Author: main-admin

ವಿಟ್ಲ: ವಿಟ್ಲ ಮುಡ್ನೂರು ದಂಬೆತಾರು ಮನೆಯಿಂದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಕೆಲಸಕ್ಕಿದ್ದ ಪುತ್ತೂರು ಮೂಲದ ದಂಪತಿಯನ್ನು ಬಂಧಿಸಿದ್ದಾರೆ.ಬಂಧಿತರನ್ನು ಸರ್ವೆ ಬಾವಿಕಟ್ಟೆ ನಿವಾಸಿ ಪ್ರಮೋದ್(26) ಮತ್ತು ಅವನ ಪತ್ನಿ ಸುಮತಿ(25) ಎಂದು ಗುರುತಿಸಲಾಗಿದೆ. ಇವರಿಬ್ಬರು ದಂಬೆತಾರು ವಿನಯ ಚಂದ್ರನಾಯಕ್ ರವರ ಮನೆಯಲ್ಲಿ ಕೂಲಿ ಕೆಲಸಕ್ಕಿದ್ದು, ಮನೆಯ ಬೆಡ್ ರೂಮ್ ನ ಕಪಾಟಿನಲ್ಲಿದ್ದ ಚಿನ್ನದ ಬ್ರಾಸ್ ಲೈಟ್-1, ಚಿನ್ನದ ಲಕ್ಷ್ಮಿ ಚೈನ್-01, ಚಿನ್ನದ ಪದಕ ಸಹಿತ ಚೈನು -1, ಚಿನ್ನದ ಲಕ್ಷ್ಮಿ ಪದಕ ಸಹಿತ ಚೈನ್-01, ಚಿನ್ನದ ಉಂಗುರಗಳು -03 (Total- 98Gram) ಚಿನ್ನಾಭರಣಗಳು , ಸದ್ರಿ ಚಿನ್ನಾಭರಣಗಳ ಒಟ್ಟು ಮೌಲ್ಯ ಅಂದಾಜು 1,48,000/ ರೂಪಾಯಿಯ ಚಿನ್ನಾಭರಣಗಳನ್ನು ಕಳವುಗೈದಿದ್ದರು ಈ ಬಗ್ಗೆ ತನಿಖೆ ಆರಂಭಿಸಿದ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದು, ಕಳವಾಗಿದ್ದ 98 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ವಿಟ್ಲ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ, ಮಂಜುನಾಥ ಟಿ., ಪೊಲೀಸ್ ಹೆಡ್ ಕಾನ್ಸ್ಟೇಬಲ್ ಗಳಾದ ಜಯರಾಮ ಕೆ.ಟಿ., ರಕ್ಷಿತ್, ಕರುಣಾಕರ, ಪೊಲೀಸ್ ಕಾನ್ಸ್ಟೇಬಲ್…

Read More

ದಕ್ಷಿಣಕನ್ನಡ : ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ದಕ್ಷಿಣಕನ್ನಡ ಕನ್ನಡ ಜಿಲ್ಲೆಯಲ್ಲೂ ಮಳೆಯಿಂದಾಗಿ ಹಲವು ಸಮಸ್ಯೆಗಳು ಎದುರಾಗಿದೆ. ಇದೀಗ ಶಿರಾಡಿಘಾಟ್‌ ಆಯ್ತು, ಇದೀಗ ಚಾರ್ಮಾಡಿಘಾಟ್‌ 2ನೇ ತಿರುವಿನಲ್ಲಿ ರಸ್ತೆ ಕುಸಿತಗೊಂಡಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಬಳಿಯ ಚಾರ್ಮಾಡಿಘಾಟ್‌ನ 2ನೇ ತಿರುವಿನಲ್ಲಿ ಕುಸಿತಗೊಂಡಿದೆ. ಸ್ಲ್ಯಾಬ್‌ ಬಿರುಕು ಕಣಿಸಿಕೊಂಡಿದ್ದು, ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

Read More

ಬೆಂಗಳೂರು: ಭಾರತಕ್ಕೆ ಸ್ವಾತಂತ್ರ್ಯ ಬಂದು ಮುಂದಿನ ಆಗಸ್ಟ್ 15ಕ್ಕೆ 75 ವರ್ಷ ಆಗ್ತಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಕೇಂದ್ರ ಸರ್ಕಾರ `ಹರ್ ಘರ್ ತಿರಂಗಾ’ ಅಭಿಯಾನ ನಡೆಸಲು ಘೋಷಿಸಿದೆ. ಇದರ ಬೆನ್ನಲ್ಲೇ ರಾಜ್ಯದ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳು, ವಿವಿಗಳಲ್ಲಿ ಕಡ್ಡಾಯವಾಗಿ ತಿರಂಗ ಹಾರಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ. ಶಾಲಾ ಶಿಕ್ಷಣ ಇಲಾಖೆ ಕೂಡ ಮಹತ್ವದ ಆದೇಶ ಹೊರಡಿಸಲು ಮುಂದಾಗಿದೆ. ಅಮೃತಮಹೋತ್ಸವ ಹಿನ್ನೆಲೆ ಆಗಸ್ಟ್ 11 ರಿಂದ 17ರ ವರೆಗೆ ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪಿಯುಸಿ ಕಾಲೇಜುಗಳು, ಮದರಸಾಗಳ ಮೇಲೂ ಕಡ್ಡಾಯವಾಗಿ ತಿರಂಗಾ ಹಾರಿಸಲೇಬೇಕು ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರ ಬರೆದಿದ್ದಾರೆ. ಸರ್ಕಾರಿ, ಅನುದಾನಿತ, ಅನದಾನ ರಹಿತ ಶಾಲಾ-ಕಾಲೇಜುಗಳು, ಎಲ್ಲಾ ಮದರಸಾಗಳು ಈ ಅದೇಶವನ್ನು ಪಾಲಿಸಬೇಕು. ತ್ರಿವರ್ಣ ಧ್ವಜದ ಜೊತೆಗೆ ಶಾಲೆ, ಕಾಲೇಜು, ಮದರಸಾಗಳಲ್ಲಿ ರಾಷ್ಟ್ರಭಕ್ತಿ ಮೂಡಿಸುವ ಸ್ವಾತಂತ್ರ್ಯದ ತ್ಯಾಗ, ಬಲಿದಾನ ಮೆಲುಕು ಹಾಕುವ ಗೀತ ಗಾಯನ…

Read More

ಮಂಗಳೂರು: ನಗರದ ಪಂಜಿಮೊಗರು ಬಳಿ ರಸ್ತೆ ದಾಟುತ್ತಿದ್ದ ಇಬ್ಬರು ಬಾಲಕರಿಗೆ ಬೈಕ್ ಡಿಕ್ಕಿಯಾದ ಘಟನೆ ಭಾನುವಾರ ಮದ್ಯಾಹ್ನ ನಡೆದಿದೆ. ಇಬ್ಬರು ಬಾಲಕರು ಪಂಜಿಮೊಗರಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆಯಲ್ಲಿ ವೇಗವಾಗಿ ಬಂದ ಬೈಕ್ ಬಾಲಕರಿಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಇಬ್ಬರು ಬಾಲಕರು ರಸ್ತೆ ಪಕ್ಕಕ್ಕೆ ಎಸೆಯಲ್ಪಟ್ಟಿದ್ದಾರೆ. ಅಪಘಾತದಲ್ಲಿ ಬಾಲಕರು ಪವಾಡಸದೃಶವಾಗಿ ಪಾರಾಗಿದ್ದು ಸಣ್ಣ ಪುಟ್ಟ ಗಾಯವಾಗಿದೆ. ಅಪಘಾತ ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ‌ ಸೆರೆಯಾಗಿದೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಪುತ್ತೂರು; ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪುತ್ತೂರು ನಗರ ಠಾಣಾ ಪೊಲೀಸರ ತಂಡ ಬಂಧಿಸಿದೆ. ನಗರದ ಕಾಲೇಜೊಂದರ ವಿದ್ಯಾರ್ಥಿ ಕೇರಳ ಮೂಲದ ಮುಬಿನ್ (20) ಬಂಧಿತ. ಈತನನ್ನು ಗಾಂಜಾ ಸಹಿತ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಈತ ಕಳೆದ ಕೆಲ ಸಮಯಗಳಿಂದ ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ನಡೆಸುತ್ತಿದ್ದಈ ಬಗ್ಗೆ ಖಚಿತ ಮಾಹಿತಿ ಪಡೆದ ಎಸ್.ಐ ರಾಜೇಶ್ ಕೆ.ವಿ ಮತ್ತು ತಂಡ ಕಾರ್ಯಚರಣೆ ನಡೆಸಿದ್ದು, ಬಂಧಿತನಿಂದ ಸುಮಾರು ಅರ್ಧ ಕೆಜಿ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ.

Read More

ಮಂಗಳೂರು: ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಗೆ ಪೋನ್ ಮಾಡುವಂತೆ ಪೀಡಿಸುತ್ತಿದ್ದಲ್ಲದೇ, ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ನಗರದ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಂಜಿಮೊಗರಿನ ಮುಸ್ತಫಾ (35) ಎಂದು ಗುರುತಿಸಲಾಗಿದೆ. ಆರೋಪಿಯು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದ ತರಕಾರಿ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ. ಅಪ್ರಾಪ್ತ ವಿದ್ಯಾರ್ಥಿನಿ ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದು, ತರಕಾರಿ ತರಲು ಅಂಗಡಿಗೆ ಹೋದಾಗ ಪೋನ್ ಮಾಡುವಂತೆ ಪೀಡಿಸುತ್ತಿದ್ದ. ಜು.8ರಂದು ರಾತ್ರಿ 8.30ಕ್ಕೆ ಬಾಲಕಿ ಮನೆಯಲ್ಲೇ ಒಬ್ಬಳೇ ಇದ್ದಾಗ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಾನಭಂಗಕ್ಕೆ ಯತ್ನಿಸಿದ್ದಲ್ಲದೆ ಕೃತ್ಯವನ್ನು ಇತರರಿಗೆ ಹೇಳಿದರೆ ಜೀವಸಹಿತ ಬಿಡುವುದಿಲ್ಲ ಎಂದು ಬೆದರಿಕೆಯೊಡ್ಡಿರುವುದಾಗಿ ದೂರು ದಾಖಲಾಗಿದ್ದು ಅದರಂತೆ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಹಿಳಾ ಪೊಲೀಸರು ತಿಳಿಸಿದ್ದಾರೆ.

Read More

ತುಳಸಿಯಲ್ಲಿ ದೇವಾನುದೇವತೆಗಳು ನೆಲೆಸಿರುತ್ತಾರೆ ಎಂದು ಪುರಾಣಗಳು ಹೇಳಿವೆ. ತುಳಸಿ ಗಿಡವನ್ನು ಆಯುರ್ವೇದದಲ್ಲಿ ಔಷಧಿಯಾಗಿ ಬಳಸಿಕೊಳ್ಳಲಾಗಿದೆ. ತುಳಸಿ ಎಲೆಯನ್ನು ಸೇವಿಸುವ ಅಥವಾ ತುಳಸಿ ಹಾಕಿದ ನೀರನ್ನು ಕುಡಿಯುವ ಮುಖಾಂತರ ದೇಹದ ಪ್ರತಿರೋಧಕ ವ್ಯವಸ್ಥೆಯನ್ನು ಬಲಪಡಿಸಬಹುದು. ತುಳಸಿ ಎಲೆಯಲ್ಲಿ ಆಂಟಿ ಆಕ್ಸಿಡೆಂಟ್ ಸಮೃದ್ಧವಾಗಿದ್ದು ಇದು ಸೋಂಕಿನ ವಿರುದ್ಧ ಹೋರಾಡುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ಸೇವನೆ ಮಾಡುವುದರಿಂದ ಜೀರ್ಣಕ್ರಿಯೆ ಸರಾಗವಾಗುತ್ತದೆ. ತುಳಸಿ ಎಲೆಯಲ್ಲಿರುವ ಆಡಾಪ್ಟಾ ಜೆನ್ ಅಂಶವು ಮಾನಸಿಕ ಒತ್ತಡವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ನರ ವ್ಯವಸ್ಥೆ ಆರಾಮವಾಗಿರಲು ಇದು ನೆರವಾಗುತ್ತದೆ. ರಕ್ತ ಸಂಚಾರವೂ ಸುಧಾರಿಸುತ್ತದೆ. 2 ದಿನಕೊಮ್ಮೆ 5 ತುಳಸಿ ಎಲೆಯನ್ನು ಸೇವನೆ ಮಾಡಿದರೆ ಒಳ್ಳೆಯದು. ಶೀತದ ಸಮಸ್ಯೆ ಬೇಗ ನಿವಾರಣೆಯಾಗುತ್ತವೆ. ಈ ಎಲೆಯಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣವಿರುವುದರಿಂದ ಇದು ಬಾಯಿಯ ದುರ್ವಾಸನೆಯನ್ನು ನಿವಾರಣೆ ಮಾಡುತ್ತದೆ. ತುಳಸಿ ಎಲೆಗಳನ್ನು ಟೂತ್ ಪೇಸ್ಟ್ ಗಳಲ್ಲೂ ಜಾಸ್ತಿ ಬಳಸಲಾಗುತ್ತದೆ. ವೈರಸ್ ಮತ್ತು ಬ್ಯಾಕ್ಟೀರಿಯಾಗಳು ಉಂಟು ಮಾಡುವ ಹಾನಿಕಾರಕ ರೋಗಗಳ ವಿರುದ್ಧ ಇದು ಹೊರಡುತ್ತದೆ.…

Read More

ಬೆಂಗಳೂರು: ಬೆಲೆ ಏರಿಕೆಯಿಂದ ಮೊದಲೇ ತತ್ತಿರಿಸುವ ಜನತೆಗೆ ಮತ್ತೊಂದು ದೊಡ್ಡ ಹೊಡೆತ ನೀಡಲು ಕರ್ನಾಟಕ ಹಾಲು ನಿಗಮ ಮುಂದಾಗಿದೆ. ಹೌದು, ಕರ್ನಾಟಕ ಹಾಲು ನಿಗಮ ತನ್ನ ಉತ್ಪನಗಳ ಬೆಲೆಯನ್ನು ಹೆಚ್ಚಳ ಮಾಡಿ ಆದೇಶವನ್ನು ಹೊರಡಿಸಿದ್ದು, ನಾಳೆ ಯಿಂದಲೇ ಈ ಬೆಲೆಗಳು ಜಾರಿಗೆ ಬರಲಿದೆ. ಹಾಗಾದ್ರೇ ಯಾವುದರ ಬೆಲೆ ಎಷ್ಟು ಹೆಚ್ಚಳವಾಗಲಿದೆ ಎನ್ನುವುದನ್ನು ನೋಡುವುದಾದ್ರೆ ಅದರ ವಿವರ ಕೆಳಕಂಡತಿದೆ.

Read More

ಬೈಂದೂರು: ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಬಳಿ ಫಲಕಕ್ಕೆ ಢಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿ ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕಂಬದಕೋಣೆ ಸೇತುವೆ ಬಳಿ ನಡೆದಿದೆ. ಆಂಧ್ರದ ಕಲ್ಲೂರು ತರುಣ್ ಕುಮಾರ್ ರೆಡ್ಡಿ (19) ಹಾಗೂ ಆದಿತ್ಯ ರೆಡ್ಡಿ (18) ಮೃತ ವಿದ್ಯಾರ್ಥಿಗಳು. ಇವರು ಮಣಿಪಾಲದಿಂದ ಮುರ್ಡೇಶ್ವರಕ್ಕೆ ಬೈಕಿನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ‌ ಎಂದು ತಿಳಿದು ಬಂದಿದೆ.

Read More

ಮಂಗಳೂರು : ಮಂಗಳೂರು ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿದ್ದು, ನಗರದ ಅಸೈಗೋಳಿ ಬಳಿ ಪೊಲೀಸರು ನಟೋರಿಯಸ್ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ಮಾಡಿರುವ ಘಟನೆ ನಡೆದಿದೆ. 15ಕ್ಕೂ ಅಧಿಕ ಪ್ರಕರಣಗಳ ಆರೋಪಿಯಾಗಿರುವ ಮುಕ್ತಾರ್, ಪ್ರಕರಣವೊಂದರಲ್ಲಿ ಬಂಧಿಸಿ ಕಾರಿನ ಮಹಜರಿಗೆ ಹೋಗಿದ್ದ ವೇಳೆ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮುಕ್ತಾರ್ಗೆ ಚಿಕಿತ್ಸೆ ನೀಡಲಾಗುತ್ತಿದೆ. ರೌಡಿಶೀಟರ್ ಮುಕ್ತಾರ್ ಹಲವು ಪ್ರಕರಣಗಳಲ್ಲಿ ಕಳೆದ ಐದು ವರ್ಷಗಳಿಂದ ಪೊಲೀಸರ ಕೈಗೆ ಸಿಗದೇ ತಪ್ಪಿಸಿಕೊಂಡಿದ್ದ. ಸದ್ಯ ಬಂಧಿಸಿದ್ದ ಪೊಲೀಸರು ಪ್ರಕರಣವೊಂದರ ಮಹಜರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಪರಾರಿಯಾಗಲು ಯತ್ನಿಸಿದ್ದ.

Read More