ಕಾಸರಗೋಡು : 5 ವರ್ಷಗಳ ಹಿಂದೆ ಹತ್ಯೆಯಾದ ಮಹಿಳೆಯ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆಯನ್ನು ಪೊಲೀಸರು ಮತ್ತೆ ಪ್ರಾರಂಭಿಸಿದ್ದಾರೆ. ಮೂಲತಃ ಕೊಲ್ಲಂ ಇರವಿಪುರಂ ವಾಳತ್ತಿಂಗಲ್ ವೇಳೆ ವೀಟಿಲ್ ನ ಪ್ರಮೀಳಾ (30) ಅವರು 5 ವರ್ಷಗಳ ಹಿಂದೆ ಮೃತಪಟ್ಟಿರುತ್ತಾರೆ. ಅವರ ಮೃತದೇಹವನ್ನು ಪತ್ತೆಹಚ್ಚುವ ಕಾರ್ಯಾಚರಣೆ ವಿಫಲವಾದ ಹಿನ್ನೆಲೆ ಪೊಲೀಸರು ಶೋಧ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದರು. ಇದೀಗ ಮೃತದೇಹ ಪತ್ತೆ ಹಚ್ಚುವ ಕಾರ್ಯಾಚರಣೆಯನ್ನು ಪುನಃ ಆರಂಭಿಸಿದ್ದಾರೆ.ಮೃತ ಪ್ರಮೀಳ ಅವರ ಪತಿ ಮೂಲತ: ತಳಿಪರಂಬ ಆಲಕ್ಕೋಡು ನಿವಾಸಿ ಸೆಲ್ವರಾಜ್. ಈ ಹಿಂದೆ ಪ್ರಮೀಳಾ ಹಾಗೂ ಸೆಲ್ವರಾಜ್ ತಮ್ಮ ಇಬ್ಬರು ಮಕ್ಕಳೊಂದಿಗೆ ಕಾಸರಗೋಡು ವಿದ್ಯಾನಗರದ ಪನ್ನಿಪ್ಪಾರೆಯ ಬಾಡಿಗೆ ಕ್ವಾರ್ಟರ್ಸ್ ನಲ್ಲಿ ವಾಸಿಸುತ್ತಿದ್ದರು. 2019 ಸೆ. 19ರ ರಾತ್ರಿ ದಂಪತಿ ನಡುವೆ ಜಗಳ ಉಂಟಾಗಿದ್ದು, ಆ ಬಳಿಕ ಪ್ರಮೀಳಾ ದಿಢೀರ್ ಆಗಿ ನಾಪತ್ತೆಯಾಗಿದ್ದರು. ನಂತರ ಪ್ರಮೀಳಾ ನಾಪತ್ತೆಯಾಗಿರುವ ಬಗ್ಗೆ ಪತಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
Author: main-admin
ಪುತ್ತೂರು: ಮನೆಯಿಂದ ಶಾಲೆಗೆಂದು ಹೋದ ವಿದ್ಯಾರ್ಥಿನಿ ಅತ್ತ ಶಾಲೆಗೂ ಬಾರದೆ, ಇತ್ತ ಮನೆಗೂ ಹಿಂದಿರುಗದೆ ನಾಪತ್ತೆಯಾಗಿದ್ದ ಪ್ರಕರಣ ಕೊನೆಗೂ ಬಾಲಕಿಯ ಪತ್ತೆಯೊಂದಿಗೆ ಸುಖಾಂತ್ಯ ಕಂಡಿದೆ.ಪುತ್ತೂರಿನ ಬಳ್ಕಾಡ್ ನಿವಾಸಿಯೋರ್ವರ ಪುತ್ರಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ ಗುರುವಾರ ನಾಪತ್ತೆಯಾಗಿದ್ದು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಸತತ ಹುಡುಕಾಟದ ಬಳಿಕ ಕಾಸರಗೋಡಿನಲ್ಲಿ ಪತ್ತೆಯಾಗಿದ್ದಾಳೆ. ಮನೆಮಂದಿ ಪೊಲೀಸರೊಂದಿಗೆ ಕಾಸರಗೋಡಿಗೆ ತೆರಳಿ ಬಾಲಕಿಯನ್ನು ಪುತ್ತೂರಿಗೆ ಕರಕೊಂಡು ಬಂದಿದ್ದಾರೆ. ಪುತ್ತೂರಿನ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ ಎಂದಿನಂತೆ ಬೆಳಿಗ್ಗೆ ಮನೆಯಿಂದ ಇತರ ಮಕ್ಕಳ ಜೊತೆ KSRTC ಸಂಸ್ಥೆ ಬಸ್ಸಿನಲ್ಲಿ ಶಾಲೆಗೆಂದು ಬಂದಿದ್ದಳು. ಶಾಲೆಯಲ್ಲಿ ಗುರುವಾರ ಪರೀಕ್ಷೆ ಇತ್ತು ಎನ್ನಲಾಗಿದ್ದು, ವಿದ್ಯಾರ್ಥಿನಿ ಶಾಲೆಗೆ ಹೋಗದೆ ನೇರವಾಗಿ ಕಾಸರಗೋಡಿನ ಪರ್ಲಡ್ಕದ ಬಾಲವನಕ್ಕೆ ತೆರಳಿದ್ದಳು. ಐಡಿ ಕಾರ್ಡ್ ಇಲ್ಲದ ಕಾರಣ ಬಾಲವನದ ಸಿಬ್ಬಂದಿ ಆಕೆಯನ್ನು ಒಳಗೆ ಬಿಟ್ಟಿರಲಿಲ್ಲ. ಅಲ್ಲಿಂದ ಹಿಂದಿರುಗಿ ಬಂದು ಪರ್ಲಡ್ಕದಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ತೆರಳಿ ನಾನು ಶಾಲೆಗೆ ಹೋಗಿಲ್ಲ, ಇಂದು ಇಲ್ಲಿ ಇರುವುದಾಗಿ ಹೇಳಿದ್ದಾಳೆ.…
ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ಪದಾರ್ಥವನ್ನು ಮಾರಾಟ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಮೇರಿಹೀಲ್ ಹೆಲಿಪ್ಯಾಡ್ ಬಳಿ ಮಾದಕ ವಸ್ತುವಾದ ಮೆಥಾಎಂಪೈಟಮೈನ್ . ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೊಹಮ್ಮದ್ ಫರಾಜ್ ಎಂಬಾತನನ್ನು ಮಂಗಳೂರು ಉತ್ತರ ಉಪ ವಿಭಾಗದ ಡ್ರಗ್ಸ್ ಸ್ಕ್ವಾಡ್ ಸಿಬ್ಬಂದಿಗಳು ಮತ್ತು ಕಾವೂರು ಪೊಲೀಸ್ ಠಾಣಾ ಸಿಬ್ಬಂದಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತನಿಂದ 30 ಸಾವಿರ ರೂಪಾಯಿ ಮೌಲ್ಯದ 7.28 ಗ್ರಾಂ ನಷ್ಟು ಮೆಥಾಎಂಪೆಟಮೈನ್ ಹಾಗೂ ಒಂದು ಲಕ್ಷ ಮೌಲ್ಯದ ಸುಜುಕಿ ಎಕ್ಸಸ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬ್ರ 15/2024 ಕಲಂ : 8(c), 21 (b) NDPS ರಂತೆ ಪ್ರಕರಣ ದಾಖಲಾಗಿದೆ.
ಉಡುಪಿ: ನೇಜಾರಿನ ತಾಯಿ ಮತ್ತು ಮೂವರು ಮಕ್ಕಳು ಕೊಲೆ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು ಫೆಬ್ರವರಿ ಮೊದಲ ವಾರದಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಲಾಗುತ್ತಿದೆ. ಆರೋಪಿ ಪ್ರವೀಣ್ ಚೌಗಲೆ ನೇಜಾರಿನ ತೃಪ್ತಿ ಲೇಔಟ್ ನಿವಾಸಿಗಳಾದ ಹಸೀನಾ ಮತ್ತು ಅವರ ಮಕ್ಕಳಾದ ಅಯ್ನಾಝ್, ಅಫ್ನಾನ್, ಆಸೀಮ್ ರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಎಫ್.ಎಸ್.ಎಲ್ ವರದಿ, ಹಲವು ಸಾಕ್ಷ್ಯಾಧಾರಗಳು ಪೊಲೀಸರ ಕೈ ಸೇರಿದ್ದು ಆರೋಪ ಪಟ್ಟಿಯಲ್ಲಿ ಸಂಪೂರ್ಣ ವಿವರವನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಕೃತ್ಯ ನಡೆದ ದಿನದಿಂದ 90 ದಿನಗಳೊಳಗೆ ಆರೋಪ ಪಟ್ಟಿ ಸಲ್ಲಿಸಬೇಕಾಗುತ್ತದೆ. ಆ ಹಿನ್ನಲೆಯಲ್ಲಿ ಫೆ. 10 ರ ಒಳಗೆ ಸಲ್ಲಿಸುವ ಸಾಧ್ಯತೆ ಇದೆ. ಈ ಬಗ್ಗೆ ಮಾಹಿತಿಯನ್ನು ನೀಡಿದ ಉಡುಪಿ ಎಸ್ಪಿ ಡಾ.ಅರುಣ್ ಕೆ ಅವರು ನೇಜಾರಿನ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಈಗಾಗಲೇ ಪೂರ್ಣಗೊಂಡಿದ್ದು, ಎಫ್‌ಎಸ್‌ಎಲ್ ವರದಿ ಗಳೆಲ್ಲವೂ ನಮ್ಮ ಕೈಸೇರಿದೆ. ಈ ಕುರಿತ ಚಾರ್ಜ್‌ಶೀಟ್‌ನ್ನು ಸಿದ್ಧ ಪಡಿಸುತ್ತಿದ್ದು, ಫೆ. ಮೊದಲ ವಾರದಲ್ಲಿ ಕೋರ್ಟ್‌ಗೆ ಸಲ್ಲಿಸಲು ಎಲ್ಲ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 6 ನೇ ಬಾರಿಗೆ ಮಧ್ಯಂತರ ಬಜೆಟ್ 2024 ಮಂಡಿಸಿದ್ದಾರೆ. ಕೇಂದ್ರ ಸರ್ಕಾರದ ಬಜೆಟ್ ನ ಹೈಲೆಟ್ಸ್ * ಆಯುಷ್ಮಾನ್ ಭಾರತ್ ಆಯುಷ್ಮಾನ್ ಭಾರತ್ ಅಡಿಯಲ್ಲಿ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕರಿಗೆ ಆರೋಗ್ಯ ರಕ್ಷಣೆ ಸೇವೆ ವಿಸ್ತರಿಸಲಾಗುವುದು *ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ *ಕಿಸಾನ್ ಸಂಪದ ಯೋಜನೆಯಿಂದ 38 ಲಕ್ಷ ರೈತರಿಗೆ ಲಾಭವಾಗಿದೆ. ದೇಶದಲ್ಲಿ ಹಾಲು ಉತ್ಪಾದನಾ ಡೇರಿಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಪ್ರತ್ಯೇಕ ಮತ್ಸ ಸಂಪದ ಯೋಜನೆ ಜಾರಿಗೊಳಿಸಿದೆ. ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆ ವಿಸ್ತರಿಸಲಾಗುವುದು. *ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯಕ್ಕೆ ಸರ್ಕಾರ ಹಣ ವ್ಯವಸ್ಥೆ ಮಾಡಲಿದೆ, ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. *ಸಣ್ಣ ನಗರಗಳಿಗೂ ಮೆಟ್ರೋ ವಿಸ್ತರಣೆ- 40 ಸಾವಿರ ರೈಲ್ವೆ ಕೋಚ್ ಬದಲಾವಣೆಗೆ ಕ್ರಮ ಕೈಗೊಂಡಿದ್ದೇವೆ, ಮೆಟ್ರೋ, ವಂದೇ…
ಕೇಂದ್ರ ಸರ್ಕಾರದಿಂದ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡೋದಕ್ಕಾಗಿ ಲಖ್ ಪತಿ ದೀದಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದಂತ ನಿರ್ಮಲಾ ಸೀತಾರಾಮನ್ ಅವರು, 2024ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಲಾಗುತ್ತಿದೆ. ಈ ಸಂದರ್ಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲಖ್ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು.ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದರು.
ಕಾಸರಗೋಡು: ನಗರದಲ್ಲಿ ಮಾಂಙಾಡ್ ನಿವಾಸಿಯನ್ನು ಹನಿಟ್ರ್ಯಾಪ್‌ನಲ್ಲಿ ಸಿಲುಕಿಸಿ 5 ಲಕ್ಷ ರೂ. ಲಪಟಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಮಹಿಳೆಯರು ಸಹಿತ 7 ಮಂದಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಕಲ್ಲಿಕೋಟೆ ಪೆರುಮಣ್ಣ ನಿವಾಸಿ ಪಿ. ಫೈಝಲ್ (37), ಪತ್ನಿ ಕುಟ್ಟಿಕ್ಕಾಟೂರ್ ನಿವಾಸಿ ಎಂ.ಪಿ. ಲುಬಾ° (29), ಕಾಸರಗೋಡು ಶಿರಿಬಾಗಿಲು ನಿವಾಸಿ ಎನ್. ಸಿದ್ದಿಕ್ (48), ಮಾಂಙಾಡ್‌ನ ದಿಲಾದ್ (40), ಮುಟ್ಟತ್ತೋಡಿಯ ನಫೀಸತ್ ಮಿಸ್ರಿಯ (40), ಮಾಂಙಾಡ್‌ನ ಅಬ್ದುಲ್ಲ ಕುಂಞಿ (32), ಪಡನ್ನಕ್ಕಾಡ್‌ನ ರಫೀಕ್ (42)ನನ್ನು ಮೇಲ್ಪರಂಬ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಮಂಗಳೂರು: ದುಬಾೖ ಯಿಂದ ಮಂಗಳೂರಿಗೆ ಆಗಮಿಸಿದ ವ್ಯಕ್ತಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದನ್ನು ಕಸ್ಟಂಸ್ ಅಧಿಕಾರಿಗಳು ಪತ್ತೆ ಮಾಡಿದ ಘಟನೆ ನಡೆದಿದೆ. ಏರ್ ಇಂಡಿಯಾ ವಿಮಾನದಲ್ಲಿ ಕಾಸರಗೋಡು ಮೂಲದ ವ್ಯಕ್ತಿ ಯೋರ್ವ ಚಿನ್ನ ಸಾಗಾಟ ಮಾಡುತ್ತಿದ್ದ ಮಾಹಿತಿ ಲಭಿಸಿದ ಮೇರೆಗೆ ಆತನನ್ನು ತಪಾಸಣೆ ಮಾಡಿದಾಗ 179 ಗ್ರಾಂ ತೂಕದ 11,16,960 ರೂ. ಮೌಲ್ಯದ ಚಿನ್ನ ಪತ್ತೆಯಾಗಿದ್ದು, ವಶಕ್ಕೆ ತೆಗೆದುಕೊಳ್ಳಲಾಗಿದೆ. ಚಿನ್ನವನ್ನು ಪೇಸ್ಟ್ ರೂಪಕ್ಕೆ ಬದಲಾಯಿಸಿ,ಬೆಡ್‌ಶೀಟ್, ತಲೆದಿಂಬು ಕವರ್, ಅಲ್ಲದೆ ಸ್ವಲ್ಪ ಪುಡಿಯ ರೂಪದಲ್ಲಿ ಹಾರ್ಲಿಕ್ಸ್ ಬಾಟಲಿಯೊಳಗೆ ಹುದುಗಿಸಿ ತರಲಾಗಿತ್ತು. ಆ ವ್ಯಕಿಯನ್ನು ಪತ್ತೆ ಮಾಡಿ ಆತನ ಬಳಿ ಇದ್ದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕಡಬ: ಡೆಂಗ್ಯೂ ಜ್ವರಕ್ಕೆ ಯುವಕನೊರ್ವ ಸಾವನಪ್ಪಿದ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ವಿಮಲಗಿರಿ ಎಂಬಲ್ಲಿ ನಡೆದಿದೆ. ಮೃತರನ್ನು ವಿಮಲಗಿರಿ ಕಲ್ಲೋಲಿಕ್ಕಲ್ ನಿವಾಸಿ ಶಿಜು (31) ಎಂದು ಗುರುತಿಸಲಾಗಿದೆ. ಶಿಜು ರವಿವಾರದಂದು ಜ್ವರ ಕಂಡುಬಂದ ಹಿನ್ನೆಲೆಯಲ್ಲಿ ಕಡಬದ ಕ್ಲಿನಿಕ್ ವೊಂದರಲ್ಲಿ ಚಿಕಿತ್ಸೆ ಪಡೆದು ಜ್ವರ ಪರೀಕ್ಷೆ ಮಾಡಿದ್ದರು. ಈ ವೇಳೆ ಡೆಂಗ್ಯೂ ಜ್ವರ ಪತ್ತೆಯಾಗಿದೆ. ನಂತರ ಮನೆಗೆ ಬಂದ ಶಿಜು ಅವರಿಗೆ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಮಾರನೇ ದಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಿಕೊಡಲಾಗಿದ್ದು, ಆದರೆ ಮಂಗಳೂರಿನ ಆಸ್ಪತ್ರೆಗೆ ತಲುಪಿದ ವೇಳೆಗಾಗಲೇ ಶಿಜು ಅವರು ಮೃತಪಟ್ಟಿದ್ದರು. ಶಿಜು ಅವರು ಮಲಂಕರ ಕ್ಯಾಥೋಲಿಕ್ ಚರ್ಚ್ ಪುತ್ತೂರು ಧರ್ಮ ಪ್ರಾಂತ್ಯದ ರೆ.ಫಾ. ಥಾಮಸ್ ಅವರ ಸಹೋದರ. ಶಿಜು ಅವರು ತಾಯಿ, ಪತ್ನಿ, ಸಹೋದರಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಸಮೀಪದ ನಂದಳಿಕೆ ಶ್ರೀ ಮಹಾಮ್ಮಯಿ ದೇವಸ್ಥಾನದಲ್ಲಿ ಜರುಗಿದ್ದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಭೋಜನ ಸೇವಿಸಿ ಹಾಳೆಯ ಪ್ಲೇಟ್ ಎಸೆಯಲು ಮುಂದಾದಾಗ ಟ್ಯಾಂಕ್ ಕುಸಿದು ಬಿದ್ದು ಮಹಿಳೆ ದಾರುಣ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಮಹಿಳೆಯನ್ನು ಬೆಳ್ಮಣ್ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಲತಾ (50) ಎಂದು ಗುರುತಿಸಲಾಗಿದೆ. ಮಂಗಳವಾರದಂದು ನಂದಳಿಕೆಯ ಶ್ರೀ ಮಹಾಮ್ಮಯಿ ದೇವಸ್ಥಾನದಲ್ಲಿ ಜರುಗಿದ್ಧ ವಾರ್ಷಿಕ ಮಾರಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂದರ್ಭ ನಡೆದ ಈ ಘಟನೆಯಲ್ಲಿ ಶ್ರೀಲತಾ ಮೃತಪಟ್ಟಿದ್ದು, ಅವರ ಮಗಳು ಪೂಜಾ ಗಂಭೀರ ರೀತಿಯಲ್ಲಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.










