ಚಾರ್ಮಾಡಿ ಘಾಟ್ ತಪ್ಪಲಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಮತ್ತೆ ಗುಡ್ಡ ಕುಸಿದಿದೆ. ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ ಮತ್ತು ಬಂಡೆಗಳು ಕುಸಿದಿವೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು ರಸ್ತೆಯಲ್ಲಿ ಧಾರಾಳ ನೀರು ಹರಿಯುತ್ತಿದೆ. ಬೆಂಗಳೂರಿನಿಂದ ದಕ್ಷಿಣ ಕನ್ನಡ, ಉಡುಪಿ ಭಾಗಗಳಿಗೆ ತೆರಳುವ ಮಂದಿ ಶಿರಾಡಿ ಮೂಲಕ ತೆರಳುತ್ತಿದ್ದರು. ಆದರೆ ಶಿರಾಡಿ ಘಾಟಿಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತದ ಪ್ರಕರಣಗಳು ವರದಿಯಾಗುತ್ತಿವೆ. ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಯನ್ನು ಚಾರ್ಮಾಡಿ ಘಾಟ್ ಸಂಪರ್ಕಿಸುವ ಕಾರಣ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದೆ. ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Author: main-admin
ಮಂಗಳೂರು: ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಅಪಹರಿಸಿ, ಅರೆನಗ್ನಗೊಳಿಸಿ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಪಾಂಡೇಶ್ವರ ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ಬುಧವಾರ ಬಂಧಿಸಿದ್ದಾರೆ. ದಿಯಾನ್, ಅಫ್ಘಾನ್, ಸಲ್ಮಾನ್ ಬಂಧಿತ ಆರೋಪಿಗಳು. ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆ.14ರಂದು ನೆಹರೂ ಮೈದಾನದಲ್ಲಿ ನಡೆದ ಫುಟ್ಬಾಲ್ ಪಂದ್ಯಾಟದ ಸಂದರ್ಭ ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಇದೇ ಕೋಪದಲ್ಲಿ ಆ.19ರಂದು ಸಂಜೆ ಪಾಂಡೇಶ್ವರದಲ್ಲಿ ನಿಂತಿದ್ದ ಅಪ್ರಾಪ್ತ ವಯಸ್ಸಿನ ಮೂವರು ವಿದ್ಯಾರ್ಥಿಗಳನ್ನು ತಂಡವೊಂದು ಕಾರಿನಲ್ಲಿ ಅಪಹರಿಸಿ ಅರೆಬೆತ್ತಲೆಗೊಳಿಸಿ ಅಮಾನುಷ ವಾಗಿ ಹಲ್ಲೆ ನಡೆಸಿ, ಕೈಮುಗಿದು ಕ್ಷಮೆ ಕೇಳುವಂತೆ ಒತ್ತಾಯಿಸಿದೆ. ಅಲ್ಲದೆ ದುಷ್ಕರ್ಮಿಗಳು ತಾವು ಹಲ್ಲೆ ನಡೆಸಿರುವ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಪ್ರಕರಣ ಬಯಲಾಗುತ್ತಿದ್ದಂತೆ ಪಾಂಡೇಶ್ವರ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಅದರಂತೆ ವಿದ್ಯಾರ್ಥಿಗಳಾದ ದಿಯಾನ್, ಅಫ್ಘಾನ್, ಸಲ್ಮಾನ್‌ರನ್ನು ಬಂಧಿಸಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿರುವ ಇಬ್ಬರು ಅಪ್ರಾಪ್ತರ ಸಹಿತ ಇನ್ನೂ ಕೆಲವರು…
ಮಂಗಳೂರು : ಎಂಎಲ್ ಸಿ ಐವನ್ ಡಿಸೋಜಾ ಅವರ ಮಂಗಳೂರಿನ ಮನೆ ಮೇಲೆ ಕಲ್ಲೆಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಎಂಎಲ್ ಸಿ ಐವನ್ ಡಿಸೋಜಾ ಅವರ ಮನೆ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಐವಾನ್ ಡಿಸೋಜಾ ಅವರು ಇತ್ತೀಚೆಗಷ್ಟೇ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಗೆಹ್ಲೋಟ್ ಅವರಂತಹ ಕುತಂತ್ರಿ ದೇಶದಲ್ಲಿ ಬೇರೆ ಯಾರೂ ಇಲ್ಲ. ರಾಷ್ಟ್ರಪತಿಗಳು ಕೂಡಲೇ ಅವರನ್ನು ವಾಪಸ್ ಕರೆಸಿಕೊಳ್ಳಬೇಕು. ಇಲ್ಲದಿದ್ದರೆ ಬಾಂಗ್ಲಾದೇಶದ ಪ್ರಧಾನಮಂತ್ರಿಗಳಿಗೆ ಬಂದ ಪರಿಸ್ಥಿತಿಯೇ ಇವರಿಗೂ ಬಂದೊದಗಲಿದೆ ಎಂದು ಹೇಳಿದ್ದರು.
ಕಾರ್ಕಳ: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟು ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆ ನಿವಾಸಿ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿ. ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಜನಿತ್, ಇಂದು ಬೆಳಿಗ್ಗೆ ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದಾಗ ಬಸ್ ಚಲಿಸುತ್ತಿದ್ದಾಗಲೇ ಕೆಳಕ್ಕೆ ಎಸೆಯಲ್ಪಟ್ಟಿದ್ದಾನೆ. ಮುಂದಿನ ಬಾಗಿಲಿನಿಂದ ರಸ್ತೆಗೆ ಬಿದ್ದ ಆತನ ಮೈಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದಿದ್ದು ಗಂಭೀರ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿಂದ ಉಡುಪಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಜನಿತ್ ಶೆಟ್ಟಿ ಕೊನೆಯುಸಿರೆಳೆದಿದ್ದಾನೆ. ಮೃತ ಯುವಕ ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ.
ಮಂಗಳೂರು: ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಹಿಂಸೆಯ ಆತಂಕಕಾರಿ ಘಟನೆಗಳ ಹೆಚ್ಚಳಕ್ಕೆ ಪ್ರತಿಕ್ರಿಯೆಯಾಗಿ ಮಂಗಳೂರಿನ ಪ್ರಮುಖ ಸಂಘಟನೆಗಳ ಒಕ್ಕೂಟವು ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಐಕ್ಯ ಪ್ರತಿಭಟನೆಯನ್ನು ಆಗಸ್ಟ್ 23 ರಂದು ಮಧ್ಯಾಹ್ನ 3:30 ಗಂಟೆಗೆ ಮಂಗಳೂರಿನ ಟೌನ್ ಹಾಲ್ ಬಳಿ ಆಯೋಜಿಸಿದೆ. ಈ ಮಹತ್ವದ ಕಾರ್ಯಕ್ರಮವನ್ನು ಮಂಗಳೂರು ಧರ್ಮಕ್ಷೇತ್ರದ ಮಹಿಳಾ ಮತ್ತು ಸಾಮಾಜಿಕ ನ್ಯಾಯ ಆಯೋಗಗಳು ಮತ್ತು ಯುವ ಮತ್ತು ಸಾಮಾಜಿಕ ಸಂವಹನ ಆಯೋಗಗಳು, ಅಖಿಲ ಕರ್ನಾಟಕ ಮಾನವ ಹಕ್ಕುಗಳ ಸಂಯುಕ್ತ ಕ್ರೈಸ್ತ ಐಕ್ಯತಾ ವೇದಿಕೆ (AKUCFHR), ಕಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ), ಮದರ್ ಥೆರೆಸಾ ವಿಚಾರ ವೇದಿಕೆ, ಸೇಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಮತ್ತು ಕಾನ್ಫರೆನ್ಸ್ ಆಫ್ ರಿಲಿಜಿಯಸ್ ಇಂಡಿಯಾ (CRI) ಮಂಗಳೂರು ಘಟಕ ಜಂಟಿಯಾಗಿ ಆಯೋಜಿಸಿವೆ. ಇತ್ತೀಚಿನ ದಿನಗಳಲ್ಲಿ ರಾಷ್ಟ್ರದಾದ್ಯಂತ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನೊಳಗೊಂಡ ಘಟನೆಗಳು ಹೆಚ್ಚಾಗಿ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಆಯೋಜಿಸಲಾಗಿದೆ. ಇಂತಹ ಘಟನೆಗಳಲ್ಲಿ ಕೆಲವು ದಿನನಿತ್ಯದ ಮುಖ್ಯಾಂಶಗಳಾದರೆ , ಇತರ ಘಟನೆಗಳು ಗಮನಕ್ಕೆ…
ಬ್ರಹ್ಮಾವರ: ಫೈನಾನ್ಸಿನಲ್ಲಿ ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಯಲ್ಲಿ ಕೊಡಿಸುವುದಾಗಿ ನಂಬಿಸಿ ಹಲವರಿಗೆ ಒಟ್ಟು 75 ಲಕ್ಷರೂ.ಗಳನ್ನು ವಂಚಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಸುವಾಸಿನಿ ಹಾಗೂ ಆತನ ಸಹೋದರ ವಾದಿರಾಜ ಎಂಬವರು ನಡೂರಿನ ನಿತ್ಯಾನಂದ ಎಂಬವರಿಗೆ 35 ಲಕ್ಷ ರೂ.ಸೇರಿದಂತೆ ಹಲವರಿಗೆ ಒಟ್ಟು 75 ಲಕ್ಷ ರೂ.ವಂಚಿಸಿದ್ದಾರೆ. ಮಣಿಪಾಲದ ಹಣಕಾಸು ಸಂಸ್ಥೆಯೊಂದರಿಂದ ಹರಾಜಿನ ಮೂಲಕ ಪಡೆದ ಚಿನ್ನವನ್ನು ಕಡಿಮೆ ಬೆಲೆಗೆ ನೀಡುವುದಾಗಿ ಇವರು ನಿತ್ಯಾನಂದ (64) ಹಾಗೂ ಇತರರನ್ನು ನಂಬಿಸಿ 2023ರ ಡಿ.11ರಿಂದ 2024ರ ಜು.16ರವರೆಗೆ ಈ ಹಣವನ್ನು ಪಡೆದಿದ್ದರು ಎನ್ನಲಾಗಿದೆ. ಆದರೆ ಇದುವರೆಗೂ ಅವರು ಹೇಳಿದ ಚಿನ್ನವನ್ನು ನೀಡದೇ, ಹೂಡಿಕೆ ಮಾಡಿದ ಹಣವನ್ನು ಹಿಂದಿರುಗಿಸದೇ ಮೋಸ ಮಾಡಿರುವುದಾಗಿ ಮತ್ತು ಹಣವನ್ನು ವಾಪಾಸು ಕೇಳಿದ್ದಕ್ಕೆ ಆರೋಪಿಗಳು ಬೆದರಿಕೆ ಹಾಕಿರುವುದಾಗಿ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ : ಬಿ ಸಿ ರೋಡಿನ ಹಳೆ ತಾಲೂಕು ಕಚೇರಿ ಬಳಿ ನಿಲ್ಲಿಸಿದ್ದ ಬೈಕ್ ಕಳವುಗೈದಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ನಿವಾಸಿ ಮೋಹನ್ ಅವರಿಗೆ ಸೇರಿದ ಬೈಕ್ ಕಳವಾಗಿದೆ. ಇವರು ಸೋಮವಾರ (ಆಗಸ್ಟ್ 19) ಸಂಜೆಯ ವೇಳೆ, ಬಂಟ್ವಾಳ ಹಳೆ ತಾಲೂಕು ಕಛೇರಿ ಬಳಿ ತನ್ನ KA19ET7355 ನೋಂದಣಿ ಸಂಖ್ಯೆಯ ಪಲ್ಸರ್ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಹೋಗಿದ್ದರು. ಅದೇ ದಿನ ರಾತ್ರಿ ಸ್ಥಳಕ್ಕೆ ಬಂದು ನೋಡಿದಾಗ ತನ್ನ ದ್ವಿಚಕ್ರ ವಾಹನ ಕಾಣದಿದ್ದು, ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಿದರೂ ಪತ್ತೆಯಾಗಲಿಲ್ಲ. ಕಳವಾದ ದ್ವಿಚಕ್ರ ವಾಹನದ ಮೌಲ್ಯ 40 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ 142/2024 ಕಲಂ: 303(2) BNS -2023 ರಂತೆ ಪ್ರಕರಣ ದಾಖಲಾಗಿರುತ್ತದೆ.
ಕಾಸರಗೋಡು : ಮಹಿಳೆಯೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯ ಘಟನೆ ನಗರ ಹೊರವಲಯದ ಬಟ್ಟಂಪಾರೆಯಲ್ಲಿ ನಡೆದಿದೆ. ಬಟ್ಟಂಪಾರೆಯ ಎಸ್ . ಶಿವ ರವರ ಪತ್ನಿ ಶರ್ಮಿಳಾ ( 44) ಮೃತ ಮಹಿಳೆ. ಸೋಮವಾರ ರಾತ್ರಿ ಸುಮಾರು11.30 ಗಂಟೆಯ ಬಳಿಕ ಇವರು ಮನೆಯಿಂದ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಹುಡುಕಾಡಿದಾಗ ತಡರಾತ್ರಿ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕಾಸರಗೋಡಿನಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬಂದಿಗಳು ಮೃತ ದೇಹವನ್ನು ಮೇಲಕ್ಕೆತ್ತಿದರು . ಶರ್ಮಿಳಾರ ಪತಿ ಶಿವ ಅಮೈ ರಸ್ತೆ ಬಳಿಯ ಅಕೌಂಟೆಂಟ್ ಕಚೇರಿ ನಡೆಸುತ್ತಿದ್ದು ಇದೇ ಕಚೇರಿಯಲ್ಲಿ ಶರ್ಮಿಳಾ ಕೂಡಾ ಅಕೌಂಟೆಂಟ್ ಆಗಿ ದುಡಿಯುತ್ತಿದ್ದರು. ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಉಡುಪಿ: ಮೊಬೈಲ್ ಕೊಡದಿದ್ದಕ್ಕೆ ಮನೆಬಿಟ್ಟು ಹೋಗಿ, ಬಳಿಕ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹಿಡಿಯಡಕ ಅಂಜಾರು ಪೊಲೀಸ್ ಠಾಣೆಯ ಕ್ವಾಟ್ರಸ್ ಬಳಿ ನಿವಾಸಿ ಪ್ರಥಮೇಶ್ (16) ಎಂದು ಗುರುತಿಸಲಾಗಿದೆ. ಈತ ಹಿರಿಯಡಕ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ನಿನ್ನೆ ಮೊಬೈಲ್ ಕೊಡದಿದ್ದಕ್ಕೆ ಆತ ಮನೆಬಿಟ್ಟು ಹೋಗಿದ್ದನು. ಬಳಿಕ ಮನೆಯವರು ಹಾಗೂ ಸ್ನೇಹಿತರು ಎಷ್ಟೇ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಇಂದು ಬೆಳಿಗ್ಗೆ ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯ ಬಾವಿಯೊಂದರಲ್ಲಿ ಪ್ರಥಮೇಶ್ ಮೃತದೇಹ ಪತ್ತೆಯಾಗಿದೆ. ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು: ಮುಸ್ಲಿಂ ಯುವತಿಗೆ ಹಿಂದೂ ಯುವಕ ಚೂರಿ ಇರಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇಬ್ಬರು ಒಂದೇ ಕಾಲೇಜಿಗೆ ಸೇರಿದ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದ್ದು, ಬಾಲಕಿ ಮುಸ್ಲಿಂ ಸಮುದಾಯಕ್ಕೆ ಸೇರಿದ್ದು, ಬಾಲಕ ಹಿಂದೂ ಸಮುದಾಯಕ್ಕೆ ಸೇರಿದವನು ಎಂದು ತಿಳಿದು ಬಂದಿದೆ. ಬಾಲಕಿಗೆ ನಿನ್ನನ್ನು ಲವ್ ಮಾಡುತ್ತೇನೆ ಎಂದು ಹೇಳಿದ್ದಕ್ಕೆ ವಿಧ್ಯಾರ್ಥಿನಿ ಬಾಲಕನಿಗೆ ಬೈದಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಬಾಲಕ ಬಾಲಕಿಯ ಕೈಗೆ ಬ್ಲೇಡ್ ನಿಂದ ಇರಿದು ಪರಾರಿಯಾಗಿದ್ದಾನೆ. ಬಾಲಕಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವೇಳೆ ಆಸ್ಪತ್ರೆಯಲ್ಲಿ ಹೆಸರು ಬದಲಾಯಿಸಿ ಹೇಳುವಂತೆ ಶಿಕ್ಷಕಿ ಒತ್ತಡ ಹೇರಿದ್ದಲ್ಲದೆ, ಕೈಗೆ ಗಾಜು ತಾಗಿ ಗಾಯವಾಗಿದೆ ಎಂದು ಹೇಳಲು ಶಿಕ್ಷಕಿ ಒತ್ತಾಯಿಸಿದ್ದಾರೆ ಎಂದು ಸಂತ್ರಸ್ಥೆ ಬಾಲಕಿ ಆರೋಪಿಸಿದ್ದಾಳೆ. ಸದ್ಯ ಆಸ್ಪತ್ರೆಯ ಮುಂದೆ ಜನಸ್ತೋಮ ಸೇರಿದ್ದು, ಸ್ಥಳದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ. ನೆರೆದಿದ್ದ ಜನರನ್ನು ಪೊಲೀಸರು ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದಾರೆ.