ಮಂಗಳೂರು: ನವರಾತ್ರಿ ಆಚರಣೆಯ ಸಲುವಾಗಿ ಅದೇ ಸಂದರ್ಭದಲ್ಲೇ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ರಜೆ ನೀಡಬೇಕೆಂದು ದ.ಕ. ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಸೂಚನೆ ನೀಡಿದ್ದಾರೆ. ಸೆ. 26ರಿಂದ ಅ.10ರವರೆಗೆ ಶಾಲಾ ಮಕ್ಕಳಿಗೆ ರಜೆ ನೀಡಲು ದ.ಕ. ಜಿಲ್ಲಾಧಿಕಾರಿಗೆ ನಿರ್ದೇಶಿಸಲು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸೆ.26ರಿಂದ ನವರಾತ್ರಿ ಹಬ್ಬ ಪ್ರಾರಂಭವಾಗುತ್ತಿದೆ. ಮಂಗಳೂರು ದಸರಾ, ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿರುವ ರಥಬೀದಿ ಶಾರದಾ ಮಹೋತ್ಸವ, ಮಂಗಳಾದೇವಿ ದೇವಸ್ಥಾನ ಸಹಿತ ನಗರದೆಲ್ಲೆಡೆ ಅತ್ಯಂತ ಸಂಭ್ರಮದಲ್ಲಿ ದಸರ ಹಬ್ಬವನ್ನು ಆಚರಿಸಲಾಗುತ್ತದೆ. ಶಾಲಾ ಮಕ್ಕಳ ರಜೆಯನ್ನು ಹಬ್ಬದ ಸಂದರ್ಭದಲ್ಲೇ ನೀಡುವಂತೆ ಮನವಿ ಮಾಡಿದ್ದೆ. ಇದಕ್ಕೆ ಸಚಿವರು ಸ್ಪಂದಿಸಿದ್ದಾರೆ. ಅ.2ರ ಗಾಂಧಿ ಜಯಂತಿಯ ಆಚರಣೆ ಮಾಡುವ ಷರತ್ತಿನೊಂದಿಗೆ ರಜೆ ನೀಡಲು ಸೂಚಿಸಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Author: main-admin
ವಾರಣಾಸಿ: ಜ್ಞಾನ್ವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ರಾಖಿಸಿಂಗ್ ಸೇರಿ ಐವರು ಮಹಿಳೆಯರು ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಕೋರ್ಟ್ ‘ಗ್ರೀನ್ ಸಿಗ್ನಲ್’ ನೀಡಿದೆ. ಈ ನಡುವೆ ಹಿಂದೂಗಳ ಅರ್ಜಿ ವಿಚಾರಣೆಗೆ ಕೋರ್ಟ್ ‘ಗ್ರೀನ್ ಸಿಗ್ನಲ್’ ನೀಡಿದ ಬೆನ್ನಲೇ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವುದಕ್ಕೆ ಮುಸ್ಲಿಂಪರ ಅರ್ಜಿದಾರು ಮುಂದಾಗಿದ್ದಾರೆ ಎನ್ನಲಾಗಿದೆ. ಇ ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ನಗರದ ಜ್ಞಾನವಾಪಿ ಮಸೀದಿಯೊಳಗೆ ಪೂಜಿಸುವ ಹಕ್ಕನ್ನು ಕೋರಿ ಐವರು ಹಿಂದೂ ಮಹಿಳೆಯರು ದಾಖಲಿಸಿರುವ ಪ್ರಕರಣವನ್ನು ಆಲಿಸಬಹುದೇ ಅಥವಾ ಇಲ್ಲವೇ ಎಂಬುದನ್ನು ವಾರಣಾಸಿಯ ಹಿರಿಯ ನ್ಯಾಯಾಧೀಶರ ನ್ಯಾಯಾಲಯವು ಇಂದು ನಿರ್ಧರಿಸಿದ್ದಾರೆ. ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ ಅವರು ಜ್ಞಾನವಾಪಿ ಮಸೀದಿಯ ಒಳಗೆ ಸಮೀಕ್ಷೆಗೆ ಕಾರಣವಾದ ಮಹಿಳೆಯರ ಪ್ರಕರಣವು ವಿಚಾರಣೆ ಮುಂದುವರಿಯುತ್ತದೆಯೇ ಅಥವಾ ಅದು ಯಾವುದೇ ಕಾನೂನು ಸ್ಥಾನಮಾನವನ್ನು ಹೊಂದುವುದಿಲ್ಲವೇ ಎಂಬ ಬಗ್ಗೆ ದೇಶದಲ್ಲಿ ಕೂತುಹಲಕ್ಕೆ ಕಾರಣವಾಗಿತ್ತು. ಈ ನಡುವೆ ಜ್ಞಾನ್ವಾಪಿ ಮಸೀದಿಗೆ…
ಮಲೈ: ಮಲ್ಪೆ ಸಮುದ್ರದಲ್ಲಿ ಈಜಾಡಲು ಹೋಗಿ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಬೀಚ್ ನ ಜೀವ ರಕ್ಷಕ ತಂಡ ರಕ್ಷಿಸಿದ ಘಟನೆ ರವಿವಾರ ಸಂಜೆ ನಡೆದಿದೆ. ಸಕಲೇಶಪುರದ ಅವಿನಾಶ್ (26) ಮತ್ತು ಸಾಗರ್ (27) ಅವರು ಬೀಚ್ ನ ನೀರಿಗಿಳಿದು ಈಜಾಡತೊಡಗಿದ್ದರು. ಕಡಲ ಅಲೆಗಳಿಗೆ ಅವರಿಬ್ಬರು ಕೊಚ್ಚಿಕೊಂಡು ಹೋಗುವವರಿದ್ದರು. ತತ್‌ಕ್ಷಣ ಬೀಚ್‌ನ ಜೀವರಕ್ಷಕರು ಧಾವಿಸಿ ಬಂದು ಮುಳುಗುತ್ತಿದ್ದ ಇಬ್ಬರನ್ನೂ ರಕ್ಷಿಸಿದರು. ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಮುದ್ರ ತೀರದಲ್ಲಿ ನೆಟ್ ಅಳವಡಿಸದಿದ್ದುರಿಂದ ಆ ಭಾಗದಲ್ಲಿ ಅವರು ಜೀವರಕ್ಷಕ ತಂಡದವರ ಎಚ್ಚರಿಕೆಯನ್ನು ಧಿಕ್ಕರಿಸಿ ನೀರಿಗಿಳಿದಿದ್ದರು.
ಬೆಂಗಳೂರು: ಹೌದು ಕೆಎಂಎಫ್ ಪ್ರತಿ ಲೀಟರ್ ಹಾಲಿನ ದರವನ್ನು 3 ಹೆಚ್ಚಿಸಲು ತೀರ್ಮಾನಿಸಿದ್ದು, ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಹಾಲಿನ ದರ ಹೆಚ್ಚಿಸಲು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಿಸಲು ಒಲವು ತೋರಿದ್ದವು. ಆದರೆ, ದರ ಹೆಚ್ಚಿಸಲು ಸರ್ಕಾರ ಅನುಮತಿ ನೀಡಿದ ಬಳಿಕವೇ ಈ ನಿರ್ಧಾರ ಜಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರ ಹೆಚ್ಚಿಸುವಂತೆ ಎಂಟು ತಿಂಗಳಿಂದ ಜಿಲ್ಲಾ ಹಾಲು ಒಕ್ಕೂಟಗಳು ಕೆಎಂಎಫ್ ಮೇಲೆ ಒತ್ತಡ ಹೇರಿದ್ದವು. ಅಧ್ಯಕ್ಷರು ಮನವಿ ಮಾಡಿದ್ದರೂ ಹಾಲಿನ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿರಲಿಲ್ಲ. ರೈತರ ಅನುಕೂಲಕ್ಕೋಸ್ಕರ ಈಗ ದರ ಹೆಚ್ಚಿಸಲು ನಿರ್ಧರಿಸಲಾಗಿದೆ’ ಎಂದು ಆಡಳಿತ ಮಂಡಳಿ ಮೂಲಗಳು ಹೇಳಿವೆ.
ಬೆಳ್ತಂಗಡಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಚಾರ್ಮಾಡಿ ಘಾಟ್ ರಸ್ತೆಯಂಚಿನ ತಡೆಗೋಡೆ ಭಾರೀ ಪ್ರಮಾಣದಲ್ಲಿ ಕುಸಿತಗೊಂಡಿದೆ.ಬಿದ್ರುತಳ ಸಮೀಪ ತಡೆಗೋಡೆಯ ಒಂದು ಭಾಗ ಸಂಪೂರ್ಣ ಕುಸಿತ ಕಂಡಿದೆ. ಈ ತಡೆಗೋಡೆ ಇನ್ನಷ್ಟು ಕುಸಿತಗೊಂಡಲ್ಲಿ ರಸ್ತೆ ಸಂಪರ್ಕವೇ ಕಡಿತಗೊಳ್ಳುವ ಸಾಧ್ಯತೆಯಿದೆ. ರಾಷ್ಟ್ರೀಯ ಹೆದ್ದಾ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.
ಉಳ್ಳಾಲ: ರಾ.ಹೆ 66ರ ತೊಕ್ಕೊಟ್ಟು ಕಲ್ಲಾಪುವಿನಲ್ಲಿ ರವಿವಾರ ತಡರಾತ್ರಿ ಐದು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿ ಹಲವರು ಗಾಯಗೊಂಡಿದ್ದಾರೆ. ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಇನ್ನೋವಾ ಕಾರು ವಾಹನವೊಂದನ್ನು ಓವರ್‌ಟೇಕ್ ಮಾಡಲು ಏಕಾಏಕಿ ಎಡಭಾಗಕ್ಕೆ ತಿರುಗಿಸಿದ ಪರಿಣಾಮ ಹಿಂಬದಿಯಲ್ಲಿದ್ದ ಐ20 ಕಾರು ಹಠಾತ್ತನೆ ಬ್ರೇಕ್ ಹಾಕಿದ್ದರಿಂದ ಕಾರು ಒಂದು ಸುತ್ತು ತಿರುಗಿ ಅದೇ ರಸ್ತೆಯಲ್ಲಿ ಬರುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆದು ಮಹಿಳೆಯರು, ಮಕ್ಕಳು ಸಹಿತ ಕುಟುಂಬವಿದ್ದ ಐ10 ಕಾರಿಗೆ ಢಿಕ್ಕಿ ಹೊಡೆದಿದೆ. ಅನಂತರ ರಸ್ತೆ ಬದಿಯಲ್ಲಿ ನಿಂತಿದ್ದ ಸ್ವಿಫ್ಟ್ ಕಾರಿಗೂ ಢಿಕ್ಕಿ ಹೊಡೆದಿದ್ದು ಈ ಸರಣಿ ಅಪಘಾತದಲ್ಲಿ ಸ್ಕೂಟರ್ ಸವಾರ ಕಾಸರಗೋಡು ನಿವಾಸಿ ತರುಣ್ ಗಾಯಗೊಂಡಿದ್ದಾರೆ. ಅಪಘಾತ ನಡೆಸಿದ ಐ20 ಕಾರಿನಲ್ಲಿದ್ದ ಅಲೋಶಿಯಸ್ ಕಾಲೇಜು ವಿದ್ಯಾರ್ಥಿ ಅಮೃತ್ ಕೂಡ ಗಾಯಗೊಂಡಿದ್ದಾರೆ. ಇನ್ನೊಂದು ಕಾರಿನಲ್ಲಿದ್ದ ಮಹಿಳೆಯರು ಮತ್ತು ಮಕ್ಕಳಿಗೂ ಗಾಯಗಳಾಗಿವೆ. ಘಟನ ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಗಾಯಾಳುಗಳ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸರಣಿ ಅಪಘಾತಕ್ಕೆ ಕಾರಣವಾದ…
ಚಿಕ್ಕಮಗಳೂರು: ಜಿಲ್ಲೆಯ ಚಾರ್ಮಾಡಿ ಘಾಟ್ ನಲ್ಲಿ ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ಧರಿಂದಾಗಿ, ರಸ್ತೆಯಲ್ಲಿ ಮತ್ತೊಂದು ವಾಹನ ಸಂಚರಿಸೋದಕ್ಕೆ ಅವಕಾಶ ಇಲ್ಲದಂತೆ ಆಗಿ, ಕಿಲೋಮೀಟರ್ ದೂರದವರೆಗೆ ಇಂದು ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಇಂದು ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿದೆ. ಇದರಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಸಂಚಾರದಲ್ಲಿ ಅವ್ಯವಸ್ಥೆ ಉಂಟಾಗಿದೆ. ಅಪಘಾತದಿಂದಾಗಿ ರಸ್ತೆ ಸಂಚಾರ ಬಂದ್ ಆದ ಕಾರಣ, ಚಾರ್ಮಾಡಿ ಘಾಟ್ ನಲ್ಲಿ ಕಿಲೋಮೀಟರ್ ಗಟ್ಟಲೇ ವಾಹನಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕುವಂತೆ ಆಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಸಂಚಾರ ಸರಿ ಪಡಿಸೋ ಕಾರ್ಯದಲ್ಲಿ ತೊಡಗಿದ್ದಾರೆ.
ಕುಂದಾಪುರ: ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿದ ಕೇರಳದ ತಿರುವನಂತಪುರದ ಯಾತ್ರಾರ್ಥಿ ಮಹಿಳೆಯೊಬ್ಬರು ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋದ ಘಟನೆ ಶನಿವಾರ ಸಂಜೆ ಸಂಭವಿಸಿದೆ. ತಿರುವನಂತಪುರದಿಂದ 14 ಮಂದಿಯ ತಂಡ ಕೊಲ್ಲೂರು ಕ್ಷೇತ್ರಕ್ಕೆ ಆಗಮಿಸಿದ್ದು ಎಲ್ಲರೂ ತೀರ್ಥ ಸ್ನಾನಕ್ಕೆಂದು ನದಿಗೆ ಇಳಿದಿದ್ದರು. ಈ ಸಂದರ್ಭ ಮುರುಗನ್ ಅವರ ಪತ್ನಿ ಶಾಂತಿ ಶೇಖರನ್ (42) ಅವರು ನೀರುಪಾಲಾದರು. ಮುರುಗನ್ ಮತ್ತು ಪುತ್ರ ಆದಿತ್ಯ ನದಿಯ ಸೆಳೆತಕ್ಕೆ ಒಳಗಾದರೂ ಈಜಿ ದಡ ಸೇರಿದರು. ಮಹಿಳೆಗಾಗಿ ಅಗ್ನಿ ಶಾಮಕ ದಳ, ಕೊಲ್ಲೂರು ಪೊಲೀಸರು ಹಾಗು ಗ್ರಾಮಸ್ಥರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಪುತ್ತೂರು: ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಗಳಲ್ಲಿ ಒಬ್ಬನಾಗಿರುವ ಶಫೀಕ್ ಬೆಳ್ಳಾರೆಯ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸಫ್ರಿದ್ ಎಂದು ಗುರುತಿಸಲಾಗಿದೆ. ಪ್ರಶಾಂತ್ ರೈ ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಿಂದೂ ಕಾರ್ಯಕರ್ತ ಜೀವ ಬೆದರಿಕೆ ಹಾಕಿದ್ದು, ಈ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಳ್ಳಾರೆಯ ಪೊಲೀಸ್ ಠಾಣೆಯ ಎದುರು ಕ್ರಮಕ್ಕೆ ಆಗ್ರಹಿಸಿ ಹಿಂದೂ ಪರ ಕಾರ್ಯಕರ್ತರು ನೆರೆದಿದ್ದರು. ಇನ್ನು ಸಫ್ರಿದ್‌ನನ್ನು ಬಜ್ಪೆಯಲ್ಲಿ ಪೊಲೀಸರು ಬಂಧಿಸಿದ್ದು, ಈತನನ್ನು ಬೆಳ್ಳಾರೆ ಠಾಣೆಗೆ ಕರೆತಂದಿರುವುದಾಗಿ ತಿಳಿದು ಬಂದಿದೆ
ಬೆಂಗಳೂರು: ನಾಳೆಯಿಂದವಿಧಾನಮಂಡಲಅಧಿವೇಶನಆರಂಭವಾಗಲಿದ್ದು, ಸರ್ಕಾರಹಾಗೂಪ್ರತಿಪಕ್ಷಗಳಮಧ್ಯೆಜಂಗೀಕುಸ್ತಿಶುರುವಾಗಲಿದೆ. 40 ಪರ್ಸೆಂಟ್ ಕಮಿಷನ್, ಬೆಂಗಳೂರಿನ ಮಳೆ ವಿಚಾರಗಳು ಪ್ರತಿಧ್ವನಿಸುವ ಸಾಧ್ಯತೆ ಇದೆ. ವಿರೋಧಪಕ್ಷಕ್ಕೆಆಹಾರವಾಗದಂತೆಆಡಳಿತರೂಢಬಿಜೆಪಿಪ್ಲಾನ್ರೂಪಿಸಿಕೊಂಡಿದೆ. ಇನ್ನೊಂದೆಡೆಸರ್ಕಾರವನ್ನುಇಕ್ಕಟ್ಟಿಗೆಸಿಲುಕಿಸಲುಕಾಂಗ್ರೆಸ್ಮತ್ತುಜೆಡಿಎಸ್ಸಿದ್ಧವಾಗಿದೆ. ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಹಲವು ವಿಧೇಯಕಗಳು ಮಂಡನೆಯಾಗಲಿವೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ, ಮಳೆ ಅನಾಹುತ, ಪಿಎಸ್ ಐ ಸೇರಿದಂತೆ ಇತರೆ ನೇಮಕಾತಿ ಅಕ್ರಮ ಆರೋಪಗಳ ಬಗ್ಗೆ ಪ್ರಸ್ತಾಪಿಸಿ ಆಡಳಿತಾರೂಢ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷ ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದ್ದು, ಕಾಂಗ್ರೆಸ್ ತಿರುಗೇಟು ನೀಡಲು ಪ್ರತಿತಂತ್ರದೊಂದಿಗೆ ಆಡಳಿತಾರೂಢ ಬಿಜೆಪಿ ಸಜ್ಜಾಗಿದೆ.