Author: main-admin

ಕಾರ್ಕಳ : ಪ್ರಧಾನಿ ನರೇಂದ್ರ‌ ಮೋದಿ ಆಗಮನ ಹಿನ್ನೆಲೆಯಲ್ಲಿ ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ನೇತೃತ್ವದಲ್ಲಿ ಭರದ ಸಿದ್ಧತೆ ನಡೆಯುತ್ತಿದ್ದು,1 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ. ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಯ ಬಳಿಕ ಈ ಸಮಾವೇಶ ನಡೆಯಲಿದೆ. ರಾಜಕೀಯವಾಗಿಯೂ ಇದು ಮಹತ್ವ ಪಡೆದಿರುವುದರಿಂದ ಸಣ್ಣಪುಟ್ಟ ಸಂಗತಿಗಳಿಗೂ ಬಿಜೆಪಿ ವಿಶೇಷ ಲಕ್ಷ್ಯ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮದ ಖುದ್ದು ಮೇಲುಸ್ತುವಾರಿ ವಹಿಸಿದ್ದು, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಜತೆಗೆ ಈಗಾಗಲೇ ಸ್ಥಳ ಪರಿಶೀಲನೆ ಹಾಗೂ ಸಭೆ ನಡೆಸಿದ್ದಾರೆ. ಇನ್ನು ಪ್ರಧಾನಿ ಮೋದಿಯವರಿಗೆ ಈ ಕಾರ್ಯಕ್ರಮದ ಸ್ಮರಣಾರ್ಥವಾಗಿ ತುಳುನಾಡಿನ ದ್ಯೋತಕವಾಗಿ ಪರಶುರಾಮನ ಭವ್ಯ ಪುತ್ಥಳಿಯನ್ನು ಉಡುಗೊರೆ ರೂಪದಲ್ಲಿ ಕೊಡಲು ನಿರ್ಧರಿಸಲಾಗಿದೆ. ಕಾರ್ಯಕ್ರಮದ ಬಳಿಕ ಬಿಜೆಪಿ ಕೋರ್ ಕಮಿಟಿ ಸಭೆಯೂ ಸೇರಿದಂತೆ ಸುಮಾರು ಒಂದು ಗಂಟೆ ಕಾಲ ಪಕ್ಷದ ನಾಯಕರ ಜತೆಗೆ ಪ್ರಧಾನಿ ಮೋದಿ ಚರ್ಚೆ…

Read More

ಅಬುಧಾಬಿ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಬುಧವಾರ ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಸ್ಥಳಕ್ಕೆ ಭೇಟಿ ನೀಡಿದರು. ಈ ಕುರಿತು ಟೀಟ್ ಮಾಡಿರುವ ಅವರು, ಇದು “ಶಾಂತಿ, ಸಹಿಷ್ಣುತೆ ಮತ್ತು ಸಾಮರಸ್ಯದ ಸಂಕೇತ’ ಎಂದು ಬಣ್ಣಿಸಿದ್ದಾರೆ. ಗಲ್ಫ್ ರಾಷ್ಟ್ರಕ್ಕೆ ಮೂರು ದಿನಗಳ ಭೇಟಿಗಾಗಿ ಬುಧವಾರ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ತೆರಳಿದ ಎಸ್ ಜೈಶಂಕರ್ ಅವರು, ದೇವಾಲಯದ ನಿರ್ಮಾಣದಲ್ಲಿ ಭಾರತೀಯರ ಶ್ರಮವನ್ನು ಶ್ಲಾಘಿಸಿದರು.

Read More

ಕಾಸರಗೋಡು:ಕಾಸರಗೋಡು-ಕಾಂಞಗಾಡು ಮಧ್ಯೆ ಹಾದು ಹೋಗುವ ರೈಲ್ವೇ ಹಳಿಗಳಲ್ಲಿ ಕಾಂಕ್ರೀಟ್ ಒಳಗೊಂಡ ಕಬ್ಬಿಣದ ಬೀಮ್ ಇಟ್ಟು ಹಳಿ ತಪ್ಪಿಸಲು ಯತ್ನಿಸಲಾಗಿದೆ ಎಂದು ವರದಿಯಾಗಿತ್ತು. ಇದೀಗ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶ್ವಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿ ಬೇಕಲದ ಕ್ವಾಟರ್ಸ್‌ವೊಂದರಲ್ಲಿ ವಾಸವಾಗಿರುವ ತಮಿಳುನಾಡು ವಿಲ್ಲಾಪುರದ ಕನಕವಳ್ಳಿ (22) ಎಂಬಾಕೆಯನ್ನು ಪೊಲೀಸರು ಬಂಧಿಸಿ ವಿಚಾರಿಸಿದ್ದಾರೆ. ಗುಜುರಿ ಹೆಕ್ಕುವ ಕೆಲಸ ಮಾಡುತ್ತಿದ್ದ ಈಕೆ ಸಿಮೆಂಟ್ ಒಳಗೊಂಡ ಕಬ್ಬಿಣದ ಸರಳುಗಳನ್ನು ರೈಲು ಹಳಿಯಲ್ಲಿಟ್ಟು ಸರಳಿನಿಂದ ಸಿಮೆಂಟ್ ಬೇರ್ಪಡಿಸಲು ಉದ್ದೇಶಿಸಿದ್ದಳು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಈಕೆಯನ್ನು ಗಮನಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆಬಂದಿದೆ. ಆ.21ರಂದು ಕಾಸರಗೋಡು-ಕಾಂಞಗಾಡು ಮಧ್ಯೆ ಹಾದು ಹೋಗುವ ಹಳಿಯಲ್ಲಿ ಬರುವ ಕೋಟಿಕುಳಂ-ಬೇಕಲ ನಡುವೆ ಮೊದಲು ಕಾಂಕ್ರೀಟ್ ಒಳಗೊಂಡ ಕಬ್ಬಿಣದ ಬೀಮ್ ಪತ್ತಯಾಗಿತ್ತು.ಬಳಿಕ ತೃಕ್ಕನ್ನಾಡ್ ದೇಗುಲದ ಹಿಂದೆ ರೈಲ್ವೆ ಹಳಿಗಳ ಮೇಲೆ ಕಬ್ಬಿಣದ ಸರಳುಗಳು ಮತ್ತು ಭೀಮ್ ಪತ್ತೆಯಾಗಿತ್ತು.

Read More

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೆ.2ರಂದು ಮಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಆದೇಶ‌ ಹೊರಡಿಸಿದ್ದಾರೆ. ಸುಗಮ ಸಂಚಾರ, ಭದ್ರತೆ ಹಾಗೂ ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಮತ್ತು ಸಂಚಾರ ಸುವ್ಯವಸ್ಥೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2ರ ಬೆಳಿಗ್ಗೆ 6ರಿಂದ ಪ್ರಧಾನಿ ಕಾರ್ಯಕ್ರಮ ಮುಗಿಸಿ ನಿರ್ಗಮಿಸುವವರೆಗೂ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಪ್ರಧಾನಿ ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ ನಿರ್ದಿಷ್ಟ ಸ್ಥಳಗಳಲ್ಲಿ ಪಾರ್ಕಿಂಗ್ ಗೆ ವ್ಯವಸ್ಥೆ ಕಲ್ಪಿಸಲಾಗಿದೆ. ನಿತ್ಯ ಸಂಚರಿಸುವ ವಾಹನಗಳ ಮಾರ್ಗಗಳನ್ನು ಅಂದು ಬದಲಾವಣೆ ಮಾಡಲಾಗಿದೆ. ಸಂಚಾರ ನಿಷೇಧ ಎಲ್ಲೆಲ್ಲಿ ? ಮಂಗಳೂರು ವಿಮಾನ ನಿಲ್ದಾಣದಿಂದ ಕಂಜಾರು – ಮರವೂರು – ಮರಕಡ – ಕಾವೂರು – ಬೊಂದೇಲ್ – ಪದವಿನಂಗಡಿ – ಯೆಯ್ಯಾಡಿ – ರಾಷ್ಟ್ರೀಯ ಹೆದ್ದಾರಿ 66 ರ ಕೆ.ಪಿ.ಟಿ. ಜಂಕ್ಷನ್‌ನಿಂದ – ಕೊಟ್ಟಾರ ಚೌಕಿ ಕೂಳೂರು – ಎನ್ಎಂಪಿಎವರೆಗೆ ಹಾದು ಹೋಗುವ ರಸ್ತೆಗಳ ಎರಡೂ ಬದಿಗಳಲ್ಲಿ…

Read More

ಮಂಗಳೂರು;ಪ್ರಧಾನಿ ಕಾರ್ಯಕ್ರಮದ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹವಾಗಿ ಪ್ರಚಾರ ಮಾಡಿದ ಆರೋಪದಲ್ಲಿ ಇಬ್ಬರ ಮೇಲೆ‌ ಪೊಲೀಸ್ ಕೇಸ್ ದಾಖಲಿಸಲಾಗಿದೆ ಎಂದು‌ ಮಂಗಳೂರು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ. ಎರಡು ಪ್ರಕರಣಗಳಲ್ಲಿ ಒಂದು‌ ಪೋಟೋವನ್ನು ಆಕ್ಷೇಪಾರ್ಹವಾಗಿ ಮಾರ್ಪಡು‌ ಮಾಡಲಾಗಿದೆ. ಇನ್ನೊಂದು ಕಾರ್ಯಕ್ರಮಕ್ಕೆ‌ ಸಂಬಂಧಿಸಿದಂತೆ ಕೆಲವು ಕಡೆ ಗೊಂದಲವುಂಟು ಮಾಡುವ ಸಂದೇಶ ರವಾನಿಸಲಾಗಿದೆ. ಇಂತಹ ಎರಡು ಪ್ರಕರಣಗಳ ಮೇಲೆ ಕೇಸ್ ದಾಖಲಿಸಿದ್ದೇವೆ ಎಂದು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ. ಇನ್ನು ನಮ್ಮ‌ ಪೊಲೀಸರ ತಂಡ ಎಲ್ಲಾ ವಾಟ್ಸಾಪ್ ಗ್ರೂಪ್ ಗಳ ಮೇಲೆ ನಿಗಾವಹಿಸಿದೆ. ಲತಪ್ಪು ಕಂಡು ಬಂದಲ್ಲಿ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ. ಇದೀಗ ಎರಡು ಕೇಸ್ ಗೆ ಸಂಬಂಧಿಸಿ ಸಂಬಂಧ ಪಟ್ಟವರ ವಶಕ್ಕೆ ಪಡೆಯುವ ಕಾರ್ಯ ನಡೆಯುತ್ತಿದೆ.ಈ ಕುರಿತು ಹೆಚ್ಚಿನ ಮಾಹಿತಿ ಮುಂದಕ್ಕೆ‌ ನೀಡುವುದಾಗಿ ಕಮಿಷನರ್ ಹೇಳಿದ್ದಾರೆ.

Read More

ಮಂಗಳೂರು: ಪ್ರಧಾನಿ ಮೋದಿಯವರು ಸೆ.2ರಂದು ಮಂಗಳೂರಿನಲ್ಲಿ ಎನ್ಎಂಪಿಎ, ಎಂಆರ್ ಪಿಎಲ್ ನ 6 ವಿವಿಧ ಬಹುಕೋಟಿ ವೆಚ್ಚದ ಯೋಜನೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು. ಮಂಗಳೂರಿನಲ್ಲಿಂದು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಂದು ಮಾತನಾಡಿರುವ ಅವರು, ಕೊಚ್ಚಿನ್ ನಿಂದ ಆಗಮಿಸುವ ಪ್ರಧಾನಿಯವರು ಎನ್ಎಂಪಿಎಗೆ ತೆರಳಲಿದ್ದಾರೆ. ಅಲ್ಲಿಂದ ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೇಂದ್ರ, ರಾಜ್ಯ ಸರಕಾರದ ವಿವಿಧ ಫಲಾನುಭವಿಗಳಿಗೆ ಯೋಜನೆಗಳನ್ನು ಹಸ್ತಾಂತರಿಸಲಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದ ಯಶಸ್ಸಿಗೆ ದ.ಕ.ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿದ್ದು, ಕಾರ್ಯಕ್ರಮದಲ್ಲಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಹಿತ ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 1ಕ್ಕೆ ಕಾರ್ಯಕ್ರಮ ನಡೆಯಲಿರುವುದರಿಂದ ಸಾರ್ವಜನಿಕರು ಮುಂಚಿತವಾಗಿ ಬಂದು ನೂಕುನುಗ್ಗಲು, ಗೊಂದಲ ಆಗದಂತೆ ಸಹಕರಿಸಬೇಕು. ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಲು ಅವಕಾಶ ನೀಡಲಾಗಿದೆ ಎಂದರು. ಕಾರ್ಯಕ್ರಮ ನಡೆಯುತ್ತಿರುವ ಮೈದಾನದ ಅಕ್ಕಪಕ್ಕದಲ್ಲಿನ‌ ತೊಂದರೆ ಇಲ್ಲದ ಯಾವುದೇ ಅಂಗಡಿ – ಮುಂಗಟ್ಟುಗಳನ್ನು ಮುಚ್ಚಲಾಗುತ್ತಿಲ್ಲ. ಸುರಕ್ಷತೆ ಹಾಗೂ ಆಯೋಜನೆಗೆ ಸಂಬಂಧಿಸಿದಂತೆ ಮುನ್ನೆಚ್ಚರಿಕಾ…

Read More

ಚೆನ್ನೈ:ಅಂಜೂರ ಮರದಿಂದ ತಯಾರಿಸಲಾದ 32 ಅಡಿ ಎತ್ತರದ ಗಣೇಶನ ಮೂರ್ತಿಯು ಈ ವರ್ಷದ ಗಣೇಶೋತ್ಸವದ ವಿಶೇಷತೆಯಲ್ಲಿ ಒಂದಾಗಿದೆ. ಗಣೇಶ ಚತುರ್ಥಿಯ ಅಂಗವಾಗಿ ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ 83 ಅಂಜೂರದ ಮರಗಳನ್ನು ಬಳಸಿ ನಿಂತ ಭಂಗಿಯ ಗಣೇಶನ ಮೂರ್ತಿಯನ್ನು ತಯಾರಿಸಲಾಗಿದೆ. ಕಲಾವಿದರಾದ ಸ್ಥಪತಿ ತಿರುನಾವುಕರಸರ್‌ ಈ ಬೃಹತ್‌ ಮೂರ್ತಿಯನ್ನು ಕೆತ್ತಿದ್ದಾರೆ. ನಾಗೈ ವಿಶ್ವರೂಪ ವಿನಾಯಗಾರ್‌ ಸಮಿತಿ ವತಿಯಿಂದ ಈ ಮೂರ್ತಿಯು ಪ್ರತಿಷ್ಠಾಪನೆಗೊಳ್ಳುತ್ತಿದೆ. ಜನವರಿಯಲ್ಲಿ ಪವಿತ್ರ ಅಂಜೂರ ಮರದಿಂದ ಗಣೇಶನ ಮೂರ್ತಿಯ ಕೆತ್ತನೆಯ ಕಾರ್ಯ ಆರಂಭಿಸಲಾಯಿತು. ಕೆಲವು ದಿನಗಳ ಹಿಂದೆ ಕೆತ್ತನೆ ಕಾರ್ಯ ಪೂರ್ಣಗೊಂಡಿತು. ಅಂಜೂರ ಮರದಲ್ಲಿ ಮೂರ್ತಿ ತಯಾರಿಸಬೇಕೆಂಬುದು ನನ್ನ 15 ವರ್ಷಗಳ ಕನಸಾಗಿತ್ತು. ಕೊರೊನಾ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಗಣೇಶೋತ್ಸವ ಈ ವರ್ಷ ಅದ್ದೂರಿಯಾಗಿ ಆಚರಿಸಲಾಗುತ್ತಿದೆ, ಎಂದು ಸ್ಥಪತಿ ತಿಳಿಸಿದ್ದಾರೆ.

Read More

ಸುಳ್ಯ:ಅನ್ಯ ಕೋಮಿನ ಕಾಲೇಜು ವಿದ್ಯಾರ್ಥಿನಿ ಜೊತೆ ಮಾತನಾಡಿದ ಕಾರಣಕ್ಕೆ ಅದೇ ಕಾಲೇಜಿನ ವಿದ್ಯಾರ್ಥಿಗೆ, ವಿದ್ಯಾರ್ಥಿಗಳ ತಂಡ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಸುಳ್ಯದಿಂದ ವರದಿಯಾಗಿದೆ. ಮೊಹಮ್ಮದ್ ಸನೀಫ್(19) ಹಲ್ಲೆಗೊಳಗಾದ ಯುವಕ. ಸನೀಫ್ ಕೇಸ್ ಆಧಾರದಲ್ಲಿ 7 ಜನರ ಮೇಲೆ ಕೇಸ್ ದಾಖಲಾಗಿದೆ ದೀಕ್ಷಿತ್,ಧನುಷ್,ಪ್ರಜ್ವಲ್,ತನುಜ್,ಅಕ್ಷಯ್,ಮೋಕ್ಷಿತ್, ಗೌತಮ್‌ ಮತ್ತು ಇತರರ ಮೇಲೆ‌ ಕೇಸ್ ದಾಖಲಾಗಿದೆ. ಸುಳ್ಯದ ಕೊಡಿಯಾಲಬೈಲು ಕಾಲೇಜಿನಲ್ಲಿ ಸನೀಫ್ ಗೆ ಕಾಲೇಜಿನ ಗ್ರೌಂಡ್ ಗೆ ಮಾತನಾಡಲಿದೆ ಎಂದು ಕರೆದುಕೊಂಡು ಹೋಗಿ ಅದೇ ಕಾಲೇಜಿನ ವಿದ್ಯಾರ್ಥಿಗಳು ಕಾಲಿನಿಂದ ಒದ್ದು, ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ‌ ಎಂದು ಆರೋಪಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಉಡುಪಿ: ಬೈಕ್‌ವೊಂದು ಚರಂಡಿಗೆ ಬಿದ್ದು ಸವಾರ ಸಾವನ್ನಪ್ಪಿದ ಘಟನೆ ಉಡುಪಿಯ ಅಂಬಲಪಾಡಿ ಸಮೀಪದ ಸರ್ವಿಸ್ ರಸ್ತೆಯಲ್ಲಿ ನಿನ್ನೆ ಸಂಜೆ ಸಂಭವಿಸಿದೆ. ಕೊಡವೂರಿನ ಲಿಯಾನ್ ವಿಲ್ಸನ್ ಅಮ್ಮನ್ನ ( 19) ಮೃತ ದುರ್ದೈವಿ. ವಿಲ್ಸನ್ ಅಂಬಲಪಾಡಿ ಕಡೆಯಿಂದ ಕಿನ್ನಿಮೂಲ್ಕಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಲಿಯಾನ್‌ನನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ರಾತ್ರಿ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ: ಉಡುಪಿ ನಗರದ ಹೃದಯ ಭಾಗದಲ್ಲಿ ಸಾವರ್ಕರ್ ಅವರ ಸರ್ಕಲ್ ನಿರ್ಮಾಣ ಮಾಡುವ ಬಗ್ಗೆ ಇಂದು ನಡೆದ ನಗರಸಭೆ ಅಧಿವೇಶನದಲ್ಲಿ ನಿರ್ಣಯ ಮಾಡಿದ್ದೇವೆ. ಆದರೆ ಅವರ ಪುತ್ಥಳಿ ಬೇಡ ಎಂದು ಶಾಸಕ ರಘುಪತಿ ಭಟ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಶಾಸಕರು, ಸಾವರ್ಕರ್ ಬಗ್ಗೆ ಅತ್ಯಂತ ಗೌರವ ಇದೆ. ಅವರಿದ್ದ ಅಂಡಮಾನ್ ಜೈಲಿಗೂ ಹೋಗಿ ಬಂದಿದ್ದೇವೆ. ಅವರ ಪುತ್ಥಳಿ ನಿರ್ಮಾಣಕ್ಕೆ ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಅದರೆ ಪುತ್ಥಳಿ ನಿರ್ಮಾಣ ಮಾಡಿದರೆ ಅದಕ್ಕೆ ಕಿಡಿಗೇಡಿಗಳು ಅವಮಾನ‌ ಮಾಡುವ ಸಾಧ್ಯತೆಗಳಿವೆ. ಹಾಗಾಗಿ ನಗರದ ಪ್ರಮುಖ ರಸ್ತೆಯಲ್ಲೇ ಸರ್ಕಲ್ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದರು. ಪುತ್ಥಳಿ ಬಗ್ಗೆ ಈಗಾಗಲೇ ಚರ್ಚೆ ಮಾಡಿದ್ದೇವೆ. ಈ ಸಂಬಂಧ ಹಿಂದೂ ಸಂಘಟನೆಗಳ ಮುಖಂಡರಿಗೆ ಮನವಿ ಮಾಡಿಕೊಡುತ್ತೇವೆ. ಶೀಘ್ರದಲ್ಲೇ ವೃತ್ತ ನಿರ್ಮಾಣ ಮಾಡಿ ಸಾವರ್ಕರ್ ಹೆಸರನ್ನು ನಾಮಕರಣ ಮಾಡುತ್ತೇವೆ ಎಂದು ಹೇಳಿದ್ದಾರೆ.

Read More