ಬೆಳ್ತಂಗಡಿ; ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಯುವಕನೋರ್ವನನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಸಿರಾಜ್ (28) ಬಂಧಿತ ಆರೋಪಿ. ಈತನನ್ನು ಪುಂಜಾಲಕಟ್ಟೆ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಇದೀಗ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಸರಕಾರಿ ಶಾಲಾ ಮೈದಾನದಲ್ಲಿ ಸಂಜೆ ಶಾಲೆ ಬಿಡುವ ಹೊತ್ತು ನಿಂತಿದ್ದ ಶಾಲಾ ಬಸ್‌ನ ಒಳಗಡೆ ಪಾನಮತ್ತನಾಗಿ ಅಕ್ರಮವಾಗಿ ಪ್ರವೇಶಗೈದ ಆರೋಪಿ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಬಾಲಕಿಯ ಪೋಷಕರು ದೂರು ನೀಡಿದ್ದರು.
Author: main-admin
ಮಂಗಳೂರು: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ನಗರದ ಹಲವು ತಗ್ಗು ಪ್ರದೇಶಗಳು ಮುಳುಗಡೆಯಾದ ವರದಿಯಾಗಿದೆ. ತಡರಾತ್ರಿಯಿಂದ ಮತ್ತೆ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಪರಿಣಾಮ ಮಂಗಳೂರು ನಗರ ಸೇರಿದಂತೆ ಹಲವು ಪ್ರದೇಶಗಳು ಮಳೆರಾಣಾರ್ಭಟಕ್ಕೆ ತತ್ತರಿಸಿ ಹೋಗಿದೆ. ನಿನ್ನೆ ರಾತ್ರಿ ಸುರಿದ ಗುಡುಗು ಸಹಿತ ಭಾರಿ ಮಳೆಗೆ ಬಲ್ಲಾಲ್ ಬಾಗ್ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದ್ದು, ಹಲವು ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಪಾಂಡೇಶ್ವರ ಶಿವನಗರ ಭಾಗದಲ್ಲಿ ಮನೆಗಳು ಜಲಾವೃತಗೊಂಡಿವೆ. ಕರಂಗಲ್ಪಾಡಿ, ಮಂಗಳೂರು ರೈಲ್ವೆ ನಿಲ್ದಾಣ , ಪಂಪ್ ವೆಲ್ , ಅತ್ತಾವರ ಹೀಗೆ ಹಲವು ಪ್ರದೇಶದಲ್ಲಿ ಅಂಗಡಿ ಮುಂಗಟ್ಟು ಗಳಿಗೆ ನೀರು ನುಗ್ಗಿದ್ದು, ರಸ್ತೆ ತುಂಬಾ ನೀರು ಆವರಿಸಿಕೊಂಡಿದೆ. ಜು.3೦ರ ನಸುಕಿನ ಜಾವದಿಂದ ಗುಡುಗು ಸಹಿತ ಮಳೆಯಾಗುತ್ತಿದ್ದು, ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಮಂಗಳೂರು, ಪುತ್ತೂರು, ಬಂಟ್ವಾಳ, ಮೂಡುಬಿದಿರೆ, ಉಳ್ಳಾಲ, ಮೂಲ್ಕಿಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಸರಣಿ ಹತ್ಯೆ ಪ್ರಕರಣ ಖಂಡಿಸಿ ಹಾಗೂ ಎಸ್ ಡಿ ಪಿ ಐ, ಪಿ ಎಫ್ ಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ತೀವ್ರಕೊಂಡ ಬೆನ್ನಲ್ಲೇ 40 ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಜಯಮಹಲ್ ನಲ್ಲಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಮನೆ ಬಳಿ ಬೆಳಿಗ್ಗೆಯಿಂದ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಗೃಹ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಗೃಹ ಸಚಿವರ ಮನೆ ಬಾಗಿಲು ತೆರೆಯಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ತಡೆಯಲು ಮುಂದಾಗುತ್ತಿದ್ದಂತೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಇದೀಗ 40 ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಎಬಿವಿಪಿ ಕಾರ್ಯಕರ್ತರು ಪೊಲೀಸರನ್ನು ಲೆಕ್ಕಿಸದೇ ಗೃಹ ಸಚಿವರ ಮನೆಯ ಗೇಟ್ ಗಳನ್ನು ತಳ್ಳಿ ಒಳನುಗ್ಗಿದ್ದು, ಗೃಹ ಸಚಿವರ…
ಉಡುಪಿ: ಉಡುಪಿಯ ಅಷ್ಟಮಠಗಳಲ್ಲೊಂದಾದ ಪುತ್ತಿಗೆ ಮಠದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನದ ಗಿಂಡಿ ಕಳವಾದ ಬಗ್ಗೆ ದೂರು ದಾಖಲಾಗಿದೆ. ಜು.26 ರಂದು ಬೆಳಿಗ್ಗೆ ಮಠದಲ್ಲಿ ಪೂಜೆ ಸಂದರ್ಭ 6 ಮಂದಿ ಮಠದ ವಿದ್ಯಾರ್ಥಿಗಳು ಮತ್ತು ಪುರೋಹಿತರು ಬಂದು ಹೋಗಿದ್ದು, ಪೂಜೆ ನಂತರ ಪೂಜಾ ಸಾಮಗ್ರಿ ನೋಡುವಾಗ 7 ಲಕ್ಷ ರೂ. ಮೌಲ್ಯದ 146 ಗ್ರಾಂ ತೂಕದ ಚಿನ್ನದ ಗಿಂಡಿ ಕಾಣೆಯಾಗಿದ್ದು ಗಮನಕ್ಕೆ ಬಂದಿದೆ. ಮಠದ ವ್ಯವಸ್ಥಾಪಕ ವಿಷ್ಣುಮೂರ್ತಿ ಪೂಜೆಯ ನಂತರ ಸಾಮಗ್ರಿ ತೆಗೆದಿಡುವಾಗ ಪೂಜೆಗೆ ಬಳಸುವ 146 ಗ್ರಾಂ ತೂಕದ ಚಿನ್ನದ ಗಿಂಡಿ ಕಾಣೆಯಾಗಿದ್ದು, ತಿಳಿದು ಬಂತು.ಈ ಕುರಿತು ನಗರ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಮಂಗಳೂರು: ನಗರ ಪಾಲಿಕೆ ವ್ಯಾಪ್ತಿಯ ಉಳ್ಳಾಲ, ಮುಲ್ಕಿ, ಮೂಡಬಿದಿರೆ ಮತ್ತು ಬಂಟ್ವಾಳ ತಾಲೂಕಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಈ ಪ್ರದೇಶದ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಇಂದು ಮಂಗಳೂರು ಉಪ ವಿಭಾಗದಾದ್ಯಂತ (ಮಂಗಳೂರು ನಗರ ಪಾಲಿಕೆ, ಮುಲ್ಕಿ, ಮೂಡಬಿದಿರೆ, ಉಳ್ಳಾಲ ಮತ್ತು ಬಂಟ್ವಾಳ ತಾಲೂಕು) ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಇನ್ನು ಪುತ್ತೂರು ಉಪವಿಭಾಗದ ಇತರ ಸ್ಥಳಗಳಲ್ಲಿ, ಸ್ಥಳೀಯ ಪರಿಸ್ಥಿತಿಯನ್ನು ನಿರ್ಣಯಿಸಿ ತಹಶೀಲ್ದಾರರು ಮತ್ತು ಬಿಇಒಗಳು ಸ್ಥಳೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಾರೆ.
ಕಾರ್ಕಳ: ಕಾರ್ಕಳ ತಾಲೂಕಿನ ತೆಳ್ಳಾರು ಗುಡ್ಡೆಯಂಗಡಿ ನಿವಾಸಿ ಉರಗತಜ್ಞ ಅನಿಲ್ ಪ್ರಭು ಅವರು ಹಾವು ಕಡಿತಕ್ಕೊಳಗಾಗಿ ಗಂಭೀರವಾಗಿ ಅಸ್ವಸ್ಥಗೊಂಡು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಿಲ್ ಪ್ರಭು ನಿನ್ಮೆ ತಮ್ಮ ಮನೆಯಲ್ಲಿ ಗಾಯಗೊಂಡಿದ್ದ ನಾಗರ ಹಾವಿನ ಆರೈಕೆ ಮಾಡುತ್ತಿದ್ದರು.ಈ ವೇಳೆ ಹಾವು ಅವರ ಕೈಗೆ ಕಡಿದಿದೆ. ತಕ್ಷಣ ಅವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಿದೆ ಎಂದು ತಿಳಿದುಬಂದಿದೆ.ಈ ಹಿಂದೆ ಆರೇಳು ಬಾರಿ ಅವರಿಗೆ ಹಾವು ಕಡಿದಿದ್ದರೂ ಪ್ತಾಣಾಪಾಯದಿಂದ ಪಾರಾಗಿದ್ದರು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ. ಇಂದು ಸಂಜೆ (ಜು.29) ರಿಂದ ಆ.1 ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿ. ಉಳಿದಂತೆ ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಮುಚ್ಚಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಕಳೆದ ಒಂದು ವಾರ ಅಂತರದಲ್ಲಿ ಎರಡು ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ಸಂಘಟನೆಗಳ ಮುಖ್ಯಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಸಂದೇಶ ರವಾನಿಸಿದ್ದಾರೆ. ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ನಿನ್ನೆ ಸಂಜೆ ಸುರತ್ಕಲ್‌ನಲ್ಲಿ ಇನ್ನೋರ್ವ ಯುವಕನ ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದ ಇರುವಂತೆ ಪೊಲೀಸ್ ಇಲಾಖೆಯಿಂದ ಸಂದೇಶ ರವಾನೆ ಮಾಡಲಾಗಿದೆ. ಈ ಎರಡೂ ಘಟನೆಗಳಿಂದ ಕರಾವಳಿಯಲ್ಲಿ ಉದಿಗ್ನ ಪರಿಸ್ಥಿತಿ ಉಂಟಾಗಿದೆ.ಪೊಲೀಸ್ ಇಲಾಖೆ ಕೂಡ ವಿಶೇಷ ಕಾರ್ಯಾಚರಣೆ ನಡೆಸುತ್ತಿದೆ. ಹಾಗೆಯೇ ಸಂಘ ಪರಿವಾರ ಸಹಿತ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದ ಇರುವಂತೆ ಹಾಗೂ ರಾತ್ರಿ ವೇಳೆಯಲ್ಲಿ ಒಬ್ಬೊಬ್ಬರಾಗಿ ಸುತ್ತಾಡದಂತೆ ಸಲಹೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಪುತ್ತೂರು: ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಮೂರನೇ ಆರೋಪಿಯನ್ನು ಕಾಣಿಯೂರಿನಲ್ಲಿ ವಶ ಪಡಿಸಿಕೊಳ್ಳಲಾಗಿದ್ದು, ಆತ ಬೆಳ್ಳಾರೆ ಮೂಲದವನು ಎಂಬ ಮಾಹಿತಿ ಇದೆ.ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಬೆಳ್ಳಾರೆಯ ಶಫೀಕ್ (27) ಮತ್ತು ಸವಣೂರಿನ ಝಾಕೀರ್ (29) ರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಕಾಪು: ಬಸ್ಸಿನಡಿಗೆ ಬಿದ್ದು ಅಪರಿಚಿತ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಕಾಪು ಪೇಟೆಯಲ್ಲಿ ನಡೆದಿದೆ.ಶಿರ್ವ ನಿವಾಸಿ, ಕೂಲಿ ಕಾರ್ಮಿಕ ಬಾಲಕೃಷ್ಣ ತೀವ್ರ ಗಾಯಗೊಂಡಿದ್ದು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಬಸ್ ನಿಲ್ದಾಣದಲ್ಲಿದ್ದ ವ್ಯಕ್ತಿ ನೇರವಾಗಿ ಬಂದು ಬಸ್‌ನತ್ತ ಬಂದಿದ್ದು, ಚಾಲಕ ಬ್ರೇಕ್ ಹಾಕುವಷ್ಟರಲ್ಲಿ ಹಿಂಬದಿಯ ಚಕ್ರದಡಿಗೆ ಸಿಲುಕಿಯಾಗಿತ್ತು. ಗಾಯಾಳುವಿನ ಕಾಲು ಸಂಪೂರ್ಣ ಮುರಿತಕ್ಕೊಳಗಾಗಿದ್ದು ಸ್ಥಳೀಯರು ಕೂಡಲೇ ಆತನನ್ನು ಬಸ್‌ನ ಅಡಿಯಿಂದ ಹೊರಕ್ಕೆ ತೆಗೆದು ಉಪಚರಿಸಿ, ಉಡುಪಿ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿಂದ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.