ಮಂಗಳೂರು : ಪ್ಲ್ಯಾಟ್ ಕೊಡಿಸುತ್ತೇನೆಂದು 60ಲಕ್ಷ ರೂ. ವಂಚನೆಗೈದ ಬಿಲ್ಡರ್ ಸೇರಿದಂತೆ ಮೂವರಿಗೆ ಎರು ವರ್ಷ ಜೈಲು ಶಿಕ್ಷೆ ಹಾಗೂ ತಲಾ 5ಸಾವಿರ ದಂಡ ವಿಧಿಸಿ ದ.ಕ.ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಮಂಗಳೂರಿನ ಎಂ.ಕೆ. ಬಿಲ್ಡರ್ ಪಾಲುದಾರ ಕೃಷ್ಣರಾಜ ಮಯ್ಯ(49), ಕದ್ರಿ ಕಂಬಳ ಕ್ರಾಸ್ ರಸ್ತೆ ನಿವಾಸಿಗಳಾದ ರಾಮಚಂದ್ರ ಕೆ.ಎಸ್.(71), ಮಯೂರ್ ಆರ್.ಎಸ್.(34) ಶಿಕ್ಷೆಗೊಳಗಾದವರು. ಆರೋಪಿಗಳು ಪ್ಲ್ಯಾಟ್ ಕೊಡಿಸುತ್ತೇವೆ ಎಂದು ನಂಬಿಸಿ 79ವರ್ಷದ ಪದ್ಮನಾಭ ರಾವ್ ಎಂಬವರಿಂದ 60ಲಕ್ಷ ರೂ. ಪಡೆದು ಫ್ಲ್ಯಾಟ್ ನೀಡದೆ ವಂಚಿಸಿದ್ದಾರೆ. ಈ ಬಗ್ಗೆ ಸಂತ್ರಸ್ತ ಪದ್ಮನಾಭ ರಾವ್ ಅವರು ದ.ಕ.ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ನೀಡಿದ್ದಾರೆ. ದೂರನ್ನು ಪರಿಶೀಲಿಸಿದ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು 2023ರ ಮಾರ್ಚ್ 31ರೊಳಗಾಗಿ ವಂಚನೆಗೈದ 60 ಲಕ್ಷ ರೂ. ಹಣವನ್ನು ದೂರುದಾರರಿಗೆ ವಾಪಸ್ ನೀಡಬೇಕೆಂದು ಆದೇಶಿಸಿತ್ತು. ಆದರೂ ಆರೋಪಿಗಳು ಪರಿಹಾರದ ಹಣ ನೀಡದಿದ್ದಾಗ ಅರ್ಜಿದಾರರು ಮತ್ತೆ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಮೊರೆ ಹೋಗಿದ್ದಾರೆ.…
Author: main-admin
ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕರು ಹಾಗೂ ಅದರ ಮಾಲಕರ ವಿರುದ್ಧ ಪ್ರಕರಣ ದಾಖಲಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ.ಸಜೀಪಮುನ್ನೂರಿನ ಸರ್ಫರಾಜ್ ಅಹಮ್ಮದ್, ಕುಲಾಲು ನಿವಾಸಿ ಅಬ್ದುಲ್ ಅಜೀಜ್, ಕುರಿಯಾಳದ ಕಿರಣ್, ಅಮ್ಟಾಡಿ ನಿವಾಸಿ ಅವಿಲ್ ಕ್ರಾಸ್ಟಾ, ಮಂಚಿ ನಿವಾಸಿ ಮೊಹಮ್ಮದ್ ಇಸ್ಮಾಯಿಲ್ / ರಶೀದ್, ಬಿ. ಮೂಡದ ಮೊಹಮ್ಮದ್ ಆರೀಫ್, ವಳಚ್ಚಿಲ್ ನ ಸತ್ತಾರ್, ಅಜರುದ್ಧೀನ್ ವಿರುದ್ಧ ಪ್ರಕರಣ ದಾಖಲಾಗಿದೆ. ಫೆ.12 ರಂದು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ರಾಮಕೃಷ್ಣ ರವರು ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ತಲಪಾಡಿ ಎಂಬಲ್ಲಿ ತಪಾಸಣೆಗಾಗಿ ಟಿಪ್ಪರ್ ಲಾರಿಗಳನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ, ಸದ್ರಿ ಲಾರಿಗಳಲ್ಲಿ ಮರಳು ತುಂಬಿಸಿ ಸಾಗಾಟ ಮಾಡುತ್ತಿರುವುದು ಕಂಡುಬಂದಿರುತ್ತದೆ.ಈ ಬಗ್ಗೆ ಲಾರಿಗಳ ಚಾಲಕರಲ್ಲಿ ವಿಚಾರಿಸಿದಾಗ ಅವರುಗಳು ಯಾವುದೇ ದಾಖಲೆ/ಪರವಾನಿಗೆ ಪಡೆಯದೇ, ವಳಚ್ಚಿಲ ಎಂಬಲ್ಲಿಂದ ಮರಳು ತುಂಬಿಸಿ ಸಾಗಾಟ ಮಾಡುತ್ತಿರುವುದಾಗಿ ತಿಳಿಸಿದ್ದು, ಮುಂದಿನ ಕಾನೂನುಕ್ರಮಕ್ಕಾಗಿ ಸದ್ರಿ ಲಾರಿಗಳನ್ನು, ಅದರಲ್ಲಿ ತುಂಬಿಸಿದ್ದ ಮರಳಿನೊಂದಿಗೆ…
ಬಂಟ್ವಾಳ : ರೋಡ್ ರೋಲರ್ ವಾಹನವನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ರೈಲ್ವೆ ಓವರ್ ಬ್ರಿಡ್ಜ್ ನ ಅಡಿಭಾಗದಲ್ಲಿ ಸಿಲುಕಿಕೊಂಡ ಘಟನೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ನಡೆದಿದೆ.ಬೆಂಜನಪದವು ಸೈಟ್ ನಿಂದ ಪುತ್ತೂರು ಸವಣೂರು ಎಂಬಲ್ಲಿ ನಡೆಯಲಿರುವ ಕಾಮಗಾರಿಗೆ ರೋಲರ್ ನ್ನು ಲಾರಿಯಲ್ಲಿ ತುಂಬಿಸಿ ಕೊಂಡು ಹೋಗುವ ವೇಳೆ ಮೊಡಂಕಾಪು ಎಂಬಲ್ಲಿ ರೈಲ್ವೆ ಯ ಅಡಿಭಾಗದಲ್ಲಿ ಕ್ರಾಸ್ ಮಾಡಲು ಸಾಧ್ಯವಾಗದೆ ಸಿಲುಕಿಕೊಂಡಿದೆ. ರೈಲ್ವೆಯ ಓವರ್ ಬ್ರಿಡ್ಜ್ ನ ಎತ್ತರಕ್ಕಿಂತ ಅಧಿಕ ಎತ್ತರದಲ್ಲಿ ಲಾರಿಯ ಲೋಡ್ ಮಾಡಿಕೊಂಡಿದ್ದೇ ಈ ಘಟನೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ.ಘಟನೆಯಿಂದ ರೈಲ್ವೆ ಇಲಾಖೆ ಗೆ ಸೇರಿದ ಕಬ್ಬಿಣದ ರಾಡ್ ತುಂಡಾಗಿ ಲಾರಿಯ ಮೇಲೆ ಬಿದ್ದಿದೆ ಅದೃಷವಶಾತ್ ಬೇರೆ ಯಾವುದೇ ವಾಹನಗಳಮೇಲೆ ಬೀಳದೆ ಇದ್ದು, ಯಾವ ಅಪಾಯಕಾರಿ ಘಟನೆ ನಡೆದಿಲ್ಲ. ಸ್ಥಳಕ್ಕೆ ರೈಲ್ವೆ ಇಲಾಖೆಯವರು ಆಗಮಿಸಿದ್ದು, ಘಟನೆಯಿಂದ ಆಗಿರುವ ನಷ್ಟಕ್ಕೆ ಪರಿಹಾರದ ಬಗ್ಗೆ ಲಾರಿಯವರಲ್ಲಿ ಮಾತುಕತೆ ನಡೆಸುತ್ತಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ಸಂಚಾರಕ್ಕೆ ಅಡಚಣೆಯಾಗಿದ್ದಯ,ಮೆಲ್ಕಾರ್ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ…
ಬೆಂಗಳೂರು : ಇತ್ತೀಚಿಗೆ ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸುವುದು ಹೆಚ್ಚಾಗಿದೆ. ಬೈಕ್ ಅನ್ನು ಸರಿಯಾಗಿ ಬ್ಯಾಲೆನ್ಸ್ ಮಾಡಲು ಬರದಿದ್ದರೂ, ಸಂಚಾರಿ ನಿಯಮಗಳ ಬಗ್ಗೆ ಅರಿವು ಇರದಿದ್ದರೂ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಓಡಿಸುತ್ತಾರೆ. ಇದರಿಂದ ಅಪಘಾತ ಸಂಭವಿಸಿ ಜೀವಕ್ಕೆ ಕುಂದು ತಂದುಕೊಳ್ಳುತ್ತಾರೆ. ನಿಯಮ ಮೀರಿ ವಾಹನ ಚಲಾಯಿಸಿ ಅಪಘಾತ ಮಾಡಿದ ಆರು ಅಪ್ರಾಪ್ತ ವಯಸ್ಕರ ಪೋಷಕರಿಗೆ ತಲಾ 25 ಸಾವಿರ ರೂ. ದಂಡ ವಿಧಿಸಲಾಗಿದೆ. ಈ ಎಲ್ಲ ಅಪಘಾತಗಳು 2022-23 ರಲ್ಲಿ ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಯಾವುದೂ ಮಾರಣಾಂತಿಕವಾಗಿಲ್ಲ. ಈ ಆರು ಅಪ್ರಾಪ್ತ ವಯಸ್ಕರ ಪೋಷಕರು ನ್ಯಾಯಾಲಯದ ಮುಂದೆ ಹಾಜರಾಗಿದ್ದು, ಅಪ್ರಾಪ್ತರಿಗೆ ತಮ್ಮ ವಾಹನಗಳನ್ನು ಚಲಾಯಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಕೋರ್ಟ್ ತಲಾ 25,000 ರೂ. ದಂಡವನ್ನು ವಿಧಿಸಿದೆ. ಪೋಷಕರು ಈಗ ಒಟ್ಟು 1.5 ಲಕ್ಷ ರೂ. ದಂಡವನ್ನು ಪಾವತಿಸಿದ್ದಾರೆ. “ಅಪ್ರಾಪ್ತ ವಯಸ್ಕರಿಗೆ ವಾಹನ ಚಲಾಯಿಸಲು ಅವಕಾಶ ನೀಡಿದರೆ ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ. ಶಾಲೆಗಳು ಮತ್ತು ಶಿಕ್ಷಣ…
ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಅಬ್ದುಲ್ ಮಜೀದ್ ಅವರ ಮಗ ಮಹಮ್ಮದ್ ಸಮೀವುಲ್ಲಾ ಹಾಗೂ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕಂಚಿಲ ನಿವಾಸಿ ಮೋಯ್ದು ಕುಂಞಿ ಅವರ ಮಗ ಇಬ್ರಾಹಿಂ ಬಂಧಿತ ಆರೋಪಿಗಳು.ಫೆ.12 ರಂದು ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ಬಿ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷರಾದ ಮೂರ್ತಿ ಸಿಬ್ಬಂದಿಗಳಾದ ಹೆಚ್ ಸಿ ಕೃಷ್ಣ ಮತ್ತು ಪಿ ಸಿ ಯೋಗೇಶ್ ಡಿ ಎಲ್ , ಪುನೀತ್ ರವರು ಮಾಹಿತಿ ಸಂಗ್ರಹಿಸಿ ಬೆಂಗಳೂರಿನಿಂದ ದಸ್ತಗಿರಿ ಮಾಡಿದ್ದಾರೆ.ಆರೋಪಿಗಳನ್ನು ಮಂಗಳೂರಿನ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಜರು ಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನದ ವಿಧಿಸಿದೆ.
ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಬಾರಿ ಅಧಿಕಾರಕ್ಕೇರಿದ ಬಳಿಕ ಮಂಡಿಸಿದ ಮೊದಲ ರಾಜ್ಯ ಬಜೆಟ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಹಲವು ಘೋಷಣೆಗಳನ್ನು ಮಾಡಿತ್ತು. ಈ ಘೋಷಣೆಯಲ್ಲಿ ಅರ್ಧದಷ್ಟು ಘೋಷಣೆಗಳು ಜಾರಿಯಾಗಿದ್ದರೆ, ಇನ್ನೂ ಹಲವು ಘೋಷಣೆಗಳು ಜಾರಿಗೆ ಬಾಕಿ ಉಳಿದಿವೆ. ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ 7 ಘೋಷಣೆಗಳನ್ನು ಮಾಡಲಾಗಿತ್ತು. ಅವುಗಳಲ್ಲಿ 4 ಘೋಷಣೆಗಳು ಮೀನುಗಾರಿಕೆಗೆ ಸಂಬಂಧಪಟ್ಟವುಗಳಾಗಿವೆ. ಘೋಷಣೆಗಳ ಸ್ಥಿತಿ ಏನು? : 1. ಮೀನುಗಾರ ಮಹಿಳೆಯರಿಗೆ ಬ್ಯಾಂಕುಗಳಲ್ಲಿ ಬಡ್ಡಿ ರಹಿತವಾಗಿ ನೀಡುವ ಸಾಲದ ಮಿತಿ 50 ಸಾವಿರದಿಂದ 3 ಲಕ್ಷ ರೂ. ವರೆಗೆ ಹೆಚ್ಚಳ – ಈ ಘೋಷಣೆ ಜಾರಿಯಾಗಿದ್ದು, ಪ್ರಸಕ್ತ ಮೀನುಗಾರ ಮಹಿಳೆಯರು ಬ್ಯಾಂಕುಗಳಲ್ಲಿ ಬಡ್ಡಿ ರಹಿತವಾಗಿ 3 ಲಕ್ಷ ರೂ ವರೆಗೆ ಸಾಲ ಪಡೆಯುತ್ತಿದ್ದಾರೆ. 2. ಮೀನುಗಾರ ದೋಣಿಗಳಿಗೆ ರಿಯಾಯಿತಿ ದರದ ಡೀಸೆಲ್ ಅನ್ನು 2 ಲಕ್ಷ ಕಿಲೋಮೀಟರ್ ವರೆಗೆ ಹೆಚ್ಚಿಸಲು 250 ಕೋಟಿ ರೂ. ನೆರವು – ಈ ಘೋಷಣೆ ಜಾರಿಯಾಗಿದ್ದು, ಮೀನುಗಾರರು 2 ಲಕ್ಷ ಕಿಲೋಮೀಟರ್ ವರೆಗೆ ರಿಯಾಯತಿ…
ಬೆಳ್ತಂಗಡಿ ಸಮೀಪದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾಳೆ. ಧರ್ಮಸ್ಥಳದ ಪಿಜತ್ತಡ್ಕದ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ ಎಂದು ತಿಳಿಯಲಾಗಿದೆ. ಫೆ.7ರಂದು ವಿಷ ಸೇವಿಸಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಇಂದು ಮುಂಜಾನೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಈಕೆಗೆ ಡ್ರಾಯಿಂಗ್ ಶಿಕ್ಷಕ ಇಲ್ಲಸಲ್ಲದ ಆರೋಪ ಮಾಡಿ ಇನ್ನೊಂದು ವಿದ್ಯಾರ್ಥಿನಿಗೆ ಮಾಡಿದ ಮೆಸೇಜ್ ನಿಂದ ಅವಮಾನಗೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಮಂಗಳೂರು: ಶಾಲೆಯೊಂದರ ಶಿಕ್ಷಕಿಯೊಬ್ಬರು ಹಿಂದೂ ಧರ್ಮ, ಶ್ರೀರಾಮ, ಅಯೋಧ್ಯೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು, ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬೆನ್ನಲ್ಲೇ ಶಿಕ್ಷಕಿಯನ್ನು ಅಮಾನತುಗೊಳಿಸಿ ಶಾಲಾ ಆಡಳಿತ ಮಂಡಳಿ ಆದೇಶಿಸಿದೆ. ಮಂಗಳೂರಿನ ಸಂತ ಜೆರೋಸಲಾ ಶಾಲೆಯಲ್ಲಿನ 7ನೇ ತರಗತಿ ಶಿಕ್ಷಕಿ ಸಿಸ್ಟರ್ ಪ್ರಭಾ ಎಂಬುವರು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು. ಶಿಕ್ಷಕಿಯ ಹೇಳಿಕೆ ಖಂಡಿಸಿ ಶಾಸಕ ವೇದವ್ಯಾಸ ಕಾಮತ್ ಜೊತೆಗೂಡಿ ಹಿಂದೂ ಕಾರ್ಯಕರ್ತರು ಶಾಲೆಯ ಬಳಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಮುತ್ತಿಗೆಗೂ ಯತ್ನಿಸಿದ್ದರು. ಈ ಘಟನೆಯ ನಂತ್ರ ಸಂತ ಜೆರೋಸಲಾ ಶಾಲೆಯ ಆಡಳಿತ ಮಂಡಳಿಯು 7ನೇ ತರಗತಿ ಶಿಕ್ಷಕಿ ಪ್ರಭಾ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ. ಈ ಮೂಲಕ ತಾತ್ಕಾಲಿಕವಾಗಿ ಪ್ರಕರಣಕ್ಕೆ ಬ್ರೇಕ್ ನೀಡಲಾಗಿದೆ.
ಕೇರಳ: ಭಾರತವನ್ನು ಉಳಿಸಿದ್ದಕ್ಕಾಗಿ ಗೋಡ್ಸೆ ಬಗ್ಗೆ ಹೆಮ್ಮೆ ಪಡಬೇಕು ಎಂದು ಕೇರಳದ ಶಿಕ್ಷಕಿಯೋರ್ವರು ಫೆಸ್ ಬುಕ್ ನಲ್ಲಿ ಕಮೆಂಟ್ ಮಾಡಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ಹತ್ಯೆ ಮಾಡಿರುವ ನಾಥೂರಾಮ್ ಗೋಡ್ಸೆಯನ್ನು ವೈಭವೀಕರಿಸಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಪ್ರಾಧ್ಯಾಪಕಿ ಶೈಜಾ ಕಮೆಂಟ್ ಮಾಡಿದ್ದಾರೆ. ಹೀಗಾಗಿ ಮಹಿಳೆಯ ವಿರುದ್ಧ ತನಿಖೆಗಾಗಿ ಕ್ಯಾಲಿಕಟ್ ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಸಮಿತಿಯನ್ನು ರಚಿಸಲಾಗಿದೆ.ವಕೀಲ ಕೃಷ್ಣ ರಾಜ್ ಎಂಬವರ “ನಾಥೂರಾಮ್ ವಿನಾಯಕ್ ಗೋಡ್ಸೆ ಭಾರತದಲ್ಲಿ ಅನೇಕರ ಹೀರೋ ಎಂದು ಗೋಡ್ಸೆ ಎಂಬ ಪೋಸ್ಟ್ ಗೆ ಶಿಕ್ಷಕಿ ಕಮೆಂಟ್ ಮಾಡಿದ್ದಾರೆ.
ಬಂಟ್ವಾಳ: ಮರ ಸಾಗಿಸುತ್ತಿದ್ದ ಟ್ರಕ್ ಮತ್ತು ಆಟೋರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ರಾತ್ರಿ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಪೊಳಲಿ ಬೆಳಂದೂರು ನಿವಾಸಿ ರಿಕ್ಷಾ ಚಾಲಕ ಚೇತನ್ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಚೇತನ್ ಬಡ್ಡಕಟ್ಟೆಯಿಂದ ಜಕ್ರಿಬೆಟ್ಟು ಕಡೆಗೆ ಹೋಗುತ್ತಿದ್ದ ವೇಳೆ ಬಂಟ್ವಾಳ ಜಕ್ರಿಬೆಟ್ಟು ಪಂಪ್ ಹೌಸ್ ಮುಂದೆ ಬಂಟ್ವಾಳ ಪೇಟೆಯಿಂದ ಹೆದ್ದಾರಿಗೆ ಕ್ರಾಸ್ ಮಾಡುವ ವೇಳೆ ಬೆಳ್ತಂಗಡಿ ಕಡೆಯಿಂದ ಮರದ ದಿಮ್ಮಿಗಳನ್ನು ಹೇರಿಕೊಂಡು ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ರಿಕ್ಷಾ ಸಂಪೂರ್ಣ ಜಖಂ ಗೊಂಡಿದೆ.ಆದರೆ ಚಾಲಕ ಚೇತನ್ ಅವರ ಕಾಲಿಗೆ ಬಲವಾದ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದಾರೆ.










