ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಆ. 9ರಂದು ತಾಲೂಕಿನ ನೆರಿಯ ಗ್ರಾಮದ ಪಿಲಿಕಳ ಪಂಪ್‌ಹೌಸ್ ಬಳಿ ನಡೆದಿದೆ. ಮೃತರನ್ನು ಪಿಲಿಕಳ ಪಂಪ್‌ಹೌಸ್ ಬಳಿಯ ನಿವಾಸಿ ಸಚಿನ್ (17) ಎಂದು ಗುರುತಿಸಲಾಗಿದೆ.ಮುಂಡಾಜೆ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.ಆ. 9ರಂದು ಕಾಲೇಜಿಗೆ ರಜೆ ಇದ್ದು, ಮನೆಯಲ್ಲಿದ್ದ ಸಂದರ್ಭ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತ್ತು. ಅವಳಿ ಮಕ್ಕಳ ಪೈಕಿ ಓರ್ವರಾಗಿರುವ ಅವರು ತಂದೆ, ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ
Author: main-admin
ಮಂಗಳೂರು;ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಕೊಲೆಯತ್ನ, ಅಥವಾ ಹಲ್ಲೆ ಘಟನೆ ನಡೆದಿಲ್ಲ, ಈ ಬಗ್ಗೆ ಯಾರೂ ಸುಳ್ಳು ಸುದ್ದಿ ಹರಡಬೇಡಿ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ. ಕೊಲೆ ಯತ್ನ ನಡೆಸಿದ್ದಾರೆಂಬ ಸುದ್ದಿ ಸುಳ್ಳಾಗಿದ್ದು, ವ್ಯಕ್ತಿಯೊಬ್ಬರು ಕಂಕನಾಡಿ ಠಾಣೆಗೆ ಆಗಮಿಸಿ ತನಗೆ ಇಂಟರ್ನೆಟ್ ಮೂಲಕ ಬೆದರಿಕೆ ಕರೆ ಬಂದಿರುವುದಾಗಿ ಹಾಗೂ ತನ್ನನ್ನು ಯಾರೋ ಎರಡು ಮೂರು ಬೈಕ್ ಗಳಲ್ಲಿ ಹಿಂಬಾಲಿಸುತ್ತಿರುವುದಾಗಿ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದಾಗ ಇಂಟರ್‌ನೆಟ್ ಮೂಲಕ ಕರೆ ಬಂದಿರುವುದು ಕಂಡು ಬಂದಿದೆ. ಆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಕಮಿಷನರ್ ತಿಳಿಸಿದ್ದಾರೆ. ಯಾರೋ ಹಿಂಬಾಲಿಸಿಕೊಂಡು ಬಂದ ಬಗ್ಗೆ ಸಿಸಿಟಿವಿ ಪರಿಶೀಲಿಸಲಾಗಿದೆ. ಅದು ಫುಡ್ ಡೆಲಿವರಿಯ ವಾಹನವಾಗಿದ್ದು, ಅದು ದೂರು ನೀಡಿರುವ ವ್ಯಕ್ತಿಯ ಪಕ್ಕದ ಮನೆಗೆ ಆರ್ಡರ್ ಪೂರೈಕಾಗಿ ಬಂದಿದ್ದಾಗಿದೆ. ಈ ಬಗ್ಗೆ ದೂರುದಾರರಿಗೂ ಮನವರಿಕೆಯಾಗಿದೆ ಎಂದು ಹೇಳಿದ್ದಾರೆ. ನಿನ್ನೆ ಘಟನೆ ಆಗಿದ್ದು, ನಾನು ಕಂಕನಾಡಿ ಠಾಣೆಗೆ ತೆರಳಿ, ದೂರು ನೀಡಿರುವ ವ್ಯಕ್ತಿ ಜತೆ…
ವಿಟ್ಲ: ನೆಕ್ಕರೆ ಕಾಡಿನಲ್ಲಿ ತಲೆ ಬುರುಡೆ ಮತ್ತು ಎಲುಬು ಹಾಗೂ ಬಟ್ಟೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಉಕ್ಕುಡ ಕಾಂತಡ್ಕ ನಿವಾಸಿ ನಾಗೇಶ್ ಗೌಡ(65) ಎಂದು ಗುರುತಿಸಲಾಗಿದೆ. ನಾಗೇಶ್ ಗೌಡ ರವರು 6 ತಿಂಗಳ ಹಿಂದೆ ನಾಪತ್ತೆಯಾಗಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಿನ್ನೆ ಸಂಜೆ ವೇಳೆ ಗುಡ್ಡಕ್ಕೆ ಕಟ್ಟಿಗೆಗೆ ತೆರಳಿದ್ದವರಿಗೆ ತಲೆ ಬುರುಡೆ, ಎಲುಬು ಬಟ್ಟೆಗಳು ಕಾಣ ಸಿಕ್ಕಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ನಾಪತ್ತೆ ಪ್ರಕರಣಗಳ ಜಾಡು ಹಿಡಿದು ತನಿಖೆ ನಡೆಸಿದ್ದು, ಈ ವೇಳೆ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿ ನಾಪತ್ತೆಯಾದ ನಾಗೇಶ್ ಎಂಬವರ ಮಗನನ್ನು ಸ್ಥಳಕ್ಕೆ ಕರೆಸಿ ಪರಿಶೀಲಿಸಿದಾಗ ಅದು ನಾಗೇಶ್ ಗೌಡ ಎಂದು ಅವರ ಮಗ ಗುರುತು ಪತ್ತೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ನಾಗೇಶ್ ಗೌಡ ರವರು ನೆಕ್ಕರೆ ಕಾಡು ರಸ್ತೆಯಾಗಿ ಮನೆಯೊಂದಕ್ಕೆ ಕೆಲಸಕ್ಕೆ ತೆರಳುತ್ತಿದ್ದು, ಈ ವೇಳೆ ಏನಾದರೂ…
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನೆಕ್ಕರೆಕಾಡು ಎಂಬಲ್ಲಿ ಗುಡ್ಡವೊಂದರಲ್ಲಿ ವ್ಯಕ್ತಿಯೋರ್ವರ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾಗಿದೆ. ಆ. 8ರಂದು ಸಾಯಂಕಾಲ ಗುಡ್ಡಕ್ಕೆ ಸೊಪ್ಪುತರಲೆಂದು ತೆರಳಿದ ಸ್ಥಳೀಯರಿಗೆ ತಲೆಬುರುಡೆ, ಎಲುಬು ಹಾಗೂ ಆ ವ್ಯಕ್ತಿ ಧರಿಸಿರುವುದಾಗಿ ಶಂಶಯಿಸಲ್ಪಟ್ಟ ಬಟ್ಟೆ ಕಾಣಸಿಕ್ಕಿದೆ. ಬಳಿಕ ಅವರು ಮರಳಿ ಬಂದು ಮನೆಮಂದಿಗೆ ವಿಚಾರ ತಿಳಿಸಿದ್ದಾರೆ. ರಾತ್ರಿ ವೇಳೆ ಅವರು ಈ ವಿಚಾರವನ್ನು ವಿಟ್ಲ ಠಾಣಾ ಪೊಲೀಸರಿಗೆ ತಿಳಿಸಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ. ತಲೆಬುರುಡೆ ಪತ್ತೆಯಾದ ಪ್ರಕರಣ ನಾಗರೀಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆ. 14ರ ಮಧ್ಯ ರಾತ್ರಿವರೆಗೆ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ, ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮಗಳಿಗೆ ಈ ನಿಬಂಧನೆಯನ್ನು ಜಿಲ್ಲಾಡಳಿತ ಸಡಿಲಿಸಿದೆ. ‘ನಿಷೇಧಾಜ್ಞೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಾರ್ವಜನಿಕರು, ಸಂಘಟನೆಗಳು ಅಥವಾ ರಾಜಕೀಯ ಪಕ್ಷಗಳು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಬಹುದು’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಏರ್ಪಡಿಸುವವರು ಜಿಲ್ಲಾ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬಹುದು. ‘ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿಯೂ ಸಿಆರ್‌ಪಿಸಿ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಬಹುದು’ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.
ವಿಟ್ಲ : ಅನಂತಾಡಿ ಗ್ರಾಮದ ಬಂಟ್ರಂಜ ನಿವಾಸಿ ಶೇಖರ ಅವರ ಪುತ್ರಿ, ಬಾಬನಕಟ್ಟೆ ಲಿಖಿತಾ (11) ಜೋಕಾಲಿ ಹಗ್ಗ ಉರುಳಾಗಿ ಮೃತಪಟ್ಟಿದ್ದಾಳೆ.ಆರನೇ ತರಗತಿ ವಿದ್ಯಾರ್ಥಿನಿ ಲಿಖಿತಾ ಅಪ್ಪ,ಅಮ್ಮ ಹೊರ ಹೋದ ಸಂದರ್ಭದಲ್ಲಿ ಮನೆಯಲ್ಲಿ ಜೋಕಾಲಿಯಾಡುತ್ತಿದ್ದಳು. ತಾಯಿ ವಾಪಸ್ಸ್ ಮನೆಗೆ ಬಂದಾಗ ಲಿಖಿತಾ ಕುತ್ತಿಗೆಗೆ ಜೋಕಾಲಿ ಸುತ್ತಿ ನೇತಾಡುತ್ತಿದ್ದನ್ನು ಕಂಡು ಸ್ಥಳೀಯರನ್ನು ಕರೆದು ಜೋಕಾಲಿಯ ಸೀರೆಯಿಂದ ಲಖಿತಾಳನ್ನು, ಬಿಡಿಸಿದಾಗ ಮೃತಪಟ್ಟಿದ್ದಳು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಡುಪಿ: ಮೇಯಲು ಹೋದ ಜಾನುವಾರುಗಳಿಗೆ ವಿದ್ಯುತ್ ಶಾಕ್ ಆಗಿ ನಾಲ್ಕು ಜಾನುವಾರುಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯ ಬೈಂದೂರು ತಾಲೂಕು ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರು ಬಳಿ ನಡೆದಿದೆ. ಗಾಳಿ ಮಳೆ ಹಿನ್ನಲೆಯಲ್ಲಿ ತುಂಡಾಗಿ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ್ದ ಹಸುಗಳು ಮೃತಪಟ್ಟಿದೆ. ಹಳೆ ವಿದ್ಯುತ್ ತಂತಿ ದುರಸ್ತಿಗೆ ಅನೇಕ ಬಾರಿ ಸ್ಥಳೀಯರು ಮನವಿ ಮಾಡಿದ್ದರೂ ಕೂಡಾ ದುರಸ್ತಿ ಮಾಡದೇ ನಿರ್ಲಕ್ಷ್ಯ ತೋರಿದ್ದ ಕೆಇಬಿ ಅಧಿಕಾರಿಗಳ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸ್ಥಳಕ್ಕೆ ಪಶು ವೈದ್ಯಾಧಿಕಾರಿ ಹಾಗೂ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಮಂಗಳೂರು: ಇಂಗ್ಲೆಂಡ್‌ನ ಬರ್ಮಿಂಗ್ ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ -2022 ವೇಟ್ ಲಿಫ್ಟಿಂಗ್‌ನಲ್ಲಿ ಕಂಚಿನ ಪದಕ ಗೆದ್ದು ತವರಿಗೆ ಬಂದ ಕುಂದಾಪುರದ ಗುರುರಾಜ್ ಪೂಜಾರಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾನುವಾರ ಸ್ವಾಗತಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್ ಆತ್ಮೀಯವಾಗಿ ಅಭಿನಂದಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಿ.ವೀರೇಂದ್ರ ಹೆಗ್ಗಡೆ ಅವರೂ ಅಭಿನಂದಿಸಿದರು. ಕಾಮನ್ ವೆಲ್ತ್ ಗೇಮ್ಸ್ -2022ರಲ್ಲಿ ವೇಟ್‌ಲಿಫ್ಟಿಂಗ್‌ನಲ್ಲಿ 61 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಗುರುರಾಜ್ ಸತತ ಎರಡನೇ ಬಾರಿಗೆ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪಾಲ್ಗೊಂಡಿದ್ದಾರೆ. ಕಳೆದ ಬಾರಿ ಪುರುಷರ 56 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿರುವ ಅವರು ಬೆಳ್ಳಿಯ ಪದಕ ಗೆದ್ದಿದ್ದರು.
ಮಂಗಳೂರು : ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯವರೆಗೆ ವಿಧಿ ಸಿದ್ದ ಕೆಲವು ನಿರ್ಬಂಧಗಳನ್ನು ಆ. 8ರ ಮುಂಜಾನೆಯಿಂದ ಅನ್ವಯವಾಗುವಂತೆ ರದ್ದುಗೊಳಿಸಲಾಗಿದೆ. ಆದರೆ ಮಂಗಳೂರು ಪೊಲೀಸ್ ಕಮಿಷನರೆಟ್ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ನಿಷೇಧಾಜ್ಞೆಯನ್ನು ಆ. 14ರ ಮಧ್ಯರಾತ್ರಿ ವರೆಗೆ ವಿಸ್ತರಿಸಲಾಗಿದೆ. ಎಲ್ಲ ವಾಣಿಜ್ಯ, ವ್ಯವಹಾರ ಮಳಿಗೆಗಳು, ಅಂಗಡಿಗಳು ಹಾಗೂ ಮದ್ಯದ ಅಂಗಡಿಗಳು ಆ. 8ರಿಂದ ಎಂದಿನಂತೆ ಕಾರ್ಯಾಚರಿಸಬಹುದಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಆದೇಶದಲ್ಲಿ ತಿಳಿಸಿದ್ದಾರೆ. ವಾಹನ ಸಂಚಾರಕ್ಕೆ ಯಾವುದೇ ನಿರ್ಬಂಧಗಳಿರುವುದಿಲ್ಲ. ಆದರೆ ಅನಗತ್ಯ ರಾತ್ರಿ ಸಂಚಾರ ಬೇಡ ಎಂದು ಹೇಳಿದ್ದಾರೆ.
ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಅ. 8ರಿಂದ 9ರ ವರೆಗೆ ‘ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ವೇಳೆ ಬಿರುಸಿನ ಗಾಳಿ-ಮಳೆ ಇರಲಿದ್ದು, ಸಮುದ್ರದ ಅಬ್ಬರ ಕೂಡ ಹೆಚ್ಚಿರುವ ಸಾಧ್ಯತೆ ಇದೆ. ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇರುವುದರಿಂದ ಆ.11ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ತೆರಳಿರುವ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.