ಮುಲ್ಕಿ: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಓರ್ವ ವಾರಂಟ್ ಆಸಾಮಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ತಿಮ್ಮಪುರ ನಿವಾಸಿ ಜಗ್ಗು ಯಾನೆ ಜಗದೀಶ್ (34) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2018ರಲ್ಲಿ ನಡೆದಿದ್ದ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು, ಕಳೆದ 4ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೂಡಬಿದ್ರೆ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಆದೇಶದಂತೆ ಪಣಂಬೂರು ಎಸಿಪಿ ಶ್ರೀಕಾಂತ್ ಅವರ ನಿರ್ದೇಶನದಲ್ಲಿ ಮುಲ್ಕಿ ಪೋಲೀಸ್ ಠಾಣೆಯ ಪೋಲೀಸ್ ನಿರೀಕ್ಷಕರಾದ ಮಂಜುನಾಥ ಬಿ.ಎಸ್ ರವರ ಮಾರ್ಗದರ್ಶನದಂತೆ ಠಾಣಾ ಪಿಎಸ್ಸೈ ರಾಘವೇಂದ್ರ ನಾಯ್ಕ್ ಅವರ ಮಾರ್ಗದರ್ಶನದಂತೆ ಎಚ್.ಸಿ. ಉದಯ್ ಹಾಗೂ ಸಿ.ಪಿ.ಸಿ ಅರುಣ್ ಕುಮಾರ್ ಅವರು ಬಾದಾಮಿ ತಾಲೂಕಿನ ಚಿಂಚನಹಳ್ಳಿ ಎಂಬಲ್ಲಿ ಆರೋಪಿಯನ್ನು ಪತ್ತೆಹಚ್ಚಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
Author: main-admin
ತುಮಕೂರು: ಕಬಡ್ಡಿ ಪಂದ್ಯಾವಳಿಯ ವೇಳೆ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯವು ಪೊಲೀಸರಿಗೆ ಮಹತ್ವದ ಆದೇಶ ನೀಡಿದೆ. ಇತ್ತೀಚೆಗೆ ನಡೆದ ಕಬಡ್ಡಿ ಟೂರ್ನಿಯೊಂದರಲ್ಲಿ ಭಾಗವಹಿಸಿದ್ದ ಗೃಹ ಸಚಿವರು, ಆಟದ ಭರದಲ್ಲಿ 500 ರೂಪಾಯಿ ಬೆಟ್ಟಿಂಗ್ ಕಟ್ಟುವುದಾಗಿ ಹೇಳಿಕೆ ನೀಡಿದ್ದರು. ಸಾರ್ವಜನಿಕವಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೇ ಬೆಟ್ಟಿಂಗ್ ಪ್ರೋತ್ಸಾಹಿಸುವುದು ಅಥವಾ ಅದರಲ್ಲಿ ಭಾಗಿಯಾಗುವುದು ಅಪರಾಧ ಎಂದು ಆಕ್ಷೇಪ ವ್ಯಕ್ತಪಡಿಸಿ ಹೆಚ್.ಆರ್. ನಾಗಭೂಷಣ್ ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ದೂರನ್ನು ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಜೆಎಂ (ACJM) ನ್ಯಾಯಮೂರ್ತಿ ಕೆ.ಎನ್. ಶಿವಕುಮಾರ್ ಅವರು, ಗೃಹ ಸಚಿವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆದೇಶಿಸಿದ್ದಾರೆ. ಈ ಕುರಿತು ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತುಮಕೂರಿನ ಕೂಡಿಗೇಹಳ್ಳಿ ಪೊಲೀಸ್ ಠಾಣೆಗೆ ನ್ಯಾಯಾಲಯ ಸೂಚನೆ ನೀಡಿದೆ
ಉಡುಪಿ: ಕಾಪು ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹ ಸವಾರೆಯಾಗಿ ಬಂದಿದ್ದ ಬಾಲಕಿ ಸಾತ್ವಿ ಶೆಟ್ಟಿ (8) ತೀವ್ರಗಾಯಗಳೊಂದಿಗೆ ಸಾವನ್ನಪ್ಪಿದ್ದಾಳೆ. ಮೃತ ಸಾತ್ವಿ ತನ್ನ ತಂದೆ ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾಳೆ.ದುಬಾಯಿಯಲ್ಲಿ ವಾಸವಿದ್ದ ಈ ಕುಟುಂಬವು ಮುಂದೆ ಊರಿನಲ್ಲಿಯೇ ನೆಲೆಸುವ ಸಿದ್ಧತೆಯಲ್ಲಿತ್ತು. ಸಾತ್ವಿಗಾಗಿ ಆಕೆಯ ಹೆತ್ತವರು ಉಡುಪಿಯ ಖಾಸಗಿ ಶಾಲೆಯಲ್ಲಿ ಪ್ರವೇಶಾತಿಯನ್ನೂ ಮುಗಿಸಿದ್ದರು. ನಾಳೆ ಆಕೆಯ ತಂದೆ ನಿತ್ಯಾನಂದ ಶೆಟ್ಟಿ ಅವರು ಮಾತ್ರ ದುಬಾಯಿಗೆ ತೆರಳುವವರಿದ್ದು, ಕಾಪು ಪೇಟೆಗೆ ಏನನ್ನೋ ತರಲು ಹೋಗಿ ವಾಪಾಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ತಾಣಕ್ಕೂ ಅವರ ಪೂವಣಿಗುತ್ತು ಮನೆಗೂ ಕೇವಲ ಅರ್ಧ ಕಿ.ಮೀ. ದೂರವಷ್ಟೇ ಬಾಕಿ ಇತ್ತು. ಸ್ಕೂಟಿ ಸವಾರ ನಿತ್ಯಾನಂದ ಶೆಟ್ಟಿ ಅವರಿಗೂ ಗಾಯಗಳಾಗಿವೆ. ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮಂಗಳೂರು: ಪ್ರಾರ್ಥನಾ ಕ್ರಿಯೇಷನ್ಸ್ ಮಂಗಳೂರು ಲಾಂಛನದಲ್ಲಿ ಬಹುಭಾಷೆಯಲ್ಲಿ ಡಾ| ಆರ್. ಧನರಾಜ್ ನಿರ್ದೇಶನದಲ್ಲಿ ತಯಾರಾಗುತ್ತಿರುವ “ಕೊರಗ್ಲಾ ತನಿಯಾ” (ಕೊರಗಜ್ಜ) ಮತ್ತು “ಕನ” ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ಎಪ್ರಿಲ್ 23 ಗುರುವಾರ ಬೆಳಿಗ್ಗೆ 9 ಗಂಟೆಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.ವಜ್ರದೇಹಿ ಮಠದ ಸ್ವಾಮೀಜಿ ಶ್ರೀ ರಾಜಶೇಖರಾನಂದ ಸ್ವಾಮೀಜಿ ದೀಪ ಪ್ರಜ್ವಲನೆ ಮಾಡಲಿದ್ದಾರೆ. “ಕೊರಗ್ಲಾ ತನಿಯಾ” ಸಿನಿಮಾಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರಂಭ ಫಲಕ ತೋರಿಸಲಿದ್ದಾರೆ. ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಕ್ಯಾಮರ ಚಾಲನೆಗೈಯಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.”ಕನ” ತುಳು ಸಿನಿಮಾಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಆರಂಭ ಫಲಕ ತೋರಿಸಲಿದ್ದಾರೆ. ವಿಧಾನ ಸಭಾಧ್ಯಕ್ಷರಾದ ಯು.ಟಿ ಖಾದರ್ ಮತ್ತು ಬಹುಭಾಷಾ ನಟ ಸುಮನ್ ತಲ್ವಾರ್ ದೀಪ ಬೆಳಗಿಸಲಿದ್ದಾರೆ. ಶಾಸಕರಾದ ಸಿ.ಬಿ. ಸುರೇಶ್ ಬಾಬು ಕ್ಯಾಮರ ಚಾಲನೆಗೈಯಲಿದ್ದಾರೆ.ಸಂಸದರು, ಶಾಸಕರು…
ಮಂಗಳೂರು: ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಎಸ್‌ಪಿ ಎಸ್.ಎಸ್. ಕಾಶಿ ನೀಡಿರುವ ದೂರಿನ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸದ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸಲೀಂ ಅವರು ಮೌನವಾಗಿ ನಿರ್ಗಮಿಸಿದ ಘಟನೆ ನಡೆದಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಗುರುವಾರ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರ ವ್ಯಾಪ್ತಿಯ ಪೊಲೀಸ್ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಸಭೆಯ ನಂತರ ಮಾಹಿತಿ ನೀಡಿದ ಡಿಜಿಪಿ ಸಲೀಂ ಅವರು, “ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಪ್ರಗತಿಯ ಬಗ್ಗೆ ಸುದೀರ್ಘ ಸಭೆ ನಡೆಸಲಾಗಿದೆ. ಕಳೆದ ಒಂದು ವರ್ಷದಿಂದ ಈ ಭಾಗದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಅತ್ಯಂತ ತೃಪ್ತಿಕರವಾಗಿದೆ. ಇದೇ ಶಿಸ್ತು ಮತ್ತು ಕಾರ್ಯವೈಖರಿಯನ್ನು ಮುಂದೆಯೂ ಮುಂದುವರಿಸಿಕೊಂಡು ಹೋಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ,” ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ಪೊಲೀಸ್ ಸಿಬ್ಬಂದಿಯ ವರ್ಗಾವಣೆ ವಿಚಾರವಾಗಿ…
ಮಂಗಳೂರು : ನಗರದ ನಂತೂರು ಜಂಕ್ಷನ್‌ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಬೈಕ್ ಸವಾರನೊಬ್ಬ ಹಲ್ಲೆ ನಡೆಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ಏಪ್ರಿಲ್ 18ರಂದು ನಡೆದಿದೆ. ಹಲ್ಲೆಯಿಂದ ಗಾಯಗೊಂಡ ಸಿಪಿಸಿ ಪ್ರವೀಣ್ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಪ್ರಿಲ್ 18 ರಂದು ಮಧ್ಯಾಹ್ನ 12:37ರ ಸುಮಾರಿಗೆ ಸಂಚಾರ ಪೂರ್ವ ಪೊಲೀಸ್ ಠಾಣೆಯ ಹಲೇಷಾ, ಪ್ರವೀಣ್ ಮತ್ತು ಚಂಪಾ ಅವರು ನಂತೂರು ಜಂಕ್ಷನ್‌ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ ಪದವು ಕಡೆಯಿಂದ ಬೈಕ್‌ನಲ್ಲಿ ಮಹಿಳೆಯೊಂದಿಗೆ ಬಂದ ಸವಾರನು, ‘ಫ್ರೀ ಲೆಫ್ಟ್’ (Free Left) ರಸ್ತೆಯಲ್ಲಿ ವಾಹನವನ್ನು ಅಡ್ಡಲಾಗಿ ನಿಲ್ಲಿಸಿದ್ದನು. ಇದರಿಂದ ಇತರ ವಾಹನಗಳಿಗೆ ಅಡಚಣೆಯಾಗುತ್ತಿರುವುದನ್ನು ಗಮನಿಸಿದ ಹಲೇಷಾ ಅವರು ಬೈಕನ್ನು ಮುಂದಕ್ಕೆ ಕೊಂಡು ಹೋಗುವಂತೆ ಸೂಚಿಸಿದರು. ಇದರಿಂದ ಕೆರಳಿದ ಸವಾರನು ಪೊಲೀಸರನ್ನು “ಬೇವರ್ಸಿ”, “ನಾಯಿಗಳು” ಎಂದು ಅತ್ಯಂತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದನ್ನು ಪ್ರಶ್ನಿಸಿದ ಸಿಪಿಸಿ ಪ್ರವೀಣ್ ಅವರ ಮುಖಕ್ಕೆ ಹೊಡೆದು ಗಾಯಗೊಳಿಸಿದ್ದಾನೆ. ಅಲ್ಲದೆ, ಅವರ ಕೈಯಲ್ಲಿದ್ದ ಸುಮಾರು…
ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಂಡು ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಪಡುತೋನ್ಸೆ ಗ್ರಾಮದ ಕೆಮ್ಮಣ್ಣು ಭಾಗದಲ್ಲಿರುವ ಸದಾಫ್ ಜಿ ಮೊಹಮ್ಮದ್ ಮನೆ ಬಳಿ ಪೊಲೀಸರು ದಾಳಿ ನಡೆಸಿದ ವೇಳೆ, ಆರೋಪಿ ಮನೆಯ ಟೆರೆಸ್‌ನಿಂದ ಪಕ್ಕದ ಶೆಡ್ ಮೇಲ್ಚಾವಣಿಗೆ ಜಿಗಿದು ತಪ್ಪಿಸಿಕೊಂಡಿರುವ ಘಟನೆ ನಡೆದಿದೆ. ಮಲ್ಪೆ ಠಾಣೆಯ ಪಿಎಸ್‌ಐ ಗಂಗಪ್ಪ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಸ್ಥಳೀಯರ ಮಾಹಿತಿಯ ಮೇರೆಗೆ ಮೂರು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಒಂದು ಹುಂಡೈ ಐ20 ಕಾರಿಗೆ ಮಾರುತಿ ಸುಜುಕಿ ಬಲೆನೊ ಕಾರಿನ ನಕಲಿ ನಂಬರ್ ಪ್ಲೇಟ್ ಅಳವಡಿಸಿರುವುದು ಪತ್ತೆಯಾಗಿದೆ. ಜೊತೆಗೆ ಹೊಂಡಾ ಸಿಟಿ ಮತ್ತು ಸ್ವಿಫ್ಟ್ ಕಾರುಗಳ ಮೇಲೂ ಅನುಮಾನ ವ್ಯಕ್ತವಾಗಿದೆ. ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಮೂರು ಕಾರುಗಳನ್ನು ಪೊಲೀಸರು ಮಹಜರು ನಡೆಸಿ ವಶಪಡಿಸಿಕೊಂಡಿದ್ದಾರೆ. ಆರೋಪಿ ಸದಾಫ್ ಜಿ ಮೊಹಮ್ಮದ್ ಈಗಾಗಲೇ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ನಕಲಿ ನಂಬರ್ ಪ್ಲೇಟ್ ಬಳಸಿ ತೆರಿಗೆ ತಪ್ಪಿಸಿ ಅಕ್ರಮ…
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸುವ ಬೆಳವಣಿಗೆಯಲ್ಲಿ, ಡಿ ಸಿ ಆರ್ ಇ ಎಸ್ ಪಿ ಕಾಶಿನಾಥ್ ಅವರು ಹಿರಿಯ IPS ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ DGP ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ, “30 ನಿಮಿಷ ಸಮಯ ನೀಡಿದರೆ IPS ಅಧಿಕಾರಿಯ ಕರ್ಮಕಾಂಡವನ್ನು ಸಂಪೂರ್ಣವಾಗಿ ಬಯಲು ಮಾಡುತ್ತೇನೆ” ಎಂದು SP ಕಾಶಿನಾಥ್ ಸ್ಪಷ್ಟವಾಗಿ ತಿಳಿಸಿದ್ದಾರೆ. DGP ಅವರಿಗೆ ಬರೆದಿರುವ ಪತ್ರದಲ್ಲಿ ಮಾನಸಿಕ ಕಿರುಕುಳ ಮತ್ತು ತಾರತಮ್ಯ ಆರೋಪಗಳನ್ನು ಉಲ್ಲೇಖಿಸಿರುವ ಅವರು, ತನ್ನ ಮೇಲೆ ಅನ್ಯಾಯವಾಗುತ್ತಿರುವುದಾಗಿ ದೂರಿದ್ದಾರೆ. SP ಅವರ ಪ್ರಕಾರ, “ಅವರು ಹೇಳಿದಂತೆ ಕೆಲಸ ಮಾಡದಿದ್ದರೆ ಮೆಮೊ ನೀಡುವ ಮೂಲಕ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ವಿಶೇಷವಾಗಿ ಕರ್ನಾಟಕದ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ. ಈ ಕುರಿತು ಈಗಾಗಲೇ ಹಲವು ಬಾರಿ ಲಿಖಿತ ದೂರು ನೀಡಿದ್ದರೂ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಅಲ್ಲದೇ, ಈ ವಿಷಯವನ್ನು…
ಮಂಗಳೂರು: ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ವಸಂತ ಪೂಜಾರಿ(60) ಎಂದು ಗುರುತಿಸಲಾಗಿದ್ದು, ಶಬರಿಮಲೆ ಯಾತ್ರೆಗಾಗಿ ಮಂಗಳೂರಿನಿಂದ ಕೇರಳಕ್ಕೆ ರೈಲು ಮೂಲಕ ಅವರು ಏ.17 ರಂದು ಪ್ರಯಾಣಿಸಿದ್ದರು. ಅದೇ ದಿನ ರಾತ್ರಿ ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೇರಳದ ತ್ರಿಶೂರ್ ಆಸ್ಪತ್ರೆಗೆ ಅವರನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಶನಿವಾರ ತಡರಾತ್ರಿ ಸಾವನ್ನಪ್ಪಿದ್ದರು. ಇಂದು (ಏ.19) ಮೃತದೇಹವನ್ನು ಸ್ವಗ್ರಾಮಕ್ಕೆ ರವಾನಿಸಲಾಗಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.
ಮಂಗಳೂರು : ನಗರದ ಜೆಪ್ಪಿನಮೊಗರು ಪ್ರದೇಶದಲ್ಲಿ ಬೃಹತ್ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ವೇಳೆ, ಕೆಎ-70-ಕೆ-3333 ಸಂಖ್ಯೆಯ ಬಜಾಜ್ ಫ್ರೀಡಂ ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.ಬಂಧಿತ ಆರೋಪಿಗಳನ್ನು ಮಂಗಳೂರಿನ ಪರ್ವೇಜ್ @ ದಾವೂದ್ ಪರ್ವೇಜ್ (40), ನಜರತ್ ಅಲಿ (37)ಎಂದು ಗುರುತಿಸಲಾಗಿದೆ.ಆರೋಪಿಗಳಿಂದ ರೂ. 46,50,000 ಮೌಲ್ಯದ 465.8 ಗ್ರಾಂ ತೂಕದ MDMA ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತನಿಖೆಯಲ್ಲಿ ಪರ್ವೇಜ್ ಮಂಗಳೂರಿನ ಯುವ ಸಮುದಾಯ ಮತ್ತು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು, ಜಿಲ್ಲೆಯ ಹೊರಗಿನಿಂದ MDMA ತರಿಸಿ ನಗರದಲ್ಲಿ ಮಾರಾಟ ಮತ್ತು ಸರಬರಾಜು ಮಾಡಲು ಯತ್ನಿಸುತ್ತಿದ್ದದ್ದು ಬೆಳಕಿಗೆ ಬಂದಿದೆ.ಈತನ ವಿರುದ್ಧ ಪಾಂಡೇಶ್ವರ, ವಾಮಂಜೂರು, ಬಂದರು ಪೊಲೀಸ್ ಠಾಣೆಗಳ ಜೊತೆಗೆ ಬೆಂಗಳೂರಿನ ಅಮೃತಹಳ್ಳಿ ಹಾಗೂ ಉಡುಪಿ ಸೆನ್ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ಪ್ರಕರಣಗಳು…










