Author: main-admin

ಸುಳ್ಯ: ಮಂಗಳೂರಿನಿಂದ ಕುಶಾಲನಗರಕ್ಕೆ ಹೋಗುತ್ತಿದ್ದ ಟ್ಯಾಂಕ‌ರ್ ಹಾಗೂ ಮಡಿಕೇರಿಯಿಂದ ಕಾಸರಗೋಡು ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರು ಪರಸ್ಪರ ಢಿಕ್ಕಿ ಹೊಡೆದಿರುವ ಘಟನೆ ಸುಳ್ಯದ ಗೂನಡ್ಕ ಎಂಬಲ್ಲಿ ನಡೆದಿದೆ. ಗುದ್ದಿದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.ಹೆಚ್ಚಿನ ಮಾಹಿತಿಗಾಗಿ ನೀರಿಕ್ಷಿಸಲಾಗುತ್ತಿದೆ.

Read More

ಕಾಸರಗೋಡು: ಮನೆಯ ಮಹಡಿಯಿಂದ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಉಪ್ಪಳ ಕುಬಣೂರು ನಿವಾಸಿ ಪದ್ಮನಾಭ (50) ಎಂದು ಗುರುತಿಸಲಾಗಿದೆ. ಪದ್ಮನಾಭ ಅವರು ಕಳೆದ ಗುರುವಾರ ಸಂಜೆ ಕುಬಣೂರು ಪರಿಸರದ ನಿರ್ಮಾಣ ಹಂತದಲ್ಲಿರುವ ಮನೆಗೆ ಗ್ರಿಲ್ಸ್ ನಿರ್ಮಾಣಕ್ಕೆ ಕಾರ್ಮಿಕರನ್ನು ಕರೆದೊಯ್ದು, ಮೇಲಂತಸ್ತಿನಲ್ಲಿ ಕಾರ್ಮಿಕರ ಜತೆ ಅಳತೆ ತೆಗೆಯಲು ಸಹಕರಿಸುತ್ತಿದ್ದಾಗ ಆಯ ತಪ್ಪಿ ಮೆಟ್ಟಿಲಿನಿಂದ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಇನ್ನು ಇದೀಗ ಚಿಕಿತ್ಸೆ ಫಲಕಾರಿಯಾಗದೇ ಪದ್ಮನಾಭ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Read More

ಉಪ್ಪಿನಂಗಡಿ: ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಮಹಿಳಾ ಸಹಕಾರಿ ಸಂಘದಿಂದ ಹಣವನ್ನು ಸಾಲವಾಗಿ ಪಡೆದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕಿ ಚೈತನ್ಯಾ ಸಿ.ಎಚ್. ಎಂಬವರು ಈ ಬಗ್ಗೆ ದೂರು ನೀಡಿದ್ದು, ಜ.27ರಂದು ಮಧ್ಯಾಹ್ನ ಆರೋಪಿಗಳಾದ ನೆಲ್ಯಾಡಿ ಗ್ರಾಮದ ಸೆಬಾಸ್ಟಿಯನ್ ಮತ್ತು ಡಾನಿಶ್ ಎಂಬವರು ಸಂಘಕ್ಕೆ ಬಂದಿದ್ದು, ಮೇಲ್ನೋಟಕ್ಕೆ ನಕಲಿ ಎಂದು ಕಂಡುಬಾರದಂತಹ ಒಟ್ಟು 30 ಗ್ರಾಂ ತೂಕದ 4 ನಕಲಿ ಬಳೆಗಳನ್ನು ಸಂಘದಲ್ಲಿ ಅಡಮಾನವಿರಿಸಿ, ಸಂಘದಿಂದ 1.40 ಲಕ್ಷ ರೂ.ವನ್ನು ಸಾಲವಾಗಿ ಪಡೆದು ಮೋಸ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪಿನಕೋಟೆ ಮಾಬುಕಳದ ಮಿಲನ ರೆಸಿಡೆನ್ಸಿ ಫ್ಲ್ಯಾಟ್‌ನಲ್ಲಿ ಮೂರು ವರ್ಷಗಳ ಹಿಂದೆ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ನಾಲ್ಕನೇ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಉತ್ತರ ಪ್ರದೇಶದ ಲಕ್ನೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಉತ್ತರ ಪ್ರದೇಶದ ಗೋರಖ್ ಪುರ ನಿವಾಸಿ ಧರ್ಮೇಂದ್ರ ಕುಮಾರ್ ಸುಹಾನಿ (40) ಬಂಧಿತ ಆರೋಪಿ. ಈ ಹಿಂದೆ ಪ್ರಕರಣದ ಆರೋಪಿಗಳಾದ ವಿಶಾಲ ಗಾಣಿಗರ ಪತಿ ರಾಮಕೃಷ್ಣ ಗಾಣಿಗ ಹಾಗೂ ಸುಪಾರಿ ಕಿಲ್ಲರ್‌ಗಳಾದ ಗೋರಖ್ ಪುರದ ಸ್ವಾಮಿನಾಥನ್ ನಿಶಾದ್ ಮತ್ತು ರೋಹಿತ್ ರಾಣಾ ಪ್ರತಾಪ್ ನಿಶಾದ್ ಅವರನ್ನು ಬಂಧಿಸಲಾಗಿತ್ತು. ಧರ್ಮೇಂದ್ರ ಕುಮಾರ್, ಪ್ರಕರಣದ ಪ್ರಮುಖ ಆರೋಪಿ ರಾಮಕೃಷ್ಣ ಗಾಣಿಗ ಹಾಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್‌ನಿಗೂ ಪರಿಚಯ ಮಾಡಿಸಿ ಕೊಲೆಗೆ ಸಹಕರಿಸಿದ್ದನು. ಈತನು ಪ್ರಕರಣ ದಾಖಲಾದ ವಿಚಾರ ತಿಳಿದು, 3 ವರ್ಷಗಳಿಂದ ದುಬೈಯಲ್ಲಿ ತಲೆಮರೆಸಿಕೊಂಡಿದ್ದನು. ಧರ್ಮೇಂದ್ರ ಫೆ.2ರಂದು ದುಬೈಯಿಂದ ಲಕ್ನೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಭಾರತಕ್ಕೆ ಬರುತ್ತಿರುವ…

Read More

 ಬಂಟ್ವಾಳ : ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಇಲಿಯಾಸ್ ಯಾನೆ ಇಲ್ಯಾಸ್ (50) ಬಂಧಿತ ಆರೋಪಿ. ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣದ ಆರೋಪಿಯಾಗಿದ್ದು, ಈತನ ಮೇಲೆ ಕಲಂ 341 , 504, 324,506 ಜೊತೆಗೆ 34 ಐಪಿಸಿ ಯಡಿಲ್ಲಿ ಪ್ರಕರಣ ದಾಖಲಾಗಿದ್ದು, ಸುಮಾರು 8 ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Read More

ಬಾಲಿವುಡ್‌ ನಟಿ ಪೂನಂ ಪಾಂಡೆ ಸಾವಿನ ಸುದ್ದಿ ಅವರ ಅಭಿಮಾನಿಗಳ ಶಾಕ್ ಕೊಟ್ಟಿದ್ದಂತೂ ನಿಜ. ಆದರೆ ನಟಿಯ ಸತ್ತಿಲ್ಲ, ಬದುಕಿದ್ದಾಳೆ. ಹೌದು. ಈ ವಿಚಾರವನ್ನು ಸ್ವತಃ ಪೂನಂ ಪಾಂಡೆ ಹೇಳಿಕೊಂಡಿದ್ದಾರೆ. ತಾನು ಅಭಿಮಾನಿಗಳಿ ಶಾಕ್ ಕೊಡಲು ಹೀಗೆ ಮಾಡಿದೆ ನನ್ನನ್ನು ಕ್ಷಮಿಸಿ ಎಂದು ನಟಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಕ್ಷಮೆ ಕೇಳಿದ್ದಾಳೆ. ವಿಡಿಯೋದಲ್ಲಿ ನಟಿ ಹೇಳಿದ್ದೇನು?: ‘ಕ್ಷಮಿಸಿ, ನನ್ನ ಸಾವಿನಿಂದ ಬೇಸರದಲ್ಲಿದ್ದವರಿಗೆ ನಾನು ಕ್ಷಮೆ ಕೇಳುತ್ತೇನೆ. ನಾನು ಹಾಗೆ ಮಾಡಿದ್ದು ನಿಮಗೆಲ್ಲರಿಗೂ ಶಾಕ್ ಕೊಡುವುದಕ್ಕೆ ಮಾತ್ರ. ನಾನು ನನ್ನ ಸಾವನ್ನು ನಾನು ಫೇಕ್ ಮಾಡಿದೆ. ನನ್ನ ಉದ್ದೇಶ ನಿಮ್ಮೆಲ್ಲರನ್ನು ಶಾಕ್ ಮಾಡುವುದು ಮಾತ್ರ. ಗಂಭೀರವಾಗಿರುವ ವಿಚಾರದ ಬಗ್ಗೆ ಎಲ್ಲರಿಗೂ ಶಾಕ್ ಕೊಡಲು ಹೀಗೆ ಮಾಡಿದೆ. ನಾವು ಸೈಲೆಂಟಾಗಿ ಜೀವ ತೆಗೆಯುವ ಸರ್ವಿಕಲ್ ಕ್ಯಾನ್ಸರ್ ಬಗ್ಗೆ ಸಾಕಷ್ಟು ಮಾತನಾಡುತ್ತಿಲ್ಲ ಅಲ್ಲವೇ? ಆದರೆ ನನ್ನ ಸಾವು ಸರ್ವಿಕಲ್ ಕ್ಯಾನ್ಸರ್ ಬಗ್ಗೆ ನಿಮ್ಮನ್ನು ಚರ್ಚಿಸುವಂತೆ ಮಾಡಿದೆ’ ಎಂದು ಪೂನಂ ಪಾಂಡೆ ಹೇಳಿದ್ದಾರೆ. ಸರ್ವಿಕಲ್…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ದೇವಾಲಯಗಳ ನಾಡು ಎಂದರೂ ತಪ್ಪಾಗದು. ಇಲ್ಲಿನ ಒಂದೊಂದು ಪುರಾತನ ದೇವಾಲಯಗಳು ಒಂದೊಂದು ಇತಿಹಾಸ ಹೊಂದಿದೆ. ಧಾರ್ಮಿಕ ಕ್ಷೇತ್ರದ ಭೇಟಿಗೆ ಬರುವ ಜನರಿಗೆ ಇಲ್ಲಿನ ಎಲ್ಲಾ ಪ್ರವಾಸೋದ್ಯಮ ತಾಣಗಳ ಪರಿಚಯವಾದರೆ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರ ಉತ್ತಮವಾಗಿ ಬೆಳೆಯಬಹುದು ಎಂಬ ದೂರದೃಷ್ಟಿಯಿಂದ ಟಿವಿ ವಿಕ್ರಮದ ಸಂಸ್ಥಾಪಕರು ಹಾಗೂ ಪೋಸ್ಟ್‌ಕಾರ್ಡ್ ಮಾಧ್ಯಮದ ಮುಖ್ಯಸ್ಥರಾದ ಮಹೇಶ್ ವಿಕ್ರಮ್ ಹೆಗ್ಡೆಯವರು ನೇರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಮಹೇಶ್ ವಿಕ್ರಮ್ ಹೆಗ್ಡೆ ಯವರನ್ನು ಟ್ವಿಟರ್ ನಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ಫಾಲೋ ಮಾಡುತ್ತಿದ್ದು, ಈ ಹಿಂದೆ ವಿಕ್ರಮ್ ಹೆಗ್ಡೆಯವರ ಒಂದು ಟ್ವೀಟ್‌ಗೆ ಸ್ವತಃ ಮೋದಿಯವರು ಪ್ರತಿಕ್ರಿಯೆ ಕೂಡ ನೀಡಿದ್ದರು. ಇದು ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ದೊಡ್ಡ ಸುದ್ಧಿ ಕೂಡ ಮಾಡಿತ್ತು. ಇದೀಗ ಮತ್ತೆ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಯ ಬಗ್ಗೆ ಪ್ರಧಾನಿಗಳ ಗಮನ ಸೆಳೆಯುವ ಪ್ರಯತ್ನ ಮಾಡಿರುವ ವಿಕ್ರಮ್ ಹೆಗ್ಡೆಯವರ ಪೋಸ್ಟ್‌ಗೆ ಭಾರೀ…

Read More

ಉಡುಪಿ : ಅಕ್ರಮವಾಗಿ ವೇಶ್ಯಾವಾಟಿಕೆ ದಂಧೆ ಸಂಬಂಧಿಸಿ ಮೂವರನ್ನು ಮಣಿಪಾಲ ಠಾಣೆಯ ಪೊಲೀಸರು ವಶಕ್ಕೆ ಪಡೆದ ಘಟನೆ ಫೆ.1 ರಂದು ನಡೆದಿದೆ. ಓರ್ವ ವ್ಯಕ್ತಿ ಮಹಿಳೆಯರನ್ನು ಪುಸಲಾಯಿಸಿ ಕರೆ ತಂದು ಅಕ್ರಮ ವೇಶ್ಯಾವಾಟಿಕೆಗೆ ಕಳುಹಿಸಿಕೊಡುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ಸದ್ರಿ ಸ್ಥಳಕ್ಕೆ ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿ ಆರೋಪಿ ಪವನ್‌ ಎಂಬವನನ್ನು ವಶಕ್ಕೆ ಪಡೆದಿದ್ದಾರೆ.ಆರೋಪಿ ಪವನ್‌ ಹೇಳಿಕೆಯಂತೆ ಉಡುಪಿ ತಾಲೂಕು ಬೊಮ್ಮರಬೆಟ್ಟು ಮನೆಗೆ ದಾಳಿ ನಡೆಸಿ ಆರೋಪಿ ಚೇತನ್‌ ಸಿ.ಬಿ. ಮತ್ತು ಆರೋಪಿ ಪಂಜು ಎಂಬವರನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಅಸಘಂಟಿತ ವಲಯದ ಕಾರ್ಮಿಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇ-ಶ್ರಮ್ ವಯೋಮಿತಿ 70 ಕ್ಕೆ ವರ್ಷ ಏರಿಕೆಗೆ ನಿರ್ಧರಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಸಂತೋಷ್‌ ಲಾಡ್‌, ಇ-ಶ್ರಮ್‌ ಯೋಜನೆಯಲ್ಲಿ ಹೆಸರು ನೋಂದಾಯಿಸುವ ಅಸಂಘಟಿತ ಕಾರ್ಮಿಕರ ವಯೋಮಿತಿಯನ್ನು ೫೯ ವರ್ಷದಿಂದ 70 ವರ್ಷಕ್ಕೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ. ಸಾರಿಗೆ ವ್ಯಾಪ್ತಿಗೆ ಬರುವ ಆಟೊ ಚಾಲಕರು, ಟೈರ್‌ ಅಂಗಡಿಯವರು, ಮೆಕ್ಯಾನಿಕ್‌, ಗ್ಯಾರೇಜ್‌ ಮಾಲೀಕರು ಸೇರಿದಂತೆ ಸುಮಾರು 40 ಲಕ್ಷ ಮಂದಿ ಅಸಂಘಟಿತ ಕಾರ್ಮಿಕರನ್ನು ‘ಇ-ಶ್ರಮ್‌’ ಯೋಜನೆಯಡಿ ತರಲು ಚಿಂತಸಲಾಗಿದೆ ಎಂದು ಹೇಳಿದ್ದಾರೆ.

Read More

ಕೆಲವೊಂದು ಸಂದರ್ಭಗಳಲ್ಲಿ ಪೊಲೀಸರೇ ಅನಾಗರಿಕರಾಗಿ ನಡೆದುಕೊಳ್ಳುವುದು ವಿಪರ್ಯಾಸ. ಮಹಿಳಾ ಸಹೋದ್ಯೋಗಿ ಮೇಲೆ ಹಲ್ಲೆ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕದ ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ಅವರನ್ನು ತಮಿಳನಾಡಿನ ಈರೋಡ್ ಜಿಲ್ಲೆಯ ಗೋಬಿ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಗೋಬಿ ಪೊಲೀಸ್ ಠಾಣೆಯಲ್ಲಿ ಐಪಿಎಸ್ ಅಧಿಕಾರಿ ವಿರುದ್ಧ ಜಿಲ್ಲೆಯ ಮಹಿಳಾ ಪೊಲೀಸ್ ಒಬ್ಬರು ದೂರು ದಾಖಲು ಮಾಡಿದ್ದರಿಂದ ಐಪಿಎಸ್ ಅಧಿಕಾರಿಯನ್ನು ತಮಿಳುನಾಡು ಪೊಲೀಸರು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕರ್ನಾಟಕದ ಅರುಣ್ ರಂಗರಾಜನ್ ಬಂಧಿತ ಅಧಿಕಾರಿ ಎಂದು ಹೇಳಲಾಗುತ್ತಿದ್ದು, ದೂರು ನೀಡಿದ ಮಹಿಳೆ ಚಿಂಚೋಳಿ ತಾಲೂಕಿನ ಪೊಲೀಸ್ ಠಾಣೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಾರೆ ಎಂದು ಮೂಲಗಳು ತಿಳಿಸಿವೆ. ಕೆಲವು ದಿನಗಳ ಹಿಂದೆ ಈ ಮಹಿಳೆ ಜತೆ ಐಪಿಎಸ್ ಅಧಿಕಾರಿ ಅರುಣ ರಂಗರಾಜನ್ ತಮಿ ಳುನಾಡಿನ ತಿರುಚ್ಚಿಗೆ ತೆರಳಿದ್ದರು. ಈ ವೇಳೆ ಅವರಿಬ್ಬರ ಮಧ್ಯೆ ಜಗಳವಾಗಿದೆ. ಸ್ಥಳೀಯ ಪೊಲೀಸರು ರಾಜಿ ಮಾಡಿ ಕಳಿಸಿದ್ದರು. ಕಲಬುರಗಿ ಮಹಿಳಾ ಪೊಲೀಸ್ ದೂರು ಬಳಿಕ…

Read More