Author: main-admin

ಮಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದ ಆರೋಪಿಗಳ ಬೆನ್ನು ಹತ್ತಿದ ಕಂಕನಾಡಿ ನಗರ ಠಾಣಾ ಪೊಲೀಸರು ಕೇರಳ ಮೂಲದ ಅಂತಾರಾಜ್ಯ ಸರಗಳ್ಳರನ್ನು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಚೆರ್ಕಳ ಮೂಲದ ಸದ್ಯ ಬಂಟ್ವಾಳದ ಮಿತ್ತಬೈಲ್ ಶಾಂತಿಯಂಗಡಿಯಲ್ಲಿ ನಿವಾಸಿಯಾಗಿದ್ದ ಮೊಹಮ್ಮದ್ ಆಲಿ (32) ಮತ್ತು ಬಿಸಿ ರೋಡ್ ಶಾಂತಿಯಂಗಡಿ ನಿವಾಸಿ ಜುಬೈರ್ (32) ಬಂಧಿತ‌ ಆರೋಪಿಗಳು. ಬಜಾಲ್ ಜೆಎಂ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಕತ್ತಿನಲ್ಲಿದ್ದ 16 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಈ ಇಬ್ಬರು ಪರಾರಿಯಾಗಿದ್ದರು. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಆರೋಪಿಗಳ ಬೆನ್ನುಬಿದ್ದ ಪೊಲೀಸರು ಇಬ್ಬರನ್ನು ಬಂಧಿಸಿ, ಚಿನ್ನದ ಸರವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಮೊಹಮ್ಮದ್ ಆಲಿ ವಿರುದ್ಧ ಕಾಸರಗೋಡು ಜಿಲ್ಲೆಯ ಬದಿಯಡ್ಕ ಮಂಜೇಶ್ವರ, ಬಂಟ್ವಾಳ, ವಿಟ್ಲ ಮಂಗಳೂರಿನ ಬರ್ಕೆ ಠಾಣೆಗಳಲ್ಲಿ ಮನೆ ಕಳವು, ಸರ ಸುಲಿಗೆ, ಜೈಲಿನಲ್ಲಿ ಹೊಡೆದಾಟ ಸೇರಿ 15 ಪ್ರಕರಣ ದಾಖಲಾಗಿದೆ. ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್…

Read More

ಪುತ್ತೂರು: ದೇರಳಕಟ್ಟೆಯ ಖಾಸಗಿ ಯುನಿರ್ವಸಿಟಿಯಲ್ಲಿ ಪಿಹೆಚ್‌ಡಿ ಮಾಡುತ್ತಿದ್ದ ಪುತ್ತೂರಿನ ಚೈತ್ರಾ ನಾಪತ್ತೆಯಾಗಿರುವ ಬಗ್ಗೆ ಫೆ. 17 ರಂದು ಉಳ್ಳಾಲ ಠಾಣೆಗೆ ದೂರು ನೀಡಲಾಗಿದ್ದು, ಇದೀಗ ಆಕೆಯ ನಾಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ದೇರಳಕಟ್ಟೆಯ ಖಾಸಗಿ ವಿವಿಯಲ್ಲಿ ಪಿಹೆಚ್‌ಡಿ ಮಾಡಲು ಅನುಕೂಲವಾಗಲು ಮಾಡೂರಿನಲ್ಲಿ ಪಿಜಿ ಒಂದರಲ್ಲಿದ್ದ ಚೈತ್ರಾ ಅನ್ಯ ಕೋಮಿನ ಯುವಕನ ಜೊತೆ ಸಂಪರ್ಕದಲ್ಲಿ ಇದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪುತ್ತೂರಿನ ಅನ್ಯ ಕೋಮಿನ ಯುವಕನೊಬ್ಬ ಪಿಜಿಗೆ ಭೇಟಿ ನೀಡುತ್ತಿದ್ದ ಎಂಬ ಬಗ್ಗೆ ಮಾಡೂರಿನ ಬಜರಂಗದಳದ ಮುಖಂಡರು ಚೈತ್ರಾ ದೊಡ್ಡಪ್ಪನ ಗಮನಕ್ಕೆ ತಂದಿದ್ದರು. ಡ್ರಗ್‌ ಮಾಫೀಯಾ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದ ಬಜರಂಗದಳದ ಮುಖಂಡರು ಈ ಬಗ್ಗೆ ಎಚ್ಚರ ವಹಿಸುವಂತೆ ಚೈತ್ರಾ ದೊಡ್ಡಪ್ಪನ ಬಳಿ ಹೇಳಿದ್ದರು. ಇದಾದ ಬಳಿಕ ಚೈತ್ರಾ ನಾಪತ್ತೆಯಾಗಿದ್ದು, ಆಕೆ ಪುತ್ತೂರಿನ ಶಾರೂಕ್ ಶೇಖ್‌ ಎಂಬಾತನ ಜೊತೆ ಹೋಗಿರುವ ಬಲವಾದ ಅನುಮಾನ ಮೂಡಿದೆ. ಪುತ್ತೂರಿನ ಕೂರ್ನಡ್ಕದ ಚಿಕ್ಕಮ್ಮನ ಮನೆಯಲ್ಲಿ ವಾಸವಿದ್ದ ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ಶಾರೂಕ್‌ ಶೇಖ್‌ ಗೆ…

Read More

ಕಡಬ : ಮನೆ ಎದುರು ಗುಂಪು ಕಟ್ಟಿಕೊಂಡು ಹಲ್ಲೆ ನಡೆಸಿರುವ ಆರೋಪದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕಡಬದ ಮರ್ಧಾಳ ಶಿವಾಜಿನಗರ ನಿವಾಸಿ ದಿ. ಇಲ್ಯಾಸ್ ಎಂಬವರ ಪುತ್ರ ಫಯಾಜ್ ಎಂಬಾತ ಗುರುವಾರ ಸಂಜೆ ತನ್ನ ತಾಯಿ ಮತ್ತು ಸಹೋದರರೊಂದಿಗೆ ತನ್ನ ಮನೆಯಲ್ಲಿದ್ದ ಸಂದರ್ಭದಲ್ಲಿ ಸುಮಾರು 7 ಗಂಟೆಯ ವೇಳೆಗ ಮನೆಯ ಹತ್ತಿರಕ್ಕೆ ಅಪರಿಚಿತ ಮಹಿಳೆಯೊಬ್ಬಳು ಚಿಕ್ಕ ಮಗುವನ್ನು ಎತ್ತಿಕೊಂಡು ಬಂದಿದ್ದು, ರಿಯಾಝ್ ನ ಮನೆ ಯಾವುದು ಎಂದು ಕೇಳಿದ್ದಾರೆ ಎನ್ನಲಾಗಿದೆ. ಈ ವೇಳೆ ಇದು ರಿಯಾಝ್ ನ ಮನೆ ಅಲ್ಲ. ನೀವು ಇಲ್ಲಿಂದ ತೆರಳಿ ಎಂದು ಹೇಳಿದ್ದು, ಆ ಸಮಯದಲ್ಲಿ ಅಪರಿಚಿತ ಮಹಿಳೆಯು ಅಲ್ಲೇ ಮನೆ ಮುಂಭಾಗದಲ್ಲಿ ಅಳುತ್ತಾ ನಿಂತಿದ್ದರು ಎನ್ನಲಾಗಿದೆ. ಆ ಸಂದರ್ಭದಲ್ಲಿ ಫಯಾಝ್ ನ ತಾಯಿ ಅಪರಿಚಿತ ಮಹಿಳೆಯನ್ನು ಸಮಾಧಾನ ಮಾಡಿ ನಂತರ ಮನೆ ಪಕ್ಕದ ಇಬ್ರಾಹಿಂ ಎಂಬ ಹುಡುಗನ ಜೊತೆ ಈ ಮಹಿಳೆಯನ್ನು ಮರ್ಧಾಳ ಬಸ್ಸು ನಿಲ್ದಾಣದ ಹತ್ತಿರ ಬಿಟ್ಟು ಬಾ ಎಂದು ಹೇಳಿದಂತೆ ಆ ಹೆಂಗಸನ್ನು…

Read More

ಕಾಸರಗೋಡು: ಹೊಸದುರ್ಗದ ಮಡಿಕೈ ಮೂನುರೋಡ್‌ ಜಂಕ್ಷನ್‌ ಬಳಿಯ ಪಿ. ಶೈಜು ಅವರ ಮನೆ ಆವರಣದ 20 ಅಡಿ ಆಳದ ಬಾವಿಗೆ ಬಿದ್ದು ಜೀವನ್ಮರಣದ ಮಧ್ಯೆ ಅರಣ್ಯ ಪಾಲಕರು ರಕ್ಷಿಸಿದ ಕಾಡು ಕೋಣವನ್ನು ಬಳಿಕ ಸ್ಥಳೀಯ ಕಾಡಿಗೆ ಬಿಟ್ಟಿದ್ದರು. ಆದರೆ ಬಳಿಕ ಅದು ಪಳ್ಳಂಜಿ ಮಹಾಗನಿ ತೋಟದ ರಸ್ತೆ ಬಳಿ ಸಾವಿಗೀಡಾಗಿದೆ.ಕುಟ್ಟಿಕ್ಕೋಲ್‌ ಸರಕಾರಿ ವೆಟರ್ನರಿ ಕೇಂದ್ರದ ಡಾ| ಜಯಕೃಷ್ಣನ್‌ ಸ್ಥಳಕ್ಕೆ ತೆರಳಿ ಕಳೇಬರವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿದ್ದಾರೆ.

Read More

ವೈಯಕ್ತಿಕ ಅವಶ್ಯಕತೆಗಳಿಗಾಗಿ ಮಹಿಳೆಯೋಬ್ಬರು ಧರ್ಮಸ್ಥಳ ಸಂಘದಲ್ಲಿ ಸಾಲವನ್ನು ಪಡೆದಿದ್ದರು, ಆದರೆ ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ಧರ್ಮಸ್ಥಳ ಸಂಘದವರು ಮನೆ ಬಳಿ ಬಂದು ಗಲಾಟೆ ಮಾಡಿ ನಿಂದಿಸಿದ ಕಾರಣಕ್ಕೆ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಶುಕ್ರವಾರ ವರದಿಯಾಗಿದೆ. ಶೃಂಗೇರಿ ಪಟ್ಟಣದ ಹನುಮಂತ ನಗರದ ನಿವಾಸಿ ಅರ್ಪಿತಾ(29) ಮೃತ ಮಹಿಳೆ ಎನ್ನಲಾಗಿದೆ. ಅರ್ಪಿತಾ ಕಳೆದ 6 ತಿಂಗಳ ಹಿಂದೆ ಧರ್ಮಸ್ಥಳ ಸಂಘದಲ್ಲಿ 1 ಲಕ್ಷ ರೂ. ಸಾಲ ಪಡೆದಿದ್ದು, ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡದ ಕಾರಣದಿಂದ ಸಂಘದ ಸದಸ್ಯರು ಶುಕ್ರವಾರ ಬೆಳಗ್ಗೆ ಅರ್ಪಿತಾ ಮನೆಗೆ ತೆರಳಿ ಸಾಲದ ವಿಚಾರವಾಗಿ ಗಲಾಟೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಎರಡೂ ಕಡೆಯವರಿಂದ ವಾಗ್ವಾದ ನಡೆದಿದ್ದು, ಈ ವೇಳೆ ಸಂಘದವರು, ಸಾಲ ಕಟ್ಟಲಾಗದಿದ್ದರೆ, ಎಲ್ಲಾದರು ಹೋಗಿ ಸಾಯಿ ಎಂದು ನಿಂದಿಸಿದ್ದಾರೆ ಎನ್ನಲಾಗಿದ್ದು, ಅರ್ಪಿತಾ ಮೇಲೆ ಹಲ್ಲೆಯನ್ನೂ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.ಹಲ್ಲೆ ನಿಂದನೆಯಿಂದ ಮನನೊಂದ ಅರ್ಪಿತಾ ಮನೆಯಲ್ಲಿ ತನ್ನ…

Read More

ಮಂಗಳೂರು: ಅಪ್ರಾಪ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಎಫ್‌ಟಿಎಸ್‌ಸಿ-1 ಪೊಕ್ಸೊ)‌ ಸರಕಾರಿ ಬಸ್ ಕಂಡೆಕ್ಟರ್ ಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಬಾಗಲಕೋಟೆ ನಿವಾಸಿ ದಾವಲ್ ಸಾಬ್ (34) ಶಿಕ್ಷೆಗೊಳಗಾದ ಆರೋಪಿ. 2023ರ ಮಾರ್ಚ್‌ನಲ್ಲಿ ಬಾಲಕಿ ಶಾಲೆಯಿಂದ ಬಿ.ಸಿ ರೋಡ್‌ನಲ್ಲಿರುವ ತನ್ನ ಮನೆಗೆ ಮರಳಲು ಕಲ್ಲಡ್ಕದಲ್ಲಿ ಸರಕಾರಿ ಬಸ್ ಹತ್ತಿದ್ದಾಳೆ. ಈ ವೇಳೆ ಬಸ್‌ನಲ್ಲಿ 4-5 ಮಂದಿ ಮಾತ್ರ ಪ್ರಯಾಣಿಕರಿದ್ದರು. ಮುಂದಿನ ನಿಲ್ದಾಣದಲ್ಲಿ ಅವರೆಲ್ಲಾ ಬಸ್‌ನಿಂದ ಇಳಿದಿದ್ದಾರೆ. ಆಗ ಆರೋಪಿ ಕಂಡೆಕ್ಟ‌ರ್ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ತಾನು ಹೆತ್ತವರು, ಪೊಲೀಸರಿಗೆ ತಿಳಿಸುವುದಾಗಿ ಬಾಲಕಿ ಹೇಳಿದರೂ ಆರೋಪಿ ಅಸಭ್ಯತನ ಮುಂದುವರಿಸಿದ್ದ. ಇದರಿಂದ ನೊಂದ ಬಾಲಕಿ ಬಸ್‌ನ ಸಂಖ್ಯೆ ಸಮೇತ ಮನೆಗೆ ತೆರಳಿ ತಾಯಿ ಬಳಿ ಘಟನೆಯ ಬಗ್ಗೆ ವಿವರಿಸಿದ್ದಾಳೆ. ತಾಯಿ ಮತ್ತು ಬಾಲಕಿಯು ಬಂಟ್ವಾಳ ನಗರ ಠಾಣೆಗೆ ತೆರಳಿ ದೂರು ನೀಡಿದ್ದರು. ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಕಂಡೆಕ್ಟರ್‌ನನ್ನು ಬಂಧಿಸಿ ಕಾನೂನು…

Read More

ಬ್ರಹ್ಮಾವರ:‌ ಬ್ರಹ್ಮಾವರದ ಉಪ್ಪಿನಕೋಟೆಯಲ್ಲಿ ಮನೆಗೆ ಬಂದ ಇಬ್ಬರು ಅಪರಿಚಿತರು ಮಹಿಳೆಯರು ಮನೆಯಲ್ಲಿದ್ದ 1 ವರ್ಷದ ಮಗುವನ್ನು ಅಪಹರಿಸಲು ಯತ್ನಿಸಿರುವ ಘಟನೆ ನಡೆದಿದೆ. ಫೆ. 21ರಂದು ಬೆಳಿಗ್ಗೆ ಉಪ್ಪಿನಕೋಟೆಯ ಮಹಿಮಾ ಎಂಬವರ ಮನೆಗೆ ಬಂದ ಇಬ್ಬರು ಅಪರಿಚಿತ ಹೆಂಗಸರು ತಾವು ಬಾಂಬೆಯಿಂದ ಬಂದಿರುವುದಾಗಿ ತಿಳಿಸಿದ್ದಾರೆ.ಇನ್ನು ಮನೆಯವರ ವಿರೋಧದ ನಡುವೆಯೂ ಸೀದಾ ಮನೆಯೊಳಗೆ ಬಂದು ಮಹೀಮಾ ಅವರ 1 ವರ್ಷದ ಹೆಣ್ಣು ಮಗುವನ್ನು ಎತ್ತಿಕೊಂಡು ಮೊಬೈಲಿನಲ್ಲಿರುವ ವಿಡಿಯೋಗಳನ್ನು ತೋರಿಸುತ್ತಾ ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಕೂಡಲೇ ಮಹಿಮಾ ಅವರು ಅಪರಿಚಿತ ಹೆಂಗಸು ಎತ್ತಿಕೊಂಡು ಹೋದ ಮಗುವನ್ನು ಕರೆದುಕೊಂಡು ಬಂದಿರುತ್ತಾರೆ. ಅಷ್ಟರಲ್ಲಿ ಅಲ್ಲಿಗೆ ಮಹಿಮಾ ಅವರ ಅಣ್ಣ ಬಂದಿದ್ದನ್ನು ನೋಡಿದ ಆರೋಪಿಗಳು ಅಲ್ಲಿಂದ ಓಡಿ ಹೋಗಿದ್ದಾರೆ.ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಲ್ಪೆ: ತಾನು ಲಂಡನ್‌ ವೈದ್ಯ ಎಂಬುದಾಗಿ ನಂಬಿಸಿ ಮಲ್ಪೆಯ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೆಂಕನಿಡಿಯೂರು ಗ್ರಾಮದ ವಿನೀತಾ (35) ಅವರು ಕಂಪೆನಿಯೊಂದರಲ್ಲಿ ಬಿಸಿನೆಸ್‌ ಪಾರ್ಟ್‌ನರ್‌ ಆಗಿ ಕೆಲಸ ಮಾಡಿಕೊಂಡಿದ್ದರು. ಈ ಸಂದರ್ಭ ಅಪರಿಚಿತ ವ್ಯಕ್ತಿಯೊಬ್ಬ ತಾನು ಡಾಕ್ಟರ್‌ ಎಂಬದಾಗಿ ಪರಿಚಯ ಮಾಡಿಕೊಂಡು ವಾಟ್ಸಾಪ್‌ ಮೂಲಕ ಚಾಟ್‌ ಮಾಡುತ್ತಿದ್ದ. ಅನಂತರ ಆತನು ತಾನು ಲಂಡನ್‌ನಿಂದ ಭಾರತಕ್ಕೆ ಬರುವುದಾಗಿ ಹೇಳಿದ್ದನು. ವಿನೀತಾ ಅವರಿಗೆ ಬೇರೆ ಒಂದು ನಂಬರಿನಿಂದ ಕರೆ ಬಂದಿದ್ದು, ನಿಮ್ಮ ಸ್ನೇಹಿತ ದಿಲ್ಲಿ ವಿಮಾನ ನಿಲ್ದಾಣದಲ್ಲಿ ನಮ್ಮ ಕಸ್ಟಡಿಯಲ್ಲಿದ್ದಾರೆ. ಅವರನ್ನು ಬಿಡುಗಡೆ ಮಾಡಬೇಕಾದರೆ ದಂಡ ಕಟ್ಟಬೇಕಾಗುತ್ತದೆ ಎಂದು ಹೇಳಿದ್ದಾನೆ. ಸರಕಾರದಿಂದ ತಮ್ಮ ಮೇಲೆ ಕಾನೂನು ಕ್ರಮ ಆಗಬಹುದೆಂದು ಹೆದರಿ ವಿನೀತಾ ಹಣವನ್ನು ಪಾವತಿ ಮಾಡಿದರು. ಅವರು ಹೀಗೆ ಫೆಬ್ರವರಿ 16ರಿಂದ 20ರ ವರೆಗೆ ಒಟ್ಟು 4,96,000 ರೂ. ಹಣವನ್ನು ಕೆನರಾ ಬ್ಯಾಂಕ್‌ ಖಾತೆ ಮತ್ತು ಪೋನ್‌ಪೇ ಮೂಲಕ ವರ್ಗಾಯಿಸಿ ವಂಚನೆಗೆ ಒಳಗಾಗಿದ್ದಾರೆ. ಈ…

Read More

ಬೆಳ್ತಂಗಡಿ: ವೇಣೂರಿನ ತಿಮ್ಮಣ್ಣ ಅಜಿಲರು 1604ರಲ್ಲಿ ಪ್ರತಿಷ್ಠಾಪಿಸಿದ ಬಾಹುಬಲಿ ಮೂರ್ತಿಗೆ ಈ ಶತಮಾನದ ಮೂರನೇ ಮಹಾಮಸ್ತಕಾಭಿಷೇಕವು ಗುರುವಾರ ವಿದ್ಯುಕ್ತವಾಗಿ ಆರಂಭಗೊಂಡಿತು. ಗುರುವಾರ ಸಂಜೆ 7 ಗಂಟೆಗೆ 108 ಕಲಶಗಳ ಅಭಿಷೇಕ ಆರಂಭಗೊಂಡಿತು. ಬೆಳ್ತಂಗಡಿ ತಾಲೂಕಿನ ವೇಣೂರಿನ ಬಾಹುಬಲಿ ಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ಅಧಿಕೃತ ಚಾಲನೆ ಸಿಕ್ಕಿದ್ದು, 12 ವರ್ಷದ ಬಳಿಕ ಕಲಶದ ಮೂಲಕ 35 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ ಐದು ಅಂತಸ್ತಿನ ಅಟ್ಟಳಿಗೆ ಹತ್ತಿ ಅಭಿಷೇಕ ಮಾಡುತ್ತಿದ್ದಾರೆ. 12 ವರ್ಷದ ಬಳಿಕ ಕಲಶದ ಮೂಲಕ 35 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ ಐದು ಅಂತಸ್ತಿನ ಅಟ್ಟಳಿಗೆ ಹತ್ತಿ ಅಭಿಷೇಕ ಮಾಡುತ್ತಿದ್ದಾರೆ. ಇದನ್ನು ಕಣ್ತುಂಬಿಕೊಳ್ಳಲು ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದಾರೆ. ಇನ್ನು ಮಾರ್ಚ್ 1ರವರೆಗೂ ವಿವಿಧ ದ್ರವ್ಯಗಳಿಂದ ಬಾಹುಬಲಿ ಮೂರ್ತಿಗೆ ಅಭಿಷೇಕ ನಡೆಯಲಿದೆ.

Read More

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್‌ ಆರ್‌ ಟಿಸಿ ಸಿಹಿಸುದ್ದಿ ನೀಡಿದ್ದು, ಪರೀಕ್ಷೆ ನಡೆಯುವ ದಿನಾಂಕಗಳಂದು ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಕೆಎಸ್‌ ಆರ್‌ ಟಿಸಿ ಬಸ್‌ ಗಳಲ್ಲಿ ಉಚಿತವಾಗಿ ತೆರಳಲು ಅವಕಾಶ ನೀಡಲಾಗಿದೆ. ಮಾರ್ಚ್‌ 1 ರಿಂದ ಮಾರ್ಚ್‌ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಈ ಅವಧಿಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಕೆಎಸ್‌ ಆರ್‌ ಟಿಸಿಯ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ (ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ) 01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ 04-03-2024 ಸೋಮವಾರ ಗಣಿತ ಪರೀಕ್ಷೆ 05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ 06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ 07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ 09-03-2024…

Read More