ಬಂಟ್ವಾಳ: ಮಹಿಳೆಯೋರ್ವಳನ್ನು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳದ ಪಿಲಿಮೊಗರು ಗ್ರಾಮದಲ್ಲಿ ನಡೆದಿದೆ. ಪಿಲಿಮೊಗರು ನಿವಾಸಿ ಉಮೇಶ್ ಎಂಬವರ ಪತ್ನಿ ಲತಾಅವರ ಮೇಲೆ ಸಂಬಂದಿಕನೇ ಆಗಿರುವ ರಮೇಶ್ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ಗಾಯಗೊಂಡಿರುವ ಲತಾ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಲ್ಲಿಪಾಡಿ ನಿವಾಸಿ ಆರೋಪಿ ರಮೇಶ್, ಲತಾ ಅವರ ಮನೆಗೆ ಕೆಲವೊಮ್ಮೆ ಬಂದು ಹೋಗುತ್ತಿದ್ದ. ಲತಾ ಅವರಿಗೆ ಮದುವೆ ಆಗಿದೆ. ರಮೇಶ್ ಕುಟುಂಬಸ್ಥ ಆದ ಕಾರಣ ಲತಾ ರಮೇಶ್ ಜೊತೆ ಸಲುಗೆಯಿಂದಿದ್ದರು ಎನ್ನಲಾಗಿದೆ. ರಮೇಶ್ ಲತಾಗೆ ಮೆಸೇಜ್ ಮಾಡುತ್ತಿದ್ದ. ಆದರೆ ರಮೇಶ್ ವರ್ತನೆ ಮಿತಿ ಮೀರಿದಾಗ ಲತಾ ಮೆಸೇಜ್ ಮಾಡುವುದನ್ನು ನಿಲ್ಲಿಸಿ ಎಚ್ಚರಿಕೆ ಕೊಟ್ಟಿದ್ದಾರೆ.ಇದರಿಂದ ಕೋಪಗೊಂಡು ಮನೆಗೆ ಬಂದು ಕೊಲೆ ಮಾಡುವ ಯತ್ನದಿಂದ ಹಲ್ಲೆ ನಡೆಸಿರುವುದಾಗಿ ದೂರು ದಾಖಲಾಗಿದೆ. ಇದೀಗ ಪೊಲೀಸರು ಆರೋಪಿಗೆ ಬಲೆ ಬೀಸಿದ್ದಾರೆ.
Author: main-admin
ಮಂಗಳೂರು: ಇತ್ತೀಚೆಗೆ ಗಾಂಜಾ ಸಹಿತ ಹಲವು ಕಾಲೇಜು ವಿದ್ಯಾರ್ಥಿಗಳನ್ನು ನಗರದಲ್ಲಿ ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಖ್ಯಾತ್ (28) ಮತ್ತು ಆತನ ಪತ್ನಿ ಅಂಜನಾ (21) ಬಂಧಿತರು. ಇವರು ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರ ತಂಡ ಕಾವೂರು ಶಂಕರ ನಗರ ಕೆ ಸಿ ಆಳ್ವ ಲೇಔಟ್ ನ ಮನೆಯೊಂದಕ್ಕೆ ದಾಳಿ ನಡೆಸಿ ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಈ ಮೊದಲು ಕೂಡ ಹಲವು ಪ್ರಕರಣ ದಾಖಲಾಗಿದೆ ಎಂಬ ಬಗ್ಗೆ ಕೂಡ ಮಾಹಿತಿ ಇದೆ. ಇದೀಗ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ನವದೆಹಲಿ: ಪುರುಷನೊಂದಿಗೆ ಸಂಬಂಧವಿಟ್ಟುಕೊಂಡು ಆತನೊಂದಿಗೆ ಸ್ವ-ಇಚ್ಛೆಯಿಂದ ವಾಸಿಸುತ್ತಿದ್ದ ಮಹಿಳೆ ಆ ಸಂಬಂಧ ಹದಗೆಟ್ಟ ಬಳಿಕ ಅತ್ಯಾಚಾರ ಪ್ರಕರಣ ದಾಖಲಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅತ್ಯಾಚಾರ, ಅಸಹಜ ಅಪರಾಧಗಳು ಹಾಗೂ ಕ್ರಿಮಿನಲ್ ಬೆದರಿಕೆ ಆರೋಪ ಎದುರಿಸುತ್ತಿದ್ದ ಅನ್ಸಾರ್ ಮೊಹಮ್ಮದ್ ಅವರ ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ವಿಕ್ರಮ್ ನಾಥ್ ಅವರಿದ್ದ ದ್ವೀ-ಸದಸ್ಯ ಪೀಠವು ಅನ್ಸಾರ್‌ಗೆ ಜಾಮೀನು ನೀಡಿದೆ. ಈ ಪ್ರಕರಣದಲ್ಲಿ ಮೇಲ್ಮನವಿದಾರನಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ರಾಜಸ್ಥಾನ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ. ದೂರುದಾರೆ ಮಹಿಳೆ ಸ್ವಇಚ್ಛೆಯಿಂದ ಮೇಲ್ಮನವಿದಾರ ಅನ್ಸಾರ್ ಜೊತೆ ಇದ್ದು ಆತನೊಂದಿಗೆ ಸಂಬಂಧ ಹೊಂದಿದ್ದರು. ಈಗ ಸಂಬಂಧ ಹದಗೆಟ್ಟಿದ್ದರೆ ಅದು ಐಪಿಸಿ ಸೆಕ್ಷನ್ 376 (2) (ಎನ್) ಅಡಿ ಪ್ರಕರಣ ದಾಖಲಿಸಲು ಆಧಾರವಾಗುವುದಿಲ್ಲ ಎಂದು ತನ್ನ ಆದೇಶದಲ್ಲಿ ತಿಳಿಸಿದೆ. ಅನ್ಸಾರ್ ಜೊತೆ ದೂರುದಾರೆ ಕಳೆದ 4 ವರ್ಷಗಳಿಂದಲೂ ಸಂಬಂಧ ಹೊಂದಿದ್ದು ಆಕೆ ಮತ್ತು ಅನ್ಸಾರ್ ನಡುವೆ ಸಂಬಂಧ ಬೆಳೆದಾಗ ಮಹಿಳೆಗೆ 21 ವರ್ಷ…
ಕೋಟ: ಇಲ್ಲಿಗೆ ಸಮೀಪದ ಕೆದೂರು ಮಹಾಕಾಳಿ ದೇವಸ್ಥಾನದ ಸಮೀ ಪದ ರೈಲ್ವೆ ಟ್ರ್ಯಾಕ್ ಬಳಿ ಮುಂಬಯಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಮಂಗಳಾ ಲಕ್ಷದೀಪ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ಮಂಗಳೂರು ಡೊಂಗರಕೇರಿ ನಿವಾಸಿ ನಿತ್ಯಾನಂದ ಶೇಟ್ (52) ಆಯತಪ್ಪಿ ಬಿದ್ದು ಸಾವನ್ನಪ್ಪಿದವರು. ಇವರು ಮಹಾರಾಷ್ಟ್ರದಲ್ಲಿ ಶ್ರೀಗಳೊಬ್ಬರ ಚಾತುರ್ಮಾಸ ಸಮಾರಂಭ ಮುಗಿಸಿ ತಮ್ಮ ಸಮಾಜ ಬಾಂಧವರ ಜತೆ ಬರುತ್ತಿದ್ದಾಗ ಕೆದೂರು ರೈಲ್ವೆ ಟ್ರ್ಯಾಕ್ ಸಮೀಪ ಚಲಿಸುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಮೃತರು ಅವಿವಾಹಿತರಾಗಿದ್ದು, ಮಂಗಳೂರಿನ ಶಾವಿಗೆ ತಯಾರಿಕಾ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬ: ಇನ್ನೋವಾ ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಪಂಜ- ಕಡಬ ರಸ್ತೆಯ ಕೋಡಿಂಬಾಳದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಧರ್ಮಸ್ಥಳ ಕಾಯರಡ್ಕದ ಮೂಲದ ಮೂವರು ಪಂಜ ಕಡೆ ಇನ್ನೋವಾ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಬೆಂಗಳೂರಿನಿಂದ ಪಂಜ ಮಾರ್ಗವಾಗಿ ಕಡಬಕ್ಕೆ ಬರುತ್ತಿದ್ದ ಸುಗಮ ಸಂಸ್ಥೆಗೆ ಸೇರಿದ ಖಾಸಗಿ ಬಸ್ ನಡುವೆ ಕೋಡಿಂಬಾಳ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ ಲೋಲಕ್ಷ ಎಂಬವರಿಗೆ ಗಾಯವಾಗಿದ್ದು, ಕಡಬ ಸಮುದಾಯ ಆಸ್ಪತ್ರೆಗೆ ಸೇರಿಸಲಾಗಿದೆ. ಉಳಿದಂತೆ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಶಿರಾಡಿ ಘಾಟಿಯಲ್ಲಿ ರಸ್ತೆ ಸಂಚಾರ ತಡೆ ಹಿನ್ನೆಲೆಯಲ್ಲಿ ಕಿರಿದಾದ ದಾರಿಯಲ್ಲಿ ಸಂಚರಿಸುತ್ತಿರುವ ಘನ ವಾಹನಗಳು ತಿರುವುಗಳ ಅರಿವು ಇಲ್ಲದೇ ಇಂತಹ ಘಟನೆಗಳು ಸಂಭವಿಸುತ್ತಿವೆ ಎಂದು ಸ್ಥಲೀಯರು ತಿಳಿಸಿದ್ದಾರೆ. Post Settings
ಉದಯೋನ್ಮುಖ ನಟ, ದಿಯಾ ಸಿನಿಮಾ ಖ್ಯಾತಿಯ ನಟ ಪೃಥ್ವಿ ಅಂಬಾರ್ ಅವರಿಗೆ ಮಾತೃ ವಿಯೋಗ ಉಂಟಾಗಿದೆ. ಅವರ ತಾಯಿ ಸುಜಾತ ವೀರಪ್ಪ ಅಂಬಾರ್ ಅವರು ಅಲ್ಪಕಾಲ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಇವರ ಅಂತ್ಯಕ್ರಿಯೆ ಇಂದು ಮಂಗಳೂರಿನಲ್ಲಿ ನಡೆಯಲಿದೆ. ದುರ್ಗಾಪರಮೇಶ್ವರಿ ಮಹಿಳಾ ಸಂಘದಲ್ಲಿ ತೊಡಗಿಸಿಕೊಂಡಿದ್ದ ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇನ್ನೂ ಇವರ ಪುತ್ರ ನಟ ಪೃಥ್ವಿ ಅಂಬರ್ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದು, ದಿಯಾ ಸಿನಿಮಾ ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ಬೈರಾಗಿ ಮತ್ತು ಶುಗರ್ ಲೆಸ್ ಚಿತ್ರದಲ್ಲಿ ಪೃಥ್ವಿ ಅಂಬರ್ ನಟಿಸಿದ್ದಾರೆ. ಚಿತ್ರಗಳ ಸಕ್ಸಸ್ನ್ನು ಖುಷಿ ಪಡೋ ಸಮಯದಲ್ಲಿ ನಟ ತಮ್ಮ ತಾಯಿಯನ್ನು ಕಳೆದುಕೊಂಡಿದ್ದಾರೆ.
ಉಳ್ಳಾಲ: ರಾ.ಹೆ. 66 ರ ತೊಕ್ಕೊಟ್ಟಿನ ಕಾಪಿಕಾಡು ಎಂಬಲ್ಲಿ ಲಾರಿ ಮತ್ತು ಎರಡು ಕಾರುಗಳ ನಡುವೆ ನಡೆದ ಸರಣಿ ಅಘಾತದಲ್ಲಿ ಧಾರ್ಮಿಕ ಮುಂದಾಳು ಕೆ.ಪಿ ಸುರೇಶ್ ಅವರು ಚಲಾಯಿಸುತ್ತಿದ್ದ ಕಾರು ಡಿವೈಡರ್ ಏರಿದ್ದು ಅದೃಷ್ಟವಶಾತ್ ಅವರು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಮಾಡೂರು ಶ್ರೀ ಸಾಯಿಬಾಬ ಮಂದಿರದ ಮೊಕ್ತೇಸರರಾದ ಕೆ.ಪಿ ಸುರೇಶ್ ಅವರು ಇಂದು ಬೆಳಿಗ್ಗೆ ತಮ್ಮ ಕಾರಲ್ಲಿ ಮಂಗಳೂರು ಕಡೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಕಾಪಿಕಾಡು ಎಂಬಲ್ಲಿ ಸ್ಕೂಟರಲ್ಲಿ ತೆರಳುತ್ತಿದ್ದ ಇಬ್ಬರು ಮಹಿಳೆಯರು ನಿಯಂತ್ರಣ ತಪ್ಪಿ ಕೆಳಗುರುಳಿದ್ದಾರೆ. ಮಹಿಳೆಯರಿಗೆ ಸಹಾಯ ಮಾಡಲು ಸುರೇಶ್ ಅವರು ತನ್ನ ಕಾರನ್ನ ಹೆದ್ದಾರಿ ಡಿವೈಡರ್ ಪಕ್ಕದಲ್ಲಿ ನಿಲ್ಲಿಸಿದ್ದಾರೆ.ಈ ವೇಳೆ ಹಿಂದಿನಿಂದ ಬಂದ ಕೇರಳ ನೋಂದಣಿ ಕಾರೊಂದು ಕಾಪಿಕಾಡಲ್ಲಿ ರಸ್ತೆ ಕ್ರಾಸ್ ಮಾಡುತ್ತಿದ್ದ ಟೆಂಪೊವೊಂದನ್ನ ತಪ್ಪಿಸುವ ಭರದಲ್ಲಿ ಸುರೇಶ್ ಅವರ ಕಾರಿನ ಹಿಂಬದಿಗೆ ಬಲವಾಗಿ ಡಿಕ್ಕಿ ಹೊಡೆದಿದ್ದು ಸುರೇಶ್ ಅವರ ಕಾರು ಡಿವೈಡರ್ ಮೇಲಕ್ಕೇರಿದೆ.ಹಿಂದಿನಿಂದ ಅತೀ ವೇಗದಲ್ಲಿ ಬಂದ ಸರಕು ಲಾರಿಯು ಕೇರಳ ನೊಂದಣಿ ಕಾರಿನ ಹಿಂಬದಿಗೆ…
ಬೆಂಗಳೂರು: ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಅಪ್ಪಿತಪ್ಪಿಯೂ ವಿಡಿಯೋ ಚಿತ್ರೀಕರಣ ಇಲ್ಲವೇ ಫೋಟೋ ತೆಗೆಯುವಂತಿಲ್ಲ. ಶುಕ್ರವಾರ ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅೀನ ಕಾರ್ಯದರ್ಶಿ ಕೆ.ವೆಂಕಟೇಶಪ್ಪ ಅವರು ಸುತ್ತೋಲೆ ಹೊರಡಿಸಿದ್ದು, ಸರ್ಕಾರದ ವ್ಯಾಪ್ತಿಗೆ ಒಳಪಡುವ ಕಚೇರಿ ಸಮಯದಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ ತೆಗೆಯುವುದು ಇಲ್ಲವೆ ವಿಡಿಯೋ ಚಿತ್ರೀಕರಣ ಮಾಡದಂತೆ ನಿಷೇಧಿಸಿ ಅಧಿಸೂಚನೆ ಹೊರಡಿಸಿದ್ದಾರೆ. ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಕೆಲಸದ ನಿಮಿತ್ತ ಬಂದಾಗ ಫೋಟೋ ತೆಗೆಯುವುದು ಇಲ್ಲವೇ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಾರೆ. ಕೆಲವು ಸಂದರ್ಭಗಳಲ್ಲಿ ಇದು ರುಪಯೋಗವಾಗಿರುವುದರಿಂದ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಸಾರ್ವಜನಿಕರ ನೆಪದಲ್ಲಿ ಬರುವ ಖಾಸಗಿ ವ್ಯಕ್ತಿಗಳು ಯಾರೊಬ್ಬರ ಅನುಮತಿ ಪಡೆಯದೇ ಈ ರೀತಿ ವಿಡಿಯೋ ಚಿತ್ರೀಕರಣ ಮಾಡಿಕೊಂಡು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಮಹಿಳಾ ನೌಕರರಿಗೆ ಇದರಿಂದ ಸಮಸ್ಯೆ ಉಂಟಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ನೌಕರರಿಗೆ ಉಂಟಾಗುತ್ತಿದ್ದ ತೊಂದರೆಯನ್ನು ಗಮನದಲ್ಲಿಟ್ಟುಕೊಂಡು ಇನ್ನು ಮುಂದೆ ಅನುಮತಿ ಪಡೆಯದೆ ಸರ್ಕಾರಿ ಕಚೇರಿಗಳಲ್ಲಿ ವಿಡಿಯೋ…
ಬೆಳ್ತಂಗಡಿ: ಇಲ್ಲಿನ ನೇತ್ರಾವತಿ ಸ್ನಾನಘಟ್ಟಕ್ಕೆ ಇಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಇಂದು ಬೆಳಗ್ಗೆ 6 ಗಂಟೆಗೆ ಧರ್ಮಸ್ಥಳ ಕ್ಷೇತ್ರ ದರ್ಶನಕ್ಕೆ ಬಂದು ತದನಂತರ ಆಟೋದಲ್ಲಿ ಬಂದು ಸ್ನಾನ ಮಾಡಲು ಸ್ನಾನಘಟ್ಟದ ಮೆಟ್ಟಲಿನಲ್ಲಿ ಚಪ್ಪಲಿ ಇಟ್ಟು ನೀರಿಗೆ ಇಳಿದ್ದಿದ್ದು, ನಾಪತ್ತೆಯಾಗಿದ್ದಾಳೆ. ಸದ್ಯ ಯುವತಿಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಯುವತಿ ಎಲ್ಲಿಂದ ಬಂದಿದ್ದಾಳೆ, ಒಬ್ಬಳೇ ಬಂದಿದ್ದಾಳೆಯೇ ಇನ್ನಿತರ ಮಾಹಿತಿ ಸಿಕ್ಕಿಲ್ಲ. ಸ್ಥಳದಲ್ಲಿ ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ದಳ ಶೋಧ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಹಾಗೂ ಘಟ್ಟಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ನದಿಯು ತುಂಬಿ ಹರಿಯುತ್ತಿದೆ.
ರಾಜ್ಯ ಸರ್ಕಾರವು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ 1,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿಸುವ ಕೆಲಸವನ್ನು ಶೀಘ್ರವೇ ಮಾಡಲಾಗುವುದು. ಮಾದರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಕಲಿಸಲಾಗುವುದು. ಪ್ರತಿ ತರಗತಿಗೆ ಒಬ್ಬ ಶಿಕ್ಷಕರನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. ಪಠ್ಯಪರಿಷ್ಕರಣೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಪಠ್ಯಪರಿಷ್ಕರಣೆ ಹಿಂದೆಯೂ ಆಗಿತ್ತು. ಆದರೆ ನಾವು ಚರ್ಚೆ ನಡೆಸುತ್ತಿದ್ದೇವು. ಈಗಿನ ವಿರೋಧ ಪಕ್ಷಗಳಂತೆ ಬೀದಿಯಲ್ಲಿ ಕೂಗುತ್ತಿರಲಿಲ್ಲ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಪಠ್ಯಪುಸ್ತಕ ಬದಲಾವಣೆ ಮಾಡಲಾಗಿತ್ತು. ಆದರೆ ಈಗ ಪಠ್ಯಪುಸ್ತಕ ಪರಿಷ್ಕರಣೆ ರಾಜಕೀಯಗೊಳಿಸುತ್ತಿರುವುದು ದುರಾದೃಷ್ಟ ಎಂದು ಹೇಳಿದ್ದಾರೆ.