Author: main-admin

ಬಜಪೆ: ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೊಬ್ಬನನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.ಮೂಡುಪೆರಾರ ಗ್ರಾಮದ ಮಿತ್ತಕೊಳಪಿಲದ ನಿವಾಸಿ ಪ್ರತಾಪ್ ಬಂಧಿತ ಆರೋಪಿ. ಫೆ.13 ರಂದು ಮದ್ಯಾಹ್ನದ ವೇಳೆ ಮೂಡುಪೆರಾರ ಗ್ರಾಮದ ಮಿತ್ತಕೊಳಪಿಲದ ಬಳಿ ದೇವಸ ಎಂಬಲ್ಲಿರುವ ಜನಾರ್ದನ ಗೌಡ ಎಂಬವರ ಮನೆಯ ಹಿಂಬದಿಯ ಭಾಗಿಲಿನ ಚಿಲಕದ ನಟ್ ಬೋಲ್ಟ್ ಗಳನ್ನು ಸ್ಪಾನರ್ ನಿಂದ ಬಿಚ್ಚಿ ಮನೆಯ ಒಳಗಡೆ ಹೋಗಿ ಮನೆಯಲ್ಲಿದ್ದ ಒಟ್ಟು 40,000/- ರೂಪಾಯಿ ಹಣವನ್ನು ಕಳವು ಗೈದಿದ್ದು,ಈ ಬಗ್ಗೆ ಬಜಪೆ ಠಾಣಿಯಲ್ಲಿ ಪ್ರಕರಣ ದಾಖಲಾಗಿತ್ತು. ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೀಪ್ ಜಿ.ಎಸ್ ರವರ ಅಪರಾಧ ಪತ್ತೆ ವಿಭಾಗದ ತಂಡವು ಈ ಬಗ್ಗೆ ಕಾರ್ಯಾಚರಣೆ ನಡೆಸಿ ಸಂಶಯದ ಮೇಲೆ ಆರೋಪಿ ಪ್ರತಾಪ್ ನನ್ನುಬಜಪೆ ಬಸ್ಸು ನಿಲ್ದಾಣದ ಬಳಿ ವಶಕ್ಕೆ ಪಡೆದಿದ್ದು,ಪೊಲೀಸರು ವಿಚಾರಣೆ ನಡೆಸಿದಾಗ ಆರೋಪಿಯು ಜನಾರ್ದನ ಗೌಡ ರವರ ಮನೆಯಿಂದ ಹಣ ಕಳವು ಮಾಡಿರುವ ಬಗ್ಗೆ ಮತ್ತು ಕಳೆದ ಸಪ್ಟೆಂಬರ್ ತಿಂಗಳಲ್ಲಿ ಕೊಂಪದವು ನೆಲ್ಲಿಗುಡ್ಡೆಯ ನಿವಾಸಿ ಗೋವಿಂದ ಗೌಡ ಎಂಬವರ ಮನೆಯಿಂದ…

Read More

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾದ ದಂಧೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಪ್ರತ್ಯೇಕ ದಳವನ್ನು ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ಮಾಡಿ ಮನವಿ ಮಾಡಿದರು. ರಾಷ್ಟ್ರದಲ್ಲಿಯೇ ಶಿಕ್ಷಣ ವ್ಯವಸ್ಥೆಯಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಮಣಿಪಾಲ ಸಹಿತ ಉಡುಪಿ ಜಿಲ್ಲೆಯ ವಿವಿಧೆಡೆ ಡ್ರಗ್ಸ್ ಸೇವನೆಯಿಂದ ವಿದ್ಯಾರ್ಥಿಗಳು, ಯುವಜನತೆ ದಾರಿತಪ್ಪುತ್ತಿದ್ದಾರೆ. ಆದ್ದರಿಂದ ಪರಿಣಾಮಕಾರಿಯಾಗಿ ಡ್ರಗ್ಸ್ ದಂಧೆಯನ್ನು ನಿಯಂತ್ರಿಸಲು ಪ್ರತ್ಯೇಕ ವಿಶೇಷ ದಳವನ್ನು ರಚಿಸುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಉಡುಪಿ ಕ್ಷೇತ್ರದ ಮೂಲಭೂತ ಸೌಕರ್ಯಗಳ ಸಮಗ್ರ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನ ಒದಗಿಸುವಂತೆ ಮನವಿ ಮಾಡಿದ ಯಶ್ ಪಾಲ್ ಸುವರ್ಣ, ಕ್ಷೇತ್ರದ ಕಡಲ್ಕೊರೆತ ತಡೆಗೋಡೆ ನಿರ್ಮಾಣ , ಕಿಂಡಿ ಅಣೆಕಟ್ಟು, ಸರಕಾರಿ ಶಾಲೆಗಳ ಅಭಿವೃದ್ಧಿ, ಹಾಸ್ಟೆಲ್ ಕಟ್ಟಡ ಹಾಗೂ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರುಗೊಳಿಸಿದರೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದರು.

Read More

ಸುಳ್ಯ: ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ ಮಾಡಿ ತೀವ್ರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ದುಗಲಡ್ಕ ಕೂಟೇಲಿನಲ್ಲಿ ನಡೆದಿದೆ. ಗಾಯಗೊಂಡ ಮಹಿಳೆ ಸುಳ್ಯ ತಾಲೂಕು ದುಗಲಡ್ಕ ಕೂಟೇಲು ನಿವಾಸಿ ಪದ್ಮಾವತಿ ಎಂದು ಗುರುತಿಸಲಾಗಿದೆ. ಪದ್ಮಾವತಿ ಎಂಬವರು ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪರ್ ಆಗಿದ್ದು ಅವರು ಫೆ. 22 ರಂದು ಮುಂಜಾನೆ ದುಗಲಡ್ಕ ಘಟಕದ ಕೂಟೇಲು ಪಿಲಿಕಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿರುವಾಗ ಈ ಘಟನೆ ನಡೆದಿದೆ. ಪೊದೆಯಲ್ಲಿದ್ದ ಕಾಡುಹಂದಿ ಪದ್ಮಾವತಿ ಮೇಲೆ ಏಕಾಏಕಿ ಧಾಳಿ ನಡೆಸಿತೆನ್ನಲಾಗಿದೆ. ದಾಳಿಯಿಂದ ಪಾರಾಗಲು ಓಡಿದ ಮಹಿಳೆಯನ್ನು ಬೆನ್ನಟ್ಟಿದ ಕಾಡುಹಂದಿ ಮತ್ತೊಮ್ಮ ಕಚ್ಚಿ ತೀವ್ರ ಗಾಯಗೊಳಿಸಿತೆಂದು ತಿಳಿದುಬಂದಿದೆ. ವಿಷಯ ತಿಳಿದ ಇತರ ಟ್ಯಾಪರ್ ಗಳು ಕೆ.ಎಫ್.ಡಿ.ಸಿ. ಅಧಿಕಾರಿಗಳಿಗೆ ತಿಳಿಸಿದ ಕೂಡಲೇ ಅವರು ವಾಹನ ತಂದು, ನಿಗಮದ ಸಿಬ್ಬಂದಿ ಮತ್ತು ಊರವರು, ಬಂಧುಗಳು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ದಾಖಲಿಸಿದ್ದಾರೆ. ರಬ್ಬರ್ ತೋಟದಲ್ಲಿ ಪೂದೆಗಳು ಹೆಚ್ಚಾಗಿ ಆಳೆತ್ತರಕ್ಕೆ ಬೆಳೆದಿದ್ದು ಇದರಲ್ಲಿ ಕಾಡು…

Read More

ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಇನ್ಸ್‌ಪೆಕ್ಟರ್‌ ಸೇರಿದಂತೆ ಪೊಲೀಸ್‌ ಅಧಿಕಾರಿಗಳನ್ನು ಕನಿಷ್ಠ ಎರಡು ವರ್ಷಗಳ ಕಾಲ ಒಂದು ಸ್ಥಳದಿಂದ ವರ್ಗಾವಣೆ ಮಾಡದಂತೆ ನಿರ್ಬಂಧವಿಧಿಸುವ ಕರ್ನಾಟಕಪೊಲೀಸು ತಿದ್ದುಪಡಿ ವಿಧೇಯಕಕ್ಕೆ ಬುಧವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಪೊಲೀಸ್ ಅಧಿಕಾರಿ ಮೇಲೆ ಗುರುತರ ಆರೋಪ, ದೋಷಾರೋಪ ಪಟ್ಟಿ ಸಲ್ಲಿಕೆ, ಪದೋನ್ನತಿಯಂತಹ ಅನಿವಾರ್ಯ ಪರಿಸ್ಥಿತಿ ಹೊರತುಪಡಿಸಿ ಸುಖಾಸುಮ್ಮನೆ ವರ್ಗಾವಣೆ ಮಾಡುವಂತಿಲ್ಲ. ಕನಿಷ್ಠ ಎರಡು ವರ್ಷ ಒಂದೆಡೆ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡುವ ಮೂಲಕ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ನಿರ್ಮಾಣ, ಅಪರಾಧ ಪತ್ತೆ ಹಾಗೂ ಅಪರಾಧ ತಡೆಗೆ ಸಹಕರಿಸಲು ವಿಧೇಯಕಕ್ಕೆ ತಿದ್ದುಪಡಿ ತರಲಾಗಿದೆ. ಗೃಹ ಸಚಿವ ಡಾ.ಜಿ. ಪರಮೇಶ್ವರ್, ಈವರೆಗೆ ಒಂದು ವರ್ಷದವರೆಗೆ ಪೊಲೀಸ್ ವರ್ಗಾವಣೆ ಮಾಡುವಂತಿಲ್ಲ ಬಳಿಕ ಮಾಡಬಹುದು ಎಂದು ಕಾನೂನಿನಲ್ಲಿ ಇದೆ. ಇದರಿಂದ ಒಬ್ಬ ಪೊಲೀಸ್ ಅಧಿಕಾರಿ ಹೋಗಿ ವರದಿ ಮಾಡಿಕೊಂಡು ಠಾಣೆ, ಜನ, ಕೇಸುಗಳನ್ನು ತಿಳಿದುಕೊಳ್ಳುವಾಗಲೇ ಸಮಯ ಕಳೆದು ಹೋಗಿರುತ್ತದೆ. ಆ ವೇಳೆಗಾಗಲೇ ಬೇರೆಯವರು ಬರುತ್ತಾರೆ. ಇದನ್ನು ತಪ್ಪಿಸಲು…

Read More

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಮಂಜನಾಡಿಯ ಮೊಹಮ್ಮದ್ ಅಬ್ದುಲ್ ಫಯಾನ್ (26) ಮತ್ತು ಮೊಯಿದ್ದೀನ್ ಹಾಫಿಸ್ ಅಲಿಯಾಸ್ ಅಭಿ (47) ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಮಂಗಳೂರು ನಗರ ಕಮಿಷನರೇಟ್ ಮತ್ತು ದ. ಕನ್ನಡ ಜಿಲ್ಲೆಯಾದ್ಯಂತ ಹಲವಾರು ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೇಕಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಅಬ್ದುಲ್ ಫಯಾನ್ ಕಳ್ಳತನ, ಕೊಲೆ ಯತ್ನ ಮತ್ತು ಅಧಿಕಾರಿಗಳ ಮೇಲೆ ಹಲ್ಲೆ ಸೇರಿದಂತೆ 23 ಪ್ರಕರಣಗಳಲ್ಲಿ ಭಾಗಿಯಾಗಿರುವ ಕುಖ್ಯಾತ ವ್ಯಕ್ತಿಯಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತನ ಅಪರಾಧ ಚಟುವಟಿಕೆಗಳು ಕೊಣಾಜೆ, ಉಳ್ಳಾಲ, ಬಂಟ್ವಾಳ ಟೌನ್ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ. ಹಲವು ನ್ಯಾಯಾಲಯದ ವಾರಂಟ್‌ಗಳ ಹೊರತಾಗಿಯೂ, ಫಯಾನ್ ಬೆಂಗಳೂರಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವವರೆಗೂ ತಪ್ಪಿಸಿಕೊಳ್ಳುತ್ತಿದ್ದ. ಇನ್ನು ಮೊಯಿದ್ದೀನ್ ಹಾಫಿಸ್ ಅಲಿಯಾಸ್ ಅಭಿಯನ್ನು ಕಾಸರಗೋಡು ಜಿಲ್ಲೆಯ…

Read More

ಮೂಡುಬಿದಿರೆ: ನಿಮೋನಿಯಾಕ್ಕೆ ತುತ್ತಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯ ತುರ್ತುನಿಗಾ ವಿಭಾಗದಲ್ಲಿ ದಾಖಲಾಗಿದ್ದ ಬಾಲಕಿ ಅಶ್ರಿಜಾ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶಲಾಗಿದ್ದಾಳೆ. ಮೂಡುಬಿದ್ರಿ ಶಿರ್ತಾಡಿ ಮರೋಡಿಯ ನಿವಾಸಿಯಾಗಿದ್ದ ಅಶ್ರಿಜಾ ಶಿರ್ತಾಡಿಯ ಮೌಂಟ್ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಒಂದನೆಯ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಇನ್ನು ವಿದ್ಯಾರ್ಥಿನಿಯ ನಿಧನದ ಸಂತಾಪ ಸೂಚಕವಾಗಿ ಶಿಕ್ಷಣ ಸಂಸ್ಥೆಗೆ ರಜೆ ಘೋಷಿಸಲಾಗಿದೆ.

Read More

ಬಂಟ್ವಾಳ: ಹೋಟೆಲ್ ಮಾಲಕನೋರ್ವ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆ ನೀಡಿದ ಘಟನೆ ಸಜೀಪ ನಡು ಗ್ರಾಮದಲ್ಲಿ ನಡೆದಿದ್ದು, ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಜೀಪ ನಡು ಗ್ರಾಮದ ಅಬ್ದುಲ್ಲಾ ಆರೋಪಿಯಾಗಿದ್ದು, ಈತನಿಂದ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆಯಾದ ಬಗ್ಗೆ ಬಾಲಕಿಯ ತಾಯಿ ಗ್ರಾಮಾಂತರ ಪೋಲೀಸ್ ಠಾಣೆಗೆ ಫೆ.18 ರಂದು ದೂರು ನೀಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಎಸ್. ಐ.ಮೂರ್ತಿ ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.

Read More

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವೇಣೂರು ಶ್ರೀಬಾಹುಬಲಿ ಸ್ವಾಮಿಗೆ ನಾಳೆಯಿಂದ ಮಹಾಮಸ್ತಕಾಭಿಷೇಕ ಆರಂಭವಾಗಲಿದೆ. ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ನಾಳೆ ಮಧ್ಯಾಹ್ನ 3ಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಧಾರ್ಮಿಕ ಸಭೆ ಉದ್ಘಾಟಿಸಲಿದ್ದಾರೆ. ಕ್ರಿಸ್ತಶಕ 1604ರಲ್ಲಿ ವೇಣೂರಿನ ಬಾಹುಬಲಿ ಮೂರ್ತಿ ಸ್ಥಾಪನೆಯಾಗಿದೆ. ಈ ಬಾಹುಬಲಿ ಮೂರ್ತಿಗೆ ಪ್ರತಿ 12 ವರ್ಷಕ್ಕೊಮ್ಮೆ ಮಹಾಮಸ್ತಕಾಭಿಷೇಕ ನಡೆಯುತ್ತದೆ‌. ನಾಳೆಯಿಂದ ಮಾರ್ಚ್ 1ರವರೆಗೂ ಮಹಾ ಮಸ್ತಕಾಭಿಷೇಕ ನಡೆಯಲಿದೆ. ಪ್ರತಿದಿನ ಸಂಜೆ 6.45ರಿಂದ ಶ್ರೀ ಬಾಹುಬಲಿಸ್ವಾಮಿಗೆ ಮಹಾಮಸ್ತಕಾಭಿಷೇಕ ನಡೆಯಲಿದೆ. ಸೀಯಾಳ, ಹಾಲು, ಕಲ್ಕರಸ, ಅರಶಿಣ ಕಷಾಯ, ಕೇಸರಿ, ರಕ್ತಚಂದನ ಮೊದಲಾದ ದ್ರವ್ಯಗಳಿಂದ ಅಭಿಷೇಕ ನೆರವೇರಲಿದೆ. ಪ್ರಥಮ ನಾಲ್ಕು ದಿನಗಳು 108 ಕಳಶ, ಬಳಿಕ ಮೂರು ದಿನ 216 ಕಲಶ, 8ನೇ ದಿನ 504 ಕಲಶಗಳಿಂದ ಮಹಾಮಸ್ತಕಾಭಿಷೇಕ ನಡೆಯಲಿದೆ. ಪ್ರತಿದಿನ ಸಂಜೆ 20 ಸಾವಿರ ಮಂದಿಗೆ ಅನ್ನಪ್ರಸಾದ ನಡೆಯಲಿದೆ.

Read More

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪ ಪ್ರಕರಣದ ಮರು ತನಿಖೆಗೆ ಆದೇಶಿಸುವಂತೆ ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.ಈ ಸಂಬಂಧ ಮೃತ ಸೌಜನ್ಯ ತಂದೆಯೂ ಆದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ಆರ್‌.ಬಾಲಕೃಷ್ಣ, ‘ಪ್ರಕರಣದಿಂದ ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಮೇಲ್ಮನವಿ ಜೊತೆಗೆ ಈ ಅರ್ಜಿಯನ್ನೂ ವಿಚಾರಣೆಗೆ ನಿಗದಿಪಡಿಸಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ರೋಸ್ಟರ್‌ ಅನುಸಾರ ಸೂಕ್ತ ವಿಭಾಗೀಯ ನ್ಯಾಯಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ಸೂಚಿಸಿತು.…

Read More

ಸುಳ್ಯ: ಪಟಾಕಿ ಸಿಡಿಸುವ ವೇಳೆ ವ್ಯಕ್ತಿಯೋರ್ವರ ಕೈಯಲ್ಲಿ ಪಟಾಕಿ ಸಿಡಿದು ಗಂಭೀರ ಗಾಯಗೊಂಡ ಘಟನೆ ಸುಳ್ಯ ಕನಕಮಜಲಿನಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿ ಗ್ರಾಮದ ಗಬ್ಬಲಡ್ಕ ಚಂದ್ರಶೇಖರ ಎಂದು ಗುರುತಿಸಲಾಗಿದೆ. ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದಲ್ಲಿ ಏಕಾಹ ಭಜನೆ ಮಂಗಳವಾರ ನಡೆಯುತ್ತಿತ್ತು. ಈ ವೇಳೆ ಗ್ರಾಮದ ಗಬ್ಬಲಡ್ಕ ಚಂದ್ರಶೇಖರ ಅವರು ಪಟಾಕಿಯೊಂದನ್ನು ಸಿಡಿಸುವ ವೇಳೆ ಕೈಯಲ್ಲೇ ಸ್ಫೋಟಗೊಂಡಿದ್ದು ಕೈಯ ಬೆರಳುಗಳಿಗೆ ಗಂಭೀರವಾಗಿ ಗಾಯವಾಗಿದೆ. ತಕ್ಷಣವೇ ಸ್ಥಳೀಯರು ಸೇರಿ ಅವರನ್ನು ಸುಳ್ಯದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

Read More