Author: main-admin

ಕೋಟ: ಮೀನುಗಾರಿಕೆ ತೆರಳಿದ ವೇಳೆ ದೋಣಿ ಮಗುಚಿ ಬಿದ್ದು ಓರ್ವ ಮೃತಪಟ್ಟ ಘಟನೆ ಪಾರಂಪಳ್ಳಿ ಪಡುಕರೆಯ ಕಡಲ ಕಿನಾರೆಯಲ್ಲಿ ನಡೆದಿದೆ‌. ಪಾರಂಪಳ್ಳಿ ನಿವಾಸಿ ಸುಮಂತ್ ಮೊಗವೀರ (23) ಮೃತ ದುರ್ದೈವಿ. ನಿನ್ನೆ ಬೆಳಿಗ್ಗೆ ಸಂದೀಪ್, ಪ್ರಜ್ವಲ್ ಹಾಗೂ ಸುಮಂತ್ ಮೀನುಗಾರಿಕೆ ತೆರಳಲು ನಾಡದೋಣಿಯ ಮೂಲಕ ಸಮುದ್ರಕ್ಕೆ ತೆರಳಿದ್ದರು. ಸಮುದ್ರದಲ್ಲಿ ಈ ವೇಳೆ ಭಾರೀ ಗಾತ್ರದ ಅಲೆಗೆ ಸಿಲುಕಿ ದೋಣಿಯಲ್ಲಿದ್ದ ಮೂವರು ಮುಗುಚಿ ಬಿದ್ದಿದ್ದು, ಇಬ್ಬರು ಸಂದೀಪ್ ಮತ್ತು ಪ್ರಜ್ವಲ್ ಈಜಿ ದಡ ಸೇರಿದ್ದಾರೆ. ಆದರೆ ಸುಮಂತ್ ಬಾರಿ ಗಾತ್ರದ ಅಲೆಗಳಿಗೆ ಸಿಲುಕಿ‌ ಸಮುದ್ರಪಾಲಾಗಿದ್ದಾನೆ.

Read More

ಬೈಂದೂರು; ಉಪ್ಪುಂದ ನಂದನವನ ವಸತಿ ಗೃಹಕ್ಕೆ ಅನ್ಯಕೋಮಿನ ಜೋಡಿಗಳು ಬಂದ ವಿಷಯ ತಿಳಿದು ಹಿಂದೂ ಸಂಘಟನೆಯ ಕಾರ್ಯಕರ್ತರು ಬೈಂದೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಉಳ್ಳಾಲದ ನಿವಾಸಿ ಅಮೀರ್ (45) ಎಂಬವರು 28 ವರ್ಷದ ಯುವತಿಯೊಂದಿಗೆ ಬೈಂದೂರು ಲಾಡ್ಜ್ ಗೆ ತೆರಳಿದ್ದರು. ಅಮೀರ್ ಗುಜರಿ ವ್ಯಾಪಾರಿಯಾಗಿದ್ದು, ಯುವತಿ ಆತನ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದಳು ಎನ್ನಲಾಗಿದೆ. ಇದೀಗ ಇಬ್ಬರನ್ನು ವಶಕ್ಕೆ ಪಡೆದು ಈ‌ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ‌.

Read More

ಮಂಗಳೂರು: ಸ್ವಾಮೀಜಿ ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಜಪೆಯ ತಲಕಲ ಸ್ವಾಮಿ ಆತ್ಮಹತ್ಯೆ ಮಾಡಿಕೊಂಡವರು. ಇವರು ಜೀವನದಲ್ಲಿ ಜಿಗುಪ್ಸೆ ಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.‌ಇನ್ನೊಂದು ಕಡೆ ಅವರ ಸಾವಿನ ಬಗ್ಗೆ ಅನುಮಾನ‌ ಕೂಡ ವ್ಯಕ್ತವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಪುತ್ತೂರು: ನಗರದೊಳಗೆ 200ಕ್ಕೂ ಅಧಿಕ ಅಂಗಡಿಗಳು ಉದ್ಯಮ ಪರವಾನಿಗೆ ಪತ್ರವನ್ನೇ ಪಡೆಯದೆ ವ್ಯಾಪಾರ ವ್ಯವಹಾರದಲ್ಲಿ ತೊಡಗಿರುವುದು ಬೆಳಕಿಗೆ ಬಂದಿದ್ದು ಅಂತಹ ಅಂಗಡಿಗಳಿಗೆ ನಗರಸಭೆ ಬೀಗ ಜಡಿಯಲು ಮುಂದಾಗಿದೆ. ಉದ್ದಿಮೆ ನಡೆಸುವ ಅಂಗಡಿ ಮಾಲಕರು ಅಧಿನಿಯಮದ ಪ್ರಕಾರ ಪರವಾನಿಗೆ ಪತ್ರ ಪಡೆದೆ ವ್ಯವಹಾರ ಮಾಡಬೇಕು. ಉದ್ಯಮ ಪರವಾನಿಗೆ ಪತ್ರ ಇಲ್ಲದಿದ್ದರೆ ಅದನ್ನು ಅನಧಿಕೃತ ಎಂದೇ ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಅಧಿಕೃತ, ಅನಧಿಕೃತ ಅಂಗಡಿ ಪತ್ತೆ ಕಾರ್ಯ ನಡೆಸಲಾಗಿದೆ. ಅನಧಿಕೃತ ಅಂಗಡಿ ಗುರುತು ಪರವಾನಿಗೆ ಪಡೆದ ಕಟ್ಟಡದಲ್ಲಿ ವ್ಯವಹಾರ ಆರಂಭಿಸುವ ಮೊದಲ ಅಂಗಡಿ ಮಾಲಕ ನಗರಸಭೆಗೆ ಅರ್ಜಿ ಸಲ್ಲಿಸಿ (ಆನ್‌ಲೈನ್‌) ಉದ್ಯಮ ಪರವಾನಿಗೆ ಪಡೆಯಬೇಕು. ಪ್ರತೀ ವರ್ಷ ಪರವಾನಿಗೆ ಪತ್ರವನ್ನು ನವೀಕರಿಸಬೇಕು. ಆದರೆ ಪುತ್ತೂರು ನಗರದೊಳಗೆ 200ಕ್ಕೂ ಅಧಿಕ ಅಂಗಡಿಗಳು ಉದ್ಯಮ ಪರವಾನಿಗೆ ಪಡೆದು ಕೊಳ್ಳದೆ ವ್ಯಾಪಾರ ವ್ಯವಹಾರ ನಡೆಸುತ್ತಿದೆ. ಇದು ಕಾನೂನು ಬಾಹಿರವಾಗಿದ್ದು ಈ ಹಿನ್ನೆಲೆಯಲ್ಲಿ ಪೌರಾ ಯುಕ್ತರ ನೇತೃತ್ವದ ಅಧಿಕಾರಿಗಳ ತಂಡವು ಅಂತಹ ಅಂಗಡಿಗಳನ್ನು ಗುರುತು ಮಾಡಿದೆ. ಬೀಗ ಜಡಿಯುವಿಕೆ ಪ್ರತೀ ಹತ್ತು ವಾರ್ಡ್‌ಗಳಿಗೆ…

Read More

ವಿಟ್ಲ: ಬೆಳ್ಳಂಬೆಳಗ್ಗೆ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದು ಪರ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆ ವಿಟ್ಲದ ಕೋಡಂದೂರು ರಸ್ತೆಯಲ್ಲಿ ಜು.22 ರಂದು ಬೆಳಗ್ಗೆ ನಡೆದಿದೆ. ವಾಹನ ತಡೆಯುತ್ತಿದ್ದಂತೆ ಆರೋಪಿಗಳು ಕಾರ್ ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಕಾರಿನ ಗಾಜನ್ನು ಒಡೆದು ಶೋಚನೀಯ ಸ್ಥಿತಿಯಲ್ಲಿ ಇದ್ದ ದನಗಳನ್ನು ಹಿಂದು ಸಂಘಟನೆಯ ಕಾರ್ಯಕರ್ತರು ರಕ್ಷಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣೆಯ ಪೊಲೀಸರು ಬೇಟಿ ನೀಡಿ ಕಾರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Read More

ಕುಂಬಳೆ: ರೈಲು ಹಳಿಯ ಮೇಲೆ ಕಲ್ಲುಗಳನ್ನು ಇಟ್ಟು ಜು. 17ರಂದು ವಿದ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಅಘಾತಕಾರಿ ವಿಚಾರ ಬಹಿರಂಗಗೊಂಡಿದೆ. ಬಂದ್ಯೋಡು ಮುಟ್ಟಂನ ಸಮೀಪ ಕೃತ್ಯವೆಸಗಿದ ಸಮಯದಲ್ಲಿ ಆ ಮಾರ್ಗವಾಗಿ ಮಂಗಳೂರು ಚೆನ್ನೈ ಮೈಲ್‌ ಎಕ್ಸ್‌ ಪ್ರಸ್‌ ಸಾಗಬೇಕಿತ್ತು ಆದರೆ ಲೊಕೊ ಪೈಲಟ್‌ ಇದನ್ನು ಗಮನಿಸಿದ್ದು ಇದರಿಂದ ಮುಂದೊದಗಬಹುದಾದ ದುರಂತ ತಪ್ಪಿತ್ತು.ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳ ಕೋಟಿಕುಳಂ, ಕಣ್ಣಾಪುರಂ, ಕಣ್ಣೂರು ಸೌತ್‌, ವಳಪಟ್ಟಣಂ, ಪಾಪಿನಶ್ಯೇರಿ ಮತ್ತಿತರ ಕಡೆ ಇಂತಹುದೇ ಕೃತ್ಯ ಈ ಹಿಂದೆ ಎಸಗಲಾಗಿತ್ತು. ಈ ಘಟನೆಯನ್ನು ರೈಲ್ವೇ ಭದ್ರತಾ ಪಡೆ (ಆರ್‌ಪಿಎಫ್‌) ಮತ್ತು ಪೊಲೀಸ್‌ ವಿಭಾಗ ಗಂಭೀರವಾಗಿ ಪರಿಗಣಿಸಿದ್ದು, ಈ ಕೃತ್ಯದಲ್ಲಿ ಉಗ್ರಗಾಮಿಗಳ ಕೈವಾಡವಿರುವ ಬಗ್ಗೆಯೂ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.ಜು. 17ರಂದು ಮಂಗಳೂರು ಚೆನ್ನೈ ಮೈಲ್‌ ಎಕ್ಸ್‌ ಪ್ರಸ್‌ ಸಾಗಬೇಕಿದಾದ ಸಮಯದಲ್ಲಿ ರೈಲಿನ ಲೊಕೊ ಪೈಲಟ್‌ ರೈಲು ಹಳಿಯಲ್ಲಿ ಕಲ್ಲಿರಿಸಿದುದನ್ನು ನೋಡಿ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದು ತತ್‌ಕ್ಷಣದ ಕಾರ್ಯಾಚರಣೆಯಲ್ಲಿ ಕಲ್ಲುಗಳನ್ನು ತೆರವುಗೊಳಿಸಿ ಸಂಭಾವ್ಯ ಅನಾಹುತ ತಪ್ಪಿಸಲಾಗಿತ್ತು.

Read More

ಹಾಸನ: ರಾಷ್ಟ್ರೀಯ ಹೆದ್ದಾರಿ 75 ದೋಣಿಗಾಲ್ ಶಿರಾಡಿಘಾಟ್ ಮಾರ್ಗದಲ್ಲಿ ಲಾರಿ ಮತ್ತು ಬಸ್ ಸೇರಿದಂತೆ ಎಲ್ಲಾ ವಾಹನ ಸಂಚಾರಕ್ಕೆ ಅನುಮತಿ ಸಿಕ್ಕಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರ ವರದಿ ಮೆರೆಗೆ ಎಲ್ಲಾ ರೀತಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಳೆದ ಒಂದು ವಾರ ಹಿಂದೆ ಭಾರಿ ಮಳೆಯಿಂದಾಗಿ ರಸ್ತೆ ಕುಸಿತವಾಗಿತ್ತು. ಹೀಗಾಗಿ ಬಸ್‌ ಮತ್ತು ಲಾರಿ ಸಂಚಾರಕ್ಕೆ ಜಿಲ್ಲಾಧಿಕಾರಿ ಬ್ರೇಕ್‌ ಹಾಕಿದ್ದರು. ಇದೀಗ ಎಲ್ಲ ವಾಹನ ಸಂಚಾರಕ್ಕೂ ಅನುಮತಿ ನೀಡಲಾಗಿದೆ ಎಂದು ತಹಸೀಲ್ದಾರ್ ಜಯಕುಮಾರ್ ಹೇಳಿದ್ದಾರೆ.

Read More

ಸುಳ್ಯ: ಬಾಟಲಿಯಿಂದ ಯುವಕನೊಬ್ಬನ ತಲೆಗೆ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣದ ಎಲ್ಲಾ ಎಂಟು ಮಂದಿ ಆರೋಪಿಗಳನ್ನು ಬೆಳ್ಳಾರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುಳ್ಯ ತಾಲೂಕಿನ ಕಳಂಜ ಗ್ರಾಮದ ವಿಷ್ಣು ನಗರ ಎಂಬಲ್ಲಿ ಜು. 19ರಂದು ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿತ್ತು. ಸ್ಥಳೀಯ ನಿವಾಸಿಗಳಾದ ಸುನೀಲ್, ಸುಧೀರ್, ಶಿವ, ಸದಾಶಿವ, ರಂಜೀತ್ ಅಭಿಲಾಷ್, ಜಿಮ್ ರಂಜಿತ್ ಹಾಗೂ ಭಾಸ್ಕರ ಎಂಬವರು ಬಂಧಿತ ಆರೋಪಿಗಳು. ಕಾಸರಗೋಡು ತಾಲೂಕು ಮೊಗ್ರಾಲ್ ಪುತ್ತೂರು ನಿವಾಸಿ ಮಸೂದ್ (18 ವರ್ಷ) ಹಲ್ಲೆಗೊಳಗಾದ ಯುವಕ. ಮೊನ್ನೆ ಸಂಜೆ ಇಲ್ಲಿನ ವಿಷ್ಣು ನಗರದಲ್ಲಿ ಖಾಸಗಿ ಸಮಾರಂಭವೊಂದು ನಡೆದಿದ್ದು ಅದಕ್ಕೆ ಮಸೂದ್ ಬಂದಿದ್ದ. ಈ ವೇಳೆ ಅಲ್ಲಿ ಸಮೀಪದ ಅಂಗಡಿಯ ಬಳಿ ಆರೋಪಿ ಸುದೀರ್ ನಿಂತಿದ್ದು, ಕ್ಷುಲ್ಲಕ ಕಾರಣಕ್ಕೆ ಮಸೂದ್ ಹಾಗೂ ಆರೋಪಿಯ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಪರಿಣಾಮ ಎಂಟು ಜನ ಆರೋಪಿಗಳು ಒಟ್ಟು ಸೇರಿ ಏಕಾಏಕಿ ಮಸೂದನಿಗೆ ಕೈಯಿಂದ ಹಲ್ಲೆ ಮಾಡಲು ಪ್ರಾರಂಭಿಸಿದ್ದಾರೆ…

Read More

ಬೈಂದೂರು: ನಿನ್ನೆ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್‌ನಲ್ಲಿ ಆಂಬ್ಯುಲೆನ್ಸ್ ದುರಂತ ಸಂಭವಿಸಿದ ಪರಿಣಾಮ ನಾಲ್ವರ ದುರ್ಮರಣಕ್ಕೆ ಸಂಬಂಧಿಸಿ ಪೊಲೀಸರು ಆಂಬ್ಯುಲೆನ್ಸ್ ಚಾಲಕ ರೋಶನ್ ನನ್ನು ವಶಕ್ಕೆ ಪಡೆದಿದ್ದಾರೆ. ಬೈಂದೂರು ಪೊಲೀಸರ ವಶದಲ್ಲಿರುವ ಚಾಲಕ ರೋಶನ್‌ನ ರಕ್ತದ ಮಾದರಿಯನ್ನು ಮಣಿಪಾಲದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಾಲಕ ಮದ್ಯ ಸೇವನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲು ಪೊಲೀಸರು ತೀರ್ಮಾನಿಸಿದ್ದಾರೆ. ಅತಿ ವೇಗದಿಂದ ಬಂದ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಶಿರೂರು ಟೋಲ್ ಗೇಟ್‌ನ ಕಂಬಕ್ಕೆ ಡಿಕ್ಕಿ ಹೊಡೆದು ನಾಲ್ಕು ಮಂದಿ ಸಾವನ್ನಪ್ಪಿ, ಮೂವರು ಗಂಭೀರ ಗಾಯಗೊಂಡಿದ್ದರು.

Read More

ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋವೊಂದು ವೈರಲ್ ಆಗಿದೆ. ಇದೀಗ ಈ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ವಿದ್ಯಾರ್ಥಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರು ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳು ಖಾಸಗಿ ಕೊಠಡಿಯಲ್ಲಿ ಕಿಸ್ಸಿಂಗ್‌ನಲ್ಲಿ ತೊಡಗಿದ್ದರು ಎನ್ನಲಾಗಿದೆ. ಕಾಲೇಜು ಯೂನಿಫಾರಂನಲ್ಲೇ ಕಿಸ್ಸಿಂಗ್‌ನಲ್ಲಿ ತೊಡಗಿರುವ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಇದೇ ಕಾರಣದಿಂದ ಈ ವಿಡಿಯೋದಲ್ಲಿರುವುದು ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಎನ್ನುವುದು ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳ ತಂಡದ ಮಧ್ಯೆಯಿದ್ದ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಗೆ ಲಿಪ್ ಲಾಕ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಇದೀಗ ಈ ವಿಡಿಯೋ ಮಾಡಿ ವೈರಲ್ ಮಾಡಿರುವ ವಿದ್ಯಾರ್ಥಿಯನ್ನ ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಕಾನೂನು ತಜ್ಞರ ಸಲಹೆ ಪಡೆದ ಕ್ರಮಕ್ಕೆ ‌ಮುಂದಾಗಿದ್ದಾರೆ. ಈ ವಿಡಿಯೋದಲ್ಲಿ ಮೂವರು ಯುವಕರು ಹಾಗೂ ಮೂವರು ವಿದ್ಯಾರ್ಥಿನಿಯರಿದ್ದಾರೆ. ಮೂವರು ವಿದ್ಯಾರ್ಥಿನಿಯರು ಕಾಲೇಜು ಯೂನಿಫಾರಂ,…

Read More