ಸುಳ್ಯ: ಹಟ ಮಾಡುತ್ತಿದ್ದ ನಾಲ್ಕು ವರ್ಷ ಪ್ರಾಯದ ಮಗುವಿಗೆ ತಾಯಿಯೇ ಸಟ್ಟುಗ ಬಿಸಿ ಮಾಡಿ ಬರೆ ಹಾಕಿದ ದಾರುಣ ಘಟನೆ ಸುಳ್ಯದ ನಾವೂರಿನಿಂದ ವರದಿಯಾಗಿದೆ. ಆರು ದಿನಗಳ ಹಿಂದೆ ಈ ಘಟನೆ ನಡೆದಿದೆಯೆನ್ನಲಾಗಿದ್ದು ಸ್ಥಳೀಯರು ನೀಡಿದ ಮಾಹಿತಿಯ ಆಧಾರದಲ್ಲಿ ಸಿ.ಡಿ.ಪಿ.ಒ. ರಶ್ಮಿ ನೆಕ್ರಾಜೆಯವರು ಆ ಮನೆಗೆ ಧಾವಿಸಿ ಪರಿಶೀಲಿಸಿದರು. ಬಳಿಕ ಮಗುವನ್ನು ಸಿ.ಡಿ.ಪಿ.ಒ. ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತೆಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಸಿಗಬೇಕಾಗಿದೆ.
Author: main-admin
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗೌರಿ-ಗಣೇಶ ಹಬ್ಬದ ಬಗ್ಗೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವೂ ವ್ಯಾಪಕ ಚರ್ಚೆಗೆ ಗುರಿಯಾಗಿದೆ.ಇದೀಗ ಶಾಲೆಯಲ್ಲಿ ಶುಕ್ರವಾರ ದಿನ ನಮಾಜ್ ಗೆ ಅವಕಾಶ ನೀಡಿ. ನಮಗೂ ನಮಾಜ್ ಗೆ ಅವಕಾಶ ಮಾಡಿ ಕೊಡಿ ಅಂತಾ ಶಿಕ್ಷಣ ಸಚಿವರಿಗೆ ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ. ಕೋಲಾರದ ಒಂದು ಶಾಲೆಯಲ್ಲಿ ಶುಕ್ರವಾರದಂದು ಮುಸ್ಲಿಮ್ ಮಕ್ಕಳಿಗೆ ನಮಾಜ್ಮಾಡಲು ಅವಕಾಶ ನೀಡಿದ್ದಕ್ಕೆ ಶಾಲೆಯ ಮುಖ್ಯಸ್ಥರನ್ನೇ ಕೆಲಸದಿಂದ ಅಮಾನತು ಮಾಡಲಾಗಿತ್ತು. ಶಾಲೆಯಲ್ಲಿ ಹಿಜಾಬ್ ಬೇಡ ಅಂದವರು ಗಣೇಶನನ್ನು ಹೇಗೆ ಕೂರಿಸ್ತೀರಾ ಎಂದು ಮುಸ್ಲಿಂ ಮುಖಂಡರು ಶಿಕ್ಷಣ ಸಚಿವರಿಗೆ ಪ್ರಶ್ನೆ ಮಾಡಿದ್ದಾರೆ. ಇನ್ನು ಕ್ರಿಶ್ಚಿಯನ್ಸ್ ಗೆ ಕ್ರಿಸ್ ಮೆಸ್ ಆಚರಣೆಗೆ ಅವಕಾಶ ಕೊಡಿ. ಆದ್ರೆ ಗಣೇಶ ಮೂರ್ತಿ ಕೂರಿಸಲು ಅವಕಾಶ ನೀಡಿದ್ದೀರಾ.. ನಮಗೂ ಕೂಡ ಅವಕಾಶ ಮಾಡಿ ಕೊಡಿ ಅಂತಾ ಮುಖಂಡರು ಬೇಡಿಕೆ ಇಟ್ಟಿದ್ದಾರೆ.
ಉಪ್ಪಿನಂಗಡಿ: ಫೋನ್ ಕರೆಗಳ ಮೂಲಕ ಅಶ್ಲೀಲ ಮಾತುಗಳ್ನಾಡಿ ಹನಿಟ್ರ್ಯಾಪ್ ಮಾಡಲೆತ್ನಿಸಿದ ಬಗ್ಗೆ ಸಾಮಾಜಿಕ ಮುಖಂಡರೊಬ್ಬರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆಯೊಬ್ಬರು ಉಪ್ಪಿನಂಗಡಿಯ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದ ಮುಂದಾಳು ಓರ್ವರಿಗೆ ಕರೆ ಮಾಡಿ ಅಸಭ್ಯವಾಗಿ ತೀರಾ ಮುಜುಗರಕ್ಕೀಡು ಮಾಡುವಂತೆ ಮಾತನಾಡಿದ್ದಳು. ಆಕೆಯ ಮಾತಿಗೆ ನಡೆಗೆ ತೀಕ್ಷ್ಣವಾದ ಮಾತುಗಳಿಂದ ಆಕ್ಷೇಪವೆತ್ತಿದರೂ ಪದೇ ಪದೇ ಮೂರ್ನಾಲ್ಕು ಬಾರಿ ಕರೆ ಮಾಡಿ ವಿಕೃತ ವರ್ತನೆ ತೋರಿದಾಗ ಇದೊಂದು ಹನಿಟ್ರ್ಯಾಪ್ ಬ್ಲ್ಯಾಕ್‌ಮೇಲ್ ದಂಧೆಯ ಕೃತ್ಯ ಎಂದು ಶಂಕಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪೊಲೀಸರು ದೂರು ಸ್ವೀಕರಿಸಿ ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ಕೊಟ್ಟಿಗೆಯಿಂದ ದನ ಕಳವುಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳನ್ನು ಮಂಗಳೂರಿನ ಕಂಕನಾಡಿ ನಗರ ಠಾಣಾ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನ ಗುರುನಗರ ಬಂಗ್ಲಗುಡ್ಡೆಯ ಮಹಮ್ಮದ್ ಅಶ್ಪಕ್ ಆಲಿಯಾಸ್ ಶಮೀರ್ ಯಾನೆ ಚಮ್ಮಿ (22), ಗುರುಪುರ ಅಡ್ಡೂರು ಅದ್ಯಪಾಡಿ ಅಜರುದ್ದೀನ್ ಆಲಿಯಾಸ್ ಅಜರ್ (31), ಬಜಾಲ್ ಪಡ್ಪುವಿನ ಸುಹೈಲ್ (19), ಬಜಾಲ್ ಪಕ್ಕಲಡ್ಕದ ಮೊಹಮ್ಮದ್ ಅಫ್ರೀದ್ (25) ಮತ್ತು ಬಜಾಲ್ ಕಟ್ಟಪುಣಿಯ ಶಾಹೀದ್ ಆಲಿಯಾಸ್ ಚಾಯಿ (19) ಬಂಧಿತರು. ಅಜರುದ್ದೀನ್ ವಿರುದ್ಧ ಬಜಪೆ ಠಾಣೆಯಲ್ಲಿ, ಮೊಹಮ್ಮದ್ ಅಫ್ರೀದ್ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಮಾರುತಿ ಕಾರು, ಕತ್ತಿ ಮತ್ತು ಹಗ್ಗಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ದೋಟ ಹೌಸ್ ಅಶ್ವಿನ್ ಎಂಬವರ ಮನೆಯಲ್ಲಿ ಜು. 20ರಂದು ಸಂಜೆ 6 ಗಂಟೆಗೆ ದನಗಳನ್ನು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದರು. ಮರುದಿನ ಮುಂಜಾನೆ ಸುಮಾರು 3.30ಕ್ಕೆ ದನ ಕೂಗಿದ ಸದ್ದು ಕೇಳಿ ಮನೆಯವರು ನೋಡಿದಾಗ ಕೊಟ್ಟಿಗೆಯಲ್ಲಿದ್ದ ಸುಮಾರು 40 ಸಾವಿರ…
ಮಂಗಳೂರು: ವ್ಯಕ್ತಿಯೋರ್ವರ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ತಂದೆ-ಮಗನನ್ನು ಬರ್ಕೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೋಳೂರು ನಿವಾಸಿಗಳಾದ ದೇವದಾಸ್ ಬೋಳೂರು(61) ಹಾಗೂ ಸಾಯಿ ಕಿರಣ್ (21) ಬಂಧಿತ ತಂದೆ-ಮಗ. ನವೀನ್ ಸಾಲ್ಯಾನ್ ಗಾಯಗೊಂಡವರು. ಬೋಳೂರು ಮೊಗವೀರ ಮಹಾಸಭಾ ಸಂಘದ ಆಡಳಿತ ಭಿನ್ನಾಭಿಪ್ರಾಯ ಹಾಗೂ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ವಿಚಾರವಾಗಿ ಈ ಹಿಂದೆಯೂ ಪ್ರಕರಣ ದಾಖಲಾಗಿತ್ತು. ಆದರೆ ಆ.16ರಂದು ಸಂಜೆ 6:25ರ ಸುಮಾರಿಗೆ ಇದೇ ವಿಚಾರದಲ್ಲಿ ವಾಗ್ವಾದ ನಡೆದು ಬೋಳೂರು ಜಾರಂದಾಯ ದೈವಸ್ಥಾನದ ಹತ್ತಿರ ನವೀನ್ ಸಾಲ್ಯಾನ್ ಅವರ ಮೇಲೆ ದೇವದಾಸ್ ಬೋಳೂರು ಹಾಗೂ ಆತನ ಪುತ್ರ ಸಾಯಿ ಕಿರಣ್ ಕಬ್ಬಿಣದ ರಾಡ್‌ನಿಂದ ಹಲ್ಲೆಗೈದಿದ್ದಾರೆ. ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡ ಅವರನ್ನು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರಿಗೆ ಪಿಕಪ್ ಡಿಕ್ಕಿ ಹೊಡೆದು ಪರಾರಿಯಾದ ಪಿಕಪ್ ನ್ನು ಸ್ಥಳೀಯರ ನೆರವಿನಿಂದ ಪತ್ತೆ ಹಚ್ಚಿದ ಘಟನೆ ಆ. 16. ಬಾಳಿಲದಿಂದ ವರದಿಯಾಗಿದೆ. ಬೆಳ್ಳಾರೆ ಕಡೆಗೆ ಹೋಗುತ್ತಿದ್ದ ಪುರುಷೋತ್ತಮ ಎಂಬವರ ಕಾರಿಗೆ ಬಾಳಿಲದ ಅಗಲ್ಪಾಡಿ ಎಂಬಲ್ಲಿ ಎದುರಿನಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದು ಕಾರಿನ ಒಂದು ಬದಿ ಜಖಂ ಗೊಂಡಿತು. ಆದರೆ ಪಿಕಪ್ ವಾಹನದವರು ನಿಲ್ಲಿಸದೆ ಅಲ್ಲಿಂದ ಪರಾರಿಯಾಗಿದ್ದರು. ಈ ವಿಚಾರ ತಿಳಿದ ಕೂಡಲೇ ಸ್ಥಳೀಯರು ವಾಹನವನ್ನು ಹುಡುಕಾಟ ನಡೆಸಿದ್ದು, ಈ ವೇಳೆ ಬಾಳಿಲದ ಉರುಂಬಿ ಎಂಬಲ್ಲಿ ವಾಹನ ಪತ್ತೆಯಾಗಿದೆ. ಪರಾರಿಯಾದ ಪಿಕಪ್ ಹಾಸನದ ಸಚಿನ್ ಎಂಬವರುದು ಎಂದು ತಿಳಿದು ಬಂದಿದೆ. ಬಳಿಕ ಪ್ರಕರಣವನ್ನು ರಾಜಿಯಲ್ಲಿ ಮುಗಿಸಲಾಯಿತು.
ಉಡುಪಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಾಕು ಇರಿತ ಪ್ರಕರಣ ಸಂಬಂಧಿಸಿ ಉಡುಪಿ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ನಗರದ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಜಿಲ್ಲೆಯಾದ್ಯಂತ ಹೆಚ್ಚುವರಿಯಾಗಿ 20 ಚೆಕ್‌ಪೋಸ್ಟ್ ಗಳನ್ನು ತೆರೆಯಲಾಗಿದೆ. ವಾಹನಗಳನ್ನು ತಡೆದು ನಿಲ್ಲಿಸಿ ಮಾಹಿತಿ ಪಡೆಯುವ ಜತೆಗೆ ಮೊಬೈಲ್ ಸಂಖ್ಯೆಯನ್ನೂ ನಮೂದಿಸಿ ಕೊಳ್ಳಲಾಗುತ್ತಿದೆ. ಎಸ್ಪಿ, ಹೆಚ್ಚು ವರಿ ಪೊಲೀಸ್ ವರಿಷ್ಠಾಧಿಕಾರಿ, ಡಿವೈ ಎಸ್ಪಿ, ಇನ್‌ಸ್ಪೆಕ್ಟರ್‌ಗಳು, ಪಿಸಿಗಳು ತಪಾಸಣೆ ಕಾರ್ಯದಲ್ಲಿ ತೊಡಗಿದ್ದಾರೆ. ಬ್ರಹ್ಮಗಿರಿ ಸರ್ಕಲ್‌ನಲ್ಲಿ ಸಾವರ್ಕರ್ ಹಾಗೂ ಸುಭಾಷ್ ಚಂದ್ರ ಬೋಸ್ ಭಾವಚಿತ್ರಗಳಗೊಂಡ ಫ್ಲೆಕ್ಸ್ ಹಾಕಲಾಗಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬಂದೋ ಬಸ್ತ್ ಮಂಗಳವಾರವೂ ಮುಂದುವರಿಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಗಳು ತಿಳಿಸಿದ್ದಾರೆ. ಬೆಳ್ಳಾರೆ, ಸುರತ್ಕಲ್‌ನಲ್ಲಿ ನಡೆದಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಬಿಗು ಬಂದೋಬಸ್ತು ಜಾರಿಯಲ್ಲಿದ್ದು, ಪೊಲೀಸರು ಜಾಗೃತ ಸ್ಥಿತಿಯಲ್ಲಿದ್ದಾರೆ. ಶಿವಮೊಗ್ಗ ಘಟನೆಯ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಯಾವುದೇ ಕ್ರಮಗಳನ್ನು ಜಿಲ್ಲೆಯಲ್ಲಿ ಕೈಗೊಂಡಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಡಬ: ಕ್ಷುಲಕ ವಿಚಾರಕ್ಕೆ ಇತ್ತಂಡಗಳ ನಡುವೆ ವಾಗ್ವಾದ ಬೆಳೆದು ಇಬ್ಬರು ಗಾಯಗೊಂಡಿರುವ ಘಟನೆ ಕಡಬ ತಾಲೂಕಿನ ಆತೂರಿನಲ್ಲಿ ಸೋಮವಾರ ಸಂಜೆ ನಡೆದಿದೆ. ಹಲ್ಲೆಗೊಳಗಾದ ಯುವಕರನ್ನು ಆತೂರು ಜನತಾ ಕಾಲೊನಿ ನಿವಾಸಿ ನವಾಝ್ ಹಾಗೂ ಆತೂರಿನ ನೌಫಲ್ ಎಂದು ಗುರುತಿಸಲಾಗಿದೆ.ಕ್ಷುಲ್ಲಕ ಕಾರಣಕ್ಕೆ ಇತ್ತಂಡಗಳ ಮಧ್ಯೆ ಮಾತಿನ ಚಕಮಕಿ ಉಂಟಾಗಿ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ನವಾಝ್ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ನೌಫಲ್ ಸರ್ಕಾರಿ ಆಸ್ಪತೆಗೆ ದಾಖಲಾಗಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಮಂಗಳೂರು: ಭದ್ರತೆ ಬಗ್ಗೆ ಸಂದೇಹ ಮತ್ತು ಆತಂಕ ಮೂಡಿಸುವಂತಹ ವಾಟ್ಸ್ ಆಯಪ್ ಚಾಟಿಂಗ್ ನಡೆಸಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ್ದ ಯುವಕ ಮತ್ತು ಯುವತಿಯ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವರಿಬ್ಬರಿಗೆ ವಿಮಾನಯಾನಕ್ಕೆ ನಿಷೇಧ ಹೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂಡಿಗೋ ವಿಮಾನಯಾನ ಸಂಸ್ಥೆಯ ಮ್ಯಾನೇಜರ್ ನೀಡಿರುವ ದೂರಿನಂತೆ ದಿಪಯಾನ್ ಮಾಜಿ (23) ಮತ್ತು ಸಿಮ್ರಾನ್ ಟಾಮ್ (23) ವಿರುದ್ಧ ಭಾರತೀಯ ದಂಡ ಸಂಹಿತೆ 505 (1)(ಬಿ) ಮತ್ತು (ಸಿ)ಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಯುವತಿವಿಮಾನದೊಳಗಿದ್ದ ತನ್ನ ಗೆಳೆಯ ದಿಪಯಾನ್ ಮಾಜಿ ಎನ್ನುವಾತನಿಗೆ ಕಳುಹಿಸಿದ್ದ ವಾಟ್ಸ್ ಆಯಪ್ ಸಂದೇಶದಲ್ಲಿ ‘ಬಾಂಬರ್’ ಎನ್ನುವ ಶಬ್ದವನ್ನು ಉಲ್ಲೇಖೀಸಿದ್ದು, ನಿರ್ದಿಷ್ಟ ಸಮುದಾಯದ ಬಗ್ಗೆಯೂ ಚಾಟ್ ಮಾಡಿದ್ದರು ಎಂದು ಮ್ಯಾನೇಜರ್ ದೂರಿನಲ್ಲಿ ತಿಳಿಸಿದ್ದಾರೆ. ಇನ್ನು ಆತಂಕ ಮತ್ತು ಗೊಂದಲ ಸೃಷ್ಟಿಸಿ ವಿಮಾನ ಪ್ರಯಾಣ ಮತ್ತು ಪ್ರಯಾಣಿಕರಿಗೆ ತೊಂದರೆ ಉಂಟು ಮಾಡಿದ ಹಿನ್ನೆಲೆಯಲ್ಲಿ ಯುವತಿ ಮತ್ತು ಯುವಕನಿಗೆ ವಿಮಾನಯಾನಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು ನಿಷೇಧ ಹೇರುವ…
ಶಿವಮೊಗ್ಗ:ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಬಗ್ಗೆ ವರದಿಯಾಗಿದೆ. ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಜಬೀವುಲ್ಲಾ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿರುವ ನಮೋ ಶಂಕರ ಲೇಔಟ್ ನಲ್ಲಿ ಪೊಲೀಸರು ಫೈರಿಂಗ್ ಮಾಡಿದ್ದಾರೆ.ಸದ್ಯ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ ವಿವಾದದಿಂದಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.