಆರೋಪಿಯಾಗಿರುವ ಫಜಲ್ 2021 ರಲ್ಲಿ ಜಾಮೀನನ ಮೇಲೆ ಹೊರಗಡೆ ಬಂದಿದ್ದ. ನಂತರ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರಿಸಿಕೊಂಡಿದ್ದ.ಈ ಹಿನ್ನೆಲೆ ಪೊಲೀಸರು ಆರೋಪಿಯನ್ನು ಜೂನ್ 9 ರಂದು ಆತನ ಮನೆಯಾದ ಉಪ್ಪಳದಿಂದ ದಸ್ತಗಿರಿ ಮಾಡಿದ್ದಾರೆ. ಬಳಿಕ ಮಾನ್ಯ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಮಂಗಳೂರು: ಸುಮಾರು 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಾರೆಂಟ್ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪೈಜಲ್ ಮಂಗಳೂರು ನಗರದ ಶಾಂತಿನಗರ ನಿವಾಸಿ ರಮ್ಮಿ ಯಾನೆ ರಮಿಜ್ ಬಂಧಿತ ಆರೋಪಿ.ಮಂಗಳೂರು ದಕ್ಷಿಣ, ಮಂಗಳೂರು ಪೂರ್ವ, ಉಳ್ಳಾಲ ಸೇರಿದಂತೆ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ಈ ಕೆಳಕಂಡ 5 ಪ್ರಕರಣಗಳು ದಾಖಲಾಗಿರುತ್ತವೆ.ಆರೋಪಿಯ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣಾಯಲ್ಲಿ ಅ.ಕ್ರ: 136/2017 u/s 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಹೊರಡಿಸಿತ್ತು. ಆದರೆ ಆರೋಪಿಯು ಸುಮಾರು 2 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿರುತ್ತಾನೆ.ಕಂಕನಾಡಿ ನಗರ ಪೊಲೀಸ್ ಠಾಣೆಯ ವಾರೆಂಟ್ ಸಿಬ್ಬಂದಿಯವರಾದ ಹೆಡ್ ಕಾನ್ಸ್‌ಟೇಬಲ್ ಬಾಲರಾಜ್, ಪೊಲೀಸ್ ಕಾನ್ಸ್‌ಟೇಬಲ್ ರವಿಕುಮಾರ್, ಪೊಲೀಸ್ ಕಾನ್ಸ್‌ಟೇಬಲ್ ಯುವರಾಜ್ ರವರು ಜೂ. 8 ರಂದು ಈ ವಾರೆಂಟ್ ಆರೋಪಿಯನ್ನು ಬೆಂಗಳೂರಿನ ಕೋನಪ್ಪನ ಅಗ್ರಹಾರದಲ್ಲಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ…
ಹೆಬ್ರಿ ತಾಲೂಕು ಹೊಸೂರು ಗ್ರಾಮದಲ್ಲಿ ಇಸ್ಪೀಟ್ ಜೂಜಾಟ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಕಾರ್ಕಳ ಉಪವಿಭಾಗದ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ. ವಿಜೇಶ್ ಕುಮಾರ(40), ದಸ್ತಗೀರ್(33), ರೋಹಿತ್(34), ವಿಜಯ (39), ಮಹೇಶ್ (26), ಕಿಶೋರ್ ಕುಮಾರ್ (46) ಹಾಗೂ ಸಂತೋಷ್ ಆಚಾರ್ಯ(35) ಬಂಧಿತರು. ಕಾರ್ಕಳ ವೃತ್ತದ ವೃತ್ತ ನಿರೀಕ್ಷಕರಾದ ಸಂದೀಪ್ ಜಿ.ಎಸ್ ಅವರ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ್ದು, ಚಪ್ಪರ ಹಾಕಿ ಟರ್ಪಾಲ್ ಅಳವಡಿಸಿ, ವಿದ್ಯುತ್ ಬೆಳಕಿನ ವ್ಯವಸ್ಥೆ ಮಾಡಿಕೊಂಡು ಜೂಜಾಟ ನಡೆಯುತ್ತಿದ್ದ ಸ್ಥಳವನ್ನು ಪತ್ತೆಹಚ್ಚಲಾಗಿದೆ. ದಾಳಿಯ ವೇಳೆ ರೂ. 23,970 ನಗದು, 35,000 ರೂ ಮೌಲ್ಯದ 5 ಮೊಬೈಲ್ ಫೋನ್‌ಗಳು, ಇಸ್ಪೀಟ್ ಕಾರ್ಡ್‌ಗಳು, ಟೇಬಲ್, ಕುರ್ಚಿಗಳು, ಬ್ಯಾಟರಿ ಹಾಗೂ ಅದರ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಜೂಜಾಟಕ್ಕೆ ಬಳಸಿದ್ದ 3 ಕಾರುಗಳು, 2 ಮೋಟಾರ್ ಸೈಕಲ್ ಮತ್ತು 1 ಸ್ಕೂಟರ್ ಕೂಡ ಜಪ್ತಿ ಮಾಡಲಾಗಿದೆ. ಒಟ್ಟು ವಶಪಡಿಸಿಕೊಂಡ ಸ್ವತ್ತುಗಳ ಅಂದಾಜು ಮೌಲ್ಯ 13,07,370 ರೂ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ…
ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಇಬ್ಬರು ಅಂತರಾಜ್ಯ ಕಳ್ಳರನ್ನು ಬಂಧಿಸಿ, ₹23.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2026ರ ಏಪ್ರಿಲ್ 5ರಂದು ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ದಾಖಲಾದ ಅಪರಾಧ ಸಂಖ್ಯೆ 38/2026ರ ತನಿಖೆ ವೇಳೆ, ಮೇ 15ರಂದು ಬಂಟ್ವಾಳದ ಕೊಳ್ನಾಡು ಮೂಲದ ಹಾಗೂ ಪ್ರಸ್ತುತ ಕಾಸರಗೋಡಿನಲ್ಲಿ ವಾಸವಿರುವ ಹಮೀದ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು, ಕೃತ್ಯಕ್ಕೆ ಬಳಸಿದ್ದ ಕಾರನ್ನು ಸ್ವಾಧೀನಪಡಿಸಿಕೊಂಡಿದ್ದರು. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆರೋಪಿ ಹಮೀದ್ ನೀಡಿದ ಮಾಹಿತಿಯ ಆಧಾರದ ಮೇಲೆ ಜೂನ್ 7ರಂದು ಮತ್ತೋರ್ವ ಆರೋಪಿ ಜಾಬೀರ್ @ ಜಾಬೀ (38), ಬಂಟ್ವಾಳದ ಕೊಳ್ನಾಡು ನಿವಾಸಿ ಹಾಗೂ ಪ್ರಸ್ತುತ ಕಾಸರಗೋಡಿನಲ್ಲಿ ವಾಸವಿರುವಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ವಿಚಾರಣೆ ವೇಳೆ ಪುಂಜಾಲಕಟ್ಟೆ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 68.690 ಗ್ರಾಂ ಚಿನ್ನಾಭರಣ ಹಾಗೂ ₹2 ಲಕ್ಷ…
ಮಂಗಳೂರು : ನಗರದ ಖ್ಯಾತ ಉದ್ಯಮಿಯೊಬ್ಬರಿಗೆ ಹನಿಟ್ರ್ಯಾಪ್ ನಡೆಸಿ ಕೋಟ್ಯಂತರ ರೂಪಾಯಿ ವಸೂಲಿ ಮಾಡಿದ ಆರೋಪದ ಮೇರೆಗೆ ಇಂಡಿಯನ್ ಯೂಥ್ ಕಾಂಗ್ರೆಸ್ ಗೆ ಸಂಬಂಧ ಹೊಂದಿರುವ ಸ್ಥಳೀಯ ಮುಖಂಡನೊಬ್ಬ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಉದ್ಯಮಿ ನೀಡಿದ ದೂರಿನ ಪ್ರಕಾರ, 2024ರಲ್ಲಿ ಜಿತೇಶ್ ಎಂಬಾತ ಉದ್ಯಮಿಯ ಖಾಸಗಿ ಫೋಟೋ ಹಾಗೂ ವಿಡಿಯೊಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಆರಂಭಿಸಿದ್ದಾನೆ ಎನ್ನಲಾಗಿದೆ. ಪತ್ನಿಗೆ ವಿಡಿಯೊ ತೋರಿಸುವುದಾಗಿ ಬೆದರಿಕೆ ಹಾಕಿ ಮೊದಲು ₹35 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ನಂತರ ಈ ವಿಚಾರವನ್ನು ಯುವ ಕಾಂಗ್ರೆಸ್ ಮುಖಂಡ ನಿಝಾಮ್‌ಗೆ ತಿಳಿಸಿದರೂ, ಆತ ಕೂಡ ಜಿತೇಶ್ ಜೊತೆ ಸೇರಿ ಮತ್ತಷ್ಟು ಹಣಕ್ಕಾಗಿ ಒತ್ತಡ ಹೇರಿದ್ದಾನೆ ಎಂದು ಉದ್ಯಮಿ ಆರೋಪಿಸಿದ್ದಾರೆ. ಜಿತೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುಳ್ಳು ಕಥೆ ಸೃಷ್ಟಿಸಿ, ಡೆತ್ ನೋಟ್‌ನಲ್ಲಿ ಉದ್ಯಮಿಯ ಹೆಸರು ಇದೆ ಎಂದು ಹೇಳಿ ಭಯ ಹುಟ್ಟಿಸಿ ಹಣ ವಸೂಲಿ ಮಾಡಲಾಗಿದೆ ಎನ್ನಲಾಗಿದೆ. ದೂರಿನ ಪ್ರಕಾರ, 2024ರಿಂದ 2026ರವರೆಗೆ ವಿವಿಧ ಹಂತಗಳಲ್ಲಿ…
ಮಂಗಳೂರು: ಸುಮಾರು ಐದು ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳನ್ನು ಬರ್ಕೆ ಪೊಲೀಸ್ ಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತರನ್ನು ನರಿಂಗಾಣ ಗ್ರಾಮದ ತೌಡಗೊಳಿ ಕ್ರಾಸ್ ನಿವಾಸಿ ಅಬ್ದುಲ್ ಖಾದರ್ ತನ್ಸಿಪ್ @ ತಂಜಿ ಹಾಗೂ ಅಡ್ಯಾರ ಕಣ್ಣೂರು ನಿವಾಸಿ ಮೊಹಮ್ಮದ್ ರಾಜೀಕ್ ಎಂದು ಗುರುತಿಸಲಾಗಿದೆ. ಅಬ್ದುಲ್ ಖಾದರ್ ತನ್ಸಿಪ್ ವಿರುದ್ಧ ಬರ್ಕೆ ಪೊಲೀಸ್ ಠಾಣೆಯ ಅ.ಕ್ರ.ನಂ. 18/2021ರಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದ್ದು, ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ವಾರೆಂಟ್ ಜಾರಿಗೊಳಿಸಿತ್ತು. ಈತನ ವಿರುದ್ಧ ಕೊಣಾಜೆ, ಮಂಜೇಶ್ವರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲೂ ಪ್ರಕರಣಗಳು ದಾಖಲಾಗಿವೆ. ಇನ್ನೊಬ್ಬ ಆರೋಪಿತ ಮೊಹಮ್ಮದ್ ರಾಜೀಕ್ ವಿರುದ್ಧ ಬರ್ಕೆ ಪೊಲೀಸ್ ಠಾಣೆಯ ಅ.ಕ್ರ.ನಂ. 17/2021ರಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದ್ದು, ಈತನೂ ಸಹ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.…
ಮಂಗಳೂರು:- ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಗೆ ದಕ್ಷಿಣ ಕನ್ನಡ ಹಾಗೂ ಇತರ ಜಿಲ್ಲೆಗಳಿಂದ ಬಡವರು, ಹೆಚ್ಚಾಗಿ ಕನ್ನಡ ಮಾತನಾಡುವ, ಇತರ ಭಾಷೆಗಳ ಅರಿವಿಲ್ಲದ 90% ರೋಗಿಗಳು ಚಿಕಿತ್ಸೆಗಾಗಿ ಬರುತ್ತಿದ್ದು, ಕೆಲವೊಂದು ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಇಂಟರ್ನ್‍ಗಳು ಕನ್ನಡದಲ್ಲಿ ವ್ಯವಹರಿಸದೇ ಇರುವುದರಿಂದ ರೋಗಿಗಳಿಗೆ ತೊಂದರೆಯಾಗುತ್ತಿರುವುದಾಗಿ ಹಾಗೂ ಕೆಲವೊಂದು ವೈದ್ಯರುಗಳು ಹಾಗೂ ವಿದ್ಯಾರ್ಥಿಗಳು ರೋಗಿಗಳಿಗೆ/ರೋಗಿಗಳ ಸಂಬಂಧಿಕರಿಗೆ ರೋಗಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ವಿಧಾನ ಮತ್ತು ಪ್ರಗತಿಯ ಮಾಹಿತಿಯನ್ನು ತಿಳಿಸದೇ ಇರುವುದರಿಂದಲೂ ಜನಪ್ರತಿನಿಧಿಗಳಿಗೆ ಹಾಗೂ ನೇರವಾಗಿ ಕೆಳಸಹಿದಾರರಿಗೆ ಸಾಕಷ್ಟು ದೂರುಗಳು ಬರುತ್ತಿರುವುದು ಕಂಡು ಬಂದಿರುತ್ತದೆ.ಆದುದರಿಂದ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಬರುವ ರೋಗಿಗಳೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸಬೇಕು. ಹೊರರಾಜ್ಯದಿಂದ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ 3 ತಿಂಗಳ ಒಳಗೆ ಕನ್ನಡವನ್ನು ಕಲಿಯಲೇಬೇಕು. ಅಲ್ಲಿಯವರೆಗೆ ರೋಗಿಗಳೊಂದಿಗೆ ವ್ಯವಹರಿಸಲು ವಿಭಾಗಗಳಲ್ಲಿರುವ ಇತರ ಸಿಬ್ಬಂದಿಗಳ ಸಹಾಯ ಪಡೆಯುವಂತೆ ವೆನ್‍ಲಾಕ್ ಅಧೀಕ್ಷಕ ಸೂಚಿಸಿದ್ದಾರೆ.
ಹೈದರಾಬಾದ್ : ಹೈದರಾಬಾದ್ ನಗರದ ಖಾಸಗಿ ಪಬ್‌ನಲ್ಲಿ ನಡೆಯುತ್ತಿದ್ದ ಸೆಕ್ಸ್ ದಂಧೆಯನ್ನ ಬಯಲಿಗೆಳೆಯಲು ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ರಹಸ್ಯ ಕಾರ್ಯಾಚರಣೆ ನಡೆಸಿದ್ದಾರೆ. ಪಬ್‌ಗೆ ತೆರಳಿ ರಹಸ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಬಳಿಕ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, 9 ಮಂದಿಯನ್ನ ವಶಕ್ಕೆ ಪಡೆದಿದ್ದಾರೆಸೈಬರಾಬಾದ್ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕುಕತ್‌ಪಲ್ಲಿಯ ಜನಪ್ರಿಯ ಪಬ್ ಒಂದರಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆಗಳು ಹಾಗೂ ನಿಯಮಗಳ ಘೋರ ಉಲ್ಲಂಘನೆಯನ್ನು ಯುವ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ತಡರಾತ್ರಿ ನಡೆಸಿದ ಕಾರ್ಯಾಚರಣೆಯ ಮೂಲಕ ಬಯಲಿಗೆಳೆದಿದ್ದಾರೆ. ಕುಕತ್‌ಪಲ್ಲಿ ವಲಯದ ಡಿಸಿಪಿ, 2018ರ ಬ್ಯಾಚ್‌ನ ದಕ್ಷ ಐಪಿಎಸ್ ಅಧಿಕಾರಿ ರಿತಿ ರಾಜ್ ಅವರು ಖುದ್ದು ದಾಳಿಯ ನೇತೃತ್ವ ವಹಿಸಿ ಈ ದಂಧೆಯನ್ನು ಪತ್ತೆಹಚ್ಚಿದ್ದಾರೆ.ಭಾನುವಾರ ಮುಂಜಾನೆ ಕುಕತ್‌ಪಲ್ಲಿಯ ಕೆಪಿಎಚ್‌ಬಿ ವ್ಯಾಪ್ತಿಯಲ್ಲಿ ‘ಕ್ಲಬ್ ಮಾಸ್ತಿ’ ಎಂದೇ ಖ್ಯಾತಿ ಪಡೆದಿರುವ ‘ಕಿಂಗ್ಸ್ ಅಂಡ್ ಕ್ವೀನ್ಸ್’ ಪಬ್ ಮೇಲೆ ಡಿಸಿಪಿ ರಿತಿ ರಾಜ್ ಅವರು ತಮ್ಮ ಸಿಬ್ಬಂದಿಯೊಂದಿಗೆ ಅನಿರೀಕ್ಷಿತ ದಾಳಿ ನಡೆಸಿದರು. ಪಬ್‌ನಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವ…










