Author: main-admin

ಬೆಂಗಳೂರು : ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ 31ರವರೆಗೆ ಅವಧಿ ವಿಸ್ತರಿಸಿ ಸಾರಿಗೆ ಇಲಾಖೆ ಅಧಿಕೃತವಾಗಿ ಆದೇಶ ಹೊರಡಿಸಿದೆ. ಇದನ್ನೇ ದುರುಪಯೋಗಪಡಿಸಿಕೊಳ್ಳಲು ಹಲವು ಸೈಬರ್ ವಂಚಕರು ಮುಂದಾಗಿದ್ದು ನಕಲಿ ಕ್ಯೂ ಆರ್ ಕೋಡ್ ಗಳ ಮೂಲಕ ಗ್ರಾಹಕರ ಸಂಪೂರ್ಣ ಹಣವನ್ನು ಲಪಟಾಯಿಸಲು ಕಾದು ಕುಳಿತಿದ್ದಾರೆ. ಹೌದು ಈ ಬಗ್ಗೆ ರಕ್ಷಿತ್ ಪಾಂಡೆ ಎನ್ನುವ ವ್ಯಕ್ತಿ ಎಕ್ಸ್ ಆಯಪ್ ಮೂಲಕ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಕ್ಯೂ ಆರ್ ಕೋಡ್ ಸಮೇತ ಪೊಲೀಸರಿಗೆ ದೂರು ನೀಡಿದ್ದು ಸೈಬರ್ ವಂಚಕರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರದಿಂದ ನಂಬರ್ ಪ್ಲೇಟ್ ಅಳವಡಿಕೆಗಳು ಅವಧಿ ವಿಸ್ತರಣೆ ಆದೇಶ ಬಂದ ಬೆನ್ನಲ್ಲೇ ಇದೀಗ ಸೈಬರ್ ವಂಚಕರು ಫುಲ್ ಆಕ್ಟಿವ್ ಆಗಿದ್ದು, ಅಮಾಯಕ ಗ್ರಾಹಕರೇ ಇವರಿಗೆ ಟಾರ್ಗೆಟ್.ನೋಂದಣಿ ಬಳಿಕ ಸಿಗುವ ಕ್ಯೂ ಆರ್ ಕೋಡ್​ಗಳನ್ನು ನಕಲಿ ಮಾಡುತ್ತಿದ್ದಾರೆ. ಕ್ಯೂ ಆರ್ ಕೋಡ್ ಟಚ್ ಮಾಡುತ್ತಿದ್ದಂತೆ ಅಪರಿಚಿತರ ಖಾತೆಗೆ ಲಿಂಕ್ ಹೋಗುತ್ತಿದ್ದು ಸ್ವಲ್ಪ ಎಮಾರಿದ್ರು…

Read More

ಉಡುಪಿ ಜಿಲ್ಲೆಯ ಕಾಪು ಸಮೀಪದ ಇನ್ನಂಜೆ ವಿಷ್ಣುಮೂರ್ತಿ ದೇವಸ್ಥಾನ ಕೆರೆಯಲ್ಲಿ ಯುವಕನ ಶವವೊಂದು ಪತ್ತೆಯಾಗಿದ್ದು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಪಡುಬಿದ್ರಿ ನಿವಾಸಿ ವಿನಯ ರಾವ್(27) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದು ಬಂದಿದೆ. ಈತ ಪಾಲಿಟೆಕ್ನಿಕ್ ಕಾಲೇಜೊಂದರಲ್ಲಿ ಅಥಿತಿ ಉಪನ್ಯಾಸಕನಾಗಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದ್ದು, ಈತ ನಿನ್ನೆಯ ದಿನ ದೇವಳದ ಪಕ್ಕದಲ್ಲಿ ಸುತ್ತಾಡಿಕೊಂಡಿದ್ದು ಸ್ಥಳೀಯ ನಾಯಿಯೊಂದಿಗೆ ಆಟವಾಡಿಕೊಂಡಿದ್ದ ಎಂಬುದಾಗಿ ಸ್ಥಳೀಯರು ತಿಳಿಸಿದ್ದಾರೆ.ಇಂದು ಮುಂಜಾನೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೆರೆಯ ದಡದಲ್ಲಿ ಲ್ಯಾಪ್‌ಟಾಪ್ ಸಹಿತ ಕೆಲ ಪರಿಕರಗಳು ಪತ್ತೆಯಾಗಿದೆ. ದೇವಳದ ಸಿಸಿ ಕ್ಯಾಮಾರ ಸಾಧನವನ್ನು ಪರಿಶೀಲನೆ ನಡೆಸಿದಾಗ ಈತ ರಾತ್ರಿ ಹನ್ನೆರಡರ ಬಳಿಕ ದೇವಳದ ಪರಿಸರದಲ್ಲಿ ಸುತ್ತಾಡುತ್ತಿದ್ದ ದೃಶ್ಯ ಸೆರೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಸ್ಥಳಕ್ಕೆ ಬಂದ ಕಾಪು ಪೊಲೀಸರು ಸಾರ್ವಜನಿಕ ಸಹಕಾರದಿಂದ ಶವವನ್ನು ಕೆರೆಯಿಂದ ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಸಾಗಿಸಿದ್ದಾರೆ‌ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಬಂಟ್ವಾಳ: ಆರು ತಿಂಗಳ ಗರ್ಭಿಣಿಯಾಗಿ, ಗರ್ಭಸ್ಥ ಶಿಶುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಲೇಡಿಗೋಶನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ತೆಂಕಕಜೆಕಾರು ನಿವಾಸಿ ವಸಂತ ಅವರ ಪತ್ನಿ ಸುಜಾತ(40) ಅವರು ಏಕಾಏಕಿ ಆರೋಗ್ಯ ಏರುಪೇರಾಗಿ ಮೃತಪಟ್ಟ ಘಟನೆ ಫೆ. 14ರ ರಾತ್ರಿ ನಡೆದಿದೆ. ಶಿಶುವಿಗೆ ಹೃದಯ ಸಂಬಂಧಿ ತೊಂದರೆ ಇದೆ ಎನ್ನುವ ಕಾರಣಕ್ಕೆ ಫೆ. 12ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಸುಮಾರು ೧೦ ವರ್ಷಗಳ ಹಿಂದೆ ವಿವಾಹವಾಗಿದ್ದು, ಬಹಳ ಕಾಲ ಮಕ್ಕಳಾಗಿರಲಿಲ್ಲ, ಪ್ರಸ್ತುತ ಚೊಚ್ಚಲ ಗರ್ಭಿಣಿಯಾಗಿದ್ದರು.ಹಲವು ವರ್ಷಗಳ ಕಾಲ ಸರಪಾಡಿ ಗ್ರಾಮ ಕರಣಿಕರ ಕಚೇರಿಯಲ್ಲಿ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದ, ಅವರು ಗ್ರಾಮದಲ್ಲಿ ಚಿರಪರಿಚಿತರಾಗಿದ್ದರು.

Read More

ಮಂಗಳೂರು : ಸಿನೆಮಾ ನಾಟಕಗಳಲ್ಲಿ ದೈವದ ವೇಷಹಾಕಿರುವ ನಟರ ಮೇಲೆ ದಲಿತ ದೌರ್ಜನ್ಯ ಪ್ರಕರಣ ದಾಖಲಿಸಬೇಕೆಂದು ದಕ್ಷಿಣ ಕನ್ನಡ ತುಳುನಾಡು ದೈವಾರಾಧನಾ ಸಂರಕ್ಷಣಾ ವೇದಿಕೆ ಒತ್ತಾಯಿಸಿದೆ. ಗುರುವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಮನವಿ ಸಲ್ಲಿಸಿದ ವೇದಿಕೆ ಸದಸ್ಯರು, ಮುಂದೆ ತೆರೆ ಕಾಣಲಿರುವ ಕಾಂತಾರ–2 ಸಿನಿಮಾ ಪ್ರದರ್ಶನಕ್ಕೆ ತಡೆಯೊಡ್ಡಬೇಕು. ‘ಕಾಂತಾರ’ ಸಿನಿಮಾದಲ್ಲಿ ದೈವದ ಅಣಕು ವೇಷ ಹಾಕಿರುವ ರಿಷಬ್ ಶೆಟ್ಟಿ, ‘ಶಿವದೂತ ಗುಳಿಗೆ’ ನಾಟಕದಲ್ಲಿ ದೈವದ ಅಣಕು ವೇಷ ಧರಿಸಿರುವ ಸ್ವರಾಜ್, ‘ಕಾವೇರಿ’ ಧಾರಾವಾಹಿಯಲ್ಲಿ ದೈವದ ಅಣಕು ವೇಷ ಧರಿಸಿರುವ ಪ್ರಶಾಂತ್ ಸಿ.ಕೆ. ಅವರ ಮೇಲೆ ದಲಿತ ದೌರ್ಜನ್ಯ ಪ್ರಕರಣ ದಾಖಲಿಸಿ, ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.ಇತ್ತೀಚಿನ ದಿನಗಳಲ್ಲಿ ಸಿನಿಮಾ, ಯಕ್ಷಗಾನ, ನಾಟಕ, ಧಾರಾವಾಹಿ, ಪ್ರತಿಭಾ ಕಾರಂಜಿ, ಮನರಂಜನಾ ಕಾರ್ಯಕ್ರಮ ಮೊದಲಾದ ಸಾರ್ವಜನಿಕ ವೇದಿಕೆಗಳಲ್ಲಿ ದೈವದ ವೇಷ ತೊಟ್ಟು ಕುಣಿಯುವ ದೃಶ್ಯಗಳು ಕಾಣುತ್ತಿವೆ. ಇದನ್ನು ತಡೆಗಟ್ಟಲು ಕ್ರಮ ವಹಿಸಬೇಕು ಎಂದು ದಕ್ಷಿಣ ಕನ್ನಡ ತುಳುನಾಡು ದೈವಾರಾಧನಾ ಸಂರಕ್ಷಣಾ ವೇದಿಕೆ ಒತ್ತಾಯಿಸಿದೆ. ಪರಿಶಿಷ್ಟರು…

Read More

ಮಂಗಳೂರು: ನಗರದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಎರಡು ಪ್ರತ್ಯೇಕ ಪ್ರಕರಣದಲ್ಲಿ ಪ್ರಯಾಣಿಕರಿಬ್ಬರಿಂದ ಅಕ್ರಮ ಸಾಗಾಟದ 19,97,100 ರೂ. ಮೌಲ್ಯದ ಚಿನ್ನವನ್ನು ಸೀಝ್ ಮಾಡಿದ್ದಾರೆ. ಅಬುಧಾಬಿಯಿಂದ ಬುಧವಾರ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕನ ಬ್ಯಾಗ್‌ ಅನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ‌. ಈ ವೇಳೆ ಮೊಬೈಲ್ ಕವರ್‌ನಲ್ಲಿ 24 ಕ್ಯಾರೆಟ್ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಅಡಗಿಸಿಟ್ಟಿರುವುದು ಪತ್ತೆಯಾಗಿದೆ. 128 ಗ್ರಾಂ ತೂಕದ 8,06,400 ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೊಂದು ಪ್ರಕರಣದಲ್ಲಿ ರಸ್-ಅಲ್-ಖಯಾಮ್‌ನಿಂದ ಮುಂಬೈಗೆ ಬಂದು ಅಲ್ಲಿಂದ ಮಂಗಳೂರಿಗೆ ಬಂದ ವಿಮಾನದಲ್ಲಿದ್ದ ಪ್ರಯಾಣಿಕನನ್ನು ಬುಧವಾರ ತಪಾಸಣೆಗೆ ಒಳಪಡಿಸಲಾಯಿತು. ಆತನ ಟ್ರಾಲಿ ಬ್ಯಾಗ್‌ನಲ್ಲಿ 24 ಕ್ಯಾರೆಟ್ ಪರಿಶುದ್ಧತೆಯ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಲಕೋಟೆಯಲ್ಲಿ ಅಡಗಿಸಿಡಲಾಗಿತ್ತು. ಆತನಿಂದ 11,90,700 ರೂ. ಮೌಲ್ಯದ ಚಿನ್ನ 189 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

Read More

ಬಂಟ್ವಾಳ : ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಹಾಗೂ ಪಾದಚಾರಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನರಿಕೊಂಬು ಗ್ರಾಮದ ಮೊಗರ್ನಾಡು ಎಂಬಲ್ಲಿ ಸಂಭವಿಸಿದೆ. ಗಾಯಾಳು ಪಾದಚಾರಿಯನ್ನು ಧರ್ಣಪ್ಪ (75) ಹಾಗೂ ಬೈಕ್ ಸವಾರನನ್ನು ಮೋಕ್ಷಿತ್ ಎಂದು ಗುರುತಿಸಲಾಗಿದೆ. ಧರ್ಣಪ್ಪ ಅವರು ಮೊಗರ್ನಾಡು ಎಂಬಲ್ಲಿ ರಸ್ತೆ ದಾಟಲು ನಿಂತಿದ್ದ ವೇಳೆ ಮೋಕ್ಷಿತ್ ಅವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿ ಹೊಡದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಬೈಕ್ ಸವಾರ ಕೂಡಾ ಗಾಯಗೊಂಡಿದ್ದಾರೆ. ಧರ್ಣಪ್ಪ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆ ಕೆ ಎಸ್ ಹೆಗ್ಡೆ ಆಸ್ಪತ್ರೆಗೆ ಸಾಗಿಸಲಾಗಿದೆ. ಬೈಕ್ ಸವಾರ ಮೋಕ್ಷಿತ್ ಅವರು ಬಿ ಸಿ ರೋಡಿನ ಸೋಮಯಾಜಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ನವೀನ ಶೈಲಿಯ ಆಭರಣಗಳ ಬ್ರ್ಯಾಂಡ್ ಗಳಲ್ಲಿ ಒಂದಾದ ತನಿಷ್ಕ್ ಮಂಗಳೂರಿನಲ್ಲಿ ತನ್ನ ನೂತನ ಮಳಿಗೆಯ  ಶೋ ರೂಂ ಅನ್ನು ಟಾಟಾ ಸನ್ಸ್ ಲಿಮಿಟೆಡ್ ನಿರ್ದೇಶಕ ಭಾಸ್ಕರ್ ಭಟ್ ಮತ್ತು ಮಿಯಾ ಬೈ ತನಿಷ್ಕನ ಉದ್ದಿಮೆ ಮುಖ್ಯಸ್ಥೆ ಶ್ಯಾಮಲಾ ರಮಣನ್‌ ಅವರು ಅ. 15 ರಂದು ಉದ್ಘಾಟನೆ ಮಾಡಿದರು.  ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ತನಿಷ್ಕ್ ನ ದಕ್ಷಿಣದ ಪ್ರಾದೇಶಿಕ ವ್ಯಾಪಾರ ವ್ಯವಸ್ಥಾಪಕರಾದ ವಾಸುದೇವ ರಾವ್, ನಮ್ಮಕರ್ನಾಟಕದ ಮಂಗಳೂರು ತನಿಷ್ಕ್ ಶೋರೂಂ ಅನ್ನು ಇಂದು ಭವ್ಯವಾಗಿ ಪುನರಾರಂಭಿಸಿರುವುದಾಗಿ ಘೋಷಿಸಲು ನಾವುಸಂತೋಷಪಡುತ್ತೇವೆ. ತನಿಷ್ಕ್ ನಲ್ಲಿ ಗ್ರಾಹಕರ ತೃಪ್ತಿಯನ್ನು ಖಚಿತಪಡಿಸುವುದು ನಮ್ಮ ಪ್ರಮುಖ ಬದ್ಧತೆಯಾಗಿದೆ. ಈ ಪ್ರದೇಶದಲ್ಲಿಪ್ರೀತಿಯ ಆಭರಣ ಬ್ರ್ಯಾಂಡ್ ಆಗಿ ನಮ್ಮ ಉತ್ಪನ್ನಗಳನ್ನು ಎಲ್ಲರಿಗೂ ಸುಲಭವಾಗಿ ಲಭ್ಯವಾಗುವಂತೆ ಮಾಡಲು ನಾವು ಸತತವಾಗಿಶ್ರಮಿಸುತ್ತೇವೆ. ಹೊಸದಾಗಿ ನವೀಕರಿಸಿದ ಮಂಗಳೂರು ಶೋರೂಮ್ ಚಿನ್ನ ಮತ್ತು ವಜ್ರದ ಆಭರಣಗಳ ಸೊಗಸಾದ ಸಂಗ್ರಹವನ್ನುಒದಗಿಸುತ್ತದೆ. ಇದರಲ್ಲಿ ಬೆರಗುಗೊಳಿಸುವ ಸಾಲಿಟೇರ್‌ಗಳು, ಬಣ್ಣದ ಹರಳುಗಳು ಪ್ರತ್ಯೇಕವಾಗಿ ಸಂಗ್ರಹಿಸಲಾದ ಹಬ್ಬದ ಸಂಗ್ರಹಗಳುಮತ್ತು ವಜ್ರಗಳ ವಿಭಾಗಗಳು ಕೂಡಿವೆ. ಈ ಪುನರಾರಂಭವು…

Read More

ಉಡುಪಿ: ಕಾರ್ಕಳಕ್ಕೆ ಮೋಸ್ಟ್ ವಾಂಟೆಡ್‌ ನಕ್ಸಲೈಟ್ ಶ್ರೀಮತಿ ಅಲಿಯಾಸ್ ಉನ್ನಿಮಾಯನನ್ನು ಪೊಲೀಸರು ಕರೆತಂದಿದ್ದಾರೆ. 2011 ಡಿಸೆಂಬರ್ 19 ರಂದು ಪೊಲೀಸ್ ಮಾಹಿತಿದಾರ ಮಲೆಕುಡಿಯ ಜನಾಂಗದ ಸದಾಶಿವ ಗೌಡನ ಅಪಹರಣ, ಹತ್ಯೆ ಪ್ರಕರಣ ಸಂಬಂಧಿಸಿದಂತೆ ಸ್ಥಳ ಮಹಜರು ಮಾಡಲು ಶ್ರೀಮತಿಯನ್ನು ಕಾರ್ಕಳಕ್ಕೆ ಕರೆತರಲಾಗಿದೆ. ಹಲವು ವರ್ಷಗಳಿಂದ ಕರ್ನಾಟಕ ಮತ್ತು ಕೇರಳ ರಾಜ್ಯದ ಪೊಲೀಸರಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ನಕ್ಸಲ್ ನಾಯಕಿ ಮೂಲತಃ ಶೃಂಗೇರಿ ನಿವಾಸಿ ಶ್ರೀಮತಿ ಅಲಿಯಾಸ್ ಉಣ್ಣಿಮಾಯಾ(28) ಕಳೆದ ನವೆಂಬರ್ 7 ರಂದು ಕೇರಳ ಪೊಲೀಸರಿಗೆ ಸೆರೆಸಿಕ್ಕಿದ್ದಳು. ನಂತರ ಈಕೆ ಕೇರಳ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಳು. ಈಕೆ ಕೇರಳದ ವಯನಾಡು ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಸೆರೆಯಾಗಿದ್ದಳು. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೆಳಗೋಡುಕೊಡಿಗೆ ನಿವಾಸಿಯಾಗಿರುವ ಶ್ರೀಮತಿ ಕೇರಳ-ಕರ್ನಾಟಕ ಗಡಿಭಾಗದಲ್ಲಿ ಆ್ಯಕ್ಟಿವ್ ಆಗಿದ್ದಳು. ಸದಾಶಿವ ಗೌಡ ಹತ್ಯೆ ನಡೆಸಿದ ಕಾರ್ಕಳ ವ್ಯಾಪ್ತಿಯ ಕಬ್ಬಿನಾಲೆಗೆ ಬಾಡಿ ವಾರೆಂಟ್ ಮೇಲೆ ಶ್ರೀಮತಿಯನ್ನು ಪೊಲೀಸರು ಕರೆದುಕೊಂಡು ಬಂದಿದ್ದಾರೆ. ಶ್ರೀಮತಿ ಕರೆ ತಂದು ಘಟನಾ ಸ್ಥಳದಲ್ಲಿ ಮಹಜರು…

Read More

ಮಂಗಳೂರು: ಎರಡು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಹಾಗೂ ಶಿವಮೊಗ್ಗದಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಟ್ರಯಲ್ ಪ್ರಕರಣದ ಶಂಕಿತ ಉಗ್ರರು ವಾರಾಣಸಿಯ ಮಹಿಳೆಯೊಬ್ಬರ ಹೆಸರಿನಲ್ಲಿ ಬೇನಾಮಿ ಬ್ಯಾಂಕ್ ಖಾತೆ ಹೊಂದಿ ಅದರ ಮೂಲಕವೇ ವಹಿವಾಟು ನಡೆಸುತ್ತಿದ್ದರು ಎಂಬ ಸಂಗತಿಯನ್ನು ರಾಷ್ಟ್ರೀಯ ತನಿಖಾ(ಎನ್‌ಐಎ) ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಪ್ರಕರಣದಲ್ಲಿ ಬಂಧಿತ ಆರೋಪಿಗಳಾದ ಮಹಮ್ಮದ್ ಶಾರೀಕ್ ಮತ್ತು ಮಾಝ್ ಮುನೀರ್ ಅವರು ಮಂಗಳೂರನ್ನು ಕೇಂದ್ರೀಕರಿಸಿ ಬೆಂಗಳೂರು, ಮೈಸೂರು, ಶಿವಮೊಗ್ಗದಲ್ಲಿ ಓಡಾಟ ನಡೆಸುತ್ತಿದ್ದರು. ಆದರೆ ಅವರು ಸ್ವಂತ ಬ್ಯಾಂಕ್ ಖಾತೆ ಹೊಂದಿರಲಿಲ್ಲ. ಬೇರೆಯವರ ಹೆಸರಿನಲ್ಲಿದ್ದ ಬೇನಾಮಿ ಬ್ಯಾಂಕ್ ಖಾತೆಯನ್ನು ಮಾಝ್ ಮುನೀರ್ ನಿರ್ವಹಿಸುತ್ತಿದ್ದ. ಅದೇ ಹೆಸರಲ್ಲಿ ತನ್ನೆಲ್ಲ ಬ್ಯಾಂಕ್ ವಹಿವಾಟು ನಡೆಸುತ್ತಿದ್ದ. ತನಿಖೆ ಸಂದರ್ಭದಲ್ಲಿ ಈ ಖಾತೆ ಉತ್ತರ ಪ್ರದೇಶದ ವಾರಾಣಸಿಯ ಮಹಿಳೆಯೊಬ್ಬರ ಹೆಸರಿನಲ್ಲಿರುವುದು ಪತ್ತೆಯಾಗಿದೆ. ಇನ್ನು ವಿದೇಶದಲ್ಲಿದ್ದ ಉಗ್ರನ ಸೂಚನೆಯಂತೆ ಮಂಗಳೂರಿನಲ್ಲಿ ಮಾಝ್ ಮುನೀರ್ ವಾಸವಿದ್ದ ಮನೆಗೆ ಈ ಬ್ಯಾಂಕ್ ಖಾತೆಯ ರುಪೇ ಕಾರ್ಡ್, ಎಟಿಎಂ ಕಾರ್ಡ್‌, ಬ್ಯಾಂಕ್‌ ಪುಸ್ತಕ, ಸಿಎಮ್‌…

Read More

ಮಂಗಳೂರು :  ಮಂಗಳೂರಿನ ಜೆರೋಸಾ ಶಾಲಾ ಶಿಕ್ಷಕಿ ವಿರುದ್ಧ ಧರ್ಮ ಅವಹೇಳನದ ಆರೋಪ ವಿಚಾರದಲ್ಲಿ ಬಿಜೆಪಿ ಶಾಸಕರ ಮೇಲೆ ಎಫ್‌ಐಆರ್ ದಾಖಲಿಸಿದ ಕ್ರಮಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಗರಂ ಆಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ಕಾಂಗ್ರೆಸ್ ದ್ವಿಮುಖ ನೀತಿ ತುಷ್ಠಿಕರಣದ ನೀತಿ ಅನುಸರಿಸುತ್ತಿದೆ. ಶಾಲೆಯಲ್ಲಿ ಕೋಮು ಭಾವನೆ ಕೆರಳಿಸಿದ ಶಿಕ್ಷಕಿಯನ್ನು ಅಮಾನತುಗೊಳಿಸಿಲ್ಲ ಆದ್ರೆ ಸಾರ್ವಜನಿಕರ ಹೋರಾಟಕ್ಕೆ ನೈತಿಕ ಬೆಂಬಲ ನೀಡಿದ ಶಾಸಕರ ಮೇಲೆ ಕೇಸು ದಾಖಲಿಸಿಲಾಗಿದೆ. ಕಾನೂನು ಕ್ರಮ ಕೈಗೊಂಡ ಶಿಕ್ಷಣಾಧಿಕಾರಿಯನ್ನು ವರ್ಗಾವಣೆ ಮಾಡಿದ್ದಾರೆ. ಇದು ಮತ ಬ್ಯಾಂಕ್ ಗಾಗಿ ಕಾಂಗ್ರೆಸ್ ನ ಹೀನ ರಾಜಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಜಿಲ್ಲೆಯಲ್ಲಿ ಸುಂದರ್ ರಾಮ್ ಶೆಟ್ಟಿ ರಸ್ತೆ ಪ್ರಕರಣ ನಡೆದಿತ್ತು. ಅಲೋಶಿಯಸ್ ಶಾಲೆಯ ವಿದ್ಯಾರ್ಥಿಗಳನ್ನು ರಸ್ತೆಯಲ್ಲಿ ಕೂರಿಸಿ ಪ್ರತಿಭಟನೆ ಮಾಡಿದ್ರು ಆಗ ಆಗ ಶಾಸಕರ ಮೇಲೆ ಯಾವ ಕೇಸು ಹಾಕಲಿಲ್ಲ ಆದ್ರೆ ಈಗ ಶಾಸಕರಾದ ಭರತ್ ಶೆಟ್ಟಿ ಹಾಗು ವೇದವ್ಯಾಸ್ ಕಾಮತ್ ವಿರುದ್ಧದ ಕೇಸು…

Read More