Author: main-admin

ಕಾಪು: ಮೂಳೂರಿನಲ್ಲಿ ಮೀನಿನ ವಾಹನಕ್ಕೆ ಟೂರಿಸ್ಟ್ ಬಸ್ ಡಿಕ್ಕಿಯಾದ ಪರಿಣಾಮ ಪಲ್ಟಿಯಾದ ಮೀನಿನ ವಾಹನದಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಟ್ಕಳದಿಂದ ಕೇರಳಕ್ಕೆ ಮೀನು ಸಾಗಾಟ ಮಾಡುತ್ತಿದ್ದ ಗೂಡ್ಸ್ ಟೆಂಪೊಗೆ ಹಿಂದಿನಿಂದ ಬರುತ್ತಿದ್ದ ಕರಾವಳಿಗರೇ ತುಂಬಿದ ಬಸ್ಸು ಡಿಕ್ಕಿಯಾದ ರಭಸಕ್ಕೆ ನಿಯಂತ್ರಣ ಕಳಕೊಂಡ ಗೂಡ್ಸ್ ವಾಹನ ರಸ್ತೆ ವಿಭಜಕ ಏರಿ ಮತ್ತೊಂದು ಪಾಶ್ವಕ್ಕೆ ಹೋಗಿ ಪಲ್ಟಿಯಾಗಿದೆ. ತಕ್ಷಣ ಸ್ಥಳಕ್ಕೆ ಬಂದ ಪಡುಬಿದ್ರಿ ಪೊಲೀಸರು ಹೆಜಮಾಡಿ ಟೋಲ್ ಪ್ಲಾಜಾಕ್ಕೆ ಕರೆ ಮಾಡಿ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಟೋಲ್ ನಲ್ಲಿ ಬಸ್ ತಡೆಯಲಾಯಿತು. ರಸ್ತೆಯಲ್ಲೇ ಪಲ್ಟಿಯಾದ ವಾಹನ ಇದ್ದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಸ್ಥಳಕ್ಕೆ ಆಗಮಿಸಿದ ಕಾಪು ಹಾಗೂ ಪಡುಬಿದ್ರಿ ಪೊಲೀಸರು ವಾಹನ ಸಂಚಾರ ಸುಗಮಗೊಳಿಸಿದ್ದಾರೆ.

Read More

ರಸ್ತೆ ಬದಿಗಳಲ್ಲಿ ಇರುವ ಚಾಟ್ಸ್ ಅಂಗಡಿಗಳಲ್ಲಿ ನಿಂತು ಕ್ಯಾಬೇಜ್​ ಮಂಚೂರಿಯನ್​ ಸವಿಯೋ ಮಜಾನೇ ಬೇರೆ. ಆದರೆ ಕರೊನಾದಿಂದಾಗಿ ಮನೆಯಿಂದ ಹೊರಗೆ ಬರೋಕೂ ನೂರು ಬಾರಿ ಯೋಚನೆ ಮಾಡಬೇಕಾದ ಪರಿಸ್ಥಿತಿ ಬಂದುಬಿಟ್ಟಿದೆ. ಆದರೆ ಈ ಕ್ಯಾಬೇಜ್​ ಮಂಚೂರಿಯನ್​ನ್ನ ನೀವು ಮನೆಯಲ್ಲೇ ಬಹಳ ಆರಾಮಾಗಿ ತಯಾರು ಮಾಡಬಹುದು. ಬೇಕಾಗುವ ಸಾಮಗ್ರಿ: ಕ್ಯಾಬೇಜ್​ – 1 (ಮಧ್ಯಮ ಗಾತ್ರದ್ದು), ಮೈದಾ ಹಿಟ್ಟು – 1/2 ಕಪ್​​, ಜೋಳದ ಹಿಟ್ಟು – 3/4 ಕಪ್​, ಈರುಳ್ಳಿ – 1(ದೊಡ್ಡದು).ಹಸಿ ಮೆಣಸು – 2, ಕೊತ್ತಂಬರಿಸೊಪ್ಪು, 1 ಕಪ್ ಅಡುಗೆ ಎಣ್ಣೆ – 1, ಕಾಳು ಮೆಣಸು ಪುಡಿ – 1/2 ಚಮಚ, ಸೋಯಾ ಸಾಸ್​ – 1 ಚಮಚ , ವಿನೇಗರ್​ – 1 ಚಮಚ, ಶುಂಠಿ ಬೆಳ್ಳುಳ್ಳಿ ಪೇಸ್ಟ್ – 2 ಚಮಚ, ಚಿಟಿಕೆಯಷ್ಟು ರೆಡ್​ ಫುಡ್​ ಕಲರ್​( ಅಗತ್ಯವಿದ್ದರೆ ಮಾತ್ರ), ರುಚಿಗೆ ತಕ್ಕಷ್ಟು ಉಪ್ಪು, ನೀರು ಮಾಡುವ ವಿಧಾನ: ಕ್ಯಾಬೇಜ್​ನ್ನ ಸಣ್ಣಗೆ ತುರಿದು ಚೆನ್ನಾಗಿ ತೊಳೆದುಕೊಳ್ಳಿ .…

Read More

ಕುಂದಾಪುರ: ತಾಲೂಕಿನ ಕರ್ಕುಂಜೆ ಗ್ರಾಪಂ ವ್ಯಾಪ್ತಿಯ ನೇರಳಕಟ್ಟೆ ಅರಳಿಕಟ್ಟೆಯ ಬಾವಿಕಟ್ಟೆಯ ಬಳಿ ಹಾಗೂ ನೇರಳಕಟ್ಟೆಯ ಜಾಡ್ಕಟ್ಟು ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸಮಿಪ ವಾಮನ ಮುದ್ರಿಕೆಯ ಕಲ್ಲುಗಳು ಪತ್ತೆಯಾಗಿವೆ. ಶೈವರು, ವೈಷ್ಣವರು, ಜೈನರ ಆರಾಧನೆಗೆ ಸಂಬಂಧಿಸಿದ ಹಾಗೂ ಅವರ ಆರಾಧನೆಗೆ ಗಡಿಗಳನ್ನು ಗುರುತಿಸುವುದು ಸಹಜ. ಶೈವರ ಗಡಿಗಳಿಗೆ ಲಿಂಗ ಮುದ್ರಿಕೆ ಕಲ್ಲು ಅಥವಾ ಶೈವ ಮುದ್ರಿಕೆ ಕಲ್ಲು, ವೈಷ್ಣವರ ಗಡಿಗಳಿಗೆ ವಾಮನ ಮುದ್ರಿಕೆ ಕಲ್ಲು, ಜೈನರ ಗಡಿಗಳಿಗೆ ಮುಕ್ಕೋಡೆ ಕಲ್ಲುಗಳನ್ನು ಹಾಕುತ್ತಿದ್ದರು. ಈ ಮೂಲಕ ಬಹಳ ಸ್ಪಷ್ಟವಾಗಿ ಅವರವರ ಗಡಿಗಳನ್ನು ಗುರುತಿಸಲು ಸಾಧ್ಯವಾಗುತ್ತಿತ್ತು ಎನ್ನಲಾಗಿದೆ. ನೇರಳಕಟ್ಟೆಯ ಎರಡು ವಾಮನ ಮುದ್ರಿಕೆಯ ಕಲ್ಲುಗಳಲ್ಲಿ ಸೂರ್ಯ ಚಂದ್ರ ಇರುವ ತನಕ ಅಜರಾಮರವಾಗಿರಲಿ ಎಂದು ಸಂದೇಶ ಸಾರುವಂತಹ ಸೂರ್ಯ ಹಾಗೂ ಚಂದ್ರ ಶಿಲ್ಪಕಲೆಯೊಂದಿಗೆ ವ್ಯಕ್ತಿ ಅಂದರೆ ವಾಮನ ಅವರ ಒಂದು ಕೈಯಲ್ಲಿ ಕೊಡೆ ಇನ್ನೊಂದು ಕೈಯಲ್ಲಿ ಕಮಂಡಲವಿದ್ದು ಇದು ವಾಮನ ಶಿಲ್ಪಕಲೆಯಲ್ಲಿ ಸಹಜವಾಗಿ ಕಂಡುಬರುತ್ತದೆ. ಅಂತೆಯೇ ವಾಮನ ಮುದ್ರಿಕೆಯ ಕಲ್ಲಿನ ಅಣತಿ ದೂರದಲ್ಲಿ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನವಿದೆ.…

Read More

ಉಡುಪಿ: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬಣ್ಣದಿಂದ ತಯಾರಿಸಿರುವ ಗೌರಿ ಹಾಗು ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ, ಬಾವಿ ಹಾಗೂ ಇತರೆ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜಿಸುವುದರಿಂದ ನೀರು ಕಲುಷಿತಗೊಂಡು ಜಲಚರಗಳಿಗೆ ಹಾನಿಯುಂಟಾಗುತ್ತದೆ. ಇದನ್ನು ತಪ್ಪಿಸಲು ಜೇಡಿಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗೌರಿ ಗಣೇಶ ಚತುರ್ಥಿ ಆಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ವಿಷಕಾರಿ ರಾಸಾಯನಿಕ, ಲೋಹಲೇಪದ ಪ್ಲಾಸ್ಟರ್ ಆಫ್ ಪ್ಯಾರಿಸ್‌ನ ಗಣೇಶನ ಮೂರ್ತಿ ಬಳಕೆ ಮಾಡದೆ, ಸಾದಾ ಜೇಡಿಮಣ್ಣಿನಿಂದ ತಯಾರಿಸಿದ, ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣದಿಂದ ತಯಾರಿಸಿದ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಬಹುದಾಗಿದೆ. ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದೇ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು. ಬಾವಿ, ಕೆರೆ ಹಾಗೂ ಹೊಳೆಗಳಲ್ಲಿ ಗಣಪತಿ ವಿಗ್ರಹಗಳನ್ನು ವಿಸರ್ಜನೆ ಮಾಡುವುದರಿಂದ ಅಂತರ್ಜಲ, ಕುಡಿಯುವ ನೀರಿನ ಸೆಲೆಗಳು ಹಾಳಾಗುತ್ತದೆ. ಆದ್ದರಿಂದ ಬಕೆಟ್‌ನಲ್ಲಿ ಮೂರ್ತಿಯನ್ನು ವಿಸರ್ಜಿಸಬೇಕು ಅಥವಾ ಸೂಚಿತ ಕೆರೆಗಳಲ್ಲಿ…

Read More

ಮಂಗಳೂರು: ಸರ್ಕಾರ ಹಾಗೂ ಹೈಕೋರ್ಟ್ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಿ ಗಣೇಶ ಹಬ್ಬವನ್ನು ಆಚರಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಯವರು ಜಿಲ್ಲೆಯ ಗಣೇಶೋತ್ಸವ ಸಮಿತಿಗಳ ಮುಖಂಡರಿಗೆ ಸಲಹೆ ನೀಡಿದರು. ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಈ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುವ ಸಮಿತಿಗಳು ಆಯಾ ವ್ಯಾಪ್ತಿಯ ಪೊಲೀಸ್ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಪಂಗಳಿಂದ ಅನುಮತಿ ಪಡೆಯಬೇಕು. ಸೌಹಾರ್ದತೆ ಹಾಗೂ ಸಾಮಾಜಿಕ ಸ್ವಾಸ್ಥ್ಯ ಕದಡುವ ಬರಹವುಳ್ಳ ಬ್ಯಾನರ್ ಅಳವಡಿಕೆ ಬೇಡ. ಶುಭ ಕೋರುವ ಬ್ಯಾನರ್ ಗಳನ್ನು ಅನುಮತಿ ಪಡೆದು ಅಳವಡಿಸಬೇಕು ಎಂದು ಹೇಳಿದರು. ಮಳೆಗಾಲದ ಹಿನ್ನೆಲೆಯಲ್ಲಿ ಹಾನಿಯಾಗದಂತಹ ಪೆಂಡಾಲ್‍ಗಳನ್ನು ಹಾಕಬೇಕು. ವಿದ್ಯುತ್ ಅವಘಡಗಳಾಗದಂತೆ ಎಚ್ಚರ ವಹಿಸಬೇಕು. ವಿದ್ಯುತ್ ಸಂಪರ್ಕ ಪಡೆಯಲು ತಾತ್ಕಾಲಿಕ ಅನುಮತಿ ಪಡೆಯಬೇಕು. ಬೃಹತ್ ಗಾತ್ರದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಸಮಿತಿಗಳು ಕಡ್ಡಾಯವಾಗಿ ಸಿಸಿಟಿವಿಯನ್ನು ಅಳವಡಿಸಿಕೊಳ್ಳಬೇಕು. ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು. ಧ್ವನಿ ವರ್ಧಕಗಳನ್ನು ಬಳಸುವ ಮುನ್ನ ಸಂಬಂಧಪಟ್ಟವರಿಂದ ಅನುಮತಿ ಪಡೆಯಬೇಕು. ನ್ಯಾಯಾಲಯದ ಆದೇಶದಂತೆ…

Read More

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆ ಪ್ರಕರಣಗಳು ದಿನೇ ದಿನೇ ಹೆಚ್ಚಾದಂತೆ ಕಾಣುತ್ತಿದೆ. ಇದೀಗ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾಜಶೇಖರ್ ವಂದಲಿ ಅವರು ಇತರ ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿ ಇದ್ದ ವೇಳೆ ಮಣಿಪಾಲದ ಆರ್.ಟಿ.ಓ ಕಛೇರಿ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ವಿದ್ಯಾರತ್ನ ನಗರದ ನಿವಾಸಿಯಾದ ತೆಲಂಗಾಣ ಮೂಲದ ರಿಶಿತ್ ಶಿವಕುಮಾರ್ ವಡ್ಡೆಪಳ್ಳಿ (21), ಮಣಿಪಾಲ ಕಾಯಿನ್ ಸರ್ಕಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಕೊಡಗು ಜಿಲ್ಲೆಯ ನಕುಲ್ ಪೊನ್ನಪ್ಪ (21), ಈಶ್ವರ ನಗರ ನಿವಾಸಿ ಬಿಹಾರ ಮೂಲದ ಅನುರಾಗ್ ಕುಮಾರ್ (20) ಎಂಬ ಮೂವರನ್ನು ಮಾದಕ ವಸ್ತು ಸೇವಿಸಿರುವ ಅನುಮಾನದ ಮೇರೆಗೆ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು.ಇವರ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು: ಪ್ರತಿಷ್ಠಿತ ಮಠವೊಂದರ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದ ಆರೋಪ ಕೇಳಿ ಬಂದಿದ್ದು, ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರಕ್ಕೆ ದೂರು ನೀಡಿದ್ದಾರೆ. ಮಠದ ಉಚಿತ ಹಾಸ್ಟೆಲ್ ನಲ್ಲಿ ಇರುವ ಪ್ರೌಢಶಾಲೆಯ ಕೆಲವು ವಿದ್ಯಾರ್ಥಿನಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮಠದ ಪ್ರೌಢಶಾಲೆಯಲ್ಲಿ ಓದುವ ವಿದ್ಯಾರ್ಥಿನಿಯರು ಉಚಿತ ಹಾಸ್ಟೆಲ್ ನಲ್ಲಿ ವಾಸವಾಗಿದ್ದು, ಸರದಿಯಂತೆ ಸ್ವಾಮೀಜಿ ಬಳಿಗೆ ವಿದ್ಯಾರ್ಥಿನಿಯರು ಹೋಗಬೇಕು. ಒಪ್ಪದಿದ್ದಾಗ ಹಾಸ್ಟೆಲ್ ವಾರ್ಡನ್, ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿ ಕಿರುಕುಳ ನೀಡುತ್ತಾರೆ ಎನ್ನಲಾಗಿದೆ. ಹಣ್ಣು ಮತ್ತು ಸಿಹಿ ಕೊಟ್ಟು ಆಶೀರ್ವಾದ ಮಾಡುವ ನೆಪದಲ್ಲಿ ಏಕಾಂತಕ್ಕೆ ಕರೆಸಿಕೊಳ್ಳುವ ಸ್ವಾಮೀಜಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಾರೆ. ಕುಟುಂಬದವರ ಮಾಹಿತಿ ಪಡೆದುಕೊಂಡು ಕಷ್ಟದಲ್ಲಿರುವ ಪೋಷಕರಿಗೆ ಸಹಾಯ ಮಾಡುವುದಾಗಿ ಭರವಸೆ ನೀಡಿ ಲೈಂಗಿಕವಾಗಿ ಬಳಸಿಕೊಳ್ಳುತ್ತಾರೆ ಎಂದು ಹೇಳಲಾಗಿದೆ. ಯಾರಿಗಾದರೂ ವಿಷಯ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಬಲವಂತದ ಲೈಂಗಿಕ ಕ್ರಿಯೆ ನಂತರ ಸ್ವಾಮೀಜಿ…

Read More

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ಸೆ. 9ರಂದು ಮಧ್ಯಾಹ್ನ 12 ಗಂಟೆಗೆ ನಿಗದಿಯಾಗಿದೆ. ಇನ್ನು ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ ಎಂದು ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ. ಕಳೆದ ಮಾರ್ಚ್‌ 2ರಂದು ನಡೆಯಬೇಕಾಗಿದ್ದ ಚುನಾವಣೆಯು ಸುಪ್ರೀಂ ಕೋರ್ಟ್‌ ಆದೇಶವೊಂದರ ಗೊಂದಲದಿಂದ ಮುಂದೂಡಿಕೆಯಾಗಿತ್ತು. ಹೀಗಾಗಿ ಒಂದು ವರ್ಷ ಅವಧಿ ಪೂರ್ಣಗೊಳಿಸಿದ್ದ ಪ್ರೇಮಾನಂದ ಶೆಟ್ಟಿ ಅವರೇ ಮೇಯರ್ ಸ್ಥಾನದಲ್ಲಿ ಹಾಗೂ ಸುಮಂಗಳಾ ರಾವ್ ಉಪಮೇಯರ್ ಸ್ಥಾನದಲ್ಲಿ ಮುಂದುವರಿದಿದ್ದರು. ಹಾಲಿ ಮೇಯರ್ ಅವಧಿ ಮುಂದುವರಿದಿರುವ ಕಾರಣ ಹಾಲಿ ಬಿಜೆಪಿ ಆಡಳಿತದ ಕೊನೆಯ ಮೇಯರ್ ಅವರ ಅಧಿಕಾರವಧಿ ಅಷ್ಟು ದಿನ ಕಡಿತವಾಗಲಿದೆ. 23ನೇ ಅವಧಿಗೆ ಮೇಯರ್ ಸ್ಥಾನಕ್ಕೆ ಸಾಮಾನ್ಯ, ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗದ ಮಹಿಳೆಗೆ ಮೀಸಲಾತಿ ನಿಗದಿಯಾಗಿತ್ತು. ಈ ನಡುವೆ ಆಗಸ್ಟ್ 24ರಂದು ಪಾಲಿಕೆಯ 24ನೇ ಅವಧಿಯ ಮೀಸಲಾತಿ ಪ್ರಕಟಗೊಂಡಿದೆ.…

Read More

ಉಪ್ಪಿನಂಗಡಿ: ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಮರ ಕಡಿದು ಅಲ್ಲೇ ತುಂಡುಗಳನ್ನಾಗಿ ಮಾಡಿ ಸಾಗಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಪ್ರಕರಣ ವನ್ನು ಪತ್ತೆಹಚ್ಚಿದ ಉಪ್ಪಿನಂಗಡಿ ವಲಯ ಅರಣ್ಯ ಇಲಾಖಾ ಸಿಬ್ಬಂದಿಗಳು, ಬೆಳೆಬಾಳುವ ದಿಮ್ಮಿ ಸಹಿತ ಮೂವರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಪದ್ಮುಂಜ ನಿವಾಸಿ ಗಳಾದ ದಿನೇಶ್, ಉಮೇಶ್ ಗೌಡ ಹಾಗೂ ಹೇಮಂತ್ ಎಂದು ಗುರುತಿಸಲಾಗಿದೆ. ಬಂಧಿತರು ಕಣಿಯೂರು ಗ್ರಾಮದ ಮಲೆಂಗಲ್ಲು ಎಂಬಲ್ಲಿ ರುವ ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಬೃಹತ್ ಗಾತ್ರದ ಕಲ್ಬಾಜಿ ಮರವನ್ನು ಕಡಿಯು ತ್ತಿರುವ ಬಗ್ಗೆ ಉಪ್ಪಿನಂಗಡಿ ವಲಯ ಅರಣ್ಯಾ ಧಿಕಾರಿ ಮಧುಸೂದನ್‍ರವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅರಣ್ಯ ಸಿಬ್ಬಂದಿ ಮರದ ದಿಮ್ಮಿ ಸಮೇತ ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳು ಮರವನ್ನು ಯಂತ್ರದ ಮೂಲಕ ಉರುಳಿಸಿ, ಬಳಿಕ ಕಾಡಿನ ಒಳಗಡೆ ಅವುಗಳನ್ನು ದಿಮ್ಮಿಗಳನ್ನಾಗಿ ಮಾಡಿ ಸಾಗಾಟ ಮಾಡಲು ತಯಾರಿ ನಡೆಸಿಕೊಂಡಿದ್ದು, ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಯಂತ್ರಗಳ ಸಹಿತ ಮರಗಳ ದಿಮ್ಮಿಗಳನ್ನು ವಶಕ್ಕೆ…

Read More

ಉಡುಪಿ: ಉಡುಪಿಯಲ್ಲಿ ಹಲವು ವರ್ಷಗಳಿಂದ ಮೆಕ್ಯಾನಿಕ್ ಆಗಿ ಜೀವನ ನಿರ್ವಹಿಸುತ್ತಿದ್ದ ಬಾದಾಮಿ ಮೂಲದ ಅಯ್ಯಪ್ಪ (28) ಎಂಬವರು ಗುರುವಾರ ಹಠಾತ್ ಹೃದಯಾಘಾತದಿಂದ ಮೃತ ಪಟ್ಟಿದ್ದು, ಸಾಂತ್ವನ ಹೇಳಬೇಕಾದ ಬಾಂಧವರು ಮೃತನ ಪತ್ನಿ ಹಾಗೂ ಮಗುವನ್ನು ತಿರಸ್ಕರಿಸಿದ ಅಮಾನವೀಯ ಘಟನೆ ನಡೆದಿದೆ.ಈ ಬಗ್ಗೆ ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಸ್ಥಳಕ್ಕೆ ಧಾವಿಸಿ ಮೃತನ ಪತ್ನಿ ಹಾಗೂ ಆಕೆಯ 20 ದಿನಗಳ ಮಗುವನ್ನು ಉಡುಪಿಯ ಸಖಿ ಸೆಂಟರ್‌ಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಮೃತ ಅಯ್ಯಪ್ಪ ಅವರ ಪತ್ನಿಗೆ ಹೆರಿಗೆಯಾಗಿ 20 ದಿನಗಳಷ್ಟೇ ಕಳೆದಿದ್ದು, ವಿಧಿಯ ಲೀಲೆಗೆ ಕುಟುಂಬ ತತ್ತರಿಸಿದೆ. ಪ್ರಕರಣದ ಹಿನ್ನಲೆ : ಅಯ್ಯಪ್ಪ ಅವರು ಉಡುಪಿಯಲ್ಲಿ ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದು, ಗುರುವಾರ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಾಗ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ಅಯ್ಯಪ್ಪ ಅವರು ಎರಡು ವರ್ಷಗಳ ಹಿಂದೆ ಗಂಗಾವತಿಯ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ಇವರ ಮದುವೆಗೆ ಎರಡೂ ಕಡೆಯಿಂದಲೂ ತೀವ್ರ…

Read More