Author: main-admin

ಸುರತ್ಕಲ್:ವ್ಯಕ್ತಿಯೊಬ್ಬ ಕತ್ತಿಯಿಂದ ಇಬ್ಬರಿಗೆ ಗಾಯಗೊಳಿಸಿದ್ದಲ್ಲದೆ, ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಘಟನೆ ಕಾನಾ ಸಮೀಪ ನಡೆದಿದೆ. ಗಾಯಾಳು ಸೇರಿ ಕತ್ತಿ ಬೀಸಿದ ವ್ಯಕ್ತಿಗೂ ಗಾಯವಾಗಿದ್ದು, ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ,ತನಿಖೆ ಆರಂಭಿಸಿದ್ದು,ಆರೋಪಿಯ ತನಿಖೆ ನಡೆಯಲಿದೆ.ಕೃತ್ಯ‌‌ ನಡೆಸಿರುವಾತ ಮಾನಸಿಕ ಅಸ್ವಸ್ಥ ಎಂದು ವರದಿಯಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.

Read More

ಸುಳ್ಯ: ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಗುರುವಾರ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ. ಪ್ರಕರಣದಲ್ಲಿ ಆರೋಪಿಗಳಾದ ನೌಫಲ್ (28) ಸೈನುಲ್ ಆಬಿದ್ (22), ಮೊಹಮ್ಮದ್ ಸೈಯದ್ (32), ಅಬ್ದುಲ್ ಬಶೀರ್ (29) ಮತ್ತು ರಿಯಾಜ್ (27) ಅವರನ್ನು ಎನ್‌ಐಎ ಆರು ದಿನಗಳ ಕಾಲ (ಆ.23ರ ವರೆಗೆ) ವಶಕ್ಕೆ ಪಡೆದುಕೊಂಡಿದೆ ಎನ್ನಲಾಗಿದೆ. ಜುಲೈ 27ರಂದು ಆರೋಪಿಗಳು ಬಿಜೆಪಿ ಯುವ ಮುಖಂಡ ಪ್ರವೀಣ್ ಅವರನ್ನು ರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದಿದ್ದರು. ಈ ಪ್ರಕರಣ ಸಂಬಂಧ ಕಾನೂನು ಬಾಹಿರ ಚಟುವಟಿಕೆಗಳ ತಡೆ (ಯುಎಪಿಎ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬೆಳ್ಳಾರೆ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಎನ್ಐಎಗೆ ವರ್ಗಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿರುವ ಎನ್‌ಐಎ ಅಧಿಕಾರಿಗಳು ಗುರುವಾರ ಐವರು ಆರೋಪಿಗಳನ್ನು ಆರು ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದುಕೊಂಡು…

Read More

ಮಂಗಳೂರು: ಕೆಎಂಎಫ್‌ನಲ್ಲಿ ಉದ್ಯೋಗದ ಭರವಸೆ ನೀಡಿ ನೂರಾರು ಮಂದಿಗೆ ಕೋಟ್ಯಂತರ ರೂ. ಪಂಗನಾಮ ಹಾಕಿರುವ ಪ್ರಮುಖ ಆರೋಪಿ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ಬಂಟ್ವಾಳ ತಾಲೂಕಿನ ಸಾಲೆತ್ತೂರು ನಿವಾಸಿ ರಾಮಪ್ರಸಾದ್ ರಾವ್ ಪಿ. (37) ಬಂಧಿತ ಆರೋಪಿ‌. ಕೆಎಂಎಫ್‌ನಲ್ಲಿ ನೇರ ನೇಮಕಾತಿ ಮೂಲಕ‌ ಉದ್ಯೋಗ ಗಿಟ್ಟಿಸಿಕೊಳ್ಳಲು ಗುಟ್ಟಾಗಿ ಹಣ ನೀಡಿದ್ದಲ್ಲಿ ಉದ್ಯೋಗ ದೊರೆಯುತ್ತದೆ ಎಂದು ಆರೋಪಿ ಅಭ್ಯರ್ಥಿಗಳಿಗೆ ಆಸೆ ಹುಟ್ಟಿಸಿದ್ದ. ಈ ಹಿನ್ನೆಲೆಯಲ್ಲಿ 138ಕ್ಕೂ ಅಧಿಕ ಮಂದಿ ಉದ್ಯೋಗಾರ್ಥಿಗಳನ್ನು ನಂಬಿಸಿ ಸುಮಾರು 1.84 ಕೋಟಿ ರೂ. ಹಣ ಪಡೆದುಕೊಂಡು ಕೆಎಂಎಫ್ ಡೈರಿ ಸರಕಾರಿ ಸಂಸ್ಥೆಯ ನಕಲಿ ಉದ್ಯೋಗ ನೇಮಕಾತಿ ಪತ್ರ, ಕೆಎಂಎಫ್ ಐಡಿ ಕಾರ್ಡ್ ನೀಡಿ ವಂಚನೆಗೈದಿದ್ದಾರೆ ಎಂದು ದೂರು ಬಂದಿತ್ತು. ಇದೀಗ ರಾಮಪ್ರಸಾದ್ ರಾವ್‌ನನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈತ ರಾಮಪ್ರಸಾದ್ ರಾವ್ ಅಲ್ಲದೆ ಹರೀಶ್, ಕೇಶವ, ಶಶಿಧರ್ ಎಂಬ ಹೆಸರಿನಲ್ಲೂ ಹಲವರನ್ನು ವಂಚಿಸಿದ್ದ ಎಂದು ತಿಳಿದು ಬಂದಿದೆ. ಇನ್ನೂ ಕೆಲವರು ಈ ಪ್ರಕರಣದಲ್ಲಿದ್ದು, ಶೀಘ್ರದಲ್ಲೇ ಪೊಲೀಸರು ಬಂಧಿಸಲಿದ್ದಾರೆ.

Read More

ಮಂಗಳೂರು: ರಾಜ್ಯದಲ್ಲಿ ಸಾವರ್ಕರ್ ಬ್ಯಾನರ್ ವಿವಾದ ತೀವ್ರವಾಗಿರುವ ಸಂದರ್ಭದಲ್ಲಿ ಮಂಗಳೂರಿನಲ್ಲಿ ಬ್ಯಾನರ್ ವಿವಾದ ಪ್ರತಿಧ್ವನಿಸಿದೆ. ಅಖಿಲ ಭಾರತ ಹಿಂದೂ ಮಹಾಸಭಾ ಕೃಷ್ಣ ಜನ್ಮಾಷ್ಟಮಿಗೆ ನಾಡಿನ ಜನತೆಗೆ ಶುಭಾಶಯ ಕೋರುವ ನಿಟ್ಟಿನಲ್ಲಿ ಮತ್ತೊಂದು ವಿವಾದವನ್ನು ಸೃಷ್ಟಿಸಿದೆ. ಬ್ಯಾನರ್‌ನಲ್ಲಿ ಸಾವರ್ಕರ್ ಫೋಟೋ ಜೊತೆಗೆ ನಾಥುರಾಮ್ ಗೋಡ್ಸೆಯ ಫೋಟೋ ಹಾಕಿರುವುದು ತೀವ್ರ ವಿವಾದವನ್ನು ಸೃಷ್ಟಿಸಿದೆ. ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಹೆಸರಿನಲ್ಲಿ ಬ್ಯಾನರ್ ಹಾಕಲಾಗಿದೆ. ಮಂಗಳೂರಿನ ಸುರತ್ಕಲ್, ಬೈಕಂಪಾಡಿ, ಕೂಳೂರು ಭಾಗದಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಶುಭಕೋರುವ ನೆಪದಲ್ಲಿ ಬ್ಯಾನರ್ ಹಾಕಲಾಗಿದೆ. ಈ ಬ್ಯಾನರ್‌ನಲ್ಲಿ ವಿನಾಯಕ ದಾಮೋದರ ಸಾವರ್ಕರ್ ಮತ್ತು ನಾಥುರಾಮ್ ಗೋಡ್ಸೆಯ ಫೋಟೋವನ್ನು ಹಾಕಲಾಗಿದೆ. ಅಲ್ಲದೇ ಬ್ಯಾನರ್‌ನಲ್ಲಿ “ರಾಜಕೀಯವನ್ನು ಹಿಂದುತ್ವಗೊಳಿಸಿ, ಹಿಂದೂಗಳನ್ನು ಸೈನಿಕೀಕರಣಗೊಳಿಸಿ” ಎಂಬ ಘೋಷ ವಾಕ್ಯವನ್ನು ನಮೂದಿಸಿದ್ದಾರೆ. ಬ್ಯಾನರ್‌ನಲ್ಲಿ ಹಿಂದೂ ಮಹಾಸಭಾದ ಪದಾಧಿಕಾರಿಗಳ ಫೋಟೋವನ್ನು ಕೂಡ ಹಾಕಲಾಗಿದೆ. ಇದೀಗ ಈ ಬ್ಯಾನರ್‌ಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಮಹಾತ್ಮ ಗಾಂಧೀಜೀ ಅವರನ್ನು ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆಯ…

Read More

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಸರ್ವೀಸ್ ರಸ್ತೆಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಟೇಲ್ ಗೆ ನುಗ್ಗಿದ್ದು, ಇಬ್ಬರು ಗಾಯಗೊಂಡ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಮಹೀಂದ್ರಾ ಎಕ್ಸ್ ಯು ವಿ ಕಾರು ಉಡುಪಿ ಕಡೆಯಿಂದ ಬಂಟಕಲ್ಲುಗೆ ತೆರಳುವ ವೇಳೆ ಕಟಪಾಡಿ ಸರ್ವೀಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಕಾರಿಗೆ ಢಿಕ್ಕಿ ಹೊಡೆದು, ರಸ್ತೆಯ ಬದಿಯಲ್ಲಿದ್ದ ಹೋಟಿಗೆ ನುಗ್ಗಿದೆ. ಪರಿಣಾಮ ಹೋಟೆಲಿನ ಓರ್ವ ಸಿಬ್ಬಂದಿ ಹಾಗು ಇನ್ನೋರ್ವರಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಢಿಕ್ಕಿಯ ರಭಸಕ್ಕೆ ಎರಡು ಕಾರುಗಳು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ರಾಯಲ್ ಹಟ್ ಹೊಟೇಲಿಗೆ ಅಪಾರ ನಷ್ಟ ಉಂಟಾಗಿದೆ. ಕಾಪು ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಇನ್ನಷ್ಟೇ ಪ್ರಕರಣ ದಾಖಲಾಗಬೇಕಿದೆ.

Read More

ಉಡುಪಿ: ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪ್ರತಿಮೆ ಸ್ಥಾಪನೆಗೆ ಅನುಮತಿ ನೀಡುವಂತೆ ಕೋರಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ ಅವರು ನಗರದ ಪುರಸಭೆಗೆ ಪತ್ರ ಬರೆದಿದ್ದಾರೆ. ಬ್ರಹ್ಮಗಿರಿ ವೃತ್ತದಲ್ಲಿ ಅಳವಡಿಸಿರುವ ಫ್ಲೆಕ್ಸ್‌ನಲ್ಲಿ ಸಾವರ್ಕರ್‍ ಫೋಟೋ ಮುದ್ರಿಸಿರುವುದಕ್ಕೆ ಕಾಂಗ್ರೆಸ್ ಮತ್ತು ಎಸ್‌ಡಿಪಿಐ ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಇದರ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಎಸ್‌ಡಿಪಿಐಗೆ ಸವಾಲು ಹಾಕಿರುವ ಯಶ್‌ಪಾಲ್ ಸುವರ್ಣ, ಉಭಯ ಪಕ್ಷಗಳು ಸಾವರ್ಕರ್ ಫೋಟೋ ವಿರೋಧಿಸುವುದನ್ನು ಮುಂದುವರಿಸಿದಲ್ಲಿ ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪ್ರತಿಮೆ ಅಳವಡಿಸಲಾಗುವುದು ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಪುರಸಭೆ ಅಧ್ಯಕ್ಷರು ಮತ್ತು ಆಯುಕ್ತರಿಗೆ ಅವರು ಪತ್ರ ಬರೆದಿದ್ದಾರೆ.ವಿನಾಯಕ ದಾಮೋದರ ಸಾವರ್ಕರ್ ಅವರು ಭಾರತದ ಸ್ವಾತಂತ್ರ ಹೋರಾಟದಲ್ಲಿ ಮುಂಚೂಣಿಯಲ್ಲಿ ತೊಡಗಿಸಿಕೊಂಡಿದ್ದರು. ಹೀಗಾಗಿ ಅವರ ಗೌರವಾರ್ಥ ಎಲ್ಲಾ ದೇಶಭಕ್ತರ ಪರವಾಗಿ ಸಾವರ್ಕರ್‍ ಪ್ರತಿಮೆಯನ್ನು ಬ್ರಹ್ಮಗಿರಿ ವೃತ್ತದಲ್ಲಿ ಸ್ಥಾಪಿಸಲು ನಾವು ಉದ್ದೇಶಿಸಿದ್ದೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ದೇಶ 75ನೇ ವರ್ಷದ ಸ್ವಾತಂತ್ರ ಸಂಭ್ರಮದಲ್ಲಿರುವಾಗ ಬ್ರಿಟಿಷರನ್ನು ಹಿಮ್ಮೆಟ್ಟಿಸುವಲ್ಲಿ ತೊಡಗಿಸಿಕೊಂಡ ವೀರ್‍ ಸಾವರ್ಕರ್ ಪ್ರತಿಮೆ ಸ್ಥಾಪನೆಗೆ…

Read More

ಮಂಗಳೂರು:  ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯೂ ಜಲ ಮತ್ತು ವಾಯು ಸಂರಕ್ಷಣೆ ಹಾಗೂ ನಿಯಂತ್ರಣ ಕಾಯ್ದೆ ಉಲ್ಲಂಘನೆ ಮಾಡಿರುವ ಹಿನ್ನಲೆಯಲ್ಲಿ ಉಳ್ಳಾಲ ಮತ್ತು ಮುಕ್ಕದಲ್ಲಿ ಕಾರ್ಯಾಚರಿಸುತ್ತಿದ್ದ 16 ಫಿಶ್ ಮಿಲ್ ಘಟಕಗಳ ಸ್ಥಗಿತಕ್ಕೆ ಆದೇಶ ಹೊರಡಿಸಿದೆ.ಫಿಶ್ ಮಿಲ್ ಮುಚ್ಚುವಂತೆ ದ.ಕ. ಜಿಲ್ಲಾಧಿಕಾರಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರು ಆದೇಶಿಸಿದ್ದರು. ಮೆಸ್ಕಾಂ ಎಂಡಿಗೆ ಕಾರ್ಖಾನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಸೂಚನೆ ನೀಡಲಾಗಿತ್ತು. ಮಂದಿನ ಆದೇಶದ ವರೆಗೆ ಘಟಕ ಸ್ಥಗಿತಗೊಳಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆನೀರು ಮತ್ತು ತೀವ್ರ ಪರಿಸರ ಮಾಲಿನ್ಯದ ಬಗ್ಗೆ ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಪದೇ ಪದೇ ನೋಟಿಸ್ ಕೊಟ್ಟು ಮಾಲಿನ್ಯ ತಗ್ಗಿಸಲು ಮಂಡಳಿ ಸೂಚಿಸಿತ್ತು. ಮಂಡಳಿ ನೋಟಿಸ್​ಗೆ ಫಿಶ್ ಮಿಲ್ ಘಟಕಗಳ ಮಾಲೀಕರು ನಿರ್ಲಕ್ಷ್ಯ ವಹಿಸಿದ್ದರು. ಮಲಿನ ನೀರನ್ನು ನೇರವಾಗಿ ಸಮುದ್ರಕ್ಕೆ ಬಿಡುತ್ತಿದ್ದರಿಂದ ಗಬ್ಬು ವಾಸನೆ ಹೊಡೆಯುತ್ತಿತ್ತು. ಹೀಗಾಗಿ ಈಗ ಮಾಲಿನ್ಯ ಮಂಡಳಿ ಈ ಆದೇಶ ಹೊರಡಿಸಿದೆ.ಅಸಹ್ಯ ವಾಸನೆಯಿಂದಾಗಿ ಪರಿಸರದ ಜನರಿಗೆ ವಾಸಕ್ಕೆ ಕಷ್ಟವಾಗಿತ್ತು. ಈ…

Read More

ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಪ್ರಸಿದ್ಧ ಮುಧೋಳದ ನಾಯಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯ ಹೊಣೆ ಹೊತ್ತಿರುವ ವಿಶೇಷ ರಕ್ಷಣಾ ಗುಂಪಿನ (ಎಸ್ಪಿಜಿ) ಭಾಗವಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ತಿಮ್ಮಾಪುರದ ಶ್ವಾನ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥರಾಗಿರುವ ಡಾ.ಸುಶಾಂತ್ ಹಂದಗೆ ಎರಡು ತಿಂಗಳ ವಯಸ್ಸಿನ ಎರಡು ಗಂಡು ಮುಧೋಳ ಮರಿಗಳನ್ನು ಏಪ್ರಿಲ್ 25, 2022 ರಂದು ಎಸ್ಪಿಜಿಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಅಂತ ಹೇಳಿದ್ದಾರೆ. ಏಪ್ರಿಲ್ 25 ರಂದು ನಾಯಿಮರಿಗಳನ್ನು ಸಂಗ್ರಹಿಸಲು ಎಸ್ಪಿಜಿಯ ಪಶುವೈದ್ಯರು ಮತ್ತು ಇಬ್ಬರು ತರಬೇತುದಾರರು ಬಂದಿದ್ದರು ಸೂಕ್ಷ್ಮತೆಯಿಂದಾಗಿ, ಮಾಹಿತಿಯನ್ನು ಸಾರ್ವಜನಿಕರೊಂದಿಗೆ ಹಂಚಿಕೊಳ್ಳದಂತೆ ನಮ್ಮನ್ನು ಕೇಳಲಾಗಿದೆ ಅಂಥ ಅವರು ಇದೇ ವೇಳೆ ಹೇಳಿದ್ದಾರೆ. ‘ಯಾವುದೇ ಮರಿಗಳು ಲಭ್ಯವಿದೆಯೇ ಎಂದು ಅಧಿಕಾರಿಗಳು ನಮ್ಮನ್ನು ಕೇಳಿದರು. ಅವರು ಮರಿಗಳನ್ನು ಪ್ರಯೋಗಗಳಿಗಾಗಿ ಬಯಸುತ್ತಾರೆ ಎಂದು ನಮಗೆ ತಿಳಿದಿರಲಿಲ್ಲ. ಅಗತ್ಯ ಪರೀಕ್ಷೆಗಳು ಮತ್ತು ಕಾರ್ಯಾಚರಣೆಗಳನ್ನು ನಡೆಸಿದ ನಂತರ, ಎರಡು ಮರಿಗಳನ್ನು ಆಯ್ಕೆ ಮಾಡಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು’…

Read More

ಬೆಂಗಳೂರು: ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆ ಆಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಇದರನುಸಾರ ಎಲ್ಲಾ ಶಾಲೆಗಳಲ್ಲಿ ಮುಂಜಾನೆ ವೇಳೆಯಲ್ಲಿ ವಿದ್ಯಾರ್ಥಿಗಳಿಂದ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಿಸಬೇಕು ಎಂದು ಸುತ್ತೋಲೆ ಹೊರಡಿಸಿದೆ. ಇದೀಗ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ಈ ಆದೇಶದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ, ಕಾಲೇಜುಗಳಲ್ಲಿ (1-12) ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು ಸಾಮೂಹಿಕ ಪ್ರಾರ್ಥನೆ ಮಾಡಲು ಸ್ಥಳ ಅವಕಾಶ ಇಲ್ಲದೆ ಹೋದರೆ ಶಾಲಾ ಕೊಠಡಿಗಳಲ್ಲೆ ರಾಷ್ಟ್ರಗೀತೆ ಹಾಡಿಸುವಂತೆ ತಿಳಿಸಿದೆ.

Read More

ಬೈಂದೂರು: ಕಡಲಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಮೀನುಗಾರರೊಬ್ಬರು ಕುಸಿದು ಬಿದ್ದು ಸಮುದ್ರದ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಂಭವಿಸಿದೆ. ಆ.17ರಂದು ಬೆಳಗ್ಗೆ ಕಿರಿಮಂಜೇಶ್ವರ ಗ್ರಾಮದ ನಾಗೂರು ಹೊಸಹಿತ್ತು ಎಂಬಲ್ಲಿ ಈ ದುರ್ಘಟನೆ ನಡೆದಿದ್ದು ಹೊಸಹಿತ್ತು ನಿವಾಸಿ ನಾರಾಯಣ(60) ಮೃತ ಮೀನುಗಾರ. ಇವರು ದೋಣಿಯಲ್ಲಿ ಮೀನುಗಾರಿಕೆಗೆ ಸಮುದ್ರಕ್ಕೆ ಹೋಗಿದ್ದು, ಈ ವೇಳೆ ಕುಸಿದು ಬಿದ್ದು, ಆಕಸ್ಮಿಕವಾಗಿ ಆಯತಪ್ಪಿ ಸಮುದ್ರದ ನೀರಿಗೆ ಬಿದ್ದಿದ್ದಾರೆ.ತಕ್ಷಣ ಅವರನ್ಬು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟರು.ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More