Author: main-admin

ವಿಟ್ಲ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಕಳ್ಳತನ ಪ್ರಕರಣವಾಗಿ ತಿಂಗಳಾಗುತ್ತ ಬಂದಿದ್ದು, ಪೊಲೀಸರು ತನಿಖೆಯಲ್ಲಿ ಪ್ರಗತಿಯನ್ನು ಸಾಧಿಸಿದ್ದು, ಈಗಾಗಲೇ ನಾಲ್ವರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ದರೋಡೆಕೋರರು ದರೋಡೆಗೈದ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಪತ್ತೆ ಮಾಡಲಾಗಿದೆ. ಕೇರಳದ ಪೈವಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಯಾರ್ ಸಜಂಕಿಲ ಎಂಬಲ್ಲಿ ಹೂತಿಟ್ಟಿದ್ದ ಏಳು ಕೆಜಿ ಚಿನ್ನಾಭರಣ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಕರ್ನಾಟಕ ಪೊಲೀಸರಿಗೆ ಚಿನ್ನವನ್ನು ಹೂತಿಟ್ಟಿರುವುದು ಪತ್ತೆಯಾಗಿದೆ. ಅಡ್ಯಡ್ಕದಲ್ಲಿರುವ ಬ್ಯಾಂಕ್‌ನಿಂದ 4,20,70,000 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ದೋಚುವುದು ಇದರ ಉದ್ದೇಶ ಎಂದು ಪೊಲೀಸರು ಶಂಕಿಸಿದ್ದಾರೆ. ಕಳೆದ ತಿಂಗಳು 7ರಂದು ನಡೆದಿದ್ದ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ವಿಶೇಷ ಪೊಲೀಸ್ ತಂಡವು ಕಾಸರಗೋಡಿನ ನಾಲ್ವರನ್ನು ಬಾಯಾರಿನ ಒಬ್ಬ ಸೇರಿದಂತೆ ನಾಲ್ವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿತ್ತು. ಅವರಿಂದ ಬಂದ ಮಾಹಿತಿ ಮೇರೆಗೆ ಪೊಲೀಸರು ಸಜಿಂಕಿಲಾಗೆ ಆಗಮಿಸಿ ಚಿನ್ನವನ್ನು ಅಗೆದಿದ್ದಾರೆ ಎಂದು ವರದಿಯಾಗಿದೆ. ಸದ್ಯದಲ್ಲೇ ಈ ಕುರಿತು ಹೆಚ್ಚಿನ…

Read More

ಮಂಗಳೂರು : ಲಂಚದ ಹಣ ಸ್ವೀಕಾರ ಮಾಡುವಾಗ ಜಮೀನು ಸರ್ವೆಯರ್ ಒಬ್ಬರು ಲೋಕಾಯುಕ್ತದ ಬಲೆಗೆ ಬಿದ್ದಿದ್ದು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಶೀತಲ್ ರಾಜ್ ಬಂಧಿತ ಆರೋಪಿಯಾಗಿದ್ದಾನೆ. ಜಮೀನಿನ ಪಹಣಿಯಲ್ಲಿನ ಹೆಸರನ್ನು ತೆಗೆಯಲು ನಿಯಮದಂತೆ ಜಮೀನನ್ನು ಸರ್ವೆ ಮಾಡಿ ನಕ್ಷೆ ತಯಾರಿಸಿ ತತ್ಕಾಲ್ ಪೋಡಿ ಮುಖಾಂತರ ತೆಗೆಯುವ ಪ್ರಕ್ರೀಯೆ ಇರುತ್ತದೆ.ಗುರುಪುರ ಹೋಬಳಿಯಲ್ಲಿರುವ ನೀರುಮಾರ್ಗ ಗ್ರಾಮದ ಶ್ರೀಮತಿ ಲಿಲ್ಲಿ ಪೀಟರ್ ವಾಸ್ ಅವರಿಗೆ 72 ವರ್ಷ ವಾಗಿದ್ದು ಆರೋಗ್ಯ ಸರಿ ಇಲ್ಲದ ಕಾರಣ ಅವರ ಪರವಾಗಿ ದೂರುದಾರರು ಸ್ಟೆಲ್ಲಾ ಜನೆಟ್ ವಾಸ್ ಇವರ ಹೆಸರಿಗೆ ತತ್ಕಾಲ್ ಪೋಡಿ ಮಾಡಿಕೊಡುವ ಬಗ್ಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಪಹಣಿ ವಿಭಾಗದಲ್ಲಿ ಆನ್ ಲೈನ್ ಮುಖಾಂತರ ಜಮೀನಿನ ತಾತ್ಕಾಲ್ ಪೋಡಿಗಾಗಿ ಅರ್ಜಿ ಸಲ್ಲಿಸಿ ಇದಕ್ಕಾಗಿ 1500 ರೂ ಯನ್ನು ಪವಾತಿ ಮಾಡಿ ರಶೀದಿ ಪಡೆದಿದ್ದರು. ಅದರಂತೆ ಫೆಬ್ರವರಿ 29 ರಂದು ಮಂಗಳೂರಿನ ಸರ್ವೇ ಇಲಾಖೆಯಲ್ಲಿ ಕೆಲಸ ಮಾಡುವ ಶೀತಲ್ ರಾಜ್ ಎಂಬ ಸರ್ವೆಯರ್ ಜಮೀನಿನ ಸರ್ವೆ…

Read More

ಚಾಕೊಲೇಟ್ ಎಂದು ಮಾತ್ರೆ ಸೇವಿಸಿ 5 ವರ್ಷದ ಮಗು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಕಡಬನಕಟ್ಟೆ ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಕಡಬನಕಟ್ಟೆ ಗ್ರಾಮದ ಪವಿತ್ರಾ ಎಂಬುವವರ ಮಗು ರುತ್ವಿಕ್ (5) ಮೃತಪಟ್ಟಿದೆ. ಪವಿತ್ರಾ ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ವೈದ್ಯರಿಂದ ಕೆಲವು ಮಾತ್ರೆಗಳನ್ನು ಪಡೆದು ಮನೆಯಲ್ಲಿ ತಂದಿಟ್ಟುಕೊಂಡಿದ್ದರು. ಮನೆಯಲ್ಲಿ ಆಟವಾಡುತ್ತಿದ್ದ ಮಗು ಚಾಕೊಲೇಟ್ ಎಂದು ಭಾವಿಸಿ ಮಾತ್ರೆಗಳನ್ನು ತಿಂದಿದೆ. ಪರಿಣಾಮ ಮಗುವಿನ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಪೋಷಕರು ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ವೈದ್ಯರ ಸೂಚನೆ ಮೇರೆಗೆ ಬೆಂಗಳೂರಿನ ಆಸ್ಪತ್ರೆಗೆ ಮಗುವನ್ನು ದಾಖಲಿಸಿದ್ದು, ಚಿಕಿತ್ಸೆ ಫಲಿಸದೇ 4 ದಿನಗಳ ಬಳಿಕ ಇಂದು ಮಗು ಮೃತಪಟ್ಟಿದೆ. ಘಟನೆ ಸಂಬಂಧ ಚಿತ್ರದುರ್ಗದ ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಆರೋಪಿ ರಾಜೀವ್ 30ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಸ್ಥಳೀಯವಾಗಿ ಬ್ಯಾಂಕು, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣವನ್ನು ಪಡುಬಿದ್ರಿ ಪಿಎಸ್‌ಐ ಪ್ರಸನ್ನ ಮತ್ತು ತಂಡ ಬೇಧಿಸಿದ್ದಾರೆ. ರಾಜೀವ್‌ನಿಗೆ ಸಹಕರಿಸಿದ ಆರೋಪಿಗಳಾದ ಕುಮುಟಾದ ನಿತಿಲ್ ಭಾಸ್ಕರ್ ಶೇಟ್, ಸಂಜಯ್ ಶೇಟ್, ಮತ್ತು ಸಂತೋಷ್ ಶೇಟ್, ಹಾಗೂ ಬೆಳಗಾವಿಯ ಕೈಲಾಸ್ ಗೋರಾಡ, ಎಂಬ ನಾಲ್ವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆರೋಪಿಗಳಿಂದ ನಕಲಿ 916 ಹಾಲ್‌ಮಾರ್ಕ್ ಸೀಲ್ ಹಾಕಲು ಬಳಸಲಾಗುತ್ತಿದ್ದ ಸುಮಾರು 3.5 ಲಕ್ಷ ರೂ. ಮೌಲ್ಯದ ಮೆಷಿನ್ ಕಂಪ್ಯೂಟರ್‌ಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ರಾಜೀವ್ 30 ಗ್ರಾಂ ಗೋಲ್ಡ್ ಬಳಸಿ20 ಗ್ರಾಂ ಚಿನ್ನಾಭರಣದೊಂದಿಗೆ ಗಲ್ ರಾಷ್ಟ್ರಕ್ಕೆ ಹೋಗುವ ಮತ್ತು ಅಲ್ಲಿಂದ ವಾಪಾಸಾಗುವ ವೇಳೆ 20 ಗ್ರಾಂ ಶುದ್ಧ ಚಿನ್ನದಾಭರಣವನ್ನೇ ಹಾಕಿಕೊಂಡು ಬರುವ ತನ್ನ ಪ್ಲಾನ್‌ಗೆ ಸಹಕರಿಸಲು ಪ್ರಕರಣದ ಇತರ ಆರೋಪಿಗಳಾದ ನಿತಿಲ್ ಭಾಸ್ಕರ್…

Read More

ಮಂಗಳೂರು: ತುಳುಭಾಷೆಗೆ ಅಧಿಕೃತ ರಾಜ್ಯಭಾಷೆಯ ಸ್ಥಾನಮಾನ ದೊರಕಬೇಕೆಂದು ನಗರದ ಉರ್ವಸ್ಟೋರ್ ನ ತುಳುಭವನದಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು. ಶಾಸಕ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಕ್ಷ, ಜಾತಿ ಬೇಧ ಮರೆತು ಎಲ್ಲರೂ ಒಗ್ಗಟ್ಟಾಗಿ ಪಾಲ್ಗೊಂಡರು. ಜೊತೆಗೆ ತುಳುಭಾಷೆಗೆ ಅಧಿಕೃತ ಸ್ಥಾನಮಾನ ದೊರಕಬೇಕೆಂದು ರಾಜ್ಯ ಸರಕಾರದ ಮೇಲೆ ಒತ್ತಡ ಹಾಕಬೇಕು. ಆ ಬಳಿಕವೂ ಸರಕಾರದಿಂದ ವೇಗ ದೊರಕದಿದ್ದಲ್ಲಿ ಹೋರಾಟ, ಉಪವಾಸ ಸತ್ಯಾಗ್ರಹಕ್ಕೂ ಸನ್ನದ್ಧವಾಗಬೇಕೆಂದು ತೀರ್ಮಾನ ಕೈಗೊಳ್ಳಲಾಯಿತು. ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಬೇರೆ ರಾಜ್ಯಗಳು ಒಂದಕ್ಕಿಂತ ಅಧಿಕ ಭಾಷೆಗಳನ್ನು ಯಾವ ರೀತಿ ಅಧಿಕೃತ ಭಾಷೆಯನ್ನಾಗಿ ಮಾಡಿದರು ಎಂಬ ಸಂಪೂರ್ಣ ವರದಿಯನ್ನು ರಾಜ್ಯ ಸರಕಾರ ಈಗಾಗಲೇ ಪಡೆದಿದೆ. ಇದೀಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಕ್ಯಾಬಿನೆಟ್ ನಲ್ಲಿ ಆದೇಶಿಸಲು ಮಾತ್ರ ಬಾಕಿಯಿದೆ. 95% ಕೆಲಸಗಳು ಸಂಪೂರ್ಣಗೊಂಡಿದ್ದು, 5% ಕೆಲಸಗಳು ಮಾತ್ರ ಬಾಕಿಯಿದೆ. ಅದು ಕೂಡಾ ಆದಷ್ಟು ಶೀಘ್ರದಲ್ಲಿ ಆಗಬೇಕೆನ್ನುದು ನಮ್ಮ ಆಶಯ ಎಂದು ಹೇಳಿದರು. ಮಾಜಿ…

Read More

ಪುತ್ತೂರು: ಕಳೆದ ಒಂದು ವಾರಗಳ ಹಿಂದೆ ಮಾಣಿ ಮೈಸೂರು ರಾಷ್ಟಿçÃಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್‌ನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಬೀರ್ಮಕಜೆ ಎಂಬಲ್ಲಿನ ನಿವಾಸಿ ಪ್ರಸಾದ್(27) ಮೃತಪಟ್ಟ ಯುವಕ. ನಗರದ ಬೈಪಾಸ್‌ನಲ್ಲಿರುವ ಗ್ಯಾರೇಜ್‌ನಲ್ಲಿ ಮೆಕಾನಿಕ್ ಆಗಿರುವ ಪ್ರಸಾದ್ ಅವರು ಕಳೆದ ಫೆ. 29ರಂದು ತನ್ನ ಬೈಕ್‌ನಲ್ಲಿ ಬರುತ್ತಿದ್ದ ವೇಳೆಯಲ್ಲಿ ಬೈಕ್ ಸ್ಕಿಡ್ ಆಗಿ ಉರುಳಿ ಬಿದ್ದಿತ್ತು. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಛಾಯಾಗ್ರಾಹಕ ಕೊಂಚಾಡಿ ಸಾಗರ್ ದೇವಾಡಿಗ ಅವರ ಮತ್ತೊಂದು ಛಾಯಾಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಮಂಗಳೂರಿನಲ್ಲಿ ಛಾಯಾಗ್ರಾಹಕರಾಗಿ ಹೆಸರು ಮಾಡಿದ್ದ ಸಾಗರ್ ದೇವಾಡಿಗ ಅವರ ಛಾಯಚಿತ್ರಗಳಿಗೆ ಈ ಹಿಂದೆಯೂ ಹಲವು ಪ್ರಶಸ್ತಿ ಲಭಿಸಿತ್ತು. ಇದೀಗ ಅಂತಾರಾಷ್ಟ್ರೀಯು ಪ್ರಶಸ್ತಿ ಲಭಿಸಿದ್ದು, ಕೊಲ್ಕೊತ್ತಾದಲ್ಲಿ ನಡೆದ ಫಸ್ಟ್‌ ಲೈಟ್‌ ಅಂತಾರಾಷ್ಟ್ರೀಯ ಸಲೋನ್ 2024 ನಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಜಿಲ್ಲೆಯಲ್ಲಿ ಪ್ರಸಿದ್ದಿ ಪಡೆದಿರುವ ಕೊಡಿಯಾಲ್ ತೇರು ಉತ್ಸವದ ಅಪೂರ್ವ ಕ್ಷಣಗಳನ್ನು ಸಾಗರ್ ದೇವಾಡಿಗ ತನ್ನ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದರು. ಇದು ಅಂತಾರಾಷ್ಟ್ರೀಯ ಛಾಯಾಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಇದೀಗ ಚಿನ್ನದ ಪದಕ ಲಭಿಸಿದೆ. ಸಣ್ಣ ಪ್ರಾಯದಲ್ಲೇ ಛಾಯಾಗ್ರಹಣದಲ್ಲಿ ಅಮೊಘ ಸಾಧನೆ ಮಾಡಿರುವ ಸಾಗರ್ ದೇವಾಡಿಗ ಅವರ ಈ ಸಾಧನೆಗೆ ಹಲವರು ಅಭಿನಂದನೆ ಸಲ್ಲಿಸಿದ್ದಾರೆ

Read More

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣವನ್ನು ಎನ್ ಐ ಎ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದೆ. ಇದುವರೆಗೆ ಪ್ರಮುಖ ಆರೋಪಿ ಪತ್ತೆಯಾಗಿಲ್ಲ. ಆದರೆ ಆತ ಓಡಾಟ ನಡೆಸಿರುವ ಸಿಸಿಟಿವಿ ದೃಶ್ಯಾವಳಿಗಳು ಸೆರೆಯಾಗಿದೆ. ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ. ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಕ್ಕೆ ಕಾರಣವಾದ ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ.ಗಳ ನಗದು ಬಹುಮಾನವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ಘೋಷಿಸಿದೆ. ‘ವಾಂಟೆಡ್’ ಪೋಸ್ಟರ್ನಲ್ಲಿ ಆರೋಪಿಗಳ ರೇಖಾಚಿತ್ರವನ್ನು ಎನ್‌ಐಎ ಬಿಡುಗಡೆ ಮಾಡಿದೆ ಮತ್ತು ಮಾಹಿತಿದಾರರ ಗುರುತನ್ನು ರಹಸ್ಯವಾಗಿಡಲಾಗುವುದು ಎಂದು ಹೇಳಿದೆ.

Read More

ಬೆಂಗಳೂರು : ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ನೇ ತರಗತಿಗಳ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ಕುರಿತು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಹೊರಡಿಸಿತ್ತು. ಈ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ನೇತೃತ್ವದ ಏಕಸದಸ್ಯ ಪೀಠ ಪ್ರಸ್ತುತ ತೀರ್ಪು ನೀಡಿದೆ. ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಹೈಕೋರ್ಟ್‌ನ ಈ ಆದೇಶದಿಂದ ಇದೇ ಮಾರ್ಚ್ 9 ರಿಂದ 11 ರವರೆಗೆ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ. ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯ್ದೆಯಡಿ 2023ರ ಅಕ್ಟೋಬರ್ 6 ಮತ್ತು 9 ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ ಬೋರ್ಡ್ ಮಟ್ಟದ ಪರೀಕ್ಷೆ…

Read More

ಮಲ್ಪೆ: ಯುವಕನೋರ್ವ ನಾಪತ್ತೆಯಾದ ಘಟನೆ ಮಲ್ಪೆಯಲ್ಲಿ ನಡೆದಿದೆ. ನಾಪತ್ತೆಯಾದ ಯುವಕ ಅಲೋಕ್ ತಂತಿ(24) ಎಂದು ಗುರುತಿಸಲಾಗಿದೆ. ಶಾಂಭವಿ ಬೋಟಿನಲ್ಲಿ ಕಲಾಸಿಯಾಗಿ ಕೆಲಸ ಮಾಡಿಕೊಂಡಿದ್ದ ಯುವಕ ಮಾ.3ರಂದು ಮುಂಜಾನೆ ತನ್ನ ಮೊಬೈಲ್‌ನನ್ನು ರೂಮಿನಲ್ಲಿಯೇ ಬಿಟ್ಟು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More