ಮಂಗಳೂರು:ಸುರತ್ಕಲ್,ಮುಲ್ಕಿ, ಬಜಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಸುರತ್ಕಲ್‌ನಲ್ಲಿ ಗುರುವಾರ ರಾತ್ರಿ ನಡೆದ ಕೊಲೆ ಕೃತ್ಯದ ಹಿನ್ನೆಲೆಯಲ್ಲಿ ಸುರತ್ಕಲ್, ಮುಲ್ಕಿ, ಬಜಪೆ, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜೊತೆಗೆ ಎಲ್ಲ ಶಾಲೆ, ಕಾಲೇಜುಗಳಿಗೆ ಶುಕ್ರವಾರ ಇಂದು (ಜು.29) ರಜೆ ಘೋಷಿಸಲಾಗಿದೆ. ಪೊಲೀಸ್ ಕಮಿಷನರ್ ಶಶಿಕುಮಾರ್ ಮನವಿಯಂತೆ ದ.ಕ. ಜಿಲ್ಲಾಧಿಕಾರಿ ರಜೆ ಘೋಷಿಸಿ ತಡರಾತ್ರಿ ಆದೇಶಿಸಿದ್ದಾರೆ.
Author: main-admin
ಸುರತ್ಕಲ್; ಯುವಕನೋರ್ವನ ಮೇಲೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದು, ಗಂಭೀರ ಗಾಯಗೊಂಡ ಯುವಕ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ಸುರತ್ಕಲ್ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಎಂದು ಗುರುತಿಸಲಾಗಿದೆ. ಸುರತ್ಕಲ್ ಬೀಜೇಶ್ ಎಂಬ ಜವಳಿ ಅಂಗಡಿಯ ಮುಂಭಾಗ ಇಂದು ರಾತ್ರಿ ಈ ಘಟನೆ ನಡೆದಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮುಹಮ್ಮದ್ ಫಾಝಿಲ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಭಾರೀ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹಾಗೂ ಅಹಿತಕರ ಘಟನೆ ನಡೆಯದಂತೆ ಮದ್ಯಮಾರಾಟ ಬಂದ್ ಮಾಡಲು ಆದೇಶಿಸಲಾಗಿದೆ. ನಿನ್ನೆಯಿಂದ ನಾಳೆ (ಜುಲೈ 29) ಮಧ್ಯರಾತ್ರಿ 12 ಗಂಟೆವರೆಗೆ ಸುಳ್ಯ, ಬಂಟ್ವಾಳ, ಪುತ್ತುರು, ಕಡಬದಲ್ಲಿ ಮದ್ಯದ ಅಂಗಡಿಗಳನ್ನು ಮುಚ್ಚಲು ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಬೆಳ್ಳಾರೆ: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆಯಿಂದ ಆಘಾತಕ್ಕೊಳಗಾಗಿರುವ ತಂದೆಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನ ಸಾವಿನಿಂದ ಶೇಖರ್ ಪೂಜಾರಿ ತೀವ್ರ ಆಘಾತಕ್ಕೊಳಗಾಗಿದ್ದರು. ಮೊದಲೇ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ತಂದೆ ಶೇಖರ್ ಪೂಜಾರಿ ಅವರು ಇದ್ದ ಒಬ್ಬ ಮಗನ ಸಾವಿನಿಂದ ಕಂಗಾಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಂಬುಲೆನ್ಸ್ ಮೂಲಕ ಬೆಳ್ಳಾರೆಯ ಭಾರದ್ವಾಜ್ ಆಸ್ಪತ್ರೆಗೆ ಶೇಖರ್ ಅವರನ್ನು ರವಾನೆ ಮಾಡಲಾಗಿದೆ.
ಉಡುಪಿ: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಹತ್ಯೆ ಖಂಡಿಸಿ ಮತ್ತು ಮನನೊಂದು ರಾಜೀನಾಮೆ ನೀಡುವುದು ಮುಂದುವರೆದಿದೆ. ಮಲ್ಪೆಯ ಬೈಲಕೆರೆ ತೆಂಕನಿಡಿಯೂರು ಗ್ರಾಮದಲ್ಲಿಯೇ 50 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರಿಗೆ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿರುವ ಬೈಲಕೆರೆಯ ಬಿಜೆಪಿ ಕಾರ್ಯಕರ್ತರು, ಹಿಂದು ಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಬೈಲಕೆರೆ, ಬಿಜೆಪಿ ಕಾರ್ಯಕರ್ತರು ಬಿಜೆಪಿಯಲ್ಲಿ ಹಲವಾರು ಸಮಯದಿಂದ ಜವಾಬ್ದಾರಿಯುತ ಕಾರ್ಯಕರ್ತರಾಗಿ ದುಡಿಯುತ್ತಿದ್ದೇವೆ. ನಾವು ಕಾರ್ಯಕರ್ತರ ನಿರಂತರ ಹತ್ಯಾಕಾಂಡದಿಂದ ಬೇಸತ್ತು, ಹಿಂದೂ ಕಾರ್ಯಕರ್ತರ ಸುರಕ್ಷತೆಯ ಬಗ್ಗೆ ಯೋಚಿಸದ ಬಿಜೆಪಿ ಸರಕಾರದಿಂದ ವಿಶ್ವಾಸ ಕಳೆದುಕೊಂಡಿರುವುದರಿಂದ ಅತ್ಯಂತ ನೋವಿನಿಂದ ಕಠಿಣ ನಿರ್ಧಾರ ತೆಗೆದುಕೊಂಡು ರಾಜಿನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ತಿಳಿಸಲಾಗಿದೆ.
ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಗೆ ಮೇಲ್ನೋಟಕ್ಕೆ 2-3 ಕಾರಣಗಳು ಕಂಡು ಬರುತ್ತಿದೆ. ಆರೋಪಿಗಳನ್ನು ದಸ್ತಗಿರಿ ಮಾಡಿದ ಮೇಲೆ ಹತ್ಯೆಗೆ ಕಾರಣ ತಿಳಿಸುತ್ತೇವೆ. ವಶಕ್ಕೆ ಪಡೆದವರಲ್ಲಿ ಅವರು ಯಾರು ಎಂಬುದನ್ನು ಸದ್ಯಕ್ಕೆ ಹೇಳಲು ಸಾಧ್ಯವಿಲ್ಲ ಎಂದು ಸುಳ್ಯದ ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿ ನಿನ್ನೆಯಿಂದ ಮಾಹಿತಿ ಪಡೆದಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಮಾಡಿ ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದಾರೆ. ಮಂಗಳೂರು ಕಮಿಷನರ್ ಸಹಾಯ ಕೂಡ ಪಡೆಯಲಾಗಿದೆ. ಉಡುಪಿ ಪೊಲೀಸರ ಸಹಾಯ ಕೂಡ ಪಡೆಯಲಾಗಿದೆ. ದಕ್ಷ ಅಧಿಕಾರಿಗಳ 6 ತಂಡ ನಾವು ರಚನೆ ಮಾಡಿದ್ದು ಈಗಾಗಲೇ 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದೇವೆ ಎಂದಿದ್ದಾರೆ. ಇನ್ನು ಅಂತಿಮ ದರ್ಶನಕ್ಕೆ ಸಂಸದರು ಸಚಿವರುಗಳು ಸ್ಥಳಕ್ಕೆ ಬಂದಿದ್ದಾರೆ. ಜನರು ಭಾವಾವೇಶದಿಂದ ವಾಹನವನ್ನು ತಳ್ಳಲು ಪ್ರಯತ್ನ ಮಾಡಿದ್ದಾರೆ. ಪರಿಸ್ಥಿತಿ ಹತೋಟಿಗೆ ತರಲು ಲಘುಲಾಠಿ ಪ್ರಹಾರ ಮಾಡಬೇಕಾಯಿತು. ಡಿ.ಸಿ ಸೆಕ್ಷನ್ 144 ಜಾರಿ…
ಸುರತ್ಕಲ್: ಮಗುವಿನ ಅಶ್ಲೀಲ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಕಳುಹಿಸಿರುವುದು ಹಾಗೂ ಅದರ ಬಗ್ಗೆ ಕಮೆಂಟ್ ಮಾಡಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಚಿತ್ತರಂಜನ್ ಶೆಟ್ಟಿ ವಿರುದ್ಧ ಕೇಸು ದಾಖಲಾಗಿದೆ. ಕೇಂದ್ರದ ಅಪರಾಧ ನಿಯಂತ್ರಣದ ಸೈಬರ್ ಟಿಪ್ ಪೋರ್ಟಲ್ ಮೂಲಕ ಕಳುಹಿಸಿರುವ ಅರ್ಜಿಯ ಪ್ರಕಾರ ಪ್ರಕರಣ ದಾಖಲಾಗಿದೆ. ಚಿತ್ತರಂಜನ್ ಶೆಟ್ಟಿ ಅಶ್ಲೀಲತೆಯ ವೀಡಿಯೋವನ್ನು ಕಳುಹಿಸಿರುವ ಮಾಹಿತಿ ಪೋರ್ಟಲ್‌ನಲ್ಲಿ ದಾಖಲಾಗಿದೆ. ಇದೊಂದು ಅತ್ಯಾಧುನಿಕ ಪೋರ್ಟಲ್ ಆಗಿದ್ದು ಇದರಲ್ಲಿ ಲೈಂಗಿಕ ದೌರ್ಜನ್ಯ ವೀಡಿಯೋ ರವಾನೆ ಆದಲ್ಲಿ ಮಾಹಿತಿಗಳು ದಾಖಲಾಗುತ್ತದೆ. ಸಾಕ್ಷಿಗಳ ಆಧಾರದ ಮೇಲೆ ಆರೋಪಿ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ವಾರದ ಸುರಿದ ಭಾರೀ ಮಳೆಯಿಂದ ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಬಳಿ ತಡೆಗೋಡೆಯಲ್ಲಿ ಉಬ್ಬು ಕಂಡು ಬಂದಿದ್ದರಿಂದ ತಾತ್ಕಾಲಿಕವಾಗಿ ನಿಷೇಧಿಸಿದ್ದ ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಕೊಡಗು ಜಿಲ್ಲಾಡಳಿತ ಅವಕಾಶ ಮಾಡಿಕೊಟ್ಟಿದೆ. ಕಳೆದ ವಾರದ ಸುರಿದ ಭಾರೀ ಮಳೆಯಿಂದಾಗಿ ಮಡಿಕೇರಿ- ಮಂಗಳೂರು ರಸ್ತೆ ಕುಸಿತಗೊಂಡಿದ್ದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 275ರ ಸಂಪರ್ಕವನ್ನು ನಿಷೇಧ ಮಾಡಲಾಯಿತುಇನ್ನು ತಡೆಗೋಡೆಯ ಉಬ್ಬುವಿಕೆಯನ್ನು ತಡೆಯಲು ತಾತ್ಕಾಲಿಕವಾಗಿ ಸ್ಯಾಂಡ್ ಬಂಡಲ್‍ಗಳನ್ನು ಹಾಕಿ ಕಾಮಗಾರಿಯನ್ನು ಮಾಡಲಾಗಿದ್ದು, ಇದೀಗ ಲಘು ವಾಹನಗಳ ಸಂಚಾರಕ್ಕೆ ಕೊಡಗು ಜಿಲ್ಲಾಡಳಿತ ಅವಕಾಶ ಮಾಡಿಕೊಟ್ಟಿದೆ.
ಉಳ್ಳಾಲ: ಅಪ್ರಾಪ್ತ ಮಗಳ ಮೇಲೆಯೇ ಮಲತಂದೆಯೋರ್ವ ಅತ್ಯಾಚಾರವೆಸಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಎಂಬಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಅಶ್ವಥ್ (25) ಎಂಬಾತನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊರ ಜಿಲ್ಲೆಯಿಂದ ಬಂದ ಕುಟುಂಬ ಪಾವೂರಿನಲ್ಲಿ ನೆಲೆಸಿತ್ತು. ಮಹಿಳೆಯ ಪತಿ ಸಾವನ್ನಪ್ಪಿದ ಬಳಿಕ ಅಶ್ವಥ್ ಜತೆಗೆ ಸಂತ್ರಸ್ತ ಬಾಲಕಿಯ ತಾಯಿ ಸಂಸಾರ ನಡೆಸುತ್ತಿದ್ದರು. ಆಕೆ ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಅಶ್ವಥ್ ಹಾಗೂ ಬಾಲಕಿ ಮನೆಯಲ್ಲಿದ್ದರು. ಈ ಸಂದರ್ಭದಲ್ಲಿ ಬಾಲಕಿ ಮೇಲೆ ಆರೋಪಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗ್ತಿದೆ. ವಿಪರೀತ ರಕ್ತಸ್ರಾವವಾದ ಕಾರಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪಾಂಡೇಶ್ವರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಪ್ರವೀಣ್ ನೆಟ್ಟಾರು ಮೃತದೇಹವನ್ನು ಬೆಳಗ್ಗೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯುತು. ಪುತ್ತೂರಿನಿಂದ ಸವಣೂರು ನಿಂತಿಕಲ್ಲು ಮಾರ್ಗವಾಗಿ ಪ್ರವೀಣ್ ಪಾರ್ಥೀವ ಶರೀರವನ್ನು ಮೆರವಣಿಗೆ ಮೂಲಕ ಕರೆತರಲಾಗುತ್ತಿದ್ದು, ಹುಟ್ಟೂರು ನೆಟ್ಟಾರಿನಲ್ಲಿ ಅಂತ್ಯ ಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು(29) ಅವರನ್ನು ನಗರದ ಬೆಳ್ಳಾರೆ ಪೇಟೆಯಲ್ಲಿ ಹತ್ಯೆ ಮಾಡಲಾಗಿದೆ. ಈ ಬರ್ಬರ ಹತ್ಯೆಯನ್ನು ಖಂಡಿಸಿ ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಸ್ವಯಂಪ್ರೇರಿತ ಬಂದ್‌ಗೆ ವಿಎಚ್‌ಪಿ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ.