Author: main-admin

ಕಾರ್ಕಳ: ಕುಕ್ಕುಂದೂರು ಗ್ರಾಮದ ಬೋಪಾಡಿ ಎಂಬಲ್ಲಿ ಬೈಕಿಗೆ ಲಾರಿಯೊಂದು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಸಲ್ಮಾನ್ ಮೃತ ಬೈಕ್ ಸವಾರ. ಸಲ್ಮಾನ್ ಬೈಕಿನಲ್ಲಿ ಹೋಗುತ್ತಿದ್ದಾಗ ಕಾರ್ಕಳ ಕಡೆಯಿಂದ ರಂಗನಪಲ್ಕೆ ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಲಾರಿ ಚಾಲಕ ಸಿದ್ಧಿಕ್ ಅತೀ ವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯ ತೀರಾ ಬಲಬದಿಗೆ ಚಲಾಯಿಸಿಕೊಂಡು ಬಂದು ಕಾರ್ಕಳ ಕಡೆಗೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆಡಿದ್ದಾನೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸಲ್ಮಾನ್ ಬಿದ್ದು, ಹೆಲ್ಮೆಟ್ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಪಾಲ್ಘರ್: ಟಾಟಾ ಸಮೂಹದ ಮಾಜಿ ಅಧ್ಯಕ್ಷ ಕೈಗಾರಿಕೋದ್ಯಮಿ ಸೈರಸ್ ಮಿಸ್ತ್ರಿ ಪಾಲ್ಘರ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಮಾಹಿತಿಯನ್ನು ಪಾಲ್ಘರ್ ಜಿಲ್ಲಾ ಪೋಲಿಸ್‌ ಅಧೀಕ್ಷಕರು ನೀಡಿದ್ದಾರೆ. ಸೈರಸ್ ಪಲ್ಲೋಂಜಿ ಮಿಸ್ತ್ರಿ (ಜನನ 4 ಜುಲೈ 1968) ಭಾರತೀಯ ಮೂಲದ ಐರಿಷ್ ಉದ್ಯಮಿಯಾಗಿದ್ದವರು. ಅವರು 2012 ರಿಂದ 2016 ರವರೆಗೆ ಭಾರತೀಯ ವಾಣಿಜ್ಯ ಸಮೂಹವಾದ ಟಾಟಾ ಗ್ರೂಪ್ನ ಅಧ್ಯಕ್ಷರಾಗಿದ್ದರು. ಅಕ್ಟೋಬರ್ 2016 ರಲ್ಲಿ, ಟಾಟಾ ಗ್ರೂಪ್ನ ಹೋಲ್ಡಿಂಗ್ ಕಂಪನಿ ಟಾಟಾ ಸನ್ಸ್ನ ಆಡಳಿತ ಮಂಡಳಿಯು ಮಿಸ್ತ್ರಿ ಅವರಿಗೆ ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡುವ ಅವಕಾಶವನ್ನು ನೀಡಿದ ನಂತರ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲು ಮತ ಚಲಾಯಿಸಿತು. ಮಾಜಿ ಅಧ್ಯಕ್ಷ ರತನ್ ಟಾಟಾ ನಂತರ ಮಧ್ಯಂತರ ಅಧ್ಯಕ್ಷರಾಗಿ ಮರಳಿದರು, ಮತ್ತು ನಟರಾಜನ್ ಚಂದ್ರಶೇಖರನ್ ಅವರನ್ನು ಕೆಲವು ತಿಂಗಳ ನಂತರ ಹೊಸ ಅಧ್ಯಕ್ಷರಾಗಿ ಹೆಸರಿಸಲಾಯಿತು. ಪಾಲ್ಘರ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸೈರಸ್ ಮಿಸ್ತ್ರಿ ಸಾವನ್ನಪ್ಪಿದ್ದಾರೆ ಎಂದು ವರದಿಗಳು ಭಾನುವಾರ ತಿಳಿಸಿವೆ. ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದಾಗ ಈ…

Read More

ಮಂಗಳೂರು, ಸೆಪ್ಟೆಂಬರ್ 04 : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಗೆ ಸ್ಫೋಟಕ ಪತ್ತೆ ಕಾರ್ಯದಲ್ಲಿ ಬೆನ್ನೆಲುಬಾಗಿ ಸೇವೆ ಸಲ್ಲಿಸುತ್ತಿದ್ದ ಪೊಲೀಸ್ ಶ್ವಾನ ಗೀತಾ (ಸೆ.3) ಸಾವನ್ನಪ್ಪಿದೆ. ಪೊಲೀಸ್ ಇಲಾಖೆಯ ನಿಷ್ಟವಂತ ಶ್ವಾನವಾಗಿದ್ದ ಗೀತಾ 11 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದೆ. 2011ರಲ್ಲಿ ಜನಿಸಿದ ಗೀತಾ ಬೆಂಗಳೂರಿನನಲ್ಲಿ 11 ತಿಂಗಳ ಸುದೀರ್ಘ ತರಬೇತಿಯ ನಂತರ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸೇವೆಗೆ ಸೇರಿತ್ತು. ತನ್ನ 11 ವರ್ಷಗಳ ಸುಧೀರ್ಘ ಸೇವೆ ಸಂದರ್ಭ ಆಕೆ ಲೆಕ್ಕವಿಲ್ಲದಷ್ಟು ಸ್ಫೋಟಕ ಪತ್ತೆ ಕಾರ್ಯಾಚರಣೆಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದೆ. ವಿಶೇಷವಾಗಿ ಜಿಲ್ಲೆಗಳಿಗೆ ಆಗಮಿಸುವ ಗಣ್ಯ ವ್ಯಕ್ತಿಗಳ ಭೇಟಿಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳ ಸಮಯದಲ್ಲಿ ಪೊಲೀಸರಿಗೆ ಭದ್ರತಾ ಕಾರ್ಯಾಚರಣೆಗಳಲ್ಲಿ ಪಾಲ್ಗೊಳ್ಳುತ್ತಿದ್ದಳು. ಗೀತಾಳ ಅಗಲುವಿಕೆಗೆ ಪೊಲೀಸ್ ಇಲಾಖಾಧಿಕಾರಿಗಳು ಮತ್ತು ಸಿಬಂದಿ ವರ್ಗ ಕಂಬನಿ ಮಿಡಿದಿದೆ. ಗೀತಾಳಿಗೆ ನಾಳೆ ನಗರ ಪೊಲೀಸ್ ಕಚೇರಿ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಿವಿಧಾನಗಳನ್ನು ನೆರವೇರಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More

ಪುತ್ತೂರು;ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಪುತ್ತೂರಿನಲ್ಲಿ‌ ನಡೆದಿದೆ. ಅಪಘಾತದಲ್ಲಿ ಗಾಯಾಳು ಭರತ್ ನನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾನೆ.ಇನ್ನೋರ್ವ ಧನುಷ ಗಾಯಗೊಂಡಿದ್ದಾನೆ.ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ವೀರಮಂಗಿಲ ಖಂಡಿಗ ಚಂದ್ರಶೇಖರ ರವರ ಪುತ್ರ ಭರತ್ ಎಂದು ಹೇಳಲಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಂಗಳೂರು : ಅವಧಿ ಮೀರಿ ಪಾರ್ಟಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ಬೆಂಗಳೂರಿನ ಸ್ಟಾರ್ ಹೋಟೆಲ್ ಮೇಲೆ ದಾಳಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಜೀವನ್ ಭೀಮಾನಗರ ಠಾಣಾ ವ್ಯಾಪ್ತಿಯಲ್ಲಿರುವ ರಾಯಲ್ ಅರ್ಚಿಡಡ್ ಹೋಟೆಲ್ ಮೇಲೆ ಸಿಸಿಬಿ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದೆ. ಅವಧಿ ಮೀರಿ ಪಾರ್ಟಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ನಸುಕಿನ ಜಾವ 3 ಗಂಟೆಯವರೆಗೂ ಪಾರ್ಟಿ ಮಾಡುತ್ತಿದ್ದರು. ಎಸಿಪಿ ರೀನಾ, ಇನ್ಸ್ ಪೆಕ್ಟರ್ ಗೋವಿಂದರಾಜು ತಂಡದಿಂದ ಹೋಟಲ್ ಮೇಲೆ ದಾಳಿ ನಡೆಸಲಾಗಿದ್ದು, ಪಾರ್ಟಿಯಲ್ಲಿದ್ದ 100 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್‌ಇದೆ. ದಾಳಿ ವೇಳೆ ಪಾರ್ಟಿಯಲ್ಲಿ ಬಳಸುತ್ತಿದ್ದ ನಗದು, ಮದ್ಯ ಜಪ್ತಿ ಮಾಡಲಾಗಿದೆ. ಹೋಟೆಲ್ ಹಾಗೂ ಪಾರ್ಟಿ ಆಯೋಜಕರ ವಿರುದ್ಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಮುಲ್ಕಿ: ಇತಿಹಾಸ ಪ್ರಸಿದ್ಧ ಮೂಲ್ಕಿ ಬಪ್ಪನಾಡು ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ಫ್ರಿನ್ಸ್ ಧ್ರುವಸರ್ಜಾ ಭೇಟಿ ನೀಡಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದರು. ಈ ಸಂದರ್ಭ ದೇವಸ್ಥಾನದ ಅರ್ಚಕ ಶ್ರೀಪತಿ ಉಪಾಧ್ಯಾಯ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು. ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು ದೇವಸ್ಥಾನದ ವತಿಯಿಂದ ನಟನನ್ನು ಗೌರವಿಸಿದರು. ಚಲನಚಿತ್ರ ನಟ ದೇವಸ್ಥಾನಕ್ಕೆ ಆಗಮಿಸುವ ವಿಷಯ ತಿಳಿದು ಅಭಿಮಾನಿಗಳು ಚಿತ್ರನಟನ ಜೊತೆ ಸೆಲ್ಫಿಗಾಗಿ ಮುಗಿಬಿದ್ದರು.

Read More

ಚಿತ್ರದುರ್ಗ;ಮುರುಘಾ ಮಠದಲ್ಲಿ ಹಾಸ್ಟೆಲ್‌ನಲ್ಲಿ ತಂಗಿದ್ದ ನನ್ನ ಮಗಳು ಆರು ತಿಂಗಳಿಂದ ಕಾಣಿಸುತ್ತಿಲ್ಲ ಎಂದು ಅಂಧ ವ್ಯಕ್ತಿಯೋರ್ವರು ಹೇಳಿದ್ದಾರೆ. ಶುಕ್ರವಾರ ಮಠದ ಆವರಣಲ್ಲಿ ಕಾಣಿಸಿಕೊಂಡ ವ್ಯಕ್ತಿ, ಪೊಲೀಸರು ಹಾಗೂ ಮಠದ ಆಡಳಿತ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನನ್ನ ಪುತ್ರಿ ಸಾಕ್ಷಿ 4ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಅವರನ್ನು ಹಲವು ತಿಂಗಳಿಂದ ನೋಡಲು ಸಾಧ್ಯವಾಗಿಲ್ಲ. ಈಗ ಅವರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆಯಂತೆ. ಎಲ್ಲ ಹಾಸ್ಟೆಲ್‌ ಪರಿಶೀಲಿಸಿದರೂ ಮಗಳು ಪತ್ತೆಯಾಗಿಲ್ಲ ಎಂದು ಮಾಧ್ಯಮ ಪ್ರತಿನಿಧಿಗಳ ಎದುರು ದೂರಿದ್ದಾರೆ. ಇದಲ್ಲದೆ ಮುರುಘಾಶ್ರೀಗಳು ಮಠದ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2013ರಲ್ಲಿ ಶ್ರೀಗಳ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು. ಆನಂದ ಕುಮಾರ್ ಎಂಬ ವ್ಯಕ್ತಿಗೆ ಕೆಂಗೇರಿಯ ಸೂಲಿಕೆರೆ ಗ್ರಾಮದಲ್ಲಿನ ಮಠದ ಆಸ್ತಿಯಲ್ಲಿ 7.18 ಎಕರೆ ಜಾಗವನ್ನು ಅಮ್ರಮವಾಗಿ ಮಾರಾಟ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳ ವಿರುದ್ಧ ಪಿ.ಎಸ್.ಪ್ರಕಾಶ್ ಎಂಬುವವರು ವಂಚನೆ, ವಿಶ್ವಾಸದ್ರೋಹ ಪ್ರಕರಣ ದಾಖಲಿಸಿದ್ದರು.ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.ಸಮನ್ಸ್ ಜಾರಿ ಮಾಡಿದರೂ ಮುರುಘಾಶ್ರೀಗಳು ನ್ಯಾಯಾಲಯಕ್ಕೆ ಹಾಜರಾಗದ…

Read More

ಬೈಂದೂರು: ತಾಲೂಕಿನ ಒತ್ತಿನೆಣೆ ಸಮೀಪ ಕಡವೆ ಭೇಟೆಯಾಡಿ ಮಾಂಸ ಮಾಡಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ನಝೀರ್ (20), ಅಬ್ದುಲ್ ಅಲಿ (23) ಬಂಧಿತರು. ಒತ್ತಿನೆಣೆ ಪರಿಸರದಲ್ಲಿ ಕಡವೆ ಬೇಟೆ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬೈಂದೂರು ಪೊಲೀಸರು ಸ್ಥಳಕ್ಕೆ ದಾಳಿ ಮಾಡಿದ್ದರು. ಆದರೆ ಸ್ಥಳದಲ್ಲಿ ಯಾರೂ ಇರಲಿಲ್ಲ. ಅಲ್ಲಿ ಸಿಕ್ಕಂತಹ ಕುರುಹುಗಳ ಆಧಾರದ ಮೇಲೆ ನಾಕಾಬಂದಿ ಮಾಡಿ,ಸಂಶಯಾಸ್ಪದವಾಗಿ ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ 20 ಕೆ.ಜಿ ಕಡವೆ ಮಾಂಸ ಸಾಗಾಟ ಮಾಡುತ್ತಿದ್ದುದು ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಹೆಚ್ಚಿನ ವಿಚಾರಣೆಗೆ ಆರೋಪಿಗಳನ್ನು ಒಂದು ದಿನ ವಲಯ ಅರಣ್ಯ ಇಲಾಖೆಯ ವಶಕ್ಕೆ ನೀಡಲಾಗಿದೆ. ಬೈಂದೂರು ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜ್ಯಕ್ಕೆ ಆಗಮಿಸಿದ್ದು, ನವಮಂಗಳೂರು ಬಂದರು ಪ್ರಾಧಿಕಾರ ಹಾಗೂ ಎಂಆರ್ ಪಿಎಲ್ ನ ಸುಮಾರು 3,800 ಕೋಟಿ ರೂ.ಗಳ 8 ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ ಎಂದು ಹೇಳಿದ್ದಾರೆ. https://twitter.com/narendramodi/status/1565907023568728064?ref_src=twsrc%5Etfw%7Ctwcamp%5Etweetembed%7Ctwterm%5E1565907023568728064%7Ctwgr%5Ea364f764756f5d89c952399cee1585d76f53bad1%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadanewsnow-epaper-kanowcom

Read More

ಮಂಗಳೂರು: ನಗರ ಹೊರವಲಯದ ಬಂಗ್ರ ಕೂಳೂರಿನಲ್ಲಿ ಶುಕ್ರವಾರ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶಕ್ಕೆ ಬಂದು ಜನಜಂಗುಳಿಯ ನಡುವೆ ಹೆತ್ತವರ ಕೈ ತಪ್ಪಿ ನಾಪತ್ತೆಯಾಗಿದ್ದ ಬಾಲಕಿಯನ್ನು ಪೊಲೀಸರು ಮರಳಿ ಹೆತ್ತವರ ವಶಕ್ಕೆ ಒಪ್ಪಿಸಿದ ಘಟನೆ ವರದಿಯಾಗಿದೆ. ಕಾವೂರು ಜ್ಯೋತಿನಗರದ ನಿವಾಸಿ ಯಮನಪ್ಪ- ದೇವಕಿ ದಂಪತಿಯ ಪುತ್ರಿ , ನಾಲ್ಕನೇ ತರಗತಿ ವಿದ್ಯಾರ್ಥಿನಿ ಪ್ರಜಾ ಮೇಠಿ (10) ಹೆತ್ತವರೊಂದಿಗೆ ಶುಕ್ರವಾರ ಪ್ರಧಾನಿಯ‌ ಕಾರ್ಯಕ್ರಮದಲ್ಲಿ‌ ಪಾಲ್ಗೊಂಡಿದ್ದಳು. ಆದರೆ ಜನಜಂಗುಳಿಯ ಮಧ್ಯೆ ಹೆತ್ತವರ ಕೈ ತಪ್ಪಿ ಬೇರ್ಪಟ್ಟಿದ್ದಳು.ಪೊಲೀಸರ ಗಮನಕ್ಕೆ ಬಂದ ನಂತರ ಸಂಚಾರ ಉಪವಿಭಾಗದ ಎಸಿಪಿ‌ ಗೀತಾ ಕುಲಕರ್ಣಿ ‌ನೇತೃತ್ವದಲ್ಲಿ ವಿದ್ಯಾರ್ಥಿನಿ ಹೆತ್ತವರ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಹೆತ್ತವರ ವಶಕ್ಕೆ ಒಪ್ಪಿಸಿದ್ದಾರೆ.

Read More