ಮಂಗಳೂರು : ದೂರು ನೀಡಲು ಬಂದಿರುವ ಮಹಿಳೆಯ ಮೊಬೈಲ್ ಗೆ ಅಸಭ್ಯ ಸಂದೇಶ ಕಳುಹಿಸಿ ಕಿರುಕುಳ ನೀಡಿರುವ ಆರೋಪದಲ್ಲಿ ಕಾವೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಸಂತೋಷ್ ಸಿ.ಜೆ. ಎಂಬಾತನನ್ನು ಮಂಗಳೂರು ಪೊಲೀಸ್ ಕಮಿಷನರ್ ಅಮಾನತುಗೊಳಿಸಿದ್ದಾರೆ. ಮಹಿಳೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಕಾವೂರು ಠಾಣೆಗೆ ಬಂದಿದ್ದ ವೇಳೆ ಹೆಡ್ ಕಾನ್‌ಸ್ಟೇಬಲ್ ಸಂತೋಷ್ ಆಕೆಯ ಮೊಬೈಲ್ ನಂಬರ್ ಪಡೆದಿದ್ದ. ಆ ಬಳಿಕದಿಂದ ಆಕೆಗೆ ಅಸಭ್ಯವಾದ ಸಂದೇಶ ಕಳುಹಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಯಾರಲ್ಲಾದರೂ ಹೇಳಿದರೆ ಜೀವನ ಪರ್ಯಂತ ಕೊರಗುವಂತೆ ಮಾಡುತ್ತೇನೆ. ನಿನ್ನ ಇಡಿ ಕುಟುಂಬವನ್ನು ಮುಗಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಸಂತೋಷ್ ಬೆದರಿಕೆ, ಕಿರುಕುಳದಿಂದ ಬೇಸತ್ತ ಮಹಿಳೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರನ್ನು ಭೇಟಿಯಾಗಿ ದೂರು ನೀಡಿದ್ದರು. ಆತ ಬೆದರಿಕೆ ಒಡ್ಡಿರುವ ಆಡಿಯೋ ಸಂದೇಶವನ್ನು ಕಮಿಷನರ್ ಅವರಿಗೆ ನೀಡಿದ್ದಾರೆಂದು ತಿಳಿದು ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಕಮಿಷನರ್, ಹೆಡ್ ಕಾನ್‌ಸ್ಟೇಬಲ್…
Author: main-admin
ಉಡುಪಿ: ಮಣಿಪಾಲ ನಗರ ಪ್ರದೇಶ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಕಾರ್ಯಾಚರಿಸುತ್ತಿದ್ದ (What U Want, S.G. Riders, R.N.R. Rental Bike, City Rental Bike)ಬಾಡಿಗೆಗೆ ನೀಡುತ್ತಿದ್ದ ಬೈಕ್/ಕಾರ್ ಶೋ ರೂಮ್ ವಿರುದ್ಧ ಶಿವಮೊಗ್ಗ ಜಂಟಿ ಸಾರಿಗೆ ಆಯುಕ್ತರಾದ ಕೆ.ಟಿ.ಹಾಲಸ್ವಾಮಿ ನೇತ್ರತ್ವದಲ್ಲಿ ಆರ್‌ಟಿಓ ಮತ್ತು ಮೋಟಾರು ವಾಹನ ನಿರೀಕ್ಷಕರೊಂದಿಗೆ ದಾಳಿ ನಡೆಸಿದ್ದಾರೆ. ನಗರದಲ್ಲಿ ಅನಧಿಕೃತವಾಗಿ ತೆರೆದಿರುವ City Rental Bike & R.N.R. Brothers ರೆಂಟಲ್ ಮಳಿಗೆಗಳನ್ನು ಮುಚ್ಚಿ, ಅನಧಿಕೃತವಾಗಿ ಕಾರ್ಯಾಚರಣೆ ಮಾಡುತ್ತಿದ್ದ ಸುಮಾರು 10ರಿಂದ 15 ರೆಂಟ್ ಕಾರ್‌ಗಳನ್ನು ತಪಾಸಣೆ ಮಾಡಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಮಂಗಳೂರು: ಪ್ರಕರಣವೊಂದರ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಗೆ ಬೆದರಿಕೆ ಹಾಗೂ ಅವಾಚ್ಯ ಸಂದೇಶದ ಕಳುಹಿಸಿ ಮಾನಸಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾವೂರು ಠಾಣೆಯ ಹೆಡ್ ಕಾನ್‌ಸ್ಟೇಬಲ್ ಸಂತೋಷ್ ಎಂಬಾತನನ್ನು ಅಮಾನತುಗೊಳಿಸಿ ಪೊಲೀಸ್ ಕಮಿಷನರ್ ಆದೇಶಿಸಿದ್ದಾರೆ. ಮಹಿಳೆಯು ಪ್ರಕರಣವೊಂದಕ್ಕೆ ಸಂಬಂಧಿಸಿ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಆ ಮಹಿಳೆಯ ಮೊಬೈಲ್ ನಂಬರ್ ಪಡೆದಿದ್ದ ಹೆಡ್ ಕಾನ್‌ಸ್ಟೇಬಲ್ ಸಂತೋಷ್ ಆಕೆಗೆ ಅಸಭ್ಯ ರೀತಿಯಲ್ಲಿ ಸಂದೇಶ ಕಳುಹಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಯಾರಲ್ಲಾದರೂ ದೂರು ನೀಡಿದರೆ ಜೀವನ ಪರ್ಯಂತ ಕೊರಗುವಂತೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ. ಇದರಿಂದ ಆಘಾತಗೊಂಡ ಮಹಿಳೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೆ ದೂರು ನೀಡಿದ್ದರು. ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್ ಹೆಡ್ ಕಾನ್‌ಸ್ಟೇಬಲ್ ಸಂತೋಷ್‌ನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಲ್ಲದೆ ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ಉತ್ತರ ವಿಭಾಗದ ಎಸಿಪಿಗೆ ಸೂಚಿಸಿದ್ದಾರೆ.
ಕಾಸರಗೋಡು: ಎರಡು ವರ್ಷಗಳ ಹಿಂದೆ ಪೈವಳಿಕೆಯಲ್ಲಿ ಗಲ್ಫ್ ಉದ್ಯೋಗಿಯಾದ ಸೀತಾಂಗೋಳಿಯ ಅಬೂಬಕ್ಕರ್ ಸಿದ್ದೀಕ್ ನನ್ನು ಥಳಿಸಿ ಕೊಲೆಗೈದ ಪ್ರಕರಣದ ಪ್ರಮುಖ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಪೈವಳಿಕೆಯ ನೂರ್ ಷಾ (39) ಬಂಧಿತ ಆರೋಪಿ. ಪೊಲೀಸ್ ಠಾಣೆ ಗೆ ಶರಣಾದ ಈತನನ್ನು ಬಂಧಿಸಲಾಗಿದೆ. ಈತ ಸೀತಾಂಗೋಳಿ ಮುಗು ವಿನ ಸಿದ್ದೀಕ್ ನನ್ನು ಮರಕ್ಕೆ ಹಾಕಿ ಥಳಿಸಿ ಕೊಲೆಗೈದ ಆರೋಪಿಯಾಗಿದ್ದಾನೆ. ಚಿನ್ನಾಭರಣ ಸಾಗಾಟ ವ್ಯವಹಾರವೇ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಸಿದ್ದೀಕ್ ನನ್ನು ಕೊಲೆಗೈದು ಮೃತದೇಹವನ್ನು ಬಂದ್ಯೋಡಿನ ಖಾಸಗಿ ಆಸ್ಪತ್ರೆಯಲ್ಲಿ ತೊರೆದು ಆರೋಪಿಗಳು ಪರಾರಿಯಾಗಿದ್ದರು.ನೂರ್ ಷಾ ನೇತೃತ್ವದ11 ಮಂದಿಯ ತಂಡವು ಈ ಕೃತ್ಯ ನಡೆಸಿತ್ತು. ಕಾರಿನಲ್ಲಿ ಅಪಹರಿಸಿದ್ದ ತಂಡ ಪೈವಳಿಕೆ ಯ ನಿರ್ಜನ ಸ್ಥಳಕ್ಕೆ ಕೊಂಡೊಯ್ದು ಕೃತ್ಯ ನಡೆಸಿತ್ತು. ಕೃತ್ಯದ ಬಳಿಕ ಬಹುತೇಕ ಆರೋಪಿಗಳು ವಿದೇಶಕ್ಕೆ ಪರಾರಿಯಾಗಿದ್ದರು. ನಾಲ್ವರು ಆರೋಪಿಗಳು ಇನ್ನೂ ತಲೆ ಮರೆಸಿಕೊಂಡಿದ್ದಾರೆ
ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿನ ಕರ್ನಾಟಕ ಬ್ಯಾಂಕ್‌ಗೆ ನಿನ್ನೆ ರಾತ್ರಿ ದರೋಡೆಕೋರರು ಒಳನುಗ್ಗಿದ್ದು, ಇಂದು ಮುಂಜಾನೆ ಎಂದಿನಂತೆ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ತೆರೆದು ಓಳಗೆ ಹೋದಾಗ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತನಿಖೆ ನಡೆಸಿದ್ದಾರೆ. ಹೆಚ್ಚಿನ ಪರಿಶೀಲನೆಗಾಗಿ ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿದ್ದು ತನಿಖೆ ಮುಂದುವರಿದಿದೆ. ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ರಿಷ್ಯಂತ್ ಭೇಟಿ ನೀಡಿದ್ದು, ತನಿಖೆ ಚುರುಕುಗೊಂಡಿದೆ. ಘಟನೆ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ರಿಷ್ಯಂತ್ ಮಾತನಾಡಿ ’ನಿನ್ನೆ ದಿನ ರಾತ್ರಿ ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿ ಕರ್ನಾಟಕ ಬ್ಯಾಂಕ್‌ನಲ್ಲಿ ಲಾಕರ್ ಮುರಿದು ಕಳ್ಳತನವಾಗಿದೆ. ಇದೀಗ ವಿಧಿವಿಧಾನ ತಜ್ಞರು ತನಿಖೆ ಮುಂದುವರೆಸಿದ್ದಾರೆ. ಬ್ಯಾಂಕಿನ ಭದ್ರತಾ ಸಿಸ್ಟಮ್ ತುಂಬಾ ದುರ್ಬಲವಾಗಿದೆ. ಲಾಕರ್ ಫೆಸಿಲಿಟಿಗಳೆಲ್ಲವೂ ತುಂಬಾ ಭದ್ರವಾಗಿರಬೇಕು. ಇದಕ್ಕೆ ಬೇಕಾದಂತಹ ಎಲ್ಲಾ ವ್ಯವಸ್ಥೆಗಳನ್ನು ಎಲ್ಲಾ ಬ್ಯಾಂಕ್‌ಗಳು ಮಾಡಬೇಕು.…
ಕಾರ್ಕಳ: ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಿದ್ದ ಪರಶುರಾಮ ಥೀಮ್ ಪಾರ್ಕ್ ಹಗರಣದ ಬಗ್ಗೆ ಸಿಐಡಿ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಬಗ್ಗೆ ಫೆ.06ರ ಮಂಗಳವಾರ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ. ಪರಶುರಾಮ ಥೀಮ್ ಪಾರ್ಕ್ ಮೋಸದ ವಿಚಾರವಾಗಿ ಅನೇಕ ಹೋರಾಟಗಳು ಪ್ರತಿಭಟನೆಗಳು ನಡೆದಿದ್ದವು. ಇತ್ತೀಚೆಗೆ ಈ ವಿಚಾರವನ್ನು ಕಾರ್ಕಳ ಕಾಂಗ್ರೆಸ್ ನ ಕಾರ್ಯಕರ್ತರು ಹಾಗೂ ಇತರ ಹಲವು ಸಾಮಾಜಿಕ ಕಾರ್ಯಕರ್ತರು ಮತ್ತೆ ಈ ಹಗರಣದ ಬಗ್ಗೆ ದ್ವನಿ ಎತ್ತಿದ್ದರು. ಇದರ ಬೆನ್ನಲ್ಲೇ ಸಿಎಂ ಸಿಐಡಿ ತನಿಖೆಗೆ ಆದೇಶ ನೀಡಿದ್ದಾರೆಪರಶುರಾಮ ಥೀಮ್ ಪಾರ್ಕ್ ಒಟ್ಟಾರೆ 11.54 ಕೋಟಿ ರೂಗಳ ಯೋಜನೆಯಾಗಿದ್ದು ಅದರಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಪರಶುರಾಮ ನ ಕಂಚಿನ ಮೂರ್ತಿ ಪ್ರತಿಷ್ಠಾಪನೆ ಮಾಡುವುದೆಂದು ನಿರ್ಧಾರ ಆಗಿತ್ತು. ಕಂಗೇರಿಯ ಪ್ರತಿಮೆ ತಯಾರಿ ಸಂಸ್ಥೆಯೊಂದಕ್ಕೆ ಇದರ ಕಾಂಟ್ರಾಕ್ಟ್ ನೀಡಲಾಗಿತ್ತು. ರಾಜ್ಯ ಚುನಾವಣೆ ಹೊಸ್ತಿಲಲ್ಲಿ ಅಂದಿನ ಬಿಜೆಪಿ ಸರ್ಕಾರ ಜನವರಿ 27ರಂದು ಥೀಮ್ ಪಾರ್ಕ್ ಉದ್ಘಾಟಿಸಿತ್ತು. ಅಲ್ಲಿ ನಿರ್ಮಿಸಲಾಗಿರುವ ಪರಶುರಾಮನ ಕಂಚಿನ ಪ್ರತಿಮೆಯ ಉದ್ದ 33 ಅಡಿ,…
ಉಡುಪಿ : ಮಂಗಳೂರಿನ ಲೋಕಾಯುಕ್ತ ಪೋಲಿಸ್ ವರಿಷ್ಠಾಧಿಕಾರಿ ನೇತೃತ್ವದ ತಂಡ ಸರ್ಚ್ ವಾರೆಂಟ್ ಆದೇಶದಂತೆ ಉಡುಪಿ ನೋಂದಣಿ ಕಚೇರಿಗೆ ಭೇಟಿ ನೀಡಿ ತನಿಖೆ ಕೈಗೊಂಡು ಪರಿಶೀಲನೆ ನಡೆಸಿದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಉಡುಪಿ ಉಪನೋಂದಾವಣೆ ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ, ತಾಲೂಕು ಕಚೇರಿಗಳಲ್ಲಿ ಭ್ರಷ್ಟಾ ಚಾರ ತಾಂಡವಾಡುತ್ತಿದೆ ಎಂದು ಇತ್ತೀಚೆಗೆ ವಕೀಲರೋಬ್ಬರು ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರಿಗೆ ದೂರು ನೀಡಿದ್ದರು. ಈ ಹಿನ್ನಲೆ ಲೋಕಾಯುಕ್ತ ತಂಡ ಉಡುಪಿ ನೋಂದಣಿ ಕಚೇರಿಗೆ ಭೇಟಿ ನೀಡಿ ತನಿಖೆ ಕೈಗೊಂಡು ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದ ಉಪ ಲೋಕಾಯುಕ್ತರ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರಿಗೆ ವಕೀಲರೊಬ್ಬರು ಉಡುಪಿ ನೋಂದಾಣಿ ಕಛೇರಿಯಲ್ಲಿ ಭ್ರಷ್ಟಚಾರ ನಡೆಯುತ್ತಿದೆ ಎಂದು ಮೌಖಿಕವಾಗಿ ದೂರು ನೀಡಿದ್ದರು. ಈ ಹಿನ್ನಲೆ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ರವರು ಉಡುಪಿ ನೋಂದಾಣಿ ಕಛೇರಿಯ ತನಿಖೆಗೆ ಸರ್ಚ್ ವಾರೆಂಟ್ ಅನ್ನು ಹೊರಡಿಸಿ ತನಿಖೆಗೆ ಮಂಗಳೂರು ವಿಭಾಗ ಲೋಕಾಯುಕ್ತ ಎಸ್.ಪಿ ಗೆ ಆದೇಶಿಸಿದ್ದರು…
ಮಂಗಳೂರು: ಮಂಗಳೂರು ನಗರ ಹೊರವಲಯದ ಸುರತ್ಕಲ್ ಮುಕ್ಕದ ಬಳಿ ಬುಧವಾರ ಸಂಜೆ ಭೀಕರ ರಸ್ತೆ ದುರಂತ ನಡೆದಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.ಮೃತ ಬಾಲಕಿಯನ್ನು ಮಾನ್ವಿ ಎಂದು ಗುರುತಿಸಲಾಗಿದೆ. ಸುರತ್ಕಲ್‌ನ ಚರ್ಚ್ ಶಾಲೆಯಲ್ಲಿ ಕಲಿಯುತ್ತಿದ್ದ ಪುತ್ರಿಯನ್ನು ಆಕೆಯ ಅಪ್ಪನೇ ಸಂಜೆ ವೇಳೆ ದ್ವಿಚಕ್ರ ವಾಹನದಲ್ಲಿ ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮುಕ್ಕದ ಬಳಿ ಅತೀ ವೇಗದಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದ್ದು, ಬಾಲಕಿ ತಲೆಗೆ ತೀವ್ರ ಏಟು ಬಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಸ್ಥಳೀಯರು ಟಿಪ್ಪರ್ ಚಾಲಕನನ್ನು ಹಿಡಿದು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳದಲ್ಲಿ ಸಂಚಾರಿ ಪೊಲೀಸರು ಮತ್ತು ಸ್ಥಳೀಯರ ನಡುವೆ ತೀವ್ರ ಮಾತಿನ ಚಕಮಕಿ ಕೂಡಾ ನಡೆಯಿತು. ಟ್ರಾಫಿಕ್ ಉತ್ತರ ಠಾಣಾ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದರು.
ಉಡುಪಿ: ಮಾರ್ಚ್ 3 ರಂದು ಜಿಲ್ಲೆಯಾದ್ಯಂತ 0-5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆಯನ್ನು ನೀಡಲಾಗುತ್ತಿದ್ದು, ಜಿಲ್ಲೆಯ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆಯನ್ನು ಹಾಕಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈಗಾಗಲೇ ನಮ್ಮ ದೇಶದಲ್ಲಿ ಪಲ್ಸ್ ಪೊಲಿಯೋ ಪ್ರಕರಣಗಳು ಶೂನ್ಯವಿದ್ದರೂ ಸಹ, ಯಾವುದೇ ಮಕ್ಕಳಿಗೆ ಬರಬಾರದು ಎಂಬ ಉದ್ದೇಶದಿಂದ ಪೊಲಿಯೋ ಲಸಿಕೆಯನ್ನು ನೀಡಲಾಗುತ್ತಿದೆ. ಪ್ರತಿಯೊಬ್ಬ ಮಕ್ಕಳಿಗೂ ಪೊಲೀಯೋ ಲಸಿಕೆ ಹನಿಯನ್ನು ಹಾಕಿಸಿ, ಪ್ರತಿಶತಃ ನೂರರಷ್ಟು ಸಾಧಿಸಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುವುದರೊಂದಿಗೆ ಲಸಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
ಕಾಸರಗೋಡು : ಆರೆಸ್ಸೆಸ್ ಹಿರಿಯ ಮುಖಂಡ ಗೋಪಾಲ ಚೆಟ್ಟಿಯಾರ್ (77) ಅಲ್ಪಕಾಲದ ಅನಾರೋಗ್ಯದ ಬಳಿಕ ಮಂಗಳವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಜನಿಸಿದ್ದ ಅವರು ವಿದ್ಯಾರ್ಥಿ ದಿಸೆಯಿಂದಲೇ ಆರೆಸ್ಸೆಸ್ ಚಟುವಟಿಕೆಗಳಿಂದ ಪ್ರಭಾವಿತರಾಗಿದ್ದರು. ವೃತ್ತಿಯಲ್ಲಿ ಕೇರಳ ಸರಕಾರ ಕಂದಾಯ ಇಲಾಖೆಯಲ್ಲಿ 35 ವರ್ಷ ಸೇವೆ ಸಲ್ಲಿಸಿದ್ದ ಗೋಪಾಲ ಚೆಟ್ಟಿಯಾರ್ 2002ರಲ್ಲಿ ಉಪ ತಹಸೀಲ್ದಾರ್ ಆಗಿ ನಿವೃತ್ತರಾಗಿದ್ದರು. ನಿವೃತ್ತಿ ಬಳಿಕ ತಮ್ಮ ಜೀವನವನ್ನು ಜನಸೇವೆಗೆ ಮುಡಿಪಾಗಿಟ್ಟಿದ್ದರು. ಆರೆಸ್ಸೆಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್, ಕರ್ನಾಟಕ ದಕ್ಷಿಣ ಪ್ರಾಂತ್ಯ ಸೇವಾ ಪ್ರಮುಖ್ ಹಾಗೂ ಮಂಗಳೂರು ವಿಭಾಗ ಸಂಘ ಚಾಲಕರಾಗಿ ಸೇವಾ ಚಟುವಟಿಕೆ ನಡೆಸಿದ್ದರು. ಮೂಲತಃ ಪೆರ್ಲ ನಿವಾಸಿಯಾಗಿದ್ದ ಅವರು ಒಂದೂವರೆ ವರ್ಷದಿಂದ ಬಂದ್ಯೋಡಿನಲ್ಲಿ ನೆಲೆಸಿದ್ದರು. ಇದಲ್ಲದೆ, ಸಮಾಜದ ನಾನಾ ಚಟುವಟಿಕೆಗಳಲ್ಲಿ ತೊಡಗಿಸಿದ್ದರು. ಮೃತರ ಅಂತ್ಯಸಂಸ್ಕಾರ ಬಂದ್ಯೋಡಿನಲ್ಲಿ ನಡೆಯಿತು. ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯವಾಹ…










