ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಗಳ ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಅಂತರ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಪೊಲೀಸ್‌ರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಪೊಲೀಸ್ ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ. ಲೋಕಸಭಾ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗುವ ಮುನ್ನ ಅರ್ಹ ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಅಂತರ್ ಜಿಲ್ಲಾ ವರ್ಗಾವಣೆಗೆ ಪ್ರಸ್ತಾವನೆಗಳ ಬಗ್ಗೆ ಕ್ರಮ ಕೈಗೊಂಡು, ಆ ಬಗ್ಗೆ ತಮಗೆ ವರದಿ ನೀಡುವಂತೆಯೂ ಗೃಹ ಸಚಿವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರದಲ್ಲಿ ನಿರ್ದೇಶಿಸಿದ್ದಾರೆ. ಅಂದ ಹಾಗೇ ಕಳೆದ ಮೂರು ವರ್ಷಗಳಿಂದ ಪೊಲೀಸ್ ಪೇದೆಗಳ ವರ್ಗಾವಣೆ ನಡೆದಿಲ್ಲ. ಈ ಸಂಬಂಧ ಗೃಹ ಸಚಿವರಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.…
Author: main-admin
ಕಾಸರಗೋಡು: ಪಿಕಪ್ ವ್ಯಾನ್‌ನಲ್ಲಿ ಸಾಗಿಸುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗಾಂಜಾವನ್ನು ಅಬಕಾರಿ ದಳದ ವಿಶೇಷ ತಂಡ ಪೆರ್ಲದಿಂದ ವಶ ವಶಪಡಿಸಿಕೊಂಡಿದ್ದು,ಇಬ್ಬರನ್ನು ಬಂಧಿಸಿದ್ದಾರೆ. ಕುಂಬಳೆ ಶಾಂತಿಪಳ್ಳ ದ ಶಹೀನ್ ರಹೀಂ (36) ಮತ್ತು ಪೆರ್ಲ ಅಮ್ಮೆಕ್ಕಳದ ಶರೀಫ್ (32) ಬಂಧಿತ ಆರೋಪಿಗಳು.ಅಬಕಾರಿ ದಳದ ಸಿಬ್ಬಂದಿ ಗಳಿಗೆ ಲಭಿಸಿದ ಖಚಿತ ಮಾಹಿತಿಯಂತೆ ಪೆರ್ಲ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಪಿಕಪ್ ವ್ಯಾನ್ ಅನ್ನು ತಡೆದು ತಪಾಸಣೆ ನಡೆಸಿದಾಗ ಸುಮಾರು 107 ಕಿಲೋ ಗಾಂಜಾ ಪತ್ತೆಯಾಗಿದೆ.ಇನ್ನು ಯಾರಿಗೂ ಸಂಶಯ ಬಾರದಂತೆ ಬಚ್ಚಿಟ್ಟು ಗಾಂಜಾವನ್ನು ಸಾಗಿಸಲಾಗುತ್ತಿತ್ತುಆಂಧ್ರ ಪ್ರದೇಶದಿಂದ ಬೆಂಗಳೂರು ಮೂಲಕ ಈ ಗಾಂಜಾ ವನ್ನು ಕೇರಳಕ್ಕೆ ಸಾಗಿಸಲಾಗುತ್ತಿತ್ತು ಎಂದು ಅಬಕಾರಿ ದಳದ ಸಿಬಂದಿಗಳು ತಿಳಿಸಿದ್ದಾರೆ.
ಮೂಡುಬಿದಿರೆ : ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರಾ (19) ಕಾಣೆಯಾದ ವಿದ್ಯಾರ್ಥಿನಿ. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿರುವ ಮಾಹಿತಿ ಇದ್ದು ಅನಂತರ ಅಲ್ಲಿಂದ ಕಾಲೇಜಿಗೆ ಹೋಗದೆ ಕಾಣೆಯಾಗಿರುವುದಾಗಿ ತಿಳಿದುಬಂದಿದ್ದು, ಸದ್ಯ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ, ವಿದ್ಯಾರ್ಥಿನಿ ತನ್ನ ಪ್ರಿಯಕರನ ಜೊತೆ ಮದುವೆಯಾಗಿದ್ದಾಳೆ ಎನ್ನಲಾಗಿದೆ.ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಆದಿರಾ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿರುವುದಾಗಿ ತಿಳಿದು ಬಂದಿದೆ. ಫೆ.23 ರಂದು ಬೆಳಿಗ್ಗೆ ಕಾಲೇಜಿನ ಬಸ್ಸಲ್ಲಿ ಬಂದಿದ್ದ ಆಕೆ ಕನ್ನಡ ಭವನ ಬಳಿ ಇಳಿದು ಹೋದಾಕೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಹೆತ್ತವರು ಮೂಡುಬಿದಿರೆ ಠಾಣೆಗೆ ದೂರು ನೀಡಿದ್ದರು. ಇದೀಗ ಆಕೆ ತನ್ನ ಪ್ರಿಯಕರನೊಂದಿಗೆ ಕೇರಳದಲ್ಲಿ ಮದುವೆಯಾಗಿರುವುದಾಗಿ ತಿಳಿದು ಬಂದಿದೆ. ತನ್ನದೇ ಊರಿನ ಯುವಕನನ್ನು ಪ್ರೀತಿಸುತ್ತಿದ್ದ ಆಕೆ ಆತನನ್ನೇ ಮದುವೆಯಾಗಿದ್ದಾಳೆಂದು ತಿಳಿದು ಬಂದಿದ್ದು…
ಉಡುಪಿ: ನದಿ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ಉಡುಪಿಯ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಬಳಿ ನಡೆದಿದೆ.ಸೋಮೇಶ್ವರದ ಸೀತಾ ನದಿಯಲ್ಲಿ ಈಜಲು ಇಳಿದಿದ್ದ ಕೊಪ್ಪ ಮೂಲದ ಡಾ. ದೀಪಕ್ ಮತ್ತು ಶಿವಮೊಗ್ಗ ಮೂಲದ ಶೈನು ಡೇನಿಯಲ್ ಸಾವನ್ನಪ್ಪಿದ್ದಾರೆ. ಪ್ರವಾಸಕ್ಕೆಂದು ಬಂದಿದ್ದ ಮೂವರು ಗೆಳೆಯರ ತಂಡದ ಇಬ್ಬರು ಈಜು ಬಾರದೆ ಮುಳುಗಿರುವ ಸಾಧ್ಯತೆ ಇದೆ. ಶೃಂಗೇರಿಯಲ್ಲಿ ವೈದ್ಯರಾಗಿರುವ ಡಾ. ದೀಪಕ್ ಹಾಗೂ ಶಿವಮೊಗ್ಗದ ವ್ಯಾಪಾರಿ ಶೈನು ಡೇನಿಯಲ್ ಸಾವನ್ನಪ್ಪಿದ್ದಾರೆ. ಹೆಬ್ರಿಗೆ ಪ್ರವಾಸಕ್ಕೆ ಬಂದು ವಾಪಾಸ್ಸಾಗುವಾಗ ನದಿಗೆ ಇಳಿದಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.
ಮಂಗಳೂರು: ಪಣಂಬೂರು ಬೀಚ್‌ನಲ್ಲಿ ಫೆ. 24ರಂದು ನೀರಾಟವಾಡುತ್ತಿದ್ದಾಗ ಬೃಹತ್ ಅಲೆಗೆ ಕೊಚ್ಚಿಹೋಗಿ ಮುಳುಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತುಕಾರಾಮ (13) ಅವರ ಮೃತದೇಹ ರವಿವಾರ ಮುಂಜಾನೆ ತಣ್ಣೀರುಬಾವಿ ಬಳಿ ಪತ್ತೆಯಾಗಿದೆ. ಮೀನುಗಾರರು ಮೃತದೇಹ ತೇಲುತ್ತಿರುವುದನ್ನು ಕಂಡಿದ್ದು, ಧನಪಾಲ್ ಸಾಲ್ಯನ್ ಅವರು ದಡಕ್ಕೆ ಎಳೆದು ತಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆಬೈಕಂಪಾಡಿ ಮೀನಕಳಿಯ ಸರಕಾರಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ತುಕಾರಾಮ್ ಶಾಲೆ ಬಿಟ್ಟ ಬಳಿಕ ಸ್ನೇಹಿತ ಮಾರುತಿ ಜತೆ ಪಣಂಬೂರು ಬೀಚ್‌ಗೆ ಆಗಮಿಸಿ ನೀರಾಟದಲ್ಲಿ ತೊಡಗಿದ್ದ. ಆದರೆ ಈ ವೇಳೆ ಬೃಹತ್ ಅಲೆಗೆ ಕೊಚ್ಚಿ ಹೋಗಿದ್ದ. ಬೀಚ್‌ನಲ್ಲಿದ್ದ ಇತರರು ವಿದ್ಯಾರ್ಥಿ ಮುಳುಗುತ್ತಿರುವುದನ್ನು ಕಂಡು ಬೀಚ್‌ನ ರಕ್ಷಣ ದಳಕ್ಕೆ ತಿಳಿಸಿದ್ದರು. ತತ್‌ಕ್ಷಣ ಜೆಟ್ ಸ್ಕೀ ಮೂಲಕ ಕಾಪಾಡಲು ಯತ್ನಿಸಿದರೂ ಆತನ ಸುಳಿವು ಸಿಕ್ಕಿರಲಿಲ್ಲಬಾಲಕ ಉತ್ತರ ಕರ್ನಾಟಕ ಮೂಲದವರಾಗಿದ್ದು, ಕೆಲಸದ ನಿಮಿತ್ತ ಬಂದಿದ್ದ ಇವರ ಪೋಷಕರು ಬೈಕಂಪಾಡಿ ಮೀನಕಳಿಯ ಬಳಿ ವಾಸವಿದ್ದರು.
ಬೆಂಗಳೂರು : ಇನ್ಮುಂದೆ ಸಿಗ್ನಲ್ ಜಂಪ್ ಮಾಡಿದರೆ ಹುಷಾರ್! ಇದನ್ನು ನಾವು ಹೇಳ್ತಾಯಿಲ್ಲ ಸಂಚಾರ ಪೊಲೀಸರೇ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ನಿಮಯ ಉಲ್ಲಂಘಿಸಿ ತಪ್ಪಿಸಿಕೊಂಡು ಬಿಡಬಹುದು ಎಂದು ಖುಷಿ ಪಡುವವರಿಗೆ ಇದೊಂದು ಬಿಗ್ ಶಾಕ್.ಹೌದು… ಮೊಬೈಲ್‌ನಲ್ಲಿ ಮಾತನಾಡುತ್ತ ವಾಹನ ಚಾಲನೆ, ಹೆಲ್ಮೆಟ್ ಇಲ್ಲದೆ ಸವಾರಿ ಹೀಗೆ ಸಂಚಾರ ನಿಯಮ ಉಲ್ಲಘಿಸಿದ ಎರಡನೇ ನಿಮಿಷದಲ್ಲಿ ನಾಗರಿಕರ ಮುಬೈಲ್‌ಗೆ ದಂಡ ಪಾವತಿಸುವಂತೆ ಸಂದೇಶ ಬರಲಿದೆ. ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ತ್ವರಿತ ಸಂದೇಶ ರವಾನಿಸುವ ಹೊಸ ವ್ಯವಸ್ಥೆಯನ್ನು ರಾಜ್ಯ ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗವು ಜಾರಿಗೊಳಿಸಿದೆ. ಇದಕ್ಕಾಗಿ ಅತ್ಯಾಧುನಿಕ ಕ್ಯಾಮೆರಾಗಳನ್ನು ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಸಂಚಾರ ಪೊಲೀಸರು ಅಳವಡಿಸಲಿದ್ದಾರೆ. ಆ ಕ್ಯಾಮೆರಾಗಳು ಸೆರೆಹಿಡಿದ ಫೋಟೋಗಳನ್ನು ಆಧರಿಸಿ ಎರಡು ನಿಮಿಷದಲ್ಲಿ ನಿಯಮ ಉಲ್ಲಂಘಿಸಿದವರಿಗೆ ಸಂದೇಶ ಕಳುಹಿಸಲಿದ್ದಾರೆ.ಈ ಸಂದೇಶದಲ್ಲಿ ಲಿಂಕ್ ಇರುತ್ತದೆ. ಅದರಲ್ಲಿ ಯಾವ ರೀತಿಯ ಸಂಚಾರ ನಿಯಮ ಉಲ್ಲಂಘನೆಯಾಗಿದೆ ಎಂಬ ಫೋಟೋ, ಮಾಹಿತಿ ಇರುತ್ತದೆ.ಅಲ್ಲೇ ದಂಡ ಪಾವತಿಸಬಹುದು. ಈ…
ಪುತ್ತೂರು:ಕಬಕ ಸಮೀಪದ ಪೋಳ್ಯದಲ್ಲಿ ಎವಿಯೇಟರ್ ಸ್ಕೂಟರ್ ಮತ್ತು ಮಿನಿ ಟೂರಿಸ್ಟ್ ಬಸ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಫೆ.25ರಂದು ನಡೆದಿದೆ. ಮಾಸ್ಟರ್ ಪ್ಲಾನರಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಅಳಕೆಮಜಲು ನಿವಾಸಿ ಕ್ಲಿಫರ್ಡ್ ಮೊರಾಸ್ ರಾಜ(45ವ. )ಮೃತಪಟ್ಟವರು.ಸ್ಕೂಟರ್ ಸಹಸವಾರರಾಗಿದ್ದ, ಬಿಹಾರ ಮೂಲದವರಾಗಿದ್ದು ಮುರದಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸ್ತವ್ಯ ಹೊಂದಿರುವ ಸುರೇಂದರ್ (29ವ) ಮತ್ತು ಸನ್ನೀಫ್ (28ವ)ಗಾಯಗೊಂಡಿದ್ದಾರೆ.ಕ್ಲಿಫರ್ಡ್ ಮೊರಾಸ್ ಅವರು ಆದಿತ್ಯವಾರ ಮಾಸ್ಟರ್ ಪ್ಲಾನರಿ ಸಂಸ್ಥೆಗೆ ರಜೆಯಾದ್ದರಿಂದ, ಅಳಕೆಮಜಲಿನಲ್ಲಿ ಖಾಸಗಿ ಕೆಲಸ ನಿರ್ವಹಿಸಲೆಂದು ಬಿಹಾರ ಮೂಲದ ಕಾರ್ಮಿಕರಾದ ಸುರೇಂದರ್ ಮತ್ತು ಸನ್ನೀಫ್‌ರನ್ನು ಕರೆಸಿಕೊಂಡಿದ್ದರು. ರಾತ್ರಿ ವೇಳೆ ಅವರನ್ನು ಮುರ ರೂಮ್ ಗೆ ಬಿಡಲೆಂದು ಸ್ಕೂಟರ್‌ನಲ್ಲಿ ಪುತ್ತೂರು ಕಡೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾಜ ಅವರು ಚಲಾಯಿಸುತ್ತಿದ್ದ ಸ್ಕೂಟರ್ ಹಾಗೂ ಮಡಿಕೇರಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಮಿನಿ ಬಸ್ ನಡುವೆ ಪೋಳ್ಯ ತಿರುವಿನಲ್ಲಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಾಜ ಅವರ ತೊಡೆಯ ಮೇಲೆಯೇ…
ಬಂಟ್ವಾಳ: ತರಕಾರಿ ಲಾರಿಯೊಂದು ರಿವರ್ಸ್ ತೆಗೆಯುವ ವೇಳೆ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನಪ್ಪಿದ ಘಟನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೃತರನ್ನು ಪಾಣೆಮಂಗಳೂರು – ಆಲಡ್ಕದಲ್ಲಿ ವಾಸ್ತವ್ಯವಿದ್ದ ಅಶ್ರಫ್ (32) ಎಂದು ಗುರುತಿಸಲಾಗಿದೆ. ಸ್ನೇಹತನಿಗೆ ಸಹಾಯ ಮಾಡಲು ಬಿಸಿರೋಡ್ ಗೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಶ್ರಫ್ ಇಂದು ಮುಂಜಾನೆ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಸ್ನೇಹಿತ ಆಲಡ್ಕ ನಿವಾಸಿ ತನ್ವೀರ್ ಎಂಬವರನ್ನು ತನ್ನ ಸ್ಕೂಟರ್ ನಲ್ಲಿ ಬಿ.ಸಿ.ರೋಡ್ ಕೈಕಂಬದಲ್ಲಿರುವ ಅಂಗಡಿಗೆ ಬಿಡಲು ತೆರಳಿದ್ದರು. ಹಾಗೆ 5:30ರ ಸುಮಾರಿಗೆ ಕೈಕಂಬಕ್ಕೆ ತಲುಪಿದ ಇವರು ತನ್ವೀರ್ ರನ್ನು ಸ್ಕೂಟರ್ ನಿಂದ ಇಳಿಸಬೇಕು ಅನ್ನುವಷ್ಟರಲ್ಲಿ ಅದೇ ಅಂಗಡಿಗೆ ತರಕಾರಿ ತಂದು ಹಿಂದಿರುಗುತ್ತಿದ್ದ ಲಾರಿಯನ್ನು ಅದರ ಚಾಲಕ ಅಜಾಗರೂಕತೆಯಿಂದ ಹಿಂಬದಿಗೆ ಚಲಿಸಿ ಸ್ಕೂಟರ್ ಗೆ ಢಿಕ್ಕಿ ಹೊಡೆದಿದ್ದಾನೆ ಎಂದು ಸ್ಥಳೀಯರು ಆರೋಪಿದ್ದಾರೆ. ಘಟನೆಯಿಂದ ಇಬ್ಬರಿಗೂ ಗಾಯಗಳಾಗಿದ್ದು, ಗಂಭೀರ ಗಾಯಗೊಂಡಿದ್ದ ಅಶ್ರಫ್ ರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ…
ಮೂಡುಬಿದಿರೆ: ಇಲ್ಲಿನ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ (19) ಕಾಣೆಯಾದ ವಿದ್ಯಾರ್ಥಿನಿ. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿರುವ ಮಾಹಿತಿ ಇದ್ದು ಅನಂತರ ಅಲ್ಲಿಂದ ಕಾಲೇಜಿಗೆ ಹೋಗದೆ ಕಾಣೆಯಾಗಿರುವುದಾಗಿ ತಿಳಿದುಬಂದಿದೆ.ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು ಕಾಣೆಯಾಗುವ ಸಂದರ್ಭ ಕಾಲೇಜಿನ ಸಮವಸ್ತ್ರ ಧರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ
ಮಂಗಳೂರು: ಮಂಗಳೂರಿನ ಪಣಂಬೂರು ಬೀಚ್‌ನಲ್ಲಿ ಶನಿವಾರ ಮಧ್ಯಾಹ್ನ ನೀರಿನಲ್ಲಿ ಆಟವಾಡುವುದಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ಸಮುದ್ರಪಾಲಾದ ಘಟನೆ ನಡೆದಿದೆ. ಬೈಕಂಪಾಡಿಯ ಮೀನಕಳಿಯ ಸರ್ಕಾರಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದ ಬಾಲಕ ತುಕರಾಮ(13) ಶಾಲೆ ಬಿಟ್ಟ ಬಳಿಕ ತನ್ನ ಸ್ನೇಹಿತನೊಂದಿಗೆ ಪಣಂಬೂರು ಬೀಚ್ ಗೆ ಬಂದಿದ್ದ. ನೀರಾಟವಾಡುತ್ತಿದ್ದಾಗ ಬೃಹತ್ ಅಲೆಗೆ ಕೊಚ್ಚಿಹೋಗಿ ಮುಳುಗಿ ನಾಪತ್ತೆಯಾಗಿದ್ದಾನೆ. ಬೀಚ್ ನಲ್ಲಿ ವಿದ್ಯಾರ್ಥಿ ಮುಳುಗುತ್ತಿರುವುದನ್ನು ಕಂಡ ಇತರರು ರಕ್ಷಣಾ ದಳಕ್ಕೆ ತಿಳಿಸಿದ್ದಾರೆ. ತತ್ ಕ್ಷಣ ಜೆಟ್ ಸ್ಕೀ ಮೂಲಕ ಕಾಪಾಡಲು ಯತ್ನಿಸಿದರೂ ಸಾಧ್ಯವಾಗಲಿಲ್ಲ . ಬಾಲಕ ಉತ್ತರ ಕರ್ನಾಟಕದ ಮೂಲದವರಾಗಿದ್ದು, ಕೆಲ್ಸದ ನಿಮಿತ್ತ ಈತನ ಪೋಷಕರು ಬೈಕಂಪಾಡಿ ಬಳಿಯ ಮೀನಕಳಿಯ ಬಳಿ ವಾಸವಿದ್ದಾರೆ. ಘಟನೆ ಕುರಿತು ಪಣಂಬೂರು ಠಾಣೆಯಲ್ಲಿ ದೂರು ದಾಖಲಾಗಿದೆ.









