Author: main-admin

ಖೈರತಾಬಾದ್‌ನ ಆನಂದ್ ನಗರ ಕಾಲೋನಿಯ ‘ಭವನ ಅಪಾರ್ಟ್‌ಮೆಂಟ್ಸ್’ನಲ್ಲಿ ಈ ಧಾರುಣ ಘಟನೆ ನಡೆದಿದೆ. ರಾಧಾ (58) ಮೃತಪಟ್ಟ ದುರ್ದೈವಿ. ಅವರ 13 ತಿಂಗಳ ಮೊಮ್ಮಗ ಜೋಯಲ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಪ್ರಾಥಮಿಕ ಪೊಲೀಸ್ ತನಿಖೆಯ ಪ್ರಕಾರ, ರಾಧಾ ಅವರು ತಮ್ಮ ಮೊಮ್ಮಗ ಜೋಯಲ್‌ನನ್ನು ಎತ್ತಿಕೊಂಡು ಅಪಾರ್ಟ್‌ಮೆಂಟ್‌ನ 5ನೇ ಮಹಡಿಯಲ್ಲಿದ್ದರು. ಕೆಳಗೆ ಹೋಗುವ ಉದ್ದೇಶದಿಂದ ಅವರು ಲಿಫ್ಟ್ ಬಟನ್ ಒತ್ತಿದ್ದಾರೆ. ಆದರೆ, ಲಿಫ್ಟ್‌ನ ಮುಖ್ಯ ಕ್ಯಾಬಿನ್ 5ನೇ ಮಹಡಿಗೆ ತಲುಪುವ ಮೊದಲೇ, ತಾಂತ್ರಿಕ ದೋಷದಿಂದಾಗಿ ಲಿಫ್ಟ್‌ನ ಹೊರಗಿನ ಬಾಗಿಲುಗಳು ತೆರೆದುಕೊಂಡಿವೆ. ಲಿಫ್ಟ್ ಬಂದಿದೆ ಎಂದೇ ಭಾವಿಸಿದ ರಾಧಾ ಅವರು ಮಗುವಿನೊಂದಿಗೆ ಮುಂದೆ ಹೆಜ್ಜೆ ಇಟ್ಟಿದ್ದಾರೆ.ಕ್ಯಾಬಿನ್ ಇಲ್ಲದೆ ಖಾಲಿ ಇದ್ದ ಲಿಫ್ಟ್ ಕಣಿವೆಯೊಳಗೆ (ಶಾಫ್ಟ್) ಬಿದ್ದ ಇಬ್ಬರೂ 5ನೇ ಮಹಡಿಯಿಂದ ನೇರವಾಗಿ ಮೊದಲ ಮಹಡಿಯ ಮೇಲ್ಭಾಗಕ್ಕೆ ಬಿದ್ದಿದ್ದಾರೆ. ತೀವ್ರ ಸ್ವರೂಪದ ಗಾಯಗಳಾಗಿದ್ದರಿಂದ ರಾಧಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಆದರೆ, ಅಜ್ಜಿಯ ತೋಳಿನ ಆಸರೆಯಲ್ಲಿದ್ದ ಮಗು ಜೋಯಲ್ ಪವಾಡಸದೃಶವಾಗಿ ಬದುಕುಳಿದಿದ್ದು, ತೀವ್ರವಾಗಿ ಗಾಯಗೊಂಡಿದ್ದಾನೆ.ಘಟನೆಯನ್ನು ಗಮನಿಸಿದ ಅಪಾರ್ಟ್‌ಮೆಂಟ್…

Read More

ಜೂನ್ 1 ರಂದು ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳು ತೇಲುತ್ತಿರುವುದು ಪತ್ತೆಯಾಗಿತ್ತು. ಈ ಬಗ್ಗೆ ಮಾಹಿತಿ ಲಭಿಸುತ್ತಿದ್ದಂತೆ ಕಾರ್ಯಪ್ರವೃತ್ತರಾಗಿದ್ದ ಶಿರ್ವ ಪೊಲೀಸರು, ಕಾಪು ಪಶು ವೈದ್ಯಕೀಯ ಆಸ್ಪತ್ರೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಅಪರಾಧ ಪರಿಶೀಲನಾ ಅಧಿಕಾರಿಗಳ ಸಮಕ್ಷಮದಲ್ಲಿ ಸ್ಥಳ ಮಹಜರು ನಡೆಸಿದ್ದರು. ಈ ವೇಳೆ ಹೊಳೆಯಲ್ಲಿದ್ದ ಜಾನುವಾರಿನ ಮೇಲ್ದವಡೆಯ ಭಾಗ, ಎರಡು ಗೆರಸುಗಳು, ಮಾಂಸ ಹಾಗೂ ಹೊಟ್ಟೆಯ ಒಳಗಿನ ಭಾಗಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಕಾನೂನುಬದ್ಧವಾಗಿ ಪ್ರಕರಣ ದಾಖಲಿಸಲಾಗಿತ್ತು.ಹೊಳೆಗೆ ಜಾನುವಾರು ಅವಶೇಷ ಎಸೆದ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದ ಸಂಘ ಪರಿವಾರದ ವಿವಿಧ ಸಂಘಟನೆಗಳು, ಆರೋಪಿಯನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿದ್ದವು. ಅಲ್ಲದೆ, ಪೊಲೀಸರಿಗೆ ಗಡುವು ವಿಧಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದವು.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಂಡಿದ್ದ ಶಿರ್ವ ಪೊಲೀಸರು, ಜೂನ್ 5 ರಂದು ಶಿರ್ವ ಗ್ರಾಮದ ಪದವು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿ ಅಶೋಕನನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತನಿಂದ ಜಾನುವಾರಿನ ಚರ್ಮ ಹಾಗೂ ಕೃತ್ಯ…

Read More

ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆಗಳ್ಳತನ ಹಾಗೂ ಪೊಲೀಸರ ವಶದಿಂದ ತಪ್ಪಿಸಿಕೊಂಡಿದ್ದ ಎರಡು ಪ್ರತ್ಯೇಕ ಗಂಭೀರ ಪ್ರಕರಣಗಳ ವಿಚಾರಣೆ ನಡೆಸಿದ ಇಲ್ಲಿನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ (SCJ & JMFC) ನ್ಯಾಯಾಲಯವು ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಸುಳ್ಯದ ಅಜ್ಜಾವರ ನಿವಾಸಿ ಎ.ಎಂ. ಅಜೀಜ್ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ.ಅಪರಾಧಿ ಎ.ಎಂ. ಅಜೀಜ್ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ 2006ರಲ್ಲಿ ರಾತ್ರಿ ವೇಳೆ ಮನೆಗನ್ನ ಹಾಕಿ ಕಳ್ಳತನ ನಡೆಸಿದ ಆರೋಪದಡಿ ಅಪರಾಧ ಕ್ರಮಾಂಕ (ಅ.ಕ್ರ) 96/2006, ಐಪಿಸಿ ಕಲಂ 457 ಮತ್ತು 380 ರಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಇದರೊಂದಿಗೆ, 2018ರಲ್ಲಿ ಈತ ಕಾನೂನುಬದ್ಧ ಪೊಲೀಸ್ ಕಾವಲಿನಿಂದ ತಪ್ಪಿಸಿಕೊಂಡು ಓಡಿಹೋದ ಆರೋಪದ ಮೇಲೆ ಸುಳ್ಯ ಠಾಣೆಯಲ್ಲೇ ಮತ್ತೊಂದು ಪ್ರಕರಣ ಅ.ಕ್ರ 103/2018, ಐಪಿಸಿ ಕಲಂ 224 ರ ಅಡಿಯಲ್ಲಿ ದಾಖಲಾಗಿತ್ತು. ಪೊಲೀಸರು ಈ ಎರಡೂ ಪ್ರಕರಣಗಳ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ…

Read More

ಸುಳ್ಯ: ಟೋವಿಂಗ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸುಳ್ಯ ಅರಂತೋಡು ಕೊಯನಾಡು ಸಮೀಪದ ದೇವರಕೊಲ್ಲಿ ಬಳಿ ನಡೆದಿದೆ. ಕೇರಳ ನೋಂದಣಿಯ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸವಾರ ಅಪಘಾತದ ವೇಳೆ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಸಾಗಿಸಲಾಗಿದೆ.

Read More

ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದ ಕೇರಳ ಲಾಟರಿಯ ನಕಲಿ ಜಾಹೀರಾತನ್ನು ನಂಬಿ ಸಾರ್ವಜನಿಕರೊಬ್ಬರು ಹಂತ-ಹಂತವಾಗಿ ಬರೋಬ್ಬರಿ ₹1,85,636 ಹಣವನ್ನು ಆನ್‌ಲೈನ್ ಮೂಲಕ ಪಾವತಿಸಿ ವಂಚನೆಗೊಳಗಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಮೇ 29 ರಂದು ಸಂತ್ರಸ್ತರು ತಮ್ಮ ಮೊಬೈಲ್‌ನಲ್ಲಿ ಫೇಸ್‌ಬುಕ್ ವೀಕ್ಷಿಸುತ್ತಿದ್ದಾಗ “₹50 ರ ಟಿಕೆಟ್‌ಗೆ ಸಂಜೆ ಡ್ರಾ” ಎಂಬ ಕೇರಳ ಲಾಟರಿಯ ಜಾಹೀರಾತು ಕಂಡುಬಂದಿತ್ತು. ಅದಲ್ಲಿದ್ದ ಲಿಂಕ್ ಮೂಲಕ ಕರೆ ಮಾಡಿದಾಗ ನವೀನ್ ಎಂಬ ಅಪರಿಚಿತ ವ್ಯಕ್ತಿ ಲಾಟರಿ ನಂಬರ್‌ಗಳನ್ನು ಕಳುಹಿಸಿದ್ದನು. ಅದರಲ್ಲಿ ಎರಡು ನಂಬರ್ ಆಯ್ಕೆ ಮಾಡಿದ್ದ ಸಂತ್ರಸ್ತರು, ಆತ ಕಳುಹಿಸಿದ ಕ್ಯೂಆರ್ ಕೋಡ್ ಸ್ಕ್ಯಾನರ್ ಮುಖೇನ ₹100 ಪಾವತಿಸಿದ್ದರು. ಅಂದೇ ಸಂಜೆ 4 ಗಂಟೆಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ, “ನಿಮಗೆ ₹12 ಲಕ್ಷ ರೂಪಾಯಿ ಬಂಪರ್ ಲಾಟರಿ ಬಹುಮಾನ ಬಂದಿದೆ” ಎಂದು ನಂಬಿಸಿದ್ದನು.ಬಹುಮಾನದ ಹಣ ವರ್ಗಾಯಿಸಲು ಸಂತ್ರಸ್ತರ ಬ್ಯಾಂಕ್ ಖಾತೆ, ಐಎಫ್‌ಎಸ್‌ಸಿ ಕೋಡ್ ಹಾಗೂ…

Read More

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್‌ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಜಿಪಿಎಸ್‌ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಇನ್ಮುಂದೆ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು ಎಂದು ಶಾಲಿನಿ ರಜನೀಶ್‌ ಆದೇಶದಲ್ಲಿ ತಿಳಿಸಿದ್ದಾರೆ. ಸಿಎಂ ಡಿ.ಕೆ ಶಿವಕುಮಾರ್‌ ಅವರ ಸೂಚನೆ ಮೇರೆ ಆದೇಶ ಹೊರಡಿಸಿದ್ದಾರೆ.ಮುಖ್ಯಮಂತ್ರಿಗಳು ಜೂನ್‌ 4 ರಂದು ನಡೆದ ಸಭೆಯಲ್ಲಿ, ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಯು ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಪ್ರಸ್ತುತ ಇ-ಆಡಳಿತ ಇಲಾಖೆಯು ಸಿದ್ಧಪಡಿಸಿರುವ `ಕರ್ತವ್ಯ App’ ನಲ್ಲಿ ಈಗಾಗಲೇ HRMS ನಲ್ಲಿ ಲಭ್ಯವಿರುವ ಎಲ್ಲಾ ಅಧಿಕಾರಿಗಳು ಹಾಗೂ ವರ್ಗದ ಮಾಹಿತಿಯನ್ನ ನೋಂದಾಯಿಸಲಾಗಿದೆ. ಆದ್ರೆ ಬಳಷ್ಟು ಅಧಿಕಾರಿ/ಸಿಬ್ಬಂದಿಗಳು ಈ ತಂತ್ರಾಂಶವನ್ನ (App) ನಿರಂತರವಾಗಿ ಬಳಸುತ್ತಿಲ್ಲದಿರುವುದು ಕಂಡುಬಂದಿದೆ.…

Read More

ಕೋಟ : ಸಾಹೇಬ್ರಕಟ್ಟೆ-ಕೋಟ ಮೂರುಕೈ ರಸ್ತೆಯ ಉಪ್ಲಾಡಿ ತೆಂಕಬೆಟ್ಟು ಬಸ್ ನಿಲ್ದಾಣದ ಸಮೀಪ ಜೂನ್ 2ರ ಮಂಗಳವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದು ಪರಾರಿಯಾದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ನಂದನ್ ಎಂಬುವವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.ಪೊಲೀಸ್ ದೂರಿನ ವಿವರಗಳ ಪ್ರಕಾರ, ಮಂಗಳವಾರ ಬೆಳಿಗ್ಗೆ 8:15 ರ ವೇಳೆಗೆ ಸವಾರ ನಂದನ್ ಅವರು ತಮ್ಮ ಮೋಟಾರ್ ಸೈಕಲ್‌ನಲ್ಲಿ ಕೋಟ ಮೂರುಕೈ–ಸಾಹೇಬ್ರಕಟ್ಟೆ ರಸ್ತೆಯಾಗಿ ಬನ್ನಾಡಿ ಕಡೆಗೆ ಪ್ರಯಾಣಿಸುತ್ತಿದ್ದರು. ಅವರು ಉಪ್ಲಾಡಿ ತೆಂಕಬೆಟ್ಟು ಬಸ್ ಸ್ಟ್ಯಾಂಡ್ ಬಳಿ ತಲುಪುತ್ತಿದ್ದಂತೆ, ಹಿಂದಿನಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಅಪರಿಚಿತ ವಾಹನವೊಂದು ನಂದನ್ ಅವರ ಮೋಟಾರ್ ಸೈಕಲ್‌ಗೆ ಹಿಂಬದಿಯಿಂದ ಜೋರಾಗಿ ಡಿಕ್ಕಿ ಹೊಡೆದಿದೆ.ಡಿಕ್ಕಿಯ ಭೀಕರ ರಭಸಕ್ಕೆ ನಂದನ್ ಅವರು ಮೋಟಾರ್ ಸೈಕಲ್ ಸಮೇತ ರಸ್ತೆಗೆ ಅಪ್ಪಳಿಸಿದ್ದಾರೆ. ಪರಿಣಾಮವಾಗಿ ಅವರ ಹೊಟ್ಟೆಯ ಭಾಗಕ್ಕೆ ತೀವ್ರ ಸ್ವರೂಪದ ಆಂತರಿಕ ಗಾಯಗಳಾಗಿದ್ದು, ಸ್ಥಳದಲ್ಲೇ ಮಾತನಾಡಲಾಗದ ಸ್ಥಿತಿಯಲ್ಲಿ ಪ್ರಜ್ಞೆ…

Read More

ಕುಂದಾಪುರ: ಪ್ರಧಾನಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನ (PMGDY) ಯೋಜನೆಯಡಿ ಕಡಿಮೆ ಬಡ್ಡಿದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ ಹಂತ ಹಂತವಾಗಿ 5.69 ಲಕ್ಷ ರೂಪಾಯಿ ಹಣ ಪಡೆದು ಆನ್‌ಲೈನ್ ವಂಚಕರು ವಂಚಿಸಿರುವ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.ಕುಂದಾಪುರ ತಾಲೂಕಿನ ಕಸಬ ಗ್ರಾಮದ ಕೆಳ ಖಾರ್ವಿಕೇರಿ, ಡೋಗಿ ಪೇರಿ ರಸ್ತೆ ನಿವಾಸಿ ಪ್ರಣೀತ (38) ವಂಚನೆಗೊಳಗಾದ ಮಹಿಳೆ. 2026 ರ ಮಾರ್ಚ್ 10 ರಂದು ಪ್ರಣೀತ ಅವರು ತಮ್ಮ ಮೊಬೈಲ್‌ನಲ್ಲಿ ಫೇಸ್‌ಬುಕ್ ವೀಕ್ಷಿಸುತ್ತಿದ್ದಾಗ, ಅದರಲ್ಲಿ ‘PMGDY ಅಡಿಯಲ್ಲಿ ಸುಲಭವಾಗಿ ಲೋನ್ ಕೊಡಿಸಲಾಗುವುದು’ ಎಂಬ ಆಕರ್ಷಕ ಜಾಹೀರಾತು ಕಂಡುಬಂದಿದೆ. ಸಾಲದ ಹಣ ಬೇಕಿದ್ದಲ್ಲಿ 7082732342 ಮೊಬೈಲ್ ಸಂಖ್ಯೆಗೆ ಕರೆ ಮಾಡುವಂತೆ ಅದರಲ್ಲಿ ನಮೂದಿಸಲಾಗಿತ್ತು. ಅದನ್ನು ನಂಬಿದ ಪ್ರಣೀತ ಅವರು ಸದ್ರಿ ನಂಬರ್‌ಗೆ ಕರೆ ಮಾಡಿದಾಗ, ಆ ಕಡೆಯಿಂದ ಮಾತನಾಡಿದ ವ್ಯಕ್ತಿ ತನ್ನ ಹೆಸರು ‘ಶ್ರೀನಿವಾಸ್ ರಾವ್’ ಎಂದು ಪರಿಚಯಿಸಿಕೊಂಡಿದ್ದಾನೆ.ಪಿರ್ಯಾದಿದಾರರಿಗೆ 40 ಲಕ್ಷ ರೂಪಾಯಿ ಮೊತ್ತದ ಬೃಹತ್ ಲೋನ್ ಕೊಡಿಸುವುದಾಗಿ…

Read More

ಸುಳ್ಯ: ದುಗಲಡ್ಕ ಸಮೀಪದ ಕಂದಡ್ಕದಲ್ಲಿ 40 ಅಡಿ ಆಳದ ಬಾವಿಗೆ ಆಕಸ್ಮಿಕವಾಗಿ ಬಿದ್ದ ವ್ಯಕ್ತಿಯೊಬ್ಬರನ್ನು ಸುಳ್ಯ ಅಗ್ನಿಶಾಮಕ ದಳದ ಸಿಬಂದಿ ಸಾಹಸಮಯ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ ಘಟನೆ ಜೂನ್ 4ರ ಗುರುವಾರ ನಡೆದಿದೆ.ಸುಳ್ಯ ತಾಲೂಕಿನ ಕಸಬ ಗ್ರಾಮದ ಕಂದಡ್ಕದಲ್ಲಿ ನವೀನ್ ಕುಮಾರ್ ಎಂಬವರು ತಮ್ಮ ಮನೆಯ ಸುಮಾರು ನಲವತ್ತು ಅಡಿ ಆಳದ ಬಾವಿಯನ್ನು ಸ್ವಚ್ಛಗೊಳಿಸುವ ಸಲುವಾಗಿ ಬಾವಿಯೊಳಗೆ ಇಳಿದಿದ್ದರು. ಸ್ವಚ್ಛತಾ ಕಾರ್ಯ ನಡೆಸುತ್ತಿದ್ದ ವೇಳೆ ಬಾವಿಯೊಳಗಿನ ಆಮ್ಲಜನಕದ ಪ್ರಮಾಣ ಕಡಿಮೆಯಾಗಿದ್ದು, ಉಸಿರಾಟದ ತೊಂದರೆಯಿಂದ ಅವರು ಪ್ರಜ್ಞೆ ತಪ್ಪಿ ಬಾವಿಯಲ್ಲೇ ಕುಸಿದು ಬಿದ್ದಿದ್ದರು.ಘಟನೆಯ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತುರ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ಬಾವಿಯೊಳಗೆ ಇಳಿದ ಸಿಬ್ಬಂದಿ ನಾಗರಾಜ್ ಪೂಜಾರಿ ಅವರು ಆಮ್ಲಜನಕದ ಕೊರತೆ ಇರುವುದನ್ನು ಅರಿತು ತಕ್ಷಣವೇ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡರು. ಬಳಿಕ ಆಮ್ಲಜನಕ ಕಿಟ್ ಧರಿಸಿ ಮತ್ತೆ ಬಾವಿಗೆ ಇಳಿದು ಪ್ರಾಣಾಪಾಯದ ಸ್ಥಿತಿಯಲ್ಲಿದ್ದ ನವೀನ್ ಕುಮಾರ್ ಅವರನ್ನು…

Read More

ಬಂಟ್ವಾಳ: ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 10 ವರ್ಷದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ವಿಟ್ಲ ಸಮೀಪದ ಸೂರಿಕುಮೇರಿನಲ್ಲಿ ಬುಧವಾರ ಸಂಜೆ ನಡೆದಿದೆ.ಬಾಳ್ತಿಲ ಗ್ರಾಮದ ನಿವಾಸಿ ಹೇಮಂತ್ ಕುಮಾರ್ ಅವರ ಪುತ್ರಿ ನೈರುತಿ ಎಂ. ಸುವರ್ಣ ಮೃತಪಟ್ಟ ಬಾಲಕಿ.ಹೇಮಂತ್ ಅವರು ತಮ್ಮ ಪತ್ನಿ, ಮಕ್ಕಳಾದ ನೈರುತಿ ಮತ್ತು ಆಕೆಯ ತಂಗಿಯೊಂದಿಗೆ ನೆಟ್ಲ ಸದಾಶಿವ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ಸೂರಿಕುಮೇರು ಸಮೀಪ ತಲುಪುತ್ತಿದ್ದಂತೆ ಎದುರಿನಿಂದ ಬಂದ ಸ್ಕೂಟರ್ ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ನೈರುತಿ ಕಾಂಕ್ರೀಟ್ ರಸ್ತೆಗೆ ಎಸೆಯಲ್ಪಟ್ಟಿದ್ದು, ಆಕೆಯ ತಲೆಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣವೇ ಆಕೆಯನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ ಸುಮಾರಿಗೆ ಆಕೆ ಕೊನೆಯುಸಿರೆಳೆದಿದ್ದಾಳೆ.ಮೃತ ನೈರುತಿ ಸ್ಥಳೀಯ ಪ್ರಾಥಮಿಕ ಶಾಲೆಯೊಂದರಲ್ಲಿ ಕಲಿಯುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಳು. ಭಜನಾ ಗಾಯನದಲ್ಲಿ ತೀವ್ರ ಆಸಕ್ತಿ ಹೊಂದಿದ್ದ ಆಕೆ, ಭಜನೆ ತರಬೇತಿಯನ್ನೂ ಪಡೆಯುತ್ತಿದ್ದಳು ಎನ್ನಲಾಗಿದೆ.ಸ್ಥಳಕ್ಕೆ ಬಂಟ್ವಾಳ ಸಂಚಾರಿ…

Read More