ಪುತ್ತೂರು: ಪುತ್ತೂರು ದರ್ಬೆ ಸಮೀಪ ಕಾನಾವು ಕಟ್ಟಡದ ಮುಂಭಾಗದಲ್ಲಿ ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಜು.14 ರ ಮಧ್ಯಾಹ್ನ ನಡೆದಿದೆ. ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ. ಕಾರಿನ ಬ್ಯಾಟರಿಯಲ್ಲಿ ದೋಷ ಕಂಡು ಬಂದ ಹಿನ್ನಲೆಯಲ್ಲಿ ಈ ಬೆಂಕಿ ಹತ್ತಲು ಕಾರಣ ಎಂದು ಹೇಳಲಾಗುತ್ತಿದೆ.
Author: main-admin
ಪೆರ್ನೆ: ಭಾರೀ ಗಾಳಿಗೆ ಬೃಹತ್ ಗಾತ್ರದ ಎರಡು ಮರಗಳು ಧರೆಗುರುಳಿದ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ದೋರ್ಮೆ ಎಂಬಲ್ಲಿ ನಡೆದಿದೆ. ಬೃಹತ್ ಗಾತ್ರದ ಎರಡು ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಈ ಹಿನ್ನೆಲೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದು, ಸಂಚಾರದಲ್ಲಿ ಅಸ್ತವ್ಯಸ್ತವಾಗಿದೆ. ಮರ ಬಿದ್ದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ವಿದ್ಯುತ್ ಕಂಬಗಳು ಸಹ ಧರೆಗುರುಳಿವೆ. ಸ್ಥಳೀಯರು ಮರ ತೆರವು ಗೊಳಿಸಿದ್ದಾರೆ.
ಉಡುಪಿ: ಆಟವಾಡಲೆಂದು ತೆರಳಿದ್ದ 5 ವರ್ಷದ ಮಗು ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ತೆಂಕಬೆಟ್ಟು ಎಂಬಲ್ಲಿ ಸಂಭವಿಸಿದೆ. ಲಾರೆನ್ ಲೂವಿಸ್ ಮೃತ ಬಾಲಕ. ಈತ ಉಪ್ಪೂರು ನಿವಾಸಿ ನೋರ್ಮನ್ ಮತ್ತು ಸಿಲ್ವಿಯ ಎಂಬವರ ಪುತ್ರನಾಗಿದ್ದಾನೆ. ಇವರು ಕುವೈಟ್ ನಲ್ಲಿ ವಾಸವಾಗಿದ್ದು ಇತ್ತೀಚೆಗಷ್ಟೇ ಊರಿಗೆ ಮರಳಿದ್ದರು. ಮಗು ,ಮನೆಯ ಪಕ್ಕ ಆಟವಾಡುತ್ತಿದ್ದಾಗ ಅಕಸ್ಮಾತ್ತಾಗಿ ನೀರಿನ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದೆ.ಬ್ರಹ್ಮಾವರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ.
ಮಂಗಳೂರು;ಹ್ಯಾರಿಸ್ ಎಂಬವರಿಗೆ ಸೇರಿದ 17 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ವಶಪಡಿಸಿಕೊಂಡ ಇ.ಡಿ. ಅಧಿಕಾರಿಗಳು ಮಂಗಳೂರು; ಮಂಗಳೂರಿನ ಕೆ ಮೊಹಮ್ಮದ್ ಹ್ಯಾರಿಸ್ ಹೆಸರಿನಲ್ಲಿದ್ದ 17.34 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ 1999 ರ ಅಡಿಯಲ್ಲಿ ವಶಪಡಿಸಿಕೊಂಡಿದೆ ಎಂದು ವರದಿಯಾಗಿದೆ. ವಶಪಡಿಸಿಕೊಂಡ ಆಸ್ತಿಗಳಲ್ಲಿ ಮಂಗಳೂರಿನಲ್ಲಿರುವ ಎರಡು ವಸತಿ ಮನೆಗಳು ಮತ್ತು ಒಂದು ಕೈಗಾರಿಕಾ ಪ್ಲಾಟ್ ಸೇರಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ, ಅಧಿಕಾರಿಗಳು ಫೆಮಾ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆ ಮಾಡಿದ್ದಾರೆ. ಮಂಗಳೂರಿನ ನಿವಾಸಿ ಮುಕ್ಕಾ ಗ್ರೂಪ್ ಆಫ್ ಕಂಪನೀಸ್‌ನ ಹ್ಯಾರಿಸ್ ಅವರು ನಿಬಂಧನೆಗಳನ್ನು ಉಲ್ಲಂಘಿಸಿ ಸ್ಥಿರ ಆಸ್ತಿ, ವ್ಯಾಪಾರ ಘಟಕಗಳನ್ನು ಸಂಪಾದಿಸಿದ್ದಾರೆ ಮತ್ತು ಭಾರತದ ಹೊರಗೆ ವಿದೇಶೀ ವಿನಿಮಯ ವಹಿವಾಟು ನಡೆಸಿದ್ದಾರೆ ಎಂಬ ಮಾಹಿತಿಯ ಆಧಾರದ ಮೇಲೆ ಇದೀಗ ಅವರ ಆಸ್ತಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಂಸ್ಥೆ ಹೇಳಿರುವ ಬಗ್ಗೆ ವರದಿಯಾಗಿದೆ.
ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಸೇತುವೆ ಬಳಿ ಕಾರೊಂದರ ಮೇಲೆ ಮರ ಬಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಜುಲೈ 13ರಂದು ಮಧ್ಯಾಹ್ನ ಬೀಸಿದ ಭಾರೀ ಗಾಳಿಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಮುರಿದು ಬಿದ್ದಿದೆ. ಕಾರು ಭಾಗಶಃ ಜಖಂಗೊಂಡಿದ್ದು ಕಾರಿನಲ್ಲಿದ್ದ ಮಗು ಸಹಿತ, ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಆತೂರು ನಿವಾಸಿ ಆಸಿಫ್ ಎಂಬುವರು ಚಲಾಯಿಸುತ್ತಿದ್ದ ಸ್ವಿಫ್ಟ್ ಕಾರಿನ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ. ಆಸಿಫ್‌ರವರು ಕುಂಬ್ರಕ್ಕೆ ಬಂದು ತಿರುಗಿ ಪುತ್ತೂರಿಗೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ಕಾರಿನಲ್ಲಿ ಆಸಿಫ್‌ರವರ ಪತ್ನಿ, ಅತ್ತೆ, ನಾದಿನಿ ಹಾಗೂ ಅವರ 1.5 ವರ್ಷದ ಮಗು ಪ್ರಯಾಣಿಸುತ್ತಿದ್ದರೆ ಎನ್ನಲಾಗಿದೆ. ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯ ಉಂಟಾಗಿಲ್ಲ ಎಂದು ವರದಿಯಾಗಿದೆ.
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳವಾದ ಕಮರಿಗೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ ಅಂಚಿ ಕಟ್ಟೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಜಾರಿಗೆ ಬೈಲು ನಿವಾಸಿಗಳಾದ ಕಾರಿನ ಚಾಲಕ ಸಾಹಿಕ್, ಪ್ರಯಾಣಿಕರಾದ ಶಾಹಿನಾ, ಪೌಜಿಯಾ, ಸೌದ ಮತ್ತು 6 ತಿಂಗಳ ಮಗು ಪವಾಡಸದೃಶವಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿರುವ ಕಮರಿಗೆ ತಲೆಕೆಳಗಾಗಿ ಕಾರು ಉರುಳಿ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ 6 ತಿಂಗಳ ಮಗು ಸಹಿತ ಐದು ಮಂದಿ ಪ್ರಯಾಣಿಕರು ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗೊಂಡ ಇವರು ಬಂಟ್ವಾಳ ಸರಕಾರಿ ಆಸ್ಪತ್ರೆಯ ಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಮಂಗಳೂರು ಖಾಸಗಿ ಆಸ್ಪತ್ರೆಯ ಲ್ಲಿ ಸಂಬಂಧಿಕರೊರ್ವರು ಹುಷಾರಿಲ್ಲದ ಕಾರಣಕ್ಕಾಗಿ ದಾಖಲಾಗಿದ್ದು ಅವರ ಯೋಗ ಕ್ಷೇಮ ವಿಚಾರಿಸುವ ಸಲುವಾಗಿ ತೆರಳುವ ವೇಳೆ ಈ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಹಲವಾರು ತಿರುವುಗಳನ್ನು ಹೊಂದಿದ್ದು, ಕಳೆದ ಕೆಲ…
ಕರ್ನಾಟಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಹಿಜಾಬ್ ವಿವಾದಕ್ಕೆ ಮತ್ತೆ ಮರುಜೀವ ಬಂದಿದೆ. ಹಿಜಾಬ್ ನಿಷೇಧಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮುಂದಿನ ವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಹಿಜಾಬ್ ಧರಿಸುವುದು ಇಸ್ಲಾಂನ ಅಗತ್ಯ ಆಚರಣೆಯ ಅಡಿಯಲ್ಲಿ ಬರುವುದಿಲ್ಲ ಎಂದು ಮಾರ್ಚ್ 15ರಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠದ ಮುಂದೆ ವಕೀಲ ಪ್ರಶಾಂತ್ ಭೂಷಣ್ ಈ ವಿಚಾರವನ್ನು ಪ್ರಸ್ತಾಪಿಸಿದ್ರು. ಮುಂದಿನ ವಾರ ಸೂಕ್ತ ನ್ಯಾಯಪೀಠದ ಮುಂದೆ ಅರ್ಜಿ ವಿಚಾರಣೆ ನಡೆಸಲು ಸಮ್ಮತಿಸಲಾಯ್ತು. ಏನಿದು ಹಿಜಾಬ್ ವಿವಾದ ? 2022 ರ ಜನವರಿಯಲ್ಲಿ ಉಡುಪಿಯ ಶಾಲೆಯೊಂದು ತರಗತಿಯೊಳಗೆ ಹಿಜಾಬ್ ಧರಿಸದಂತೆ ನಿಷೇಧಿಸಿತ್ತು. ಈ ವಿಚಾರ ಕರ್ನಾಟಕದಲ್ಲಿ ಭಾರೀ ವಿವಾದವನ್ನೇ ಸೃಷ್ಟಿಸಿತ್ತು. ಹಿಜಾಬ್ ನಿಷೇಧ ವಿಚಾರವನ್ನು ಮುಸ್ಲಿಂ ವಿದ್ಯಾರ್ಥಿನಿಯರು ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಫೆಬ್ರವರಿ 25 ರಂದು ಪ್ರಕರಣದ ತೀರ್ಪನ್ನು ನ್ಯಾಯಾಲಯವು ಕಾಯ್ದಿರಿಸಿತ್ತು. ನಂತರ ಹಿಜಾಬ್…
ಬೈಂದೂರು: ಬೈಂದೂರು ತಾಲೂಕಿನ ಒತ್ತಿನಣೆ ಕಾಡಲ್ಲಿ ಕಾರು ಮತ್ತು ವ್ಯಕ್ತಿಯ ಶವವೊಂದು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಸುಟ್ಟು ಕರಕಲಾದ ಕಾರಿನಲ್ಲಿ ಓರ್ವ ವ್ಯಕ್ತಿಯ ಅಸ್ಥಿಪಂಜರ ಕಾಣಿಸುತ್ತಿದ್ದು ಬೈಂದೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ ಮತ್ತು ಪಿ.ಎಸ್.ಐ ಪವನ್ ನಾಯಕ್ ತಂಡ ಆಗಮಿಸಿದ್ದು ಪ್ರಾಥಮಿಕ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. ಈ ಕಾರು ಸುಟ್ಟು ಹೋಗಿ ದಿನಗಳೇ ಕಳೆದಿದ್ದು ಇದೊಂದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಬೈಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು: ನಗರದ ಹೊರವಲಯದ ಪಾವಂಜೆಯಲ್ಲಿರುವ ನಂದಿನಿ ನದಿಗೆ ಹಾರಿದ ಅಂಚೆ ನೌಕರ ನಾಪತ್ತೆಯಾಗಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಮಂಡ್ಯ ಮೂಲದ ಪ್ರಸ್ತುತ ಮಂಗಳೂರಿನ ಅಂಚೆ ಕಚೇರಿಯಲ್ಲಿ ಉದ್ಯೋಗಿಯಾಗಿರುವ ರಾಕೇಶ್ ಗೌಡ ನದಿಗೆ ಹಾರಿದವರು. ರಾಕೇಶ್ ಗೌಡ ನದಿಗೆ ಹಾರುವ ಮುನ್ನ ತನ್ನ ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ಬೈಕ್ ನಲ್ಲಿ ಇಟ್ಟಿದ್ದಾರೆ. ಅಲ್ಲದೆ ತಾನು ನದಿಗೆ ಹಾರುತ್ತಿರುವ ಕುರಿತು ಸಂಬಂಧಿಕರಿಗೆ ವಾಟ್ಸ್ಆ್ಯಪ್ ನಲ್ಲಿ ಮಾಹಿತಿ ರವಾನಿಸಿದ್ದಾರೆ. ಅಲ್ಲದೆ ನದಿಯಿರುವ ಪ್ರದೇಶದ ಲೊಕೇಶನ್ ಕೂಡಾ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಮುಲ್ಕಿ ಮತ್ತು ಸುರತ್ಕಲ್ ವ್ಯಾಪ್ತಿಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಶೋಧ ಕಾರ್ಯ ನಡೆಸುತ್ತಿದ್ದಾರೆ. ರಾಕೇಶ್ ಗೌಡ ಅವರ ಮಾವ ಅಬಕಾರಿ ಇಲಾಖೆಯ ಡಿವೈಎಸ್ಪಿ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಅಬಕಾರಿ ಡಿವೈಎಸ್ಪಿಯವರ ಸೂಚನೆಯಂತೆ ಅಬಕಾರಿ ಇಲಾಖೆಯ ಸಿಬ್ಬಂದಿ ಬಂದಿದ್ದಾರೆ ಎನ್ನಲಾಗಿದೆ.
ಮಂಗಳೂರು: ಭಾರೀ ಮಳೆಯಿಂದಾಗಿರುವ ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ನೆಲಸಮವಾಗಿದೆ. ಹರಿಹರ ಪಲ್ಲತಡ್ಕ ಎಂಬಲ್ಲಿ ಮನೆ ಸಂಪೂರ್ಣ ನೆಲಸಮವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಬಳಿ ಮೂರು ದಿನದ ಹಿಂದೆ ಮರ ಬಿದ್ದು ಮನೆ ಗೋಡೆಗಳಲ್ಲಿ ಬಿರುಕು ಮೂಡಿದೆ. ಬಿರುಕು ಬಿಟ್ಟಿದ್ದ ಗೋಡೆ ದುರಸ್ತಿ ಕೆಲಸ ಮಾಡಲಾಗಿದ್ದು, ಜುಲೈ 18ರಂದು ಗೃಹಪ್ರವೇಶ ನೆರವೇರಿಸಲು ಎಲ್ಲಾ ತಯಾರಿ ಮಾಡಿಕೊಳ್ಳಲಾಗಿತ್ತು. ಅಷ್ಟರಲ್ಲಿ ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮವಾಗಿದೆ. ಕಷ್ಟಪಟ್ಟು ಕಟ್ಟಿದ್ದ ಮನೆ ಗೃಹಪ್ರವೇಶಕ್ಕೆ ಮೊದಲೇ ನೆಲಸಮವಾಗಿದ್ದರಿಂದ ಮನೆಯವರು ಕಂಗಾಲಾಗಿದ್ದಾರೆ.