ಶಿವಮೊಗ್ಗ: ಗುಡ್ಡ ಕುಸಿದು ಬಿದ್ದು ಬಂದ್ ಆಗಿದ್ದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿ ರಸ್ತೆಯಲ್ಲಿ ಇಂದಿನಿಂದ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದು ಬಂದ್ ಆಗಿತ್ತು. ರಸ್ತೆಯ ಮೇಲೆ ಗುಡ್ಡ ಕುಸಿದ ಮಣ್ಣು ಹಾಗೂ ಮರಗಳು ಬಿದ್ದಿದ್ದವು. ಇದೀಗ ತೆರವು ಕಾರ್ಯಾಚರಣೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಆಗುಂಬೆ ಘಾಟಿಯ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ. ಜುಲೈ 30 ರವರೆಗೆ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ – ಉಡುಪಿ – ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಗುಡ್ಡ ಕುಸಿದಿತ್ತು.
Author: main-admin
ಕಾಣಿಯೂರು: ಕಾಣಿಯೂರು ಸಮೀಪದ ಕಾಣಿಯೂರು ಬೈತ್ತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೈತ್ತಡ್ಕದಿಂದ 200 ಮೀಟರ್ ದೂರ ಮರಕ್ಕಡ ಹೊಳೆಯಲ್ಲಿ ಇಬ್ಬರ ಮೃತ ದೇಹ ಮಂಗಳವಾರ ಮುಂಜಾನೆ ಪತ್ತೆಯಾಗಿದೆ. ಮೃತದೇಹ ಎಂದು ಇನ್ನೂ ಗುರುತಿಸಲಾಗಿಲ್ಲ. ಓರ್ವನ ಮೃತ ದೇಹವು ಹೊಳೆಯ ಬದಿಯಲ್ಲಿದ್ದ ಮರದ ದಿಮ್ಮಿಯಲ್ಲಿ ಪತ್ತೆಯಾಗಿದ್ದು, ಹೊಳೆಯಲ್ಲಿ ನೀರು ಕಡಿಮೆಯಾದ ಹಿನ್ನಲೆಯಲ್ಲಿ ಬೆಳಕಿಗೆ ಬಂದಿದೆ. ಮತ್ತೊಬ್ಬನ ಮೃತದೇಹವು ೫೦ ಮೀಟರ್ ದೂರದ ಅಂತರದಲ್ಲಿ ಪತ್ತೆಯಾಗಿದೆ.ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಗೌರಿ ಹೊಳೆಗೆ ಕಾರೊಂದು ಬಿದ್ದು ಯುವಕರಿಬ್ಬರು ನಾಪತ್ತೆಯಾದ ಘಟನೆ ಜು. 9ರಂದು ತಡರಾತ್ರಿ ನಡೆದಿತ್ತು. ಬಂಟ್ವಾಳ ತಾಲೂಕಿನ ವಿಟ್ಲ ಮುಟ್ನೂರು ಗ್ರಾಮದ ಕುಂಡಡ್ಕ-ಸಾಂತ್ಯಡ್ಕ ನಿವಾಸಿ ಚೋಮ ನಾಯ್ಕ ಅವರ ಪುತ್ರ ಧನುಷ್ (25) ಹಾಗೂ ವಿಟ್ಲ ಕನ್ಯಾನ ನಿವಾಸಿ ಧನುಷ್ (21) ಕಾರಿನಲ್ಲಿದ್ದರು ಎನ್ನಲಾಗಿದ್ದು, ಅವರು ನಾಪತ್ತೆಯಾಗಿದ್ದರು.
ಪುತ್ತೂರು; ಕಾಣಿಯೂರು ಬೈತಡ್ಕ ಮಸೀದಿ ಬಳಿಯ ಸೇತುವೆಯಿಂದ ಕೆಳಗೆ ಕಾರೊಂದು ಬಿದ್ದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬೈತಡ್ಕದಿಂದ ಸುಮಾರು 200 ಮೀಟರ್ ದೂರದಲ್ಲಿ ಹೊಳೆಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಮರದ ದಿಮ್ಮಿಯಲ್ಲಿ ಮೃತದೇಹ ಸಿಲುಕಿಕೊಂಡಿದೆ. ಅಧಿಕಾರಿಗಳು, ಇಲಾಖೆಯ ಸಿಬಂದಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಜು.9ರಂದು ರಾತ್ರಿ ಹೊಳೆಯಲ್ಲಿ ವಿಟ್ಲ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿದ್ದಾರೆ. ಪ್ರಕರಣ ಹಲವು ಸಂಶಯಕ್ಕೆ ಕಾರಣವಾಗಿತ್ತು.
ಸುಳ್ಯ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಯಿ ಅವರು ಇಂದು ಜು.12 ರಿಂದ ದ.ಕ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಇಂದು ಮಧ್ಯಾಹ್ನ 2.30 ಕ್ಕೆ ಕೊಡಗು ಜಿಲ್ಲೆಯ ಮಡಿಕೇರಿಯಿಂದ ನಿರ್ಗಮಿಸಿ, ರಸ್ತೆ ಮೂಲಕ ಮಾರ್ಗವಾಗಿ ಸುಳ್ಯ ತಾಲೂಕಿಗೆ ಆಗಮಿಸಿ ಮಳೆಯಿಂದ ಹಾನಿಗೊಳಗಾದ ಸುಳ್ಯದ ಗಡಿ ಪ್ರದೇಶ ಸಂಪಾಜೆಗೆ ಭೇಟಿ ನೀಡಲಿದ್ದಾರೆ. ಇಲ್ಲಿ ಮಾನ್ಯ ಮುಖ್ಯಮಂತ್ರಿಗಳಿಗೆ ಜಿಲ್ಲಾಡಳಿತ ವತಿಯಿಂದ ಸ್ವಾಗತ ನೀಡಲಿದ್ದು, ಭೂಕಂಪನದ ಬಗ್ಗೆ ಜಿಲ್ಲಾಧಿಕಾರಿಗಳು ವರದಿ ನೀಡಲಿದ್ದಾರೆ. ನಂತರದಲ್ಲಿ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಸಂಗಮ ಸ್ಥಳದ ನದಿ ಮಟ್ಟದ ವೀಕ್ಷಣೆ ಮತ್ತು ಬೆಳೆಹಾನಿ ಪರಿಶೀಲನೆ ಮಾಡಲಿದ್ದಾರೆ.ನಂತರ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ಭೂಕುಸಿತದಲ್ಲಿ ಮೃತಪಟ್ಟವರ ವಾರಿಸುದಾರರಿಗೆ ಪರಿಹಾರ ಚೆಕ್ ವಿತರಣೆ ನಂತರ ಉಳ್ಳಾಲ ತಾಲೂಕಿನ ಕಡಲ್ಕೋರೆತದ ಪ್ರದೇಶಗಳಿಗೆ ಭೇಟಿ,ನಂತರ ಮುಲ್ಕಿ ತಾಲೂಕಿನ ಬೆಳೆಹಾನಿ ಪ್ರದೇಶ ಹಾಗೂ ನದಿ ಪ್ರವಾಹ ಸ್ಥಳಗಳಿಗೆ ಭೇಟಿ ನೀಡುವರು. ರಾತ್ರಿ 7.30 ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಉಡುಪಿಗೆ ತೆರಳುವರು .ಜು .13 ರ ಬುಧವಾರ ಸಂಜೆ…
ಕಾರ್ಕಳ: ಬೋಳ ಶ್ರೀ ಮೃತ್ಯುಂಜಯ ದೇವಸ್ಥಾನದಿಂದ ಪಂಚಲೋಹದ ಬಲಿ ಮೂರ್ತಿ, ಕಾಣಿಕೆ ಹುಂಡಿ, ಸಿಸಿ ಕ್ಯಾಮರದ ಡಿವಿಆರ್ ಕಳವಾಗಿದೆ. ಭಾನುವಾರ ರಾತ್ರಿ ದೇವಸ್ಥಾನದ ಬಾಗಿಲು ಒಡೆದು ಒಳಪ್ರವೇಶಿಸಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಬಲಿ ಮೂರ್ತಿ, ಹುಂಡಿಯಲ್ಲಿದ್ದ ಅಂದಾಜು 1.5 ಲಕ್ಷ ರೂ. ಕಳ್ಳತನವಾಗಿದೆ. ಸೋಮವಾರ ಬೆಳಗ್ಗೆ ಆರು ಗಂಟೆಗೆ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಕಳ್ಳತನದ ವಿಚಾರ ಬೆಳಕಿಗೆ ಬಂದಿದೆ. ದೇವಸ್ಥಾನದ ಹಿಂಬದಿ ಬಾಗಿಲು ಒಡೆದು ಒಳ ನುಗ್ಗಿರುವ ಕಳ್ಳರು ಪಂಚಲೋಹದ ಬಲಿಮೂರ್ತಿ ಕಳವು ಮಾಡಿದ್ದಾರೆ. ಅಲ್ಲದೆ ಕಾಣಿಕೆ ಡಬ್ಬಿ ಒಡೆದು ಹಣ ದೋಚಿ ಪರಾರಿಯಾಗಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಕಾಣಿಯೂರು;ಬೈತಡ್ಕ ಮಸೀದಿಯ ಬಳಿಯಿರುವ ಕಿರುಸೇತುವೆಯಿಂದ ಕಾರೊಂದು ಕೆಳಗೆ ಬಿದ್ದು ಯುವಕರಿಬ್ಬರು ನಾಪತ್ತೆಯಾದ ಘಟನೆ ಕುರಿತಂತೆ ಇದೀಗ ಮತ್ತೊಂದು ಮಾಹಿತಿ ಲಭ್ಯವಾಗಿದೆ. ನಾಪತ್ತೆಯಾಗಿರುವ ಯುವಕರನ್ನು ಬಂಟ್ವಾಳ ತಾಲೂಕಿನ ವಿಟ್ಲಮುಡ್ನೂರು ಗ್ರಾಮದ ಕುಂಡಡ್ಕದ ಧನುಷ್ (25) ಹಾಗೂ ವಿಟ್ಲ ಕನ್ಯಾನ ನಿವಾಸಿ ಧನುಷ್ (21) ಎಂದು ಗುರುತಿಸಲಾಗಿದೆ. ಸವಣೂರಿನಲ್ಲಿ ಪೊಲೀಸ್ ಚೆಕ್ ಪೋಸ್ಟ್‌ನಲ್ಲಿ ರಾತ್ರಿ 11.53 ಕ್ಕೆ ತಪಾಸಣೆಗೆ ಒಳಪಟ್ಟು ಮುಂದೆ ಸಾಗಿ 12. 02 ನಿಮಿಷಕ್ಕೆ ಕಾರು ಸೇತುವೆಗೆ ಢಿಕ್ಕಿಯಾಗಿ ತಡೆಗೋಡೆ ಮುರಿದು ಕೆಳಕ್ಕೆ ಬಿದ್ದಿದೆ. ನಾಪತ್ತೆಯಾಗಿರುವ ಪೈಕಿ ವಿಟ್ಲ ಕನ್ಯಾನ ನಿವಾಸಿ ಧನುಷ್ ಕುಂಡಡ್ಕ ನಿವಾಸಿ ಧನುಷ್ ಅವರ ತಾಯಿಗೆ ಕರೆ ಮಾಡಿ ನಮ್ಮ ಕಾರು ಹಳೆಯಂಗಡಿಯಲ್ಲಿ ಲಾರಿಗೆ ಢಿಕ್ಕಿಯಾಗಿದೆ, ನಾವು ಬದುಕಿ ಉಳಿದಿರುವುದೇ ಹೆಚ್ಚು, ಏನೂ ತೊಂದರೆಯಿಲ್ಲ, ನಾವು ಮನೆಗೆ ಮುಟ್ಟುವಾಗ ಬೆಳಿಗ್ಗೆ ಆಗಬಹುದು ಎಂದು ಹೇಳಿದ್ದಾರೆ. ಪೊಲೀಸರು ತನಿಖೆ ನಡೆಸಿದಾಗ ಧನುಷ್ ತಾಯಿಗೆ ಕರೆ ಮಾಡಿರುವುದು 11.52 ಕ್ಕೆ ಎಂದು ಸ್ಪಷ್ಟವಾಗಿ ತಿಳಿದು ಬಂದಿದೆ. ಕಾರು ಹೊಳೆಗೆ ಬಿದ್ದಿರುವುದು…
ಉಡುಪಿ: ಬ್ರಹ್ಮಾವರದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಬಳಿಕ ಬೈಕ್‌ನ ಮೇಲೆ ಬಿದ್ದಿದೆ. ಪರಿಣಾಮ ಬೈಕ್ ಸವಾರ ಮೃತ ಪಟ್ಟಿದ್ದಾನೆ. ಈ ದುರ್ಘಟನೆ ರಾಷ್ಟ್ರೀಯ ಹೆದ್ದಾರಿಯ ಹೊಟೇಲ್ ಮಣಿಪಾಲ್ ಇನ್ ಬಳಿ ಸಂಭವಿಸಿದೆ. ಮೊದಲು ರಸ್ತೆಯ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಸರ್ವೀಸ್ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸವಾರನ ಮೇಲೆ ಬಿದ್ದಿದೆ. ಪರಿಣಾಮ ಬೈಕ್ ಸವಾರ ವಿಜಯಪುರದ ನಿವಾಸಿ ಸುನಿಲ್ (24) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಹಸವಾರ ಬಾಗಲಕೋಟೆ ನಿವಾಸಿ ಮಂಜುನಾಥ್ ಗಾಯಗೊಂಡಿದ್ದಾರೆ. ಉಡುಪಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭೋಪಾಲ್: ಸರಕಾರಿ ಆಂಬ್ಯುಲೆನ್ಸ್ ಸಿಗದ ಕಾರಣ ಎಂಟು ವರ್ಷದ ಬಾಲಕನೊಬ್ಬ ತನ್ನ 2 ವರ್ಷದ ಕಿರಿಯ ಸಹೋದರನ ಶವವನ್ನು ಮಡಿಲ ಮೇಲೆ ಮಲಗಿಸಿಕೊಂಡು ರಸ್ತೆ ಬದಿಯಲ್ಲಿ ಕುಳಿತುಕೊಂಡಿದ್ದ ಮನಕಲಕುವ ದೃಶ್ಯ ಮಧ್ಯಪ್ರದೇಶದ ಮೊರೆನಾದಲ್ಲಿ ಕಂಡು ಬಂದಿದೆ. ಪೂಜಾರಾಮ್ ಜಾತವ್ ಅವರ ಎರಡು ವರ್ಷದ ಮಗು ರಾಜನ ಆರೋಗ್ಯ ಹದಗೆಟ್ಟಿತು. ಆರಂಭದಲ್ಲಿ ಮನೆಯಲ್ಲಿಯೇ ಮಗನನ್ನು ಗುಣಪಡಿಸಲು ಪೂಜಾರಾಮ್ ಜಾತವ್ ಪ್ರಯತ್ನಿಸಿದರು. ಆದರೆ ಮಗುವಿಗೆ ಹೊಟ್ಟೆ ನೋವು ತೀವ್ರವಾಗಿದ್ದರಿಂದ, ಮೊರೆನಾ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇದೇ ವೇಳೆ ಪೂಜಾರಾಮ್ ಜಾತವ್ ಅವರು ಹಿರಿಯ ಮಗ ಗುಲ್ಶನ್ ಕೂಡ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ನಂತರ ಮಗುವಿನ ಶವವನ್ನು ಗ್ರಾಮಕ್ಕೆ ಕೊಂಡೊಯ್ಯಲು ಪೂಜಾರಾಮ್ ಅವರು ಆಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೆ ಅಂಬುಲೆನ್ಸ್ ನೀಡಲು ಆಸ್ಪತ್ರೆ ಅಧಿಕಾರಿಗಳು ತಿರಸ್ಕರಿಸದ್ದಾರೆ. ನಂತರ ಆಸ್ಪತ್ರೆಯಿಂದ ಹೊರಗೆ ಮಗುವಿನ ಶವ ಎತ್ತುಕೊಂಡು ಬಂದ ಪೂಜಾರಾಮ್ ಜಾತವ್ ಅವರು, ವಾಹನಗಳಿಗಾಗಿ…
ಅಲಪ್ಪುಝ:ಕೇರಳದ ಅಲಪ್ಪುಝದ ಅಲುವಾದಲ್ಲಿ ದ್ವಿಚಕ್ರ ವಾಹನ ಅಪಘಾತ ಸಂಭವಿಸಿ ಮಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ. ಫೌಜಿಯಾ ಹಕೀಂ (21) ಮೃತ ವಿದ್ಯಾರ್ಥಿನಿ. ಮಂಗಳೂರಿನಿಂದ ರೈಲಿನಲ್ಲಿ ಅಲುವಾ ತಲುಪಿದ ಫೌಜಿಯಾ ಸ್ಕೂಟರ್ ನಲ್ಲಿ ಮನೆಯತ್ತ ಬರುವಾಗ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ನೀಡುವಾಗ, ಸ್ಕೂಟರ್ ನೀರಿಗೆ ಇಳಿದು ನಿಯಂತ್ರಣ ಕಳೆದುಕೊಂಡು ಬಿದ್ದಿದ್ದರು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ.
ಬೆಳ್ಮಣ್: ಇನ್ನೋವಾ ಕಾರು-ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸಹೋದರರಿಬ್ಬರು ಮೃತಪಟ್ಟಿರುವ ದಾರುಣ ಘಟನೆ ನಂದಳಿಕೆ ಮಾವಿನಕಟ್ಟೆಯ ಬಳಿ ನಡೆದಿದೆ. ನಂದಳಿಕೆಯ ನಿವಾಸಿಗಳಾದ ಸತೀಶ್ ಕುಲಾಲ್(28) ಹಾಗೂ ಸಂದೀಪ್ ಕುಲಾಲ್ ಮೃತ ದುರ್ದೈವಿಗಳು. ಕಾರ್ಕಳ ಕಡೆಯಿಂದ ಬೆಳ್ಮಣ್ ಕಡೆಗೆ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರ್ಕಳ ಕಡೆಗೆ ಪ್ರಯಾಣಿಸುತ್ತಿದ್ದ ಇನೋವಾ ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ಪರಿಣಾಮ ಸಂದೀಪ್ ಸ್ಥಳದಲ್ಲಿಯೇ ಮೃತ ಪಟ್ಟರೆ, ಸತೀಶ್ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.