ಸುಳ್ಯ: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಬಂಧಿಸಲಾದ ಮೂರು ಮಂದಿ ಆರೋಪಿಗಳಿಗೆ ಆ.16ರವರೆಗೆ ಪೊಲೀಸ್ ಕಸ್ಟಡಿ ವಿಧಿಸಿ ಸುಳ್ಯ ನ್ಯಾಯಾಲಯ ಆದೇಶ ನೀಡಿದೆ. ಇಂದು ಬಂಧಿಸಲಾದ ಪ್ರಕರಣದ ಪ್ರಮುಖ ಆರೋಪಿಗಳಾದ ಸುಳ್ಯ ನಿವಾಸಿ ಶಿಯಾಬುದ್ದೀನ್ (33), ರಿಯಾಜ್ ಅಂಕತಡ್ಕ(27), ಎಲಿಮಲೆ ನಿವಾಸಿ ಬಶೀರ್(29) ಎಂಬವರನ್ನು ಗುರುವಾರ ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸ್ ಅಧಿಕಾರಿಗಳು ಮನವಿ ಸಲ್ಲಿಸಿದ್ದರು. ಮನವಿ ಪುರಸ್ಕರಿಸಿದ ನ್ಯಾಯಾಲಯವು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿದೆ ಎಂದು ತಿಳಿದು ಬಂದಿದೆ. ಪುತ್ತೂರು ಡಿವೈಎಸ್‌ಪಿ ಗಾನಾ ಪಿ ಕುಮಾರ್, ಸುಳ್ಯ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
Author: main-admin
ಕಡಬ: ಎರಡು ನಂಬರ್ ಪ್ಲೇಟ್ ಹೊಂದಿರುವ ಅಪರಿಚಿತ ಕಾರೊಂದು ಮರ್ಧಾಳದಲ್ಲಿ ಕಂಡುಬಂದಿದ್ದು, ಪೊಲೀಸರು ಲಾಕ್ ಮಾಡಿದ್ದಾರೆ. ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಬೇರೆ ಬೇರೆ ನಕಲಿ ನಂಬರ್ ಪ್ಲೇಟ್ ಗಳನ್ನು ಹಾಕಲಾಗಿದ್ದು, ಬುಧವಾರ ರಾತ್ರಿ ಕಡಬ ಠಾಣಾ ಪೊಲೀಸರು ಮರ್ಧಾಳ ಜಂಕ್ಷನ್ ನಲ್ಲಿ ಕಾರಿನ ಚಕ್ರಗಳಿಗೆ ಲಾಕ್ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಆಂಜನೇಯ ರೆಡ್ಡಿ, ನಕಲಿ ನಂಬರ್ ಪ್ಲೇಟ್ ಹಾಕಿರುವ ಕಾರಿಗೆ ಲಾಕ್ ಮಾಡಲಾಗಿದ್ದು, ಕಾರಿನ ಮಾಲಕರನ್ನು ಪತ್ತೆ ಹಚ್ಚುವ ಕಾರ್ಯ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಮಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದು, ಈವರೆಗೆ ಬಂಧಿತರ ಸಂಖ್ಯೆ 10ಕ್ಕೇರಿದೆ. ಶಿಯಾಬುದ್ದೀನ್ ಅಲಿ(33), ಎಲಿಮಲೆಯ ಬಶೀರ್(29) ಮತ್ತು ರಿಯಾಜ್(27) ಬಂಧಿತ ಆರೋಪಿಗಳು. 15 ದಿನಗಳಿಂದ ಪದೇಪದೆ ಜಾಗ ಬದಲಿಸುತ್ತಾ ತಲೆಮರೆಸಿಕೊಂಡಿದ್ದ ಆರೋಪಿಗಳನ್ನ ತಲಪಾಡಿ ಚೆಕ್ ಪೋಸ್ಟ್ನಲ್ಲಿ ಗುರುವಾರ ಬೆಳಗ್ಗೆ ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ್ದ ವಾಹನ ಹಾಗೂ ಆಯುಧಗಳನ್ನು ವಶಕ್ಕೆ ಪಡೆಯಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ವಿವರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಲೋಕ್ ಕುಮಾರ್, ಪ್ರಕರಣಗಳಲ್ಲಿ ಸಂಚು ರೂಪಿಸಿದ ಹಾಗೂ ಸಹಕಾರ ನೀಡಿದ ಒಟ್ಟು 7 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಪ್ರಮುಖ ಆರೋಪಿಗಳ ಬಂಧನ ಸೇರಿದಂತೆ ಒಟ್ಟು ಹತ್ತು ಮಂದಿಯ ಬಂಧನವಾಗಿದೆ. ಇನ್ನೂ ತನಿಖೆ ಮುಂದುವರಿದಿದ್ದು ಹತ್ಯೆಗೆ ಹಾಗೂ ಆರೋಪಿಗಳ ರಕ್ಷಣೆಗೆ ಸಹಕಾರ ನೀಡಿದವರ ಬಂಧನವಾಗಲಿದೆ ಎಂದಿದ್ದಾರೆ. ಪ್ರವೀಣ್ ಕೊಲೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳು ಪದೇಪದೆ ತಮ್ಮ ವಾಸ ಸ್ಥಾನ ಬದಲಿಸುತ್ತಿದ್ದರು. ವಿಶೇಷ ತಂಡ ರಚಿಸಿ…
ಮಂಗಳೂರು: ನಗರದ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್‌ನಲ್ಲಿ ಕಳೆದ ಶುಕ್ರವಾರ ಸ್ಕೂಟರ್ ಅಪಘಾತದಲ್ಲಿ ಸವಾರ ಆತಿಶ್ (20) ಮೃತಪಟ್ಟಿದ್ದು, ನಗರದ ಗುಂಡಿಗಳನ್ನು ತುಂಬಿಸದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕೊಲೆ ದೂರು ದಾಖಲಿಸುವಂತೆ ನೆಟ್ಟಿಗರು ಆಗ್ರಹಿಸಿದ್ದು, ಇನ್ನು ಕೆಲವರು ಜನಪ್ರತಿನಿಧಿಗಳ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.ಆತಿಶ್ ಶುಕ್ರವಾರ ಸಂಜೆ 6.45ರ ಸುಮಾರಿಗೆ ನಂತೂರು ಜಂಕ್ಷನ್‌ನಿಂದ ಬಿಕರ್ನಕಟ್ಟೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದು, ಮಳೆಯಿಂದಾಗಿ ಕಂಡೆಟ್ಟು ಕ್ರಾಸ್‌ಗೆ ಸ್ವಲ್ಪ ಮೊದಲು ಬಿದ್ದಿದ್ದ ಗುಂಡಿಯನ್ನು ಅವರು ಗಮನಿಸಲಿಲ್ಲ. ಕೊನೆ ಕ್ಷಣದಲ್ಲಿ ಗುಂಡಿ ತಪ್ಪಿಸಲು ಯತ್ನಿಸಿದಾಗ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿವೈಡರ್‌ನ ಕಬ್ಬಿಣದ ರಿಫ್ಲೆಕ್ಟರ್ ರೇಲಿಂಗ್‌ಗೆ ಅವರ ತಲೆ ಬಡಿದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯ ರಸ್ತೆ ಮಧ್ಯೆದಲ್ಲಿ ಲಾರಿಗಳು ಕೆಟ್ಟು ನಿಂತಿವೆ. ಹೀಗಾಗಿ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಆಗಿದೆ. ಇದರಿಂದ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿತ್ತು. ಮೂಡಿಗೆರೆ ತಾಲೂಕಿನ ಅಲೇಖಾನ್ ಹೊರಟ್ಟಿ ಸಮೀಪ ಎರಡು ಲಾರಿಗಳು ಕೆಟ್ಟು ನಿಂತಿವೆ. ತಡೆಗೋಡೆ ಒಡೆದು ವಾಹನಗಳನ್ನ ಮುಂದಕ್ಕೆ ತೆಗೆದುಕೊಂಡು ಹೋಗಿದ್ದಾರೆ.
ಮಂಗಳೂರು: ಬೆಳ್ಳಾರೆ ಮೂಲದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಕೊನೆಗೂ ಬಂಧಿಸಿದ್ದು, ಈ ಸಂಬಂಧ ಮಾಹಿತಿ ನೀಡಲು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಇಂದು ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ಕರೆದಿದ್ದಾರೆ. ಬಂಧಿತ ಪ್ರಮುಖ ಮೂವರು ಆರೋಪಿಗಳು ಕೂಡ ಸ್ಥಳಿಯರೇ ಎಂದು ತಿಳಿದುಬಂದಿದೆ. ಹಂತಕರು ವ್ಯವಸ್ಥಿತ ಸಂಚು ರೂಪಿಸಿ ಪ್ರವೀಣ್ ಹತ್ಯೆ ನಡೆಸಿದ್ದಾರೆ. ಹತ್ಯೆಗೆ ಬೈಕ್ ನೀಡಿದ್ದ ಆರೋಪಿ ಸುಳ್ಯದ ಕಬೀರ್ನನ್ನು ಆಗಸ್ಟ್ 9ರಂದು ಬಂಧಿಸಲಾಗಿದೆ. ತನ್ನ ಪರಿಚಯಸ್ಥನ ಬೈಕ್ ಪಡೆದಿದ್ದ ಕಬೀರ್, ಅದನ್ನು ಹಂತಕರಿಗೆ ನೀಡಿದ್ದ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಸದ್ಯ ಪ್ರಕರಣ ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದು, ಈ ಕುರಿತ ಇನ್ನುಷ್ಟು ಮಾಹಿತಿ ಮಧ್ಯಾಹ್ನ ದಕ್ಷಿಣ ಕನ್ನಡ ಎಸ್ಪಿ ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ಸಿಗಲಿದೆ. ಎ.ಡಿ.ಜಿ.ಪಿ ಅಲೋಕ್ ಕುಮಾರ್ ಸಹ ಜಿಲ್ಲೆಯಲ್ಲೇ ಮೊಕ್ಕಾಂ ಹೂಡಿದ್ದು, ಸುದ್ದಿಗೋಷ್ಠಿಯಲ್ಲಿ ಅವರು ಕೂಡ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.
ಸುಳ್ಯ: ಹಾಡಹಗಲೆ ನಡುಬೀದಿಯಲ್ಲಿ ತಲ್ವಾರ್ ಹಿಡಿದು ಓಡಾಡಿದ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿದ್ದು, ಆತನ ಮೇಲೆ ಪ್ರಕರಣ ದಾಖಲಿಸಲಾಗಿದೆ. ಸುಳ್ಯ ಕನಕಮಜಲು ಗ್ರಾಮದ ಸುಣ್ಣಮೂಲೆ ಬಳಿ ಸಂದೀಪ್ ಎಂಬಾತ ತಲವಾರು ಹಿಡಿದುಕೊಂಡು ಹೋಗುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಸಂದೀಪ್ ನನ್ನು ಸುಳ್ಯ ಪೊಲೀಸರು ಬಂಧಿಸಿದ್ದು ಸುಮೊಟೋ ಪ್ರಕರಣ ದಾಖಲಿಸಿದ್ದಾರೆ. ಸಂದೀಪ್ ಗೆ ತಲವಾರು ಹೇಗೆ ಸಿಕ್ಕದೆ ಎಂಬುವುದು ಪೊಲೀಸರು ತನಿಖೆಯಿಂದ ತಿಳಿಯಬೇಕಿದೆ. ಪ್ರವೀಣ್ ನೆಟ್ಟಾರು ಅವರಿಗೆ ಶ್ರದ್ದಾಂಜಲಿ ಸಲ್ಲಿಸುವ ಕುರಿತ ಬ್ಯಾನರ್ ಅಳವಡಿಸಿಲು ಕನಕಮಜಲು ಪೇಟೆಯಲ್ಲಿ ಅನುಮತಿ ನೀಡಿಲ್ಲ ಎಂಬ ಕಾರಣಕ್ಕೆ ಕೋಪಗೊಂಡು ಈತ ತಲ್ವಾರ್ ಹಿಡಿದು ನಡೆದಾಡುತ್ತಿದ್ದ ಎಂದು ಹೇಳಲಾಗಿತ್ತು. ಈ ಬಗ್ಗೆ ಕನಕಮಜಲು ಗ್ರಾಮ ಪಂಚಾಯಿತಿ ಅವರನ್ನು ಸಂಪರ್ಕಿಸಿದಾಗ, ‘ ಪ್ಲೆಕ್ಸ್ ಬ್ಯಾನರ್ ಅಳವಡಿಸುವ ವಿಷಯವಾಗಿ ಅನುಮತಿಗಾಗಿ ನಮ್ಮಲ್ಲಿಗೆ ಯಾರೂ ಬಂದಿಲ್ಲ. ಬಟ್ಟೆ ಬ್ಯಾನರ್ ಹಾಕಲು ನಾವು ಅನುಮತಿ ನೀಡಿದ್ದೇವೆ’ ಎಂದು ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿ…
ಮಂಗಳೂರು:ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಪ್ರಮುಖ ಸಭೆ ನಡೆಸಲಿದ್ದಾರೆ. ಆರು ಜಿಲ್ಲೆಯ ಎಸ್ಪಿ,ಎನ್ ಐ ಎ ಅಧಿಕಾರಿಗಳೊಂದಿಗೆ ಎಡಿಜಿಪಿ ಸಭೆ ನಡೆಸಲಿದ್ದು, ಬೆಳ್ಳಾರೆ ಪ್ರವೀಣ್ ಕೊಲೆ ಕೇಸ್ ನಲ್ಲಿ ಮುಖ್ಯ ಆರೋಪಿಗಳ ಬಂಧನ ಆಗಬೇಕಿದೆ.ಆರೋಪಿಗಳ ದಸ್ತಗಿರಿಗೆ ಬೇರೆ ಬೇರೆ ಜಿಲ್ಲೆಯ ಅಧಿಕಾರಿಗಳ ಸಭೆ ಮಾಡುತ್ತೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪ್ರಮುಖ ಆರೋಪಿಗಳ ಬಂಧನಕ್ಕೆ ಸಂಬಂಧಿಸಿದಂತೆ ಸಭೆ ಮಾಡಲಿದ್ದೇವೆ. ಮಂಗಳೂರಿನ ಕಾನೂನು ಸುವ್ಯವಸ್ಥೆ ಬಗ್ಗೆಯೂ ಸಭೆ ಮಾಡುತ್ತೇವೆ.ಮುಖ್ಯ ಆರೋಪಿಗಳಿಗೆ ಪ್ರತ್ಯಕ್ಷ ಪರೋಕ್ಷವಾಗಿ ಸಹಕಾರ ಮಾಡಿದವರಿಗೂ ಕ್ರಮ ಆಗಲಿದೆ.ಎನ್ ಐ ಎ ಅಧಿಕಾರಿಗಳ ಜೊತೆ ಸೇರಿ ಕ್ರಮ ಜರುಗಿಸುತ್ತೇವೆ. ಕೋರ್ಟ್ ಮೂಲಕ ವಾರೆಂಟ್ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದ್ದಾರೆ.ಎನ್ ಐ ಎ ಅಧಿಕಾರಿಗಳ ಜೊತೆ ಕರ್ನಾಟಕ ತಂಡ ಈ ಕೆಲಸ ಮಾಡಲಿದೆ. ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿಗಳ ಸಂಪೂರ್ಣ ಮಾಹಿತಿ ಇದೆ. ಅವರ ಫೋಟೋ,ಮನೆ ವಿಳಾಸ,ತಂದೆ-ತಾಯಿ,ಹೆಂಡತಿ ಮಾಹಿತಿ ಎಲ್ಲವೂ…
ವಿಟ್ಲ: ಗ್ರಾ. ಪಂ ಸದಸ್ಯ ಪುನೀತ್ ಮಾಡತ್ತಾರು ಎಂಬವರಿಗೆ ಸಾರ್ವಜನಿಕವಾಗಿ ಹಲ್ಲೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೇಪು ಗಣೇಶ ಮತ್ತು ನಿಶಾಂತ್ ಶೆಟ್ಟಿ ನೀರುಮಾರ್ಗ ಬಂಧಿತರು. ವಿಟ್ಲದ ಚಂದಳಿಕೆ ಮಾಡತ್ತಡ್ಕ ರಸ್ತೆಯಲ್ಲಿ ನಿನ್ನೆ ಈ ಘಟನೆ ನಡೆದಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಮೂಡಿಗೆರೆ: ರಾಜ್ಯದಲ್ಲಿ ವರುಣಾರ್ಭಟ ಮುಂದುವರಿಯುತ್ತಿರುವಂತೆ ಮಳೆ ಸಂಬಂಧಿ ಅವಘಡಗಳು ಹೆಚ್ಚಾಗುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನಲ್ಲಿ ಮನೆಯ ಮೇಲೆ ಮರ ಬಿದ್ದು ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೆ.ತಲಗೂರು ಗ್ರಾಮದಲ್ಲಿ ಎಂಬಲ್ಲಿ ಕಳೆದ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು ಮೃತರನ್ನು 55 ವರ್ಷದ ಚಂದ್ರಮ್ಮ ಹಾಗೂ ಮಗಳು 37 ವರ್ಷದ ಸರಿತಾ ಎಂದು ಗುರುತಿಸಲಾಗಿದೆ. ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.