ಮಂಗಳೂರು: 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್‌ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2017ರಿಂದ ನೋಂದಣಿಯಾಗುವ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು ಕಾನೂನಿನಲ್ಲಿಯೇ ಇದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಬಸ್ಸುಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಂದಿನ ಒಂದು ತಿಂಗಳೊಳಗೆ ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಬಸ್ಸು ಮಾಲೀಕರು ಅಫಿಧಾವಿತ್ ಸಲ್ಲಿಸಬೇಕು ಎಂದು ಅವರು ಆರ್‌ಟಿಓಗೆ ನಿರ್ದೇಶಿಸಿದರು. ಸಾರ್ವಜನಿಕರ ಜೀವರಕ್ಷಣೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲಾಗದು. ಇದರಲ್ಲಿ ನಿರ್ಲಕ್ಷ್ಯ ಸಹಿಸುವ ಪ್ರಶ್ನೆಯೇ ಇಲ್ಲ. ಬಸ್‌ಗಳಲ್ಲಿ ಬಾಗಿಲನ್ನು ಅಳವಡಿಸಬೇಕೆಂದು ಸಾರ್ವಜನಿಕರಿಂದಲೂ ತೀವ್ರ ಒತ್ತಡ ಬರುತ್ತಿವೆೆ. ಜನಸಂಪರ್ಕ ಸಭೆಗಳಲ್ಲಿಯೂ ಮನವಿಗಳು ಬಂದಿವೆ. ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಮತ್ತಿತರ ರಾಜ್ಯಗಳಲ್ಲೂ ಬಸ್‌ಗಳಲ್ಲಿ ಬಾಗಿಲು ಅಳವಡಿಸಿ ಸಂಚರಿಸುತ್ತಿವೆ. ಬೆಂಗಳೂರಿನಲ್ಲಿಯೂ…
Author: main-admin
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ತೋಕೂರು ಗ್ರಾಮದ ಜೋಕಟ್ಟೆಯ ಸರಕಾರಿ ಶಾಲೆಯ ಬಳಿಯ ನಿವಾಸಿ, ಇಮ್ರಾನ್ (31) ಹಾಗೂ ಉತ್ತರ ಪ್ರದೇಶ ರಾಜ್ಯದ ಗೋರಕಪುರ ಜಿಲ್ಲೆಯ ಹಮತಿ ತಾಲೂಕಿನ ದೋಬಾಲಿ ಹೌಸ್‌ನ ಧರ್ಮವೀರ (30) ಎಂದು ಗುರುತಿಸಲಾಗಿದೆ. ಬಜಪೆ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ದರೋಡೆ ಮಾಡಲು ಸಂಚು ರೂಪಿಸಿದ ಕೇಸಿನಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಯ ಸಮಯ ಘನ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 62 ನೇ ತೋಕೂರು ಗ್ರಾಮದ ಜೋಕಟ್ಟೆಯ ಸರಕಾರಿ ಶಾಲೆಯ ಬಳಿಯ ನಿವಾಸಿ, ಇಮ್ರಾನ್ ಮತ್ತು 2021ರಲ್ಲಿ ರಸ್ತೆ ಅಪಘಾತದಲ್ಲಿ ಓರ್ವ ಮೃತರಾಗಿದ್ದು, ಅಪರಾಧಿಕ ಮಾನವ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ ವಾಸ ಸ್ಥಳವನ್ನು ಬದಲಿಸಿ ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ರಾಜ್ಯದ ಗೋರಕಪುರ ಜಿಲ್ಲೆಯ ಹಮತಿ ತಾಲೂಕಿನ ದೋಬಾಲಿ ಹೌಸ್‌ನ ಧರ್ಮವೀರ (30) ಬಂಧಿತರು. ಬಜಪೆ ಪೊಲೀಸ್ ಠಾಣೆಯ…
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಮತ್ತೆ ಹೆಚ್ಚುತ್ತಿದ್ದು, ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. 43 ವರ್ಷದ ಕೊಟ್ರಮ್ಮ ಮಂಗನ ಕಾಯಿಲೆಗೆ ಬಲಿಯಾದ ಕೂಲಿ ಕಾರ್ಮಿಕ ಮಹಿಳೆ. ಕೊಪ್ಪ ತಾಲೂಕಿನ ನುಗ್ಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇವಗನ್ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಜ್ವರ, ಸುಸ್ತು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಸೌದೆ ತರಲು ಹೋದಾಗ ಸೋಂಕು ತಗುಲಿರುವ ಸಾಧ್ಯತೆ ಇದೆ. ಕಳೆದ ವಾರ ಮಹಿಳೆಯ ರಕ್ತದ ಮಾದರಿಯನ್ನು ವೈದ್ಯರು ಸಂಗ್ರಹಿಸಿದ್ದರು. ಇನ್ನು ಕೊಪ್ಪ ತಾಲೂಕಿನಲ್ಲಿ ಒಂದೇ ದಿನದಲ್ಲಿ 6 ಜನರಲ್ಲಿ ಮಂಗನ ಕಾಯಿಲೆ ಸೋಂಕು ದೃಢಪಟ್ಟಿದೆ.
ಮಂಗಳೂರು: ನಾಸೀರ್ ಹುಸೇನ್ ಬೆಂಬಲಿಗನಿಂದ ಪಾಕ್ ಪರ ಘೋಷಣೆ ಹಿನ್ನಲೆ ಮಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಆಕ್ರೋಶವ್ಯಕ್ತಪಡಿಸಿದ್ದು, ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲಿದ್ದಾರೆ. ಈ ಹಿನ್ನಲೆ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಭಿಗಿ ಪೊಲೀಸ್ ಭದ್ರತೆ ಅಳವಡಿಸಲಾಗಿದೆ. ಬೆಳಗ್ಗೆ ಹತ್ತು ಗಂಟೆಗೆ ಮುತ್ತಿಗೆ ಸಾಧ್ಯತೆ ಇದ್ದು ಮುನ್ನಚ್ಚರಿಕೆ ಸಲುವಾಗಿ ಕಾಂಗ್ರೆಸ್ ಕಚೇರಿ ಸುತ್ತಲೂ ಖಾಕಿ ಸರ್ಪಗಾವಲು ಹಾಕಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದ್ದಾರೆ. ಪಾಕ್ ಪರ ಘೋಷಣೆ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಕಚೇರಿಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ 50ರಷ್ಟು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಮಂಗಳೂರು: ನಗರದಲ್ಲಿ ಖಾಸಗಿ ಬಸ್ ವ್ಯವಹಾರ ನೋಡಿಕೊಳ್ಳುತ್ತಿದ್ದ ಉದ್ಯಮಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದವರು ನಗರದ ಬಜಾಲ್ ನಿವಾಸಿ ಪ್ರಜ್ವಲ್ ಡಿ. (35) ಎಂದು ತಿಳಿದು ಬಂದಿದೆ. ಇವರು ಭವಾನಿ ಬಸ್‌ನ ಮಾಲಕರಾಗಿದ್ದ ದಿ| ದೇವೇಂದ್ರ ಅವರ ಎರಡನೇ ಪುತ್ರ. ಮಂಗಳವಾರ ಬೆಳಗ್ಗೆ ಜೆ.ಎಂ. ರೋಡ್‌ನಲ್ಲಿರುವ ಸ್ವಗೃಹದಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸಹೋದರ ಬಸ್‌ನ ಮಾಲಕ ರಾಗಿದ್ದರು. ಪ್ರಜ್ವಲ್ ಅದೇ ವ್ಯವಹಾರ ನೋಡಿಕೊಳ್ಳುತ್ತಿದ್ದರು. ಸಾಲ ಹೊಂದಿದ್ದ ಅವರಿಗೆ ಬ್ಯಾಂಕ್‌ನವರು ಕಿರು ಕುಳ ನೀಡುತ್ತಿದ್ದರೆಂಬ ಮಾಹಿತಿ ಇದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಪತ್ನಿ ಮತ್ತು ನಾಲ್ಕು ವರ್ಷದ ಮಗುವನ್ನು ಅಗಲಿದ್ದಾರೆ.
ಮಂಗಳೂರು: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಎಸ್.ಎಸ್.ಎಲ್.ಸಿ. ಇಂಗ್ಲಿಷ್ ಪೂರ್ವ ಸಿದ್ಧತಾ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಬಳಿಕ ನಾಪತ್ತೆಯಾಗಿದ್ದರು. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪ ನದಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಯಶ್ವಿತ್ ಚಂದ್ರಕಾಂತ್, ನಿರುಪ್, ಅನ್ವಿತ್, ರಾಘವೇಂದ್ರ ಅವರ ಶವ ಪತ್ತೆಯಾಗಿದೆ. ಇವರು ಸುರತ್ಕಲ್ ನ ವಿದ್ಯಾದಾಯಿನಿ ಶಾಲೆಯ ವಿದ್ಯಾರ್ಥಿಗಳು. ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆ ಬರೆದು ಶಾಲೆಯಿಂದ ಹೊರಬಂದ ಬಳಿಕ ನಾಪತ್ತೆಯಾಗಿದ್ದರರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪರೀಕ್ಷೆ ಮುಗಿದ ನಂತರ ಈಜಲು ತೆರಳಿದ ನಾಲ್ವರು ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಲ್ಕಿ : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಕೊಪ್ಪಳ ರೈಲ್ವೇ ಸೇತುವೆಯ ಕೆಳಭಾಗದ ನಂದಿನಿ ನದಿಯಲ್ಲಿ ನಾಲ್ವರು ಮಕ್ಕಳ ಮೃತ ದೇಹ ಪತ್ತೆಯಾಗಿದೆ. ಮೃತರನ್ನು ಸುರತ್ಕಲ್ ವಿದ್ಯಾದಾಯಿನಿ ಪ್ರೌಢ ಶಾಲೆಯ ಮಕ್ಕಳು ಎಂದು ಗುರುತಿಸಲಾಗಿದೆ. ಸುರತ್ಕಲ್ ವಿದ್ಯಾದಾಯಿನಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಯಶ್ವಿತ್ ಚಂದ್ರಕಾಂತ್, ನಿರುಪ್, ಅನ್ವಿತ್, ರಾಘವೇಂದ್ರ ಮಂಗಳವಾರ ಮಧ್ಯಾಹ್ನ ಶಾಲೆಯಲ್ಲಿ ಪ್ರಿಪರೇಟರಿ ಪರೀಕ್ಷೆ ಬರೆದ ಬಳಿಕ ಏಕಾಏಕಿ ನಾಪತ್ತೆಯಾಗಿದ್ದರು. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಮಕ್ಕಳ ಮೃತದೇಹ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿಯ ಕೊಪ್ಪಳ ರೈಲ್ವೇ ಸೇತುವೆಯ ಕೆಳಭಾಗದಲ್ಲಿ ನಂದಿನಿ ನದಿಯಲ್ಲಿ ಪತ್ತೆಯಾಗಿದೆ. ಈ ನಡುವೆ ಸುರತ್ಕಲ್ ಪ್ರೌಢಶಾಲೆಯ ಒಟ್ಟು 7 ಮಕ್ಕಳು ಈಜಾಡಲು ತೆರಳಿದ್ದರು ಎನ್ನಲಾಗುತ್ತಿದ್ದು, ಮೂವರು ಸ್ಥಳದಿಂದ ಘಟನೆಯನ್ನು ಕಂಡು ಹೆದರಿ ಓಡಿ ಹೋಗಿದ್ದಾರೆ ಎನ್ನಲಾಗಿದೆ. ಮಕ್ಕಳ ಶವವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಮಂಗಳೂರು ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ…
ಸುಬ್ರಹ್ಮಣ್ಯ: ದೇವಸ್ಥಾನಕ್ಕೆ ಆಗಮಿಸಿದ ಮಹಿಳೆಯೊಬ್ಬರ ಮಗುವನ್ನು ಬೀದಿ ನಾಯಿಯೊಂದು ಹಾವಿನಿಂದ ರಕ್ಷಿಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆದಿದೆ. ಆದಿ ಸುಬ್ರಹ್ಮಣ್ಯಕ್ಕೆ ಬಂದಿದ್ದ ಮಹಿಳೆಯೊಬ್ಬರು ತಮ್ಮ ಮಗುವನ್ನು ರಸ್ತೆಯಲ್ಲಿ ಬಿಟ್ಟು ಪಕ್ಕದ ಅಂಗಡಿಗೆ ಹಣ್ಣುಕಾಯಿ ಖರೀದಿ ಮಾಡಲು ತೆರಳಿದ್ದರು. ಈ ವೇಳೆ ಮಗುವು ರಸ್ತೆ ಬದಿಗೆ ಬಂದಿದೆ. ಇದೇ ಸಂದರ್ಭ ನಾಗರಹಾವೊಂದು ರಸ್ತೆ ದಾಟುತ್ತಿತ್ತು. ರಸ್ತೆ ಬದಿಗೆ ಬಂದಿದ್ದ ಮಗು ಹಾವನ್ನು ತುಳಿಯುವಷ್ಟರಲ್ಲಿ ಅಲ್ಲಿಯೇ ಮಲಗಿದ್ದ ಬೀದಿ ನಾಯಿ ಓಡಿ ಹೋಗಿ ಮಗುವಿಗೆ ಅಡ್ಡ ನಿಂತಿಗೆ. ಮಗುವು ಹಾವನ್ನು ತುಳಿಯದಂತೆ, ಹಾವು ರಸ್ತೆ ದಾಟಲು ಅವಕಾಶ ಮಾಡಿಕೊಟ್ಟು ಮಗುವನ್ನು ಪ್ರಾಣಾಪಾಯದಿಂದ ಕಾಪಾಡಿದೆ.ಈ ಘಟನೆಯನ್ನ ಕಂಡ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದು, ಇನ್ನು ಈ ಕುರಿತ ಬರಹಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾರಂಟ್ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆ ಆರೋಪಿಯನ್ನು ಕಾಪು ಪೊಲೀಸರು ಪಡುಬಿದ್ರಿಯಲ್ಲಿ ಬಂಧಿಸಿದ್ದಾರೆ ಎಂದು ತಿಳಿಯಲಾಗಿದೆ. ಬೈಂದೂರು ನಾವುಂದ ಬಡಾಕೆರೆ ಮುಸ್ಲಿಂ ಕೇರಿ ನಿವಾಸಿ ಮೊಹಮ್ಮದ್ ಆಸಿಫ್ ಯಾನೆ ಆಸಿಫ್(38)ನನ್ನು ಪಡುಬಿದ್ರಿ ನಡ್ಪಾಲು ಗ್ರಾಮದ ಸುಜ್ಲಾನ್ ಬಳಿ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಬೈಂದೂರು, ಗಂಗೊಳ್ಳಿ, ಮಂಗಳೂರು ಕಂಕನಾಡಿ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆಗಳ ಪ್ರಕರಣಗಳಿಗೆ ಸಂಬಂಧಿಸಿ ವಾರಂಟ್ ಜಾರಿಯಾಗಿತ್ತು. ಕಾಪು ಎಸ್‌ಐ ಅಬ್ದುಲ್ ಖಾದರ್ ಅವರ ಮಾರ್ಗದರ್ಶನದಂತೆ ಸಿಬಂದಿ ವರ್ಗದ ನಾರಾಯಣ ಮತ್ತು ರಫೀಕ್ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉಡುಪಿ: ಶಂಕಿತ ಮಂಗನಕಾಯಿಲೆ(ಕೆಎಫ್‌ಡಿ)ಗಾಗಿ ಕಳೆದ ಶನಿವಾರ ಪರೀಕ್ಷೆಗಾಗಿ ಕಳುಹಿಸಲಾದ ಇಬ್ಬರು ಜ್ವರಪೀಡಿತ ವ್ಯಕ್ತಿಗಳ ಸ್ಯಾಂಪಲ್‌ಗಳು ‘ನೆಗೆಟಿವ್’ ಫಲಿತಾಂಶವನ್ನು ತೋರಿಸಿವೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಐ.ಪಿ.ಗಡಾದ್ ತಿಳಿಸಿದ್ದಾರೆ. ಈ ಮೂಲಕ ಉಡುಪಿ ಜಿಲ್ಲೆಯಲ್ಲಿ ಮಂಗನಕಾಯಿಲೆಗಾಗಿ ಒಟ್ಟು ಮೂರು ಮಂದಿ ಶಂಕಿತರ ಸ್ಯಾಂಪಲ್‌ಗಳನ್ನು ಶಿವಮೊಗ್ಗದ ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕೆಂಚನೂರಿನ ಮಹಿಳೆಯೊಬ್ಬರಲ್ಲಿ ಮಾತ್ರ ಸೋಂಕು ಪತ್ತೆಯಾಗಿದ್ದು, ಉಳಿದ ಇಬ್ಬರದು ನೆಗೆಟಿವ್ ಆಗಿದೆ.ಹೀಗಾಗಿ ಸದ್ಯ ಜಿಲ್ಲೆಯಲ್ಲಿ ಯಾವುದೇ ಸಕ್ರಿಯ ಮಂಗನಕಾಯಿಲೆ ಪ್ರಕರಣಗಳು ಇಲ್ಲ.









