Author: main-admin

ಮಂಗಳೂರು:ಮಂಗಳೂರಿನ  ಸಂತ ಜೆರೋಸಾ ಶಾಲೆಯಲ್ಲಿ ನಡೆದ ಹಿಂದೂ ಧರ್ಮ, ದೇವರ ಅವಹೇಳನ  ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ,  ಇಬ್ಬರು ಪಾಲಿಕೆ ಸದಸ್ಯರುಗಳು ಮತ್ತು ಇತರರ ವಿರುದ್ಧ  ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಲೆಯ ಶಿಕ್ಷಕಿ‌ ಯೋರ್ವರು ಹಿಂದೂ ಧರ್ಮ ಮತ್ತು ದೇವರನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಶಾಲೆಯ ವಿದ್ಯಾರ್ಥಿಗಳ ಹೆತ್ತವರು ಎನ್ನಲಾದ ಕೆಲವು ಮಂದಿ ಸಂಘ ಪರಿವಾರದ ಕಾರ್ಯಕರ್ತರ ಜೊತೆಗೂಡಿ ಶಾಲೆಯ ಬಳಿ ಅಶಾಂತಿಯ ವಾತಾವರಣ ಸೃಷ್ಟಿಸಿದ್ದರು ಎಂದು ಹೇಳಲಾಗಿತ್ತು.  ಫೆ.12ರಂದು ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಡಾಭರತ್ ಶೆಟ್ಟಿ ಶಾಲೆಯ‌‌ ಮುಂದೆ ಜಮಾಯಿಸಿ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕನ್ನು ಶಾಲೆಯ ವಿರುದ್ಧ ಎತ್ತಿಕಟ್ಟುವಂತಹ ಪ್ರಯತ್ನ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.  ಇದೀಗ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಕಾರ್ಪೊರೇಟರ್‌ಗಳಾದ ಸಂದೀಪ್ ಗರೋಡಿ, ಭರತ್ ಕುಮಾರ್, ವಿಹೆಚ್‌ಪಿ ನಾಯಕ ಶರಣ್ ಪಂಪ್‌ವೆಲ್ ಮತ್ತಿತರರ ವಿರುದ್ಧ…

Read More

ಮಂಗಳೂರು  ಖಾಸಗಿ ಶಾಲೆಯ ವಿವಾದ ಪ್ರಕರಣ ನಡೆದ ಬೆನ್ನಲ್ಲೇ ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರನ್ನು (ಡಿಡಿಪಿಐ) ದಿಢೀರ್‌ ವರ್ಗಾವಣೆ ಮಾಡಲಾಗಿದೆ. ನೂತನ ಡಿಡಿಪಿಐ ಆಗಿ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಶಾಲೆಯ ವಿವಾದದ ನಿರ್ವಹಣೆಯಲ್ಲಿ ವಿಫಲರಾಗಿರುವ ಕುರಿತು ಹಾಗೂ ಡಿಡಿಪಿಐ ವರ್ತನೆ ಬಗ್ಗೆ ಕಾಂಗ್ರೆಸ್‌ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದರು. ಮಂಗಳವಾರ ಶಾಲೆಗೆ ಭೇಟಿ ನೀಡಿದ್ದ ಮಾಜಿ ಸಚಿವ ರಮಾನಾಥ ರೈ, ಸಮಸ್ಯೆ ಉದ್ಭವ ಆದಾಗಲೇ ಶಿಕ್ಷಣ ಇಲಾಖೆ ಅಧಿಕಾರಿಗಳು ಸರಿಪಡಿಸಬೇಕಿತ್ತು. ಆದರೆ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಹಿಂದುಳಿದಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಮಾಜಿ ಶಾಸಕರಾದ ಐವನ್ ಡಿಸೋಜ, ಜೆ.ಆರ್‌. ಲೋಬೊ ಕೂಡ ಅಧಿಕಾರಿಗಳ ವರ್ತನೆಯನ್ನು ಖಂಡಿಸಿದ್ದರು. ಇದರ ಬೆನ್ನಲ್ಲೇ ಡಿಡಿಪಿಐ ದಯಾನಂದ ನಾಯ್ಕ ಅವರನ್ನು ಬೆಳಗಾವಿ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯಕ್ಕೆ ಪ್ರವಾಚಕರನ್ನಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ.ಕಲಬುರಗಿಯ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಲ್ಲಿ ಉಪನಿರ್ದೇಶಕ (ಯೋಜನೆ)ರಾಗಿದ್ದ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ದಕ್ಷಿಣ ಕನ್ನಡ ಡಿಡಿಪಿಐ…

Read More

ಬಂಟ್ವಾಳ: ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ 42 ಸಿಮ್‌ ಕಾರ್ಡ್ ಜೊತೆ ಸಿಕ್ಕಿಬಿದ್ದಿದ್ದ ಐವರು ಆರೋಪಿಗಳ ವಿಚಾರಣೆಯನ್ನು ಜಾರಿ ನಿರ್ದೇಶನಾಯಕ್ಕೆ ಒಪ್ಪಿಸಲಾಗಿದೆ. ಆರೋಪಿಗಳಿಗೆ ವಿದೇಶಿ ಕರೆನ್ಸಿ ದಂಧೆಯ ನಂಟು ಇರುವ ಅನುಮಾನದ ಹಿನ್ನಲೆಯಲ್ಲಿ ಇಡಿ ತನಿಖೆ ಆರಂಭಿಸಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ತೋಟತ್ತಾಡಿ ಎಂಬಲ್ಲಿ ಸಿಮ್ ಖರೀದಿಸಿ ಬೆಂಗಳೂರಿಗೆ ಹೊರಟಿದ್ದವರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದರು. ಫೆ.1 ರಂದು ಆರೋಪಿಗಳನ್ನು ಬಂಧಿಸಲಾಗಿದ್ದು, ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಪೊಲೀಸ್‌ ಕಸ್ಟಡಿಗೆ ಪಡೆದುಕೊಳ್ಳಲಾಗಿತ್ತು. ವಿಚಾರಣೆ ವೇಳೆ ಆರೋಪಿಗಳಿಗೆ ವಿದೇಶಿ ಕರೆನ್ಸಿ ದಂಧೆಯ ನಂಟು ಇರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಇಡಿ ಸಂಸ್ಥೆಗೆ ಈ ಬಗ್ಗೆ ಮಾಹಿತಿ ನೀಡಿ ಪತ್ರ ಬರೆದಿದ್ದರು. ಇದೀಗ ಇಡಿ ಅಧಿಕಾರಿಗಳು ಬಂಟ್ವಾಳದ ಡಿವೈಎಸ್‌ಪಿ ಕಚೇರಿಗೆ ಆರೋಪಿಗಳನ್ನು ಕರೆಯಿಸಿ ವಿಚಾರಣೆ ನಡೆಸಿದ್ದಾರೆ. ಇಡಿ ಅಧಿಕಾರಿಗಳು ಕೂಡಾ ಈ ಐವರ ಮೇಲೆ ಪ್ರಕರಣ ದಾಖಲಿಸಿಕೊಂಡು ಪ್ರತ್ಯೇಕ ತನಿಖೆ ಆರಂಭಿಸಿದೆ ಎಂದು ಮಾಹಿತಿ ಲಭ್ಯವಾಗಿದೆ. ಐವರು…

Read More

ಉಡುಪಿ: ರಸ್ತೆ ಬದಿಯಲ್ಲಿ ಸ್ಕೂಟರ್ ನಿಲ್ಲಿಸಿ ಅದರ ಮೇಲೆ ಮಲಗಿದ್ದ ವ್ಯಕ್ತಿಯನ್ನು ಕಳ್ಳರು ನಿಧಾನವಾಗಿ ಕೆಳಗೆ ಇಳಿಸಿ ರಸ್ತೆ ಬದಿಯಲ್ಲಿ ಮಲಗಿಸಿ ಸ್ಕೂಟರ್ ನ್ನು ಕಳವು ಮಾಡಿದ ಘಟ ಭಾನುವಾರ ತಡರಾತ್ರಿ ಕಾಪು ಕೊಪ್ಪಲಂಗಡಿಯಲ್ಲಿ ನಡೆದಿದೆ. ಕಾರ್ಕಳ ಮುಡಾರು ಗ್ರಾಮದ ಚೇತನ್‌ ವಂಚನೆಗೊಳಗಾದವರು. ಸ್ಕೂಟರ್‌ನಲ್ಲಿ ಸುರತ್ಕಲ್‌ನತ್ತ ತೆರಳುತ್ತಿದ್ದ ಚೇತನ್ ಸ್ಕೂಟರ್ ಸವಾರಿ ಮಾಡಲು ಕಷ್ಟವಾಗಿದ್ದುದರಿಂದ ತನ್ನ ಸ್ಕೂಟರನ್ನು ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿ ಸ್ಕೂಟರಿನಲ್ಲಿ ತಲೆ ಇಟ್ಟು ಮಲಗಿದ್ದರು. ಮುಂಜಾನೆ 2.30ರ ವೇಳೆಗೆ ಎಚ್ಚರವಾದಾಗ ಚೇತನ್ ಹೆಲ್ಮೆಟ್ ಸಹಿತ ರಸ್ತೆ ಬದಿ ಮಲಗಿದ್ದು ಅವರ ಸ್ಕೂಟರ್, ಮೊಬೈಲ್, ಪರ್ಸ್ ಇಲ್ಲದೇ ಇದ್ದು ಯಾರೋ ಕಳ್ಳರು ಅಪಹರಿಸಿರುವುದು ಗೊತ್ತಾಗಿದೆ. ಕಳವಾಗಿರುವ ಪರ್ಸ್‌ನಲ್ಲಿ ಅಗತ್ಯ ದಾಖಲೆಗಳು ಇದ್ದವು ಎಂದು ಪ್ರಕರಣ ದಾಖಲಿಸಿರುವ ಕಾಪು ಠಾಣೆ ಪೊಲೀಸರು ವಿವರಿಸಿದ್ದಾರೆ.

Read More

ರಾಜ್ಯದಲ್ಲಿ HSRP ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನಿಗದಿಪಡಿಸಿದ್ದ ಗಡುವು ಮತ್ತೆ ಮೂರು ತಿಂಗಳು ವಿಸ್ತರಿಸುವುದಾಗಿ ಸರ್ಕಾರ ತಿಳಿಸಿದೆ. 2019ರ ಏಪ್ರಿಲ್‌ಗಿಂತ ಮೊದಲು ನೋಂದಣಿ ಮಾಡಿರುವ ಎಲ್ಲ ಹಳೆಯ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶಿಸಿತ್ತು. ಅದರಂತೆ HSRP ನಂಬರ್ ಪ್ಲೇಟ್ ಅಳವಡಿಸಲು ಫೆ.17ರ ಗಡುವು ನೀಡಲಾಗಿತ್ತು. ಈಗ ವಾಹನ ಮಾಲೀಕರ ಅನುಕೂಲಕ್ಕಾಗಿ ಗಡುವು 3 ತಿಂಗಳು ವಿಸ್ತರಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪರಿಷತ್ ನಲ್ಲಿ ತಿಳಿಸಿದ್ದಾರೆ

Read More

ಬೆಂಗಳೂರು : ಆಫ್ಲೈನ್ ಕ್ರಿಕೆಟ್ ಬೆಟ್ಟಿಂಗ್ ಆಗಿರಬಹುದು ಅಥವಾ ಆನ್ಲೈನ್ ಮನಿ ಗೇಮಿಂಗ್ ನಿಂದ ಕೋಟ್ಯಾಂತರ ರೂಪಾಯಿಗಳ ಬೆಟ್ಟಿಂಗ್ ದಂಧೆ ನಡಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕಠಿಣ ಕಾನೂನು ಕ್ರಮಕ್ಕೆ ಶೀಘ್ರದಲ್ಲಿ ಪ್ರತ್ಯೇಕ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು. ಕಾಂಗ್ರೆಸ್‌ನ ರವಿಕುಮಾರ್ ಗಣಿಗ ಅವರು ಕ್ರಿಕೆಟ್ ಬೆಟ್ಟಿಂಗ್ ಗೆ ಕಡಿವಾಣ ಹಾಕಲು ಕಠಿಣ ಕಾನೂನು ಜಾರಿಗೊಳಿಸುವಂತೆ ಗೃಹ ಸಚಿವರಲ್ಲಿ ಕೋರಿದರು. ಅದಕ್ಕೆ ಪಕ್ಷಾತೀತವಾಗಿ ಎಲ್ಲ ಶಾಸಕರು ಧ್ವನಿಗೂಡಿಸಿ, ಕ್ರಿಕೆಟ್ ಬೆಟ್ಟಿಂಗ್‌ ಜತೆಗೆ ಆನ್‌ಲೈನ್ ಮನಿ ಗೇಮಿಂಗ್‌ಗಳಿಗೂ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಪರಮೇಶ್ವರ್, ಕ್ರಿಕೆಟ್ ಬೆಟ್ಟಿಂಗ್ ದಂಧೆಯು ರಾಜ್ಯಾದ್ಯಂತ ನಡೆಯುತ್ತಿದೆ. ಇದರಲ್ಲಿ ಸಾವಿರಾರು ಕೋಟಿ ರು. ಹಣದ ವ್ಯವಹಾರ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಕಾನೂನು ಕ್ರಮವನ್ನು ಬಿಗಿಗೊಳಿಸಲಾಗುವುದು ಎಂದು ತಿಳಿಸಿದರು. ಜತೆಗೆ ಆನ್‌ಲೈನ್‌ ಮನಿ ಗೇಮಿಂಗ್‌ಗಳಿಂದಲೂ ಯುವಕರು ಹಾಳಾಗುತ್ತಿದ್ದು, ಅವುಗಳಿಗೆ ಕಡಿವಾಣ ಹಾಕಲು ನಿರ್ಧರಿಸಲಾಗಿದೆ. ಒಟ್ಟಾರೆ ಬೆಟ್ಟಿಂಗ್ ಮತ್ತು ಆನ್‌ಲೈನ್…

Read More

ಮಂಗಳೂರು : ಪ್ಲ್ಯಾಟ್ ಕೊಡಿಸುತ್ತೇನೆಂದು 60ಲಕ್ಷ ರೂ. ವಂಚನೆಗೈದ ಬಿಲ್ಡರ್ ಸೇರಿದಂತೆ ಮೂವರಿಗೆ ಎರು ವರ್ಷ ಜೈಲು ಶಿಕ್ಷೆ ಹಾಗೂ ತಲಾ 5ಸಾವಿರ ದಂಡ ವಿಧಿಸಿ ದ.ಕ.ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಮಂಗಳೂರಿನ ಎಂ.ಕೆ. ಬಿಲ್ಡರ್ ಪಾಲುದಾರ ಕೃಷ್ಣರಾಜ ಮಯ್ಯ(49), ಕದ್ರಿ ಕಂಬಳ ಕ್ರಾಸ್ ರಸ್ತೆ ನಿವಾಸಿಗಳಾದ ರಾಮಚಂದ್ರ ಕೆ.ಎಸ್.(71), ಮಯೂರ್ ಆರ್.ಎಸ್.(34) ಶಿಕ್ಷೆಗೊಳಗಾದವರು. ಆರೋಪಿಗಳು ಪ್ಲ್ಯಾಟ್ ಕೊಡಿಸುತ್ತೇವೆ ಎಂದು ನಂಬಿಸಿ 79ವರ್ಷದ ಪದ್ಮನಾಭ ರಾವ್ ಎಂಬವರಿಂದ 60ಲಕ್ಷ ರೂ. ಪಡೆದು ಫ್ಲ್ಯಾಟ್ ನೀಡದೆ ವಂಚಿಸಿದ್ದಾರೆ. ಈ ಬಗ್ಗೆ ಸಂತ್ರಸ್ತ ಪದ್ಮನಾಭ ರಾವ್ ಅವರು ದ.ಕ.ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ನೀಡಿದ್ದಾರೆ‌. ದೂರನ್ನು ಪರಿಶೀಲಿಸಿದ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು 2023ರ ಮಾರ್ಚ್ 31ರೊಳಗಾಗಿ ವಂಚನೆಗೈದ 60 ಲಕ್ಷ ರೂ. ಹಣವನ್ನು ದೂರುದಾರರಿಗೆ ವಾಪಸ್ ನೀಡಬೇಕೆಂದು ಆದೇಶಿಸಿತ್ತು. ಆದರೂ ಆರೋಪಿಗಳು ಪರಿಹಾರದ ಹಣ ನೀಡದಿದ್ದಾಗ ಅರ್ಜಿದಾರರು ಮತ್ತೆ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಮೊರೆ ಹೋಗಿದ್ದಾರೆ.…

Read More

ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕರು ಹಾಗೂ ಅದರ ಮಾಲಕರ ವಿರುದ್ಧ ಪ್ರಕರಣ ದಾಖಲಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ.ಸಜೀಪಮುನ್ನೂರಿನ ಸರ್ಫರಾಜ್ ಅಹಮ್ಮದ್, ಕುಲಾಲು ನಿವಾಸಿ ಅಬ್ದುಲ್ ಅಜೀಜ್, ಕುರಿಯಾಳದ ಕಿರಣ್, ಅಮ್ಟಾಡಿ ನಿವಾಸಿ ಅವಿಲ್ ಕ್ರಾಸ್ಟಾ, ಮಂಚಿ ನಿವಾಸಿ ಮೊಹಮ್ಮದ್ ಇಸ್ಮಾಯಿಲ್ / ರಶೀದ್, ಬಿ. ಮೂಡದ ಮೊಹಮ್ಮದ್ ಆರೀಫ್, ವಳಚ್ಚಿಲ್ ನ ಸತ್ತಾರ್, ಅಜರುದ್ಧೀನ್ ವಿರುದ್ಧ ಪ್ರಕರಣ ದಾಖಲಾಗಿದೆ. ಫೆ.12 ರಂದು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ರಾಮಕೃಷ್ಣ ರವರು ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ತಲಪಾಡಿ ಎಂಬಲ್ಲಿ ತಪಾಸಣೆಗಾಗಿ ಟಿಪ್ಪರ್ ಲಾರಿಗಳನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ, ಸದ್ರಿ ಲಾರಿಗಳಲ್ಲಿ ಮರಳು ತುಂಬಿಸಿ ಸಾಗಾಟ ಮಾಡುತ್ತಿರುವುದು ಕಂಡುಬಂದಿರುತ್ತದೆ.ಈ ಬಗ್ಗೆ ಲಾರಿಗಳ ಚಾಲಕರಲ್ಲಿ ವಿಚಾರಿಸಿದಾಗ ಅವರುಗಳು ಯಾವುದೇ ದಾಖಲೆ/ಪರವಾನಿಗೆ ಪಡೆಯದೇ, ವಳಚ್ಚಿಲ ಎಂಬಲ್ಲಿಂದ ಮರಳು ತುಂಬಿಸಿ ಸಾಗಾಟ ಮಾಡುತ್ತಿರುವುದಾಗಿ ತಿಳಿಸಿದ್ದು, ಮುಂದಿನ ಕಾನೂನುಕ್ರಮಕ್ಕಾಗಿ ಸದ್ರಿ ಲಾರಿಗಳನ್ನು, ಅದರಲ್ಲಿ ತುಂಬಿಸಿದ್ದ ಮರಳಿನೊಂದಿಗೆ…

Read More

ಬಂಟ್ವಾಳ : ರೋಡ್ ರೋಲರ್ ವಾಹನವನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ರೈಲ್ವೆ ಓವರ್ ಬ್ರಿಡ್ಜ್ ನ ಅಡಿಭಾಗದಲ್ಲಿ ಸಿಲುಕಿಕೊಂಡ ಘಟನೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ನಡೆದಿದೆ.ಬೆಂಜನಪದವು ಸೈಟ್ ನಿಂದ ಪುತ್ತೂರು ಸವಣೂರು ಎಂಬಲ್ಲಿ ನಡೆಯಲಿರುವ ಕಾಮಗಾರಿಗೆ ರೋಲರ್ ನ್ನು ಲಾರಿಯಲ್ಲಿ ತುಂಬಿಸಿ ಕೊಂಡು ಹೋಗುವ ವೇಳೆ ಮೊಡಂಕಾಪು ಎಂಬಲ್ಲಿ ರೈಲ್ವೆ ಯ ಅಡಿಭಾಗದಲ್ಲಿ ಕ್ರಾಸ್ ಮಾಡಲು ಸಾಧ್ಯವಾಗದೆ ಸಿಲುಕಿಕೊಂಡಿದೆ. ರೈಲ್ವೆಯ ಓವರ್ ಬ್ರಿಡ್ಜ್ ನ ಎತ್ತರಕ್ಕಿಂತ ಅಧಿಕ ಎತ್ತರದಲ್ಲಿ ಲಾರಿಯ ಲೋಡ್ ಮಾಡಿಕೊಂಡಿದ್ದೇ ಈ ಘಟನೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ.ಘಟನೆಯಿಂದ ರೈಲ್ವೆ ಇಲಾಖೆ ಗೆ ಸೇರಿದ ಕಬ್ಬಿಣದ ರಾಡ್ ತುಂಡಾಗಿ ಲಾರಿಯ ಮೇಲೆ ಬಿದ್ದಿದೆ ‌ಅದೃಷವಶಾತ್ ಬೇರೆ ಯಾವುದೇ ವಾಹನಗಳ‌ಮೇಲೆ ಬೀಳದೆ ಇದ್ದು, ಯಾವ ಅಪಾಯಕಾರಿ ಘಟನೆ ನಡೆದಿಲ್ಲ. ಸ್ಥಳಕ್ಕೆ ರೈಲ್ವೆ ಇಲಾಖೆಯವರು ಆಗಮಿಸಿದ್ದು, ಘಟನೆಯಿಂದ ಆಗಿರುವ ನಷ್ಟಕ್ಕೆ ಪರಿಹಾರದ ಬಗ್ಗೆ ಲಾರಿಯವರಲ್ಲಿ ಮಾತುಕತೆ ನಡೆಸುತ್ತಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ಸಂಚಾರಕ್ಕೆ ಅಡಚಣೆಯಾಗಿದ್ದಯ,ಮೆಲ್ಕಾರ್ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ…

Read More

ಬೆಂಗಳೂರು : ಇತ್ತೀಚಿಗೆ ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸುವುದು ಹೆಚ್ಚಾಗಿದೆ. ಬೈಕ್​ ಅನ್ನು ಸರಿಯಾಗಿ ಬ್ಯಾಲೆನ್ಸ್​ ಮಾಡಲು ಬರದಿದ್ದರೂ, ಸಂಚಾರಿ ನಿಯಮಗಳ ಬಗ್ಗೆ ಅರಿವು ಇರದಿದ್ದರೂ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಓಡಿಸುತ್ತಾರೆ. ಇದರಿಂದ ಅಪಘಾತ ಸಂಭವಿಸಿ ಜೀವಕ್ಕೆ ಕುಂದು ತಂದುಕೊಳ್ಳುತ್ತಾರೆ. ನಿಯಮ ಮೀರಿ ವಾಹನ ಚಲಾಯಿಸಿ ಅಪಘಾತ ಮಾಡಿದ ಆರು ಅಪ್ರಾಪ್ತ ವಯಸ್ಕರ ಪೋಷಕರಿಗೆ ತಲಾ 25 ಸಾವಿರ ರೂ. ದಂಡ ವಿಧಿಸಲಾಗಿದೆ. ಈ ಎಲ್ಲ ಅಪಘಾತಗಳು 2022-23 ರಲ್ಲಿ ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಯಾವುದೂ ಮಾರಣಾಂತಿಕವಾಗಿಲ್ಲ. ಈ ಆರು ಅಪ್ರಾಪ್ತ ವಯಸ್ಕರ ಪೋಷಕರು ನ್ಯಾಯಾಲಯದ ಮುಂದೆ ಹಾಜರಾಗಿದ್ದು, ಅಪ್ರಾಪ್ತರಿಗೆ ತಮ್ಮ ವಾಹನಗಳನ್ನು ಚಲಾಯಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಕೋರ್ಟ್​ ತಲಾ 25,000 ರೂ. ದಂಡವನ್ನು ವಿಧಿಸಿದೆ. ಪೋಷಕರು ಈಗ ಒಟ್ಟು 1.5 ಲಕ್ಷ ರೂ. ದಂಡವನ್ನು ಪಾವತಿಸಿದ್ದಾರೆ. “ಅಪ್ರಾಪ್ತ ವಯಸ್ಕರಿಗೆ ವಾಹನ ಚಲಾಯಿಸಲು ಅವಕಾಶ ನೀಡಿದರೆ ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ. ಶಾಲೆಗಳು ಮತ್ತು ಶಿಕ್ಷಣ…

Read More