ಕಾಸರಗೋಡು: ಬಸ್ಸು ಚಲಾಯಿಸುತ್ತಿದ್ದಾಗಲೇ ಚಾಲಕನೋರ್ವ ಹೃದಯಘಾತದಿಂದ ಮೃತಪಟ್ಟ ಘಟನೆ ಚೇವಾರ್ ಸಮೀಪದ ಕುಂಟಗೇರಡ್ಕದಲ್ಲಿ ನಡೆದಿದೆ. ಸ್ವಲ್ಪದರಲ್ಲೇ ಭಾರೀ ದುರಂತ ತಪ್ಪಿದೆ ಎನ್ನಬಹುದು. ಚೇವಾರ್ ಕುಂಟಗೇರಡ್ಕದ ಅಬ್ದುಲ್ ರಹಮಾನ್ (42) ಮೃತ ಪಟ್ಟವರು. ಧರ್ಮತ್ತಡ್ಕ – ಕಾಸರಗೋಡು ರಸ್ತೆಯಲ್ಲಿ ಸಂಚರಿಸುವ ಗಝಲ್ ಬಸ್ಸು ಚಾಲಕರಾಗಿದ್ದರು. ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಘಟನೆ ನಡೆದಿದೆ. ಪೆರ್ಮುದೆ ಜಂಕ್ಷನ್ ಗೆ ಬಸ್ಸು ತಲಪಿದಾಗ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದೆ. ಬಸ್ಸಿನಿಂದ ಇಳಿದು ಸಮೀಪದ ಅಂಗಡಿಯಿಂದ ನೀರು ಕುಡಿದಿದ್ದರು. ಬಳಿಕ ಬಸ್ಸು ಚಲಾಯಿಸಿಕೊಂಡು ಬಂದಿದ್ದಾರೆ. ಸುಮಾರು ಮೂರು ಕಿಲೋ ಮೀಟರ್ ತನಕ ಬಸ್ಸು ಚಲಾಯಿಸಿಕೊಂಡು ಬಂದಿದ್ದು, ಚೇವಾರ್ ಕುಂಟಗೇರಡ್ಕ ಸ್ಟಾಪ್ ತಲುಪಿದಾಗ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿದ ಬಸ್ಸು ಕೆಲ ನಿಮಿಷವಾದರೂ ಮುಂದಕ್ಕೆ ಸಾಗದಿದ್ದುದರಿಂದ ಗಮನಿಸಿದಾಗ ಸ್ಟಿಯರಿಂಗ್ ಮೇಲೆ ತಲೆ ಇಟ್ಟು ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆದರೆ ಚಾಲಕ ಬಸ್ಸು ನಿಲ್ಲಿಸಿದರಿಂದ ಭಾರೀ ದುರಂತ ತಪ್ಪಿದೆ ಎನ್ನಬಹುದು. ಬಸ್ಸು ಸ್ಟಾರ್ಟ್ ನಲ್ಲಿತ್ತು. ಪ್ರಯಾಣಿಕರು ಹಾಗೂ ನಾಗರಿಕರು ಕೂಡಲೇ ಬಂದ್ಯೋಡಿನ…
Author: main-admin
ಮಂಗಳೂರು: ವಾಮಂಜೂರು ಅಮೃತೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆದ ಸಂಕುಪೂಂಜ- ದೇವುಪೂಂಜ ಜೋಡುಕರೆ ಕಂಬಳವು ಈ ಬಾರಿಯ ಕಂಬಳ ಕೂಟದಲ್ಲಿಯೇ ಅತ್ಯಂತ ಕಡಿಮೆ ಸಮಯದಲ್ಲಿ ಮುಗಿಯುವ ಮೂಲಕ ದಾಖಲೆ ನಿರ್ಮಿಸಿದೆ .ಶನಿವಾರ ಬೆಳಗ್ಗೆ 9.45 ಸುಮಾರಿಗೆ ಆರಂಭವಾಗಿದ್ದ 166 ಜತೆ ಕೋಣಗಳು ಭಾಗವಹಿಸಿದ್ದ ವಾಮಂಜೂರು ಕಂಬಳದ ಅಂತಿಮ ಹಂತದ ಸ್ಪರ್ಧೆಯು ರವಿವಾರ ಬೆಳಗ್ಗೆ 8.50ಕ್ಕೆ ಮುಕ್ತಾಯವಾಗಿದೆ.ಕಳೆದ ವರ್ಷವು 23 ಗಂಟೆಯೊಳಗೆ ಮುಗಿದಿದ್ದ ವಾಮಂಜೂರು ತಿರುವೈಲುಗುತ್ತು ಕಂಬಳವು ಈ ಬಾರಿಯೂ 23 ಗಂಟೆಯೊಳಗೆ ಸಂಪನ್ನವಾಗಿ ಮಾದರಿಯಾಗಿದೆ. ಕಂಬಳವನ್ನು ಸರಿಯಾದ ಸಮಯದಲ್ಲಿ ಮುಗಿಸಲು ಹೊಸ ಹೊಸ ತಂತ್ರಜ್ಞಾನದ ಮೊರೆ ಹೋಗುತ್ತಿರುವ ಸಂದರ್ಭದಲ್ಲಿ ವಾಮಂಜೂರು ಕಂಬಳವು ಇತರ ಕೂಟಗಳಿಗೆ ಮಾದರಿಯಾಗಿದೆ.ಕನೆಹಲಗೆ ವಿಭಾಗದಲ್ಲಿ ಆರು ಜೊತೆ, ಅಡ್ಡಹಲಗೆ ವಿಭಾಗದಲ್ಲಿ ಐದು ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 14 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 35 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 23 ಜೊತೆ ಮತ್ತು ನೇಗಿಲು ಕಿರಿಯ ವಿಭಾಗದಲ್ಲಿ 83 ಜೊತೆ ಕೋಣಗಳು ಭಾಗವಹಿಸಿದ್ದವು.ವಾಮಂಜೂರು ತಿರುವೈಲುಗುತ್ತು ಕಂಬಳ ಫಲಿತಾಂಶ…
ಕುಂದಾಪುರ: ಬೈಕ್ ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ,ಬ್ಯಾಂಕ್ ಮ್ಯಾನೇಜರಗ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಾಡು ಗ್ರಾಮದ ಅರಾಟೆ ಬಳಿ ಸಂಭವಿಸಿದೆ. ಮೃತರು ಮಹಾರಾಷ್ಟ್ರದ ನವಿ ಮುಂಬೈ ನಿವಾಸಿ ರಾಹುಲ್ ಬಾಲಕೃಷ್ಣ ರಂಕಂಬೆ ಎಂದು ಗುರುತಿಸಲಾಗಿದೆ. ಇವರು ಮರವಂತೆಯ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶನಿವಾರ ರಾತ್ರಿ ಮರವಂತೆಯ ಬ್ಯಾಂಕಿನಲ್ಲಿ ಕೆಲಸ ಮುಗಿಸಿ ತನ್ನ ಬೈಕಿನಲ್ಲಿ ಕುಂದಾಪುರದ ಮನೆ ಕಡೆಗೆ ಬರುತ್ತಿದ್ದರು. ಈ ಸಂದರ್ಭ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಗಂಭೀರ ಗಾಯಗೊಂಡ ರಾಹುಲ್ ಅವರನ್ನು ಗಂಗೊಳ್ಳಿಯ 24*7 ಆಪದ್ಬಾಂಧವ ಅಂಬುಲೆನ್ಸ್ ನ ಇಬ್ರಾಹಿಂ ಗಂಗೊಳ್ಳಿ ಮತ್ತು ತಂಡ ತಕ್ಷಣ ಕುಂದಾಪುರದ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ರಾಹುಲ್ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಗಂಗೊಳ್ಳಿ ಠಾಣೆ ಎಸ್‌ಐ ಹರೀಶ್ ಮತ್ತು ಸಿಬ್ಬಂದಿ ಘಟನೆ ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು…
ಜೈಲಿನಿಂದಲೇ ರೌಡಿಶೀಟರ್ ನಗ್ನ ವಿಡಿಯೋ ಕಳುಹಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಸೇರಿದಂತೆ ಮೂವರು ಆರೋಪಿಗಳನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಮನೋಜ್ ಅಲಿಯಾಸ್ ಕೆಂಚ, ಸುಭಾಷ್ ಹಾಗೂ ಯೋಗೇಶ್ ಬಂಧಿತ ಆರೋಪಿಗಳು. ರೌಡಿಶೀಟರ್ ಮನೋಜ್ ಜೈಲಿನಲ್ಲಿ ಕುಳಿತು ಮಾರ್ಫ್ ಮಾಡಿದ ಮಹಿಳೆಯ ಬೆತ್ತಲೆ ಫೋಟೋ, ವಿಡಿಯೋಗಳನ್ನು ಕಳುಹಿಸಿ ಮಹಿಳೆಯ ತಾಯಿಗೆ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ನಿನ್ನ ಅಳಿಯನಿಗೆ ಫೋಟೋ, ವಿಡಿಯೋ ಕಳುಹಿಸಿ ಸಂಸಾರ ಹಾಳು ಮಾಡುವುದಾಗಿ ಬೆದರಿಕೆ ಹಾಕಿದ್ದ. ಅಲ್ಲದೇ ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಇದರಿಂದ ಮಹಿಳೆ ತಾಯಿ ಆರಂಭದಲ್ಲಿ 40,000 ಹಣ ನೀಡಿದ್ದರು. ಬಳಿಕ ಫೆ.9ರಂದು ಮನೋಜ್ ಸಹಚರ ಕಾರ್ತಿಕ್ ಮಹಿಳೆಯ ತಾಯಿಗೆ ವಾಟ್ಸಪ್ ಮೂಲಕ ಫೊಟೋ ಕಳುಹಿಸಿ ಬೆದರಿಕೆ ಹಾಕಿ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ. ಅಲ್ಲದೇ ಜೈಲಿನಲ್ಲಿದ್ದ ಮನೋಜ್ ಕೂಡ ಕರೆ ಮಾಡಿ ಹಣ ನೀಡದಿದ್ದರೆ ನಿನ್ನ ಮಗಳ ಫೋಟೋ, ವಿಡಿಯೋವನ್ನು ಅಳಿಯನಿಗೆ ಕಳುಹಿಸುವುದಾಗಿ…
ಪಡುಬಿದ್ರಿ: ಎರ್ಮಾಳು ಕಲ್ಸಂಕ ಪ್ರದೇಶದಲ್ಲಿ ಶನಿವಾರ ತಡರಾತ್ರಿಯ ವೇಳೆ ಯಾವುದೋ ವಾಹನ ಢಿಕ್ಕಿಯಾಗಿ ಸುಮಾರು ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಪಘಾತದ ನಡೆದ ಬಳಿಕ ಇನ್ನಷ್ಟು ವಾಹನಗಳು ರಸ್ತೆ ಮಧ್ಯದಲ್ಲಿದ್ದ ಈ ವ್ಯಕ್ತಿಯ ಮೇಲೆ ಚಲಿಸಿದ್ದರಿಂದ ದೇಹವಿಡೀ ಜರ್ಝರಿತಗೊಂಡು ಮಾಂಸದ ಮುದ್ದೆಯಂತಾಗಿದ್ದು ಗುರುತೂ ಸಿಗದಂತಾಗಿದೆ.ಇನ್ನು ಈ ಬಗ್ಗೆ ಪಡುಬಿದ್ರಿ ಪಿಎಸ್ ಐ ಪ್ರಸನ್ನ ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ.
ಕಾರವಾರ : ಕಾರು ಪ್ರಯಾಣಿಕರ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹೊಳೆಗದ್ದೆ ಟೋಲ್ ಪ್ಲಾಝಾದಲ್ಲಿ ನಡೆದಿದ್ದು ಘಟನೆಯಲ್ಲಿ ಮಂಗಳೂರು ಮೂಲದ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಹಲ್ಲೆಯಿಂದ ಮಹಿಳೆ ಸೇರಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರಿನ ಮುಜೀಝ್ ಎಂಬವರ ಕುಟುಂಬ ಕುಮಟಾ ಮಾರ್ಗವಾಗಿ ಗದಗದ ಲಕ್ಷ್ಮೀಶ್ವರಕ್ಕೆ ಹೋಗುತಿದ್ದರು. ಈ ವೇಳೆ ಕುಮಟಾ ಹೊಳೆಗದ್ದೆ ಟೋಲ್ ಗೇಟ್ನಲ್ಲಿ ಫಾಸ್ಟ್ ಟ್ಯಾಗ್ನಿಂದ ಹಣ ಕಡಿತವಾಗದೇ ಸಮಸ್ಯೆಯಾದಾಗ, ಟೋಲ್ ಸಿಬ್ಬಂದಿ ಕಿರಣ್, ಸತೀಶ್ ಹಾಗೂ ಮಂಜುನಾಥ್ ಎಂಬುವವರಿಂದ ಗಲಾಟೆಯಾಗಿದ್ದು, ಮಾತಿಗೆ ಮಾತು ಬೆಳೆದು ಸಿಬ್ಬಂದಿ ಮಜೀಝ್ ರ ಕಾರಿನ ಗಾಜು ಪುಡಿ ಮಾಡಿ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಮಹಿಳೆಯರು, ಮಜೀಝ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ..
ಮಂಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವಂತ ಕಾಂಗ್ರೆಸ್ ಸಮಾವೇಶಕ್ಕೆ ಆಗಮಿಸಿದಂತ ಸಿಎಂ ಸಿದ್ಧರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕೋದಕ್ಕೆ ಬಿಜೆಪಿ ಕಾರ್ಯಕರ್ತರು ಯತ್ನಿಸಿದ ಘಟನೆ ಇಂದು ನಡೆದಿದೆ. ಅಲ್ಲದೇ ಹಿಂದೂ ವಿರೋಧಿ ಸಿದ್ಧರಾಮಯ್ಯ ಎಂಬುದಾಗಿ ಕಪ್ಪು ಬಾವುಟ ಪ್ರದರ್ಶಿಸಿ, ಘೋಷಣೆ ಕೂಗಿ ಹೈಡ್ರಾಮಾವನ್ನೇ ಏರ್ಪೋರ್ಟ್ ಬಳಿಯ್ಲಲಿ ನಡೆಸಲಾಗಿದೆ. ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಇಂದು ಕಾಂಗ್ರೆಸ್ ಸಮಾವೇಶಕ್ಕೆ ಆಗಮಿಸಿದಂತ ಸಿಎಂ ಸಿದ್ಧರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಯ ಬಿಸಿ ಮುಟ್ಟಿದೆ. ವಿಮಾನ ನಿಲ್ದಾಣ ಬಳಿಯಲ್ಲಿ ಸಿಎಂ ಕಾರಿಗೆ ಕಪ್ಪು ಭಾವುಟ ಪ್ರದರ್ಶಿಸಿರುವಂತ ಬಿಜೆಪಿ ಕಾರ್ಯಕರ್ತರು, ಕಾರಿಗೆ ಮುತ್ತಿಗೆ ಹಾಕೋದಕ್ಕೂ ಯತ್ನಿಸಿದ್ದಾರೆ. ಇನ್ನೂ ಹಿಂದೂ ವಿರೋಧಿ ಸಿದ್ಧರಾಮಯ್ಯ ಎಂಬುದಾಗಿ ಘೋಷಣೆ ಕೂಗಿರುವಂತ ಬಿಜೆಪಿ ಕಾರ್ಯಕರ್ತರು, ಕೆಲಕಾಲ ಏರ್ ಪೋರ್ಟ್ ಬಳಿಯಲ್ಲಿ ಹೈಡ್ರಾಮಾವನ್ನೇ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದಂತ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು, ಕರೆದೊಯ್ದಿರೋದಾಗಿ ತಿಳಿದು ಬಂದಿದೆ.
ಉಡುಪಿ: ಪರೀಕ್ಷೆ ಬರೆಯುತ್ತಿರುವ ವೇಳೆ ಮೊಬೈಲ್ ಬಳಕೆ ಮಾಡಿದ್ದ ಕಾರಣಕ್ಕೆ ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿಧ್ಯಾರ್ಥಿ ಮನನೊಂದು ಆರನೆ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಮಾಹೆ ವಿವಿಯಲ್ಲಿ ನಡೆದಿದೆ. ಬಿಹಾರ ಮೂಲದ ಸತ್ಯಂ ಸುಮನ್(19) ಮೃತ ವಿದ್ಯಾರ್ಥಿ ಎಂದು ಎಂದು ಗುರುತಿಸಲಾಗಿದೆ. ಇವರು ಮಾಹೆಯ ಎಂಸಿಎಚ್ ಪಿ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿಯಾಗಿದ್ದರು. ಮಧ್ಯಾಹ್ನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಸತ್ಯಂ ಸುಮನ್ ಮೊಬೈಲ್ ಫೋನ್ ಬಳಸುತ್ತಿರುವುದನ್ನು ಪರೀಕ್ಷಾ ಮೇಲ್ವಿಚಾರಕರು ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮನ್ ರನ್ನು ಪರೀಕ್ಷಾ ಮೇಲ್ವಿಚಾರಕರು ಪರೀಕ್ಷಾ ಕೊಠಡಿಯಿಂದ ಹೊರ ಹಾಕಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿ 6ನೇ ಮಹಡಿಯಲ್ಲಿರುವ ತರಗತಿ ಕೊಠಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ಗಾಂಜಾ ವ್ಯಸನಿಯೋರ್ವ ನಶೆಯಲ್ಲಿ ಸಾರ್ವಜನಿಕರತ್ತ ಜಲ್ಲಿ ಕಲ್ಲೆಸೆದು ದಾಂಧಲೆ ನಡೆಸುತ್ತಿದ್ದಾಗ ತಡೆಯಲು ಹೋದ ವ್ಯಕ್ತಿಗೆ ಸೋಡಾ ಬಾಟಲಿಯಿಂದ ಹಲ್ಲೆಗೈದಿದ್ದು, ಧಾಂದಲೆಕೋರನಿಗೆ ಸಾರ್ವಜನಿಕರೇ ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ. ಮಂಚಿಲ ನಿವಾಸಿ ಮಹಮ್ಮದ್ ಮುಶ್ತಾಕ್ ಯಾನೆ ಮಿಸ್ತ ಎಂಬಾತ ಶುಕ್ರವಾರ ಮದ್ಯಾಹ್ನದ ವೇಳೆ ನಶೆಯ ಮತ್ತಿನಲ್ಲಿ ತೊಕ್ಕೊಟ್ಟು ಒಳಪೇಟೆಯ ರಿಕ್ಷಾ ಪಾರ್ಕಿನ ಬಳಿಯ ರೈಲ್ವೇ ಹಳಿಯಲ್ಲಿ ನಿಂತು ಹಳಿಗಳಲ್ಲಿದ್ದ ಜಲ್ಲಿ ಕಲ್ಲುಗಳನ್ನ ರಸ್ತೆಗೆ ಎಸೆಯಲಾರಂಭಿಸಿದ್ದಾನೆ.ಸಾರ್ವಜನಿಕರು ,ಶಾಲಾ ಮಕ್ಕಳು ತೆರಳುತ್ತಿದ್ದ ರಸ್ತೆಗೆ ಕಲ್ಲೆಸೆಯುತ್ತಿದ್ದುದನ್ನು ಪ್ರಶ್ನಿಸಿ,ತಡೆಯಲು ಮುಂದಾದ ಸ್ಥಳೀಯ ನಿವಾಸಿ ರಾಜೇಶ್ ಶೆಟ್ಟಿ ಎಂಬವರ ತಲೆ ಮತ್ತು ಕೈಗೆ ಪಕ್ಕದ ಅಂಗಡಿಯಲ್ಲಿದ್ದ ಸೋಡಾ ಬಾಟಲಿಯಿಂದ ಮಿಸ್ತ ಹಲ್ಲೆಗೈದಿದ್ದಾನೆ.ಕೂಡಲೇ ಅಲ್ಲಿ ನೆರೆದಿದ್ದ ಸಾರ್ವಜನಿಕರು ದಾಂಧಲೆ ನಡೆಸುತ್ತಿದ್ದ ಮಿಸ್ತನನ್ನ ಹಿಡಿದು ಥಳಿಸಿ ಉಳ್ಳಾಲ ಪೊಲೀಸರಿಗೊಪ್ಪಿಸಿದ್ದಾರೆ.ಸೋಡಾ ಬಾಟಲಿ ಏಟಿನಿಂದ ತಲೆ ಮತ್ತು ಕೈಗೆ ಹಲ್ಲೆಗೊಳಗಾದ ರಾಜೇಶ್ ಶೆಟ್ಟಿ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಮಿಸ್ತನ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳಿದ್ದು…
ಬೆಂಗಳೂರು: ಹೊಸ ರೇಷನ್ ಕಾಡ್‌೯ಗಳಿಗೆ ಎ.1ರಿಂದ ಅಜಿ೯ ಸ್ವೀಕರಿಸಲಾಗುತ್ತದೆ ಎಂದು ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಆಶ್ವಾಸನೆ ನೀಡಿದ್ದಾರೆ. ಈಗಾಗಲೇ ಬಿಪಿಎಲ್ ಹಾಗೂ ಎಪಿಎಲ್ ಕಾಡ್‌೯ಗಳಿಗೆ ಸಲ್ಲಿಕೆಯಾಗಿರುವ 2.95 ಲಕ್ಷ ಅಜಿ೯ಗಳನ್ನು ಮಾ. 31ರೊಳಗೆ ವಿಲೇವಾರಿ ಮಾಡುವುದಾಗಿ ಅವರು ಹೇಳಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಸಲ್ಲಿಕೆಯಾಗಿರುವ 2.95 ಲಕ್ಷ ಬಿಪಿಎಲ್ ಹಾಗೂ ಎಪಿಎಲ್ ಕಾಡ್‌೯ಗಳ ಅಜಿ೯ಗಳನ್ನು ಮಾ.31ರೊಳಗಾಗಿ ವಿಲೇವಾರಿ ಮಾಡುವುದಾಗಿ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಭರವಸೆ ನೀಡಿದ್ದಾರೆ. ಅಲ್ಲದೆ ಎ.1ರಿಂದ ಹೊಸ ಕಾಡ್‌೯ಗಳಿಗೆ ಅಜಿ೯ ಸ್ವೀಕರಿಸಲಾಗುವುದು ಎಂದು ಅವರು ಆಶ್ವಾಸನೆ ನೀಡಿದ್ದಾರೆ. ಬಿಜೆಪಿಯ ಯಶ್‌ಪಾಲ್ ಸುವಣ೯ ಹಾಗೂ ಕಾಂಗ್ರೆಸ್‌ನ ನಯನಾ ಮೋಟಮ್ಮರವರ ಪ್ರಶ್ನೆಗಳಿಗೆ ಉತ್ತರಿಸಿದ ಆಹಾರ ಸಚಿವ ಕೆ.ಎಚ್. ಮುನಿಯಪ್ಪನವರು ಹಿಂದಿನ ಸರಕಾರದ ಅವಧಿಯಲ್ಲಿ ಬಂದಿದ್ದ ೨,೯೫,೯೮೬ ಅಜಿ೯ಗಳ ಪರಿಶೀಲನೆ ನಡೆಸುತ್ತಿದ್ದು, ಅವುಗಳ ಪೈಕಿ ಎಪಿಎಲ್ ಹಾಗೂ ಬಿಪಿಎಲ್ ಅಜಿ೯ಗಳನ್ನು ಪ್ರತ್ಯೇಕಗೊಳಿಸುತ್ತಿದ್ದೇವೆ. ತುತು೯ ವ್ಯೆದ್ಯಕೀಯ ಸೇವೆಯ ಕಾಡ್‌೯ಗಳನ್ನು ಆದ್ಯತೆ ಮೇರೆಗೆ ವಿತರಿಸಲಾಗುತ್ತಿದ್ದು ಈಗಾಗಲೇ ೭೪೪ ಕಾಡ್‌೯ ವಿತರಿಸಲಾಗಿದೆ. ಹಾಗೂ 57561 ಎಪಿಎಲ್…










