Author: main-admin

ಮಂಗಳೂರು: ಮಂಗಳೂರು ನಗರ ಹೊರವಲಯದ ಸುರತ್ಕಲ್ ಮುಕ್ಕದ ಬಳಿ ಬುಧವಾರ ಸಂಜೆ ಭೀಕರ ರಸ್ತೆ ದುರಂತ ನಡೆದಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.ಮೃತ ಬಾಲಕಿಯನ್ನು ಮಾನ್ವಿ ಎಂದು ಗುರುತಿಸಲಾಗಿದೆ. ಸುರತ್ಕಲ್‌ನ ಚರ್ಚ್‌ ಶಾಲೆಯಲ್ಲಿ ಕಲಿಯುತ್ತಿದ್ದ ಪುತ್ರಿಯನ್ನು ಆಕೆಯ ಅಪ್ಪನೇ ಸಂಜೆ ವೇಳೆ ದ್ವಿಚಕ್ರ ವಾಹನದಲ್ಲಿ ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮುಕ್ಕದ ಬಳಿ ಅತೀ ವೇಗದಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದ್ದು, ಬಾಲಕಿ ತಲೆಗೆ ತೀವ್ರ ಏಟು ಬಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಸ್ಥಳೀಯರು ಟಿಪ್ಪರ್ ಚಾಲಕನನ್ನು ಹಿಡಿದು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳದಲ್ಲಿ ಸಂಚಾರಿ ಪೊಲೀಸರು ಮತ್ತು ಸ್ಥಳೀಯರ ನಡುವೆ ತೀವ್ರ ಮಾತಿನ ಚಕಮಕಿ ಕೂಡಾ ನಡೆಯಿತು. ಟ್ರಾಫಿಕ್ ಉತ್ತರ ಠಾಣಾ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದರು.

Read More

ಉಡುಪಿ: ಮಾರ್ಚ್ 3 ರಂದು ಜಿಲ್ಲೆಯಾದ್ಯಂತ 0-5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆಯನ್ನು ನೀಡಲಾಗುತ್ತಿದ್ದು, ಜಿಲ್ಲೆಯ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆಯನ್ನು ಹಾಕಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈಗಾಗಲೇ ನಮ್ಮ ದೇಶದಲ್ಲಿ ಪಲ್ಸ್ ಪೊಲಿಯೋ ಪ್ರಕರಣಗಳು ಶೂನ್ಯವಿದ್ದರೂ ಸಹ, ಯಾವುದೇ ಮಕ್ಕಳಿಗೆ ಬರಬಾರದು ಎಂಬ ಉದ್ದೇಶದಿಂದ ಪೊಲಿಯೋ ಲಸಿಕೆಯನ್ನು ನೀಡಲಾಗುತ್ತಿದೆ. ಪ್ರತಿಯೊಬ್ಬ ಮಕ್ಕಳಿಗೂ ಪೊಲೀಯೋ ಲಸಿಕೆ ಹನಿಯನ್ನು ಹಾಕಿಸಿ, ಪ್ರತಿಶತಃ ನೂರರಷ್ಟು ಸಾಧಿಸಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುವುದರೊಂದಿಗೆ ಲಸಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

Read More

ಕಾಸರಗೋಡು : ಆರೆಸ್ಸೆಸ್ ಹಿರಿಯ ಮುಖಂಡ ಗೋಪಾಲ ಚೆಟ್ಟಿಯಾರ್ (77) ಅಲ್ಪಕಾಲದ ಅನಾರೋಗ್ಯದ ಬಳಿಕ ಮಂಗಳವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಜನಿಸಿದ್ದ ಅವರು ವಿದ್ಯಾರ್ಥಿ ದಿಸೆಯಿಂದಲೇ ಆರೆಸ್ಸೆಸ್ ಚಟುವಟಿಕೆಗಳಿಂದ ಪ್ರಭಾವಿತರಾಗಿದ್ದರು. ವೃತ್ತಿಯಲ್ಲಿ ಕೇರಳ ಸರಕಾರ ಕಂದಾಯ ಇಲಾಖೆಯಲ್ಲಿ 35 ವರ್ಷ ಸೇವೆ ಸಲ್ಲಿಸಿದ್ದ ಗೋಪಾಲ ಚೆಟ್ಟಿಯಾರ್ 2002ರಲ್ಲಿ ಉಪ ತಹಸೀಲ್ದಾರ್ ಆಗಿ ನಿವೃತ್ತರಾಗಿದ್ದರು. ನಿವೃತ್ತಿ ಬಳಿಕ ತಮ್ಮ ಜೀವನವನ್ನು ಜನಸೇವೆಗೆ ಮುಡಿಪಾಗಿಟ್ಟಿದ್ದರು. ಆರೆಸ್ಸೆಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್, ಕರ್ನಾಟಕ ದಕ್ಷಿಣ ಪ್ರಾಂತ್ಯ ಸೇವಾ ಪ್ರಮುಖ್ ಹಾಗೂ ಮಂಗಳೂರು ವಿಭಾಗ ಸಂಘ ಚಾಲಕರಾಗಿ ಸೇವಾ ಚಟುವಟಿಕೆ ನಡೆಸಿದ್ದರು. ಮೂಲತಃ ಪೆರ್ಲ ನಿವಾಸಿಯಾಗಿದ್ದ ಅವರು ಒಂದೂವರೆ ವರ್ಷದಿಂದ ಬಂದ್ಯೋಡಿನಲ್ಲಿ ನೆಲೆಸಿದ್ದರು. ಇದಲ್ಲದೆ, ಸಮಾಜದ ನಾನಾ ಚಟುವಟಿಕೆಗಳಲ್ಲಿ ತೊಡಗಿಸಿದ್ದರು. ಮೃತರ ಅಂತ್ಯಸಂಸ್ಕಾರ ಬಂದ್ಯೋಡಿನಲ್ಲಿ ನಡೆಯಿತು. ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯವಾಹ…

Read More

ಉಡುಪಿ: ನೆರೆಯ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಪ್ರಕರಣ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೆಎಫ್‌ಡಿ ಬಗ್ಗೆ ಎಚ್ಚರಿಕೆ ವಹಿಸಬೇಕು. ಕಾಡಿನಲ್ಲಿ ಮಂಗಗಳು ಸತ್ತಾಗ ಅವುಗಳನ್ನು ಸರಕಾರದ ಮಾರ್ಗಸೂಚಿ ಅನ್ವಯ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಆರೋಗ್ಯ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆರೋಗ್ಯ ಇಲಾಖೆ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೆರೆ ಜಿಲ್ಲೆಯಾದ ಶಿವಮೊಗ್ಗದಲ್ಲಿ 47, ಉತ್ತರ ಕನ್ನಡ ಜಿಲ್ಲೆಯಲ್ಲಿ 22 ಪ್ರಕರಣಗಳು ವರದಿಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಮಂಗನ ಕಾಯಿಲೆ ವರದಿಯಾಗಿಲ್ಲ. ಈ ಬಗ್ಗೆ ಎಚ್ಚರ ವಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಕಾಡಂಚಿನ ಗ್ರಾಮದಲ್ಲಿ ಮಂಗಗಳು ಸತ್ತ 5 ಕಿ.ಮೀ. ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಅರಿವು ಮೂಡಿಸಬೇಕು ಎಂದು ಡಿಸಿ ಸೂಚಿಸಿದರು.

Read More

ಪುತ್ತೂರು : ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಂದ್ರಶೇಖರ ಭಟ್ (62) ಎಂಬವರೇ ಒಟಿಪಿ ನೀಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿ. ಮಂಗಳವಾರ (ಫೆ 6) ಚಂದ್ರಶೇಖರ ಭಟ್ ಅವರ ಮೊಬೈಲಿಗೆ ಕೆವೈಸಿ ಅಪ್ಡೇಟ್ ಮಾಡುವ ಕುರಿತು ಸಂದೇಶ ಬಂದಿದ್ದು, ಸಂದೇಶದಲ್ಲಿ ತಿಳಿಸಿದ ದೂರವಾಣಿ ಸಂಖ್ಯೆಗೆ ಅವರು ಕರೆ ಮಾಡಿದಾಗ ನಿಮ್ಮ ಖಾತೆ ಬ್ಲಾಕ್ ಆಗಿದೆ. ಒಟಿಪಿ ನೀಡುವಂತೆ ತಿಳಿಸಿದ ಮೇರೆಗೆ ಭಟ್ ಅವರು ಒಟಿಪಿ ನೀಡಿದ್ದಾರೆ. ಇದಾದ ಸ್ವಲ್ಪ ಹೊತ್ತಿನಲ್ಲೇ ಅವರ ಬ್ಯಾಂಕ್ ಖಾತೆಯಿಂದ 1.73 ಲಕ್ಷ ರೂಪಾಯಿ ಹಣ ಕಡಿತಗೊಂಡಿದೆ.ಈ ಬಗ್ಗೆ ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ವಂಚಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 24-2024 ಕಲಂ: IPC 1860 ಕಲಂ-417,419,420 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Read More

ಕಾಸರಗೋಡು: ನಾಲ್ಕು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಸಹೋದರ ಹಾಗೂ ಸಂಬಂಧಿಕರೋರ್ವರ ಬೆದರಿಕೆ ಇದ್ದುದರಿಂದ ತಪ್ಪಿಸಿಕೊಂಡಿದ್ದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಧರ್ಮತ್ತಡ್ಕದ ಜೋನ್ ಡಿ’ಸೋಜ (60) ನಾಪತ್ತೆಯಾಗಿದ್ದ ವ್ಯಕ್ತಿ. ಇವರು ಸೋಮವಾರ ಕಾಸರಗೋಡು ಪ್ರಥಮ ದರ್ಜೆ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಇವರ ಹೇಳಿಕೆಯಂತೆ ಸಹೋದರ ಜೋರ್ಜ್ ಹಾಗೂ ಸಂಬಂಧಿಕ ಥೋಮಸ್ ವಿರುದ್ಧ ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಕಳೆದ ಗುರುವಾರ ದಂದು ಜೋನ್ ಡಿಸೋಜ ನಾಪತ್ತೆಯಾಗಿದ್ದರು. ಇವರ ಮೊಬೈಲ್ ಫೋನ್ ಮತ್ತು ಸ್ಕೂಟರ್ ಉಪ್ಪಳ ನಯಬಜಾರ್ ಬಳಿಯ ಅಂಬಾರ್ ಎಂಬಲ್ಲಿ ಪತ್ತೆಯಾಗಿದೆ. ಪೆರ್ಮುದೆ ತೆರಳುವುದಾಗಿ ಗುರುವಾರದಂದು ತೆರಳಿದ್ದ ಇವರು ನಾಪತ್ತೆಯಾಗಿರುವುದಾಗಿ ಪತ್ನಿ ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದ್ದರು. ಆಸ್ತಿ ವಿವಾದ ಇವರ ನಡುವೆ ವೈಮನಸ್ಸಿಗೆ ಕಾರಣ ಎನ್ನಲಾಗಿದೆ.

Read More

ಉಡುಪಿ: ಕಾರಿಗೆ ಟಿಪ್ಪರ್ ಢಿಕ್ಕಿಯಾದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಟ, ಬನ್ನಾಡಿ ಬಳಿ ಉಪ್ಲಾಡಿಯಲ್ಲಿ ಮಂಗಳವಾರ ನಡೆದಿದೆ. ಕಾರು ಚಾಲಕ ಗಣೇಶ್ ಶೆಟ್ಟಿ (39) ಗಂಭೀರ ಗಾಯಗೊಂಡಿದ್ದು, ಅವರು ಕೋಟದ ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.ಗಣೇಶ್ ಶೆಟ್ಟಿ ಅವರು ಕಾರಿನಲ್ಲಿ ಕೋಟ ಮೂರ್ಕೈಯಿಂದ ಮಧುವನ ಕಡೆ ಸಂಚರಿಸುತ್ತಿದ್ದ ವೇಳೆ ಬನ್ನಾಡಿಯಿಂದ ಕೋಟ ಕಡೆ ಬರುತ್ತಿದ್ದ ಟಿಪ್ಪರ್ ವಿರುದ್ಧ ದಿಕ್ಕಿನಲ್ಲಿ ಬಂದು ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ.ಕೂಡಲೇ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: 1994 ರಲ್ಲಿ ವಾಮಂಜೂರಿನಲ್ಲಿ ನಾಲ್ವರು ಸಂಬಂಧಿಕರನ್ನೇ ಹತ್ಯೆ ಮಾಡಿ ಶಿಕ್ಷೆ ಅನುಭವಿಸಿ ಜೈಲಿನಿಂದ ಬಿಡುಗಡೆಗೊಂಡಿರುವ ಪ್ರವೀಣ್‌ ಕುಮಾರ್‌(60)ನಿಂದ ಜೀವಬೆದರಿಕೆ ಇರುವ ಹಿನ್ನೆಲೆಯಲ್ಲಿ ರಕ್ಷಣೆ ಒದಗಿಸಬೇಕು ಎಂದು ಆತನ ಕುಟುಂಬಸ್ಥರು ಪೊಲೀಸರು ಹಾಗೂ ಸರಕಾರಕ್ಕೆ ಮತ್ತೊಮ್ಮೆ ಮೊರೆ ಹೋಗಿದ್ದಾರೆ. ಪ್ರವೀಣ್‌ನನ್ನು ಕಳೆದ ಮೇ ತಿಂಗಳಿನಲ್ಲಿ ಸನ್ನಡತೆಯ ಕಾರಣ ನೀಡಿ ಬಿಡುಗಡೆ ಮಾಡಿರುವ ಮಾಹಿತಿ ಬಂದಿತ್ತು. ಬಳಿಕ ನ.7ರಂದು ರಾತ್ರಿ ಆತ ತಮ್ಮನಿಗೆ ಕರೆ ಮಾಡಿ ಜೀವಬೆದರಿಕೆ ಹಾಕಿದ್ದ. ಹಾಗಾಗಿ ನಾವು ಜೀವಭಯದಿಂದ ಇದ್ದೇವೆ. ಪೊಲೀಸರು ಆತನ ಚಲನವಲನಗಳನ್ನು ನಿತ್ಯವೂ ಗಮನಿಸಬೇಕು. ದ.ಕ ಜಿಲ್ಲೆಗೆ ಬರದಂತೆ ಗಡೀಪಾರು ಮಾಡಬೇಕು ಎಂದು ಕುಟುಂಬಸ್ಥರು ಮಂಗ ಳೂರು ಪೊಲೀಸ್‌ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.ಇನ್ನು ಪ್ರವೀಣ ಬಿಡುಗಡೆಯಾಗಲಿದ್ದಾನೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದ ಕೂಡಲೇ 2022ರಲ್ಲಿ ಪೊಲೀಸ್‌ ಆಯುಕ್ತರು, ಗೃಹಸಚಿವರು, ರಾಜ್ಯಪಾಲರಿಗೆ ಮನವಿ ಮಾಡಿ ಬಿಡುಗಡೆ ಮಾಡದಂತೆ ಕೇಳಿಕೊಂಡಿದ್ದೆವು. ಆತನ ಪತ್ನಿಯೂ ಬಿಡುಗಡೆ ಮಾಡದಂತೆ ಮನವಿ ಮಾಡಿದ್ದಳು. ಆದರೆ ಪ್ರಯೋಜನ ವಾಗಲಿಲ್ಲ. ಆ ಬಳಿಕ ಬಿಡುಗಡೆಯ ಸುದ್ದಿ…

Read More

ಪತ್ನಿ ತನ್ನ ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯ ಎಪಿಎಂಸಿ-ಮಾರಡಗಿ ರೋಡ್‌ನಲ್ಲಿ ನಡೆದಿದೆ. ಕೊಲೆಮಾಡಿದ ಮಹಿಳೆ ಮಂಜುಳಾ ಹಾಗೂ ರಿಯಾಜ್ ಅಹ್ಮದ್, ಕೊಲೆಯಾದ ವ್ಯಕ್ತಿ (ಪತಿ) ಬಂಜಾರ ಕಾಲೋನಿ ನಿವಾಸಿ ಚಂದ್ರಶೇಖರ ಲಮಾಣಿ (40) ಕಳೆದ ಜನವರಿ 10 ರಂದು ಎಪಿಎಂಸಿ ಮಾರಡಗಿ ರೋಡ್‌ನಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ನವನಗರ ಪೊಲೀಸರು ಮೃತನಾದ ವ್ಯಕ್ತಿಯ ಗುರುತು ಪತ್ತೆ ಹಚ್ಚಿದ್ದರು. ಅತ್ತ ಪತ್ನಿ ಮಂಜುಳಾ ಗಂಡನ ಸಾವಿನ ಬಗ್ಗೆ ಸಂಶಯ ಇದೆ ಎಂದು ನವನಗರ ಪೊಲೀಸ್ ಠಾಣೆಗೆ ತೆರಳಿ ದೂರು‌ ನೀಡಿದ್ದಳು‌. ಪೊಲೀಸರು ಎಲ್ಲಾ ಆ್ಯಂಗಲ್‌ನಲ್ಲಿ ತನಿಖೆ ಮಾಡಿದ್ದಾರೆ. ಬಳಿಕ ಈ ಕೊಲೆಗೆ ಕಾರಣ ಯಾರು ಎಂಬುದನ್ನ ಪತ್ತೆಹಚ್ಚಿದ್ದಾರೆ. ಪತಿ ಚಂದ್ರಶೇಖರ ಲಮಾಣಿಯನ್ನು ಪತ್ನಿ ಮಂಜುಳ ಮತ್ತು ಪ್ರಿಯಕರ ರಿಯಾಜ್ ಅಹ್ಮದ್ ಕೊಲೆ ಮಾಡಿದ್ದಾರೆ. ಅನೈತಿಕ ಸಂಬಂಧಕ್ಕೆ ವಿರೋಧ ಹಿನ್ನೆಲೆಯಲ್ಲಿ ಕೊಲೆ ಮಾಡಿರುವುದಾಗಿ ಸತ್ಯ ಕಕ್ಕಿದ್ದಾರೆ. ನಮ್ಮಿಬ್ಬರ ಅನೈತಿಕ ಸಂಬಂಧ ಇತ್ತು. ಈ ವಿಷಯ ಗಂಡನಿಗೆ…

Read More

ಮಂಗಳೂರು: ನಗರದ ಬಲ್ಮಠ ನ್ಯೂ ರೋಡ್ ನಲ್ಲಿರುವ ಕೆಎಂಸಿ ಆಸ್ಪತ್ರೆಯ ವಿಸಿಟರ್ಸ್ ವಾಹನ ಪಾರ್ಕಿಂಗ್ ಬಳಿಯ ರಸ್ತೆ ಬದಿ ಮಾದಕದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು 1.66 ಲಕ್ಷ ರೂ. ಮೌಲ್ಯದ ಮಾದಕದ್ರವ್ಯವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮಂಗಳೂರಿನ ಅತ್ತಾವರದ ವೈದ್ಯನಾಥ ನಗರದ ಚಿರಶ್ರೀ ಅಪಾರ್ಟ್ ಮೆಂಟ್ ನಿವಾಸಿ ಆದಿತ್ಯ ಕೆ.(29) ಮತ್ತು ಅಡ್ಯಾ‌ರ್ ಪದವು ಲೋಬೊ ನಗರ ಕೋರ್ದಬ್ಬು ದೈವಸ್ಥಾನದ ಬಳಿ ನಿವಾಸಿ ರೋಹನ್ ಸಿಕ್ವೇರ(33) ಬಂಧಿತ ಆರೋಪಿಗಳು. ಫೆ.4ರಂದು ರಾತ್ರಿ 9ಗಂಟೆ ವೇಳೆ ಬಲ್ಮಠ ನ್ಯೂ ರೋಡ್ ನಲ್ಲಿರುವ ಕೆಎಂಸಿ ಆಸ್ಪತ್ರೆಯ ವಿಸಿಟರ್ಸ್ ವಾಹನ ಪಾರ್ಕಿಂಗ್ ಬಳಿ ರಸ್ತೆ ಬದಿಯಲ್ಲಿ ಆರೋಪಿಗಳು ಮಾದಕ ದ್ರವ್ಯ ಮಾರಾಟದಲ್ಲಿ ತೊಡಗಿದ್ದರು. ಬಂಧಿತರಿಂದ 50,000 ರೂ. ಮೌಲ್ಯದ 27 ಗ್ರಾಂ ಹೈಡೋವೀಡ್ ಗಾಂಜಾ, 1,00,000 ರೂ. ಮೌಲ್ಯದ 2.95 ಕೆಜಿ ಗಾಂಜಾ, 8000 ರೂ. ಮೌಲ್ಯದ ಗಾಂಜಾ ಆ್ಯಷ್ ಆಯಿಲ್‌, 16,800 ರೂ. ಮೌಲ್ಯದ ಎಲ್.ಎಸ್‌.ಡಿ ಸ್ಟಾಂಫ್‌ಅನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಡಿಜಿಟಲ್ ತೂಕ…

Read More