ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ನಾವೂರಿನ ಫರ್ಲಾದಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಟ್ಯಾಂಕರಿನ ಮಧ್ಯೆ ಢಿಕ್ಕಿ ಸಂಭವಿಸಿ ನಾಲ್ವರು ಪ್ರಯಾಣಿಕರು ಅಲ್ಪಸ್ವಲ್ಪ ಗಾಯಗೊಂಡಿದ್ದು ಬಸ್ ಹೆದ್ದಾರಿ ಬದಿಯ ಮನೆಗೆ ನುಗ್ಗಿದ ಘಟನೆ ಶನಿವಾರ ನಡೆದಿದೆ. ಢಿಕ್ಕಿಯಾದ ರಭಸಕ್ಕೆ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಫರ್ಲಾ ನಿವಾಸಿ ಭುಜಂಗ ಮೂಲ್ಯ ಅವರ ಮನೆಗೆ ನುಗ್ಗಿ ಮನೆಯ ಗೋಡೆ ಹಾಗೂ ಮೇಲ್ಛಾವಣಿಯ ಹಂಚಿಗೆ ಹಾನಿಯಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ವಿಸ್ತರಣೆಯ ಸಂದರ್ಭ ಭುಜಂಗ ಮೂಲ್ಯ ಅವರ ಜಾಗವೂ ಹೆದ್ದಾರಿಗೆ ಹೋಗಿದ್ದು, ಆದರೆ ಅದರ ಪರಿಹಾರ ಮೊತ್ತ ಇನ್ನೂ ಅವರ ಕೈ ಸೇರಿಲ್ಲ ಎಂಬ ಆರೋಪ ಕೇಳಿಬಂದಿದೆ.
Author: main-admin
ವಿಟ್ಲ: ಕರ್ಣಾಟಕ ಬ್ಯಾಂಕ್‌ನ ಅಡ್ಯನಡ್ಕ ಶಾಖೆಯಲ್ಲಿ ನಡೆದ ಕೋಟ್ಯಂತರ ನಗ ನಗದು ಕಳ್ಳತನ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸ್ ಇಲಾಖೆಯ ವಿಶೇಷ ತಂಡ ತನಿಖೆ ಕೈಗೆತ್ತಿಕೊಂಡಿದ್ದು, ಬ್ಯಾಂಕ್‌್ ಹಾಗೂ ಅಕ್ಕಪಕ್ಕ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದೆ. ಇದರ ಆಧಾರದಲ್ಲಿ ಕಳ್ಳತನಕ್ಕೆ ಆಗಮಿಸಿದ್ದ ವಾಹನದ ಸುಳಿವು ಸಿಕ್ಕಿದ್ದು, ಮತ್ತಷ್ಟು ವಾಹನ ನಿಖರತೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ದೃಶ್ಯಾವಳಿ ಕಳುಹಿಸಲಾಗಿದೆ. ಇನ್ನು ಕಳ್ಳರು ಮೊದಲೇ ಬ್ಯಾಂಕ್‌ನ ಸಮಗ್ರ ಮಾಹಿತಿ ಪಡೆದುಕೊಂಡಿದ್ದು, ಎಲ್ಲಾ ಚಟುವಟಿಕೆಗಳನ್ನು ವೀಕ್ಷಿಸಿ ಬಳಿಕ ಕಿಟಕಿ ಮೂಲಕ ನುಗ್ಗಿದ್ದಾರೆ. ಭಾರೀ ಮೊತ್ತದ ಕಳವು ನಡೆದ ಬಳಿಕ ಬ್ಯಾಂಕ್ ನನ್ನು ಸಂಪೂರ್ಣವಾಗಿ ಭದ್ರತೆಗೊಳಿಸಲಾಗುತ್ತಿದ್ದು, ಕಿಟಕಿಯನ್ನು ಸಂಪೂರ್ಣ ಬಂದ್ ಮಾಡಲಾಗುತ್ತಿದೆ. ಹಳೆ ಕಪಾಟುಗಳನ್ನು ಹೊರ ಹಾಕಿ ನವೀಕರಿಸಲಾಗುತ್ತಿದ್ದು, ಸೋಮವಾರವು ಶಾಖೆ ನಿರ್ವಹಿಸುವುದು ಅನುಮಾನವಾಗಿದೆ. ಈಗ ಬ್ಯಾಂಕ್‌ನಲ್ಲಿ ಹೆಚ್ಚಿನ ಸುರಕ್ಷತಾ ಕ್ರಮ ಅಳವಡಿಸಲಾಗಿದ್ದು, ಸೋಮವಾರವೂ ಶಾಖೆ ಕಾರ್ಯ ನಿರ್ವಹಿಸುವುದು ಅನುಮಾನ ಎನ್ನಲಾಗಿದೆ.
ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಶಾಲೆಗೆ ಕರೆದುಕೊಂಡು ಬರುವ ಪೋಷಕರು ಮಕ್ಕಳಿಗೆ ಅಲ್ಲದೇ ತಾವು ಕೂಡ ಹೆಲೈಟ್ ಧರಿಸದೇ ಬರುತ್ತಿದ್ದಾರೆ.ಜೊತೆಗೆ ಶಾಲಾ ಅಟೋ, ಖಾಸಗಿ ಕಾರು. ಟಿಟಿ ವಾಹನಗಳಲ್ಲಿ ನಿಗದಿತ ಮಕ್ಕಳಿಗಿಂತ ಹೆಚ್ಚಿನ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಸಾಕಷ್ಟು ದೂರುಗಳು ಬಂದಿರುವುದಾಗಿ ಪೊಲೀಸ್ ಇಲಾಖೆ ತಿಳಿಸಿದೆ. ಮಕ್ಕಳನ್ನು ಶಾಲೆಗೆ ಬಿಡಲು ದ್ವಿಚಕ್ರ ವಾಹನದಲ್ಲಿ ಬರುವ ಪೋಷಕರು ಕಡ್ಡಾಯವಾಗಿ ಹೆಲೈಟ್ ಧರಿಸಬೇಕು. 6 ವರ್ಷ ಮೇಲ್ಪಟ್ಟ ಮಕ್ಕಳು ಸಹ ಇನ್ಮುಂದೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇಷ್ಟಬಂದಂತೆ ಖಾಸಗಿ ವಾಹನಗಳಲ್ಲಿ ಹೆಚ್ಚಿನ ಮಕ್ಕಳನ್ನು ಕರೆದುಕೊಂಡು ಹೋಗುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ.ಶಾಲಾ ಅಟೋ, ಖಾಸಗಿ ಕಾರು, ಟಿಟಿ ವಾಹನಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುವವರು ಮತ್ತು ಮೂರಕ್ಕೂ ಹೆಚ್ಚು ಮಕ್ಕಳನ್ನು ಗಾಡಿಯಲ್ಲಿ ಕರೆದುಕೊಂಡು ಹೋಗುವ ಪೋಷಕರ ವಿರುದ್ಧವೂ ಕ್ರಮಕೈಗೊಳ್ಳಲಾಗುತ್ತದೆ. ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಸಾರ್ವಜನಿಕರು ಕಡ್ಡಾಯವಾಗಿ ಹೆಲೈಟ್ ಧರಿಸುವಂತೆ ಎಚ್ಚರಿಸಿದ್ದು, ಶಾಲೆಗಳ ಬಳಿ ಸ್ಪೆಷಲ್ ಡ್ರೈವ್…
ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 6 ಕೆಜಿ 912 ಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 2,76,000 ಬೆಲೆಯ ಗಾಂಜಾವನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್ ಎನ್‌ವಿರೋಟೆಕ್ ಪ್ರೈ. ಲಿ., ಪಡುಬಿದ್ರಿ ಎಂಬಲ್ಲಿ ನಾಶಪಡಿಸಲಾಯಿತು. ಈ ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್ ಡಿಸ್‌ಪೋಸಲ್ ಕಮಿಟಿಯ ಅಧ್ಯಕ್ಷರಾದ ಡಾ. ಅರುಣ್ ಕೆ., ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ.ಸಿದ್ದಲಿಂಗಪ್ಪ ಮತ್ತು ಪಿ.ಎ.ಹೆಗಡೆ, ಜಿಲ್ಲಾ ಡ್ರಗ್ ಡಿಸ್‌ಪೋಸಲ್ ಕಮಿಟಿ ಸದಸ್ಯರು ಹಾಗೂ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ. ಮತ್ತು ಅರವಿಂದ ಕಲಗುಜ್ಜಿ ಹಾಗೂ ಇತರ ಪೊಲೀಸ್ ಅಧಿಕಾರಿಯವರು ಉಪಸ್ಥಿತರಿದ್ದರು. ಇನ್ನು ಮಣಿಪಾಲ ಠಾಣೆಯ ಸೆನ್ ಠಾಣೆಯ 3 ಪ್ರಕರಣ, ಮಣಿಪಾಲ ಠಾಣೆಯ 4 ಪ್ರಕರಣ ಹಾಗೂ ಕುಂದಾಪುರ, ಕೋಟ, ಮಲ್ಪೆ ಮತ್ತು ಪಡುಬಿದ್ರಿ ಠಾಣೆಯ ತಲಾ 01 ಪ್ರಕರಣ ಸೇರಿ ಒಟ್ಟು 11 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಗಾಂಜಾವನ್ನು ಮಾನ್ಯ ನ್ಯಾಯಾಲಯದ ಆದೇಶಾನುಸಾರ…
ಉಡುಪಿ : ನಮಾಜ್ ಮಾಡುತ್ತಿರುವ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಉಡುಪಿಯ ಅಂಜುಮನ್ ಮಸೀದಿಯಲ್ಲಿ ನಡೆದಿದೆ. ಮೃತರನ್ನು ದೊಡ್ಡಣಗುಡ್ಡೆ ಕರಂಬಳ್ಳಿ ನಿವಾಸಿ ಮುಸ್ತಾಕ್(55) ಎಂದು ಗುರುತಿಸಲಾಗಿದೆ. ಮುಸ್ತಾಕ್ ಅವರು ಮಧ್ಯಾಹ್ನ ಜುಮಾ ನಮಾಝ್‌ಗಾಗಿ ಮಸೀದಿಗೆ ಬಂದಿದ್ದು, ಅಲ್ಲಿ ನಮಾಝ್ ಮಾಡುವ ವೇಳೆ ಹೃದಯಾಘಾತದಿಂದ ಅಲ್ಲೇ ಕುಸಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಈ ಘಟನೆ ಮಸೀದಿಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ಪುತ್ತೂರು: ಹಿಂದು ಜಾಗರಣ ವೇದಿಕೆಯ ಮುಖಂಡರಾದ ದಿನೇಶ್ ಪಂಜಿಗ ಮತ್ತು ಬೆಳ್ತಂಗಡಿಯ ಯಶೋಧರ ಅವರಿಗೆ ಗಡಿಪಾರು ಕುರಿತು ಉಪವಿಭಾಗೀಯ ದಂಡಾಧಿಕಾರಿಯವರ ನೋಟೀಸ್‌ಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಡೆ ನೀಡಿದೆ. ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಹ ಸಂಯೋಜಕ ದಿನೇಶ್ ಪಂಜಿಗ ಮತ್ತು ವೇಣೂರು ವಲಯದ ಮುಖಂಡರಾಗಿದ್ದ ಬೆಳಾಲು ನಿವಾಸಿ ಯಶೋಧರ ಎಂಬವರಿಗೆ, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ಉಪವಿಭಾಗೀಯ ದಂಡಾಧಿಕಾರಿ ನೋಟೀಸ್ ಜಾರಿ ಮಾಡಿದ್ದರು.ನೀವು ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ಈ ಕುರಿತು ವಾದಿಸಬಹುದು ಎಂದು ಈ ಮೂಲಕ ನಿಮಗೆ ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ನೋಟೀಸ್‌ನಲ್ಲಿ ತಿಳಿಸಲಾಗಿತ್ತು.ನೊಟೀಸ್ ಜಾರಿ ಮಾಡಿರುವ ಉಪವಿಭಾಗೀಯ ಕಾರ್ಯನಿರ್ವಾಹಕ ದಂಡಾಧಿಕಾರಿಯವರ ಕ್ರಮವನ್ನು…
ಮಂಗಳೂರು: ನಗರದ ಕಾವೂರಿನ ಬೋಂದೆಲ್ ಬಳಿಯ ಮೈದಾನದಲ್ಲಿ ಬೈಕ್ ನಲ್ಲಿ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು 19 ಗ್ರಾಂ ತೂಕದ 57,000 ಮೌಲ್ಯದ ಮೆಥಪಟೈನ್ ಮಾದಕದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು ನಿವಾಸಿ ಹಿಮನೀಶ್ (26), ಕೋಟೆಕಾರು ತಾರಿಪಡ್ಪು ನಿವಾಸಿ ಪವನ್ ರಾಜ್ ಪಿ(28) ಬಂಧಿತ ಆರೋಪಿಗಳು. ಆರೋಪಿಗಳು ಕಾವೂರಿನ ಬೊಂದೆಲ್ ಬಳಿಯ ಮೈದಾನದ ಬಳಿ ಬೈಕ್ ನಲ್ಲಿ ಪ್ಲಾಸ್ಟಿಕ್ ಕವರ್ ಗಳಲ್ಲಿ ಮೆಥಪಟೈನ್ ಮಾದಕದ್ರವ್ಯವನ್ನು ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮಾದಕದ್ರವ್ಯವನ್ನು ಸೇರಿದಂತೆ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಉಡುಪಿ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಸಲ್ಲಿಸಿರುವ ಪರೋಲ್ ಅರ್ಜಿಯನ್ನು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ತಿರಸ್ಕರಿಸಿ ಆದೇಶ ನೀಡಿದೆ. ಫೆಬ್ರವರಿ 1ರಂದು ನಿಧನರಾದ ತನ್ನ ಸಹೋದರ ನಿತಿನ್ ಅವರ ಧಾರ್ಮಿಕ ವಿಧಿ ವಿಧಾನ ಕಾರ್ಯಕ್ರಮದಲ್ಲಿ ಮೂರು ತಾಸು ಭಾಗವಹಿಸಲು ತನ್ನ ಊರಾದ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿಗೆ ತೆರಳಲು ಪರೋಲ್ ಮಂಜೂರು ಮಾಡುವಂತೆ ನ್ಯಾಯಾಲಯಕ್ಕೆ ಆರೋಪಿ ಫೆಬ್ರವರಿ 8ರಂದು ಅರ್ಜಿ ಸಲ್ಲಿಸಿದ್ದನು. ಆದರೆ ಇದಕ್ಕೆ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ. ನದಾಫ್ ಆಕ್ಷೇಪಣೆ ಸಲ್ಲಿಸಿದ್ದು, ಆರೋಪಿಗೆ ಪರೋಲ್ ನೀಡಿದರೆ ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗುತ್ತದೆ. ಅಲ್ಲದೆ ಆರೋಪಿಯ ಮೇಲೆ ದಾಳಿಯಾಗುವ ಸಾಧ್ಯತೆ ಇರುತ್ತದೆ. ಅದೇ ರೀತಿ ಆರೋಪಿ ತನ್ನ ಸಹೋದರ ಮೃತಪಟ್ಟ ಬಗ್ಗೆ ಯಾವುದೇ ಮರಣ ಪ್ರಮಾಣಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸದೆ ಇರುವುದರಿಂದ ಆತನಿಗೆ ಪರೋಲ್ ನೀಡಬಾರದು ಎಂದು ವಾದ ಮಂಡಿಸಿದ್ದರು. ಕೋರ್ಟ್ ಈ ವಾದವನ್ನು ಪುರಸ್ಕರಿಸಿತ್ತು.
ಕಾರ್ಕಳ: ಕೋಟೆಶ್ವರ- ಹಾಲಾಡಿ ನಡುವೆ ಹಾದು ಹೋಗಿರು ರೈಲು ಹಳಿಯ ಮದ್ಯವಯಸ್ಕರೊಬ್ಬರು ತೀವ್ರ ತರದಲ್ಲಿ ಗಾಯಗೊಂಡು ಬಿದ್ದಿದ್ದು ಗಂಗೊಳ್ಳಿಯ 108 ಅಂಬುಲೆನ್ಸ್ ನ ಸಿಬ್ಬಂದಿಗಳು ಗಾಯಾಳುವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಜ್ಜಿ ಪ್ರಳಯ (53) ಘಟನೆಯಲ್ಲಿ ಗಾಯಗೊಂಡವರು. ಬೆಳಿಗ್ಗೆ 6.50 ರ ವೇಳೆಗೆ ಇದೇ ಹಳಿಯಲ್ಲಿ ಸಂಚರಿಸಿದ ನೇತ್ರಾವತಿ ಎಕ್ಸ್ ಪ್ರೆಸ್ ರೈಲಿನಿಂದ ಜಾರಿ ಹೊರ ಬಿದ್ದಿದ್ದಾರೆ. ರೈಲ್ವೆ ಟ್ರ್ಯಾಕ್ ಸಿಬ್ಬಂದಿಗಳು 108 ಅಂಬುಲೆನ್ಸ್ ಗೆ ಕರೆ ಮಾಡಿದ್ದು, ಅದರನ್ವಯ ಇ ಎಂ ಟಿ ಆದ ನವೀನ್ ಕುಮಾರ್ ಹಾಗೂ ಪೈಲಟ್ ಚಂದ್ರಕಾಂತ್ ಇವರು ಘಟನೆ ಸ್ಥಳಕ್ಕೆ ತೆರಳಿ ಹಳಿಯಲ್ಲಿ ಬಿದ್ದಿದ್ದ ರೋಗಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವರ್ಗಾವಣೆ ಮಾಡಿರುತ್ತಾರೆ.ರೋಗಿಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ.
ಪುತ್ತೂರು: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಂಚನೆ ಮಾಡಿದ ಪ್ರಕರಣವನ್ನು ಭೇಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರ ಬಾಯಿ ಸಿ.ಆರ್.(23), ಹಾಸನದ ಹಳಸಿನಹಳ್ಳಿಯ ಸೌಂದರ್ಯ ಎಂ.ಎಸ್.(21), ತುಮಕೂರಿನ ಚಿಕ್ಕನಾಯಕನಹಳ್ಳಿಯ ರಾಹುಲ್ ಕುಮಾರ್ ನಾಯ್ಕ(19) ಎಂದು ಗುರುತಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿವಿಧ ಪತ್ರಿಕೆಗಳಲ್ಲಿ ಕರಾವಳಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಚೇರಿ ಕೆಲಸ ಖಾಲಿ ಇದೆ. ನಿರುದ್ಯೋಗಿಗಳಿಗೆ ಬಂದ ದಿನವೇ ಕೆಲಸ ಸಿಗುತ್ತದೆ ಎಂಬುದಾಗಿ ಬಂದ ಜಾಹೀರಾತು ನೋಡಿದ ಕೆಲವರು ಜಾಹೀರಾತಿನಲ್ಲಿ ನಮೂದಿಸಿದ ಫೋನ್ ನಂಬರ್ ಗೆ ಕರೆ ಮಾಡಿ ವಿಚಾರಿಸಿದರು. ಅವರು ಕರೆಯನ್ನು ಸ್ವೀಕರಿಸಿ ನೀವು ಕೆಲಸಕ್ಕೆ ಸೇರ ಬಯಸಿದರೆ ಫೀಸ್ ಕೊಡ್ಬೇಕು ಎಂಬುದಾಗಿ ತಿಳಿಸಿದ್ದರು. ಅಂತೆಯೇ, ಕಳೆದ ಸುಮಾರು 7 ತಿಂಗಳಿನಿಂದ ಪದೇ ಪದೇ ಆನ್ ಲೈನ್ ಮುಖಾಂತರ ಹಣವನ್ನು ಪಾವತಿ ಮಾಡುವಂತೆ ತಿಳಿಸಿದ್ದರು. ಅದರಂತೆ ಗೂಗಲ್ ಪೇ ಮುಖಾಂತರ ಇದುವರೆಗೆ ಸುಮಾರು…










