ಸುರತ್ಕಲ್ : ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಶುಕ್ರವಾರ ಮಧ್ಯಾಹ್ನ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮಿನಿ ಚಾಲಕ ನನ್ನ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓಮಿನಿ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಆಗಮಿಸಿ ಸ್ಕ್ರೈನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮಿನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೇರವಾಗಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಗೋಕುಲ ನಗರ ನಿವಾಸಿ ಲೋಕೇಶ್ ಕುಲಾಲ್ (38) ಎಂದು ತಿಳಿದು ಬಂದಿದೆ. ಲಾರಿ ಚಾಲಕನ ಅಜಾಗರೂಕತೆಯೇ ಅವಘಡಕ್ಕೆ ಕಾರಣ ಎನ್ನಲಾಗಿದೆ.ಸುಮಾರು ಅರ್ಧ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಲೋಕೇಶ್ ಅವರನ್ನು ರಕ್ಷಿಸಲಾಗಿದೆ.ಸ್ಕೂಟರ್ ಸವಾರರೊಬ್ಬರು ಅವಘಡದಲ್ಲಿ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
Author: main-admin
ಬೆಂಗಳೂರು: ಮುಸ್ಲಿಂ ಜನಾಂಗದ ಪ್ರಮುಖ ಹಬ್ಬಗಳಲ್ಲಿ ಒಂದಾದ ಬಕ್ರೀದ್ ಇದೇ ಜುಲೈ 10ರಂದು ರಾಜ್ಯದಾದ್ಯಂತ ಆಚರಿಸಲಾಗುವುದು. ಹಬ್ಬವನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಕೆಲ ಕಾನೂನು ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಸರ್ಕಾರ ಹೊಸ ಮಾರ್ಗ ಸೂಚಿ ಬಿಡುಗಡೆ ಮಾಡಿದೆ. ಹಬ್ಬದ ದಿನದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸುವವರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಾರ್ವತ್ರಿಕ ಅಧಿನಿಯಮ 2020ರ ನಿಯಮಗಳು ಉಲ್ಲಂಘನೆಯಾಗದಂತೆ ಖುರ್ಬಾನಿ ನೆರವೇರಿಸಬೇಕು. ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ ಕಾಲೇಜು, ಆಸ್ಪತ್ರೆ ಆವರಣಗಳಲ್ಲಿ ಖುರ್ಬಾನಿಯನ್ನು ನಿಷೇಧಿಸಲಾಗಿದೆ. ಸ್ಥಳೀಯಾಡಳಿತ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಖುರ್ಬಾನಿ ನೆರವೇರಿಸಬೇಕು. ಖುರ್ಬಾನಿ ನೆರವೇರಿಸುವಾಗ ಶುಚಿತ್ವ ಮತ್ತು ನೈರ್ಮಲ್ಯವನ್ನು ಕಡ್ಡಾಯವಾಗಿ ಕಾಪಾಡಬೇಕು. ಪ್ರಾಣಿ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಪೊಲೀಸ್ ಇಲಾಖೆ, ಪಶು ಪಾಲನಾ ಮತ್ತು ಪಶು ವೈದ್ಯ ಸೇವೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರು ನೀಡುವ ಸಾಮಾನ್ಯ ಹಾಗೂ ಸ್ಥಳೀಯವಾಗಿ ನೀಡುವ ನಿರ್ದೇಶಗಳನ್ನು ಕಡ್ಡಾಯವಾಗಿ…
ಹಾಸನ: ಶಾಲೆಗೆ ಹೊರಟ್ಟಿದ್ದ ತಾಯಿ-ಮಗ ಅಪಘಾತದಲ್ಲಿ ಮೃತಪಟ್ಟ ಧಾರುಣ ಘಟನೆ ಹಾಸನದ ಬಿ.ಟಿ.ಕೊಪ್ಪಲು ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಸೀಮಾ ಮತ್ತು ಇವರ ಪುತ್ರ ಮಯೂರ(10) ಮೃತ ದುರ್ದೈವಿಗಳು. ಮಗನನ್ನು ಶಾಲೆಗೆ ಬಿಡಲು ದ್ವಿಚಕ್ರ ವಾಹನದಲ್ಲಿ ಸೀಮಾ ಕರೆದೊಯ್ಯುತ್ತಿದ್ದರು. ಮಾರ್ಗಮಧ್ಯೆ ಯಮನಂತೆ ಬಂದ ಲಾರಿ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ತಾಯಿ-ಮಗ ದುರಂತ ಅಂತ್ಯ ಕಂಡಿದ್ದಾರೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಳ್ಳಾಲ: ಉಚ್ಚಿಲ ಬಟ್ಟಪ್ಪಾಡಿ ಮತ್ತು ಉಳ್ಳಾಲದ ಸೀಗ್ರೌಂಡ್‌ನಲ್ಲಿ ತಡೆಗೋಡೆ ನಿರ್ಮಾಣಕ್ಕೆ ಸ್ಥಳೀಯರಿಂದ ಅಹವಾಲು ಬಂದಿದ್ದು, ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು, ತಜ್ಞರ ಸಮಿತಿಯೊಂದಿಗೆ ಸಮೀಕ್ಷೆ ನಡೆಸಿ ಶಾಶ್ವತ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಅವರು ಕಡಲ್ಕೊರೆತಕ್ಕೀಡಾದ ತಾಲೂಕಿನ ಉಚ್ಚಿಲ, ಬಟ್ಟಂಪಾಡಿ, ಸೀಗ್ರೌಂಡ್ ಹಾಗೂ ಮೊಗವೀರಪಟ್ಣ ಪ್ರದೇಶಕ್ಕೆ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹಾಗೂ ಬಂದರು ಸಚಿವ ಅಂಗಾರ ಜತೆ ಭೇಟಿ ನೀಡಿ ಸ್ಥಳೀಯರ ಅಹವಾಲು ಸ್ವೀಕರಿಸಿ ಮಾತನಾಡಿದರು. ರಾಜ್ಯ ಸರಕಾರ ತಮ್ಮ ಪಕ್ಷದ ಶಾಸಕರು ಆಡಳಿತವಲ್ಲದ ಪ್ರದೇಶಕ್ಕೂ ಭೇಟಿ ನೀಡಿ ಹಾನಿಗೊಳಗಾದಂತಹ ಮನೆಮಂದಿಗೆ ಸಹಾಯವನ್ನು ಮಾಡುತ್ತಿದೆ, ಕಳೆದ 60 ವರ್ಷದಿಂದ ಕಾಂಗ್ರೆಸ್ ಸರಕಾರವಿದ್ದಾಗಲೂ ಸಮುದ್ರವೂ ಇತ್ತು ಕೊರೆತವೂ ಇತ್ತು. ಅಷ್ಟೂ ವರ್ಷಗಳಲ್ಲಿ ಸರಿಪಡಿಸಲು ಸಾಧ್ಯವಾಗದವರು ಟೀಕೆ ಮಾಡುವುದು ಸರಿಯಲ್ಲ ಎಂದು ಶಾಸಕ ಯು.ಟಿ.ಖಾದರ್ ಟೀಕೆಗೆ ಪ್ರತಿಕ್ರಿಯೆ ನೀಡಿದರು. ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಮಾತನಾಡಿ ಮರವಂತೆ ಶೈಲಿಯಲ್ಲೇ ಕಡಲ್ಕೊರೆತ ತಡೆ ಬೇಲಿಯನ್ನು ರಚಿಸುವ ಯೋಜನೆ ರೂಪಿಸುತ್ತೇವೆ.…
ಮಂಗಳೂರು:ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಜಿಲ್ಲೆಯಲ್ಲಿ ಜು.8 ಶುಕ್ರವಾರ ಹಾಗೂ ಜು.9ರ ಶನಿವಾರದಂದು ರಜೆಯನ್ನು ಜಿಲ್ಲಾಡಳಿತ ಘೋಷಿಸಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಸೇರಿದಂತೆ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಮಳೆ ಇನ್ನಷ್ಟು ಬಿರುಸುಗೊಳ್ಳುವ ಸಾಧ್ಯತರ ಇದ್ದು, ರೆಡ್ ಅಲರ್ಟ್ ಮುಂದುವರಿದಿದೆ.
ಬೆಂಗಳೂರು: ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳಿಂದ ಬಂಧನಕ್ಕೀಡಾಗಿರುವ ಎಡಿಜಿಪಿ ಅಮೃತ್ ಪೌಲ್ ಬೇಡಿಕೆ ಕೇಳಿ ಸ್ವತಃ ಅಧಿಕಾರಿಗಳೇ ಕಂಗಾಲಾಗಿದ್ದಾರೆ. ಜುಲೈ 4ರಂದು ಬಂಧನಕ್ಕೀಡಾಗಿದ್ದ ಅಮೃತ್ ಪೌಲ್ ಅವರನ್ನು ಸಿಐಡಿ ಕಸ್ಟಡಿಗೆ ಪಡೆಯಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ಇದೀಗ ಜೈಲಿನಲ್ಲಿ ವಿಚಾರಣೆ ವೇಳೆ ಅಧಿಕಾರಿಗಳಿಗೆ ತಲೆ ತಿನ್ನುತ್ತಿದ್ದಾರೆ ಮಾಜಿ ಎಡಿಜಿಪಿ. ತನಗೆ ಟೆನ್ ಶನ್ ಆಗುತ್ತಿದೆ, ನಿದ್ದೆ ಬರುತ್ತಿಲ್ಲ. ಸಿಗರೇಟ್ ಹಾಗೂ ವಿಸ್ಕಿ ತಂದು ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಇದನ್ನೆಲ್ಲ ತಂದುಕೊಡಲು ಜೈಲ್ ರೂಲ್ಸ್ ಒಪ್ಪುವುದಿಲ್ಲ. ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದೇ ವೇಳೆ ಸಿಐಡಿ ಅಧಿಕಾರಿ ಡಿಜಿಪಿ ಸಂಧೂ ಹೈಕೋರ್ಟ್ ಗೆ ತನಿಖಾ ವರದಿ ಸಲ್ಲಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಸೆಲೆರಿಯೊ ಕಾರೊಂದು ಪಲ್ಟಿಯಾಗಿ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಹಳೆ ನಿಲ್ದಾಣದ ಬಳಿ ನಡೆದಿದೆ. ಗಾಯಗೊಂಡವರನ್ನು ಸುಬ್ರಹ್ಮಣ್ಯದ ಕುಲ್ಕುಂದ ನಿವಾಸಿಗಳಾದ ಮಂಜುನಾಥ್, ಕಿರಣ್, ಗಿರೀಶ್ ಮತ್ತು ಕೃಷ್ಣಮೂರ್ತಿ ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.ಗಾಯಾಳುಗಳಿಗೆ ಕಡಬದ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರವಾರ, ಮಂಗಳೂರುಗಳಲ್ಲಿ ಕಡಲ ಕೊರತೆವಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಹಣ ಇದೆ. ಕಡಲ್ಕೊರೆತದ ಬಗ್ಗೆ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ವಹಿಸಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಅವರೇ ಸ್ಥಳಕ್ಕೆ ಹೋಗಿ ಪರಿಶೀಲಿಸಲು ಸೂಚಿಸಿದ್ದೇನೆ ಎಂದು ಹೇಳಿದರು. ಈಗಾಗಲೇ ಕಂದಾಯ ಸಚಿವರು ಕೊಡಗಿನಲ್ಲಿದ್ದಾರೆ. ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇನ್ನೂ 3-4 ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಕೆರೂರು ಪಟ್ಟಣದಲ್ಲಿ ನಡೆದ ಗಲಾಟೆಯನ್ನು ಪೊಲೀಸರು ಕೂಡಲೇ ನಿಯಂತ್ರಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರನ್ನು ಬಂಧಿಸಲಾಗಿದೆ. ಸದ್ಯ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 2 ಸಮುದಾಯಗಳನ್ನು ಶಾಂತವಾಗಿರುವಂತೆ ಸೂಚನೆ ನೀಡಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ ಎಂದರು.
ಮಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಅವಾಂತರವೇ ಸೃಷ್ಟಿಯಾಗಿದೆ. ಮಂಗಳೂರು ಏರ್ಪೋರ್ಟ್ ರನ್ ವೇ ಬದಿಯಲ್ಲಿಯೇ ರಸ್ತೆ ಕುಸಿದು ಹೋಗಿದೆ. ಅದ್ಯಪಾಡಿ ಬಳಿ ಇರುವ ರನ್ ವೇ ಕುಸಿದ ಪರಿಣಾಮ ಅದ್ಯಪಾಡಿಯಿಂದ ಕೈ ಕಂಬ ಹೋಗುವ ರಸ್ತೆ ಬಂದ್ ಆಗಿದೆ. ರಸ್ತೆ ಬಹು ದೊಡ್ಡ ಮಟ್ಟದಲ್ಲಿ ಕುಸಿತ ಪರಿಣಾಮ ಏರ್ ಪೋರ್ಟ್ ಸುತ್ತ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬಜ್ಪೆ ಏರ್ಪೋರ್ಟ್ ರನ್ ವೇ ಸಮೀಪದಲ್ಲಿಯೇ ಇರುವ ರಸ್ತೆ ಇದಾಗಿದೆ. ರನ್ ವೇನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಟ್ಟ ಪರಿಣಾಮವಾಗಿ ರಸ್ತೆ ಕುಸಿದೆ ಎಂದು ಅದ್ಯಪಾಡಿಯ ಗ್ರಾಮಸ್ಥರು ಆರೋಪಿಸಿದ್ದಾರೆ. ಅಲ್ಲದೇ ಇಲ್ಲಿ ಕಲ್ಲು ಗಣಿಗಾರಿಕೆ ನಡೆಯುವ ಸ್ಥಳದಲ್ಲಿ ನೀರು ತುಂಬಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದೂ ಹೇಳಲಾಗ್ತಿದೆ. ದಕ್ಷಿಣ ಕನ್ನಡದಲ್ಲಿ ವರುಣನ ಆರ್ಭಟ ಮಿತಿ ಮೀರಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡದ ಎಲ್ಲಾ ಅಂಗನವಾಡಿ, ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಬಂಟ್ವಾಳ: ಕಾರ್ಮಿಕ ರು ಉಳಿದುಕೊಂಡ ಶೆಡ್ ಗೆ ಕುಸಿದ ಗುಡ್ಡ, ಶೆಡ್ ನೊಳಗೆ ಸಿಲುಕಿಕೊಂಡ ನಾಲ್ವರು ಕಾರ್ಮಿಕರ ಪೈಕಿ ಮೂವರು ಮೃತಪಟ್ಟು , ಓರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಹೆನ್ರಿ ಕಾರ್ಲೊ ಎಂಬವರ ಮನೆಯ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಐವರ ಪೈಕಿ ನಾಲ್ವರು ಗುಡ್ಡ ಜರಿದು ಶೆಡ್ ನೊಳಗೆ ಸಿಲುಕಿಕೊಂಡಿದ್ದರು, ಅದರಲ್ಲಿ ಮೂವರನ್ನು ಜೆಸಿಬಿ ಮೂಲಕ ರಕ್ಷಣೆ ಮಾಡಿದರೆ ಓರ್ವ ಮೃತಪಟ್ಟಿದ್ದ.ಉಳಿದಂತೆ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇಬ್ಬರು ಚಿಕಿಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ರಾತ್ರಿ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.ಪಾಲಕ್ಕಾಡು ನಿವಾಸಿ ವಿಜು (46)ಉಳಿದಂತೆ ಕೊಟ್ಟಾಂ ನಿವಾಸಿ ಬಾಬು (46) ಎಂಬವರನ್ನು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅಲ್ಫೊನ್ಸಾ ಮೃತಪಟ್ಟ ದುರ್ದೈವಿಗಳು.ಕಣ್ಣೂರು ನಿವಾಸಿ ಜಾನ್ (44)ಎಂಬಾತ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.