ಬೆಂಗಳೂರು : ವಿಧಾನಮಂಡಲದ ಅಧಿವೇಶನ ಇದೇ ಫೆ.12ರಂದು ಆರಂಭಗೊಳ್ಳಲಿದೆ. ಫೆ.12ರಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ತಿಳಿಸಿದರು. ವಿಧಾನಸೌಧದದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಅಧಿವೇಶನಕ್ಕೂ ಮುನ್ನ ಫೆ.9ರಂದು ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಶಾಸಕರಿಗೆ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ. ಶಾಸಕರಿಗೆ ಬಜೆಟ್ ಅಧಿವೇಶನದ ಸ್ವರೂಪ, ಚರ್ಚೆಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು ಮತ್ತು ಬಜೆಟ್ ಅಧಿವೇಶನದ ವರದಿಗಾರಿಕೆ ಬಗ್ಗೆಯೂ ಮಾಧ್ಯಮ ಪ್ರತಿನಿಧಿಗಳಿಗೆ ವಿಶೇಷ ತರಬೇತಿ ನೀಡಲಾಗುವುದು ಎಂದು ಅವರು ವಿವರಿಸಿದ ಸ್ಪೀಕರ್ ಖಾದರ್ ಅವರು ಈ ತರಬೇತಿ ಕಾರ್ಯಾಗಾರಕ್ಕೆ ವಿಧಾನಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಚಾಲನೆ ನೀಡಲಿದ್ದಾರೆ ಎಂದರು. ಫೆ.16ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಫೆ.16ರಂದು ಸಿಎಂ ಅವರು…
Author: main-admin
ಮಂಗಳೂರು : ನಗರದ ಪಣಂಬೂರು ಬೀಚ್‌ಗೆ ಬಂದಿದ್ದ ಅನ್ಯಕೋಮಿನ ಜೋಡಿಯ ಮೇಲೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಮೂಲದ ಯುವಕ ಹಾಗೂ ಬೆಂಗಳೂರಿನ ಯುವತಿ ಪಣಂಬೂರು ಬೀಚ್‌ಗೆ ಬಂದಿದ್ದರು. ಈ ಅನ್ಯಕೋಮಿನ ಜೋಡಿಯನ್ನು ಗಮನಿಸಿದ ತಂಡವೊಂದು ಅವರನ್ನು ತಡೆದಿದ್ದಾರೆ. ಸ್ಥಳಕ್ಕಾಗಮಿಸಿದ ಪಣಂಬೂರು ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ: ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಬಿಸಿರೋಡು ಸಮೀಪದ ಮಾರ್ನಬೈಲು ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೂಲತಃ ಮಡಂತ್ಯಾರು ಪಣಕಜೆ ನಿವಾಸಿಯಾಗಿದ್ದು ಪ್ರಸ್ತುತ ಸಜೀಪಮುನ್ನೂರು ಗ್ರಾ.ಪಂ.ವ್ಯಾಪ್ತಿಯ ಮಾರ್ನಬೈಲು ದಾಸರ ಗುಡ್ಡೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹರಿಶ್ಚಂದ್ರ (37) ಮೃತಪಟ್ಟ ವ್ಯಕ್ತಿ.ಕೂಲಿ ಕಾರ್ಮಿಕನಾಗಿರುವ ಹರಿಶ್ಚಂದ್ರ ಅವರು ಇಂದು ಬೆಳಿಗ್ಗೆ ಸುಮಾರು 7.30 ಗಂಟೆ ಹೊತ್ತಿಗೆ ಮನೆಯಿಂದ ಕೆಲಸಕ್ಕೆ ತೆರಳುವ ಸಂದರ್ಭದಲ್ಲಿ ರೈಲ್ವೆ ಹಳಿಯನ್ನು ದಾಟುವ ಉದ್ದೇಶದಿಂದ ನಿಂತಿದ್ದ ವೇಳೆ ರೈಲು ಡಿಕ್ಕಿ ಹೊಡೆದಿರಬೇಕು ಎಂದು ಸ್ಥಳೀಯರು ತಿಳಿಸಿದ್ದಾರೆ.ರೈಲು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಹರಿಶ್ಚಂದ್ರ ಸ್ಥಳದಲ್ಲಿಯೇ ಮೃತಪಟ್ಟಿದ್ದರು.ಡಿಕ್ಕಿಯಾದ ಕೂಡಲೇ ರೈಲ್ವೆ ಇಲಾಖೆಯ ಹಳಿಯ ಕಾಮಗಾರಿ ನೋಡಿಕೊಳ್ಳುವ ಸಿಬ್ಬಂದಿಗಳಿಗೆ ಮಾಹಿತಿ ಸಿಕ್ಕಿದ್ದು, ಅವರು ಮಂಗಳೂರು ರೈಲ್ವೆ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.ರೈಲ್ವೆ ಪೋಲೀಸ್ ಇಲಾಖೆಯ ಎ.ಎಸ್.ಐ.ಜಾನ್ ಕೊರಿಯ ಕೋಸ್ ಸ್ಥಳಕ್ಕೆ ಆಗಮಿಸಿ,ಮೃತದೇಹವನ್ನು ಮರಣೋತ್ತರ ಪರೀಕ್ಷೆ ಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.ಘಟನೆಯ ಮಾಹಿತಿ ಸಿಕ್ಕಿದಂತೆ ಹೊಯ್ಸಳ 112 ವಾಹನದ…
ಉಳ್ಳಾಲ: “ಅಕ್ಷರ ಸಂತ” ಎಂದು ಖ್ಯಾತರಾಗಿರುವ ಪದ್ಮಶ್ರೀ ಪುರಸ್ಕೃತ ಕಿತ್ತಳೆ ಹಣ್ಣು ವ್ಯಾಪಾರಿ ಹರೇಕಳ ಹಾಜಬ್ಬ ಅವರ ಮನವಿಗೆ ಮೇರೆಗೆ, ಉಳ್ಳಾಲ ತಾಲ್ಲೂಕಿನ ಹರೇಕಳದಲ್ಲಿ ಅವರು ನಿರ್ಮಿಸಿದ್ದ ಪ್ರೌಢಶಾಲೆಯು, ಪದವಿಪೂರ್ವ ಕಾಲೇಜಾಗಿ ಮೇಲ್ದರ್ಜೆಗೇರಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ನೀಡಿದ್ದು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪ.ಪೂ. ಕಾಲೇಜು ಸ್ಥಳೀಯ ವಿದ್ಯಾರ್ಥಿಗಳಿಗೆ ಮಂಜೂರಾಗಲಿದೆ. ಹರೇಕಳ ಪರಿಸರದಲ್ಲಿ ಪದವಿಪೂರ್ವ ಕಾಲೇಜು ಇಲ್ಲದ ಕಾರಣ ಇಲ್ಲಿನ ವಿದ್ಯಾರ್ಥಿಗಳು ಪದವಿಪೂರ್ವ ವಿದ್ಯಾಭ್ಯಾಸಕ್ಕಾಗಿ ದೂರದ ಪಟ್ಟಣದ ಕಾಲೇಜುಗಳಿಗೆ ಹೋಗಬೇಕಾದ ಸ್ಥಿತಿ ಇದ್ದು, ಇದಕ್ಕಾಗಿ ಪ್ರೌಢ ಶಾಲೆಯನ್ನು ಪದವಿಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಬೇಕು ಎಂದು ಹರೇಕಳ ಹಾಜಬ್ಬ ಹಲವು ವರ್ಷಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾ ಬಂದಿದ್ದರು.ಇದೀಗ ರಾಜ್ಯಪಾಲರ ಆದೇಶದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ (ಪದವಿ ಪೂರ್ವ ಶಿಕ್ಷಣ) ಅಧೀನ ಕಾರ್ಯದರ್ಶಿ ಪದ್ಮಿನಿ ರಾವ್ ಹೊರಡಿಸಿರುವ ಆದೇಶ ಪತ್ರ ಹಾಜಬ್ಬ ಅವರ ಕೈ ಸೇರಿದೆ.ಇಲಾಖೆಯಲ್ಲಿ ಈಗಾಗಲೇ ಮಂಜೂರಾಗಿರುವ ಹುದ್ದೆಗಳನ್ನು ಬಳಸಿಕೊಂಡು ಹಾಗೂ ಲಭ್ಯ ಸಂಪನ್ಮೂಲಗಳಿಂದ ವೆಚ್ಚವನ್ನು ಭರಿಸುವ ಷರತ್ತಿಗೆ ಒಳಪಟ್ಟು…
ಮಂಗಳೂರು:ಗೂಡ್ಸ್ ವಾಹನಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚು ಉದ್ದದ ವಸ್ತು, ಸಲಕರಣೆಗಳ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಕಳೆದ ನಾಲ್ಕು ವರ್ಷಗಳಲ್ಲಿ 4,541 ಪ್ರಕರಣಗಳನ್ನು ದಾಖಲಿಸಿದ್ದು, 22,71,350 ರೂ. ದಂಡ ಸಂಗ್ರಹಿಸಿದ್ದಾರೆ. ನಗರದ ವಿವಿಧ ಟೆಂಪೋ ರಿಕ್ಷಾ ಪಿಕಪ್ ವಾಹನ, ಮಿನಿ ಟೆಂಪೋಗಳಲ್ಲಿ ನಿಗದಿತ ಪ್ರಮಾಣಕ್ಕೆ ಹೆಚ್ಚು ಉದ್ದವಾಗಿರುವ ಪೈಪ್, ಕಬ್ಬಿಣದ ಸರಳು, ಅಲ್ಯೂಮಿನಿಯಂ ರಾಡ್‌ಗಳು, ಮರ ಇತ್ಯಾದಿಗಳನ್ನು ಸಾಗಿಸಲಾಗುತ್ತಿದೆ. ಹಲವು ಕಡೆಗಳಲ್ಲಿ ವಸ್ತುಗಳು ವಾಹನದಿಂದ ಹೊರಬಿದ್ದು ಇತರ ವಾಹನಗಳಲ್ಲಿ ಸಂಚರಿಸುವರಿಗೆ ಅಪಾಯ ಕಾರಿಯಾಗಿ ಪರಿಣಮಿಸಿರುವ ಘಟನೆಗಳೂ ಸಂಭವಿಸಿವೆ. 2024ರಲ್ಲಿ ಕಳೆದ ಒಂದು ತಿಂಗಳಲ್ಲಿ ಕಮಿಷನರೆಟ್ ವ್ಯಾಪ್ತಿ ಯಲ್ಲಿ 269 ಪ್ರಕರಣಗಳನ್ನು ದಾಖಲಿಸ ಲಾಗಿದ್ದು, 1,34,500 ರೂ. ದಂಡ ವಿಧಿಸಲಾಗಿದೆ. 2021ರಲ್ಲಿ 974 ಪ್ರಕರಣದಲ್ಲಿ 5,07, 500ರೂ., 2022ರಲ್ಲಿ 1,311 ಪ್ರಕರಣ, 6,54,500 ದಂಡ , 2023ರಲ್ಲಿ 1987 ಪ್ರಕರಣ 9,74,850 ರೂ ದಂಡ ಸಂಗ್ರಹಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಳ್ತಂಗಡಿ: ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದಾಗಿ ಬಸ್ ಗಾಗಿ ಕಾಯುತ್ತಿದ್ದ ಇಬ್ಬರು ಲಾರಿಯಡಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಉಜಿರೆ ಸಮೀಪ ಮಧ್ಯಾಹ್ನ ನಡೆದಿದೆ. ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ ನಿಂತಿದ್ದ ವೇಳೆ ಉಜಿರೆ ಕಡೆಯಿಂದ ತಿರುವಿನಲ್ಲಿ ಅತೀ ವೇಗವಾಗಿ ಬಂದ ಲಾರಿ ಇಬ್ಬರಿಗೆ ಡಿಕ್ಕಿ ಹೊಡೆದದ್ದಲ್ಲದೆ ವಿದ್ಯುತ್ ಕಂಬ ಸಮೀಪದ ಕಟ್ಟಡಕ್ಕೆ ಹಾನಿಯುಂಟಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಉಜಿರೆ ನಿವಾಸಿ ಕಿಟ್ಟು ಎನ್ನಲಾಗಿದ್ದು, ಉಳಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಾಗಿದೆ.
ಬೆಳ್ತಂಗಡಿ : ಕೆಲಸವನ್ನು ಹುಡುಕಿಕೊಂಡು ದಕ್ಷಿಣ ಕನ್ನಡದ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ಗುಂಪನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಿಗೂಢ ಕೆಲಸಕ್ಕೆಂದು ಯುವಕರ ತಂಡ ಬೆಂಗಳೂರಿಗೆ ಹೊರಟಿತ್ತು. ಯುವಕರ ನಡೆ ಬಗ್ಗೆ ಅನುಮಾನ ಕಂಡುಬಂದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಧರ್ಮಸ್ಥಳ ಪೊಲೀಸರು ಯುವಕರ ಗುಂಪನ್ನು ಬಂಧಿಸಿದ್ದಾರೆ. ಬಂಧಿತ ಯುವಕರನ್ನು ವಿಚಾರಣೆ ನಡೆಸಿದ ಪೊಲೀಸರಿಗೆ ಅಕ್ರಮ ಸಿಮ್ ಕಾರ್ಡ್ ಸಾಗಾಟ ಮಾಡುತ್ತಿರುವ ಬಗ್ಗೆ ಬಯಲಿಗೆ ಬಂದಿದೆ. ಐದು ಯುವಕರು 42 ಅಕ್ರಮ ಸಿಮ್ ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದರು. ದಕ್ಷಿಣ ಕನ್ನಡದ ನೆರಿಯ ಗ್ರಾಮದಲ್ಲಿ ಯುವಕರನ್ನು ಬಂಧಿಸಿ ಸಿಮ್ ಗಳನ್ನು ಜಪ್ತಿ ಮಾಡಲಾಗಿದೆ. ಬಂಧಿತರನ್ನು ರಮೀಝ್ (20), ಅಕ್ಬರ್ ಅಲಿ (24), ಮೊಹಮ್ಮದ್ ಮುಸ್ತಫಾ (22), ಮೊಹಮ್ಮದ್ ಸಾಧಿಕ್ (27) ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ 17 ವರ್ಷದ ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಬಾಲಕನೂ ಇದ್ದಾನೆ. ಯುವಕ ಅಕ್ಬರಿ ಅಲಿ ಎಂಬಾತ ದುಬೈನಲ್ಲಿದ್ದಾಗ ಬೇರೆಯವರ ಹೆಸರಲ್ಲಿ ಈ ಸಿಮ್ ಗಳನ್ನು ಖರೀದಿಸಿದ್ದ.…
ಸುಳ್ಯ: ಮಂಗಳೂರಿನಿಂದ ಕುಶಾಲನಗರಕ್ಕೆ ಹೋಗುತ್ತಿದ್ದ ಟ್ಯಾಂಕರ್ ಹಾಗೂ ಮಡಿಕೇರಿಯಿಂದ ಕಾಸರಗೋಡು ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರು ಪರಸ್ಪರ ಢಿಕ್ಕಿ ಹೊಡೆದಿರುವ ಘಟನೆ ಸುಳ್ಯದ ಗೂನಡ್ಕ ಎಂಬಲ್ಲಿ ನಡೆದಿದೆ. ಗುದ್ದಿದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.ಹೆಚ್ಚಿನ ಮಾಹಿತಿಗಾಗಿ ನೀರಿಕ್ಷಿಸಲಾಗುತ್ತಿದೆ.
ಕಾಸರಗೋಡು: ಮನೆಯ ಮಹಡಿಯಿಂದ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಉಪ್ಪಳ ಕುಬಣೂರು ನಿವಾಸಿ ಪದ್ಮನಾಭ (50) ಎಂದು ಗುರುತಿಸಲಾಗಿದೆ. ಪದ್ಮನಾಭ ಅವರು ಕಳೆದ ಗುರುವಾರ ಸಂಜೆ ಕುಬಣೂರು ಪರಿಸರದ ನಿರ್ಮಾಣ ಹಂತದಲ್ಲಿರುವ ಮನೆಗೆ ಗ್ರಿಲ್ಸ್ ನಿರ್ಮಾಣಕ್ಕೆ ಕಾರ್ಮಿಕರನ್ನು ಕರೆದೊಯ್ದು, ಮೇಲಂತಸ್ತಿನಲ್ಲಿ ಕಾರ್ಮಿಕರ ಜತೆ ಅಳತೆ ತೆಗೆಯಲು ಸಹಕರಿಸುತ್ತಿದ್ದಾಗ ಆಯ ತಪ್ಪಿ ಮೆಟ್ಟಿಲಿನಿಂದ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಇನ್ನು ಇದೀಗ ಚಿಕಿತ್ಸೆ ಫಲಕಾರಿಯಾಗದೇ ಪದ್ಮನಾಭ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಉಪ್ಪಿನಂಗಡಿ: ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಮಹಿಳಾ ಸಹಕಾರಿ ಸಂಘದಿಂದ ಹಣವನ್ನು ಸಾಲವಾಗಿ ಪಡೆದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕಿ ಚೈತನ್ಯಾ ಸಿ.ಎಚ್. ಎಂಬವರು ಈ ಬಗ್ಗೆ ದೂರು ನೀಡಿದ್ದು, ಜ.27ರಂದು ಮಧ್ಯಾಹ್ನ ಆರೋಪಿಗಳಾದ ನೆಲ್ಯಾಡಿ ಗ್ರಾಮದ ಸೆಬಾಸ್ಟಿಯನ್ ಮತ್ತು ಡಾನಿಶ್ ಎಂಬವರು ಸಂಘಕ್ಕೆ ಬಂದಿದ್ದು, ಮೇಲ್ನೋಟಕ್ಕೆ ನಕಲಿ ಎಂದು ಕಂಡುಬಾರದಂತಹ ಒಟ್ಟು 30 ಗ್ರಾಂ ತೂಕದ 4 ನಕಲಿ ಬಳೆಗಳನ್ನು ಸಂಘದಲ್ಲಿ ಅಡಮಾನವಿರಿಸಿ, ಸಂಘದಿಂದ 1.40 ಲಕ್ಷ ರೂ.ವನ್ನು ಸಾಲವಾಗಿ ಪಡೆದು ಮೋಸ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










