ಕಾಸರಗೋಡು:ಮನೆಯ ಟೆರೇಸ್ ನಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬೇಕೂರು ಕನ್ನಡಿ ಪಾರೆಯ ನಜೀಬ್ ಮೆಹಫೂಜ್ (22) ಬಂಧಿತ. ಕುಂಬಳೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ತಪಾಸಣೆ ನಡೆಸಲಾಗಿದೆ. ಕಿದೂರಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಈತ ಟೆರೇಸ್ ನಲ್ಲಿ ಗಾಂಜಾ ಗಿಡ ಗಳನ್ನು ಬೆಳೆಸಿದ್ದನು. 20 ಲೀಟರ್ ನೀರಿನ ಬಾಟಲಿಯ ಮೇಲ್ಭಾಗವನ್ನು ಕತ್ತರಿಸಿ ಅದರಲ್ಲಿ ಮಣ್ಣು ತುಂಬಿಸಿ ಗಿಡಗಳನ್ನು ಬೆಳೆಸಲಾಗಿದೆ. ಹೀಗೆ ಮೂರು ಗಿಡಗಳನ್ನು ಪತ್ತೆ ಹಚ್ಚಲಾಗಿದೆ .ಈತ ಸ್ವಂತ ಬಳಕೆ ಅಲ್ಲದೆ ಮಾರಾಟಕ್ಕಾಗಿ ಗಾಂಜಾ ಗಿಡ ಗಳನ್ನು ಬೆಳೆಸಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ.
Author: main-admin
ಮಂಗಳೂರು: ದಕ್ಷಿಣಕನ್ನಡದಲ್ಲಿ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿ ಪ್ರವೀಣ್ ಸೂದ್ ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್ ಕಡಿಮೆಯಿದೆ. ಅದಕ್ಕೆ ಮೊದಲು ಅದನ್ನು ಹೆಚ್ಚಿಸಬೇಕು ಎಂದು ಮಂಗಳೂರು ಕಮಿಷನರ್ ಕಚೇರಿಯಲ್ಲಿ ಡಿಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತು ದಿನಗಳಲ್ಲಿ ಮೂರು ಕೊಲೆ ಪ್ರಕರಣಗಳು ನಡೆದಿವೆ. ಮಸೂದ್ ಕೊಲೆ ಪ್ರಕರಣಲ್ಲಿ ಎಂಟು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದೇವೆ. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಇಬ್ಬರು ಅರೆಸ್ಟ್ ಆಗಿದ್ದಾರೆ. ತನಿಖೆ ಮುಂದುವರಿದಿದೆ. ಮುಂದಿನ ದಿನಗಳಲ್ಲಿ ಉಳಿದ ಆರೋಪಿಗಳನ್ನು ಪತ್ತೆ ಮಾಡುತ್ತೇವೆ. ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.ಇನ್ನು ಫಾಝಿಲ್ ಹತ್ಯೆಯ ಬಗ್ಗೆ ತನಿಖೆ ನಡೆಸಿದ್ದೇವೆ. ಈ ಸಂಬಂಧ ಆರೋಪಿಗಳ ಸುಳಿವು ಸಿಕ್ಕಿದೆ. ಕೃತ್ಯಕ್ಕೆ ಬಳಸಿದ ಕಾರು ಪತ್ತೆಯಾಗಿದೆ. ಅದರಲ್ಲಿ ಓರ್ವನನ್ನು ಬಂಧಿಸಲಾಗಿದೆ ಎಂದರು.
ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನಿಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣಕ್ಕೆ ಸಂಬಂಧಿಸದಂತೆ ಇದುವರೆಗೂ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ. ಖಚಿತ ಮಾಹಿತಿ ಆಧರಿಸಿ ಅಖಾಡಕ್ಕೆ ಇಳಿದಿದ್ದ ಪೊಲೀಸರ ಸ್ಪೆಷಲ್ ಟೀಂ, ಮಂಗಳೂರಿನಿಂದ ಬೆಂಗಳೂರಿಗೆ ಬಂದಿದ್ದು, ಬೆಂಗಳೂರಿನಲ್ಲಿ ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದಾರೆ. ಈ ಮೂಲಕ ಜಾಕೀರ್ ಮತ್ತು ಶಫೀಕ್ ಬಳಿಕ ಮತ್ತಿಬ್ಬರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 5 ರ ವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ರವರೆಗೆ ವ್ಯಾಪಾರ ವಹಿವಾಟು ಮತ್ತು ವಾಹನ ಸಂಚಾರಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಎರಡು ದಿನ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ 144ರ ಅನ್ವಯ ವಿಧಿಸಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 5 ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಸಯುಕ್ತ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
ನವದೆಹಲಿ: ಎಲ್ಪಿಜಿ ಸಿಲಿಂಡರ್ಗಳ ಹೊಸ ದರಗಳನ್ನು (ಎಲ್ಪಿಜಿ ಬೆಲೆ ಹೊಸ) ಇಂದು ಬಿಡುಗಡೆ ಮಾಡಲಾಗಿದೆ. ಇಂದಿನಿಂದ, ಎಲ್ಪಿಜಿ ಸಿಲಿಂಡರ್ಗಳು ಅಗ್ಗವಾಗಿವೆ. ಇಂಡಿಯನ್ ಆಯಿಲ್ ಇಂದು ಅಂದರೆ ಆಗಸ್ಟ್ 1 ರಂದು ಬಿಡುಗಡೆ ಮಾಡಿದ ಹೊಸ ದರದ ಪ್ರಕಾರ, ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 36 ರೂ.ಗಳಷ್ಟು ಕಡಿಮೆ ಮಾಡಲಾಗಿದೆ. ವಾಣಿಜ್ಯ ಸಿಲಿಂಡರ್ ಇಂದಿನಿಂದ, 19 ಕೆಜಿ ಎಲ್ಪಿಜಿ ಸಿಲಿಂಡರ್ ದೆಹಲಿಯಲ್ಲಿ 2012.50 ರೂ.ಗೆ ಬದಲಾಗಿ 1976.50 ರೂ.ಗೆ ಲಭ್ಯವಾಗಲಿದೆ. ಅದೇ ಸಮಯದಲ್ಲಿ, ಕೋಲ್ಕತ್ತಾದಲ್ಲಿ, ಈ ಮೊದಲು ಇದು 2132.00 ರೂ.ಗೆ ಲಭ್ಯವಿತ್ತು, ಆದರೆ ಆಗಸ್ಟ್ 1 ರಿಂದ, ಇದು 2095.50 ರೂ.ಗೆ ಲಭ್ಯವಿದೆ. ಇಂದಿನಿಂದ ವಾಣಿಜ್ಯ ಸಿಲಿಂಡರ್ ಬೆಲೆ ಮುಂಬೈನಲ್ಲಿ 1936.50 ರೂ.ಗೆ ಮತ್ತು ಚೆನ್ನೈನಲ್ಲಿ 2141 ರೂ.ಗೆ ಇಳಿದಿದೆ. ವಾಣಿಜ್ಯ ಸಿಲಿಂಡರ್ಗಳು ಅಗ್ಗವಾಗಿದ್ದರೂ, 14.2 ಕೆಜಿ ದೇಶೀಯ ಎಲ್ಪಿಜಿ ಸಿಲಿಂಡರ್ಗಳ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ ಸಬ್ಸಿಡಿ ರಹಿತ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ಗಳ (ಎಲ್ಪಿಜಿ ಸಿಲಿಂಡರ್ ಬೆಲೆ) ಬೆಲೆ ಕಳೆದ ಎರಡು…
ಕಾರ್ಕಳ : ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಬಳಸಿದ್ದಾರೆ ಎನ್ನಲಾದ ಹುಂಡೈ ಇಯೋನ್ ಕಾರಿ ಕಾರ್ಕಳದ ಇನ್ನಾ ಗ್ರಾಮದ ಕಡಕುಂಜದ ನಿರ್ಜನ ಪ್ರದೇಶದಲ್ಲಿ ಇಂದು ಪತ್ತೆಯಾಗಿದೆ. ಪಡುಬಿದ್ರಿ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಬಂದ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪೂವಯ್ಯ ಹಾಗೂ ಪಡುಬಿದ್ರಿ ಎಸೈ ಪುರುಪೋತ್ತಮ ಪರಿಶೀಲನೆ ನಡೆಸಿದ್ದು, ಬೆರಳಚ್ಚು ತಜ್ಞರು ಆಗಮಿಸುವ ಹಿನ್ನಲೆಯಲ್ಲಿ ಸಾರ್ವಜನಿಕರು ಸ್ಪರ್ಶಿಸ ಬಾರದು ಎಂಬ ನಿಟ್ಟಿನಲ್ಲಿ ಪ್ಲಾಸ್ಟಿಕ್ ಹೊದಿಗೆ ಹಾಕಿದ್ದಾರೆ. ಸ್ಥಳೀಯರು ಹೇಳುವಂತೆ ಮೂರು ನಾಲ್ಕು ದಿನಗಳಿಂದ ಈ ಕಾರು ಈ ಭಾಗದಲ್ಲಿ ಅನಾಥ ಸ್ಥಿತಿಯಲ್ಲಿದ್ದು, ನಾವು ಅಷ್ಟಾಗಿ ಗಮನಿಸಿಲ್ಲ..ಇವತ್ತು ಸಂಶಯಗೊಂಡು ಪೊಲೀಸರಿಗೆ ಮಾಹಿತಿ ನೀಡಿ ಅವರು ಬಂದಾಗ ಕೊಲೆಗೆ ಬಳಸಲಾದ ಕಾರು ಎಂಬುದು ನಮಗೆ ತಿಳಿದಿದೆ ಎಂದರು. ಕಾರಿನಲ್ಲಿ ಮೈಕ್ರೋ ಸಿಮ್ ಪತ್ತೆಯಾಗಿದೆ. ಕಾರಿನ ಹಿಂಬದಿ ಸೀಟಿನಲ್ಲಿ ರಕ್ತದ ಕಲೆಗಳೂ ಪತ್ತೆಯಾಗಿದೆ. ನೀರಿನ ಬಾಟಲಿ, ಚಿಲ್ಲರೆ ಹಣವೂ ಕಾರಿನಲ್ಲಿದ್ದು, ಆರೋಪಿಗಳು ಈ ಕಾರನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು…
ಮಂಗಳೂರು:ಫಾಝಿಲ್ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಎಸಿಪಿಯನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಿ ಆದೇಶಿಸಿರುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಫಾಝಿಲ್ ಕೊಲೆ ಪ್ರಕರಣದ ತನಿಖೆಯನ್ನು ಉನ್ನತ ಅಧಿಕಾರಿಗಳು ಮಾಡುವಂತೆ ಫಾಝಿಲ್ ಅವರ ತಂದೆ ಮನವಿ ಮಾಡಿದ್ದರು ಎನ್ನಲಾಗಿದೆ.
ಸ್ತುತ ಯುಗದಲ್ಲಿ ಜನ ಆರೋಗ್ಯದ ಬಗ್ಗೆ ಬಹಳ ಕಾಳಜಿ ವಹಿಸುತ್ತಿದ್ದಾರೆ. ಹದಗೆಡುತ್ತಿರುವ ಜೀವನಶೈಲಿ ಇದಕ್ಕೆ ಕಾರಣವಾಗಿದ್ದು, ಜನ ಪ್ರಕೃತಿಯಿಂದ ದೂರವಾಗುತ್ತಿರುವುದು ಇದಕ್ಕೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಈ ಹಿಂದೆ ಹುಲ್ಲಿನ ಮೇಲೆ ಬರಿಗಾಲಿನಲ್ಲಿ ನಡೆಯುವ ಟ್ರೆಂಡ್ ಸಾಕಷ್ಟು ಹೆಚ್ಚಾಗಿತ್ತು, ಆದರೆ ಈಗ ಈ ಪ್ರವೃತ್ತಿ ಸಾಕಷ್ಟು ಕಡಿಮೆಯಾಗಿದೆ. ನೀವು ಹಸಿರು ಹುಲ್ಲಿನ ಮೇಲೆ ಬರಿಗಾಲಿನಲ್ಲಿ ವಾಕ್ ಮಾಡಿದರೆ, ನಿಮ್ಮ ಅನೇಕ ಅಂಗಗಳು ನಿಮ್ಮ ಅಡಿಭಾಗದ ಒತ್ತಡದಿಂದಾಗಿ ನಿಯಂತ್ರಣಕ್ಕೆ ಬರುತ್ತವೆ ಏಕೆಂದರೆ ಹಸಿರು ಹುಲ್ಲು ಗಾಯವನ್ನು ಗುಣಪಡಿಸುವ ಶಕ್ತಿಯನ್ನು ಹೊಂದಿದೆ. ಭೂಮಿಯ ಮೇಲೆ ಬರಿಗಾಲಿನಲ್ಲಿ ನಡೆಯುವುದರಿಂದ ಆಗುವ ವೈಜ್ಞಾನಿಕ ಪ್ರಯೋಜನಗಳು ಮುನ್ನೆಲೆಗೆ ಬರುವ ಮೊದಲೇ ಮನೆಯ ಹಿರಿಯರು ಸಲಹೆ ನೀಡುತ್ತಿದ್ದರು. ಬರಿಗಾಲಿನಲ್ಲಿ ವಾಕ್ ಮಾಡುವುದರಿಂದ ಆರೋಗ್ಯಕ್ಕೆ ವಿಶಿಷ್ಟ ಪ್ರಯೋಜನಗಳಿವೆ. ಹುಲ್ಲಿನ ಮೇಲೆ ಬರಿಗಾಲಿನಲ್ಲಿ ವಾಕ್ ಮಾಡಿದರೆ ಅದ್ಭುತ ಪ್ರಯೋಜನಗಳು ನಿದ್ದೆ ಮಾಡದೇ ಇರುವ ಸಮಸ್ಯೆ ದೂರವಾಗುತ್ತದೆ ನಿದ್ರಾಹೀನತೆಯ ಸಮಸ್ಯೆಯನ್ನು ಪರಿಹರಿಸುವಲ್ಲಿ ಇದು ಪರಿಣಾಮಕಾರಿಯಾಗಿದೆ. ರಾತ್ರಿಯಲ್ಲಿ ಸರಿಯಾಗಿ ನಿದ್ದೆ ಮಾಡಲು ಸಾಧ್ಯವಾಗದಿದ್ದರೆ, ನೀವು ನಿದ್ರಾಹೀನತೆಗೆ…
ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದದ್ದು, ಈ ವೇಳೆ ʼಹರ್ ಘರ್ ತಿರಂಗಾʼ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಭಾರತೀಯ ಕೋಸ್ಟ್ ಗಾರ್ಡ್ ಸಮುದ್ರದಲ್ಲಿ ನೀರೊಳಗೆ ಧ್ವಜ ಹಾರಿಸಿದ್ದಾರೆ. “ಜನರ ಹೃದಯದಲ್ಲಿ ದೇಶಭಕ್ತಿಯ ಭಾವನೆಯನ್ನು ಪ್ರೇರೇಪಿಸುವುದು ಮತ್ತು ಭಾರತೀಯ ರಾಷ್ಟ್ರಧ್ವಜದ ಬಗ್ಗೆ ಜಾಗೃತಿ ಮೂಡಿಸುವುದು ಈ ಕಾರ್ಯದ ಹಿಂದಿನ ಉದ್ದೇಶ” ಎಂದು ಐಸಿಜಿ ಅಧಿಕಾರಿಗಳು ತಿಳಿಸಿದ್ದಾರೆ. 75ನೇ ಸ್ವಾತಂತ್ರ್ಯದ ದಿನಾಚರಣೆಯನ್ನು ಜನರ ಪಾಲ್ಗೊಳ್ಳುವಿಕೆಯೊಂದಿಗೆ ಆಚರಿಸಲು ಕೇಂದ್ರ ಸರ್ಕಾರ ‘ಹರ್ ಘರ್ ತಿರಂಗ’ ಅಭಿಯಾನ ಹಮ್ಮಿಕೊಂಡಿದ್ದು, ಎಲ್ಲರೂ ತಮ್ಮ ಮನೆಗಳ ಮೇಲೆ ಭಾರತದ ರಾಷ್ಟ್ರಧ್ವಜವನ್ನು ಹಾರಿಸಲು ಬಯಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಜುಲೈ 22ರಂದು ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದರು. ಧ್ವಜಗಳ ಉತ್ಪಾದನೆಗೆ ರಾಜ್ಯಗಳು ಸ್ವಸಹಾಯ ಗುಂಪುಗಳನ್ನು ಸಜ್ಜುಗೊಳಿಸಿವೆ ಮತ್ತು ಸ್ಥಳೀಯ ಟೈಲರಿಂಗ್ ಘಟಕಗಳು ಮತ್ತು ಎಂಎಸ್ಎಂಇ ಗಳನ್ನು ಸಹ ನಿಯೋಜಿಸಲಾಗಿದೆ. ಜವಳಿ ಸಚಿವಾಲಯವು ದೊಡ್ಡ ಪ್ರಮಾಣದಲ್ಲಿ ಧ್ವಜಗಳನ್ನು ಪೂರೈಸುವ ಧ್ವಜ ಉತ್ಪಾದಕರನ್ನು ಗುರುತಿಸಿದೆ. ರಾಜ್ಯ, ಕೇಂದ್ರಾಡಳಿತ ಪ್ರದೇಶಗಳು…
ಮಂಗಳೂರು: ಸುರತ್ಕಲ್‌ನ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಫಾಝಿಲ್ ಹತ್ಯೆ ಆರೋಪಿಗಳು ಹತ್ಯೆ ವೇಳೆ ಬಳಕೆ ಮಾಡಿದ್ದ ಕಾರಿನ ಚಾಲಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಈ ಪ್ರಕರಣ ಸಂಬಂಧಿಸಿ 16 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿರುವ ನಾಲ್ವರು ಮತ್ತು ಇತರ ಇಬ್ಬರನ್ನು ತೀವ್ರ ವಿಚಾರಣೆಗೊಳಪಡಿಸಲಾಗುತ್ತಿದ್ದು, ಶೀಘ್ರ ಬಂಧಿಸಲ್ಪಡಲಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಅಲ್ಲದೆ ವಶಕ್ಕೆ ತೆಗೆದುಕೊಂಡವರ ವಿಚಾರಣೆ ವೇಳೆ ಆರೋಪಿಗಳ ಕುರಿತು ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ ಎಂದೂ ಹೇಳಲಾಗುತ್ತಿದೆ.ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ಮಂಗಳಪೇಟೆ ನಿವಾಸಿ 23 ವರ್ಷದ ಫಾಝಿಲ್‌ನ ಮೇಲೆ ಮಾರಕಾಸ್ತ್ರಗಳಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು.