ಮುಂಬೈ: ಮುಂಬೈ ಪೊಲೀಸ್ಅಧಿಕಾರಿ ಎನ್‌ಕೌಂಟರ್ ಸ್ಪೆಷಲಿಸ್ಟ್ ಖ್ಯಾತಿಯ ದಯಾ ನಾಯಕ್ ಅವರಿಗೆ ಸೀನಿಯರ್ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಮುಂಭಡ್ತಿ ನೀಡಲಾಗಿದೆ. ಭೂಗತ ಜಗತ್ತಿಗೆ ಸಿಂಹಸ್ವಪ್ನರಾಗಿದ್ದ ದಯಾ ನಾಯಕ್ ಅವರು ಪ್ರಸ್ತುತ ಮುಂಬೈಯ ಬಾಂದ್ರಾ ಕ್ರೈಂ ಬ್ರಾಂಚ್‌ನಲ್ಲಿ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇದೀಗ ಮುಂಬೈ ಕ್ರೈಂ ಬ್ರಾಂಚ್ ಸೀನಿಯರ್ ಇನ್ಸ್‌ಪೆಕ್ಟರ್ ಆಗಿ ಅಧಿಕಾರ ವಹಿಸಿದ್ದಾರೆ.ಕಾರ್ಕಳ ಸಮೀಪದ ಎಣ್ಣೆಹೊಳೆಯವರಾದ ದಯಾ ನಾಯಕ್ 1995ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡು 2004ರ ವೇಳೆಗೆ ಮುಂಬೈ ಭೂಗತ ಲೋಕದ 85ಕ್ಕೂ ಹೆಚ್ಚು ಪಾತಕಿಗಳನ್ನು ಎನ್ ಕೌಂಟರಿನಲ್ಲಿ ಫಿನಿಶ್ ಮಾಡಿದ್ದರು. ಈ ಮೂಲಕ ಮುಂಬೈ ಜನತೆ, ಪ್ರಮುಖವಾಗಿ ಉದ್ಯಮಿಗಳು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು. ಮೂರು ವರ್ಷಗಳ ಕಾಲ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳದಲ್ಲಿ ಕರ್ತವ್ಯ ಸಲ್ಲಿಸಿದ್ದ ಅವರು ಸಮಾಜ ವಿರೋಧಿ ಕೃತ್ಯವೆಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರು. ಡ್ರಗ್ಸ್‌ಗೆ ಪ್ರಕರಣಗಳಿಗೆ ಕಡಿವಾಣ ಹಾಕಿದ್ದರು.
Author: main-admin
ಉಳ್ಳಾಲ : ಉಳ್ಳಾಲದಿಂದ ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಟ್ರ್ರಾಲ್ ಬೋಟೊಂದು ಶುಕ್ರವಾರ ನಸುಕಿನ ಜಾವ ಸಮುದ್ರದ ಮಧ್ಯದಲ್ಲಿದ್ದ ಕಲ್ಲಿಗೆ ಬಡಿದು ಮುಳುಗಿದ್ದು,ಅಲ್ಲೇ ಮೀನುಗಾರಿಕೆ ನಡೆಸುತ್ತಿದ್ದ ಎರಡು ಬೋಟ್‍ನ ಮೀನುಗಾರರು ಮುಳುಗುತ್ತಿದ್ದ ಬೋಟ್‍ನಲ್ಲಿದ್ದ ಐವರನ್ನು ರಕ್ಷಿಸಿದ್ದಾರೆ. ಮುಳುಗಡೆಯಾಗಿರುವ ಬೋಟ್‍ನಲ್ಲಿ ಮೀನು, ಬಲೆ ಸಮುದ್ರ ಪಾಲಾಗಿದ್ದು ಬೋಟ್‍ಗೂ ಹಾನಿಯಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಉಳ್ಳಾಲ ನಿವಾಸಿ ನಯನಾ ಪಿ.ಸುವರ್ಣ ಅವರಿಗೆ ಸೇರಿದ`ನವಾಮಿ – ಶಿವಾನಿ’ ಬೋಟ್ ದುರಂತಕ್ಕೀಡಾಗಿದ್ದು, ಬೋಟ್ ಚಲಾಯಿಸುತ್ತಿದ್ದ ನಯನಾ ಅವರ ಪತಿ ಪ್ರವೀಣ್ ಸುವರ್ಣ,ಉತ್ತರ ಪ್ರದೇಶದ ಮೀನುಗಾರರಾದ ಸಮರ ಬಹದ್ದೂರ್, ರಾಮ್ ಮನೋಜ್, ರೋಹಿತ್, ಪ್ರಕಾಶ್, ವಾಸು ಅವರಲ್ಲಿ ಮೂವರನ್ನು ನಾಡದೋಣಿಯಲ್ಲಿ ಆಗಮಿಸಿದ ರಾಮ ಸುವರ್ಣ ಮತ್ತು ಯತೀಶ್ ಸುವರ್ಣ ರಕ್ಷಿಸಿದರೆ, ಉಳಿದ ಇಬ್ಬರನ್ನು ಮತ್ತು ಬೋಟನ್ನು ಪ್ರಕಾಶ್ ಖಾರ್ವಿ ಮಾಲಕತ್ವದ ದುರ್ಗಾ ಲಕ್ಷ್ಮಿ ಮತ್ತು ಮನೋಜ್ ಖಾರ್ವಿ ಮಾಲಕತ್ವದ ಶ್ರೀಗೌರಿ ಬೋಟ್‍ನ ಮೀನುಗಾರರು ರಕ್ಷಿಸಿದ್ದಾರೆ. ಗುರುವಾರ ಸಂಜೆ ಪ್ರವೀಣ್ ಸುವರ್ಣ ಸೇರಿದಂತೆ ಉತ್ತರ ಪ್ರದೇಶದ ಐವರು ಮೀನುಗಾರರು ಮೀನುಗಾರಿಕೆಗೆ…
ಮುಂಬಯಿ: ಮಾಡೆಲ್ ಮತ್ತು ನಟಿ ಪೂನಂ ಪಾಂಡೆ ಫೆಬ್ರವರಿ 2 ರಂದು ಗರ್ಭಕಂಠದ ಕ್ಯಾನ್ಸರ್ನೊಂದಿಗೆ ಹೋರಾಡಿದ ನಂತರ ನಿಧನರಾದರು ಎಂದು ಅವರ ತಂಡ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. “ಈ ಮುಂಜಾನೆ ನಮಗೆ ಕಠಿಣವಾಗಿದೆ. ನಮ್ಮ ಪ್ರೀತಿಯ ಪೂನಂ ಅವರನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಕಳೆದುಕೊಂಡಿದ್ದೇವೆ ಎಂದು ನಿಮಗೆ ತಿಳಿಸಲು ತುಂಬಾ ದುಃಖವಾಗಿದೆ. ಅವಳೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಂದು ಜೀವಂತ ರೂಪವೂ ಶುದ್ಧ ಪ್ರೀತಿ ಮತ್ತು ದಯೆಯಿಂದ ಭೇಟಿಯಾಯಿತು” ಎಂದು ಪೂನಂ ಅವರ ಅಧಿಕೃತ Instagram ಖಾತೆಯಲ್ಲಿ ಬರೆಯಲಾಗಿದೆ. “ಈ ದುಃಖದ ಸಮಯದಲ್ಲಿ, ನಾವು ಹಂಚಿಕೊಂಡ ಎಲ್ಲದಕ್ಕೂ ನಾವು ಅವಳನ್ನು ಪ್ರೀತಿಯಿಂದ ನೆನಪಿಸಿಕೊಳ್ಳುವಾಗ ನಾವು ಖಾಸಗಿತನಕ್ಕಾಗಿ ವಿನಂತಿಸುತ್ತೇವೆ” ಎಂದು ಅದು ಸೇರಿಸಿದೆ.
ಕಾಸರಗೋಡು : 5 ವರ್ಷಗಳ ಹಿಂದೆ ಹತ್ಯೆಯಾದ ಮಹಿಳೆಯ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆಯನ್ನು ಪೊಲೀಸರು ಮತ್ತೆ ಪ್ರಾರಂಭಿಸಿದ್ದಾರೆ. ಮೂಲತಃ ಕೊಲ್ಲಂ ಇರವಿಪುರಂ ವಾಳತ್ತಿಂಗಲ್ ವೇಳೆ ವೀಟಿಲ್ ನ ಪ್ರಮೀಳಾ (30) ಅವರು 5 ವರ್ಷಗಳ ಹಿಂದೆ ಮೃತಪಟ್ಟಿರುತ್ತಾರೆ. ಅವರ ಮೃತದೇಹವನ್ನು ಪತ್ತೆಹಚ್ಚುವ ಕಾರ್ಯಾಚರಣೆ ವಿಫಲವಾದ ಹಿನ್ನೆಲೆ ಪೊಲೀಸರು ಶೋಧ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದರು. ಇದೀಗ ಮೃತದೇಹ ಪತ್ತೆ ಹಚ್ಚುವ ಕಾರ್ಯಾಚರಣೆಯನ್ನು ಪುನಃ ಆರಂಭಿಸಿದ್ದಾರೆ.ಮೃತ ಪ್ರಮೀಳ ಅವರ ಪತಿ ಮೂಲತ: ತಳಿಪರಂಬ ಆಲಕ್ಕೋಡು ನಿವಾಸಿ ಸೆಲ್ವರಾಜ್. ಈ ಹಿಂದೆ ಪ್ರಮೀಳಾ ಹಾಗೂ ಸೆಲ್ವರಾಜ್ ತಮ್ಮ ಇಬ್ಬರು ಮಕ್ಕಳೊಂದಿಗೆ ಕಾಸರಗೋಡು ವಿದ್ಯಾನಗರದ ಪನ್ನಿಪ್ಪಾರೆಯ ಬಾಡಿಗೆ ಕ್ವಾರ್ಟರ್ಸ್ ನಲ್ಲಿ ವಾಸಿಸುತ್ತಿದ್ದರು. 2019 ಸೆ. 19ರ ರಾತ್ರಿ ದಂಪತಿ ನಡುವೆ ಜಗಳ ಉಂಟಾಗಿದ್ದು, ಆ ಬಳಿಕ ಪ್ರಮೀಳಾ ದಿಢೀರ್ ಆಗಿ ನಾಪತ್ತೆಯಾಗಿದ್ದರು. ನಂತರ ಪ್ರಮೀಳಾ ನಾಪತ್ತೆಯಾಗಿರುವ ಬಗ್ಗೆ ಪತಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪುತ್ತೂರು: ಮನೆಯಿಂದ ಶಾಲೆಗೆಂದು ಹೋದ ವಿದ್ಯಾರ್ಥಿನಿ ಅತ್ತ ಶಾಲೆಗೂ ಬಾರದೆ, ಇತ್ತ ಮನೆಗೂ ಹಿಂದಿರುಗದೆ ನಾಪತ್ತೆಯಾಗಿದ್ದ ಪ್ರಕರಣ ಕೊನೆಗೂ ಬಾಲಕಿಯ ಪತ್ತೆಯೊಂದಿಗೆ ಸುಖಾಂತ್ಯ ಕಂಡಿದೆ.ಪುತ್ತೂರಿನ ಬಳ್ಕಾಡ್ ನಿವಾಸಿಯೋರ್ವರ ಪುತ್ರಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ ಗುರುವಾರ ನಾಪತ್ತೆಯಾಗಿದ್ದು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಸತತ ಹುಡುಕಾಟದ ಬಳಿಕ ಕಾಸರಗೋಡಿನಲ್ಲಿ ಪತ್ತೆಯಾಗಿದ್ದಾಳೆ. ಮನೆಮಂದಿ ಪೊಲೀಸರೊಂದಿಗೆ ಕಾಸರಗೋಡಿಗೆ ತೆರಳಿ ಬಾಲಕಿಯನ್ನು ಪುತ್ತೂರಿಗೆ ಕರಕೊಂಡು ಬಂದಿದ್ದಾರೆ. ಪುತ್ತೂರಿನ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ ಎಂದಿನಂತೆ ಬೆಳಿಗ್ಗೆ ಮನೆಯಿಂದ ಇತರ ಮಕ್ಕಳ ಜೊತೆ KSRTC ಸಂಸ್ಥೆ ಬಸ್ಸಿನಲ್ಲಿ ಶಾಲೆಗೆಂದು ಬಂದಿದ್ದಳು. ಶಾಲೆಯಲ್ಲಿ ಗುರುವಾರ ಪರೀಕ್ಷೆ ಇತ್ತು ಎನ್ನಲಾಗಿದ್ದು, ವಿದ್ಯಾರ್ಥಿನಿ ಶಾಲೆಗೆ ಹೋಗದೆ ನೇರವಾಗಿ ಕಾಸರಗೋಡಿನ ಪರ್ಲಡ್ಕದ ಬಾಲವನಕ್ಕೆ ತೆರಳಿದ್ದಳು. ಐಡಿ ಕಾರ್ಡ್ ಇಲ್ಲದ ಕಾರಣ ಬಾಲವನದ ಸಿಬ್ಬಂದಿ ಆಕೆಯನ್ನು ಒಳಗೆ ಬಿಟ್ಟಿರಲಿಲ್ಲ. ಅಲ್ಲಿಂದ ಹಿಂದಿರುಗಿ ಬಂದು ಪರ್ಲಡ್ಕದಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ತೆರಳಿ ನಾನು ಶಾಲೆಗೆ ಹೋಗಿಲ್ಲ, ಇಂದು ಇಲ್ಲಿ ಇರುವುದಾಗಿ ಹೇಳಿದ್ದಾಳೆ.…
ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ಪದಾರ್ಥವನ್ನು ಮಾರಾಟ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಮೇರಿಹೀಲ್ ಹೆಲಿಪ್ಯಾಡ್ ಬಳಿ ಮಾದಕ ವಸ್ತುವಾದ ಮೆಥಾಎಂಪೈಟಮೈನ್ . ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೊಹಮ್ಮದ್ ಫರಾಜ್ ಎಂಬಾತನನ್ನು ಮಂಗಳೂರು ಉತ್ತರ ಉಪ ವಿಭಾಗದ ಡ್ರಗ್ಸ್ ಸ್ಕ್ವಾಡ್ ಸಿಬ್ಬಂದಿಗಳು ಮತ್ತು ಕಾವೂರು ಪೊಲೀಸ್ ಠಾಣಾ ಸಿಬ್ಬಂದಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತನಿಂದ 30 ಸಾವಿರ ರೂಪಾಯಿ ಮೌಲ್ಯದ 7.28 ಗ್ರಾಂ ನಷ್ಟು ಮೆಥಾಎಂಪೆಟಮೈನ್ ಹಾಗೂ ಒಂದು ಲಕ್ಷ ಮೌಲ್ಯದ ಸುಜುಕಿ ಎಕ್ಸಸ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬ್ರ 15/2024 ಕಲಂ : 8(c), 21 (b) NDPS ರಂತೆ ಪ್ರಕರಣ ದಾಖಲಾಗಿದೆ.
ಉಡುಪಿ: ನೇಜಾರಿನ ತಾಯಿ ಮತ್ತು ಮೂವರು ಮಕ್ಕಳು ಕೊಲೆ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು ಫೆಬ್ರವರಿ ಮೊದಲ ವಾರದಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಲಾಗುತ್ತಿದೆ. ಆರೋಪಿ ಪ್ರವೀಣ್ ಚೌಗಲೆ ನೇಜಾರಿನ ತೃಪ್ತಿ ಲೇಔಟ್ ನಿವಾಸಿಗಳಾದ ಹಸೀನಾ ಮತ್ತು ಅವರ ಮಕ್ಕಳಾದ ಅಯ್ನಾಝ್, ಅಫ್ನಾನ್, ಆಸೀಮ್ ರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಎಫ್.ಎಸ್.ಎಲ್ ವರದಿ, ಹಲವು ಸಾಕ್ಷ್ಯಾಧಾರಗಳು ಪೊಲೀಸರ ಕೈ ಸೇರಿದ್ದು ಆರೋಪ ಪಟ್ಟಿಯಲ್ಲಿ ಸಂಪೂರ್ಣ ವಿವರವನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಕೃತ್ಯ ನಡೆದ ದಿನದಿಂದ 90 ದಿನಗಳೊಳಗೆ ಆರೋಪ ಪಟ್ಟಿ ಸಲ್ಲಿಸಬೇಕಾಗುತ್ತದೆ. ಆ ಹಿನ್ನಲೆಯಲ್ಲಿ ಫೆ. 10 ರ ಒಳಗೆ ಸಲ್ಲಿಸುವ ಸಾಧ್ಯತೆ ಇದೆ. ಈ ಬಗ್ಗೆ ಮಾಹಿತಿಯನ್ನು ನೀಡಿದ ಉಡುಪಿ ಎಸ್ಪಿ ಡಾ.ಅರುಣ್ ಕೆ ಅವರು ನೇಜಾರಿನ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಈಗಾಗಲೇ ಪೂರ್ಣಗೊಂಡಿದ್ದು, ಎಫ್‌ಎಸ್‌ಎಲ್ ವರದಿ ಗಳೆಲ್ಲವೂ ನಮ್ಮ ಕೈಸೇರಿದೆ. ಈ ಕುರಿತ ಚಾರ್ಜ್‌ಶೀಟ್‌ನ್ನು ಸಿದ್ಧ ಪಡಿಸುತ್ತಿದ್ದು, ಫೆ. ಮೊದಲ ವಾರದಲ್ಲಿ ಕೋರ್ಟ್‌ಗೆ ಸಲ್ಲಿಸಲು ಎಲ್ಲ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 6 ನೇ ಬಾರಿಗೆ ಮಧ್ಯಂತರ ಬಜೆಟ್ 2024 ಮಂಡಿಸಿದ್ದಾರೆ. ಕೇಂದ್ರ ಸರ್ಕಾರದ ಬಜೆಟ್ ನ ಹೈಲೆಟ್ಸ್ * ಆಯುಷ್ಮಾನ್ ಭಾರತ್ ಆಯುಷ್ಮಾನ್ ಭಾರತ್ ಅಡಿಯಲ್ಲಿ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕರಿಗೆ ಆರೋಗ್ಯ ರಕ್ಷಣೆ ಸೇವೆ ವಿಸ್ತರಿಸಲಾಗುವುದು *ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ *ಕಿಸಾನ್ ಸಂಪದ ಯೋಜನೆಯಿಂದ 38 ಲಕ್ಷ ರೈತರಿಗೆ ಲಾಭವಾಗಿದೆ. ದೇಶದಲ್ಲಿ ಹಾಲು ಉತ್ಪಾದನಾ ಡೇರಿಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಪ್ರತ್ಯೇಕ ಮತ್ಸ ಸಂಪದ ಯೋಜನೆ ಜಾರಿಗೊಳಿಸಿದೆ. ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆ ವಿಸ್ತರಿಸಲಾಗುವುದು. *ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯಕ್ಕೆ ಸರ್ಕಾರ ಹಣ ವ್ಯವಸ್ಥೆ ಮಾಡಲಿದೆ, ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. *ಸಣ್ಣ ನಗರಗಳಿಗೂ ಮೆಟ್ರೋ ವಿಸ್ತರಣೆ- 40 ಸಾವಿರ ರೈಲ್ವೆ ಕೋಚ್ ಬದಲಾವಣೆಗೆ ಕ್ರಮ ಕೈಗೊಂಡಿದ್ದೇವೆ, ಮೆಟ್ರೋ, ವಂದೇ…
ಕೇಂದ್ರ ಸರ್ಕಾರದಿಂದ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡೋದಕ್ಕಾಗಿ ಲಖ್ ಪತಿ ದೀದಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದಂತ ನಿರ್ಮಲಾ ಸೀತಾರಾಮನ್ ಅವರು, 2024ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಲಾಗುತ್ತಿದೆ. ಈ ಸಂದರ್ಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲಖ್ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು.ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದರು.
ಕಾಸರಗೋಡು: ನಗರದಲ್ಲಿ ಮಾಂಙಾಡ್ ನಿವಾಸಿಯನ್ನು ಹನಿಟ್ರ್ಯಾಪ್‌ನಲ್ಲಿ ಸಿಲುಕಿಸಿ 5 ಲಕ್ಷ ರೂ. ಲಪಟಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಮಹಿಳೆಯರು ಸಹಿತ 7 ಮಂದಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಕಲ್ಲಿಕೋಟೆ ಪೆರುಮಣ್ಣ ನಿವಾಸಿ ಪಿ. ಫೈಝಲ್ (37), ಪತ್ನಿ ಕುಟ್ಟಿಕ್ಕಾಟೂರ್ ನಿವಾಸಿ ಎಂ.ಪಿ. ಲುಬಾ° (29), ಕಾಸರಗೋಡು ಶಿರಿಬಾಗಿಲು ನಿವಾಸಿ ಎನ್. ಸಿದ್ದಿಕ್ (48), ಮಾಂಙಾಡ್‌ನ ದಿಲಾದ್ (40), ಮುಟ್ಟತ್ತೋಡಿಯ ನಫೀಸತ್ ಮಿಸ್ರಿಯ (40), ಮಾಂಙಾಡ್‌ನ ಅಬ್ದುಲ್ಲ ಕುಂಞಿ (32), ಪಡನ್ನಕ್ಕಾಡ್‌ನ ರಫೀಕ್ (42)ನನ್ನು ಮೇಲ್ಪರಂಬ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.










