Author: main-admin

ಜಯಪುರ: ಟೀ ಪ್ಲಾಂಟೇಷನ್​ ಸೇರಿ ಕಾಡಂಚಿನ ನಿವಾಸಿಗಳಿಗೆ ಕಾಟ ಕೊಡುತ್ತಿದ್ದ ಗಂಡಾನೆಯನ್ನು ಹೆಣ್ಣಾನೆ ಮೂಲಕ ಹನಿಟ್ರ್ಯಾಪ್‌ ಮಾಡಿಸಿದ್ರೂ ಒಂದು ರಾತ್ರಿ ಕಳೆದು ಎಸ್ಕೇಪ್‌ ಆಗಿದೆ. ಮೇಗುಂದಾ ಹೋಬಳಿ ಹೇರೂರು ಗ್ರಾಮ ಪಂಚಾಯಿತಿ ಎಲೆಮಡಿಲು ಬಳಿಯ ಬಾಲನೂರ್ ಟೀ ಪ್ಲಾಂಟೇಷನ್​ನಲ್ಲಿ ಹಾವೇರಿ ಟಸ್ಕರ್ ಕಾಡಾನೆ ಸೆರೆ ಹಿಡಿಯುವ ಅರಣ್ಯ ಇಲಾಖೆ ಕಾರ್ಯಾಚರಣೆಗೆ ಟೀ ಎಸ್ಟೇಟ್​ನ ಮುತ್ತು ಮಾರಿಯಮ್ಮ ದೇವಾಲಯದ ಬಳಿ ಹೆಣ್ಣಾನೆ ಭಾನುಮತಿಯನ್ನು ಭಾನುವಾರ ರಾತ್ರಿಯೇ ಬಿಡಲಾಗಿತ್ತು. ರಾತ್ರಿ ಬಂದ ಕಾಡಾನೆ ಹಾವೇರಿ ಟಸ್ಕರ್ ಸೋಮವಾರ ಬೆಳಗ್ಗೆ 7.30ರ ವರೆಗೆ ಭಾನುಮತಿಯೊಂದಿಗೆ ಕಾಲ ಕಳೆದಿತ್ತು. ಬೆಳಗಾಗುತ್ತಿದ್ದಂತೆ ಕಾಡಾನೆ ಅಲ್ಲಿಂದ ಎಲೆಮಡಿಲು ಗುಡ್ಡಕ್ಕೆ ಕಾಲ್ಕಿತ್ತಿದೆ. ಸೋಮವಾರ ರಾತ್ರಿ ಮತ್ತೆ ಭಾನುಮತಿಯನ್ನು ದೇವಸ್ಥಾನದ ಬಳಿ ಬಿಡಲಾಯಿತಾದರೂ ಕಾಡಾನೆ ಹಾವೇರಿ ಟಸ್ಕರ್ ಭಾನುಮತಿ ಹೆಣ್ಣಾನೆಯ ಬಳಿ ಬಾರದೆ ದೂರದಿಂದಲೇ ಗಮನಿಸಿ ವಾಪಸ್ ತೆರಳಿದೆ ಎಂದು ತಿಳಿದುಬಂದಿದೆ. ಸದ್ಯ ಅರಣ್ಯ ಅಧಿಕಾರಿಗಳು ಬೇರೊಂದು ಸ್ಥಳದಲ್ಲಿ ಭಾನುಮತಿಯನ್ನು ಬಿಡಲಾಗಿದ್ದು ಹಾವೇರಿ ಟಸ್ಕರ್​ನನ್ನು ಹನಿಟ್ರ್ಯಾಪ್​ಗೆ ಬೀಳಿಸಲು ಕಾದಿದ್ದಾರೆ. ಹೆಣ್ಣಾನೆ ಕಟ್ಟಿರುವ ಪ್ರದೇಶದಿಂದ…

Read More

ಮಂಗಳೂರು: ದನಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಬ್ದುಲ್ ಕಬೀರ್ ಅಲಿಯಾಸ್ ಪಾರಿವಾಳ ಕಬೀರ್ (35) ಬಂಧಿತ ಆರೋಪಿಯಾಗಿದ್ದಾನೆ. ಈತ ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಯಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ದನಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಬಂಧಿಸಲ್ಪಟ್ಟು ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಆರೋಪಿಯ ಇರುವಿಕೆ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆತನನ್ನು ಬಂಧಿಸಲು ತೆರಳಿದ ವೇಳೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು ಪೋಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ದ ಮಂಗಳೂರು ನಗರದ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಕಂಕನಾಡಿ ನಗರ, ಉಳ್ಳಾಲ, ಪಣಂಬೂರು, ಬಜ್ಪೆ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ…

Read More

ಉಡುಪಿ: ಗಣೇಶ ಚತುರ್ಥಿ ಹಬ್ಬದ ಜನರ ನೂಕುನುಗ್ಗುಲನ್ನು ನಿಭಾಯಿಸುವ ಸಲುವಾಗಿ ಕೇಂದ್ರ ರೈಲ್ವೇಸ್‌ನ ಸಹಯೋಗದೊಂದಿಗೆ ಮುಂಬಯಿ ಲೋಕಮಾನ್ಯ ತಿಲಕ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ಹೆಚ್ಚುವರಿ ಸಾಪ್ತಾಹಿಕ ಗಣೇಶ ವಿಶೇಷ ರೈಲನ್ನು ಓಡಿಸಲು ಕೊಂಕಣ ರೈಲ್ವೆ ನಿರ್ಧರಿಸಿದೆ. ರೈಲು ನಂ.01173 ಲೋಕಮಾನ್ಯ ತಿಲಕ್-ಮಂಗಳೂರು ಜಂಕ್ಷನ್ ಎಸಿ ಸಾಪ್ತಾಹಿಕ ವಿಶೇಷ ರೈಲು ಆ.24, ಆ.31 ಹಾಗೂ ಸೆ.7ರ ಬುಧವಾರದಂದು ರಾತ್ರಿ 8:50ಕ್ಕೆ ಲೋಕಮಾನ್ಯ ತಿಲಕ್‌ನಿಂದ ನಿರ್ಗಮಿಸಲಿದ್ದು, ಮರುದಿನ 5:05ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ರೈಲು ನಂ.01174 ಮಂಗಳೂರು ಜಂಕ್ಷನ್-ಲೋಕಮಾನ್ಯ ತಿಲಕ್ ಎಸಿ ಸಾಪ್ತಾಹಿಕ ವಿಶೇಷ ರೈಲು ಆ.25, ಸೆ.1 ಹಾಗೂ ಸೆ.8ರ ಗುರುವಾರ ರಾತ್ರಿ 8:15ಕ್ಕೆ ಮಂಗಳೂರು ಜಂಕ್ಷನ್‌ನಿಂದ ಪ್ರಯಾಣ ಬೆಳೆಸಲಿದ್ದು, ಮರುದಿನ ಸಂಜೆ 5:30ಕ್ಕೆ ಲೋಕಮಾನ್ಯ ತಿಲಕ್ ನಿಲ್ದಾಣ ತಲುಪಲಿದೆ.

Read More

ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೂಲಕ ಕೂಗಲಾಗುವ ಆಝಾನ್‌ನಲ್ಲಿ ಇರುವ ವಿಚಾರಗಳನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಲು ಹೈಕೋರ್ಟ್ ನಿರಾಕರಿಸಿದೆ. ನಗರದ ನಿವಾಸಿ ಆರ್.ಚಂದ್ರಶೇಖರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಪ್ರತಿ ದಿನ 5 ಬಾರಿ ಆಝಾನ್ ಕೂಗುವುದರಿಂದ ಬೇರೆ ಧರ್ಮಗಳ ಅನುಯಾಯಿಗಳ ಭಾವನೆಗೆ ಧಕ್ಕೆಯಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಅರ್ಜಿದಾರರೇ ಆಝಾನ್ ಅಗತ್ಯ ಧಾರ್ಮಿಕ ಆಚರಣೆ ಎಂದು ತಿಳಿಸಿದ್ದಾರೆ. ಅಲ್ಲದೆ, ಆಝಾನ್‌ನಲ್ಲಿ ಇರುವ ವಿಚಾರಗಳು, ಬೇರೆ ಧರ್ಮಗಳ ಅನುಯಾಯಿಗಳ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎನ್ನುವ ಅರ್ಜಿದಾರರ ವಾದವನ್ನು ಮಾನ್ಯ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ. ಭಾರತದ ಸಂವಿಧಾನದ ಪ್ರಕಾರ 25 ಮತ್ತು 26ನೆ ವಿಧಿಗಳು ನಮ್ಮ ದೇಶದ ಸಂಸ್ಕೃತಿಯ ಸಹನಶೀಲತೆಯ ಮೂರ್ತರೂಪವಾಗಿವೆ. 25(1) ವಿಧಿಯು ಪ್ರತಿ ವ್ಯಕ್ತಿಯೂ ತಮ್ಮ ತಮ್ಮ ಧರ್ಮಗಳಲ್ಲಿ ಶ್ರದ್ಧೆ ಇರಿಸಲು, ಆಚರಿಸಲು ಮತ್ತು ಪ್ರಚಾರ ಮಾಡಲು ಅವಕಾಶ ಮಾಡಿಕೊಡುತ್ತದೆ ಎಂದು…

Read More

ನವದೆಹಲಿ: ಗೋವಾದಲ್ಲಿ ನಿನ್ನೆ ರಾತ್ರಿ ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ.ಅವರು ತಮ್ಮ ಕೆಲವು ಸಿಬ್ಬಂದಿ ಜೊತಗೆ ಗೋವಾಕ್ಕೆ ಹೋಗಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಸೋನಾಲಿ ಫೋಗಟ್ ಬಿಗ್ ಬಾಸ್ 14 ರಲ್ಲಿ ಕಾಣಿಸಿಕೊಂಡರು. ಅವರು ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಪ್ರವೇಶಿಸಿದ್ದರು. ನಂತರ ಅವರು ಅಪಾರ ಜನಪ್ರಿಯತೆಯನ್ನು ಗಳಿಸಿದರು. ಸೋನಾಲಿಗೆ ತನಗೆ ತುಂಬಾ ಹತ್ತಿರವಿದ್ದ ಒಬ್ಬ ಡೌಗ್ಟರ್ ಕೂಡ ಇದ್ದಾನೆ. ಸೋನಾಲಿ ಫೋಗಟ್ ಕೂಡ ಬಿಜೆಪಿ ನಾಯಕಿಯಾಗಿದ್ದರು. ಅವರು 2019 ರ ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ನಲ್ಲಿ ಆದಂಪುರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇತ್ತೀಚೆಗೆ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಬದಲಾದ ಕುಲದೀಪ್ ಬಿಷ್ಣೋಯ್ ವಿರುದ್ಧ ಅವರು ಸ್ಪರ್ಧಿಸಿದ್ದರು. ಸೋನಾಲಿ ಟಿಕ್‌ ಟಾಕ್‌ ನಲ್ಲೂ ಸಹ ಜನಪ್ರಿಯತೆಯನ್ನ ಹೊಂದಿದ್ದರು

Read More

ಮಂಗಳೂರು: ಸುಳ್ಯದ ಬೆಳ್ಳಾರೆಯಲ್ಲಿ ಜುಲೈ 26 ರಂದು ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪಶ್ಚಿಮ ವಲಯದ ಐಜಿಪಿ ದೇವಜ್ಯೋತಿ ರೇ ಪ್ರಶಸ್ತಿ ಬಹುಮಾನ ನೀಡಿ ಪ್ರಶಂಸಿದ್ದಾರೆ.ಘಟನೆ ನಡೆದ ಸ್ಥಳದಲ್ಲಿ ಹಂತಕರು ಯಾವುದೇ ಸುಳಿವು ಬಿಟ್ಟುಕೊಡದ ಕಾರಣ ಪ್ರಕರಣ ಪೊಲೀಸರಿಗೆ ಸವಾಲಾಗಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಹಾಗೂ ಪಶ್ಚಿಮ ವಲಯದ ಅಧಿಕಾರಿಗಳನ್ನೊಳಗೊಂಡ ತನಿಖಾ ತಂಡ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿತ್ತು.ಈ ಹಿನ್ನಲೆ ನಗರದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದಲ್ಲಿ ಆಗಸ್ಟ್ 22 ರ ಸೋಮವಾರ, ಸನ್ಮಾನ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Read More

ಮಂಗಳೂರು: ದೇಹದಲ್ಲಿ ಬಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿರುವುದನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಕಂಡು ಹಿಡಿದಿದ್ದಾರೆ. ದುಬೈನಿಂದ ಮಂಗಳೂರಿಗೆ ಬಂದ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದು, ತಪಾಸಣೆ ವೇಳೆ 45,83,160 ರೂ. ಮೌಲ್ಯದ 24 ಕ್ಯಾರೆಟ್‌ನ 878 ಗ್ರಾಂ ಚಿನ್ನವನ್ನು ಪತ್ತೆಹಚ್ಚಿದ್ದಾರೆ. ಬಂಟ್ವಾಳ ಮೂಲದ ಪ್ರಯಾಣಿಕ ಚಿನ್ನವನ್ನು ಪೌಡರ್ ರೂಪದಲ್ಲಿ ಅಂಡಾಕಾರದ ಪ್ಯಾಕೆಟ್‌ಗಳಲ್ಲಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ಮತ್ತು ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡು ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.

Read More

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಿಂದ ಇತಿಹಾಸ ಪ್ರಸಿದ್ಧ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ವಿಶೇಷ ಅನುದಾನ ದೊರಕಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ.ವೀರೇಂದ್ರ ಹೆಗ್ಗಡೆಯವರು 15 ಲಕ್ಷ ರೂ. ಮೊತ್ತದ ಚೆಕ್ ಅನ್ನು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು. ಶ್ರೀಕ್ಷೇತ್ರ ಧರ್ಮಸ್ಥಳದಿಂದ ವಿವಿಧ ದೇವಸ್ಥಾನಗಳ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಲೇ ಇರುತ್ತದೆ. ಪುರಾತನ ದೇವಸ್ಥಾನಗಳ ಜೀರ್ಣೋದ್ಧಾರ, ಪುನರ್ನಿರ್ಮಾಣ ಕಾರ್ಯಗಳನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ವಿಶೇಷ ಆಸ್ಥೆವಹಿಸಿ ಮಾಡಿ ಅನುದಾನವನ್ನು ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ವೇಣೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೂ ಅನುದಾನ ಹೆಗ್ಗಡೆಯವರು ನೀಡಿದ್ದಾರೆ.

Read More

ಕುಂದಾಪುರ : ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಂದು ಕೊನೆಗೆ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಶಾಲೆ ಸಮೀಪ ನಡೆದಿದೆ. ಕೊಲೆಯಾದ ಮಹಿಳೆ ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ(38) ಕೋಗಾರ್‌ ಮೂಲದ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ . ಸೊರಬ ನಿವಾಸಿಯಾಗಿರುವ ಪೂರ್ಣಿಮಾ ಅವರು ರವಿ ಆಚಾರ್ಯ ಅವರನ್ನು ಕಳೆದ ಹದಿನಾರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಇನ್ನು ಟಿಪ್ಪರ್‌ ಚಾಲಕನಾಗಿರುವ ರವಿ ಹೆಮ್ಮಾಡಿ ಸಮೀಪದ ಬಗ್ದಾಡಿಯಲ್ಲಿ ಟಿಪ್ಪರ್‌ ಚಾಲಕನಾಗಿ ದುಡಿಯುತ್ತಿದ್ದು, ಪತಿ ಹಾಗೂ ಪತ್ನಿ ತಮ್ಮ ಎರಡು ಮಕ್ಕಳೊಂದಿಗೆ ಮೊದಲು ಇಲ್ಲಿಯೇ ನೆಲೆಸಿದ್ದರು. ಆದರೆ ವಿಪರೀತ ಕುಡಿತದ ಚಟ ಹೊಂದಿರುವ ರವಿ ಕುಡಿದು ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದು, ಪತ್ನಿಗೂ ಕಿರುಕುಳ ನೀಡುತ್ತಿದ್ದನು. ಈ ಹಿನ್ನೆಲೆ ಮನೆಯವರು ಮಾತುಕತೆ ನಡೆಸಿ ಆ ಬಳಿಕ ಪತಿಯಿಂದ ದೂರ ಉಳಿದುಕೊಂಡಿದ್ದ ಪತ್ನಿ ಪೂರ್ಣಿಮಾ ತಮ್ಮ ಇಬ್ಬರು ಮಕ್ಕಳೊಂದಿಗೆ ತಾಯಿಯ ಮನೆ ಸೊರಬದಲ್ಲಿ ನೆಲೆಸಿದ್ದರು.…

Read More

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಬ್ರೆಡ್ ತರಲೆಂದು ಹೋಗಿದ್ದ 8 ವರ್ಷದ ಅಲಿ ಇಸ್ಲಾಂ ಸಾದಾ ಎಂಬ ಬಾಲಕ ಎರಡು ದಿನಗಳ ಹಿಂದೆ ಅಪಹರಣಕ್ಕೊಳಗಾಗಿದ್ದು, ಇದೀಗ ಗೋವಾದಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಬಾಲಕನನ್ನು ಕಾರಿನಲ್ಲಿ ಬಂದು ಕಿಡ್ನಾಪ್ ಮಾಡಲಾಗಿದ್ದು, ಕಿಡ್ನಾಪ್ ಮಾಡಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಕಾರ್ಯಚರಣೆ ಮುಂದುವರೆಸಿದ ಭಟ್ಕಳ ನಗರ ಠಾಣೆ ಪೊಲೀಸರು ಇದೀಗ ಬಾಲಕನನ್ನು ಗೋವಾದಲ್ಲಿ ಪತ್ತೆ ಮಾಡಿ ರಕ್ಷಿಸಿದ್ದಾರೆ.ಇನ್ನು ಬಾಲಕನ ಕುಟುಂಬದವರು ಪೊಲೀಸ್ ಠಾಣೆಯಲ್ಲಿ ಬಾಲಕ ನಾಪತ್ತೆ ಬಗ್ಗೆ ದೂರು ನೀಡಿದ್ದು, ಪರಿಶೀಲನೆ ನಡೆಸಿದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬಾಲಕನನ್ನು ಕಿಡ್ನಾಪ್ ಮಾಡಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು.ಕೌಟುಂಬಿಕ ದ್ವೇಷದ ಕಾರಣಕ್ಕೆ ಬಾಲಕನನ್ನು ಅಪಹರಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Read More