Author: main-admin

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಅಬ್ದುಲ್ ಮಜೀದ್ ಅವರ ಮಗ ಮಹಮ್ಮದ್ ಸಮೀವುಲ್ಲಾ ಹಾಗೂ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕಂಚಿಲ ನಿವಾಸಿ ಮೋಯ್ದು ಕುಂಞಿ ಅವರ ಮಗ ಇಬ್ರಾಹಿಂ ಬಂಧಿತ ಆರೋಪಿಗಳು.ಫೆ.12 ರಂದು ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ಬಿ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷರಾದ ಮೂರ್ತಿ ಸಿಬ್ಬಂದಿಗಳಾದ ಹೆಚ್ ಸಿ ಕೃಷ್ಣ ಮತ್ತು ಪಿ ಸಿ ಯೋಗೇಶ್ ಡಿ ಎಲ್ , ಪುನೀತ್ ರವರು ಮಾಹಿತಿ ಸಂಗ್ರಹಿಸಿ ಬೆಂಗಳೂರಿನಿಂದ ದಸ್ತಗಿರಿ ಮಾಡಿದ್ದಾರೆ.ಆರೋಪಿಗಳನ್ನು ಮಂಗಳೂರಿನ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಜರು ಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನದ ವಿಧಿಸಿದೆ.

Read More

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಬಾರಿ ಅಧಿಕಾರಕ್ಕೇರಿದ ಬಳಿಕ ಮಂಡಿಸಿದ ಮೊದಲ ರಾಜ್ಯ ಬಜೆಟ್​ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಹಲವು ಘೋಷಣೆಗಳನ್ನು ಮಾಡಿತ್ತು. ಈ ಘೋಷಣೆಯಲ್ಲಿ ಅರ್ಧದಷ್ಟು ಘೋಷಣೆಗಳು ಜಾರಿಯಾಗಿದ್ದರೆ, ಇನ್ನೂ ಹಲವು ಘೋಷಣೆಗಳು ಜಾರಿಗೆ ಬಾಕಿ ಉಳಿದಿವೆ. ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ 7 ಘೋಷಣೆಗಳನ್ನು ಮಾಡಲಾಗಿತ್ತು. ಅವುಗಳಲ್ಲಿ 4 ಘೋಷಣೆಗಳು ಮೀನುಗಾರಿಕೆಗೆ ಸಂಬಂಧಪಟ್ಟವುಗಳಾಗಿವೆ. ಘೋಷಣೆಗಳ ಸ್ಥಿತಿ ಏನು? : 1. ಮೀನುಗಾರ ಮಹಿಳೆಯರಿಗೆ ಬ್ಯಾಂಕುಗಳಲ್ಲಿ ಬಡ್ಡಿ ರಹಿತವಾಗಿ ನೀಡುವ ಸಾಲದ ಮಿತಿ 50 ಸಾವಿರದಿಂದ 3 ಲಕ್ಷ ರೂ. ವರೆಗೆ ಹೆಚ್ಚಳ – ಈ ಘೋಷಣೆ ಜಾರಿಯಾಗಿದ್ದು, ಪ್ರಸಕ್ತ ಮೀನುಗಾರ ಮಹಿಳೆಯರು ಬ್ಯಾಂಕುಗಳಲ್ಲಿ ಬಡ್ಡಿ ರಹಿತವಾಗಿ 3 ಲಕ್ಷ ರೂ ವರೆಗೆ ಸಾಲ ಪಡೆಯುತ್ತಿದ್ದಾರೆ. 2. ಮೀನುಗಾರ ದೋಣಿಗಳಿಗೆ ರಿಯಾಯಿತಿ ದರದ ಡೀಸೆಲ್​​ ಅನ್ನು 2 ಲಕ್ಷ ಕಿಲೋಮೀಟರ್ ವರೆಗೆ ಹೆಚ್ಚಿಸಲು 250 ಕೋಟಿ ರೂ. ನೆರವು – ಈ ಘೋಷಣೆ ಜಾರಿಯಾಗಿದ್ದು, ಮೀನುಗಾರರು 2 ಲಕ್ಷ ಕಿಲೋಮೀಟರ್ ವರೆಗೆ ರಿಯಾಯತಿ…

Read More

ಬೆಳ್ತಂಗಡಿ ಸಮೀಪದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾಳೆ. ಧರ್ಮಸ್ಥಳದ ಪಿಜತ್ತಡ್ಕದ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ ಎಂದು ತಿಳಿಯಲಾಗಿದೆ. ಫೆ.7ರಂದು ವಿಷ ಸೇವಿಸಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಇಂದು ಮುಂಜಾನೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಈಕೆಗೆ ಡ್ರಾಯಿಂಗ್ ಶಿಕ್ಷಕ ಇಲ್ಲಸಲ್ಲದ ಆರೋಪ ಮಾಡಿ ಇನ್ನೊಂದು ವಿದ್ಯಾರ್ಥಿನಿಗೆ ಮಾಡಿದ ಮೆಸೇಜ್ ನಿಂದ ಅವಮಾನಗೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Read More

ಮಂಗಳೂರು: ಶಾಲೆಯೊಂದರ ಶಿಕ್ಷಕಿಯೊಬ್ಬರು ಹಿಂದೂ ಧರ್ಮ, ಶ್ರೀರಾಮ, ಅಯೋಧ್ಯೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು, ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬೆನ್ನಲ್ಲೇ ಶಿಕ್ಷಕಿಯನ್ನು ಅಮಾನತುಗೊಳಿಸಿ ಶಾಲಾ ಆಡಳಿತ ಮಂಡಳಿ ಆದೇಶಿಸಿದೆ. ಮಂಗಳೂರಿನ ಸಂತ ಜೆರೋಸಲಾ ಶಾಲೆಯಲ್ಲಿನ 7ನೇ ತರಗತಿ ಶಿಕ್ಷಕಿ ಸಿಸ್ಟರ್ ಪ್ರಭಾ ಎಂಬುವರು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು. ಶಿಕ್ಷಕಿಯ ಹೇಳಿಕೆ ಖಂಡಿಸಿ ಶಾಸಕ ವೇದವ್ಯಾಸ ಕಾಮತ್ ಜೊತೆಗೂಡಿ ಹಿಂದೂ ಕಾರ್ಯಕರ್ತರು ಶಾಲೆಯ ಬಳಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಮುತ್ತಿಗೆಗೂ ಯತ್ನಿಸಿದ್ದರು. ಈ ಘಟನೆಯ ನಂತ್ರ ಸಂತ ಜೆರೋಸಲಾ ಶಾಲೆಯ ಆಡಳಿತ ಮಂಡಳಿಯು 7ನೇ ತರಗತಿ ಶಿಕ್ಷಕಿ ಪ್ರಭಾ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ. ಈ ಮೂಲಕ ತಾತ್ಕಾಲಿಕವಾಗಿ ಪ್ರಕರಣಕ್ಕೆ ಬ್ರೇಕ್ ನೀಡಲಾಗಿದೆ.

Read More

ಕೇರಳ: ಭಾರತವನ್ನು ಉಳಿಸಿದ್ದಕ್ಕಾಗಿ ಗೋಡ್ಸೆ ಬಗ್ಗೆ ಹೆಮ್ಮೆ ಪಡಬೇಕು ಎಂದು ಕೇರಳದ ಶಿಕ್ಷಕಿಯೋರ್ವರು ಫೆಸ್ ಬುಕ್ ನಲ್ಲಿ ಕಮೆಂಟ್ ಮಾಡಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ಹತ್ಯೆ ಮಾಡಿರುವ ನಾಥೂರಾಮ್ ಗೋಡ್ಸೆಯನ್ನು ವೈಭವೀಕರಿಸಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಪ್ರಾಧ್ಯಾಪಕಿ ಶೈಜಾ ಕಮೆಂಟ್ ಮಾಡಿದ್ದಾರೆ. ಹೀಗಾಗಿ ಮಹಿಳೆಯ ವಿರುದ್ಧ ತನಿಖೆಗಾಗಿ ಕ್ಯಾಲಿಕಟ್ ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಸಮಿತಿಯನ್ನು ರಚಿಸಲಾಗಿದೆ.ವಕೀಲ ಕೃಷ್ಣ ರಾಜ್ ಎಂಬವರ “ನಾಥೂರಾಮ್ ವಿನಾಯಕ್ ಗೋಡ್ಸೆ ಭಾರತದಲ್ಲಿ ಅನೇಕರ ಹೀರೋ ಎಂದು ಗೋಡ್ಸೆ ಎಂಬ ಪೋಸ್ಟ್ ಗೆ ಶಿಕ್ಷಕಿ ಕಮೆಂಟ್ ಮಾಡಿದ್ದಾರೆ.

Read More

ಬಂಟ್ವಾಳ: ಮರ ಸಾಗಿಸುತ್ತಿದ್ದ ಟ್ರಕ್ ಮತ್ತು ಆಟೋರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ರಾತ್ರಿ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಪೊಳಲಿ ಬೆಳಂದೂರು ನಿವಾಸಿ ರಿಕ್ಷಾ ಚಾಲಕ ಚೇತನ್ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಚೇತನ್ ಬಡ್ಡಕಟ್ಟೆಯಿಂದ ಜಕ್ರಿಬೆಟ್ಟು ಕಡೆಗೆ ಹೋಗುತ್ತಿದ್ದ ವೇಳೆ ಬಂಟ್ವಾಳ ಜಕ್ರಿಬೆಟ್ಟು ಪಂಪ್ ಹೌಸ್ ಮುಂದೆ ಬಂಟ್ವಾಳ ಪೇಟೆಯಿಂದ ಹೆದ್ದಾರಿಗೆ ಕ್ರಾಸ್ ಮಾಡುವ ವೇಳೆ ಬೆಳ್ತಂಗಡಿ ಕಡೆಯಿಂದ ಮರದ ದಿಮ್ಮಿಗಳನ್ನು ಹೇರಿಕೊಂಡು ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ರಿಕ್ಷಾ ಸಂಪೂರ್ಣ ಜಖಂ ಗೊಂಡಿದೆ.ಆದರೆ ಚಾಲಕ ಚೇತನ್ ಅವರ ಕಾಲಿಗೆ ಬಲವಾದ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದಾರೆ.

Read More

ಮಂಗಳೂರು: ಕೆಎಸ್ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಫರಂಗಿಪೇಟೆ ಬಳಿಯ ಅರ್ಕುಳ ಕ್ರಾಸ್ ನಲ್ಲಿ ನಡೆದಿದೆ. ಸ್ಥಳದಲ್ಲಿ ಇತ್ತೀಚೆಗೆ ನಡೆದ ಸತತ ಅಪಘಾತಗಳಿಂದ ಕಂಗೆಟ್ಟ ಸ್ಥಳೀಯರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.ಅಪಘಾತದಲ್ಲಿ ಮೃತರನ್ನು ಅರ್ಕುಳದ ಅಬ್ಬೆಟ್ಟು ನಿವಾಸಿ ಚರಣ್ ರಾಜ್ (34) ಎಂದು ಗುರುತಿಸಲಾಗಿದೆ. ಚರಣ್ ಬೆಳಗ್ಗೆ ಅಡ್ಯಾರಿಗೆಂದು ಬರುತ್ತಿದ್ದಾಗ ಅರ್ಕುಳ ಕ್ರಾಸ್ ನಲ್ಲಿ ಹೆದ್ದಾರಿಗೆ ತಿರುವು ಪಡೆಯುತ್ತಿದ್ದಾಗಲೇ ಮಂಗಳೂರಿನಿಂದ ಪುತ್ತೂರಿನತ್ತ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವೃತೆಗೆ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಅರ್ಕುಳ ಕ್ರಾಸ್ ನಲ್ಲಿ ನಿರಂತರ ಅಪಘಾತ ಆಗುತ್ತಿರುವುದರಿಂದ ಬ್ಯಾರಿಕೇಡ್ ಹಾಕಲಾಗಿದೆ. ಭಾನುವಾರ ಆಗಿದ್ದರಿಂದ ಹೆದ್ದಾರಿಯಲ್ಲಿ ವಾಹನ ಕಡಿಮೆ ಇದ್ದುದರಿಂದ ಬಸ್ ಅತಿ ವೇಗದಿಂದ ಧಾವಿಸಿ ಬಂದಿತ್ತು. ಇದೇ ವೇಳೆ, ಸವಾರ ಹೆದ್ದಾರಿ ಕ್ರಾಸ್ ಮಾಡಲು ರಸ್ತೆಯ ಮಧ್ಯಕ್ಕೆ ಬಂದಿದ್ದು, ಬಸ್ ನೇರವಾಗಿ ಬೈಕಿಗೆ ಡಿಕ್ಕಿಯಾಗಿದೆ. ಇದರಿಂದ ಸಿಟ್ಟುಗೊಂಡ ಸ್ಥಳೀಯರು ಹೆದ್ದಾರಿ ತಡೆದು…

Read More

ಸುಳ್ಯ: ನಾಪತ್ತೆಯಾಗಿದ್ದ ಬಾಲಕಿಯನ್ನು ಗಂಟೆಯೊಳಗೆ ಪತ್ತೆಹಚ್ಚಲು‌ ಸಹಕರಿಸಿದ ಮಂಗಳೂರಿನ ಮೂವರು ಪತ್ರಕರ್ತರನ್ನು ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಶನಿವಾರ ಸುಬ್ರಹ್ಮಣ್ಯ ಸಮೀಪದ ಕೊಲ್ಲಮೊಗ್ರದಲ್ಲಿ ಜರುಗಿದ ಪತ್ರಕರ್ತರ 5ನೇ ಗ್ರಾಮ ವಾಸ್ತವ್ಯದಲ್ಲಿ ಸನ್ಮಾನಿಸಿದರು. ಸುಳ್ಯದ ಸರ್ಕಾರಿ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಸುಳ್ಯದಲ್ಲಿ ನಡೆದ ಪತ್ರಕರ್ತರ ಐದನೇ ಗ್ರಾಮವಾಸ್ತವ್ಯದಲ್ಲಿ ಭಾಗವಹಿಸಿದ ಸ್ಪೀಕರ್ ಯು.ಟಿ. ಖಾದರ್ ಅವರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್ ಹಾಗೂ ಗಿರೀಶ್ ಮಳಲಿ ಅವರನ್ನು ಸನ್ಮಾನಿಸಿದರು. ಜೋಯಿಡಾಕ್ಕೆ ಚಾರಣಕ್ಕೆ ಹೊರಟಿದ್ದ ಮಂಗಳೂರಿನ ಪತ್ರಕರ್ತರು ಮೂಲ್ಕಿ ಬಸ್‌ ಸ್ಟ್ಯಾಂಡ್‌ ನಲ್ಲಿ ನಿಂತಿದ್ದಾಗ ಮಗಳು ನಾಪತ್ತೆಯಾಗಿದ್ದಾರೆಂದು ಬಾಗಲಕೋಟ ಮೂಲದ ಕೂಲಿ ಕಾರ್ಮಿಕರೊಬ್ಬರು ಸಾರ್ವಜನಿಕರಲ್ಲಿ ಗೋಗರೆದು ಕಣ್ಣೀರು ಹಾಕುತ್ತಿದ್ದರು. ಇದನ್ನು ಗಮನಿಸಿದ ಪತ್ರಕರ್ತರು ಪ್ರಕರಣದ ಗಂಭೀರತೆ ಅರಿತು ಬಾಲಕಿ ಕೆಎಸ್‌ ಆರ್ ಟಿಸಿ ಬಸ್‌ ನಲ್ಲಿ ತೆರಳಿರುವ ಸುಳಿವಿನ ಆಧಾರದಲ್ಲಿ ಉಡುಪಿ ಎಸ್‌ಪಿ ಡಾ.ಅರುಣ್ ಕೆ. ಅವರ ಸಹಕಾರದಲ್ಲಿ ಉಡುಪಿ ಸಮೀಪ ಬಾಲಕಿಯನ್ನು ಗಂಟೆಯೊಳಗೆ ಪತ್ತೆಹಚ್ಚಲು…

Read More

ಉಳ್ಳಾಲ: ಫೆ.14 ರಂದು ಸೌದಿಗೆ ತೆರಳಬೇಕಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಉಚ್ಚಿಲ ರೈಲ್ವೇ ಗೇಟ್ ಸಮೀಪದ ಹಸೈನಾರ್ ಎಂಬವರ ಪುತ್ರ ಜಾಫರ್ (23) ಮೃತರು. ನಿನ್ನೆ ಸಂಜೆ ವೇಳೆ ಮನೆ ಕಡೆಗೆ ತೆರಳಲು ರೈಲ್ವೇ ಹಳಿಯನ್ನು ದಾಟುವ ಸಂದರ್ಭ ರೈಲು ಢಿಕ್ಕಿ ಹೊಡೆದು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಇತ್ತೀಚೆಗಷ್ಟೇ ಮುಂಬೈನಿಂದ ಊರಿಗೆ ಬಂದಿದ್ದ ಜಾಫರ್, ಸೌದಿ ವೀಸಾ ಬಂದಿರುವ ಹಿನ್ನೆಲೆಯಲ್ಲಿ ಫೆ.14 ರಂದು ಸೌದಿ ರಾಷ್ಟ್ರಕ್ಕೆ ಉದ್ಯೋಗದ ನಿಮಿತ್ತ ತೆರಳುವವರಿದ್ದರು. ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು : ವಾಹನ ಸವಾರರುಫೆಬ್ರವರಿ 17 ರೊಳಗೆ ಹೆಚ್‌ ಎಸ್‌ ಆರ್‌ ಪಿ ನಂಬರ್‌ ಪ್ಲೇಟ್‌ ಅಳವಡಿಸದಿದ್ದರೆ ದಂಡ ಪ್ರಯೋಗಕ್ಕೆ ಸಾರಿಗೆ ಇಲಾಖೆ ಮುಂದಾಗಿದೆ. 2019 ಏಪ್ರಿಲ್ 1ಕ್ಕಿಂತ ಹಳೆಯದಾದ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್-HSRP ಹಾಕಿಸಿಕೊಳ್ಳುವಂತೆ ಸಾರಿಗೆ ಇಲಾಖೆ ನೀಡಿರುವ ಗಡುವು ಫೆ.17ಕ್ಕೆ ಮುಕ್ತಾಯವಾಗಲಿದೆ. ನಂಬರ್ ಪ್ಲೆಟ್ ಬದಲಾವಣೆಗೆ ಹಲವು ವಾಹನ ಮಾಲೀಕರು ಆಸಕ್ತಿ ತೋರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬಿಸಿ ಮುಟ್ಟಿಸಲು ಇಲಾಖೆ ಮುಂದಾಗಿದೆ. ವಾಹನಗಳಿಗೆ ಹೆಚ್ ಎಸ್ ಆರ್ ಪಿ ಅಳವಡಿಸದೇ ಮೊದಲ ಬಾರಿ ಸಿಕ್ಕಿಬಿದ್ದರೆ 1000 ರೂಪಾಯಿ ದಂಡ, 2ನೇ ಬಾರಿ ಸಿಕ್ಕಿ ಬಿದ್ದರೆ 2000 ರೂಪಾಯಿ ದಂಡ ಹಾಕಲಾಗುತ್ತದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ…

Read More